Psalms · chapter 56 · verse 7
Psalm 56:7 in Kannada
ಅಪರಾಧದಿಂದ ಅವರು ತಪ್ಪಿಸಿಕೊಂಡಾರೋ? ಓ ದೇವರೇ, ಕೋಪದಿಂದ ಜನರನ್ನು ಕೆಡವಿಹಾಕು.
Aparaadhadinda avaru tappisikondaaro? O devare, kopadinda janarannu kedavihaaku.
Psalm 56:7 in English
- King James Version (KJV)
- Shall they escape by iniquity? in [thine] anger cast down the people, O God.
- World English Bible (WEB)
- Shall they escape by iniquity? In anger cast down the peoples, God.
- American Standard Version (ASV)
- Shall they escape by iniquity? In anger cast down the peoples, O God.
- Bible in Basic English (BBE)
- By evil-doing they will not get free from punishment. In wrath, O God, let the peoples be made low.
- Darby Translation (DBY)
- Shall they escape by iniquity? In anger cast down the peoples, O God.
- Webster's Bible (WBS)
- Shall they escape by iniquity; in [thy] anger cast down the people, O God.
- Young's Literal Translation (YLT)
- By iniquity they escape, In anger the peoples put down, O God.
Read in context
- 5ಪ್ರತಿದಿನ ಅವರು ನನ್ನ ಮಾತುಗಳನ್ನು ಅಪಾರ್ಥ ಮಾಡುತ್ತಾರೆ. ನನಗೆ ವಿರೋಧವಾಗಿರುವ ಅವರ ಆಲೋಚನೆಗಳೆಲ್ಲಾ ನನ್ನ ಕೇಡಿಗಾಗಿವೆ.
- 6ಅವರು ಕೂಡಿಕೊಂಡು ಹೊಂಚುಹಾಕುತ್ತಾರೆ; ನನ್ನ ಪ್ರಾಣಕ್ಕೆ ಕಾಯುವವರಾಗಿ ನನ್ನ ಹೆಜ್ಜೆಗಳನ್ನು ಗುರುತಿಸುತ್ತಾರೆ.
- 7ಅಪರಾಧದಿಂದ ಅವರು ತಪ್ಪಿಸಿಕೊಂಡಾರೋ? ಓ ದೇವರೇ, ಕೋಪದಿಂದ ಜನರನ್ನು ಕೆಡವಿಹಾಕು.
- 8ನನ್ನ ಅಲೆದಾಡುವಿಕೆಗಳನ್ನು ನೀನು ಲೆಕ್ಕಿಸಿದ್ದೀ; ನನ್ನ ಕಣ್ಣೀರನ್ನು ನಿನ್ನ ಬುದ್ದಲಿಯಲ್ಲಿ ಹಾಕು; ಅದು ನಿನ್ನ ಪುಸ್ತಕದಲ್ಲಿ ಇಲ್ಲವೋ?
- 9ನಾನು ನಿನ್ನನ್ನು ಕೂಗಿ ಕೊಂಡಾಗ ನನ್ನ ಶತ್ರುಗಳು ಹಿಂದಿರುಗುವರು; ದೇವರು ನನಗಿದ್ದಾನೆ ಎಂಬದನ್ನು ಬಲ್ಲೆನು.
Cross references
- Psalm 55:23 ಕೀರ್ತನೆಗಳು 55:23ಓ ದೇವರೇ, ನೀನು ಅವರನ್ನು ನಾಶನದ ಕುಣಿಯಲ್ಲಿ ಇಳಿಯ ಮಾಡುವಿ. ಕೊಲೆಪಾತಕರೂ ಮೋಸಗಾರರೂ ತಮ್ಮ ಆಯುಷ್ಯದ ದಿವಸಗಳಲ್ಲಿ ಅರ್ದದಷ್ಟಾದರೂ ಜೀವಿ ಸುವದಿಲ್ಲ; ನಾನು ನಿನ್ನಲ್ಲಿ ಭರವಸವಿಡುತ್ತೇನೆ.
