Skip to content
ThuthiThuthiThuthi
Psalms · chapter 67 of 150 · 7 verses

Psalm 67 in Kannada

ಕೀರ್ತನೆಗಳು 67

  1. ದೇವರು ನಮಗೆ ಕರುಣೆಯುಳ್ಳವನಾಗಿದ್ದು ನಮ್ಮನ್ನು ಆಶೀರ್ವದಿಸಲಿ; ಆತನು ತನ್ನ ಮುಖವನ್ನು ನಮ್ಮ ಮೇಲೆ ಪ್ರಕಾಶಿಸಮಾಡಲಿ. ಸೆಲಾ.

    To the chief Musician on Neginoth, A Psalm [or] Song. God be merciful unto us, and bless us; [and] cause his face to shine upon us; Selah.

  2. ಆಗ ನಿನ್ನ ಮಾರ್ಗವೂ ನಿನ್ನ ರಕ್ಷಣೆಯ ಸ್ವಸ್ಥತೆಯೂ, ಭೂಮಿಯಲ್ಲಿ, ಎಲ್ಲಾ ಜನಾಂಗಗಳಿಗೆ ತಿಳಿಯಲ್ಪಡು ವದು.

    That thy way may be known upon earth, thy saving health among all nations.

  3. ಓ ದೇವರೇ, ಜನರು ನಿನ್ನನ್ನು ಕೊಂಡಾಡಲಿ. ಜನರೆಲ್ಲಾ ನಿನ್ನನ್ನು ಕೊಂಡಾಡಲಿ.

    Let the people praise thee, O God; let all the people praise thee.

  4. ಜನಾಂಗಗಳು ಸಂತೋಷಪಟ್ಟು ಉತ್ಸಾಹಕ್ಕಾಗಿ ಹಾಡಲಿ; ನೀನು ಜನರನ್ನು ನೀತಿಯಿಂದ ನ್ಯಾಯತೀರಿಸಿ ಜನಾಂಗಗಳನ್ನು ಭೂಮಿಯಲ್ಲಿ ಪರಿಪಾಲಿಸುತ್ತೀ. ಸೆಲಾ.

    O let the nations be glad and sing for joy: for thou shalt judge the people righteously, and govern the nations upon earth. Selah.

  5. ಓ ದೇವರೇ, ಜನರು ನಿನ್ನನ್ನು ಕೊಂಡಾಡಲಿ; ಜನರೆಲ್ಲಾ ನಿನ್ನನ್ನು ಕೊಂಡಾಡಲಿ.

    Let the people praise thee, O God; let all the people praise thee.

  6. ಆಗ ಭೂಮಿಯು ತನ್ನ ಸಮೃದ್ಧಿಯಾದ ಬೆಳೆಯನ್ನು ಕೊಡುವದು; ದೇವರೇ, ಹೌದು, ನಮ್ಮ ದೇವರೇ ನಮ್ಮನ್ನು ಆಶೀರ್ವದಿಸುವನು.ದೇವರು ನಮ್ಮನ್ನು ಆಶೀರ್ವದಿಸುವನು; ಭೂಮಿಯ ಕೊನೆಯ ಭಾಗಗಳು ಆತನಿಗೆ ಭಯಪಡುವವು.

    [Then] shall the earth yield her increase; [and] God, [even] our own God, shall bless us.

  7. ದೇವರು ನಮ್ಮನ್ನು ಆಶೀರ್ವದಿಸುವನು; ಭೂಮಿಯ ಕೊನೆಯ ಭಾಗಗಳು ಆತನಿಗೆ ಭಯಪಡುವವು.

    God shall bless us; and all the ends of the earth shall fear him.

All chapters of Psalms · Kannada Bible · Psalm 67 in Tamil

Kannada Bible: Kannada Old Version, public domain.

King James Version: public domain.