Psalms · chapter 58 · verse 2
Psalm 58:2 in Kannada
ಹೌದು, ನಿಮ್ಮ ಹೃದಯದಲ್ಲಿ ದುಷ್ಟತ್ವ ವನ್ನು ಮಾಡುತ್ತೀರಲ್ಲಾ, ಲೋಕದಲ್ಲಿ ನಿಮ್ಮ ಕೈಗಳ ಬಲಾತ್ಕಾರವನ್ನು ತೂಗುತ್ತೀರಲ್ಲಾ.
Haudu, nimma hrudayadalli dushtatva vannu maadutteerallaa, lokadalli nimma kaigala balaatkaaravannu toogutteerallaa.
Psalm 58:2 in English
- King James Version (KJV)
- Yea, in heart ye work wickedness; ye weigh the violence of your hands in the earth.
- World English Bible (WEB)
- No, in your heart you plot injustice. You measure out the violence of your hands on the earth.
- American Standard Version (ASV)
- Nay, in heart ye work wickedness; Ye weigh out the violence of your hands in the earth.
- Bible in Basic English (BBE)
- The purposes of your hearts are evil; your hands are full of cruel doings on the earth.
- Darby Translation (DBY)
- Yea, in heart ye work wickedness; ye weigh out the violence of your hands in the earth.
- Webster's Bible (WBS)
- Yes, in heart ye work wickedness; ye weigh the violence of your hands in the earth.
- Young's Literal Translation (YLT)
- Even in heart ye work iniquities, In the land the violence of your hands ye ponder.
Read in context
- 1ಓ ಸಭೆಯೇ, ನೀವು ನಿಜವಾಗಿ ನೀತಿಯನ್ನು ನುಡಿಯುವಿರೋ? ಓ ಮನುಷ್ಯರ ಮಕ್ಕಳೇ, ನೀವು ಯಥಾರ್ಥವಾಗಿ ನ್ಯಾಯತೀರಿಸು ವಿರೋ?
- 2ಹೌದು, ನಿಮ್ಮ ಹೃದಯದಲ್ಲಿ ದುಷ್ಟತ್ವ ವನ್ನು ಮಾಡುತ್ತೀರಲ್ಲಾ, ಲೋಕದಲ್ಲಿ ನಿಮ್ಮ ಕೈಗಳ ಬಲಾತ್ಕಾರವನ್ನು ತೂಗುತ್ತೀರಲ್ಲಾ.
- 3ದುಷ್ಟರು ಗರ್ಭದಿಂದಲೇ ದೂರವಾಗುತ್ತಾರೆ; ಹುಟ್ಟಿದಾಗಲೇ ಸುಳ್ಳಾಡುವವರಾಗಿ ತಪ್ಪಿಹೋಗುತ್ತಾರೆ.
- 4ಹಾವಿನ ವಿಷದ ಹಾಗೆ ಅವರ ವಿಷವುಂಟು; ಅವರು ಕಿವಿಯನ್ನು ಮುಚ್ಚಿಕೊಳ್ಳುವ ಕಿವುಡ ಸರ್ಪದ ಹಾಗಿ ದ್ದಾರೆ.
Cross references
- Isaiah 10:1 ಯೆಶಾಯ 10:1ಅನೀತಿಯ ನೇಮಕಗಳನ್ನು ನೇಮಿಸಿ, ಕ್ರೂರವಾದ ಬರಹ ಬರೆಯುವವರಿಗೆ ಅಯ್ಯೋ!
- Psalm 94:20 ಕೀರ್ತನೆಗಳು 94:20ವಿಧಿಯಿಂದ ಕೇಡನ್ನು ಕಲ್ಪಿಸುವ ಅಪರಾಧದ ಸಿಂಹಾಸನವು ನಿನ್ನ ಸಂಗಡ ಅನ್ಯೋನ್ಯವಾಗಿರು ವದೋ?
- Ezekiel 22:27 ಯೆಹೆಜ್ಕೇಲನು 22:27ಅಲ್ಲಿನ ಪ್ರಧಾನರು ಸುಲಿಗೆಗಾಗಿ ರಕ್ತ ಸುರಿಸಿ ಪ್ರಾಣ ಗಳನ್ನು ನುಂಗುವ ಹಾಗೆ ಬೇಟೆಯ ತೋಳಗಳಂತಿ ದ್ದಾರೆ.