- Psalm 94:20–21 ಕೀರ್ತನೆಗಳು 94:20–21ವಿಧಿಯಿಂದ ಕೇಡನ್ನು ಕಲ್ಪಿಸುವ ಅಪರಾಧದ ಸಿಂಹಾಸನವು ನಿನ್ನ ಸಂಗಡ ಅನ್ಯೋನ್ಯವಾಗಿರು ವದೋ? ನೀತಿವಂತನ ಪ್ರಾಣಕ್ಕೆ ವಿರೋಧವಾಗಿ ಅವರು ಕೂಡಿಕೊಳ್ಳುತ್ತಾರೆ; ನಿರಪರಾಧಿಯ ರಕ್ತವನ್ನು ಖಂಡಿಸುತ್ತಾರೆ.
- Jeremiah 10:25 ಯೆರೆಮೀಯ 10:25ನಿನ್ನನ್ನು ತಿಳಿಯದ ಅನ್ಯರ ಮೇಲೆಯೂ ನಿನ್ನ ಹೆಸರನ್ನು ಕರೆಯದ ಕುಟುಂಬಗಳ ಮೇಲೆಯೂ ನಿನ್ನ ರೌದ್ರವನ್ನು ಹೊಯಿದುಬಿಡು; ಅವರು ಯಾಕೋ ಬ್ಯರನ್ನು ತಿಂದು ಬಿಟ್ಟಿದ್ದಾರೆ; ಅವರನ್ನು ನುಂಗಿ ಇಲ್ಲದಾಗಿ ಮಾಡಿ ಅವರ ನಿವಾಸವನ್ನು ಹಾಳುಮಾಡಿದ್ದಾರೆ.
- Psalm 36:12 ಕೀರ್ತನೆಗಳು 36:12ಅಲ್ಲಿ ಅಕ್ರಮ ಮಾಡುವವರು ಬಿದ್ದಿದ್ದಾರೆ; ಅವರು ಕೆಳಗೆ ಹಾಕಲ್ಪಟ್ಟು ಏಳಲಾರದೆ ಇದ್ದಾರೆ.
- Habakkuk 1:13 ಹಬಕ್ಕೂಕ 1:13ನೀನು ಕೆಟ್ಟದ್ದನ್ನು ನೋಡಕೂಡದ ಹಾಗೆ ಶುದ್ಧ ಕಣ್ಣುಗಳುಳ್ಳವನು; ನೀನು ಅನ್ಯಾಯವನ್ನು ದೃಷ್ಟಿಸಲಾರಿ; ವಂಚಿಸುವವರನ್ನು ಯಾಕೆ ದೃಷ್ಟಿಸುತ್ತೀ? ದುಷ್ಟನು ತನಗಿಂತ ನೀತಿವಂತ ನನ್ನು ನುಂಗಿಬಿಡುವ ವೇಳೆಯಲ್ಲಿ ಯಾಕೆ ಸುಮ್ಮನಿ ರುತ್ತೀ?
- Ecclesiastes 8:8 ಪ್ರಸಂಗಿ 8:8ಆತ್ಮವನ್ನು ಹಿಡಿ ಯುವ ಶಕ್ತಿ ಯಾವ ಮನುಷ್ಯನಿಗೂ ಇಲ್ಲ; ಹಾಗೆಯೇ ಮರಣ ದಿನವನ್ನು ತಡೆಯುವ ಶಕ್ತಿಯು ಯಾರಿಗೂ ಇರುವದಿಲ್ಲ. ಯುದ್ಧದಿಂದ ಬಿಡುಗಡೆಯೂ ಹೇಗೆ ಇಲ್ಲವೋ ಹಾಗೆಯೇ ದುಷ್ಟನಿಗೆ ಅದರಿಂದ ಬಿಡು ಗಡೆಯೇ ಇಲ್ಲ.
