Psalms · chapter 54 · verse 3
Psalm 54:3 in Kannada
ಅನ್ಯರು ನನಗೆ ವಿರೋಧವಾಗಿ ಎದ್ದಿದ್ದಾರೆ; ಬಲಾ ತ್ಕಾರಿಗಳು ನನ್ನ ಪ್ರಾಣವನ್ನು ಹುಡುಕುತ್ತಾರೆ; ಅವರು ದೇವರನ್ನು ತಮ್ಮ ಮುಂದೆ ಇಟ್ಟುಕೊಳ್ಳಲಿಲ್ಲ. ಸೆಲಾ.
Anyaru nanage virodhavaagi eddiddaare; balaa tkaarigalu nanna praanavannu hudukuttaare; avaru devarannu tamma munde ittukollalilla. Selaa.
Psalm 54:3 in English
- King James Version (KJV)
- For strangers are risen up against me, and oppressors seek after my soul: they have not set God before them. Selah.
- World English Bible (WEB)
- For strangers have risen up against me. Violent men have sought after my soul. They haven’t set God before them. Selah.
- American Standard Version (ASV)
- For strangers are risen up against me, And violent men have sought after my soul: They have not set God before them. [Selah
- Bible in Basic English (BBE)
- For men who are going after me have come out against me, violent men are purposing to take my soul; they have not put God before their eyes. (Selah.)
- Darby Translation (DBY)
- For strangers are risen up against me, and the violent seek after my life: they have not set God before them. Selah.
- Webster's Bible (WBS)
- For strangers have risen up against me, and oppressors seek after my soul: they have not set God before them. Selah.
- Young's Literal Translation (YLT)
- For strangers have risen up against me And terrible ones have sought my soul, They have not set God before them. Selah.
Read in context
- 1ಓ ದೇವರೇ, ನಿನ್ನ ಹೆಸರಿನಿಂದ ನನ್ನನ್ನು ರಕ್ಷಿಸಿ ನಿನ್ನ ಬಲದಿಂದ ನನಗೆ ನ್ಯಾಯ ತೀರಿಸು.
- 2ಓ ದೇವರೇ, ನನ್ನ ಪ್ರಾರ್ಥನೆಯನ್ನು ಕೇಳು; ನನ್ನ ಬಾಯಿಯ ಮಾತುಗಳಿಗೆ ಕಿವಿಗೊಡು.
- 3ಅನ್ಯರು ನನಗೆ ವಿರೋಧವಾಗಿ ಎದ್ದಿದ್ದಾರೆ; ಬಲಾ ತ್ಕಾರಿಗಳು ನನ್ನ ಪ್ರಾಣವನ್ನು ಹುಡುಕುತ್ತಾರೆ; ಅವರು ದೇವರನ್ನು ತಮ್ಮ ಮುಂದೆ ಇಟ್ಟುಕೊಳ್ಳಲಿಲ್ಲ. ಸೆಲಾ.
- 4ಇಗೋ, ದೇವರು ನನ್ನ ಸಹಾಯಕನು; ಕರ್ತನು ನನ್ನ ಪ್ರಾಣವನ್ನು ಉದ್ಧಾರ ಮಾಡುವವರ ಸಂಗಡ ಇದ್ದಾನೆ.
- 5ನನ್ನ ವಿರೋಧಿಗಳಿಗೆ ಆತನು ಕೇಡನ್ನು ಬದಲು ಕೊಡುವನು; ನಿನ್ನ ಸತ್ಯದಿಂದ ಅವರನ್ನು ಸಂಹರಿಸು.
Cross references
- Psalm 86:14 ಕೀರ್ತನೆಗಳು 86:14ಓ ದೇವರೇ, ಅಹಂಕಾರಿಗಳು ನನಗೆ ವಿರೋಧ ವಾಗಿ ಎದ್ದಿದ್ದಾರೆ; ಬಲಿಷ್ಠರ ಕೂಟವು ನನ್ನ ಪ್ರಾಣ ವನ್ನು ಹುಡುಕುತ್ತದೆ; ಅವರು ನಿನ್ನನ್ನು ಲಕ್ಷಿಸಲಿಲ್ಲ.
