Psalms · chapter 60 · verse 8
Psalm 60:8 in Kannada
ಮೋವಾಬ್ ನನ್ನನ್ನು ತೊಳೆಯುವ ಪಾತ್ರೆಯು; ಎದೋಮಿನ ಮೇಲೆ ನನ್ನ ಕೆರವನ್ನು ಎಸೆಯುವೆನು; ಫಿಲಿಷ್ಟಿಯವೇ, ನನ್ನ ನಿಮಿತ್ತ ಜಯಧ್ವನಿ ಮಾಡು.
Movaab nannannu toleyuva paatreyu; edomina mele nanna keravannu eseyuvenu; philishtiyave, nanna nimitta jayadhvani maadu.
Psalm 60:8 in English
- King James Version (KJV)
- Moab [is] my washpot; over Edom will I cast out my shoe: Philistia, triumph thou because of me.
- World English Bible (WEB)
- Moab is my wash basin. I will throw my sandal on Edom. I shout in triumph over Philistia.”
- American Standard Version (ASV)
- Moab is my washpot; Upon Edom will I cast my shoe: Philistia, shout thou because of me.
- Bible in Basic English (BBE)
- Moab is my washpot; over Edom will I put out my shoe; over Philistia will a glad cry be sounded.
- Darby Translation (DBY)
- Moab is my wash-pot; upon Edom will I cast my sandal; Philistia, shout aloud because of me.
- Webster's Bible (WBS)
- Moab [is] my washpot; over Edom will I cast out my shoe: Philistia, triumph thou because of me.
- Young's Literal Translation (YLT)
- Moab [is] my pot for washing, over Edom I cast my shoe, Shout, concerning me, O Philistia.
Read in context
- 6ದೇವರು ತನ್ನ ಪರಿಶುದ್ಧತ್ವದಿಂದ ನುಡಿದಿದ್ದಾನೆ; ನಾನು ಉತ್ಸಾಹಪಡುವೆನು; ಶೆಕೆಮನ್ನು ವಿಭಾಗಿ ಸುವೆನು; ಸುಖೋತಿನ ತಗ್ಗನ್ನು ಅಳೆಯುವೆನು.
- 7ಗಿಲ್ಯಾದ್ ಮನಸ್ಸೆ ನನ್ನದು; ಎಫ್ರಾಯಾಮ್ ನನ್ನ ತಲೆಯ ಬಲವಾಗಿದೆ; ಯೆಹೂದನು ನನಗೆ ನ್ಯಾಯ ಕೊಡುವವನು;
- 8ಮೋವಾಬ್ ನನ್ನನ್ನು ತೊಳೆಯುವ ಪಾತ್ರೆಯು; ಎದೋಮಿನ ಮೇಲೆ ನನ್ನ ಕೆರವನ್ನು ಎಸೆಯುವೆನು; ಫಿಲಿಷ್ಟಿಯವೇ, ನನ್ನ ನಿಮಿತ್ತ ಜಯಧ್ವನಿ ಮಾಡು.
- 9ಬಲವುಳ್ಳ ಪಟ್ಟಣಕ್ಕೆ ನನ್ನನ್ನು ಕರತರುವವನಾರು? ಎದೋಮಿನೊಳಗೆ ನನ್ನನ್ನು ನಡಿಸುವವನಾರು?
- 10ಓ ದೇವರೇ, ನಮ್ಮನ್ನು ತಳ್ಳಿಬಿಟ್ಟು ನಮ್ಮ ಸೈನ್ಯಗಳ ಸಂಗಡ ಹೊರಟು ಹೋಗದೆ ಇದ್ದ ದೇವರು ನೀನ ಲ್ಲವೋ?
Cross references
- Psalm 108:9–10 ಕೀರ್ತನೆಗಳು 108:9–10ಮೋವಾಬ್ ನನ್ನನ್ನು ತೊಳೆಯುವ ಪಾತ್ರೆಯು; ಏದೋಮಿನ ಮೇಲೆ ನನ್ನ ಕೆರವನ್ನು ಎಸೆಯುವೆನು; ಫಿಲಿಷ್ಟಿಯದ ಮೇಲೆ ಜಯಧ್ವನಿಗೈಯುವೆನು. ಬಲ ವುಳ್ಳ ಪಟ್ಟಣಕ್ಕೆ ನನ್ನನ್ನು ಕರೆತರುವವನಾರು? ಏದೋಮಿನ ವರೆಗೆ ನನ್ನನ್ನು ನಡಿಸುವವನಾರು?
