Psalms · chapter 53 · verse 1
Psalm 53:1 in Kannada
ದೇವರಿಲ್ಲವೆಂದು ಮೂರ್ಖನು ತನ್ನ ಹೃದಯದಲ್ಲಿ ಅಂದುಕೊಂಡಿದ್ದಾನೆ. ಅವರು ಕೆಟ್ಟುಹೋಗಿ ಅಸಹ್ಯವಾದ ಅಪರಾಧವನ್ನು ಮಾಡಿದ್ದಾರೆ; ಒಳ್ಳೇದನ್ನು ಮಾಡುವವನು ಯಾವನೂ ಇಲ್ಲ.
Devarillavendu moorkhanu tanna hrudayadalli andukondiddaane. Avaru kettuhogi asahyavaada aparaadhavannu maadiddaare; olledannu maaduvavanu yaavanoo illa.
Psalm 53:1 in English
- King James Version (KJV)
- To the chief Musician upon Mahalath, Maschil, [A Psalm] of David. The fool hath said in his heart, [There is] no God. Corrupt are they, and have done abominable iniquity: [there is] none that doeth good.
- World English Bible (WEB)
- For the Chief Musician. To the tune of “Mahalath.” A contemplation by David. The fool has said in his heart, “There is no God.” They are corrupt, and have done abominable iniquity. There is no one who does good.
- American Standard Version (ASV)
- For the Chief Musician; set to Mahalath. Maschil of David. The fool hath said in his heart, There is no God. Corrupt are they, and have done abominable iniquity; There is none that doeth good.
- Bible in Basic English (BBE)
- To the chief music-maker; put to Mahalath. Maschil. Of David. The foolish man has said in his heart, God will not do anything. They are unclean, they have done evil works; there is not one who does good.
- Darby Translation (DBY)
- To the chief Musician. On Mahalath: an instruction. Of David. The fool hath said in his heart, There is no God! They have corrupted themselves, and have done abominable iniquity: there is none that doeth good.
- Webster's Bible (WBS)
- To the chief Musician upon Mahalath, Maschil, [A Psalm] of David. The fool hath said in his heart, [There is] no God. They are corrupt, and have done abominable iniquity: [there is] none that doeth good.
- Young's Literal Translation (YLT)
- To the Overseer. — 'On a disease.' — An instruction, by David. A fool said in his heart, 'There is no God.' They have done corruptly, Yea, they have done abominable iniquity, There is none doing good.
Read in context
- 1ದೇವರಿಲ್ಲವೆಂದು ಮೂರ್ಖನು ತನ್ನ ಹೃದಯದಲ್ಲಿ ಅಂದುಕೊಂಡಿದ್ದಾನೆ. ಅವರು ಕೆಟ್ಟುಹೋಗಿ ಅಸಹ್ಯವಾದ ಅಪರಾಧವನ್ನು ಮಾಡಿದ್ದಾರೆ; ಒಳ್ಳೇದನ್ನು ಮಾಡುವವನು ಯಾವನೂ ಇಲ್ಲ.
- 2ದೇವರನ್ನು ಹುಡುಕುವ ಬುದ್ಧಿವಂತನು ಇದ್ದಾನೋ ಎಂದು ನೋಡುವದಕ್ಕೆ ದೇವರು ಆಕಾ ಶದಿಂದ ಮನುಷ್ಯರೆಲ್ಲರನ್ನು ದೃಷ್ಟಿಸಿ ನೋಡಿದಾಗ
- 3ಎಲ್ಲರು ಹಿಂದಿರುಗಿದ್ದಾರೆ; ಒಟ್ಟಾಗಿ ಹೊಲೆಯಾಗಿ ದ್ದಾರೆ. ಒಳ್ಳೇದನ್ನು ಮಾಡುವವನು ಇಲ್ಲ, ಒಬ್ಬನಾ ದರೂ ಇಲ್ಲ.
Cross references
- Psalm 10:4 ಕೀರ್ತನೆಗಳು 10:4ದುಷ್ಟನು ತನ್ನ ಗರ್ವದ ಮುಖದಿಂದ ದೇವರನ್ನು ಹುಡುಕುವದಿಲ್ಲ; ಅವನ ಯೋಚನೆಗಳೆಲ್ಲಾ ದೇವ ರಿಲ್ಲದವುಗಳು.
