Psalms · chapter 57 · verse 3
Psalm 57:3 in Kannada
ಆತನು ಪರಲೋಕದಿಂದ ಕಳುಹಿಸಿ ನುಂಗಲಿರುವ ವನ ನಿಂದೆಯಿಂದ ನನ್ನನ್ನು ರಕ್ಷಿಸುವನು. ಸೆಲಾ. ದೇವರು ಕೃಪೆಯನ್ನೂ ತನ್ನ ಸತ್ಯವನ್ನೂ ಕಳುಹಿಸುವನು.
Aatanu paralokadinda kaluhisi nungaliruva vana nindeyinda nannannu rakshisuvanu. Selaa. Devaru krupeyannoo tanna satyavannoo kaluhisuvanu.
Psalm 57:3 in English
- King James Version (KJV)
- He shall send from heaven, and save me [from] the reproach of him that would swallow me up. Selah. God shall send forth his mercy and his truth.
- World English Bible (WEB)
- He will send from heaven, and save me, he rebukes the one who is pursuing me. Selah. God will send out his loving kindness and his truth.
- American Standard Version (ASV)
- He will send from heaven, and save me, [When] he that would swallow me up reproacheth; [Selah God will send forth his lovingkindness and his truth.
- Bible in Basic English (BBE)
- He will send from heaven, and take me from the power of him whose desire is for my destruction. God will send out his mercy and his good faith.
- Darby Translation (DBY)
- He will send from the heavens and save me; he hath covered with reproach him that would swallow me up. Selah. God hath sent forth his loving-kindness and his truth.
- Webster's Bible (WBS)
- He shall send from heaven, and save me [from] the reproach of him that would swallow me up. Selah. God shall send forth his mercy and his truth.
- Young's Literal Translation (YLT)
- He sendeth from the heaven, and saveth me, He reproached — who is panting after me. Selah. God sendeth forth His kindness and His truth.
Read in context
- 1ನನ್ನ ಮೇಲೆ ಕರುಣೆಯಿಡು, ಓ ದೇವರೇ, ನನ್ನನ್ನು ಕರುಣಿಸು; ನನ್ನ ಪ್ರಾಣವು ನಿನ್ನನ್ನು ಆಶ್ರಯಿಸಿಕೊಳ್ಳುತ್ತದೆ. ಆಪತ್ತುಗಳು ದಾಟುವ ವರೆಗೂ ನಿನ್ನ ರೆಕ್ಕೆಗಳ ನೆರಳನ್ನೇ ನಾನು ಆಶ್ರಯಿಸಿಕೊಳ್ಳುತ್ತೇನೆ.
- 2ಮಹೋನ್ನತನಾದ ದೇವರಿಗೆ, ನನಗೋಸ್ಕರ ಕಾರ್ಯ ಗಳನ್ನು ಸಫಲಮಾಡುವ ದೇವರನ್ನೇ, ಕೂಗುತ್ತೇನೆ.
- 3ಆತನು ಪರಲೋಕದಿಂದ ಕಳುಹಿಸಿ ನುಂಗಲಿರುವ ವನ ನಿಂದೆಯಿಂದ ನನ್ನನ್ನು ರಕ್ಷಿಸುವನು. ಸೆಲಾ. ದೇವರು ಕೃಪೆಯನ್ನೂ ತನ್ನ ಸತ್ಯವನ್ನೂ ಕಳುಹಿಸುವನು.
- 4ನನ್ನ ಪ್ರಾಣವು ಸಿಂಹಗಳ ಮಧ್ಯದಲ್ಲಿದೆ; ಬೆಂಕಿಯಂತೆ ಉರಿಯುವ ಮನುಷ್ಯರ ಮಧ್ಯದಲ್ಲಿ ಬಿದ್ದಿದ್ದೇನೆ. ಅವರ ಹಲ್ಲುಗಳು ಭಲ್ಲೆಬಾಣಗಳೂ; ಅವರ ನಾಲಿಗೆ ಹದವಾದ ಕತ್ತಿ.
