Psalms · chapter 58 · verse 11
Psalm 58:11 in Kannada
ನಿಶ್ಚಯವಾಗಿ ನೀತಿವಂತನಿಗೆ ಪ್ರತಿಫಲವಿದೆ; ನಿಶ್ಚಯವಾಗಿ ಭೂಮಿಯಲ್ಲಿ ನ್ಯಾಯ ತೀರಿಸುವ ದೇವರು ಆತನೇ ಎಂದು ಮನುಷ್ಯನು ಹೇಳುವನು.
Nishchayavaagi neetivantanige pratiphalavide; nishchayavaagi bhoomiyalli nyaaya teerisuva devaru aatane endu manushyanu heluvanu.
Psalm 58:11 in English
- King James Version (KJV)
- So that a man shall say, Verily [there is] a reward for the righteous: verily he is a God that judgeth in the earth.
- World English Bible (WEB)
- so that men shall say, “Most certainly there is a reward for the righteous. Most certainly there is a God who judges the earth.”
- American Standard Version (ASV)
- So that men shall say, Verily there is a reward for the righteous: Verily there is a God that judgeth in the earth.
- Bible in Basic English (BBE)
- So that men will say, Truly there is a reward for righteousness; truly there is a God who is judge on the earth.
- Darby Translation (DBY)
- And men shall say, Verily there is fruit for the righteous; verily there is a God that judgeth in the earth.
- Webster's Bible (WBS)
- So that a man shall say, Verily [there is] a reward for the righteous: verily he is a God that judgeth in the earth.
- Young's Literal Translation (YLT)
- And man saith: 'Surely fruit [is] for the righteous: Surely there is a God judging in the earth!'
Read in context
- 9ನಿಮ್ಮ ಗಡಿಗೆಗಳಿಗೆ ಮುಳ್ಳಿನಕಾವು ತಾಗುವದಕ್ಕಿಂತ ಮುಂಚೆ ಅದು ಹಸಿ ಇರುವಾಗಲೇ ದೇವರು ಕೋಪದಿಂದ ಬಿರುಗಾಳಿಯಿಂ ದಲೋ ಎಂಬಂತೆ ಅವರನ್ನು ಹಾರಿಸಿಬಿಡುವನು.
- 10ಮುಯ್ಯಿಗೆಮುಯ್ಯಿ ಆಗುವದನ್ನು ನೀತಿವಂತನು ದೃಷ್ಟಿಸುವಾಗ ಅವನು ಸಂತೋಷ ಪಡುವನು; ಅವನು ತನ್ನ ಪಾದಗಳನ್ನು ದುಷ್ಟರ ರಕ್ತ ದಲ್ಲಿ ತೊಳೆಯುವನು.ನಿಶ್ಚಯವಾಗಿ ನೀತಿವಂತನಿಗೆ ಪ್ರತಿಫಲವಿದೆ; ನಿಶ್ಚಯವಾಗಿ ಭೂಮಿಯಲ್ಲಿ ನ್ಯಾಯ ತೀರಿಸುವ ದೇವರು ಆತನೇ ಎಂದು ಮನುಷ್ಯನು ಹೇಳುವನು.
- 11ನಿಶ್ಚಯವಾಗಿ ನೀತಿವಂತನಿಗೆ ಪ್ರತಿಫಲವಿದೆ; ನಿಶ್ಚಯವಾಗಿ ಭೂಮಿಯಲ್ಲಿ ನ್ಯಾಯ ತೀರಿಸುವ ದೇವರು ಆತನೇ ಎಂದು ಮನುಷ್ಯನು ಹೇಳುವನು.
Cross references
- Isaiah 3:10 ಯೆಶಾಯ 3:10ನೀತಿವಂತನಿಗೆ ನೀವು--ಅವನಿಗೆ ಒಳ್ಳೇದಿರಲಿ ಎಂದು ಹೇಳಿರಿ; ಅವರು ತಮ್ಮ ಕ್ರಿಯೆಗಳ ಫಲವನ್ನು ತಿನ್ನುವರು.