- 2 Samuel 8:14 2 ಸಮುವೇಲನು 8:14ಎದೋಮಿ ನಲ್ಲಿ ಕಾವಲುದಂಡುಗಳನ್ನು ಇಟ್ಟನು. ಎಲ್ಲಾ ಎದೋಮಿ ನಲ್ಲಿ ಅವನು ಕಾವಲುದಂಡುಗಳನ್ನು ಇಟ್ಟದ್ದರಿಂದ ಎದೋಮ್ಯರೆಲ್ಲರೂ ದಾವೀದನಿಗೆ ದಾಸರಾದರು. ದಾವೀದನು ಹೋದಲ್ಲೆಲ್ಲಾ ಕರ್ತನು ಅವನನ್ನು ಕಾಪಾಡಿದನು.
- 2 Samuel 8:1–2 2 ಸಮುವೇಲನು 8:1–2ಇದಾದ ಮೇಲೆ ಏನಾಯಿತಂದರೆ, ದಾವೀದನು ಫಿಲಿಷ್ಟಿಯರನ್ನು ಹೊಡೆದು ಅವರನ್ನು ಅಣಗಿಸಿ ಅವರ ಕೈಯಿಂದ ಮೇತೆಗಮ್ಮವನ್ನು ತಕ್ಕೊಂಡನು. ಇದಲ್ಲದೆ ಅವನು ಮೋವಾಬ್ಯರನ್ನು ಹೊಡೆದು ಅವರನ್ನು ಹಗ್ಗದಿಂದ ಅಳೆದು ನೆಲಕ್ಕೆ ಬೀಳಮಾಡಿದನು; ಅವರನ್ನು ಕೊಲ್ಲುವದಕ್ಕೆ ಎರಡು ದಾರಗಳಿಂದ, ಜೀವದಲ್ಲಿಡುವದಕ್ಕೆ ಒಂದು ಪೂರ್ಣ ವಾದ ಹಗ್ಗದಿಂದ ಅಳೆದನು. ಹಾಗೆಯೇ ಮೋವಾಬ್ಯರು ದಾವೀದನಿಗೆ ದಾಸರಾಗಿ ಅವನಿಗೆ ಕಪ್ಪವನ್ನು ತಂದರು.
- 2 Samuel 21:15–22 2 ಸಮುವೇಲನು 21:15–22ಫಿಲಿಷ್ಟಿಯರು ತಿರಿಗಿ ಇಸ್ರಾಯೇಲ್ಯರ ಮೇಲೆ ಯುದ್ಧಮಾಡಿದರು. ಆಗ ದಾವೀದನೂ ಅವನ ಸಂಗಡ ಇದ್ದ ಅವನ ಸೇವಕರೂ ಹೋಗಿ ಫಿಲಿಷ್ಟಿಯರ ಸಂಗಡ ಯುದ್ಧಮಾಡಿದರು; ಆದರೆ ದಾವೀದನು ದಣಿದು ಹೋದನು. ಆಗ ಮುನ್ನೂರು ಶೇಕೆಲ ತೂಕವಾದ ಹಿತ್ತಾಳೆಯ ಈಟಿಯುಳ್ಳವನಾಗಿ ಹೊಸ ಕತ್ತಿಯನ್ನು ನಡುವಿನಲ್ಲಿ ಕಟ್ಟಿಕೊಂಡಿರುವ ಮಹಾ ಶರೀರದವನ ಮಕ್ಕಳಲ್ಲಿ ಇಷ್ಬೀಬೆನೋಬ್ನು ದಾವೀದ ನನ್ನು ಕೊಲ್ಲಬೇಕೆಂದಿದ್ದನು. ಆದರೆ ಚೆರೂಯಳ ಮಗನಾದ ಅಬೀಷೈಯು ಅವನಿಗೆ ಸಹಾಯವಾಗಿ ಬಂದು ಫಿಲಿಷ್ಟಿಯನನ್ನು ಹೊಡೆದು ಕೊಂದುಹಾಕಿ ದನು. ಆಗ ದಾವೀದನ ಜನರು