Psalms · chapter 64 · verse 4
Psalm 64:4 in Kannada
ನಿರ್ದೋಷಿಯ ಕಡೆಗೆ ಗುಪ್ತವಾಗಿ ಫಕ್ಕನೆ ಎಸೆಯುವದಕ್ಕೆ ಅವರು ಭಯ ಪಡುವದಿಲ್ಲ.
Nirdoshiya kadege guptavaagi phakkane eseyuvadakke avaru bhaya paduvadilla.
Psalm 64:4 in English
- King James Version (KJV)
- That they may shoot in secret at the perfect: suddenly do they shoot at him, and fear not.
- World English Bible (WEB)
- to shoot innocent men from ambushes. They shoot at him suddenly and fearlessly.
- American Standard Version (ASV)
- That they may shoot in secret places at the perfect: Suddenly do they shoot at him, and fear not.
- Bible in Basic English (BBE)
- So that in secret they may let loose their arrows at the upright, suddenly and unseen.
- Darby Translation (DBY)
- That they may shoot in secret at the perfect: suddenly do they shoot at him, and fear not.
- Webster's Bible (WBS)
- That they may shoot in secret at the perfect: suddenly do they shoot at him, and fear not.
- Young's Literal Translation (YLT)
- To shoot in secret places the perfect, Suddenly they shoot him, and fear not.
Read in context
- 2ದುರ್ಮಾರ್ಗಿಗಳ ಗುಪ್ತವಾದ ಆಲೋಚನೆಗಳಿಗೂ ದುಷ್ಟರ ಹೊಂಚಿಗೂ ನನ್ನನ್ನು ಮರೆಮಾಡು.
- 3ಅವರು ತಮ್ಮ ನಾಲಿಗೆಯನ್ನು ಕತ್ತಿಯ ಹಾಗೆ ಮಸೆಯುತ್ತಾರೆ. ಕಹಿ ಮಾತುಗಳೆಂಬ ಬಾಣಗಳನ್ನು ಹೂಡುತ್ತಾರೆ.
- 4ನಿರ್ದೋಷಿಯ ಕಡೆಗೆ ಗುಪ್ತವಾಗಿ ಫಕ್ಕನೆ ಎಸೆಯುವದಕ್ಕೆ ಅವರು ಭಯ ಪಡುವದಿಲ್ಲ.
- 5ಕೆಟ್ಟಕಾರ್ಯದಲ್ಲಿ ಅವರು ತಮ್ಮನ್ನು ತಾವೇ ಪ್ರೋತ್ಸಾಹ ಮಾಡಿಕೊಳ್ಳುತ್ತಾರೆ; ಬಲೆಗಳನ್ನು ಒಡ್ಡು ವದಕ್ಕೆ ಮಾತನಾಡುತ್ತಾ--ನಮ್ಮನ್ನು ನೋಡುವವ ರಾರೆಂದು ಹೇಳುತ್ತಾರೆ.
- 6ಅವರು ದ್ರೋಹಗಳನ್ನು ಹುಡುಕುತ್ತಾರೆ; ಎಚ್ಚರಿಕೆಯಿಂದ ಹುಡುಕಿದ್ದನ್ನು ಅವರು ಪೂರೈಸುತ್ತಾರೆ; ಅವರೆಲ್ಲರ ಅಂತರಗವೂ ಹೃದಯವೂ ಅಶೋದ್ಯವಾಗಿವೆ.
Cross references
- Psalm 55:19 ಕೀರ್ತನೆಗಳು 55:19ಅನಾದಿಯಿಂದ ಇರುವ ದೇವರು ಲಕ್ಷ್ಯವಿಟ್ಟು ಅವರನ್ನು ಕುಗ್ಗಿಸುವನು. ಸೆಲಾ. ಅವರಲ್ಲಿ ಮಾರ್ಪಾಡುವಿಕೆಗಳು ಇಲ್ಲ; ಆದಕಾರಣ ದೇವರಿಗೆ ಅವರು ಭಯಪಡುವದಿಲ್ಲ.
- 1 Peter 2:22–23 1 ಪೇತ್ರನು 2:22–23ಆತನು ಯಾವ ಪಾಪವನ್ನೂ ಮಾಡಲಿಲ್ಲ, ಆತನ ಬಾಯಲ್ಲಿ ಯಾವ ವಂಚನೆಯೂ ಸಿಕ್ಕಲಿಲ್ಲ. ಬೈಯುವವರನ್ನು ಆತನು ಪ್ರತಿಯಾಗಿ ಬೈಯಲಿಲ್ಲ; ಆತನು ಬಾಧೆಯನ್ನನು ಭವಿಸಿದಾಗ ಯಾರನ್ನೂ ಬೆದರಿಸದೆ ನ್ಯಾಯವಾಗಿ ತೀರ್ಪುಮಾಡುವಾತನಿಗೆ ತನ್ನನ್ನು ಒಪ್ಪಿಸಿದನು.
