Psalms · chapter 53 · verse 3
Psalm 53:3 in Kannada
ಎಲ್ಲರು ಹಿಂದಿರುಗಿದ್ದಾರೆ; ಒಟ್ಟಾಗಿ ಹೊಲೆಯಾಗಿ ದ್ದಾರೆ. ಒಳ್ಳೇದನ್ನು ಮಾಡುವವನು ಇಲ್ಲ, ಒಬ್ಬನಾ ದರೂ ಇಲ್ಲ.
Ellaru hindirugiddaare; ottaagi holeyaagi ddaare. Olledannu maaduvavanu illa, obbanaa daroo illa.
Psalm 53:3 in English
- King James Version (KJV)
- Every one of them is gone back: they are altogether become filthy; [there is] none that doeth good, no, not one.
- World English Bible (WEB)
- Every one of them has gone back. They have become filthy together. There is no one who does good, no, not one.
- American Standard Version (ASV)
- Every one of them is gone back; they are together become filthy; There is none that doeth good, no, not one.
- Bible in Basic English (BBE)
- Every one of them has gone back; they are unclean: there is not one who does good, no, not one.
- Darby Translation (DBY)
- Every one of them is gone back, they are together become corrupt: there is none that doeth good, not even one.
- Webster's Bible (WBS)
- Every one of them is gone back: they are altogether become filthy; [there is] none that doeth good, no, not one.
- Young's Literal Translation (YLT)
- Every one went back, together they became filthy, There is none doing good — not even one.
Read in context
- 1ದೇವರಿಲ್ಲವೆಂದು ಮೂರ್ಖನು ತನ್ನ ಹೃದಯದಲ್ಲಿ ಅಂದುಕೊಂಡಿದ್ದಾನೆ. ಅವರು ಕೆಟ್ಟುಹೋಗಿ ಅಸಹ್ಯವಾದ ಅಪರಾಧವನ್ನು ಮಾಡಿದ್ದಾರೆ; ಒಳ್ಳೇದನ್ನು ಮಾಡುವವನು ಯಾವನೂ ಇಲ್ಲ.
- 2ದೇವರನ್ನು ಹುಡುಕುವ ಬುದ್ಧಿವಂತನು ಇದ್ದಾನೋ ಎಂದು ನೋಡುವದಕ್ಕೆ ದೇವರು ಆಕಾ ಶದಿಂದ ಮನುಷ್ಯರೆಲ್ಲರನ್ನು ದೃಷ್ಟಿಸಿ ನೋಡಿದಾಗ
- 3ಎಲ್ಲರು ಹಿಂದಿರುಗಿದ್ದಾರೆ; ಒಟ್ಟಾಗಿ ಹೊಲೆಯಾಗಿ ದ್ದಾರೆ. ಒಳ್ಳೇದನ್ನು ಮಾಡುವವನು ಇಲ್ಲ, ಒಬ್ಬನಾ ದರೂ ಇಲ್ಲ.
- 4ರೊಟ್ಟಿತಿನ್ನುವ ಪ್ರಕಾರ ನನ್ನ ಜನರನ್ನು ತಿಂದು ದೇವರನ್ನು ಸ್ಮರಿಸದೆ ಅಪರಾಧಮಾಡುವವರು ಅರಿ ಯರೋ?
- 5ಭಯವಿಲ್ಲದಿರುವಲ್ಲಿ ಅವರು ಭಯ ಭ್ರಾಂತರಾದರು; ನಿನಗೆ ವಿರೋಧವಾಗಿ ದಂಡು ಇಳಿ ಸುವವನ ಎಲುಬುಗಳನ್ನು ದೇವರು ಚದರಿಸಿ ಬಿಟ್ಟಿ ದ್ದಾನೆ. ನೀನು ಅವರನ್ನು ನಾಚಿಕೆಪಡಿಸಿದ್ದೀ; ದೇವರು ಅವರನ್ನು ತಿರಸ್ಕರಿಸಿದ್ದಾನೆ.ಚೀಯೋನಿನಿಂದ ಇಸ್ರಾಯೇಲಿನ ರಕ್ಷಣೆಯು ಬಂದರೆ ಎಷ್ಟೋ ಒಳ್ಳೇದು. ದೇವರು ತನ್ನ ಜನರನ್ನು ಸೆರೆಯಿಂದ ತಿರುಗಿ ಬರಮಾಡುವಾಗ ಯಾಕೋಬನು ಉಲ್ಲಾಸಿಸುವನು, ಇಸ್ರಾಯೇಲನು ಸಂತೋಷಿ ಸುವನು.
