Psalms · chapter 63 · verse 5
Psalm 63:5 in Kannada
ನಾನು ರಾತ್ರಿ ಜಾವಗಳಲ್ಲಿ ನಿನ್ನನ್ನು ಧ್ಯಾನಿಸುವಾಗ
Naanu raatri jaavagalalli ninnannu dhyaanisuvaaga
Psalm 63:5 in English
- King James Version (KJV)
- My soul shall be satisfied as [with] marrow and fatness; and my mouth shall praise [thee] with joyful lips:
- World English Bible (WEB)
- My soul shall be satisfied as with the richest food. My mouth shall praise you with joyful lips,
- American Standard Version (ASV)
- My soul shall be satisfied as with marrow and fatness; And my mouth shall praise thee with joyful lips;
- Bible in Basic English (BBE)
- My soul will be comforted, as with good food; and my mouth will give you praise with songs of joy;
- Darby Translation (DBY)
- My soul is satisfied as with marrow and fatness, and my mouth shall praise [thee] with joyful lips.
- Webster's Bible (WBS)
- My soul shall be satisfied as [with] marrow and fatness; and my mouth shall praise [thee] with joyful lips:
- Young's Literal Translation (YLT)
- As [with] milk and fatness is my soul satisfied, And [with] singing lips doth my mouth praise.
Read in context
- 3ನಿನ್ನ ಪ್ರೀತಿ ಕರುಣೆಯು ಜೀವಕ್ಕಿಂತ ಶ್ರೇಷ್ಠ ವಾದದ್ದು; ನನ್ನ ತುಟಿಗಳು ನಿನ್ನನ್ನು ಹೊಗಳುವವು.
- 4ನನ್ನ ಜೀವಮಾನದಲ್ಲೆಲ್ಲಾ ಹೀಗೆಯೇ ನಿನ್ನನ್ನು ಹಾಡಿಹರಸುತ್ತಾ ನಿನ್ನ ಹೆಸರೆತ್ತಿ ಕೈಮುಗಿಯುವೆನು.
- 5ನಾನು ರಾತ್ರಿ ಜಾವಗಳಲ್ಲಿ ನಿನ್ನನ್ನು ಧ್ಯಾನಿಸುವಾಗ
- 6ಸಾರದಿಂದಲೂ ಕೊಬ್ಬಿನಿಂದಲೂ ನನ್ನ ಪ್ರಾಣವು ತೃಪ್ತಿಯಾಗುವದು; ಆಗ ನನ್ನ ಬಾಯಿಯು ಉತ್ಸಾಹದ ತುಟಿಗಳಿಂದ ನಿನ್ನನ್ನು ಸ್ತುತಿಸುವದು.
- 7ನೀನು ನನ್ನ ಸಹಾಯಕನಾಗಿರುವದರಿಂದ ನಿನ್ನ ರೆಕ್ಕೆಗಳ ನೆರಳಿನಲ್ಲಿ ನಾನು ಉತ್ಸಾಹಪಡುವೆನು.
Cross references
- Psalm 36:7–9 ಕೀರ್ತನೆಗಳು 36:7–9ಓ ದೇವರೇ, ನಿನ್ನ ಪ್ರೀತಿ ಕರುಣೆಯು ಎಷ್ಟೋ ಶ್ರೇಷ್ಠ ವಾದದ್ದು! ಮನುಷ್ಯನ ಮಕ್ಕಳು ನಿನ್ನ ರೆಕ್ಕೆಗಳ ನೆರಳಿನಲ್ಲಿ ಭರವಸೆ ಇಡುತ್ತಾರೆ. ನಿನ್ನ ಆಲಯದ ಪರಿಪೂರ್ಣತೆಯಿಂದ ಅವರು ಸಂತೃಪ್ತಿಯಾಗುವರು; ನಿನ್ನ ಸಂಭ್ರಮದ ನದಿಯಿಂದ ಅವರಿಗೆ ಕುಡಿಯ ಮಾಡುವಿ. ನಿನ್ನ ಬಳಿಯಲ್ಲಿ ಜೀವದ ಬುಗ್ಗೆ ಉಂಟು. ನಿನ್ನ ತೇಜಸ್ಸಿನ ಬೆಳಕನ್ನು ನೋಡುವೆವು.