- Psalm 11:2 ಕೀರ್ತನೆಗಳು 11:2ಇಗೋ, ದುಷ್ಟರು ಬಿಲ್ಲು ಬೊಗ್ಗಿಸಿ ಯಥಾರ್ಥ ಹೃದಯವುಳ್ಳವರ ಮೇಲೆ ಗುಪ್ತವಾಗಿ ಎಸೆಯುವದಕ್ಕೆ ತಮ್ಮ ಬಾಣವನ್ನು ಬಿಲ್ಲಿಗೆ ಹೂಡಿ ಸಿದ್ಧಮಾಡುತ್ತಾರೆ.
- Psalm 10:8–9 ಕೀರ್ತನೆಗಳು 10:8–9ಅವನು ಹೊಂಚು ಹಾಕುವ ಗ್ರಾಮಗಳ ಸ್ಥಳಗಳಲ್ಲಿ ಕೂತುಕೊಂಡು ಗುಪ್ತವಾದ ಸ್ಥಳಗಳಲ್ಲಿ ನಿರಪರಾಧಿಯನ್ನು ಕೊಲ್ಲು ತ್ತಾನೆ. ಅವನ ಕಣ್ಣುಗಳು ಗತಿಯಿಲ್ಲದವನನ್ನು ಹೊಂಚಿ ನೋಡು ತ್ತವೆ; ಗವಿಯಲ್ಲಿರುವ ಸಿಂಹದ ಹಾಗೆ ಮರೆಯಲ್ಲಿ ಹೊಂಚು ಹಾಕುತ್ತಾನೆ; ಬಡವನನ್ನು ಹಿಡಿ ಯುವದಕ್ಕೆ ಹೊಂಚು ಹಾಕುತ್ತಾನೆ; ಬಡವನನ್ನು ತನ್ನ ಬಲೆಯಲ್ಲಿ ಎಳೆದು ಹಿಡಿಯುತ್ತಾನೆ.
- 1 Samuel 19:10 1 ಸಮುವೇಲನು 19:10ಆಗ ಸೌಲನು ದಾವೀದನನ್ನು ಈಟಿಯಿಂದ ಗೋಡೆಗೆ ಹತ್ತಿಕೊಳ್ಳುವ ಹಾಗೆ ಹೊಡೆಯಬೇಕೆಂದು ಯತ್ನಿಸಿದನು; ಆದರೆ ಇವನು ಸೌಲನ ಎದುರಿನಿಂದ ತಪ್ಪಿಸಿಕೊಂಡನು. ಈಟಿಯು ಗೋಡೆಯಲ್ಲಿ ಹತ್ತಿ ಕೊಳ್ಳುವಂತೆ ಅವನು ಹೊಡೆದನು. ದಾವೀದನು ಆ ರಾತ್ರಿಯಲ್ಲಿ ಓಡಿಹೋಗಿ ತಪ್ಪಿಸಿಕೊಂಡನು.
- 1 Samuel 18:11 1 ಸಮುವೇಲನು 18:11ಆಗ ಸೌಲನು ದಾವೀದನನ್ನು ಗೋಡೆಗೆ ಹತ್ತಿಕೊಳ್ಳುವ ಹಾಗೆ ಹೊಡೆಯುವೆನೆಂದು ಈಟಿಯನ್ನು ಎಸೆದನು. ಆದರೆ ದಾವೀದನು ಎರಡು ಸಾರಿ ಅವನ ಸಮ್ಮುಖದಿಂದ ತಪ್ಪಿಸಿಕೊಂಡನು.