- Jeremiah 18:19–23 ಯೆರೆಮೀಯ 18:19–23ಓ ಕರ್ತನೇ, ನನ್ನನ್ನು ಆಲೈಸು; ನನ್ನ ಸಂಗಡ ವ್ಯಾಜ್ಯವಾಡುವವರ ಸ್ವರವನ್ನು ಕೇಳು. ಒಳ್ಳೇದಕ್ಕೆ ಬದಲಾಗಿ ಕೆಟ್ಟದ್ದನ್ನು ಸಲ್ಲಿಸಬಹುದೇ? ಅವರು ನನ್ನ ಪ್ರಾಣಕ್ಕೆ ಕುಣಿಯನ್ನು ಅಗೆದಿದ್ದಾರೆ; ಅವರಿಗೋಸ್ಕರ ಒಳ್ಳೆಯದನ್ನು ಮಾತಾಡುವದಕ್ಕೂ ನಿನ್ನ ಉಗ್ರವನ್ನು ಅವರಿಂದ ತಿರುಗಿಸುವದಕ್ಕೂ ನಾನು ನಿನ್ನ ಮುಂದೆ ನಿಂತದ್ದನ್ನು ಜ್ಞಾಪಕಮಾಡಿಕೋ. ಆದದರಿಂದ ಅವರ ಮಕ್ಕಳನ್ನು ಕ್ಷಾಮಕ್ಕೆ ಕೊಡು; ಕತ್ತಿಯ ಬಲದಿಂದ ಅವರ ರಕ್ತವನ್ನು ಸುರಿದುಬಿಡು; ಅವರ ಹೆಂಡತಿಯರು ಮಕ್ಕಳಿಲ್ಲದೆ ವಿಧವೆಯರಾಗಲಿ; ಅವರ ಗಂಡಸರು ಕೊಲ್ಲಲ್ಪಟ್ಟು ಸಾಯಲಿ; ಅವರ ಯೌವನಸ್ಥರು ಯುದ್ಧ ದಲ್ಲಿ ಕತ್ತಿಯಿಂದ ವಧಿಸಲ್ಪಡಲಿ. ನೀನು ಅಕಸ್ಮಾತ್ತಾಗಿ ಅವರ ಮೇಲೆ ಸೈನ್ಯವನ್ನು ತರಿಸುವಾಗ ಕೂಗು ಅವರ ಮನೆಗಳೊಳಗಿಂದ ಕೇಳಬರಲಿ; ನನ್ನನ್ನು ಹಿಡಿಯು ವದಕ್ಕೆ ಕುಣಿ ಅಗೆದಿದ್ದಾರೆ; ನನ್ನ ಕಾಲುಗಳಿಗೆ ಉರ್ಲು ಗಳನ್ನು ಒಡ್ಡಿದ್ದಾರೆ.ಆದಾಗ್ಯೂ ಕರ್ತನೇ, ಅವರು ನನ್ನನ್ನು ಸಾಯಿಸುವದಕ್ಕೆ ನನಗೆ ವಿರೋಧವಾಗಿ ಮಾಡಿದ ಆಲೋಚನೆಯನ್ನೆಲ್ಲಾ ನೀನು ಬಲ್ಲೆ; ಅವರ ಅಕ್ರಮವನ್ನು ಮನ್ನಿಸಬೇಡ; ಪಾಪವನ್ನು ನಿನ್ನ ಸನ್ನಿಧಿ ಯೊಳಗಿಂದ ಅಳಿಸಿಬಿಡಬೇಡ; ಅವರು ನಿನ್ನ ಮುಂದೆ ಕೆಡವಲ್ಪಡಲಿ; ನಿನ್ನ ಕೋಪದ ಕಾಲದಲ್ಲಿ ಅವರಿಗೆ ಹಾಗೆ ಮಾಡು. ಆದಾಗ್ಯೂ ಕರ್ತನೇ, ಅವರು ನನ್ನನ್ನು ಸಾಯಿಸುವದಕ್ಕೆ ನನಗೆ ವಿರೋಧವಾಗಿ ಮಾಡಿದ ಆಲೋಚನೆಯನ್ನೆಲ್ಲಾ ನೀನು ಬಲ್ಲೆ; ಅವರ ಅಕ್ರಮವನ್ನು ಮನ್ನಿಸಬೇಡ; ಪಾಪವನ್ನು ನಿನ್ನ ಸನ್ನಿಧಿ ಯೊಳಗಿಂದ ಅಳಿಸಿಬಿಡಬೇಡ; ಅವರು ನಿನ್ನ ಮುಂದೆ ಕೆಡವಲ್ಪಡಲಿ; ನಿನ್ನ ಕೋಪದ ಕಾಲದಲ್ಲಿ ಅವರಿಗೆ ಹಾಗೆ ಮಾಡು.
