Psalms · chapter 65 · verse 9
Psalm 65:9 in Kannada
ನೀನು ಭೂಮಿಯನ್ನು ಕಟಾಕ್ಷಿಸಿ ಅದನ್ನು ತೋಯಿಸಿ ನೀರಿನಿಂದ ತುಂಬಿರುವಂತೆ ದೇವರ ನದಿ ಯಿಂದ ಅದನ್ನು ಚೆನ್ನಾಗಿ ಹದಗೊಳಿಸುತ್ತೀ; ಹೀಗೆ ಭೂಮಿಯನ್ನು ಸಿದ್ಧಮಾಡಿ ಮನುಷ್ಯರಿಗೆ ಧಾನ್ಯವನ್ನು ಒದಗಿಸುತ್ತೀ.
Neenu bhoomiyannu kataakshisi adannu toyisi neerininda tumbiruvante devara nadi yinda adannu chennaagi hadagolisuttee; heege bhoomiyannu siddhamaadi manushyarige dhaanyavannu odagisuttee.
Psalm 65:9 in English
- King James Version (KJV)
- Thou visitest the earth, and waterest it: thou greatly enrichest it with the river of God, [which] is full of water: thou preparest them corn, when thou hast so provided for it.
- World English Bible (WEB)
- You visit the earth, and water it. You greatly enrich it. The river of God is full of water. You provide them grain, for so you have ordained it.
- American Standard Version (ASV)
- Thou visitest the earth, and waterest it, Thou greatly enrichest it; The river of God is full of water: Thou providest them grain, when thou hast so prepared the earth.
- Bible in Basic English (BBE)
- You have given your blessing to the earth, watering it and making it fertile; the river of God is full of water: and having made it ready, you give men grain.
- Darby Translation (DBY)
- Thou hast visited the earth, thou hast watered it; thou greatly enrichest it: the river of God is full of water; thou providest their corn, when thou hast so prepared it:
- Webster's Bible (WBS)
- Thou visitest the earth, and waterest it: thou greatly enrichest it with the river of God, [which] is full of water: thou preparest them corn, when thou hast so provided for it.
- Young's Literal Translation (YLT)
- Thou hast inspected the earth, and waterest it, Thou makest it very rich, the rivulet of God [is] full of water, Thou preparest their corn, When thus Thou dost prepare it,
Read in context
- 7ಸಮುದ್ರ ಗಳ ಘೋಷವನ್ನೂ ಅವುಗಳ ತೆರೆಗಳ ಘೋಷವನ್ನೂ ಪ್ರಜೆಗಳ ಕೋಲಾಹಲವನ್ನೂ ಅಣಗಿಸುವಾತನೇ,
- 8ಭೂಮಿಯ ಕಟ್ಟಕಡೆಗಳಲ್ಲಿ ವಾಸಿಸುವವರು ಸಹ ನಿನ್ನ ಗುರುತುಗಳಿಗೆ ಭಯಪಡುವರು. ಉದಯಾಸ್ತ ಮಾನ ಸಮಯಗಳನ್ನು ಉತ್ಸಾಹಧ್ವನಿಗೈಯುವಂತೆ ನೀನು ಮಾಡುತ್ತೀ.
- 9ನೀನು ಭೂಮಿಯನ್ನು ಕಟಾಕ್ಷಿಸಿ ಅದನ್ನು ತೋಯಿಸಿ ನೀರಿನಿಂದ ತುಂಬಿರುವಂತೆ ದೇವರ ನದಿ ಯಿಂದ ಅದನ್ನು ಚೆನ್ನಾಗಿ ಹದಗೊಳಿಸುತ್ತೀ; ಹೀಗೆ ಭೂಮಿಯನ್ನು ಸಿದ್ಧಮಾಡಿ ಮನುಷ್ಯರಿಗೆ ಧಾನ್ಯವನ್ನು ಒದಗಿಸುತ್ತೀ.
- 10ಉಳುವೆಯ ಸಾಲುಗಳನ್ನು ಸಮೃದ್ಧಿ ಯಾಗಿ ತ್ಯಾವಿಸುತ್ತೀ; ನೇಗಿಲ ಸಾಲುಗಳನ್ನು ಸಮಮಾಡುತ್ತೀ; ಸುರಿಯುವ ಮಳೆಯಿಂದ ಅದನ್ನು ಮೃದು ಮಾಡುತ್ತೀ; ಅದರ ಮೊಳಿಕೆಯನ್ನು ಆಶೀರ್ವದಿಸುತ್ತೀ.