- Isaiah 25:6 ಯೆಶಾಯ 25:6ಸೈನ್ಯಗಳ ಕರ್ತನು ಈ ಪರ್ವತದಲ್ಲಿ ಎಲ್ಲಾ ಜನಗಳಿಗೆ ಸಾರವತ್ತಾದ (ಕೊಬ್ಬಿದ) ಔತಣವನ್ನೂ ಮಡ್ಡಿಗಟ್ಟಿದ ದ್ರಾಕ್ಷಾರಸದ ಔತಣವನ್ನೂ ಮೂಳೆ ಕೊಬ್ಬನ್ನೂ ಮಡ್ಡಿಗಟ್ಟಿದ ಮೇಲೆ ಶೋಧಿಸಿದ ದ್ರಾಕ್ಷಾ ರಸವನ್ನು ಸಿದ್ದಮಾಡುವನು.
- Psalm 17:15 ಕೀರ್ತನೆಗಳು 17:15ನಾನಾದರೋ ನೀತಿಯಲ್ಲಿ ನಿನ್ನ ಮುಖವನ್ನು ದೃಷ್ಟಿಸುವೆನು; ನಾನು ಎಚ್ಚರವಾದಾಗ ನಿನ್ನ ಹೋಲಿಕೆಯೊಂದಿಗೆ ತೃಪ್ತಿಹೊಂದುವೆನು.
- Psalm 43:4 ಕೀರ್ತನೆಗಳು 43:4ಆಗ ದೇವರ ಬಲಿಪೀಠದ ಬಳಿಗೂ ನನ್ನ ಅಧಿಕ ಸಂತೋಷವಾದ ದೇವರ ಬಳಿಗೂ ಬಂದು ಹೌದು, ಕಿನ್ನರಿಯಿಂದ, ನನ್ನ ದೇವರಾದ ಓ ದೇವರೇ, ನಿನ್ನನ್ನು ಕೊಂಡಾಡುವೆನು.ಓ ನನ್ನ ಪ್ರಾಣವೇ, ಕುಗ್ಗಿಹೋಗಿರುವದೇನು? ಯಾಕೆ ನನ್ನಲ್ಲಿ ವ್ಯಾಕುಲಪಡುತ್ತೀ? ದೇವರನ್ನು ನಿರೀಕ್ಷಿಸು. ನನ್ನ ಮುಖದ ಲಕ್ಷಣವೂ ನನ್ನ ದೇವರೂ ಆಗಿರುವಾತನನ್ನು ಇನ್ನೂ ಕೊಂಡಾಡುವೆನು.
- Psalm 118:14–15 ಕೀರ್ತನೆಗಳು 118:14–15ನನ್ನ ಬಲವೂ ಕೀರ್ತನೆಯೂ ಕರ್ತನೇ; ಆತನೇ ನನಗೆ ರಕ್ಷಣೆಯಾದನು. ರಕ್ಷಣೆಯ ಉತ್ಸಾಹದ ಧ್ವನಿಯು ನೀತಿವಂತರ ಗುಡಾರಗಳಲ್ಲಿ ಅದೆ; ಕರ್ತನ ಬಲಗೈ ಪರಾಕ್ರಮವನ್ನು ನಡಿಸುತ್ತದೆ.
- Psalm 71:23 ಕೀರ್ತನೆಗಳು 71:23ನಾನು ನಿನ್ನನ್ನು ಕೀರ್ತಿಸುವಾಗ ನನ್ನ ತುಟಿಗಳೂ ನೀನು ವಿಮೋಚಿಸಿದ ನನ್ನ ಪ್ರಾಣವೂ ಉತ್ಸಾಹ ಧ್ವನಿಗೈಯುವವು.ನನ್ನ ನಾಲಿಗೆಯು ಸಹ ದಿನವೆಲ್ಲಾ ನಿನ್ನ ನೀತಿಯನ್ನು ಮಾತನಾಡುವದು; ನನಗೆ ಕೇಡನ್ನು ಹುಡುಕುವವರು ನಾಚಿಕೊಂಡು ಲಜ್ಜೆಪಡುತ್ತಾರೆ.