- 5ಓ ದೇವರೇ, ಆಕಾಶಗಳಿಗಿಂತ ನೀನು ಉನ್ನತನಾಗು; ಭೂಮಿಯ ಮೇಲೆಲ್ಲಾ ನಿನ್ನ ಮಹಿಮೆಯು ಇರಲಿ.
Cross references
- Psalm 40:11 ಕೀರ್ತನೆಗಳು 40:11ಕರ್ತನೇ, ನಿನ್ನ ಅಂತಃಕರುಣೆಗಳನ್ನು ನನ್ನಿಂದ ಹಿಂತೆಗೆಯಬೇಡ; ನಿನ್ನ ಪ್ರೀತಿ ಕರುಣೆಗಳೂ ನಿನ್ನ ಸತ್ಯವೂ ಯಾವಾಗಲೂ ನನ್ನನ್ನು ಕಾಯಲಿ.
- Psalm 43:3 ಕೀರ್ತನೆಗಳು 43:3ನಿನ್ನ ಬೆಳ ಕನ್ನೂ ಸತ್ಯವನ್ನೂ ಕಳುಹಿಸು; ಅವು ನನ್ನನ್ನು ನಡಿಸಿ ನಿನ್ನ ಪರಿಶುದ್ಧ ಪರ್ವತಕ್ಕೂ ಗುಡಾರಗಳಿಗೂ ನನ್ನನ್ನು ಬರಮಾಡಲಿ.
- Acts 12:11 ಅಪೊಸ್ತಲರ ಕೃತ್ಯಗಳು 12:11ಆಗ ಪೇತ್ರನು ಎಚ್ಚರವಾಗಿ-- ಕರ್ತನು ತನ್ನ ದೂತನನ್ನು ಕಳುಹಿಸಿ ಹೆರೋದನ ಕೈಯಿಂದಲೂ ಯೆಹೂದ್ಯ ಜನರು ನನಗೆ ಮಾಡಬೇಕೆಂದಿದ್ದ ಎಲ್ಲವುಗಳಿಂದಲೂ ನನ್ನನ್ನು ಬಿಡಿಸಿದನೆಂದು ನನಗೀಗ ನಿಶ್ಚಯವಾಗಿ ತಿಳಿದುಬಂದಿದೆ ಅಂದುಕೊಂಡನು.
- Psalm 144:5–7 ಕೀರ್ತನೆಗಳು 144:5–7ಓ ಕರ್ತನೇ, ನಿನ್ನ ಆಕಾಶಗಳನ್ನು ತಗ್ಗಿಸಿ ಇಳಿದು ಬಾ; ಬೆಟ್ಟಗಳನ್ನು ಮುಟ್ಟು; ಆಗ ಅವು ಹೊಗೆ ಹಾಯುವವು. ಮಿಂಚನ್ನು ಮಿಂಚಿಸಿ ಅವರನ್ನು ಚದರಿಸು; ನಿನ್ನ ಬಾಣಗಳನ್ನು ಎಸೆದು ಅವರನ್ನು ನಾಶಮಾಡು. ನಿನ್ನ ಕೈಯನ್ನು ಉನ್ನತದಿಂದ ಚಾಚಿ, ಮಹಾಜಲಗಳಿಂದಲೂ ಅನ್ಯರ ಮಕ್ಕಳ ಕೈಯಿಂದಲೂ ನನ್ನನ್ನು ತಪ್ಪಿಸು, ನನ್ನನ್ನು ಬಿಡಿಸು.
