Psalms · chapter 62 · verse 9
Psalm 62:9 in Kannada
ನಿಶ್ಚಯವಾಗಿ ಅಲ್ಪರು ವ್ಯರ್ಥರೇ, ಘನವಂತರು ಸುಳ್ಳೇ; ಅವರೆಲ್ಲರನ್ನು ತ್ರಾಸಿನಲ್ಲಿ ತೂಗಿದರೆ ಧೂಳಿ ಗಿಂತಲೂ ಲಘುವಾಗಿದ್ದಾರೆ.
Nishchayavaagi alparu vyarthare, ghanavantaru sulle; avarellarannu traasinalli toogidare dhooli gintaloo laghuvaagiddaare.
Psalm 62:9 in English
- King James Version (KJV)
- Surely men of low degree [are] vanity, [and] men of high degree [are] a lie: to be laid in the balance, they [are] altogether [lighter] than vanity.
- World English Bible (WEB)
- Surely men of low degree are just a breath, and men of high degree are a lie. In the balances they will go up. They are together lighter than a breath.
- American Standard Version (ASV)
- Surely men of low degree are vanity, and men of high degree are a lie: In the balances they will go up; They are together lighter than vanity.
- Bible in Basic English (BBE)
- Truly men of low birth are nothing, and men of high position are not what they seem; if they are put in the scales together they are less than a breath.
- Darby Translation (DBY)
- Men of low degree are only vanity; men of high degree, a lie: laid in the balance, they go up together [lighter] than vanity.
- Webster's Bible (WBS)
- Surely men of low degree [are] vanity, [and] men of high degree [are] a lie: to be laid in the balance, they [are] altogether [lighter] than vanity.
- Young's Literal Translation (YLT)
- Only — vanity [are] the low, a lie the high. In balances to go up they than vanity [are] lighter.
Read in context
- 7ದೇವರಲ್ಲಿಯೇ ನನ್ನ ರಕ್ಷಣೆಯೂ ಘನವೂ ಇದೆ; ನನ್ನ ಬಲದ ಬಂಡೆಯೂ ನನ್ನ ಆಶ್ರಯವೂ ದೇವರಲ್ಲಿಯೇ.
- 8ಎಲ್ಲಾ ಕಾಲದಲ್ಲಿ ಆತನಲ್ಲಿ ಭರವಸ ವಿಡಿರಿ, ಜನರೇ; ನಿಮ್ಮ ಹೃದಯವನ್ನು ಆತನ ಮುಂದೆ ಹೊಯ್ಯಿರಿ; ದೇವರು ನಮಗೆ ಆಶ್ರಯವಾಗಿದ್ದಾನೆ. ಸೆಲಾ.
- 9ನಿಶ್ಚಯವಾಗಿ ಅಲ್ಪರು ವ್ಯರ್ಥರೇ, ಘನವಂತರು ಸುಳ್ಳೇ; ಅವರೆಲ್ಲರನ್ನು ತ್ರಾಸಿನಲ್ಲಿ ತೂಗಿದರೆ ಧೂಳಿ ಗಿಂತಲೂ ಲಘುವಾಗಿದ್ದಾರೆ.
- 10ಅನ್ಯಾಯದಲ್ಲಿ ಭರ ವಸವಿಡಬೇಡಿರಿ; ಸುಲಿಗೆಯಲ್ಲಿ ವ್ಯರ್ಥರಾಗಬೇಡಿರಿ; ಆಸ್ತಿಯು ಹೆಚ್ಚಿದರೆ ಅದರ ಮೇಲೆ ಮನಸ್ಸಿಡಬೇಡಿರಿ.
- 11ಅಧಿಕಾರವು ದೇವರದೆಂದು ಆತನು ಒಂದು ಸಾರಿ ಮಾತನಾಡಿದ್ದನ್ನು; ನಾನು ಎರಡು ಸಾರಿ ಕೇಳಿದ್ದೇನೆ; ಶಕ್ತಿಯು ದೇವರಿಗೆ ಸಂಬಂಧಪಟ್ಟದ್ದು.ಓ ಕರ್ತನೇ, ನಿನ್ನಲ್ಲಿ ಕರುಣೆಯುಂಟು; ನೀನು ಪ್ರತಿ ಮನುಷ್ಯನಿಗೆ ಅವನ ಕೆಲಸದ ಪ್ರಕಾರ ಪ್ರತಿಫಲ ಕೊಡುತ್ತೀ.