- Psalm 14:1–7 ಕೀರ್ತನೆಗಳು 14:1–7ದೇವರಿಲ್ಲವೆಂದು ಮೂರ್ಖನು ತನ್ನ ಹೃದಯದಲ್ಲಿ ಹೇಳಿಕೊಂಡಿದ್ದಾನೆ. ಅವರು ಕೆಟ್ಟುಹೋಗಿ ಅಸಹ್ಯವಾದ ಕೃತ್ಯಗಳನ್ನು ಮಾಡಿದ್ದಾರೆ; ಒಳ್ಳೇದನ್ನು ಮಾಡುವವನು ಯಾವನೂ ಇಲ್ಲ. ದೇವರನ್ನು ಹುಡುಕುವ ಬುದ್ಧಿವಂತನು ಇದ್ದಾನೋ ಎಂದು ನೋಡುವದಕ್ಕೆ ಕರ್ತನು ಆಕಾಶದಿಂದ ಮನುಷ್ಯನ ಮಕ್ಕಳ ಮೇಲೆ ಕಣ್ಣಿಟ್ಟನು. ಅವರೆಲ್ಲರೂ ತಪ್ಪಿಹೋಗಿದ್ದಾರೆ, ಅವರೆಲ್ಲರೂ ಏಕವಾಗಿ ಹೊಲೆ ಯಾಗಿದ್ದಾರೆ; ಒಳ್ಳೆಯದನ್ನು ಮಾಡುವವನು ಇಲ್ಲ; ಒಬ್ಬನಾದರೂ ಇಲ್ಲ. ಕರ್ತನನ್ನು ಪ್ರಾರ್ಥಿಸದೆ ರೊಟ್ಟಿಯನ್ನೋ ಎಂಬಂತೆ ನನ್ನ ಜನರನ್ನು ತಿಂದು ಅಪರಾಧಮಾಡಿದವರಿಗೆ ತಿಳುವಳಿಕೆಯಿಲ್ಲವೋ? ಅಲ್ಲಿ ಅವರು ಭಯಭ್ರಾಂತ ರಾದರು; ಯಾಕಂದರೆ ದೇವರು ನೀತಿವಂತರ ಸಂತತಿ ಯಲ್ಲಿ ಇದ್ದಾನೆ. ಕರ್ತನು ಬಡವನ ಆಶ್ರಯವಾಗಿರು ವದರಿಂದ ನೀವು ಅವನ ಆಲೋಚನೆಯನ್ನು ನಾಚಿಕೆ ಪಡಿಸಿದ್ದೀರಿ.ಚೀಯೋನಿನಿಂದ ಇಸ್ರಾಯೇಲಿನ ರಕ್ಷಣೆಯು ಬರಲಿ; ಕರ್ತನು ತನ್ನ ಜನರನ್ನು ಸೆರೆಯಿಂದ ತಿರಿಗಿ ಬರಮಾಡುವಾಗ ಯಾಕೋಬನು ಉಲ್ಲಾಸಿ ಸುವನು, ಇಸ್ರಾಯೇಲನು ಸಂತೋಷಿಸುವನು. ಚೀಯೋನಿನಿಂದ ಇಸ್ರಾಯೇಲಿನ ರಕ್ಷಣೆಯು ಬರಲಿ; ಕರ್ತನು ತನ್ನ ಜನರನ್ನು ಸೆರೆಯಿಂದ ತಿರಿಗಿ ಬರಮಾಡುವಾಗ ಯಾಕೋಬನು ಉಲ್ಲಾಸಿ ಸುವನು, ಇಸ್ರಾಯೇಲನು ಸಂತೋಷಿಸುವನು.