- Psalm 61:7 ಕೀರ್ತನೆಗಳು 61:7ಅವನು ಎಂದಿಗೂ ದೇವರ ಮುಂದೆ ವಾಸಿಸುವನು; ಅವನನ್ನು ಕಾಯು ವದಕ್ಕೆ ಕರುಣೆಯನ್ನೂ ಸತ್ಯವನ್ನೂ ಸಿದ್ಧಮಾಡು.ಹಾಗಾದರೆ ನನ್ನ ಹರಕೆಗಳನ್ನು ದಿನ ದಿನಕ್ಕೆ ಸಲ್ಲಿ ಸುವ ಹಾಗೆ ನಿನ್ನ ಹೆಸರನ್ನು ಎಂದೆಂದಿಗೂ ನಾನು ಕೀರ್ತಿಸುವೆನು.
- Psalm 56:1–2 ಕೀರ್ತನೆಗಳು 56:1–2ಓ ದೇವರೇ, ನನ್ನನ್ನು ಕರುಣಿಸು; ಮನುಷ್ಯನು ನನ್ನನ್ನು ನುಂಗಬೇಕೆಂದಿದ್ದಾನೆ; ದಿನವೆಲ್ಲಾ ಯುದ್ಧಮಾಡುತ್ತಾ ನನ್ನನ್ನು ಬಾಧಿಸುತ್ತಾನೆ. ಓ ಅತ್ಯುನ್ನತನೇ, ನನ್ನ ವಿರೋಧಿಗಳು ದಿನವೆಲ್ಲಾ ನನ್ನನ್ನು ನುಂಗಬೇಕೆಂದಿದ್ದಾರೆ; ನನಗೆ ವಿರೋಧವಾಗಿ ಗರ್ವದಿಂದ ಯುದ್ಧಮಾಡುವವರು ಅನೇಕರಾಗಿದ್ದಾರೆ.
- Matthew 28:2–6 ಮತ್ತಾಯನು 28:2–6ಮತ್ತು ಇಗೋ, ಅಲ್ಲಿ ಮಹಾಭೂಕಂಪ ಉಂಟಾಯಿತು; ಯಾಕಂದರೆ ಕರ್ತನ ದೂತನು ಪರಲೋಕದಿಂದ ಇಳಿದು ಬಂದು ಬಾಗಲಿನಿಂದ ಕಲ್ಲನ್ನು ಉರುಳಿಸಿ ಅದರ ಮೇಲೆ ಕೂತುಕೊಂಡನು. ಅವನ ಮುಖವು ಮಿಂಚಿನಂತೆಯೂ ಅವನ ಉಡುಪು ಹಿಮದಂತೆಯೂ ಬಿಳುಪಾಗಿತ್ತು. ಕಾವಲುಗಾರರು ಅವನಿಗೆ ಭಯಪಟ್ಟು ನಡುಗುತ್ತಾ ಸತ್ತವರ ಹಾಗಾದರು. ಆ ದೂತನು ಸ್ತ್ರೀಯರಿಗೆ-- ನೀವು ಭಯಪಡಬೇಡಿರಿ; ಯಾಕಂದರೆ ಶಿಲುಬೆಗೆ ಹಾಕಲ್ಪಟ್ಟವನಾದ ಯೇಸುವನ್ನು ನೀವು ಹುಡುಕುತ್ತೀರೆಂದು ನಾನು ಬಲ್ಲೆನು. ಆತನು ಇಲ್ಲಿ ಇಲ್ಲ; ಯಾಕಂದರೆ ಆತನು ಹೇಳಿರುವ ಪ್ರಕಾರ ಆತನು ಎದ್ದಿದ್ದಾನೆ; ಕರ್ತನು ಮಲಗಿದ್ದ ಸ್ಥಳವನ್ನು ಬಂದು ನೋಡಿರಿ.
