Psalms · chapter 55 · verse 9
Psalm 55:9 in Kannada
ಓ ಕರ್ತನೇ, (ಅವರನ್ನು) ನಾಶಮಾಡು. ಅವರ ನಾಲಿಗೆಗಳನ್ನು ಭೇದಿಸು; ಯಾಕಂದರೆ ಬಲಾತ್ಕಾರ ವನ್ನೂ ವಿವಾದವನ್ನೂ ಪಟ್ಟಣದಲ್ಲಿ ನಾನು ನೋಡಿ ದ್ದೇನೆ;
O kartane, (avarannu) naashamaadu. Avara naaligegalannu bhedisu; yaakandare balaatkaara vannoo vivaadavannoo pattanadalli naanu nodi ddene;
Psalm 55:9 in English
- King James Version (KJV)
- Destroy, O Lord, [and] divide their tongues: for I have seen violence and strife in the city.
- World English Bible (WEB)
- Confuse them, Lord, and confound their language, for I have seen violence and strife in the city.
- American Standard Version (ASV)
- Destroy, O Lord, [and] divide their tongue; For I have seen violence and strife in the city.
- Bible in Basic English (BBE)
- Send destruction on them, O Lord, make a division of tongues among them: for I have seen fighting and violent acts in the town.
- Darby Translation (DBY)
- Swallow [them] up, Lord; divide their tongue: for I have seen violence and strife in the city.
- Webster's Bible (WBS)
- Destroy, O LORD, [and] divide their tongues: for I have seen violence and strife in the city.
- Young's Literal Translation (YLT)
- Swallow up, O Lord, divide their tongue, For I saw violence and strife in a city.
Read in context
- 7ಇಗೋ, ದೂರದ ಅರ ಣ್ಯಕ್ಕೆ ಅಲೆದಾಡುತ್ತಾ ಹೋಗಿ ತಂಗುವೆನು. ಸೆಲಾ.
- 8ಗಾಳಿಯ ತುಫಾನಿಗೂ ಬಿರುಗಾಳಿಗೂ ತಪ್ಪಿಸಿಕೊಳ್ಳಲು ತ್ವರೆಪಡುವೆನು.
- 9ಓ ಕರ್ತನೇ, (ಅವರನ್ನು) ನಾಶಮಾಡು. ಅವರ ನಾಲಿಗೆಗಳನ್ನು ಭೇದಿಸು; ಯಾಕಂದರೆ ಬಲಾತ್ಕಾರ ವನ್ನೂ ವಿವಾದವನ್ನೂ ಪಟ್ಟಣದಲ್ಲಿ ನಾನು ನೋಡಿ ದ್ದೇನೆ;
- 10ಹಗಲು ಇರುಳು ಅದರ ಗೋಡೆಗಳ ಮೇಲೆ ಅವರು ಸುತ್ತುತ್ತಾರೆ; ಕೇಡೂ ದುಃಖವೂ ಅವರ ಮಧ್ಯದಲ್ಲಿದೆ;
- 11ದುಷ್ಟತನವು ಅದರ ಮಧ್ಯ ದಲ್ಲಿದೆ; ಅದರ ಬೀದಿಗಳೊಳಗಿಂದ ಮೋಸವೂ ವಂಚನೆಯೂ ತೊಲಗುವದಿಲ್ಲ.
Cross references
- Jeremiah 6:7 ಯೆರೆಮೀಯ 6:7ಬುಗ್ಗೆಯು ತನ್ನ ನೀರನ್ನು ಹರಿಯ ಮಾಡುವ ಹಾಗೆ ಅವಳು ತನ್ನ ಕೆಟ್ಟತನವನ್ನು ಹರಿಯ ಮಾಡುತ್ತಾಳೆ; ಬಲಾತ್ಕಾರವೂ ಸುಲಿಗೆಯೂ ಅವಳಲ್ಲಿ ಕೇಳಬರುತ್ತವೆ. ದುಃಖವೂ ಗಾಯಗಳೂ ಯಾವಾ ಗಲೂ ನನ್ನ ಮುಂದೆ ಅವೆ.