Cross references
- Psalm 39:5 ಕೀರ್ತನೆಗಳು 39:5ಇಗೋ, ನನ್ನ ದಿವಸ ಗಳನ್ನು ಗೇಣುದ್ದವಾಗಿ ಮಾಡಿದ್ದೀ; ನನ್ನ ಆಯುಷ್ಯವು ನಿನ್ನ ಮುಂದೆ ಏನೂ ಇಲ್ಲದ ಹಾಗಿದೆ; ನಿಶ್ಚಯವಾಗಿ ಉತ್ತಮ ಸ್ಥಿತಿಯಲ್ಲಿರುವ ಪ್ರತಿಯೊಬ್ಬನು ಒಟ್ಟಾರೆಯಲ್ಲಿ ವ್ಯರ್ಥವಾದವನೇ. ಸೆಲಾ.
- Isaiah 40:17 ಯೆಶಾಯ 40:17ಸಕಲ ಜನಾಂಗಗಳು ಆತನ ಮುಂದೆ ಏನೂ ಇಲ್ಲದಂತಿವೆ; ಅವು ಆತನ ಎಣಿಕೆಯಲ್ಲಿ ಶೂನ್ಯವಾಗಿಯೂ ವ್ಯರ್ಥ ವಾಗಿಯೂ ಇವೆ.
- Isaiah 40:15 ಯೆಶಾಯ 40:15ಇಗೋ, ಆತನ ಎಣಿಕೆಯಲ್ಲಿ ಜನಾಂಗಗಳು ಕಪಿಲೆ ಯಿಂದುದುರುವ ಹನಿಯಂತೆಯೂ ತಕ್ಕಡಿಯಲ್ಲಿನ ದೂಳಿನ ಹಾಗೂ ಇರುತ್ತವೆ. ಇಗೋ, ದ್ವೀಪಗಳನ್ನು ಅಣುರೇಣುವಿನಂತೆ ಆತನು ಎತ್ತುತ್ತಾನೆ.
- Psalm 118:9 ಕೀರ್ತನೆಗಳು 118:9ಅಧಿಪತಿಗಳಲ್ಲಿ ಭರವಸವಿಡುವದಕ್ಕಿಂತ ಕರ್ತನನ್ನು ನಂಬಿಕೊಳ್ಳುವದು ಒಳ್ಳೇದು.
- Psalm 39:11 ಕೀರ್ತನೆಗಳು 39:11ಅಕ್ರಮ ಕ್ಕೋಸ್ಕರ ಗದರಿಕೆಗಳಿಂದ ನೀನು ಮನುಷ್ಯನನ್ನು ಶಿಕ್ಷಿಸಿದರೆ ಅವನ ಸೌಂದರ್ಯವನ್ನು ನುಸಿಯ ಹಾಗೆ ಹಾಳುಮಾಡುತ್ತೀ; ನಿಶ್ಚಯವಾಗಿ ಪ್ರತಿ ಮನುಷ್ಯನು ವ್ಯರ್ಥವಾದವನೇ--ಸೆಲಾ.
- Romans 3:4 ರೋಮಾಪುರದವರಿಗೆ 3:4ಹಾಗೆ ಎಂದಿಗೂ ಆಗು ವದಿಲ್ಲ; ಹೌದು, ಎಲ್ಲಾ ಮನುಷ್ಯರು ಸುಳ್ಳುಗಾರ ರಾದರೂ ದೇವರು ಸತ್ಯವಂತನೇ ಸರಿ;ಯಾಕಂದರೆ--ನೀನು ನಿನ್ನ ಮಾತುಗಳಲ್ಲಿ ನೀತಿವಂತನೆಂದು ನಿರ್ಣ ಯಿಸಲ್ಪಡಬೇಕೆಂತಲೂ ನಿನಗೆ ತೀರ್ಪಾದಾಗ ನೀನು ಗೆಲ್ಲಬೇಕೆಂತಲೂ ಬರೆದದೆ.
- 1 Samuel 23:19–20 1 ಸಮುವೇಲನು 23:19–20ಜೀಫ್ಯರು ಗಿಬೆಯಲ್ಲಿದ್ದ ಸೌಲನ ಬಳಿಗೆ ಬಂದುದಾವೀದನು ನಮ್ಮ ಪಕ್ಷವಾಗಿಯೇ ಯೆಷಿಮೋನಿನ ದಕ್ಷಿಣದಲ್ಲಿ ಹಕೀಲಾ ಗುಡ್ಡದಲ್ಲಿರುವ ಘೋರಾರಣ್ಯ ದಲ್ಲಿ ನಮ್ಮೊಂದಿಗೆ ಅಡಗಿಕೊಂಡಿದ್ದಾನಲ್ಲವೇ? ಅರಸನೇ, ನೀನು ನಿನ್ನ ಪ್ರಾಣದ ಇಚ್ಛೆ ಇದ್ದ ಹಾಗೆ ಇಳಿದು ಬಾ; ಅವನನ್ನು ಅರಸನ ಕೈಯಲ್ಲಿ ಒಪ್ಪಿಸಿಕೊಡುವ ಭಾರವು ನಮ್ಮದು ಅಂದರು.
- 1 Samuel 18:5 1 ಸಮುವೇಲನು 18:5ಸೌಲನು ದಾವೀದನನ್ನು ಎಲ್ಲಿಗೆ ಕಳುಹಿಸಿದರೂ ಅಲ್ಲಿಗೆ ಹೋಗಿ ಅವನು ಬುದ್ಧಿ ಯಿಂದ ಕಾರ್ಯವನ್ನು ನಡಿಸುತ್ತಿದ್ದನು. ಆದದರಿಂದ ಸೌಲನು ಅವನನ್ನು ಯುದ್ಧಸ್ಥರ ಮೇಲೆ ಅಧಿಕಾರಿಯಾಗ ಮಾಡಿದನು. ಅವನು ಸಮಸ್ತ ಜನರ ದೃಷ್ಟಿಯಲ್ಲಿಯೂ ಸೌಲನ ಎಲ್ಲಾ ಸೇವಕರ ದೃಷ್ಟಿಯಲ್ಲಿಯೂ ಒಪ್ಪಿಗೆಯಾಗಿದ್ದನು.
- 2 Samuel 15:6 2 ಸಮುವೇಲನು 15:6ಈ ಪ್ರಕಾರ ಅಬ್ಷಾಲೋಮನು ನ್ಯಾಯಕ್ಕೋಸ್ಕರ ಅರಸನ ಬಳಿಗೆ ಬರುವ ಇಸ್ರಾಯೇಲ್ಯರೆಲ್ಲರಿಗೆ ಮಾಡಿ ದನು. ಈ ರೀತಿಯಲ್ಲಿ ಅಬ್ಷಾಲೋಮನು ಇಸ್ರಾ ಯೇಲ್ಯರಿಗೆ ಮಾಡಿದನು. ಹೀಗೆ ಅಬ್ಷಾಲೋಮನು ಇಸ್ರಾಯೇಲ್ಯರ ಹೃದಯಗಳನ್ನು ಕದ್ದುಕೊಂಡನು.