- Romans 3:10–31 ರೋಮಾಪುರದವರಿಗೆ 3:10–31ಬರೆದಿರುವ ಪ್ರಕಾರ--ನೀತಿವಂತನು ಇಲ್ಲ, ಒಬ್ಬನಾದರೂ ಇಲ್ಲ; ತಿಳುವಳಿಕೆಯುಳ್ಳವನು ಇಲ್ಲ, ದೇವರನ್ನು ಹುಡುಕುವವನೂ ಇಲ್ಲ. ಎಲ್ಲರೂ ದಾರಿತಪ್ಪಿದವರಾಗಿ ಕೆಲಸಕ್ಕೆ ಬಾರದವರಾದರು, ಒಳ್ಳೆ ಯದನ್ನು ಮಾಡುವವನು ಇಲ್ಲ, ಒಬ್ಬನಾದರೂ ಇಲ್ಲ. ಅವರ ಗಂಟಲು ತೆರೆದಿರುವ ಸಮಾಧಿಯಾಗಿದೆ. ಅವರು ತಮ್ಮ ನಾಲಿಗೆಗಳಿಂದ ವಂಚಿಸುತ್ತಾರೆ; ಅವರ ತುಟಿಗಳ ಕೆಳಗೆ ಹಾವಿನ ವಿಷವಿದೆ. ಅವರ ಬಾಯಿ ಶಾಪದಿಂದಲೂ ವಿಷದಿಂದಲೂ ತುಂಬಿ ಅದೆ. ಅವರ ಕಾಲುಗಳು ರಕ್ತವನ್ನು ಸುರಿಸಲು ಆತುರ ಪಡುತ್ತವೆ. ಅವರ ದಾರಿಗಳಲ್ಲಿ ನಾಶ ಸಂಕಟಗಳು ಉಂಟಾಗುತ್ತವೆ. ಅವರು ಸಮಾಧಾನದ ಮಾರ್ಗ ವನ್ನೇ ಅರಿತವರಲ್ಲ; ಅವರ ಕಣ್ಣೆದುರಿಗೆ ದೇವರ ಭಯವೇ ಇಲ್ಲ ಎಂಬವುಗಳೇ. ಪ್ರತಿಯೊಂದು ಬಾಯಿ ಮುಚ್ಚಿ ಹೋಗುವಂತೆಯೂ ಲೋಕವೆಲ್ಲಾ ದೇವರ ಮುಂದೆ ದೋಷಿಯಾಗಿರುವಂತೆಯೂ ನ್ಯಾಯ ಪ್ರಮಾಣವು ಹೇಳುವವುಗಳನ್ನು ನ್ಯಾಯಪ್ರಮಾಣಕ್ಕೆ ಒಳಗಾದವರಿಗೆ ಹೇಳುತ್ತದೆಯೆಂದು ನಾವು ಬಲ್ಲೆವು. ಆದದರಿಂದ ನ್ಯಾಯಪ್ರಮಾಣದ ಕ್ರಿಯೆಗಳಿಂದ ಯಾವನೂ ಆತನ ದೃಷ್ಟಿಯಲ್ಲಿ ನೀತಿವಂತನೆಂದು ನಿರ್ಣ ಯಿಸಲ್ಪಡುವದಿಲ್ಲ. ಯಾಕಂದರೆ ನ್ಯಾಯಪ್ರಮಾಣ ದಿಂದಲೇ ಪಾಪದ ಅರುಹು ಉಂಟಾಗುತ್ತದೆ. ಈಗಲಾದರೋ ದೇವರ ನೀತಿಯು ನ್ಯಾಯ ಪ್ರಮಾಣವಿಲ್ಲದೆ ಪ್ರಕಟವಾಗಿದೆ. ಅದು ನ್ಯಾಯ ಪ್ರಮಾಣದಿಂದಲೂ ಪ್ರವಾದಿಗಳಿಂದಲೂ ಸಾಕ್ಷಿಗೊಂ ಡಿದೆ. ದೇವರಿಂದಾಗುವ ಆ ನೀತಿಯು ಯಾವ ದೆಂದರೆ ಯೇಸು ಕ್ರಿಸ್ತನನ್ನು ನಂಬುವದರಿಂದಲೇ. ನಂಬುವವರೆಲ್ಲರಿಗೆ ಮತ್ತು ಎಲ್ಲರ ಮೇಲೆಯೂ ದೊರ ಕುವಂಥದು. ಹೆಚ್ಚು ಕಡಿಮೆ ಏನೂ ಇಲ್ಲ; ಎಲ್ಲರೂ ಪಾಪಮಾಡಿ ದೇವರ ಮಹಿಮೆಯನ್ನು ಕಳೆದುಕೊಂಡಿ ದ್ದಾರೆ. ಅವರು ನೀತಿವಂತರೆಂದು ನಿರ್ಣಯ ಹೊಂದುವದು ಆತನ ಉಚಿತಾರ್ಥವಾದ ಕೃಪೆ ಯಿಂದಲೇ. ಇದು ಕ್ರಿಸ್ತ ಯೇಸುವಿನಿಂದಾದ ವಿಮೋ ಚನೆಯ ಮೂಲಕವಾಗಿ ಆಗುವದು. ಈತನು ತನ್ನ ರಕ್ತದ ಮೂಲಕ ನಂಬಿಕೆಯಿದ್ದವರಿಗಾಗಿ ಪಾಪದ ಪ್ರಾಯಶ್ಚಿತ್ತವಾಗಿರಬೇಕೆಂದು ದೇವರು ಈತನನ್ನು ಮುಂದಿಟ್ಟನು. ದೇವರು ಹಿಂದಿನಕಾಲದ ಪಾಪಗಳನ್ನು ಸಹಿಸಿಕೊಂಡಿರಲಾಗಿ ತನ್ನ ನೀತಿಯನ್ನು ಈಗಿನ ಕಾಲದಲ್ಲಿ ಹೀಗೆ ತೋರಿಸಿ ತಾನು ನೀತಿವಂತನಾಗಿಯೂ ಯೇಸುವಿನಲ್ಲಿ ನಂಬಿಕೆಯಿಡುವವರನ್ನು ನೀತಿವಂತ ರೆಂದು ನಿರ್ಣಯಿಸುವವನಾಗಿಯೂ ಪ್ರಸಿದ್ಧಿಪಡಿಸಿ ಕೊಂಡನು. ಹಾಗಾದರೆ ಹೊಗಳಿಕೊಳ್ಳುವದು ಹೇಗೆ? ಅದು ಇಲ್ಲದೆ ಹೋಯಿತು. ಯಾವ ನಿಯಮದಿಂದ? ಕ್ರಿಯೆಗಳಿಂದಲೋ? ಅಲ್ಲ; ವಿಶ್ವಾಸ ನಿಯಮವನ್ನು ಅನುಸರಿಸುವದರಿಂದಲೇ. ಆದದರಿಂದ ನ್ಯಾಯ ಪ್ರಮಾಣದ ಕ್ರಿಯೆಗಳಿಲ್ಲದೆ ನಂಬಿಕೆಯಿಂದಲೇ ಮನು ಷ್ಯನು ನೀತಿವಂತನೆಂದು ನಿರ್ಣಯಿಸಲ್ಪಡುವನೆಂಬ ದಾಗಿ ನಾವು ತೀರ್ಮಾನಿಸಿಕೊಂಡಿದ್ದೇವಲ್ಲಾ. ದೇವರು ಯೆಹೂದ್ಯರಿಗೆ ಮಾತ್ರ ದೇವರಾಗಿ ದ್ದಾನೋ? ಅನ್ಯಜನಗಳಿಗೆ ಸಹ ದೇವರಲ್ಲವೇ? ಹೌದು, ಆತನು ಅನ್ಯಜನರಿಗೆ ಸಹ ದೇವರಾಗಿದ್ದಾನೆ; ದೇವರು ಒಬ್ಬನೇ ಆಗಿರಲಾಗಿ ಆತನು ಸುನ್ನತಿಯವರನ್ನು ನೀತಿವಂತರೆಂದು ನಿರ್ಣಯಿಸು ವದಕ್ಕೆ ಅವರ ನಂಬಿಕೆಯಿಂದಲೇ. ಸುನ್ನತಿಯಿಲ್ಲ ದವರನ್ನು ಹಾಗೆಯೇ ನಿರ್ಣಯಿಸುವದು ನಂಬಿಕೆಯ ಮೂಲಕವೇ.ಹಾಗಾದರೆ ನಂಬಿಕೆಯಿಂದ ನ್ಯಾಯಪ್ರಮಾಣವನ್ನು ನಿರರ್ಥಕ ಮಾಡುತ್ತೇವೋ? ಹಾಗೆ ಎಂದಿಗೂ ಅಲ್ಲ; ಹೌದು, ನಾವು ನ್ಯಾಯಪ್ರಮಾಣವನ್ನು ಸ್ಥಿರಪಡಿಸುತ್ತೇವೆ. ಹಾಗಾದರೆ ನಂಬಿಕೆಯಿಂದ ನ್ಯಾಯಪ್ರಮಾಣವನ್ನು ನಿರರ್ಥಕ ಮಾಡುತ್ತೇವೋ? ಹಾಗೆ ಎಂದಿಗೂ ಅಲ್ಲ; ಹೌದು, ನಾವು ನ್ಯಾಯಪ್ರಮಾಣವನ್ನು ಸ್ಥಿರಪಡಿಸುತ್ತೇವೆ.
- Luke 12:20 ಲೂಕನು 12:20ಆದರೆ ದೇವರು ಅವನಿಗೆ--ಬುದ್ಧಿಹೀನನೇ, ಈ ರಾತ್ರಿಯೇ ನಿನ್ನ ಪ್ರಾಣವು ನಿನ್ನಿಂದ ಕೇಳಲ್ಪಡುವದು; ಆಗ ನೀನು ಕೂಡಿಸಿಕೊಂಡವುಗಳು ಯಾರಿಗಾಗುವವು ಎಂದು ಹೇಳಿದನು.
