Psalms · chapter 66 · verse 12
Psalm 66:12 in Kannada
ಮನುಷ್ಯರು ನಮ್ಮ ತಲೆಗಳ ಮೇಲೆ ಸವಾರಿ ಮಾಡುವಂತೆ ಮಾಡಿದ್ದೀ. ನಾವು ಬೆಂಕಿಯಲ್ಲಿಯೂ ನೀರಿನಲ್ಲಿಯೂ ದಾಟಿದೆವು; ಆದರೆ ನೀನು ನಮ್ಮನ್ನು ಐಶ್ವರ್ಯದ ಸ್ಥಳಕ್ಕೆ ಬರಮಾಡಿದ್ದೀ;
Manushyaru namma talegala mele savaari maaduvante maadiddee. Naavu benkiyalliyoo neerinalliyoo daatidevu; aadare neenu nammannu aishvaryada sthalakke baramaadiddee;
Psalm 66:12 in English
- King James Version (KJV)
- Thou hast caused men to ride over our heads; we went through fire and through water: but thou broughtest us out into a wealthy [place].
- World English Bible (WEB)
- You allowed men to ride over our heads. We went through fire and through water, but you brought us to the place of abundance.
- American Standard Version (ASV)
- Thou didst cause men to ride over our heads; We went through fire and through water; But thou broughtest us out into a wealthy place.
- Bible in Basic English (BBE)
- You let men go driving over our heads; we went through fire and through water; but you took us out into a wide place.
- Darby Translation (DBY)
- Thou didst cause men to ride over our head; we went through fire and through water: but thou hast brought us out into abundance.
- Webster's Bible (WBS)
- Thou hast caused men to ride over our heads; we went through fire and through water: but thou broughtest us out into a wealthy [place] .
- Young's Literal Translation (YLT)
- Thou hast caused man to ride at our head. We have entered into fire and into water, And Thou bringest us out to a watered place.
Read in context
- 10ಓ ದೇವರೇ, ನೀನು ನಮ್ಮನ್ನು ಶೋಧಿಸಿದ್ದೀ. ಬೆಳ್ಳಿಯನ್ನು ಪುಟಕ್ಕೆ ಹಾಕುವ ಪ್ರಕಾರ ನಮ್ಮನ್ನು ಶೋಧಿಸಿದ್ದೀ.
- 11ನೀನು ಬಲೆಯೊಳಗೆ ನಮ್ಮನ್ನು ಬರಮಾಡಿದ್ದಲ್ಲದೆ ನಮ್ಮ ಸೊಂಟಗಳ ಮೇಲೆ ವ್ಯಥೆಯನ್ನು ಹೊರಿಸಿದ್ದೀ;
- 12ಮನುಷ್ಯರು ನಮ್ಮ ತಲೆಗಳ ಮೇಲೆ ಸವಾರಿ ಮಾಡುವಂತೆ ಮಾಡಿದ್ದೀ. ನಾವು ಬೆಂಕಿಯಲ್ಲಿಯೂ ನೀರಿನಲ್ಲಿಯೂ ದಾಟಿದೆವು; ಆದರೆ ನೀನು ನಮ್ಮನ್ನು ಐಶ್ವರ್ಯದ ಸ್ಥಳಕ್ಕೆ ಬರಮಾಡಿದ್ದೀ;
- 13ನಾನು ದಹನ ಬಲಿಗಳೊಂದಿಗೆ ನಿನ್ನ ಆಲಯಕ್ಕೆ ಹೋಗುವೆನು.
- 14ನನ್ನ ಇಕ್ಕಟ್ಟಿನಲ್ಲಿ ತುಟಿಗಳು ಉಚ್ಚರಿಸಿದಂಥ, ಬಾಯಿ ನುಡಿದಂಥ, ಹರಕೆಗಳನ್ನು ನಾನು ನಿನಗೆ ಸಲ್ಲಿಸುವೆನು.
Cross references
- Isaiah 43:1–2 ಯೆಶಾಯ 43:1–2ಈಗಲಾದರೋ ಓ ಯಾಕೋಬೇ, ಇಸ್ರಾಯೇಲೇ ನಿನ್ನನ್ನು ಸೃಷ್ಟಿಸಿದಾತನೂ ರೂಪಿಸಿದಾತನೂ ಆದ ಕರ್ತನು ಇಂತೆನ್ನುತ್ತಾನೆ--ಹೆದರಬೇಡ, ನಾನು ನಿನ್ನನ್ನು ವಿಮೋಚಿಸಿದೆನಲ್ಲಾ ನಿನ್ನ ಹೆಸರು ಹಿಡಿದು ಕರೆದೆನಲ್ಲಾ; ನೀನು ನನ್ನವನೇ. ನೀನು ಜಲರಾಶಿಯನ್ನು ದಾಟಿ ಹೋಗುವಾಗ ನಾನು ನಿನ್ನೊಂದಿಗಿರುವೆನು; ನದಿಗಳನ್ನು ನೀನು ದಾಟುವಾಗ ಅವು ನಿನ್ನನ್ನು ಮುಳುಗಿಸುವದಿಲ್ಲ; ಬೆಂಕಿಯಲ್ಲಿ ನೀನು ನಡೆಯುವಾಗ ಸುಡಲ್ಪಡುವದಿಲ್ಲ; ಇಲ್ಲವೆ ಜ್ವಾಲೆಯು ನಿನ್ನನ್ನು ದಹಿಸದು.
- Isaiah 51:23 ಯೆಶಾಯ 51:23ಆದರೆ ನಾವು ಹಾದುಹೋಗುವಂತೆ ಬಗ್ಗಿಕೋ ಎಂದು ನಿನ್ನ ಪ್ರಾಣಕ್ಕೆ ಹೇಳಿ, ನಿನ್ನನ್ನು ಹಿಂಸಿಸಿದವನ ಕೈಯಲ್ಲಿ ಅದನ್ನು ನಾನು ಇಡುತ್ತೇನೆ; ನೀನು ಹಾದುಹೋಗುವ ವರಿಗೆ ನಿನ್ನ ಶರೀರವನ್ನು ನೆಲದಂತೆಯೂ ಬೀದಿ ಯಂತೆಯೂ ಇಟ್ಟಿಯಲ್ಲಾ.
- James 5:11 ಯಾಕೋಬನು 5:11ಇಗೋ, ತಾಳಿಕೊಳ್ಳುವವರನ್ನು ಧನ್ಯರೆಂದು ನಾವು ಎಣಿಸುತ್ತೇವಲ್ಲವೇ. ನೀವು ಯೋಬನಲ್ಲಿದ್ದ ತಾಳ್ಮೆಯ ವಿಷಯವಾಗಿ ಕೇಳಿ ಕರ್ತನು ಅವನಿಗೆ ಅಂತ್ಯದಲ್ಲಿ ಮಾಡಿದ್ದನ್ನು ನೋಡಿ ಕರ್ತನು ಬಹಳ ಕರುಣೆಯುಳ್ಳ ವನೂ ದಯಾಳುವೂ ಆಗಿದ್ದಾನೆಂದು ತಿಳಿದಿದ್ದೀರಷ್ಟೆ.
- Psalm 40:2–3 ಕೀರ್ತನೆಗಳು 40:2–3ಆತನು ನನ್ನನ್ನು ನಾಶನದ ಕುಣಿಯಿಂದಲೂ ಮತ್ತು ಬುರುದೆಯ ಕೆಸರಿನಿಂದಲೂ ಎತ್ತಿ ನನ್ನ ಪಾದಗಳನ್ನು ಬಂಡೆಯ ಮೇಲೆ ನಿಲ್ಲಿಸಿ ನನ್ನ ಹೆಜ್ಜೆಗಳನ್ನು ಸ್ಥಿರಪಡಿಸಿದನು. ನನ್ನ ಬಾಯಲ್ಲಿ ನೂತನ ಹಾಡನ್ನು ಇಟ್ಟಿದ್ದಾನೆ; ಅದು ನಮ್ಮ ದೇವರ ಸ್ತೋತ್ರವೇ; ಅನೇಕರು ಇದನ್ನು ನೋಡಿ ಭಯಪಟ್ಟು ಕರ್ತನಲ್ಲಿ ಭರವಸವಿಡುವರು.