- 11ವರುಷಕ್ಕೆ ನಿನ್ನ ಸುಭಿಕ್ಷಕಿರೀಟ ಇಡುತ್ತೀ; ನಿನ್ನ ಮಾರ್ಗಗಳಲ್ಲಿ ಸಮೃದ್ಧಿಯನ್ನು ಸುರಿಸುತ್ತೀ.
Cross references
- Psalm 46:4 ಕೀರ್ತನೆಗಳು 46:4ಒಂದು ನದಿ ಅದೆ; ಅದರ ಕಾಲುವೆಗಳು ದೇವರ ಪಟ್ಟಣವನ್ನೂ ಮಹೋನ್ನತನ ಗುಡಾರಗಳ ಪರಿಶುದ್ಧ ಸ್ಥಳವನ್ನೂ ಸಂತೋಷಪಡಿಸುತ್ತವೆ.
- Revelation 22:1 ಪ್ರಕಟನೆ 22:1ಆಮೇಲೆ ಅವನು ಸ್ಫಟಿಕದಂತೆ ಸ್ವಚ್ಛವಾದ ಮತ್ತು ಶುದ್ಧವಾದ ಜೀವಜಲದ ನದಿ ಯನ್ನು ನನಗೆ ತೋರಿಸಿದನು; ಅದು ದೇವರ ಮತ್ತು ಕುರಿಮರಿಯಾದಾತನ ಸಿಂಹಾಸನದಿಂದ ಹೊರಡುವ ದಾಗಿತ್ತು.
- Jeremiah 5:24 ಯೆರೆಮೀಯ 5:24ಇಲ್ಲವೆ ತಮ್ಮ ಹೃದಯದಲ್ಲಿ--ಮುಂಗಾರು ಹಿಂಗಾರು ಮಳೆಯನ್ನು ಅದರದರ ಕಾಲದಲ್ಲಿ ನಮಗೆ ಕೊಡು ವಂಥ ಸುಗ್ಗಿಗೆ ನೇಮಕವಾದ ವಾರಗಳಲ್ಲಿ ನಮ್ಮನ್ನು ಕಾಪಾಡುವಂಥ ನಮ್ಮ ದೇವರಾದ ಕರ್ತನಿಗೆ ಭಯ ಪಡೋಣ ಎಂದು ಅಂದುಕೊಳ್ಳುವದಿಲ್ಲ.
- Psalm 104:13–15 ಕೀರ್ತನೆಗಳು 104:13–15ಬೆಟ್ಟಗಳಿಗೆ ತನ್ನ ಉಪ್ಪರಿಗೆ ಗಳೊಳಗಿಂದ ನೀರು ಹಾಕುತ್ತಾನೆ; ತನ್ನ ಕೆಲಸಗಳ ಫಲದಿಂದ ಭೂಮಿಯು ತೃಪ್ತಿಯಾಗುತ್ತದೆ. ಆತನು ಪಶುಗಳಿಗೋಸ್ಕರ ಹುಲ್ಲನ್ನೂ ಮನುಷ್ಯನ ಸೇವೆ ಗೋಸ್ಕರ ಪಲ್ಯಗಳನ್ನೂ ಮೊಳಿಸುತ್ತಾನೆ; ಹೀಗೆ ಭೂಮಿಯೊಳಗಿಂದ ಆಹಾರವನ್ನು ಬರಮಾಡುತ್ತಾನೆ. ದ್ರಾಕ್ಷಾರಸವು ಮನುಷ್ಯನ ಹೃದಯವನ್ನು ಸಂತೋಷ ಪಡಿಸುತ್ತದೆ; ಎಣ್ಣೆಯು ಅವನ ಮುಖವನ್ನು ಪ್ರಕಾ ಶಿಸುವಂತೆ ಮಾಡುತ್ತದೆ; ರೊಟ್ಟಿಯು ಮನುಷ್ಯನ ಹೃದಯವನ್ನು ಬಲಪಡಿಸುತ್ತದೆ.