Cross references
- Romans 3:12 ರೋಮಾಪುರದವರಿಗೆ 3:12ಎಲ್ಲರೂ ದಾರಿತಪ್ಪಿದವರಾಗಿ ಕೆಲಸಕ್ಕೆ ಬಾರದವರಾದರು, ಒಳ್ಳೆ ಯದನ್ನು ಮಾಡುವವನು ಇಲ್ಲ, ಒಬ್ಬನಾದರೂ ಇಲ್ಲ.
- Isaiah 64:6 ಯೆಶಾಯ 64:6ನಾವೆಲ್ಲರೂ ಅಶುದ್ದವಾದದ್ದರ ಹಾಗೆ ಇದ್ದೇವೆ; ನಮ್ಮ ನೀತಿ ಕಾರ್ಯಗಳು ಮೈಲಿಗೆ ವಸ್ತ್ರದ ಹಾಗಿವೆ; ನಾವೆಲ್ಲರೂ ಎಲೆಯ ಹಾಗೆ ಬಾಡುತ್ತೇವೆ; ನಮ್ಮ ಅಕ್ರಮಗಳು ಗಾಳಿಯಂತೆ ನಮ್ಮನ್ನು ಎತ್ತಿಕೊಂಡು ಹೋಗಿವೆ.
- Isaiah 53:6 ಯೆಶಾಯ 53:6ನಾವೆಲ್ಲರೂ ದಾರಿ ತಪ್ಪಿದ ಕುರಿಗಳಂತಿದ್ದೆವು; ನಮ್ಮಲ್ಲಿ ಪ್ರತಿಯೊಬ್ಬನು ತನ್ನ ತನ್ನ ಸ್ವಂತ ಮಾರ್ಗಕ್ಕೆ ತಿರುಗಿಕೊಂಡಿದ್ದನು; ಕರ್ತನು ನಮ್ಮ ದುಷ್ಕೃತ್ಯಗಳನ್ನೆಲ್ಲಾ ಆತನ ಮೇಲೆ ಹಾಕಿದನು.
- Psalm 14:3 ಕೀರ್ತನೆಗಳು 14:3ಅವರೆಲ್ಲರೂ ತಪ್ಪಿಹೋಗಿದ್ದಾರೆ, ಅವರೆಲ್ಲರೂ ಏಕವಾಗಿ ಹೊಲೆ ಯಾಗಿದ್ದಾರೆ; ಒಳ್ಳೆಯದನ್ನು ಮಾಡುವವನು ಇಲ್ಲ; ಒಬ್ಬನಾದರೂ ಇಲ್ಲ.
- Jeremiah 8:5–6 ಯೆರೆಮೀಯ 8:5–6ಹಾಗಾದರೆ ಈ ಯೆರೂಸಲೇಮಿನ ಜನರು ನಿತ್ಯವಾದ ಹಿಂಜರಿಯುವಿಕೆಯಿಂದ ಯಾಕೆ ಹಿಂತಿರು ಗಿದ್ದಾರೆ? ಮೋಸವನ್ನು ಬಿಗಿಯಾಗಿ ಹಿಡಿಯುತ್ತಾರೆ, ಹಿಂದಿರುಗುವದಕ್ಕೆ ನಿರಾಕರಿಸುತ್ತಾರೆ. ನಾನು ಕಿವಿ ಗೊಟ್ಟು ಕೇಳಿದೆನು, ಆದರೆ ಅವರು ಯಥಾರ್ಥವಾಗಿ ಮಾತನಾಡಲಿಲ್ಲ. ಯಾವನಾದರೂ--ನಾನು ಎಂಥಾ ಕೆಲಸ ಮಾಡಿದ್ದೇನೆ ಎಂದು ಅಂದುಕೊಂಡು ತನ್ನ ಕೆಟ್ಟತನದ ನಿಮಿತ್ತ ಪಶ್ಚಾತ್ತಾಪ ಪಡಲಿಲ್ಲ; ಕುದುರೆ ಯುದ್ಧಕ್ಕೆ ರಭಸವಾಗಿ ಓಡುವ ಪ್ರಕಾರ ಪ್ರತಿಯೊ ಬ್ಬನೂ ತನ್ನ ದಾರಿಗೆ ತಿರುಗಿದ್ದಾನೆ.