- Romans 1:28 ರೋಮಾಪುರದವರಿಗೆ 1:28ಇದಲ್ಲದೆ ಅವರು ತಮ್ಮ ತಿಳುವಳಿಕೆಯಿಂದ ದೇವರನ್ನು ಸ್ಮರಿಸುವದಕ್ಕೆ ಮನಸ್ಸಿಲ್ಲದ ಕಾರಣ ದೇವರು ಅವರನ್ನು ಮಾಡಬಾರದವುಗಳನ್ನು ಮಾಡು ವಂತೆ ಅನಿಷ್ಟಭಾವಕ್ಕೆ ಒಪ್ಪಿಸಿದನು.
- Psalm 10:13 ಕೀರ್ತನೆಗಳು 10:13ದುಷ್ಟನು ದೇವರನ್ನು ಅಲಕ್ಷ್ಯಮಾಡುವದು ಯಾಕೆ? --ನೀನು ಅದನ್ನು ವಿಚಾರಿಸುವದಿಲ್ಲವೆಂದು ಅವನು ತನ್ನ ಹೃದಯದಲ್ಲಿ ಹೇಳಿಕೊಂಡಿದ್ದಾನೆ.
- 1 Kings 14:24 1 ಅರಸುಗಳು 14:24ಅವರು ಇಸ್ರಾಯೇಲಿನ ಮಕ್ಕಳ ಮುಂದೆ ಕರ್ತನು ಹೊರಡಿಸಿದ ಜನಾಂಗಗಳ ಸಕಲ ಅಸಹ್ಯ ಕೃತ್ಯಗಳ ಪ್ರಕಾರ ಮಾಡುತ್ತಾ ಇದ್ದರು.
- Job 15:16 ಯೋಬನು 15:16ನೀರಿನಂತೆ ಅನ್ಯಾಯವನ್ನು ಕುಡಿಯುವ ಮನುಷ್ಯನು ಎಷ್ಟು ಹೆಚ್ಚಾಗಿ ಕೆಟ್ಟು ಅಸಹ್ಯವಾಗಿಯೂ ಮಲೀನನಾದವನಾಗಿಯೂ ಇದ್ದಾನಲ್ಲಾ!
- Psalm 10:11 ಕೀರ್ತನೆಗಳು 10:11ದೇವರು ಮರೆತು ಬಿಟ್ಟಿ ದ್ದಾನೆ; ತನ್ನ ಮುಖವನ್ನು ಮರೆಮಾಡುತ್ತಾನೆ; ಆತನು ಎಂದೂ ನೋಡನು ಎಂದು ತನ್ನ ಹೃದಯದಲ್ಲಿ ಹೇಳಿಕೊಂಡಿದ್ದಾನೆ.
- Psalm 88:1 ಕೀರ್ತನೆಗಳು 88:1ನನ್ನ ರಕ್ಷಣೆಯ ದೇವರಾದ ಓ ಕರ್ತನೇ, ಹಗಲಿರುಳು ನಿನ್ನ ಮುಂದೆ ಕೂಗುತ್ತೇನೆ.
- Job 14:4 ಯೋಬನು 14:4ಅಪವಿತ್ರವಾದದ್ದರಿಂದ ಶುದ್ಧ ವಾದದ್ದನ್ನು ತರುವವನಾರು? ಒಬ್ಬನೂ ಇಲ್ಲ.
- 1 Peter 4:3 1 ಪೇತ್ರನು 4:3ಬಂಡುತನ ದುರಾಶೆ ಕುಡಿಕತನ ದುಂದೌತನ ಮದ್ಯಪಾನಗೋಷ್ಠಿ ಅಸಹ್ಯವಾದ ವಿಗ್ರಹಾರಾಧನೆ ಗಳು ಇವುಗಳನ್ನು ನಡಿಸುವದರಲ್ಲಿಯೂ ಅನ್ಯಜನರಿಗೆ ಇಷ್ಟವಾದದ್ದನ್ನು ಮಾಡುವದರಲ್ಲಿಯೂ ನಮ್ಮ ಜೀವಿತ ದಲ್ಲಿ ಕಳೆದುಹೋದ ಕಾಲವೇ ಸಾಕು.