- Psalm 135:3 ಕೀರ್ತನೆಗಳು 135:3ಕರ್ತನನ್ನು ಸ್ತುತಿಸಿರಿ; ಕರ್ತನು ಒಳ್ಳೆಯವನು; ಆತನ ಹೆಸರಿಗೆ ಸ್ತುತಿಗಳನ್ನು ಹಾಡಿರಿ; ಅದು ರಮ್ಯ ವಾದದ್ದು.
- Ezra 3:11–13 ಎಜ್ರನು 3:11–13ಆಗ ಅವರು ಕರ್ತನನ್ನು ಕೊಂಡಾಡಿ ಹೊಗಳಿ ಆತನು ಒಳ್ಳೆಯವನೆಂದೂ ಆತನ ಕೃಪೆಯು ಯುಗಯುಗಕ್ಕೂ ಇಸ್ರಾಯೇಲಿನ ಮೇಲೆ ಉಂಟೆಂದೂ ಪರಸ್ಪರವಾಗಿ ಹಾಡಿದರು. ಅವರು ಕರ್ತನನ್ನು ಹೊಗ ಳಿದಾಗ ಕರ್ತನ ಮಂದಿರದ ಅಸ್ತಿವಾರವನ್ನು ಹಾಕುವ ನಿಮಿತ್ತ ಜನರೆಲ್ಲರು ಮಹಾಧ್ವನಿಯಿಂದ ಆರ್ಭಟಿಸಿ ದರು. ಮೊದಲಿನ ಮಂದಿರವನ್ನು ನೋಡಿದ್ದ ವೃದ್ಧ ರಾದ ಯಾಜಕರಲ್ಲಿಯೂ ಲೇವಿಯರಲ್ಲಿಯೂ ತಂದೆ ಗಳ ಪ್ರಮುಖರಲ್ಲಿಯೂ ಅನೇಕರು ಈ ಮಂದಿರದ ಅಸ್ತಿವಾರವನ್ನು ತಮ್ಮ ದೃಷ್ಟಿಯ ಮುಂದೆ ಹಾಕುತ್ತಿರು ವಾಗ ದೊಡ್ಡ ಶಬ್ದದಿಂದ ಅತ್ತರು.ಆದರೆ ಅನೇ ಕರು ಸಂತೋಷದಿಂದ ಶಬ್ದವನ್ನೆತ್ತಿ ಆರ್ಭಟಿಸಿದರು. ಆದಕಾರಣ ಸಂತೋಷದಿಂದ ಆರ್ಭಟಿಸಿದ ಶಬ್ದ ಯಾವದೋ ಜನರ ಅಳುವಿಕೆಯ ಶಬ್ದ ಯಾವುದೋ ಎಂದು ಜನರು ತಿಳಿಯಲಾರದಾಗಿತ್ತು. ಜನರು ಮಹಾ ಧ್ವನಿಯಾಗಿ ಆರ್ಭಟಿಸಿದ್ದರಿಂದ ಅವರ ಶಬ್ದವು ದೂರದ ವರೆಗೆ ಕೇಳಲ್ಪಟ್ಟಿತ್ತು. ಆದರೆ ಅನೇ ಕರು ಸಂತೋಷದಿಂದ ಶಬ್ದವನ್ನೆತ್ತಿ ಆರ್ಭಟಿಸಿದರು. ಆದಕಾರಣ ಸಂತೋಷದಿಂದ ಆರ್ಭಟಿಸಿದ ಶಬ್ದ ಯಾವದೋ ಜನರ ಅಳುವಿಕೆಯ ಶಬ್ದ ಯಾವುದೋ ಎಂದು ಜನರು ತಿಳಿಯಲಾರದಾಗಿತ್ತು. ಜನರು ಮಹಾ ಧ್ವನಿಯಾಗಿ ಆರ್ಭಟಿಸಿದ್ದರಿಂದ ಅವರ ಶಬ್ದವು ದೂರದ ವರೆಗೆ ಕೇಳಲ್ಪಟ್ಟಿತ್ತು.
- Psalm 65:4 ಕೀರ್ತನೆಗಳು 65:4ನೀನು ಆದುಕೊಂಡು ನಿನ್ನ ಬಳಿಗೆ ಬರ ಮಾಡಿಕೊಳ್ಳುವವನು ಧನ್ಯನು; ನಿನ್ನ ಅಂಗಳಗಳಲ್ಲಿ ಅವನು ವಾಸವಾಗಿರುವನು. ನಿನ್ನ ಪರಿಶುದ್ಧ ಮಂದಿರ ವಾದ ನಿನ್ನ ಆಲಯದ ಒಳ್ಳೇದರಿಂದ ನಾವು ತೃಪ್ತರಾಗುವೆವು.