- 1 Samuel 18:21–26 1 ಸಮುವೇಲನು 18:21–26ಅವನಿಗೆ ಉರುಲಾಗಿರುವ ಹಾಗೆಯೂ ಫಿಲಿಷ್ಟಿಯರ ಕೈ ಅವನ ಮೇಲೆ ಬರುವ ಹಾಗೆಯೂ ಇವಳನ್ನು ಅವನಿಗೆ ಕೊಡುವೆನು ಅಂದುಕೊಂಡನು. ಆದದರಿಂದ ಸೌಲನು ದಾವೀದನಿಗೆ--ನೀನು ಎರಡನೆ ಯವಳಿಂದ ಈ ಹೊತ್ತು ಅಳಿಯನಾಗು ಅಂದನು. ಸೌಲನು ತನ್ನ ಸೇವಕರಿಗೆ--ನೀವು ದಾವೀದನ ಸಂಗಡ ಗುಪ್ತವಾಗಿ ಮಾತನಾಡಿ--ಇಗೋ, ಅರಸನು ನಿನ್ನಲ್ಲಿ ಸಂತೋಷಪಡುತ್ತಾನೆ, ತನ್ನ ಸೇವಕರೆಲ್ಲರೂ ನಿನ್ನನ್ನು ಪ್ರೀತಿಸುತ್ತಾರೆ; ಆದದರಿಂದ ಅರಸನ ಅಳಿಯ ನಾಗು ಎಂದು ಹೇಳಿರಿ ಎಂದು ಆಜ್ಞಾಪಿಸಿದನು. ಹಾಗೆಯೇ ಸೌಲನ ಸೇವಕರು ಈ ಮಾತುಗಳನ್ನು ದಾವೀದನ ಕಿವಿಗಳಲ್ಲಿ ಹೇಳಿದರು. ಆದರೆ ದಾವೀದನು--ನಾನು ದರಿದ್ರನೂ ಅಲ್ಪನಾಗಿ ಎಣಿಸಲ್ಪ ಟ್ಟವನೂ ಆಗಿರುವಾಗ ನಾನು ಅರಸನಿಗೆ ಅಳಿಯ ನಾಗುವದು ನಿಮ್ಮ ಕಣ್ಣುಗಳಿಗೆ ಅಲ್ಪವಾಗಿ ಕಾಣು ತ್ತದೆಯೋ ಅಂದನು. ಆಗ ಸೌಲನ ಸೇವಕರು ಅವನಿಗೆ--ದಾವೀದನು ಈ ಪ್ರಕಾರವಾಗಿ ಮಾತನಾಡಿ ದನೆಂದು ಹೇಳಿದರು. ಆದರೆ ಸೌಲನು-- ದಾವೀದ ನನ್ನು ಫಿಲಿಷ್ಟಿಯರ ಕೈಯಿಂದ ಬೀಳಮಾಡಬೇಕೆಂದು ನೆನಸಿ ತನ್ನ ಸೇವಕರಿಗೆ--ನೀವು ದಾವೀದನಿಗೆ--ಅರಸನು ಯಾವ ತೆರವನ್ನೂ ಅಪೇಕ್ಷಿಸದೆ ತನ್ನ ಶತ್ರು ಗಳಿಗೆ ಮುಯ್ಯಿಗೆ ಮುಯ್ಯಿ ತೀರಿಸುವ ಹಾಗೆ ನೂರು ಮಂದಿ ಫಿಲಿಷ್ಟಿಯರ ಮುಂದೊಗಲನ್ನು ಅಪೇಕ್ಷಿಸು ತ್ತಾನೆಂದು ಹೇಳಿರಿ ಅಂದನು. ಹಾಗೆಯೇ ಅವನ ಸೇವಕರು ದಾವೀದನಿಗೆ ಈ ಮಾತುಗಳನ್ನು ತಿಳಿಸಿದಾಗ ಅರಸನಿಗೆ ಅಳಿಯನಾಗುವದು ಅವನಿಗೆ ಚೆನ್ನಾಗಿ ಕಾಣಿಸಿತು.
- 1 Samuel 23:12 1 ಸಮುವೇಲನು 23:12ಕೆಯಾಲಾ ಪಟ್ಟಣದವರು ನನ್ನನ್ನು ನನ್ನ ಜನರನ್ನು ಸೌಲನ ಕೈಯಲ್ಲಿ ಒಪ್ಪಿಸಿಕೊಡುವರೋ ಎಂದು ದಾವೀದನು ಕೇಳಿದಾಗ ಕರ್ತನು--ಅವರು ಒಪ್ಪಿಸಿ ಕೊಡುವರು ಅಂದನು.
- 2 Samuel 15:31 2 ಸಮುವೇಲನು 15:31ಅಹೀತೋಫೆಲನು ಅಬ್ಷಾಲೋ ಮನ ಬಳಿಯಲ್ಲಿ ಒಳಸಂಚಿನವರ ಸಂಗಡ ಇದ್ದಾ ನೆಂದು ದಾವೀದನಿಗೆ ತಿಳಿಸಲ್ಪಟ್ಟಾಗ ದಾವೀದನು--ಕರ್ತನೇ, ಅಹೀತೋಫೆಲನ ಆಲೋಚನೆಯನ್ನು ಹುಚ್ಚುತನವಾಗ ಮಾಡು ಅಂದನು.