- Psalm 36:1 ಕೀರ್ತನೆಗಳು 36:1ಪಾಪವು ದುಷ್ಟನ ಮನಸ್ಸಿನೊಳಗೆ ನುಡಿಯುತ್ತಿರುವದರಿಂದ ಅವನ ಕಣ್ಣೆದು ರಿಗೆ ದೇವರ ಭಯವೇ ಇಲ್ಲ.
- John 16:3 ಯೋಹಾನನು 16:3ಅವರು ತಂದೆಯನ್ನಾಗಲಿ ಇಲ್ಲವೆ ನನ್ನನ್ನಾ ಗಲಿ ತಿಳಿಯದಿರುವ ಕಾರಣ ಇವೆಲ್ಲವುಗಳನ್ನು ನಿಮಗೆ ಮಾಡುವರು.
- Psalm 53:4 ಕೀರ್ತನೆಗಳು 53:4ರೊಟ್ಟಿತಿನ್ನುವ ಪ್ರಕಾರ ನನ್ನ ಜನರನ್ನು ತಿಂದು ದೇವರನ್ನು ಸ್ಮರಿಸದೆ ಅಪರಾಧಮಾಡುವವರು ಅರಿ ಯರೋ?
- Psalm 59:3–5 ಕೀರ್ತನೆಗಳು 59:3–5ಓ ಕರ್ತನೇ, ನನ್ನ ಅಪರಾಧಕ್ಕಾಗಿ ಇಲ್ಲವೆ ನನ್ನ ಪಾಪಕ್ಕಾಗಿ ಅಲ್ಲ; ಆದರೂ ಇಗೋ, ಅವರು ನನ್ನ ಪ್ರಾಣಕ್ಕೆ ಹೊಂಚುಹಾಕುತ್ತಾರೆ; ಪರಾಕ್ರಮಶಾಲಿಗಳು ನನಗೆ ವಿರೋಧವಾಗಿ ಕೂಡಿ ಕೊಳ್ಳುತ್ತಾರೆ. ನನ್ನಲ್ಲಿ ತಪ್ಪು ಇಲ್ಲದಿದ್ದರೂ ಅವರು ಓಡಾಡಿ ಸಿದ್ಧರಾಗುತ್ತಾರೆ; ನನಗೆ ಸಹಾಯ ಮಾಡುವದಕ್ಕೆ ಎಚ್ಚತ್ತು ನೋಡು. ಸೈನ್ಯಗಳ ದೇವ ರಾದ ಓ ಕರ್ತನೇ, ಇಸ್ರಾಯೇಲಿನ ದೇವರೇ, ನೀನು ಎಲ್ಲಾ ಜನಾಂಗಗಳನ್ನು ದರ್ಶಿಸುವದಕ್ಕೆ ಎಚ್ಚರವಾಗು; ದುಷ್ಟರಾದ ಅಪರಾಧಿಗಳಲ್ಲಿ ಯಾರಿಗಾದರೂ ಕರುಣೆ ತೋರಿಸಬೇಡ. ಸೆಲಾ.
- Job 19:13–15 ಯೋಬನು 19:13–15ನನ್ನ ಸಹೋದರರನ್ನು ನನಗೆ ದೂರ ಮಾಡು ತ್ತಾನೆ; ನನ್ನ ಪರಿಚಯದ ಸ್ನೇಹಿತರು ನನಗೆ ಅನ್ಯರೇ ಆದರು. ನನ್ನ ನೆರೆಯವರು ತಡೆಯುತ್ತಾರೆ; ನನ್ನ ಪರಿಚಯದ ಸ್ನೇಹಿತರು ನನ್ನನ್ನು ಮರೆತ್ತಿದ್ದಾರೆ. ನನ್ನ ಮನೆಯಲ್ಲಿ ತಂಗುವವರೂ ನನ್ನ ದಾಸಿಗಳೂ ನನ್ನನ್ನೂ ಪರನೆಂದು ಎಣಿಸುತ್ತಾರೆ; ಅವರ ದೃಷ್ಟಿಯಲ್ಲಿ ನಾನು ಪರದೇಶದವನ ಹಾಗೆ ಇದ್ದೇನೆ.