- 2 Samuel 15:31 2 ಸಮುವೇಲನು 15:31ಅಹೀತೋಫೆಲನು ಅಬ್ಷಾಲೋ ಮನ ಬಳಿಯಲ್ಲಿ ಒಳಸಂಚಿನವರ ಸಂಗಡ ಇದ್ದಾ ನೆಂದು ದಾವೀದನಿಗೆ ತಿಳಿಸಲ್ಪಟ್ಟಾಗ ದಾವೀದನು--ಕರ್ತನೇ, ಅಹೀತೋಫೆಲನ ಆಲೋಚನೆಯನ್ನು ಹುಚ್ಚುತನವಾಗ ಮಾಡು ಅಂದನು.
- Acts 23:6–10 ಅಪೊಸ್ತಲರ ಕೃತ್ಯಗಳು 23:6–10ಆದರೆ ಒಂದು ಭಾಗ ಸದ್ದುಕಾಯರೂ ಮತ್ತೊಂದು ಭಾಗ ಫರಿಸಾಯರೂ ಇರುವದನ್ನು ಪೌಲನು ಗ್ರಹಿಸಿದಾಗ--ಜನರೇ, ಸಹೋದರರೇ, ನಾನು ಫರಿಸಾಯನು, ಒಬ್ಬ ಫರಿಸಾಯನ ಮಗನು; ನಿರೀಕ್ಷೆಯ ವಿಷಯವಾಗಿಯೂ ಸತ್ತವರ ಪುನರುತ್ಥಾನದ ವಿಷಯವಾಗಿಯೂ ನಾನು ವಿಚಾರಣೆ ಮಾಡಲ್ಪಡುತ್ತಿದ್ದೇನೆ ಎಂದು ಆಲೆ ಅವನು ಹಾಗೆ ಹೇಳಿದಾಗ ಫರಿಸಾಯರ ಮತ್ತು ಸದ್ದುಕಾಯರ ನಡುವೆ ಭೇದಉಂಟಾಯಿತು; ಇದರಿಂದ ಸಮೂಹವೂ ವಿಭಾಗವಾಯಿತು. ಪುನರುತ್ಥಾನವಾಗಲೀ ದೂತನಾ ಗಲೀ ಆತ್ಮನಾಗಲೀ ಇಲ್ಲವೆಂದು ಸದ್ದುಕಾಯರು ಹೇಳುತ್ತಾರೆ; ಇವೆಲ್ಲವುಗಳು ಇವೆಯೆಂದು ಫರಿಸಾ ಯರು ಒಪ್ಪಿಕೊಳ್ಳುತ್ತಾರೆ. ಅಲ್ಲಿ ದೊಡ್ಡ ಕೂಗಾಟ ಉಂಟಾದದ್ದರಿಂದ ಫರಿಸಾಯರ ಪಕ್ಷದವರಾದ ಶಾಸ್ತ್ರಿಗಳು ಎದ್ದು--ಈ ಮನುಷ್ಯನಲ್ಲಿ ಯಾವ ಕೆಟ್ಟ ದ್ದನ್ನೂ ನಾವು ಕಾಣಲಿಲ್ಲ; ಆತ್ಮವಾಗಲೀ ದೇವದೂತ ನಾಗಲೀ ಅವನ ಕೂಡ ಮಾತನಾಡಿದರೆ ನಾವು ದೇವರಿಗೆ ವಿರೋಧವಾಗಿ ವ್ಯಾಜ್ಯವಾಡದೆ ಇರೋಣ ಎಂದು ಹೇಳಿ ವಾಗ್ವಾದ ಮಾಡಿದರು. ಅಲ್ಲಿ ದೊಡ್ಡ ಭೇದ ಉಂಟಾದಾಗ ಅವರು ಪೌಲನನ್ನು ಎಳೆದಾಡಿ ತುಂಡುತುಂಡಾಗಿ ಮಾಡಿ ಯಾರು ಎಂದು ಮುಖ್ಯ ನಾಯಕನು ಭಯಪಟ್ಟು ಅವನನ್ನು ಅವರೊಳಗಿಂದ ಬಲವಂತವಾಗಿ ಕೋಟೆಯೊಳಗೆ ತರಬೇಕೆಂದು ಸೈನಿಕರಿಗೆ ಆಜ್ಞಾಪಿಸಿದನು.