- Revelation 19:5–7 ಪ್ರಕಟನೆ 19:5–7ಆಮೇಲೆ ಸಿಂಹಾಸನದ ಕಡೆಯಿಂದ ಬಂದ ಒಂದು ಶಬ್ದವು--ದೇವರ ಸೇವಕರೆಲ್ಲರೇ, ಆತನಿಗೆ ಭಯ ಪಡುವ ಹಿರಿಕಿರಿಯರೇ, ನಮ್ಮ ದೇವರನ್ನು ಕೊಂಡಾಡಿರಿ ಎಂದು ಹೇಳಿತು. ತರುವಾಯ ಜನರ ದೊಡ್ಡ ಗುಂಪಿನ ಶಬ್ದದಂತೆಯೂ ಬಹಳ ನೀರುಗಳ ಘೋಷದಂತೆಯೂ ಗಟ್ಟಿಯಾದ ಗುಡುಗುಗಳ ಶಬ್ದದಂತೆಯೂ ಇದ್ದ ಒಂದು ಶಬ್ದವನ್ನು ನಾನು ಕೇಳಿದೆನು; ಅದು--ಹಲ್ಲೆಲೂಯಾ, ಸರ್ವಶಕ್ತನಾಗಿರುವ ದೇವರಾದ ಕರ್ತನು ಆಳುತ್ತಾನೆ. ಸಂತೋಷಪಡೋಣ, ಹರ್ಷಗೊಳ್ಳೋಣ, ಆತ ನನ್ನು ಘನಪಡಿಸೋಣ; ಯಾಕಂದರೆ ಕುರಿಮರಿಯಾದಾ ತನ ವಿವಾಹವು ಬಂತು; ಆತನಿಗೆ ವಿವಾಹವಾಗುವ ಕನ್ಯೆಯು ತನ್ನನ್ನು ಸಿದ್ಧಮಾಡಿಕೊಂಡಿದ್ದಾಳೆ ಎಂದು ಹೇಳಿತು.
- Jeremiah 31:4 ಯೆರೆಮೀಯ 31:4ಇಸ್ರಾ ಯೇಲಿನ ಕನ್ಯಾಸ್ತ್ರೀಯೇ, ನೀನು ಕಟ್ಟಲ್ಪಟ್ಟಿರುವ ಹಾಗೆ ತಿರುಗಿ ನಿನ್ನನ್ನು ಕಟ್ಟುವೆನು; ನಿನ್ನ ದಮ್ಮಡಿಗಳಿಂದ ತಿರುಗಿ ನಿನ್ನನ್ನು ಅಲಂಕರಿಸಿಕೊಂಡು ಸಂತೋಷಪಡು ವವರ ನಾಟ್ಯದಲ್ಲಿ ಹೊರಡುವಿ.
- Psalm 149:1–3 ಕೀರ್ತನೆಗಳು 149:1–3ಕರ್ತನನ್ನು ಸ್ತುತಿಸಿರಿ. ಕರ್ತನಿಗೆ ಹೊಸ ಹಾಡನ್ನೂ ಪರಿಶುದ್ಧರ ಸಭೆ ಯಲ್ಲಿ ಆತನ ಸ್ತೋತ್ರವನ್ನೂ ಹಾಡಿರಿ. ಇಸ್ರಾಯೇಲು ತನ್ನನ್ನು ಉಂಟುಮಾಡಿದಾತನಲ್ಲಿ ಸಂತೋಷಿಸಲಿ; ಚೀಯೋನಿನ ಮಕ್ಕಳು ತಮ್ಮ ಅರಸನಲ್ಲಿ ಉಲ್ಲಾಸಿಸಲಿ. ಆತನ ಹೆಸರನ್ನು ಕುಣಿಯುತ್ತಾ ಸ್ತುತಿಸಲಿ; ದಮ್ಮಡಿ ಯಿಂದಲೂ ಕಿನ್ನರಿಯಿಂದಲೂ ಆತನನ್ನು ಕೀರ್ತಿಸಲಿ.