- Isaiah 28:15 ಯೆಶಾಯ 28:15ಮರಣದ ಸಂಗಡ ಒಡಂಬಡಿಕೆಯನ್ನು ಮಾಡಿದ್ದೇವೆ. ಪಾತಾಳದ (ನರಕದ)ಸಂಗಡ ಒಪ್ಪಂದ ಮಾಡಿಕೊಂಡಿದ್ದೇವೆ; ವಿಪರೀತವಾದ ಶಿಕ್ಷೆ ಯು ಹಾದುಹೋಗುವಾಗ ನಮ್ಮ ಮೇಲೆ ಬಾರದು; ಸುಳ್ಳನ್ನು ನಮ್ಮ ಆಶ್ರಯವಾಗಿ ಮಾಡಿಕೊಂಡು ಮೋಸದಲ್ಲಿ ಅಡಗಿಕೊಂಡಿದ್ದೇವೆ ಎಂದು ನೀವು ಅನ್ನುತ್ತೀರಲ್ಲಾ?
- Psalm 55:15 ಕೀರ್ತನೆಗಳು 55:15ಮರಣವು ಅವರನ್ನು ಹಿಡಿ ಯಲಿ; ತ್ವರಿತವಾಗಿ ನರಕಕ್ಕೆ ಅವರು ಇಳಿದುಹೋಗಲಿ; ಅವರ ವಾಸಸ್ಥಳದಲ್ಲಿಯೂ ಮಧ್ಯದಲ್ಲಿಯೂ ದುಷ್ಟತನ ಇದೆ.
- Psalm 55:9 ಕೀರ್ತನೆಗಳು 55:9ಓ ಕರ್ತನೇ, (ಅವರನ್ನು) ನಾಶಮಾಡು. ಅವರ ನಾಲಿಗೆಗಳನ್ನು ಭೇದಿಸು; ಯಾಕಂದರೆ ಬಲಾತ್ಕಾರ ವನ್ನೂ ವಿವಾದವನ್ನೂ ಪಟ್ಟಣದಲ್ಲಿ ನಾನು ನೋಡಿ ದ್ದೇನೆ;
- Jeremiah 7:10 ಯೆರೆಮೀಯ 7:10ಆಮೇಲೆ ಬಂದು ನನ್ನ ಹೆಸರಿನಲ್ಲಿ ಕರೆಯಲ್ಪಟ್ಟ ಈ ಆಲಯದಲ್ಲಿ ನನ್ನ ಮುಂದೆ ನಿಂತು ಕೊಂಡು--ನಾವು ಈ ಅಸಹ್ಯವಾದವುಗಳನ್ನೆಲ್ಲಾ ಮಾಡುವ ಹಾಗೆ ಒಪ್ಪಿಸಲ್ಪಟ್ಟಿದ್ದೇವೆಂದು ಹೇಳು ವಿರೋ?