- Psalm 18:6–50 ಕೀರ್ತನೆಗಳು 18:6–50ನನ್ನ ಇಕ್ಕಟ್ಟಿನಲ್ಲಿ ಕರ್ತನನ್ನು ಬೇಡಿದೆನು; ನನ್ನ ದೇವರಿಗೆ ಮೊರೆಯಿಟ್ಟೆನು; ಆತನು ತನ್ನ ಮಂದಿರದೊಳಗಿಂದ ನನ್ನ ಸ್ವರವನ್ನು ಕೇಳಿದನು; ನನ್ನ ಮೊರೆಯು ಆತನ ಸನ್ನಿಧಿಗೂ ಆತನ ಕಿವಿಗಳಲ್ಲಿಯೂ ಮುಟ್ಟಿತು. ಆಗ ಆತನು ಕೋಪಗೊಂಡಿದ್ದನು. ಭೂಮಿಯು ಕದಲಿ ಕಂಪಿಸಿತು; ಪರ್ವತಗಳ ಅಸ್ತಿವಾರಗಳು ಸಹ ನಡುಗಿ ಕದಲಿದವು; ಆತನ ಮೂಗಿನಿಂದ ಹೊಗೆ ಎದ್ದು ಆತನ ಬಾಯಿಯೊಳಗಿಂದ ಬೆಂಕಿ ದಹಿಸಿತು; ಕೆಂಡಗಳು ಅದರಿಂದ ಉರಿದವು. ಆತನು ಆಕಾಶ ಗಳನ್ನು ಬೊಗ್ಗಿಸಿ ಇಳಿದನು; ಆತನ ಪಾದಗಳ ಕೆಳಗೆ ಕಾರ್ಗತ್ತಲು ಇತ್ತು. ಆತನು ಕೆರೂಬಿನ ಮೇಲೆ ಕೂತು ಹಾರಿದನು; ಹೌದು, ಗಾಳಿಯ ರೆಕ್ಕೆಗಳ ಮೇಲೆ ಹಾರಿದನು. ಕತ್ತಲನ್ನು ತನಗೆ ಮರೆಯ ಸ್ಥಳವಾಗಿ ಯೂ ಕತ್ತಲಿನ ನೀರುಗಳನ್ನು ಆಕಾಶದ ಮಂದವಾದ ಮೋಡಗಳನ್ನು ತನ್ನ ಸುತ್ತಲು ಡೇರೆಯಾಗಿಯೂ ಮಾಡಿ ದನು. ಆತನ ಮುಂದಿದ್ದ ಪ್ರಕಾಶದಿಂದ ಆತನ ಮಂದವಾದ ಮೋಡಗಳೂ ಕಲ್ಮಳೆಗಳೂ ಉರಿಗೆಂಡ ಗಳೂ ಹಾದು ಹೋದವು. ಕರ್ತನು ಆಕಾಶಗಳಲ್ಲಿ ಗುಡುಗಿದನು; ಮಹೋನ್ನತನು ಕಲ್ಮಳೆಯಿಂದಲೂ ಉರಿಗೆಂಡಗಳಿಂದಲೂ ತನ್ನ ಶಬ್ದವನ್ನು ಕೊಟ್ಟನು ಹೌದು, ತನ್ನ ಬಾಣಗಳನ್ನು ಕಳುಹಿಸಿ ಅವರನ್ನು ಚದುರಿಸಿದನು; ಮಿಂಚುಗಳನ್ನೆಸೆದು ಅವರನ್ನು ಗಲಿಬಿಲಿ ಮಾಡಿದನು. ಓ ಕರ್ತನೇ, ನಿನ್ನ ಗದರಿಕೆಯಿಂದಲೂ ನಿನ್ನ ಮೂಗಿನ ಶ್ವಾಸದ ಗಾಳಿಯಿಂದಲೂ ನೀರಿನ ಕಾಲುವೆಗಳ ನೆಲೆಯು ಕಾಣಬಂದು ಭೂಮಿಯ ಅಸ್ತಿವಾರಗಳು ಬೈಲಾದವು. ಆತನು ಮೇಲಿನಿಂದ ಕಳುಹಿಸಿ ನನ್ನನ್ನು ಹಿಡಿದು ಬಹಳ ನೀರುಗಳೊಳಗಿಂದ ಎಳೆದನು. ಆತನು ನನ್ನನ್ನು ಬಲವುಳ್ಳ ಶತ್ರುವಿ ನಿಂದಲೂ ಹಗೆಮಾಡಿದವನಿಂದಲೂ ಬಿಡಿಸಿದನು; ಅವರು ನನಗಿಂತ ಬಲಿಷ್ಠರಾಗಿದ್ದರು. ನನ್ನ ಆಪ ತ್ತಿನ ದಿವಸದಲ್ಲಿ ನನ್ನನ್ನು ಅವರು ಸುತ್ತಿಕೊಂಡರು; ಆದರೆ ಕರ್ತನು ನನ್ನ ಆಧಾರನಾದನು. ಆತನು ನನ್ನನ್ನು ವಿಶಾಲಸ್ಥಳಕ್ಕೆ ತಂದು ನನ್ನನ್ನು ತಪ್ಪಿಸಿಬಿಟ್ಟನು. ಯಾಕಂದರೆ ಆತನು ನನ್ನಲ್ಲಿ ಸಂತೋಷಪಟ್ಟನು. ಕರ್ತನು ನನ್ನ ನೀತಿಯ ಪ್ರಕಾರ ನನಗೆ ಪ್ರತಿಫಲ ಕೊಟ್ಟನು. ನನ್ನ ಕೈಗಳ ಶುದ್ಧತ್ವದ ಪ್ರಕಾರ ನನಗೆ ಬದಲು ಕೊಟ್ಟನು. ನಾನು ಕರ್ತನ ಮಾರ್ಗಗಳನ್ನು ಕೈಕೊಂಡು ನನ್ನ ದೇವರನ್ನು ಬಿಟ್ಟುಹೋಗುವ ದುಷ್ಟತ್ವವನ್ನು ನಾನು ಮಾಡಲಿಲ್ಲ. ಆತನ ತೀರ್ಪುಗಳೆಲ್ಲಾ ನನ್ನ ಮುಂದೆ ಇದ್ದವು; ಆತನ ನೇಮಗಳನ್ನು ನನ್ನಿಂದ ತೊಲಗಿಸ ಲಿಲ್ಲ. ಆತನ ಮುಂದೆ ಸಂಪೂರ್ಣನಾಗಿದ್ದು ನನ್ನ ಅಕ್ರಮದಿಂದ ನನ್ನನ್ನು ಕಾಪಾಡಿಕೊಂಡೆನು. ಆದದ ರಿಂದ ಕರ್ತನು ನನ್ನ ನೀತಿಯ ಪ್ರಕಾರವೂ ಆತನ ಕಣ್ಣೆದುರಿನಲ್ಲಿ ನನ್ನ ಕೈಗಳ ಶುದ್ಧತ್ವದ ಪ್ರಕಾರವೂ ನನಗೆ ಬದಲು ಕೊಟ್ಟನು. ನೀನು ಕರುಣೆಯು ಳ್ಳವನಿಗೆ ಕರುಣೆಯನ್ನು ತೋರಿಸುವಿ; ಸಂಪೂರ್ಣ ನಾದ ಮನುಷ್ಯನಿಗೆ ಸಂಪೂರ್ಣನಾಗಿರುವಿ. ಶುದ್ಧ ನಿಗೆ ಶುದ್ಧನಾಗಿರುವಿ; ಮೂರ್ಖನಿಗೆ ಮೂರ್ಖನಾಗಿ ರುವಿ. ಕುಂದಿಸಿದ ಜನರನ್ನು ನೀನು ರಕ್ಷಿಸುವಿ; ಆದರೆ ನೀನು ಗರ್ವಿಷ್ಟರ ಕಣ್ಣುಗಳನ್ನು ತಗ್ಗಿಸುವಿ. ನೀನು ನನ್ನ ದೀಪವನ್ನು ಬೆಳಗಿಸುವಿ; ನನ್ನ ದೇವ ರಾದ ಕರ್ತನು ನನ್ನ ಕತ್ತಲೆಯನ್ನು ಪ್ರಕಾಶಿಸುವಂತೆ ಮಾಡುವನು. ನಿನ್ನಿಂದ ನಾನು ದಂಡಿನ ಮೇಲೆ ಬಿದ್ದೆನು; ನನ್ನ ದೇವರಿಂದ ಗೋಡೆ ನೆಗೆದೆನು. ದೇವರ ಮಾರ್ಗವಾದರೋ ಸಂಪೂರ್ಣವಾದದ್ದು; ಕರ್ತನ ವಾಕ್ಯವು ಪುಟಕ್ಕೆ ಹಾಕಿದ್ದಾಗಿದೆ; ಆತನು ತನ್ನಲ್ಲಿ ಭರವಸವಿಟ್ಟವರೆಲ್ಲರಿಗೆ ಗುರಾಣಿಯಾಗಿದ್ದಾನೆ. ಕರ್ತನಲ್ಲದೆ ದೇವರು ಯಾರು? ಇಲ್ಲವೆ ನಮ್ಮ ದೇವರ ಹೊರತು ಬಂಡೆಯು ಯಾರು? ಪರಾ ಕ್ರಮದಿಂದ ನನ್ನ ನಡುವನ್ನು ಕಟ್ಟಿ ನನ್ನ ಮಾರ್ಗವನ್ನು ಸಂಪೂರ್ಣ ಮಾಡುವ ದೇವರು ಆತನೇ. ನನ್ನ ಕಾಲುಗಳನ್ನು ಜಿಂಕೆಗಳ ಕಾಲುಗಳಂತೆ ಮಾಡಿ ನನ್ನ ಉನ್ನತ ಸ್ಥಳಗಳ ಮೆಲೆ ನನ್ನನ್ನು ನಿಲ್ಲಿಸುತ್ತಾನೆ. ಆತನು ನನ್ನ ಕೈಗಳಿಗೆ ಯುದ್ಧವನ್ನು ಕಲಿಸುತ್ತಾನೆ; ಹೀಗೆ ನನ್ನ ತೋಳುಗಳು ಉಕ್ಕಿನ ಬಿಲ್ಲನ್ನು ಮುರಿಯುತ್ತವೆ. ನಿನ್ನ ರಕ್ಷಣೆಯ ಗುರಾಣಿಯನ್ನು ಸಹ ನನಗೆ ನೀನು ಕೊಟ್ಟಿದ್ದೀ; ನಿನ್ನ ಬಲಗೈ ನನ್ನನ್ನು ಹಿಡಿದಿದೆ. ನಿನ್ನ ಸಾತ್ವಿಕತ್ವವು ನನ್ನನ್ನು ಹೆಚ್ಚಿಸಿಯದೆ. ನನ್ನ ಹೆಜ್ಜೆಗ ಳನ್ನು ವಿಶಾಲಮಾಡಿ ನನ್ನ ಪಾದಗಳನ್ನು ಎಡವದಂತೆ ಮಾಡಿದ್ದೀ. ನನ್ನ ಶತ್ರುಗಳನ್ನು ಹಿಂದಟ್ಟಿ ಹಿಡಿದಿ ದ್ದೇನೆ; ಅವರನ್ನು ಸಂಹರಿಸಿಬಿಡುವ ವರೆಗೆ ನಾನು ಹಿಂತಿರುಗಲಿಲ್ಲ. ಅವರು ಏಳಲಾರದ ಹಾಗೆ ಅವ ರಿಗೆ ಗಾಯ ಮಾಡಿದೆನು; ಅವರು ನನ್ನ ಪಾದಗಳ ಕೆಳಗೆ ಬಿದ್ದಿದ್ದಾರೆ. ನೀನು