- Psalm 68:9–10 ಕೀರ್ತನೆಗಳು 68:9–10ಓ ದೇವರೇ, ನೀನು ಸಮೃದ್ಧಿಯಾಗಿ ಮಳೆಯನ್ನು ಸುರಿಸಿದಿ; ಇದರಿಂದ ದಣಿದ ನಿನ್ನ ಬಾಧ್ಯ ತೆಯನ್ನು ನೀನು ಸ್ಥಿರಪಡಿಸಿದಿ. ನಿನ್ನ ಸಭೆಯು ಅದರಲ್ಲಿ ವಾಸಮಾಡಿತು; ಓ ದೇವರೇ, ನಿನ್ನ ಸಮೃದ್ಧಿ ಯಿಂದ ಬಡವರನ್ನು ತೃಪ್ತಿಪಡಿಸಿದಿ.
- Joel 2:23–26 ಯೋವೇಲ 2:23–26ಹಾಗಾದರೆ ಚೀಯೋನಿನ ಮಕ್ಕಳೇ, ನಿಮ್ಮ ದೇವ ರಾದ ಕರ್ತನಲ್ಲಿ ಉಲ್ಲಾಸಿಸಿ, ಸಂತೋಷವಾಗಿರ್ರಿ; ನಿಮಗೆ ಮುಂಗಾರು ಮಳೆಯನ್ನು ಸರಿಯಾಗಿ ಕೊಡು ತ್ತಾನೆ; ಮುಂಗಾರು ಹಿಂಗಾರು ಮಳೆಗಳನ್ನು ಮುಂಚಿನ ಹಾಗೆ ನಿಮಗೆ ಸುರಿಸುತ್ತಾನೆ. ಕಣಗಳು ಧಾನ್ಯದಿಂದ ತುಂಬುವವು; ತೊಟ್ಟಿಗಳು ದ್ರಾಕ್ಷಾರಸದಿಂದಲೂ ಎಣ್ಣೆಯಿಂದಲೂ ತುಂಬಿ ತುಳುಕುವವು. ನಾನು ನಿಮ್ಮಲ್ಲಿ ಕಳುಹಿಸದಂಥ, ನನ್ನ ದೊಡ್ಡ ಸೈನ್ಯವಾದ ಹುಳವೂ ಕಂಬಳಿ ಹುಳವೂ ಒಳಗೆ ನಾಶಮಾಡುವ ಹುಳವೂ ಮಿಡತೆಗಳೂ ತಿಂದ ವರುಷಗಳಿಗೆ ಬದಲಾಗಿ ನಿಮಗೆ ಕೊಡುವೆನು. ಸಮೃದ್ಧಿಯಾಗಿ ಉಂಡು, ತೃಪ್ತಿಪಟ್ಟು ನಿಮ್ಮಲ್ಲಿ ಅದ್ಭುತದಿಂದ ನಡಿಸಿದ ನಿಮ್ಮ ದೇವರಾದ ಕರ್ತನ ಹೆಸರನ್ನು ಸ್ತುತಿಸುವಿರಿ; ನನ್ನ ಜನರು ಎಂದೆಂದಿಗೂ ನಾಚಿಕೆಪಡರು.
- Psalm 147:8–9 ಕೀರ್ತನೆಗಳು 147:8–9ಆತನು ಆಕಾಶವನ್ನು ಮೋಡಗಳಿಂದ ಮುಚ್ಚುತ್ತಾನೆ; ಭೂಮಿಗೆ ಮಳೆ ಯನ್ನು ಸಿದ್ಧಮಾಡುತ್ತಾನೆ, ಬೆಟ್ಟಗಳಲ್ಲಿ ಹುಲ್ಲನ್ನು ಬೆಳೆಸುತ್ತಾನೆ. ಆತನು ಪಶುಗಳಿಗೂ ಕೂಗುವ ಕಾಗೆ ಮರಿಗಳಿಗೂ ಆಹಾರ ಕೊಡುತ್ತಾನೆ.
- Ruth 1:6 ರೂತಳು 1:6ಆದರೆ ಕರ್ತನು ತನ್ನ ಜನರಿಗೆ ರೊಟ್ಟಿಯನ್ನು ಕೊಡುವ ಹಾಗೆ ಅವರನ್ನು ದರ್ಶಿಸಿದನೆಂದು ಅವಳು ಮೋವಾಬ್ ದೇಶದಲ್ಲಿ ಕೇಳಿದ್ದರಿಂದ ಅವಳು ತನ್ನ ಸೊಸೆಯರ ಸಂಗಡ ಮೋವಾಬ್ ದೇಶದಿಂದ ಯೆಹೂದ ದೇಶಕ್ಕೆ ತಿರಿಗಿ ಹೋಗುವದಕ್ಕೋಸ್ಕರ ಪ್ರಯಾಣವಾಗಿ ತಾನು ಇದ್ದ ಸ್ಥಳವನ್ನು ಬಿಟ್ಟು ಹೊರ ಟಳು.