- Psalm 67:4 ಕೀರ್ತನೆಗಳು 67:4ಜನಾಂಗಗಳು ಸಂತೋಷಪಟ್ಟು ಉತ್ಸಾಹಕ್ಕಾಗಿ ಹಾಡಲಿ; ನೀನು ಜನರನ್ನು ನೀತಿಯಿಂದ ನ್ಯಾಯತೀರಿಸಿ ಜನಾಂಗಗಳನ್ನು ಭೂಮಿಯಲ್ಲಿ ಪರಿಪಾಲಿಸುತ್ತೀ. ಸೆಲಾ.
- Psalm 33:18 ಕೀರ್ತನೆಗಳು 33:18ಇಗೋ, ಕರ್ತನ ಕಣ್ಣು ಆತನಿಗೆ ಭಯಪಡುವ ವರ ಮೇಲೆಯೂ ಆತನ ಕರುಣೆಯನ್ನು ಎದುರು ನೋಡುವವರ ಮೇಲೆಯೂ ಅದೆ.
- Psalm 64:9 ಕೀರ್ತನೆಗಳು 64:9ಎಲ್ಲಾ ಮನುಷ್ಯರು ಭಯಪಟ್ಟು ದೇವರ ಕಾರ್ಯವನ್ನು ತಿಳಿಸುವರು; ಆತನ ಕೆಲಸ ವನ್ನು ಬುದ್ಧಿಯಿಂದ ಗ್ರಹಿಸುವರು;ನೀತಿವಂತನು ಕರ್ತನಲ್ಲಿ ಸಂತೋಷಪಟ್ಟು ಆತನಲ್ಲಿ ಭರವಸವಿ ಡುವನು. ಯಥಾರ್ಥ ಹೃದಯವುಳ್ಳವರೆಲ್ಲರು ಹೆಚ್ಚಳ ಪಡುವರು.
- Malachi 3:14 ಮಲಾಕಿಯ 3:14ನೀವು--ದೇವರನ್ನು ಸೇವಿಸುವದು ವ್ಯರ್ಥವೆಂದೂ ನಾವು ಆತನ ನಿಯಮಗಳನ್ನು ಕೈಕೊಂಡು ಸೈನ್ಯಗಳ ಕರ್ತನ ಮುಂದೆ ದುಃಖವಾಗಿ ನಡೆದದ್ದರಿಂದ ಏನು ಪ್ರಯೋ ಜನವೆಂದೂ ಹೇಳಿದಿರಿ.
- Malachi 2:17 ಮಲಾಕಿಯ 2:17ನಿಮ್ಮ ಮಾತುಗಳಿಂದ ಕರ್ತನಿಗೆ ಬೇಸರಮಾಡಿ ದ್ದೀರಿ; ಆದಾಗ್ಯೂ--ನಾವು ಯಾವದರಲ್ಲಿ ಆತನಿಗೆ ಬೇಸರಮಾಡಿದ್ದೇವೆ ಎಂದು ಅನ್ನುತ್ತೀರಿ; ಕೆಟ್ಟದ್ದನ್ನು ಮಾಡುವವರೆಲ್ಲರೂ ಕರ್ತನ ದೃಷ್ಟಿಯಲ್ಲಿ ಒಳ್ಳೆಯವರು, ಅವರಲ್ಲಿ ಆತನು ಮೆಚ್ಚುತ್ತಾನೆಂದೂ ನ್ಯಾಯದ ದೇವರು ಎಲ್ಲಿ ಎಂದೂ ನೀವು ಹೇಳುವದರಿಂದಲೇ.
- Romans 2:5 ರೋಮಾಪುರದವರಿಗೆ 2:5ಹೀಗೆ ನಿನ್ನ ಕಾಠಿಣ್ಯತೆ ಮತ್ತು ಪಶ್ಚಾತ್ತಾಪವಿಲ್ಲದ ಹೃದಯದಿಂದ ಉಗ್ರತೆಯ ದಿನಕ್ಕಾಗಿಯೂ ದೇವರ ನೀತಿಯುಳ್ಳ ನ್ಯಾಯತೀರ್ವಿಕೆಯ ಪ್ರತ್ಯಕ್ಷತೆಗಾಗಿಯೂ ದೇವರ ಕೋಪವನ್ನು ನಿನಗೋಸ್ಕರ ಕೂಡಿಸಿಟ್ಟುಕೊಳ್ಳುತ್ತಾ ಇದ್ಧೀ.