ಯುದ್ಧಕಾಗ್ಕಿ ಪರಾ ಕ್ರಮದಿಂದ ನನ್ನ ನಡುವನ್ನು ಕಟ್ಟಿ ನನ್ನ ಎದುರಾಳಿಗ ಳನ್ನು ಅಧೀನ ಮಾಡಿದಿ. ನನ್ನ ಹಗೆಯವರನ್ನು ನಾಶಮಾಡುವಂತೆ ಶತ್ರುಗಳ ಕುತ್ತಿಗೆಗಳನ್ನು ನೀನು ನನಗೆ ಕೊಟ್ಟಿದ್ದೀ. ಅವರು ಮೊರೆಯಿಟ್ಟರು, ಆದರೆ ರಕ್ಷಿಸುವವರು ಯಾರೂ ಇದ್ದಿಲ್ಲ. ಕರ್ತನಿಗೂ ಮೊರೆ ಇಟ್ಟರು, ಆದರೆ ಅವರಿಗೆ ಆತನು ಉತ್ತರ ಕೊಡ ಲಿಲ್ಲ. ಗಾಳಿಯ ಮುಂದಿನ ಧೂಳಿನಹಾಗೆ ಅವ ರನ್ನು ಹೊಡೆದು ಪುಡಿಪುಡಿ ಮಾಡಿದನು; ಬೀದಿಯ ಕೆಸರಿನಹಾಗೆ ಅವರನ್ನು ಹೊರಗೆ ಚೆಲ್ಲಿಬಿಟ್ಟನು. ನೀನು ಜನರ ವಿವಾದಗಳಿಂದ ನನ್ನನ್ನು ತಪ್ಪಿಸಿದ್ದೀ; ಅನ್ಯ ಜನಾಂಗಗಳ ತಲೆಯಾಗಿ ನನ್ನನ್ನು ಮಾಡಿದ್ದೀ; ನಾನ ರಿಯದ ಜನರು ನನ್ನನ್ನು ಸೇವಿಸುವರು. ನನ್ನ ಮಾತನ್ನು ಕೇಳಿದೊಡನೆ ಅವರು ನನಗೆ ವಿಧೇಯ ರಾಗುವರು. ಪರಕೀಯರು ನನಗೆ ಅಧೀನರಾ ಗುವರು ಮತ್ತು ಅವರು ಬಾಡಿಹೋಗುವರು; ತಮ್ಮ ದುರ್ಗಗಳೊಳಗಿಂದ ನಡುಗುತ್ತಾ ಬರುವರು. ಕರ್ತನು ಜೀವಿತನಾಗಿದ್ದಾನೆ; ನನ್ನ ಬಂಡೆ ಯಾದಾತನು ಸ್ತುತಿಹೊಂದಲಿ; ನನ್ನ ರಕ್ಷಣೆಯ ದೇವರು ಘನಹೊಂದಲಿ. ನನಗೋಸ್ಕರ ಮುಯ್ಯಿಗೆ ಮುಯ್ಯಿತೀರಿಸುವಾತನೂ ಜನರನ್ನು ನನ್ನ ಕೆಳಗೆ ಅಧೀನಮಾಡುವಾತನೂ ದೇವರು ತಾನೇ. ನನ್ನ ಶತ್ರುಗಳಿಂದ ನನ್ನನ್ನು ತಪ್ಪಿಸುವನು; ಹೌದು, ನೀನು ನನ್ನ ಎದುರಾಳಿಗಳಿಂದ ತಪ್ಪಿಸಿ ನನ್ನನ್ನು ಮೇಲೆ ಎತ್ತುತ್ತೀ; ಬಲಾತ್ಕಾರ ಮಾಡುವವನಿಂದ ನನ್ನನ್ನು ಬಿಡಿಸಿದ್ದೀ. ಆದ್ದರಿಂದ ಓ ಕರ್ತನೇ, ಅನ್ಯಜನಾಂಗ ಗಳಲ್ಲಿ ನಿನಗೆ ಉಪಕಾರಸ್ತುತಿ ಮಾಡುತ್ತೇನೆ. ನಿನ್ನನ್ನು ಕೊಂಡಾಡಿ ನಿನ್ನ ಹೆಸರನ್ನು ಕೀರ್ತಿಸುವೆನು.