- 2 Samuel 15:14 2 ಸಮುವೇಲನು 15:14ಆಗ ದಾವೀದನು ಯೆರೂಸಲೇಮಿನಲ್ಲಿ ತನ್ನ ಹತ್ತಿರ ಇರುವ ತನ್ನ ಎಲ್ಲಾ ಸೇವಕರಿಗೆ--ಏಳಿರಿ, ನಾವು ಓಡಿ ಹೋಗೋಣ; ಇಲ್ಲದಿದ್ದರೆ ಅಬ್ಷಾಲೋಮನ ಕೈ ಯಿಂದ ತಪ್ಪಿಸಿಕೊಂಡು ಹೋಗಲಾರೆವು; ಅವನು ಪಕ್ಕನೆ ನಮ್ಮನ್ನು ಹಿಡಿದು ನಮ್ಮ ಮೇಲೆ ಕೇಡನ್ನು ಬರಮಾಡಿ ಪಟ್ಟಣವನ್ನು ಕತ್ತಿಯಿಂದ ಹೊಡೆಯದ ಹಾಗೆ ಹೊರಟು ಹೋಗುವದಕ್ಕೆ ತ್ವರೆಮಾಡಿರಿ ಅಂದನು.
- John 19:6 ಯೋಹಾನನು 19:6ಪ್ರಧಾನಯಾಜಕರೂ ಅಧಿಕಾರಿಗಳೂ ಆತನನ್ನು ನೋಡಿದಾಗ--ಅವನನ್ನು ಶಿಲುಬೆಗೆ ಹಾಕಿಸು, ಅವ ನನ್ನು ಶಿಲುಬೆಗೆ ಹಾಕಿಸು ಎಂದು ಕೂಗಿದರು. ಅದಕ್ಕೆ ಪಿಲಾತನು ಅವರಿಗೆ--ನೀವೇ ಆತನನ್ನು ತಕ್ಕೊಂಡು ಹೋಗಿ ಶಿಲುಬೆಗೆ ಹಾಕಿರಿ; ಯಾಕಂದರೆ ನಾನು ಆತನಲ್ಲಿ ಯಾವ ಅಪರಾಧವನ್ನೂ ಕಾಣಲಿಲ್ಲ ಅಂದನು.
- Habakkuk 3:14 ಹಬಕ್ಕೂಕ 3:14ಅವನ ದೊಣ್ಣೆಗಳಿಂದಲೇ ತನ್ನ ಹಳ್ಳಿಗಳ ಮುಖ್ಯಸ್ಥನನ್ನು ಹೊಡೆದಿದ್ದೀ; ಅವರು ನನ್ನನ್ನು ಚದುರಿಸುವದಕ್ಕೆ ಬಿರುಗಾಳಿಯಂತೆ ಬಂದರು; ಬಡವರನ್ನು ಅಂತರಂಗದಲ್ಲಿ ನುಂಗಿಬಿಡುವ ಹಾಗೆ ಅವರಿಗೆ ಸಂತೋಷವು ಇರುವದು.
- Psalm 59:3–4 ಕೀರ್ತನೆಗಳು 59:3–4ಓ ಕರ್ತನೇ, ನನ್ನ ಅಪರಾಧಕ್ಕಾಗಿ ಇಲ್ಲವೆ ನನ್ನ ಪಾಪಕ್ಕಾಗಿ ಅಲ್ಲ; ಆದರೂ ಇಗೋ, ಅವರು ನನ್ನ ಪ್ರಾಣಕ್ಕೆ ಹೊಂಚುಹಾಕುತ್ತಾರೆ; ಪರಾಕ್ರಮಶಾಲಿಗಳು ನನಗೆ ವಿರೋಧವಾಗಿ ಕೂಡಿ ಕೊಳ್ಳುತ್ತಾರೆ. ನನ್ನಲ್ಲಿ ತಪ್ಪು ಇಲ್ಲದಿದ್ದರೂ ಅವರು ಓಡಾಡಿ ಸಿದ್ಧರಾಗುತ್ತಾರೆ; ನನಗೆ ಸಹಾಯ ಮಾಡುವದಕ್ಕೆ ಎಚ್ಚತ್ತು ನೋಡು.
- Nehemiah 4:11 ನೆಹೆಮೀಯ 4:11ನಮ್ಮ ವೈರಿಗಳು--ಅವರು ತಿಳಿಯದ ಹಾಗೆಯೂ ನೋಡದ ಹಾಗೆಯೂ ನಾವು ಅವರ ನಡುವೆ ಬಂದು ಅವರನ್ನು ಕೊಂದುಹಾಕಿ ಕೆಲಸವನ್ನು ನಿಲ್ಲಿಸಿ ಬಿಡುವೆವು ಅಂದರು.
- Psalm 64:7 ಕೀರ್ತನೆಗಳು 64:7ದೇವರು ಅವರ ಕಡೆಗೆ ಬಾಣವನ್ನು ಎಸೆಯು ವಾಗ ಫಕ್ಕನೆ ಅವರಿಗೆ ಗಾಯಗಳಾಗುವವು.