ಅವನಿಗೆ--ನೀನು ಇಸ್ರಾಯೇಲಿನ ಬೆಳಕನ್ನು ಆರಿಸಿಬಿಡದ ಹಾಗೆ ಇನ್ನು ಮೇಲೆ ನಮ್ಮ ಸಂಗಡ ಯುದ್ಧಕ್ಕೆ ಹೊರಡಬೇಡ ಎಂದು ಅವನಿಗೆ ಆಣೆಯಿಟ್ಟರು. ತರುವಾಯ ತಿರಿಗಿ ಫಿಲಿಷ್ಟಿಯರ ಸಂಗಡ ಗೋಬಿ ನಲ್ಲಿ ಯುದ್ಧ ಉಂಟಾಯಿತು. ಆಗ ಹುಷಾತನಾದ ಸಿಬ್ಬೆಕೈನು ಮಹಾಶರೀರದವನ ಮಕ್ಕಳಲ್ಲಿ ಸಫ್ ಎಂಬವನನ್ನು ಕೊಂದನು. ತಿರಿಗಿ ಫಿಲಿಷ್ಟಿಯರ ಸಂಗಡ ಗೋಬಿನಲ್ಲಿ ಯುದ್ಧ ಉಂಟಾದಾಗ ಬೇತ್ಲೆಹೇಮಿನವನಾದ ಯಾರೇಯೋರೆ ಗೀಮ್ ಎಂಬವನ ಮಗನಾಗಿರುವ ಎಲ್ಹಾನಾನನು ಗಿತ್ತಿಯನಾದ ಗೊಲ್ಯಾತನ ಸಹೋದರನನ್ನು ಕೊಂದನು. ಈ ಗೊಲ್ಯಾತನ ಈಟಿಯ ಕಟ್ಟಿಗೆಯು ನೆಯ್ಯುವವರ ದೋಣೀ ಮರಕ್ಕೆ ಸಮಾನವಾಗಿತ್ತು. ಗತ್ ಊರಿನಲ್ಲಿ ಯುದ್ಧ ಉಂಟಾದಾಗ ಅಲ್ಲಿ ಎತ್ತರವಾದ ಒಬ್ಬ ಮನುಷ್ಯನಿದ್ದನು; ಅವನ ಕೈಕಾಲುಗಳ ಬೆರಳುಗಳು ಆರು ಆರಾಗಿ ಲೆಖ್ಖದಲ್ಲಿ ಇಪ್ಪತ್ತು ನಾಲ್ಕು ಆಗಿದ್ದವು. ಇವನು ಸಹ ಮಹಾಶರೀರದವನಿಗೆ ಹುಟ್ಟಿ ದನು. ಅವನು ಇಸ್ರಾಯೇಲನ್ನು ನಿಂದಿಸಿದ್ದರಿಂದ ದಾವೀದನ ಸಹೋದರನಾಗಿರುವ ಶಿಮ್ಮನ ಮಗ ನಾದ ಯೋನಾತಾನನು ಅವನನ್ನು ಕೊಂದುಬಿಟ್ಟನು.ಈ ನಾಲ್ಕು ಮಂದಿಯು ಗತ್ ಊರಿನಲ್ಲಿದ್ದ ಮಹಾಶರೀರದವನಿಗೆ ಹುಟ್ಟಿದ್ದರು; ಇವರು ದಾವೀದ ನಿಂದಲೂ ಅವನ ಸೇವಕರಿಂದಲೂ ಸಂಹಾರವಾದರು. ಈ ನಾಲ್ಕು ಮಂದಿಯು ಗತ್ ಊರಿನಲ್ಲಿದ್ದ ಮಹಾಶರೀರದವನಿಗೆ ಹುಟ್ಟಿದ್ದರು; ಇವರು ದಾವೀದ ನಿಂದಲೂ ಅವನ ಸೇವಕರಿಂದಲೂ ಸಂಹಾರವಾದರು.
- 1 Chronicles 18:13 1 ಪೂರ್ವಕಾಲವೃತ್ತಾಂತ 18:13ದಾವೀದನು ಎಲ್ಲಿ ಹೋದನೋ ಅಲ್ಲಿ ಕರ್ತನು ಅವನನ್ನು ರಕ್ಷಿಸಿದನು.