- Genesis 11:7–9 ಆದಿಕಾಂಡ 11:7–9ಆದದರಿಂದ ನಾವು ಇಳಿದು ಹೋಗಿ ಅವರು ಒಬ್ಬರ ಮಾತು ಒಬ್ಬರು ತಿಳಿಯದ ಹಾಗೆ ಅವರ ಭಾಷೆಯನ್ನು ಗಲಿಬಿಲಿ ಮಾಡೋಣ ಅಂದನು. ಹೀಗೆ ಕರ್ತನು ಅವರನ್ನು ಅಲ್ಲಿಂದ ಭೂಮಿಯ ಮೇಲೆಲ್ಲಾ ಚದರಿಸಿಬಿಟ್ಟನು. ಆಗ ಅವರು ಪಟ್ಟಣ ಕಟ್ಟುವದನ್ನು ನಿಲ್ಲಿಸಿ ಬಿಟ್ಟರು. ಆದದರಿಂದ ಅದಕ್ಕೆ ಬಾಬೆಲ್ ಎಂದು ಹೆಸರಾಯಿತು; ಯಾಕಂದರೆ ಅಲ್ಲಿ ಕರ್ತನು ಭೂಮಿಯ ಮೇಲೆಲ್ಲಾ ಭಾಷೆಗಳನ್ನು ಗಲಿಬಿಲಿ ಮಾಡಿದನು; ಅಲ್ಲಿಂದ ಕರ್ತನು ಅವರನ್ನು ಭೂಮಿಯ ಮೇಲೆಲ್ಲಾ ಚದರಿಸಿಬಿಟ್ಟನು.
- Matthew 23:37–38 ಮತ್ತಾಯನು 23:37–38ಓ ಯೆರೂಸಲೇಮೇ, ಯೆರೂಸಲೇಮೇ, ಪ್ರವಾದಿಗಳನ್ನು ಕೊಲ್ಲುವವಳೇ, ನಿನ್ನ ಬಳಿಗೆ ಕಳುಹಿಸ ಲ್ಪಟ್ಟವರನ್ನು ಕಲ್ಲೆಸೆಯುವವಳೇ, ಕೋಳಿಯು ಮರಿಗಳನ್ನು ತನ್ನ ರೆಕ್ಕೆಗಳ ಕೆಳಗೆ ಕೂಡಿಸುವಂತೆ ನಿನ್ನ ಮಕ್ಕಳನ್ನು ಕೂಡಿಸುವದಕ್ಕೆ ನನಗೆ ಎಷ್ಟೋ ಸಾರಿ ಮನಸ್ಸಿತ್ತು; ಆದರೆ ನಿನಗೆ ಮನ ಇಗೋ, ನಿಮ್ಮ ಮನೆಯು ನಿಮಗೆ ಹಾಳಾದದ್ದಾಗಿ ಬಿಡಲ್ಪಡುವದು.ಇಂದಿನಿಂದ ಕರ್ತನ ಹೆಸರಿನಲ್ಲಿ ಬರುವಾತನು ಧನ್ಯನು ಎಂದು ನೀವು ಹೇಳುವ ವರೆಗೆ ನೀವು ನನ್ನನ್ನು ನೋಡುವದೇ ಇಲ್ಲ ಎಂದು ನಾನು ನಿಮಗೆ ಹೇಳುತ್ತೇನೆ ಅಂದನು.