- 1 Thessalonians 3:3–4 1 ಥೆಸಲೊನೀಕದವರಿಗೆ 3:3–4ಹೀಗಿರುವಲ್ಲಿ ಈ ಸಂಕಟಗಳಿಂದ ಒಬ್ಬರೂ ಚಂಚಲರಾಗಬೇಡಿರಿ; ಯಾಕಂದರೆ ಸಂಕಟ ಗಳನ್ನು ಅನುಭವಿಸುವದಕ್ಕಾಗಿ ನಾವು ನೇಮಿಸಲ್ಪಟ್ಟವ ರೆಂದು ನೀವೇ ಬಲ್ಲಿರಷ್ಟೆ. ನಾವು ನಿಮ್ಮ ಬಳಿಯಲ್ಲಿದ್ದಾಗ ನಿಜವಾಗಿಯೂ ಸಂಕಟವನ್ನು ಅನುಭವಿಸಲೇಬೇಕೆಂದು ಮುಂದಾಗಿ ಹೇಳಿದೆವಲ್ಲಾ; ಅದರಂತೆಯೇ ಆಯಿ ತೆಂದು ನಿಮಗೆ ತಿಳಿದುಬಂತು.
- Job 36:16 ಯೋಬನು 36:16ನಿನ್ನನ್ನು ಆತನು ಹಾಗೆಯೇ ಇಕ್ಕಟ್ಟಿನೊಳಗಿಂದ ತೆಗೆದು ಇಕ್ಕಟ್ಟಿಲ್ಲದ ವಿಶಾಲವಾದ ಸ್ಥಳಕ್ಕೆ ಬರಮಾಡ ಬಹುದಾಗಿತ್ತು; ನಿನ್ನ ಮೇಜಿನ ಮೇಲೆ ಇಡತಕ್ಕವುಗಳು ಕೊಬ್ಬಿನಿಂದ ತುಂಬಿದವುಗಳಾಗಿರುವವು.
- Acts 14:22 ಅಪೊಸ್ತಲರ ಕೃತ್ಯಗಳು 14:22ನಾವು ಬಹು ಸಂಕಟಗಳನ್ನು ಅನುಭವಿಸಿ ದೇವರ ರಾಜ್ಯದೊಳಗೆ ಸೇರಬೇಕೆಂಬ ದಾಗಿ ಹೇಳಿ ನಂಬಿಕೆಯಲ್ಲಿ ಸ್ಥಿರವಾಗಿರಬೇಕೆಂದು ಅವರನ್ನು ಎಚ್ಚರಿಸಿದರು.
- Revelation 7:14–17 ಪ್ರಕಟನೆ 7:14–17ಅದಕ್ಕೆ ನಾನು ಅಯ್ಯಾ, ನೀನೇ ಬಲ್ಲೆ ಅಂದೆನು. ಅವನು ನನಗೆ--ಇವರು ಮಹಾಸಂಕಟದೊಳಗಿಂದ ಬಂದವರು; ಕುರಿಮರಿಯಾ ದಾತನ ರಕ್ತದಲ್ಲಿ ತಮ್ಮ ನಿಲುವಂಗಿಗಳನ್ನು ತೊಳೆದು ಬೆಳ್ಳಗೆ ಮಾಡಿದ್ದಾರೆ. ಈ ಕಾರಣದಿಂದ ಇವರು ದೇವರ ಸಿಂಹಾಸನದ ಮುಂದೆ ಇದ್ದುಕೊಂಡು ಆತನ ಆಲಯದಲ್ಲಿ ಹಗಲಿರುಳು ಆತನ ಸೇವೆ ಮಾಡುವವರಾ ಗಿದ್ದಾರೆ; ಸಿಂಹಾಸನದ ಮೇಲೆ ಕೂತಿರುವಾತನು ಅವರ ಮಧ್ಯದಲ್ಲಿ ವಾಸಿಸುವನು. ಇನ್ನು ಮೇಲೆ ಅವರಿಗೆ ಹಸಿವೆಯಾಗಲಿ ಬಾಯಾರಿಕೆಯಾಗಲಿ ಆಗುವದೇ ಇಲ್ಲ; ಇದಲ್ಲದೆ ಅವರಿಗೆ ಬಿಸಿಲಾದರೂ ಯಾವ ಝಳವಾದರೂ ಬಡಿಯುವದಿಲ್ಲ.ಸಿಂಹಾಸನದ ಮಧ್ಯದಲ್ಲಿರುವ ಕುರಿಮರಿಯಾದಾತನು ಅವರನ್ನು ಮೇಯಿಸಿ ಜೀವ ಜಲದ ಒರತೆಗಳ ಬಳಿಗೆ ನಡಿಸುತ್ತಾನೆ; ಮತ್ತು ದೇವರು ಅವರ ಕಣ್ಣೀರನ್ನೆಲ್ಲಾ ಒರಸಿಬಿಡುವನು ಎಂದು ಹೇಳಿದನು. ಸಿಂಹಾಸನದ ಮಧ್ಯದಲ್ಲಿರುವ ಕುರಿಮರಿಯಾದಾತನು ಅವರನ್ನು ಮೇಯಿಸಿ ಜೀವ ಜಲದ ಒರತೆಗಳ ಬಳಿಗೆ ನಡಿಸುತ್ತಾನೆ; ಮತ್ತು ದೇವರು ಅವರ ಕಣ್ಣೀರನ್ನೆಲ್ಲಾ ಒರಸಿಬಿಡುವನು ಎಂದು ಹೇಳಿದನು.