- Psalm 16:8 ಕೀರ್ತನೆಗಳು 16:8ನಾನು ಕರ್ತನನ್ನು ಯಾವಾಗಲೂ ನನ್ನ ಮುಂದೆ ಇಟ್ಟುಕೊಂಡಿದ್ದೇನೆ. ಆತನು ನನ್ನ ಬಲಗಡೆಯಲ್ಲಿ ಇರುವದರಿಂದ ನಾನು ಕದಲೆನು.
- Psalm 69:8 ಕೀರ್ತನೆಗಳು 69:8ನನ್ನ ಸಹೋದರರಿಗೆ ಅನ್ಯನಾಗಿದ್ದೇನೆ; ನನ್ನ ಒಡಹುಟ್ಟಿದವರಿಗೆ ಪರಕೀಯನಾಗಿದ್ದೇನೆ.
- Psalm 40:14 ಕೀರ್ತನೆಗಳು 40:14ನನ್ನ ಪ್ರಾಣವನ್ನು ತೆಗೆಯಲು ಅದನ್ನು ಹುಡುಕುವದಕ್ಕೆ ಕೂಡಿಕೊಳ್ಳುವವರೆಲ್ಲರೂ ಆಶಾಭಂಗಪಟ್ಟು ಲಜ್ಜೆಪಡಲಿ; ನನ್ನ ಕೇಡಿನಲ್ಲಿ ಸಂತೋಷಪಡುವವರು ಹಿಂದಕ್ಕೆ ಅಟ್ಟಲ್ಪಟ್ಟು ಅವ ಮಾನ ಹೊಂದಲಿ.
- Psalm 22:16 ಕೀರ್ತನೆಗಳು 22:16ನಾಯಿ ಗಳು ನನ್ನನ್ನು ಸುತ್ತಿಕೊಂಡಿವೆ; ದುರ್ಮಾರ್ಗಿಗಳ ಸಭೆಯು ನನ್ನನ್ನು ಮುತ್ತಿಕೊಂಡಿದೆ; ಅವರು ನನ್ನ ಕೈಗಳನ್ನೂ ಕಾಲುಗಳನ್ನೂ ತಿವಿದಿದ್ದಾರೆ.
- Matthew 27:20–23 ಮತ್ತಾಯನು 27:20–23ಆದರೆ ಪ್ರಧಾನ ಯಾಜಕರು ಮತ್ತು ಹಿರಿಯರು ಬರಬ್ಬನನ್ನು ಬಿಟ್ಟುಕೊಟ್ಟು ಯೇಸು ವನ್ನು ಕೊಲ್ಲುವಂತೆ ಬೇಡಿಕೊಳ್ಳುವ ಹಾಗೆ ಸಮೂಹ ವನ್ನು ಒಡಂಬಡಿಸಿದರು. ಅಧಿಪತಿಯು ಪ್ರತ್ಯುತ್ತರ ವಾಗಿ ಅವರಿಗೆ--ಈ ಇಬ್ಬರಲ್ಲಿ ನಿಮಗೆ ಯಾರನ್ನು ಬಿಟ್ಟು ಕೊಡಬೇಕನ್ನುತ್ತೀರಿ ಅನ್ನಲು ಅವರು--ಬರಬ್ಬನನ್ನು ಅಂದರು. ಪಿಲಾತನು ಅವರಿಗೆ--ಹಾಗಾದರೆ ಕ್ರಿಸ್ತನನ್ನಿಸಿಕೊಳ್ಳುವ ಯೇಸುವನ್ನು ನಾನೇನು ಮಾಡಲಿ ಅನ್ನಲು ಅವರೆಲ್ಲರೂ--ಅವನನ್ನು ಶಿಲುಬೆಗೆ ಹಾಕಿಸು ಎಂದು ಅವನಿಗೆ ಹೇಳಿದರು. ಆಗ ಅಧಿಪತಿಯು--ಯಾಕೆ? ಆತನು ಕೆಟ್ಟದ್ದೇನು ಮಾಡಿ ದ್ದಾನೆ ಅಂದನು. ಆದರೆ ಅವರು--ಆತನನ್ನು ಶಿಲುಬೆಗೆ ಹಾಕಿಸು ಎಂದು ಹೆಚ್ಚಾಗಿ ಕೂಗಿಕೊಂಡರು.