- John 7:45–53 ಯೋಹಾನನು 7:45–53ಬಳಿಕ ಪ್ರಧಾನಯಾಜಕರ ಮತ್ತು ಫರಿಸಾಯರ ಬಳಿಗೆ ಅಧಿಕಾರಿಗಳು ಬಂದಾಗ ಅವರಿಗೆ--ನೀವು ಯಾಕೆ ಆತನನ್ನು ಕರತರಲಿಲ್ಲ ಎಂದು ಕೇಳಿದರು. ಅದಕ್ಕೆ ಅಧಿಕಾರಿಗಳು ಪ್ರತ್ಯುತ್ತರವಾಗಿ--ಈ ಮನುಷ್ಯನಂತೆ ಯಾವನೂ ಎಂದೂ ಮಾತನಾಡಲಿಲ್ಲ ಅಂದರು. ಆಗ ಫರಿಸಾಯರೂ ಅವರಿಗೆ--ನೀವು ಸಹ ಮೋಸ ಹೋದಿರೋ? ಅಧಿಕಾರಿಗಳಲ್ಲಿಯೂ ಫರಿಸಾಯರಲ್ಲಿಯೂ ಯಾರಾದರೂ ಅವನ ಮೇಲೆ ವಿಶ್ವಾಸವಿಟ್ಟಿದ್ದಾರೋ? ಆದರೆ ನ್ಯಾಯಪ್ರಮಾಣ ವನ್ನರಿಯದ ಈ ಜನರು ಶಾಪಗ್ರಸ್ತರೇ ಎಂದು ಹೇಳಿದರು. ನಿಕೊದೇಮನು ಅವರಿಗೆ--(ರಾತ್ರಿಯಲ್ಲಿ ಯೇಸುವಿನ ಬಳಿಗೆ ಬಂದಿದ್ದ ಇವನು ಅವರಲ್ಲಿ ಒಬ್ಬ ನಾಗಿದ್ದನು.) ಒಬ್ಬನನ್ನು ವಿಚಾರಿಸಿ ಅವನು ಮಾಡು ವದೇನೆಂದು ತಿಳಿದುಕೊಳ್ಳುವದಕ್ಕಿಂತ ಮುಂಚೆ ಅವ ನನ್ನು ನಮ್ಮ ನ್ಯಾಯಪ್ರಮಾಣವು ತೀರ್ಪು ಮಾಡುವ ದುಂಟೇ ಅಂದನು. ಅವರು ಪ್ರತ್ಯುತ್ತರವಾಗಿ ಅವನಿಗೆ--ನೀನು ಸಹ ಗಲಿಲಾಯದವನೋ? ಗಲಿ ಲಾಯದಲ್ಲಿ ಪ್ರವಾದಿಯು ಏಳುವದೇ ಇಲ್ಲ, ಪರಿ ಶೋಧಿಸಿ ನೋಡು ಅಂದರು.ಪ್ರತಿಯೊಬ್ಬನು ತನ್ನ ಸ್ವಂತ ಮನೆಗೆ ಹೋದನು. ಪ್ರತಿಯೊಬ್ಬನು ತನ್ನ ಸ್ವಂತ ಮನೆಗೆ ಹೋದನು.
- Jeremiah 23:14 ಯೆರೆಮೀಯ 23:14ಯೆರೂಸಲೇಮಿನ ಪ್ರವಾದಿಗಳಲ್ಲಿ ಭಯಂಕರವಾದದ್ದನ್ನು ನೋಡಿದ್ದೇನೆ; ಅವರು ವ್ಯಭಿಚಾರಮಾಡಿ ಸುಳ್ಳಿನಲ್ಲಿ ನಡಕೊಂಡದ್ದ ಲ್ಲದೆ ದುಷ್ಟರು ತಮ್ಮ ದುಷ್ಟತ್ವವನ್ನು ಬಿಟ್ಟು ತಿರುಗದ ಹಾಗೆ ಅವರ ಕೈಗಳನ್ನು ಬಲಪಡಿಸುತ್ತಾರೆ; ಅವರೆಲ್ಲರೂ ನನಗೆ ಸೊದೋಮಿನ ಹಾಗೆಯೂ ಅದರ ನಿವಾಸಿಗಳು ಗೊಮೋರದ ಹಾಗೆಯೂ ಇದ್ದಾರೆ.