- Psalm 107:35–37 ಕೀರ್ತನೆಗಳು 107:35–37ಆತನು ಅರಣ್ಯವನ್ನು ನೀರಿನ ಕೆರೆಯಾಗಿಯೂ ಒಣ ಭೂಮಿ ಯನ್ನು ನೀರಿನ ಬುಗ್ಗೆಗಳಾಗಿಯೂ ಮಾರ್ಪಡಿಸುತ್ತಾನೆ. ಅಲ್ಲಿ ಹಸಿದವರನ್ನು ವಾಸಿಸಮಾಡುತ್ತಾನೆ; ಆಗ ಅವರು ವಾಸಿಸುವ ಪಟ್ಟಣವನ್ನು ಸ್ಥಾಪಿಸಿ, ಹೊಲ ಗಳನ್ನು ಬಿತ್ತಿ, ದ್ರಾಕ್ಷಾಲತೆಗಳನ್ನು ನೆಡುವರು; ಅವು ಹುಟ್ಟುವಳಿಯ ಫಲವನ್ನು ಕೊಡುವವು.
- Isaiah 35:6–7 ಯೆಶಾಯ 35:6–7ಕುಂಟನು ಜಿಂಕೆಯಂತೆ ಹಾರುವನು ಮೂಕನ ನಾಲಿಗೆ ಹಾಡು ವದು; ಅರಣ್ಯದಲ್ಲಿ ನೀರೂ ಮರುಭೂಮಿಯಲ್ಲಿ ಒರ ತೆಗಳೂ ಒಡೆಯುವವು. ಒಣನೆಲವು ಕೊಳವಾಗು ವದು; ಬೆಂಗಾಡು ಪ್ರದೇಶವು ನೀರಿನ ಬುಗ್ಗೆಯಾಗು ವದು. ಸರ್ಪಗಳು ವಾಸಿಸುವ ಮಲಗುವ ಪ್ರತಿ ಯೊಂದು ಸ್ಥಳವು ಹುಲ್ಲು, ಜೊಂಡುಗಳಿಂದ ತುಂಬಿ ರುವದು.
- Psalm 129:1–3 ಕೀರ್ತನೆಗಳು 129:1–3ನನ್ನ ಯೌವನದಿಂದ ನನಗೆ ಅವರು ಬಹಳ ಬಾಧಿಸಿದ್ದಾರೆಂದು ಇಸ್ರಾ ಯೇಲು ಈಗ ಹೇಳಬಹುದು. ನನ್ನ ಯೌವನ ದಿಂದ ಅವರು ನನ್ನನ್ನು ಬಹಳ ಬಾಧಿಸಿದರು; ಆದರೆ ಅವರು ನನ್ನನ್ನು ಗೆಲ್ಲಲಿಲ್ಲ. ಉಳುವವರು ನನ್ನ ಬೆನ್ನಿನ ಮೇಲೆ ಉತ್ತು ತಮ್ಮ ಸಾಲುಗಳನ್ನು ಉದ್ದ ಮಾಡಿದ್ದಾರೆ.
- Psalm 33:19 ಕೀರ್ತನೆಗಳು 33:19ಇದರಿಂದ ಅವರ ಪ್ರಾಣವನ್ನು ಮರಣದಿಂದ ಬಿಡಿಸಿ ಬರಗಾಲ ದಲ್ಲಿ ಅವರ ಜೀವವನ್ನು ಕಾಪಾಡುತ್ತಾನೆ.