- Micah 3:1–3 ಮೀಕ 3:1–3ಆಗ ನಾನು ಹೇಳಿದ್ದೇನಂದರೆ--ಯಾಕೋಬಿನ ಮುಖ್ಯಸ್ಥರೇ, ಇಸ್ರಾಯೇ ಲಿನ ಮನೆತನದ ಪ್ರಧಾನರೇ, ಈಗ ಕೇಳಿರಿ; ನ್ಯಾಯ ವನ್ನು ತಿಳಿಯುವದು ನಿಮ್ಮದಲ್ಲವೋ? ಒಳ್ಳೇದನ್ನು ಹಗೆಮಾಡಿ ಕೆಟ್ಟದ್ದನ್ನು ಪ್ರೀತಿಮಾಡುವವರೇ, ಅವರ ಮೇಲಿನಿಂದ ಅವರ ಚರ್ಮವನ್ನೂ ಅವರ ಎಲುಬುಗಳ ಮೇಲಿನಿಂದ ಅವರ ಮಾಂಸವನ್ನೂ ಕಿತ್ತುಕೊಳ್ಳು ವವರೇ, ನನ್ನ ಜನರ ಮಾಂಸವನ್ನು ತಿಂದು ಅವರ ಚರ್ಮವನ್ನು ಸುಲಿದು ಅವರ ಎಲುಬುಗಳನ್ನು ಮುರಿದು ಮಡಿಕೆಯಂತೆ ಅವರ ಮಾಂಸವನ್ನು ತುಂಡು ಮಾಡಿ ಕೊಪ್ಪರಿಗೆಯಲ್ಲಿ ಹಾಕುತ್ತೀರಿ.
- Ecclesiastes 3:16 ಪ್ರಸಂಗಿ 3:16ಕೆಟ್ಟದ್ದು ಇತ್ತೆಂದು ಸೂರ್ಯನ ಕೆಳಗೆ ನ್ಯಾಯ ತೀರ್ಪಿನ ಸ್ಥಳವನ್ನು ಮತ್ತು ದುಷ್ಕೃತ್ಯ ಇದೆಯೆಂದು ನೀತಿಯ ಸ್ಥಾನವನ್ನು ನಾನು ಕಂಡೆನು.
- Isaiah 59:4–6 ಯೆಶಾಯ 59:4–6ನ್ಯಾಯಕ್ಕೋಸ್ಕರ ಕರೆಯುವವನು ಯಾವನೂ ಇಲ್ಲ; ಇಲ್ಲವೆ ಸತ್ಯಕ್ಕೋಸ್ಕರ ಬೇಡು ವವನು ಒಬ್ಬನೂ ಇಲ್ಲ. ವ್ಯರ್ಥತ್ವದಲ್ಲಿ ವಿಶ್ವಾಸ ಇಡು ತ್ತಾರೆ. ಸುಳ್ಳನ್ನು ಮಾತಾಡುತ್ತಾರೆ; ಕೇಡನ್ನು ಗರ್ಭಧರಿಸಿ ಕೊಳ್ಳುತ್ತಾರೆ ಅಕ್ರಮವನ್ನು ಹೆರುತ್ತಾರೆ. ಹಾವಿನಂತೆ ಮೊಟ್ಟೆಗಳನ್ನು ಮರಿ ಮಾಡುತ್ತಾರೆ, ಜೇಡಹುಳದ ನೂಲನ್ನು ನೇಯುತ್ತಾರೆ; ಅದರ ಮೊಟ್ಟೆಗಳನ್ನು ತಿನ್ನುವವನು ಸಾಯುವನು; ಒಡೆಯುವಂಥಾದ್ದರಿಂದ ವಿಷದ ಮರಿಯು ಹೊರಡುವದು. ಅವರ ನೂಲು ವಸ್ತ್ರಕ್ಕಾಗದು; ತಮ್ಮ ಕೆಲಸಗಳಿಂದ ತಮ್ಮನ್ನು ಹೊದ್ದು ಕೊಳ್ಳರು; ಅವರ ಕೆಲಸಗಳು ಅಕ್ರಮದ ಕೆಲಸಗಳೇ; ಅವರ ಕೈಗಳಲ್ಲಿ ಹಿಂಸೆಯ ಕ್ರಿಯೆಗಳು ಅವೆ.
- Jeremiah 22:16–17 ಯೆರೆಮೀಯ 22:16–17ಬಡವನ ಮತ್ತು ದರಿದ್ರನ ನ್ಯಾಯ ವನ್ನು ತೀರಿಸಿದನು. ಆಗ ಒಳ್ಳೇದಾಯಿತು; ನನ್ನನ್ನು ತಿಳುಕೊಳ್ಳುವದು ಇದೇ ಅಲ್ಲವೋ ಎಂದು ಕರ್ತನು ಅನ್ನುತ್ತಾನೆ. ಆದರೆ ನಿನ್ನ ಕಣ್ಣುಗಳು ನಿನ್ನ ಹೃದಯವು ನಿನ್ನ ದುರ್ಲಾಭದ ಮೇಲೆ, ಅಪರಾಧವಿಲ್ಲದವನ ರಕ್ತ ಚೆಲ್ಲುವದರ ಮೇಲೆ ಮತ್ತು ಪೀಡೆಯನ್ನೂ ಬಲಾತ್ಕಾರವನ್ನೂ ಮಾಡುವದರ ಮೇಲೆಯೇ ಹೊರತು ಮತ್ತಾವದರ ಮೇಲೆಯೂ ಇರುವದಿಲ್ಲ.
- Malachi 3:15 ಮಲಾಕಿಯ 3:15ಈಗ ನಾವು ಗರ್ವಿಷ್ಠ ರನ್ನು ಭಾಗ್ಯವಂತರೆಂದನ್ನುತ್ತೇವೆ; ಹೌದು, ದುಷ್ಟತ್ವ ಮಾಡುವವರು ಅಭಿವೃದ್ಧಿಯಾಗುತ್ತಾರೆ; ಹೌದು, ದೇವರನ್ನು ಪರೀಕ್ಷಿಸುವವರೇ ರಕ್ಷಿಸಲ್ಪಟ್ಟಿದ್ದಾರೆ ಎಂದು ಹೇಳಿದ್ದೀರಿ.
- John 11:47–53 ಯೋಹಾನನು 11:47–53ಆಗ ಪ್ರಧಾನಯಾಜಕರೂ ಫರಿಸಾಯರೂ ಆಲೋಚನಾ ಸಭೆಯನ್ನು ಕೂಡಿಸಿ--ಈ ಮನುಷ್ಯನು ಅನೇಕ ಅದ್ಭುತಕಾರ್ಯಗಳನ್ನು ಮಾಡುತ್ತಾನಲ್ಲಾ, ನಾವು ಏನು ಮಾಡೋಣ? ನಾವು ಅವನನ್ನು ಹಾಗೆಯೇ ಬಿಟ್ಟರೆ ಎಲ್ಲರೂ ಅವನ ಮೇಲೆ ನಂಬಿಕೆಯಿಡುವರು ಮತ್ತು ರೋಮಾಯರು ಬಂದು ನಮ್ಮ ಸ್ಥಳವನ್ನೂ ಜನಾಂಗವನ್ನೂ ತೆಗೆದುಕೊಂಡು ಬಿಟ್ಟಾರು ಅಂದರು. ಆದರೆ ಅವರಲ್ಲಿ ಆ ವರುಷದ ಮಹಾಯಾಜಕ ನಾದ ಕಾಯಫನೆಂಬವನು ಅವರಿಗೆ-- ನಿಮಗೆ ಏನೂ ತಿಳಿಯದು; ಜನಾಂಗವೆಲ್ಲಾ ನಾಶವಾಗದ ಹಾಗೆ ಒಬ್ಬ ಮನುಷ್ಯನು ಜನರಿಗೋಸ್ಕರ ಸಾಯುವದು ನಮಗೆ ವಿಹಿತವಾಗಿದೆ ಎಂದು ನೀವು ಯೋಚಿಸುವದೂ ಇಲ್ಲ ಅಂದನು. ಈ ಮಾತನ್ನು ತನ್ನಷ್ಟಕ್ಕೆ ತಾನೇ ಮಾತನಾಡಲಿಲ್ಲ; ಆದರೆ ಅವನು ಆ ವರುಷದಲ್ಲಿ ಮಹಾಯಾಜಕನಾಗಿದ್ದು ಯೇಸು ಆ ಜನಾಂಗಕ್ಕೋಸ್ಕರ ಮಾತ್ರವಲ್ಲದೆ ಚದರಿರುವ ದೇವರ ಮಕ್ಕಳನ್ನು ಒಟ್ಟುಗೂಡಿಸುವದಕ್ಕೂ ಆತನು ಸಾಯಬೇಕಾಗಿದೆ ಎಂದು ಅವನು ಪ್ರವಾದಿಸಿದನು. ಅವರು ಕೂಡಿ ಕೊಂಡು ಆ ದಿನದಿಂದ ಆತನನ್ನು ಕೊಲ್ಲಬೇಕೆಂದು ಆಲೋಚನೆ ಮಾಡಿಕೊಂಡರು.
- Psalm 21:11 ಕೀರ್ತನೆಗಳು 21:11ಅವರು ನಿನಗೆ ವಿರೋಧವಾಗಿ ಕೇಡನ್ನು ಯತ್ನಿಸಿದರು; ಪೂರೈಸಲಾ ರದ ಯುಕ್ತಿಯನ್ನು ಕಲ್ಪಿಸಿದರು.
- Ezekiel 22:12 ಯೆಹೆಜ್ಕೇಲನು 22:12ನಿನ್ನಲ್ಲಿ ರಕ್ತ ಚೆಲ್ಲುವ ಹಾಗೆ ಲಂಚತಿಂದಿದ್ದಾರೆ; ಬಡ್ಡಿಯನ್ನೂ ಲಾಭವನ್ನೂ ತೆಗೆದುಕೊಂಡಿದ್ದಾರೆ; ಬಲಾತ್ಕಾರದಿಂದ ನಿನ್ನ ನೆರೆಯವರಲ್ಲಿ ದುರ್ಲಾಭಮಾಡಿಕೊಂಡಿದ್ದಾರೆ; ನನ್ನನ್ನು ಮರೆತುಬಿಟ್ಟಿ ದ್ದಾರೆಂದು ದೇವರಾದ ಕರ್ತನು ಹೇಳುತ್ತಾನೆ.
- Isaiah 26:7 ಯೆಶಾಯ 26:7ನೀತಿವಂತನ ಮಾರ್ಗವು ಯಥಾರ್ಥವಾಗಿದೆ. ನೀನು ಅತ್ಯಧಿಕ ವಾದ ಯಥಾರ್ಥವಂತನು; ನೀತಿವಂತನ ದಾರಿಯನ್ನು ತೂಗಿ ನೋಡುತ್ತೀ;