- 2 Samuel 17:1–14 2 ಸಮುವೇಲನು 17:1–14ಇದಲ್ಲದೆ ಅಹೀತೋಫೆಲನು ಅಬ್ಷಾ ಲೋಮನಿಗೆ--ಅಪ್ಪಣೆಯಾದರೆ ನಾನು ಹನ್ನೆರಡು ಸಾವಿರ ಜನರನ್ನು ಆದುಕೊಳ್ಳುವೆನು. ಅವನು ದಣಿದವನೂ ಧೈರ್ಯಗುಂದಿದವನೂ ಆಗಿ ರುವಾಗಲೇ ಫಕ್ಕನೆ ಅವನ ಮೇಲೆ ಬಿದ್ದು ಅವನನ್ನು ಬೆದರಿಸುವೆನು, ಅವನ ಜನರೆಲ್ಲರೂ ಓಡಿಹೋಗು ವರು. ಆಗ ನಾನು ಅರಸನನ್ನು ಮಾತ್ರ ಕೊಂದು ಜನರೆಲ್ಲರನ್ನು ತಿರಿಗಿ ನಿನ್ನ ಬಳಿಗೆ ತಕ್ಕೊಂಡು ಬರು ವೆನು. ನೀನು ಹುಡುಕುವವನು ಸಿಕ್ಕಿದರೆ ಜನರೆಲ್ಲರೂ ಹಿಂತಿರುಗಿದ ಹಾಗೆ ಆಗುವದು; ಜನರೆಲ್ಲರೂ ಸಮಾ ಧಾನವಾಗಿರುವರು ಅಂದನು. ಈ ಮಾತು ಅಬ್ಷಾಲೋಮನಿಗೂ ಇಸ್ರಾಯೇಲಿನ ಎಲ್ಲಾ ಹಿರಿಯರ ದೃಷ್ಟಿಗೂ ಸರಿಯಾಗಿತ್ತು. ಆದರೆ ಅಬ್ಷಾಲೋಮನು ಅರ್ಕೀಯನಾದ ಹೂಷೈಯನ್ನು ನಾವು ಕೇಳುವ ಹಾಗೆ ಅವನನ್ನು ಕರೆಯಿರಿ ಅಂದನು. ಹೂಷೈಯು ಅಬ್ಷಾಲೋಮನ ಬಳಿಗೆ ಬಂದಾಗ ಅಬ್ಷಾಲೋಮನು ಅವನಿಗೆ--ಅಹೀತೋಫೆಲನು ಈ ಪ್ರಕಾರ ಹೇಳಿದ್ದಾನೆ. ಅವನ ಮಾತಿನ ಪ್ರಕಾರ ಮಾಡೋಣವೋ? ಬೇಡವಾದರೆ, ನೀನು ಮಾತ ನಾಡು ಅಂದನು. ಆಗ ಹೂಷೈ ಅಬ್ಷಾಲೋಮ ನಿಗೆ--ಅಹೀತೋಫೆಲನು ಹೇಳಿದ ಆಲೋಚನೆಯು ಈ ವೇಳೆಗೆ ಒಳ್ಳೇದಲ್ಲ. ನಿನ್ನ ತಂದೆಯೂ ಅವನ ಜನರೂ ಪರಾಕ್ರಮಶಾಲಿಗಳು; ಅವರು ಅಡವಿಯಲ್ಲಿ ಮರಿಗಳನ್ನು ಕಳಕೊಂಡ ಕರಡಿಯ ಹಾಗೆ ರೋಷ ವುಳ್ಳವರಾಗಿದ್ದಾರೆಂದು ನೀನು ಬಲ್ಲೆ. ಇದಲ್ಲದೆ ನಿನ್ನ ತಂದೆಯು ಶೂರನು; ಅವನು ರಾತ್ರಿಯಲ್ಲಿ ಜನರ ಸಂಗಡ ತಂಗುವದಿಲ್ಲ. ಇಗೋ, ಅವನು ಈಗ ಒಂದು ಗವಿಯಲ್ಲಾದರೂ ಒಂದು ಸ್ಥಳದಲ್ಲಾದರೂ ಅಡಗಿಕೊಂಡಿರುವನು. ಮೊದಲೇ ಇವರಲ್ಲಿ ಕೆಲವರು ಸತ್ತರೆ ಅದನ್ನು ಕೇಳು ವವರು ಅಬ್ಷಾಲೋಮನನ್ನು ಹಿಂಬಾಲಿಸುವ ಜನರಲ್ಲಿ ಸಂಹಾರವಾಯಿತೆಂದು ಹೇಳುವರು. ಆಗ ಸಿಂಹದ ಹೃದಯವುಳ್ಳ ಪರಾಕ್ರಮಶಾಲಿಯ ಹೃದಯವೂ ಸಹ ಸಂಪೂರ್ಣ ಕರಗುವದು. ಇದಲ್ಲದೆ ನಿನ್ನ ತಂದೆಯು ಶೂರನೆಂದೂ ಅವನ ಸಂಗಡ ಇರುವವರು ಪರಾ ಕ್ರಮಶಾಲಿಗಳೆಂದೂ ಇಸ್ರಾಯೇಲ್ಯರೆಲ್ಲರು ಬಲ್ಲರು. ನಾನು ಹೇಳುವ ಆಲೋಚನೆ ಏನಂದರೆ, ದಾನಿ ನಿಂದ ಬೇರ್ಷೆಬದ ವರೆಗೂ ಇರುವ ಸಮುದ್ರದ ಮರಳಿನಷ್ಟು ಅಸಂಖ್ಯವಾದ ಇಸ್ರಾಯೇಲ್ಯರು ನಿನ್ನ ಬಳಿಯಲ್ಲಿ ಕೂಡಿಸಲ್ಪಟ್ಟ ತರುವಾಯ ನೀನೇ ಯುದ್ಧಕ್ಕೆ ಹೋಗಬೇಕು. ಆಗ ನಾವು ಅವನನ್ನು ಕಂಡು ಕೊಳ್ಳುವ ಸ್ಥಳದಲ್ಲಿ ಅವನ ಮೇಲೆ ಬಂದು ಭೂಮಿಯ ಮೇಲೆ ಮಂಜು ಬೀಳುವ ಹಾಗೆ ಅವನ ಮೇಲೆ ಬೀಳುವೆವು. ಅವನೂ ಅವನ ಸಂಗಡವಿರುವ ಎಲ್ಲಾ ಜನರಲ್ಲಿ ಒಬ್ಬನಾದರೂ ಉಳಿಯುವದಿಲ್ಲ. ಅವನು ಒಂದು ವೇಳೆ ಒಂದು ಪಟ್ಟಣದಲ್ಲಿ ಹೊಕ್ಕರೆ ಇಸ್ರಾಯೇಲ್ಯರೆಲ್ಲರು ಆ ಪಟ್ಟಣಕ್ಕೆ ಹಗ್ಗಗಳನ್ನು ತಂದು ಹಾಕಿದ ತರುವಾಯ ನಾವು ಒಂದು ಹರಳಾದರೂ ಅಲ್ಲಿ ಕಾಣದ ಹಾಗೆ ಅದನ್ನು ನದಿಗೆ ಎಳೆದು ಹಾಕುವೆವು ಅಂದನು. ಆಗ ಅಬ್ಷಾ ಲೋಮನೂ ಇಸ್ರಾಯೇಲಿನ ಎಲ್ಲಾ ಜನರೂಅಹೀತೋಫೆಲನ ಆಲೋಚನೆಗಿಂತ ಅರ್ಕೀಯನಾದ ಹೂಷೈಯ ಆಲೋಚನೆ ಒಳ್ಳೇದು ಅಂದರು. ತಾನು ಅಬ್ಷಾಲೋಮನ ಮೇಲೆ ಕೇಡನ್ನು ಬರಮಾಡುವ ಹಾಗೆ ಅಹೀತೋಫೆಲನ ಒಳ್ಳೇ ಆಲೋಚನೆಯನ್ನು ವ್ಯರ್ಥಮಾಡುವದಕ್ಕೆ ಕರ್ತನು ನೇಮಿಸಿದ್ದನು.