- Romans 6:21–22 ರೋಮಾಪುರದವರಿಗೆ 6:21–22ನೀವು ಆಗ ಮಾಡಿ ದವುಗಳಿಂದ ನಿಮಗುಂಟಾದ ಫಲವೇನು? ಈಗ ಅವುಗಳ ವಿಷಯದಲ್ಲಿ ನಿಮಗೆ ನಾಚಿಕೆಯುಂಟಷ್ಟೆ; ಅವುಗಳ ಅಂತ್ಯವು ಮರಣವೇ. ಈಗಲಾದರೋ ನೀವು ಪಾಪದಿಂದ ಬಿಡುಗಡೆಯನ್ನು ಹೊಂದಿ ದೇವರಿಗೆ ದಾಸರಾದದರಿಂದ ಪರಿಶುದ್ಧತೆಯೇ ನಿಮಗೆ ಫಲ; ಅದರ ಅಂತ್ಯವು ನಿತ್ಯಜೀವವೇ.ಯಾಕಂದರೆ ಪಾಪದ ಸಂಬಳ ಮರಣ. ಆದರೆ ದೇವರ ದಾನವು ನಮ್ಮ ಕರ್ತನಾದ ಯೇಸು ಕ್ರಿಸ್ತನ ಮುಖಾಂತರ ನಿತ್ಯಜೀವವು.
- Psalm 98:9 ಕೀರ್ತನೆಗಳು 98:9ಆತನು ಭೂಮಿಗೆ ನ್ಯಾಯ ತೀರಿಸಲು ಬರುತ್ತಾನೆ. ಲೋಕಕ್ಕೆ ನೀತಿಯಿಂದಲೂ ಜನಗಳಿಗೆ ನ್ಯಾಯದಲ್ಲಿಯೂ ತೀರ್ಪು ಕೊಡುವನು.
- Psalm 73:13–15 ಕೀರ್ತನೆಗಳು 73:13–15ನಿಶ್ಚಯವಾಗಿ ನನ್ನ ಹೃದಯವನ್ನು ವ್ಯರ್ಥವಾಗಿ ನಿರ್ಮಲ ಮಾಡಿಕೊಂಡು ನನ್ನ ಕೈಗಳನ್ನು ನಿರಪರಾಧ ದಲ್ಲಿ ತೊಳೆದಿದ್ದೇನೆ. ನಾನು ದಿನವೆಲ್ಲಾ ವ್ಯಾಧಿ ಪೀಡಿತನಾಗಿದ್ದೇನೆ; ಪ್ರತಿ ಉದಯದಲ್ಲಿ ನನಗೆ ಶಿಕ್ಷೆ ಯಾಯಿತು. ಹೀಗೆ ನಾನು ಮಾತನಾಡುವೆನೆಂದು ಹೇಳಿದರೆ, ಇಗೋ, ನಿನ್ನ ಮಕ್ಕಳ ವಂಶಕ್ಕೆ ವಿರೋಧ ವಾಗಿ ಆತಂಕ ಮಾಡುವೆನು.