- 3 John 1:11 3 ಯೋಹಾನನು 1:11ಪ್ರಿಯನೇ, ನೀನು ಕೆಟ್ಟದ್ದನ್ನು ಅನುಸರಿಸದೆ ಒಳ್ಳೇದನ್ನು ಅನುಸರಿಸು; ಒಳ್ಳೇದನ್ನು ಮಾಡುವವನು ದೇವರಿಗೆ ಸಂಬಂಧಪಟ್ಟವನಾಗಿದ್ದಾನೆ, ಕೆಟ್ಟದ್ದನ್ನು ಮಾಡುವವನು ದೇವರನ್ನು ಕಂಡವನಲ್ಲ.
- Zephaniah 1:6 ಚೆಫನ್ಯ 1:6ಕರ್ತನ ಕಡೆಯಿಂದ ಹಿಂತಿ ರುಗಿದವರನ್ನೂ ಕರ್ತನನ್ನು ಹುಡುಕದೆಯೂ ವಿಚಾರಿಸ ದೆಯೂ ಇರುವವರನ್ನೂ ಕಡಿದುಬಿಡುವೆನು.
- 2 Samuel 20:2 2 ಸಮುವೇಲನು 20:2ಇಸ್ರಾಯೇಲ್ ಜನರೆಲ್ಲರು ದಾವೀದನನ್ನು ಬಿಟ್ಟು ಸರಿದು ಬಿಕ್ರೀಯ ಮಗನಾದ ಶೆಬನ ಹಿಂದೆ ಹೋದರು. ಆದರೆ ಯೊರ್ದನಿನಿಂದ ಯೆರೂಸಲೇಮಿನ ವರೆಗೂ ಇರುವ ಯೆಹೂದ ಜನರು ತಮ್ಮ ಅರಸನನ್ನು ಅಂಟಿಕೊಂಡಿದ್ದರು.
- 1 John 2:29 1 ಯೋಹಾನನು 2:29ಆತನು ನೀತಿವಂತನಾಗಿ ದ್ದಾನೆಂಬದು ನಿಮಗೆ ಗೊತ್ತಾಗಿದ್ದರೆ ನೀತಿಯನ್ನು ಅನುಸರಿಸುವ ಪ್ರತಿಯೊಬ್ಬನು ಆತನಿಂದ ಹುಟ್ಟಿದವನಾಗಿದ್ದಾನೆಂದು ನೀವು ತಿಳಿದಿದ್ದೀರಿ.
- Ezekiel 36:25 ಯೆಹೆಜ್ಕೇಲನು 36:25ಆಮೇಲೆ ನಾನು ನಿಮ್ಮ ಮೇಲೆ ಶುದ್ಧವಾದ ನೀರನ್ನು ಚಿಮುಕಿಸುತ್ತೇನೆ ಮತ್ತು ನೀವು ಶುದ್ಧರಾಗುವಿರಿ; ಅಶುದ್ಧತ್ವಗಳಿಂದಲೂ ನಿಮ್ಮ ಎಲ್ಲಾ ವಿಗ್ರಹಗಳಿಂದಲೂ ನಿಮ್ಮನ್ನು ಶುದ್ಧೀಕರಿಸುವೆನು.
- Revelation 22:11 ಪ್ರಕಟನೆ 22:11ಅನ್ಯಾಯ ಮಾಡುವವನು ಇನ್ನೂ ಅನ್ಯಾಯ ಮಾಡಲಿ; ಮೈಲಿಗೆಯಾದವನು ಇನ್ನೂ ತನ್ನನ್ನು ಮೈಲಿಗೆ ಮಾಡಿಕೊಳ್ಳಲಿ; ನೀತಿವಂತನು ಇನ್ನೂ ನೀತಿವಂತ ನಾಗಲಿ; ಪವಿತ್ರನು ತಾನು ಇನ್ನೂ ಪವಿತ್ರನಾಗಿರಲಿ;
- Job 15:16 ಯೋಬನು 15:16ನೀರಿನಂತೆ ಅನ್ಯಾಯವನ್ನು ಕುಡಿಯುವ ಮನುಷ್ಯನು ಎಷ್ಟು ಹೆಚ್ಚಾಗಿ ಕೆಟ್ಟು ಅಸಹ್ಯವಾಗಿಯೂ ಮಲೀನನಾದವನಾಗಿಯೂ ಇದ್ದಾನಲ್ಲಾ!