- 1 Chronicles 18:1–2 1 ಪೂರ್ವಕಾಲವೃತ್ತಾಂತ 18:1–2ಇದರ ತರುವಾಯ ಏನಾಯಿತಂದರೆ, ದಾವೀದನು ಫಿಲಿಷ್ಟಿಯರನ್ನು ಹೊಡೆದು ಅವರನ್ನು ತಗ್ಗಿಸಿ ಗತ್ನ್ನೂ ಅದರ ಗ್ರಾಮಗಳನ್ನೂ ಫಿಲಿಷ್ಟಿಯರ ಕೈಯೊಳಗಿಂದ ತೆಗೆದುಕೊಂಡನು. ಹಾಗೆಯೇ ಅವನು ಮೋವಾಬ್ಯರನ್ನು ಸಂಹರಿಸಿ ದ್ದರಿಂದ ಮೋವಾಬ್ಯರು ದಾವೀದನಿಗೆ ಸೇವಕರಾಗಿ ಕಪ್ಪವನ್ನು ಕೊಡುವವರಾದರು.
- Genesis 25:23 ಆದಿಕಾಂಡ 25:23ಕರ್ತನು ಆಕೆಗೆ--ನಿನ್ನ ಹೊಟ್ಟೆಯಲ್ಲಿ ಎರಡು ಜನಾಂಗಗಳು ಇವೆ. ನಿನ್ನ ಗರ್ಭದೊಳಗಿನಿಂದಲೇ ಎರಡು ತರವಾದ ಜನಗಳು ಬೇರೆಬೇರೆಯಾಗುವರು. ಒಂದು ತರವಾದ ಜನಕ್ಕಿಂತ ಇನ್ನೊಂದು ಬಲಗೊಳ್ಳು ವದು. ಇದಲ್ಲದೆ ಹಿರಿಯನು ಕಿರಿಯನನ್ನು ಸೇವಿಸುವನು ಎಂದು ಹೇಳಿದನು.
- 2 Samuel 5:17–25 2 ಸಮುವೇಲನು 5:17–25ಅವರು ದಾವೀದನನ್ನು ಇಸ್ರಾಯೇಲಿನ ಮೇಲೆ ಅರಸನಾಗಲು ಅಭಿಷೇಕಮಾಡಿದ್ದಾರೆಂದು ಫಿಲಿಷ್ಟಿ ಯರು ಕೇಳಿದಾಗ ಅವರೆಲ್ಲರು ದಾವೀದನನ್ನು ಹುಡುಕು ವದಕ್ಕೆ ಬಂದರು. ಅದನ್ನು ದಾವೀದನು ಕೇಳಿ ಗಡಿ ಸ್ಥಳಕ್ಕೆ ಹೋದನು. ಆದರೆ ಫಿಲಿಷ್ಟಿಯರು ಬಂದು ರೆಫಾಯಾಮ್ ತಗ್ಗಿನಲ್ಲಿ ಇಳುಕೊಂಡರು. ಆಗ ದಾವೀದನು--ನಾನು ಫಿಲಿಷ್ಟಿಯರ ಮೇಲೆ ಹೋಗ ಬೇಕೋ? ಅವರನ್ನು ನನ್ನ ಕೈಯಲ್ಲಿ ಒಪ್ಪಿಸಿಕೊಡು ವಿಯೋ ಎಂದು ಕರ್ತನನ್ನು ಕೇಳಿದನು. ಅದಕ್ಕೆ ಕರ್ತನು ದಾವೀದನಿಗೆ--ಹೋಗು; ಫಿಲಿಷ್ಟಿಯರನ್ನು ನಿನ್ನ ಕೈ ಯಲ್ಲಿ ಖಂಡಿತಾ ಕೊಡುವೆನು ಎಂದು ಹೇಳಿದನು. ಆದಕಾರಣ ದಾವೀದನು ಬಾಳ್ಪೆರಾಚೀಮಿಗೆ ಬಂದು ಅಲ್ಲಿ ಅವರನ್ನು ಹೊಡೆದು--ನೀರು ಕಟ್ಟೆ ಒಡೆದು ಹರಿಯುವ ಹಾಗೆ ಕರ್ತನು ನನ್ನ ಮುಂದೆ ನನ್ನ ಶತ್ರುಗಳ ಮೇಲೆ ಹರಿದು ಬಿದ್ದಿದ್ದಾನೆ ಎಂದು ಹೇಳಿ ಆ ಸ್ಥಳಕ್ಕೆ ಬಾಳ್ಪೆರಾಚೀಮ್ ಎಂದು ಹೆಸರಿ ಟ್ಟನು. ಅಲ್ಲಿ ಫಿಲಿಷ್ಟಿಯರು ತಮ್ಮ ವಿಗ್ರಹಗಳನ್ನು ಬಿಟ್ಟುಹೋದದರಿಂದ ದಾವೀದನೂ ಅವನ ಜನರೂ ಅವುಗಳನ್ನು ಸುಟ್ಟುಬಿಟ್ಟರು. ಫಿಲಿಷ್ಟಿಯರು ತಿರಿಗಿ ಬಂದು ರೆಫಾಯಾಮ್ ತಗ್ಗಿನಲ್ಲಿ ವಿಸ್ತಾರವಾಗಿ ಹರಡಿಕೊಂಡರು. ದಾವೀ ದನು ಕರ್ತನನ್ನು ಕೇಳಿಕೊಂಡಾಗ ಆತನು ಅವನಿಗೆನೀನು ಹೋಗದೆ ಅವರ ಹಿಂದುಗಡೆ ಸುತ್ತಿಕೊಂಡು ಹೋಗಿ ಹಿಪ್ಪಲಿ ಗಿಡಗಳಿಗೆದುರಾಗಿ ಅವರ ಮೇಲೆ ಬರಬೇಕು. ಹಿಪ್ಪಲಿ ಗಿಡಗಳ ಶಿಖರಗಳಲ್ಲಿ ನಡೆದು ಬರುವ ಶಬ್ದವನ್ನು ನೀನು ಕೇಳಿದಾಗ ಚೇತರಿಸಿಕೊಳ್ಳ ಬೇಕು. ಯಾಕಂದರೆ ಆಗಲೇ ಕರ್ತನು ಫಿಲಿಷ್ಟಿಯರ ದಂಡನ್ನು ಹೊಡೆಯಲು ನಿನ್ನ ಮುಂದಾಗಿ ಹೊರಡು ವನು ಅಂದನು.ಆಗ ಕರ್ತನು ತನಗೆ ಆಜ್ಞಾಪಿಸಿದ ಪ್ರಕಾರಮಾಡಿ ದಾವೀದನು, ಗೆಬದಿಂದ ಗೆಜೆರಿನ ವರೆಗೆ ಫಿಲಿಷ್ಟಿಯರನ್ನು ಕೊಂದನು. ಆಗ ಕರ್ತನು ತನಗೆ ಆಜ್ಞಾಪಿಸಿದ ಪ್ರಕಾರಮಾಡಿ ದಾವೀದನು, ಗೆಬದಿಂದ ಗೆಜೆರಿನ ವರೆಗೆ ಫಿಲಿಷ್ಟಿಯರನ್ನು ಕೊಂದನು.
- Numbers 24:18 ಅರಣ್ಯಕಾಂಡ 24:18ಎದೋಮು ಸ್ವಾಸ್ತ್ಯವಾಗುವದು; ಸೇಯಾರು ತನ್ನ ಶತ್ರುಗಳಿಗೆ ಸ್ವಾಸ್ತ್ಯವಾಗುವದು; ಮತ್ತು ಇಸ್ರಾಯೇಲು ಪರಾಕ್ರಮ ಕಾರ್ಯ ಮಾಡುವದು,
- Genesis 27:40 ಆದಿಕಾಂಡ 27:40ನಿನ್ನ ಕತ್ತಿಯಿಂದಲೇ ನೀನು ಬದುಕುವಿ, ನಿನ್ನ ಸಹೋದರನನ್ನು ಸೇವಿಸುವಿ; ಆದರೆ ನಿನಗೆ ಪ್ರಭುತ್ವವು ಬಂದಾಗ ಆಗುವದೇನಂದರೆ, ಅವನ ನೊಗವನ್ನು ನಿನ್ನ ಕೊರಳಿನಿಂದ ಮುರಿದು ಹಾಕುವಿ.