- 2 Peter 3:4–10 2 ಪೇತ್ರನು 3:4–10ಆತನ ಪ್ರತ್ಯಕ್ಷತೆಯ ವಿಷಯವಾದ ವಾಗ್ದಾನವು ಏನಾಯಿತು? ಪಿತೃಗಳು ನಿದ್ರೆ ಹೊಂದಿದಂದಿನಿಂದ ಸಮಸ್ತವೂ ಸೃಷ್ಟಿ ಮೊದಲುಗೊಂಡು ಹಾಗೆಯೇ ಇರುತ್ತದಲ್ಲಾ ಎಂದು ಹೇಳುವರೆಂಬದಾಗಿ ನೀವು ಮೊದಲು ತಿಳುಕೊಳ್ಳ ಬೇಕು. ಅವರು ಇದನ್ನು ಬೇಕೆಂದು ತಿಳಿಯಲಾರರು; ಅದೇನಂದರೆ ಪೂರ್ವದಲ್ಲಿದ್ದ ಆಕಾಶಗಳೂ ನೀರಿನ ಹೊರಗೆ ಮತ್ತು ನೀರಿನ ಒಳಗೆ ನಿಂತಿರುವ ಭೂಮಿಯೂ ದೇವರ ವಾಕ್ಯದಿಂದ ಉಂಟಾಗಿ ಆ ನೀರುಗಳಿಂದಲೇ ಆ ಕಾಲದಲ್ಲಿದ್ದ ಲೋಕವು ಜಲಪ್ರಳಯದಲ್ಲಿ ನಾಶ ವಾಯಿತು. ಆದರೆ ಈಗಿನ ಆಕಾಶಗಳೂ ಭೂಮಿಯೂ ಅದೇ ವಾಕ್ಯದಿಂದ ಭದ್ರವಾಗಿ ಇಡಲ್ಪಟ್ಟಿದ್ದು ನ್ಯಾಯ ತೀರ್ವಿಕೆಯ ದಿನದವರೆಗೂ ಭಕ್ತಿಹೀನರ ನಾಶನಕ್ಕಾಗಿ ಬೆಂಕಿಯು ಕಾದಿಡಲ್ಪಟ್ಟಿದೆ ಎಂಬದು. ಆದರೆ ಪ್ರಿಯರೇ, ಕರ್ತನ ಎಣಿಕೆಯಲ್ಲಿ ಒಂದು ದಿನವು ಸಾವಿರ ವರುಷಗಳಂತೆಯೂ ಸಾವಿರ ವರುಷಗಳು ಒಂದು ದಿನದಂತೆಯೂ ಅವೆ ಎಂಬದನ್ನು ಮಾತ್ರ ತಿಳಿಯದವರಾಗಿರಬೇಡಿರಿ. ಕರ್ತನು ತನ್ನ ವಾಗ್ದಾನದ ವಿಷಯವಾಗಿ ತಡಮಾಡುತ್ತಾನೆಂಬದಾಗಿ ಕೆಲವರು ಎಣಿಸುವ ಪ್ರಕಾರ ಆತನು ತಡಮಾಡುವಾತನಲ್ಲ. ಆದರೆ ಯಾವನಾದರೂ ನಾಶವಾಗುವದರಲ್ಲಿ ಆತನು ಇಷ್ಟಪಡದೆ ಎಲ್ಲರೂ ಪಶ್ಚಾತ್ತಾಪಪಡಬೇಕೆಂದು ಅಪೇಕ್ಷಿಸುವವನಾಗಿದ್ದು ನಮ್ಮ ಕಡೆಗೆ ದೀರ್ಘಶಾಂತಿ ಯುಳ್ಳವ ಆದರೂ ಕರ್ತನ ದಿನವು ರಾತ್ರಿಯಲ್ಲಿ ಕಳ್ಳನು ಬರುವಂತೆ ಬರುತ್ತದೆ. ಆ ದಿನದಲ್ಲಿ ಆಕಾಶಗಳು ಮಹಾಘೋಷದಿಂದ ಇಲ್ಲದೆ ಹೋಗು ವವು. ಅತಿ ಉಷ್ಣದಿಂದ ಪಂಚಭೂತಗಳು ಉರಿದು ಲಯವಾಗಿ ಹೋಗುವವು; ಭೂಮಿಯೂ ಅದರಲ್ಲಿ ರುವ ಕೆಲಸಗಳೂ ಸುಟ್ಟುಹೋಗುವವು.
- Psalm 9:8 ಕೀರ್ತನೆಗಳು 9:8ಆತನೇ ನೀತಿಯಿಂದ ಲೋಕಕ್ಕೆ ನ್ಯಾಯತೀರಿಸುವನು; ಆತನು ಪ್ರಜೆಗಳಿಗೆ ಯಥಾರ್ಥವಾಗಿ ನ್ಯಾಯತೀರ್ಪು ಕೊಡುವನು.