Skip to content
ThuthiThuthiThuthi
Psalms · chapter 53 of 150 · 6 verses

Psalm 53 in Kannada

ಕೀರ್ತನೆಗಳು 53

  1. ದೇವರಿಲ್ಲವೆಂದು ಮೂರ್ಖನು ತನ್ನ ಹೃದಯದಲ್ಲಿ ಅಂದುಕೊಂಡಿದ್ದಾನೆ. ಅವರು ಕೆಟ್ಟುಹೋಗಿ ಅಸಹ್ಯವಾದ ಅಪರಾಧವನ್ನು ಮಾಡಿದ್ದಾರೆ; ಒಳ್ಳೇದನ್ನು ಮಾಡುವವನು ಯಾವನೂ ಇಲ್ಲ.

    To the chief Musician upon Mahalath, Maschil, [A Psalm] of David. The fool hath said in his heart, [There is] no God. Corrupt are they, and have done abominable iniquity: [there is] none that doeth good.

  2. ದೇವರನ್ನು ಹುಡುಕುವ ಬುದ್ಧಿವಂತನು ಇದ್ದಾನೋ ಎಂದು ನೋಡುವದಕ್ಕೆ ದೇವರು ಆಕಾ ಶದಿಂದ ಮನುಷ್ಯರೆಲ್ಲರನ್ನು ದೃಷ್ಟಿಸಿ ನೋಡಿದಾಗ

    God looked down from heaven upon the children of men, to see if there were [any] that did understand, that did seek God.

  3. ಎಲ್ಲರು ಹಿಂದಿರುಗಿದ್ದಾರೆ; ಒಟ್ಟಾಗಿ ಹೊಲೆಯಾಗಿ ದ್ದಾರೆ. ಒಳ್ಳೇದನ್ನು ಮಾಡುವವನು ಇಲ್ಲ, ಒಬ್ಬನಾ ದರೂ ಇಲ್ಲ.

    Every one of them is gone back: they are altogether become filthy; [there is] none that doeth good, no, not one.

  4. ರೊಟ್ಟಿತಿನ್ನುವ ಪ್ರಕಾರ ನನ್ನ ಜನರನ್ನು ತಿಂದು ದೇವರನ್ನು ಸ್ಮರಿಸದೆ ಅಪರಾಧಮಾಡುವವರು ಅರಿ ಯರೋ?

    Have the workers of iniquity no knowledge? who eat up my people [as] they eat bread: they have not called upon God.

  5. ಭಯವಿಲ್ಲದಿರುವಲ್ಲಿ ಅವರು ಭಯ ಭ್ರಾಂತರಾದರು; ನಿನಗೆ ವಿರೋಧವಾಗಿ ದಂಡು ಇಳಿ ಸುವವನ ಎಲುಬುಗಳನ್ನು ದೇವರು ಚದರಿಸಿ ಬಿಟ್ಟಿ ದ್ದಾನೆ. ನೀನು ಅವರನ್ನು ನಾಚಿಕೆಪಡಿಸಿದ್ದೀ; ದೇವರು ಅವರನ್ನು ತಿರಸ್ಕರಿಸಿದ್ದಾನೆ.ಚೀಯೋನಿನಿಂದ ಇಸ್ರಾಯೇಲಿನ ರಕ್ಷಣೆಯು ಬಂದರೆ ಎಷ್ಟೋ ಒಳ್ಳೇದು. ದೇವರು ತನ್ನ ಜನರನ್ನು ಸೆರೆಯಿಂದ ತಿರುಗಿ ಬರಮಾಡುವಾಗ ಯಾಕೋಬನು ಉಲ್ಲಾಸಿಸುವನು, ಇಸ್ರಾಯೇಲನು ಸಂತೋಷಿ ಸುವನು.

    There were they in great fear, [where] no fear was: for God hath scattered the bones of him that encampeth [against] thee: thou hast put [them] to shame, because God hath despised them.

  6. ಚೀಯೋನಿನಿಂದ ಇಸ್ರಾಯೇಲಿನ ರಕ್ಷಣೆಯು ಬಂದರೆ ಎಷ್ಟೋ ಒಳ್ಳೇದು. ದೇವರು ತನ್ನ ಜನರನ್ನು ಸೆರೆಯಿಂದ ತಿರುಗಿ ಬರಮಾಡುವಾಗ ಯಾಕೋಬನು ಉಲ್ಲಾಸಿಸುವನು, ಇಸ್ರಾಯೇಲನು ಸಂತೋಷಿ ಸುವನು.

    Oh that the salvation of Israel [were come] out of Zion! When God bringeth back the captivity of his people, Jacob shall rejoice, [and] Israel shall be glad.

All chapters of Psalms · Kannada Bible · Psalm 53 in Tamil

Kannada Bible: Kannada Old Version, public domain.

King James Version: public domain.