- Deuteronomy 11:11–12 ಧರ್ಮೋಪದೇಶಕಾಂಡ 11:11–12ಆದರೆ ನೀವು ಸ್ವಾಧೀನಮಾಡಿ ಕೊಳ್ಳುವದಕ್ಕೆ ಹೋಗುವ ದೇಶವು ಬೆಟ್ಟಗಳೂ ತಗ್ಗು ಗಳೂ ಉಳ್ಳ ದೇಶವೇ; ಅದು ಆಕಾಶದ ಮಳೆಯಿಂದ ನೀರು ಕುಡಿಯುತ್ತದೆ; ಅದು ನಿನ್ನ ದೇವರಾದ ಕರ್ತನು ಪರಾಂಬರಿಸುವ ದೇಶವೇ; ವರುಷದ ಆರಂಭ ದಿಂದ ಅಂತ್ಯದ ವರೆಗೂ ಯಾವಾಗಲೂ ನಿನ್ನ ದೇವ ರಾದ ಕರ್ತನ ಕಣ್ಣುಗಳು ಅದರ ಮೇಲೆ ಇವೆ.
- Job 5:10–11 ಯೋಬನು 5:10–11ಭೂಮಿಯ ಮೇಲೆ ಮಳೆಯನ್ನು ಸುರಿಸುತ್ತಾನೆ; ಹೊಲಗಳ ಮೇಲೆ ನೀರನ್ನು ಕಳುಹಿಸುತ್ತಾನೆ; ಹೀಗೆ ತಗ್ಗಿದವರನ್ನು ಉನ್ನತದಲ್ಲಿಡುತ್ತಾನೆ. ದುಃಖವುಳ್ಳವರು ರಕ್ಷಣೆಗೆ ಎತ್ತ ಲ್ಪಡುತ್ತಾರೆ.
- Acts 14:17 ಅಪೊಸ್ತಲರ ಕೃತ್ಯಗಳು 14:17ಆದರೂ ಆತನು ತನ್ನ ವಿಷಯದಲ್ಲಿ ಸಾಕ್ಷಿಕೊಡದೆ ಇರಲಿಲ್ಲ; ಆಕಾಶದಿಂದ ಮಳೆಯನ್ನೂ ಸುಗ್ಗೀಕಾಲ ಗಳನ್ನೂ ದಯಪಾಲಿಸಿ ನಮಗೆ ಆಹಾರ ಕೊಟ್ಟು ನಮ್ಮ ಹೃದಯಗಳನ್ನು ಆನಂದದಿಂದ ತುಂಬಿಸಿ ಒಳ್ಳೇದನ್ನು ಮಾಡುತ್ತಾ ಬಂದನು ಎಂದು ಹೇಳಿದರು.
- Leviticus 26:4 ಯಾಜಕಕಾಂಡ 26:4ನಿಮಗೆ ಮಳೆಯನ್ನು ತಕ್ಕಕಾಲದಲ್ಲಿ ಸುರಿಸುವೆನು. ಆಗ ಭೂಮಿಯು ಅದರ ಬೆಳೆಯನ್ನು ಕೊಡುವದು. ಹೊಲದ ಮರಗಳು ಅವುಗಳ ಫಲವನ್ನು ಕೊಡುವವು.
Original words (Hebrew)
- visitest · H6485פָּקַד pâqad
- earth · H776אֶרֶץ ʼerets
- waterest · H7783שׁוּק shûwq
- greatly · H7227רַב rab
- enrichest · H6238עָשַׁר ʻâshar
- river · H6388פֶּלֶג peleg
- God · H430אֱלֹהִים ʼĕlôhîym
- full · H4390מָלֵא mâlêʼ
- water · H4325מַיִם mayim
- preparest · H3559כּוּן kûwn
- corn · H1715דָּגָן dâgân
- provided · H3559כּוּן kûwn