ಆತನು ತನ್ನ ಅರಸನಿಗೆ ದೊಡ್ಡ ಬಿಡುಗಡೆಯನ್ನು ಕೊಟ್ಟು ತನ್ನ ಅಭಿಷಕ್ತನಾದ ದಾವೀದನಿಗೂ ಅವನ ಸಂತತಿಗೂ ಕೃಪೆಯನ್ನು ಎಂದೆಂದಿಗೂ ತೋರಿಸುತ್ತಾನೆ. ಆತನು ತನ್ನ ಅರಸನಿಗೆ ದೊಡ್ಡ ಬಿಡುಗಡೆಯನ್ನು ಕೊಟ್ಟು ತನ್ನ ಅಭಿಷಕ್ತನಾದ ದಾವೀದನಿಗೂ ಅವನ ಸಂತತಿಗೂ ಕೃಪೆಯನ್ನು ಎಂದೆಂದಿಗೂ ತೋರಿಸುತ್ತಾನೆ.
- Numbers 23:24 ಅರಣ್ಯಕಾಂಡ 23:24ಇಗೋ, ಜನವು ದೊಡ್ಡ ಸಿಂಹದ ಹಾಗೆ ಏಳುವದು; ಸಿಂಹದ ಮರಿಯ ಹಾಗೆ ಎದ್ದೇಳುವದು; ಅದು ಬೇಟೆಯನ್ನು ತಿಂದು ಹತವಾದವರ ರಕ್ತವನ್ನು ಕುಡಿಯುವ ವರೆಗೆ ಮಲಗದು ಅಂದನು.
- John 1:17 ಯೋಹಾನನು 1:17ನ್ಯಾಯಪ್ರಮಾಣವು ಮೋಶೆಯ ಮುಖಾಂತರ ವಾಗಿ ಕೊಡಲ್ಪಟ್ಟಿತು; ಆದರೆ ಕೃಪೆಯೂ ಸತ್ಯವೂ ಯೇಸು ಕ್ರಿಸ್ತನ ಮುಖಾಂತರವಾಗಿ ಬಂದವು.
- Micah 3:2–3 ಮೀಕ 3:2–3ಒಳ್ಳೇದನ್ನು ಹಗೆಮಾಡಿ ಕೆಟ್ಟದ್ದನ್ನು ಪ್ರೀತಿಮಾಡುವವರೇ, ಅವರ ಮೇಲಿನಿಂದ ಅವರ ಚರ್ಮವನ್ನೂ ಅವರ ಎಲುಬುಗಳ ಮೇಲಿನಿಂದ ಅವರ ಮಾಂಸವನ್ನೂ ಕಿತ್ತುಕೊಳ್ಳು ವವರೇ, ನನ್ನ ಜನರ ಮಾಂಸವನ್ನು ತಿಂದು ಅವರ ಚರ್ಮವನ್ನು ಸುಲಿದು ಅವರ ಎಲುಬುಗಳನ್ನು ಮುರಿದು ಮಡಿಕೆಯಂತೆ ಅವರ ಮಾಂಸವನ್ನು ತುಂಡು ಮಾಡಿ ಕೊಪ್ಪರಿಗೆಯಲ್ಲಿ ಹಾಕುತ್ತೀರಿ.
- Job 31:31 ಯೋಬನು 31:31ಅವನ ಮಾಂಸದಿಂದ ನಮಗೆ ತೃಪ್ತಿ ಕೊಡುವವನಾರು ಎಂದು, ನನ್ನ ಗುಡಾರದ ಮನುಷ್ಯರು ಹೇಳಲಿಲ್ಲವೋ?