Psalms · chapter 67 · verse 2
Psalm 67:2 in Kannada
ಆಗ ನಿನ್ನ ಮಾರ್ಗವೂ ನಿನ್ನ ರಕ್ಷಣೆಯ ಸ್ವಸ್ಥತೆಯೂ, ಭೂಮಿಯಲ್ಲಿ, ಎಲ್ಲಾ ಜನಾಂಗಗಳಿಗೆ ತಿಳಿಯಲ್ಪಡು ವದು.
Aaga ninna maargavoo ninna rakshaneya svasthateyoo, bhoomiyalli, ellaa janaangagalige tiliyalpadu vadu.
Psalm 67:2 in English
- King James Version (KJV)
- That thy way may be known upon earth, thy saving health among all nations.
- World English Bible (WEB)
- That your way may be known on earth, and your salvation among all nations,
- American Standard Version (ASV)
- That thy way may be known upon earth, Thy salvation among all nations.
- Bible in Basic English (BBE)
- So that men may see your way on the earth, and your salvation among all nations.
- Darby Translation (DBY)
- That thy way may be known upon earth, thy salvation among all nations.
- Webster's Bible (WBS)
- That thy way may be known upon earth, thy saving health among all nations.
- Young's Literal Translation (YLT)
- For the knowledge in earth of Thy way, among all nations of Thy salvation.
Read in context
- 1ದೇವರು ನಮಗೆ ಕರುಣೆಯುಳ್ಳವನಾಗಿದ್ದು ನಮ್ಮನ್ನು ಆಶೀರ್ವದಿಸಲಿ; ಆತನು ತನ್ನ ಮುಖವನ್ನು ನಮ್ಮ ಮೇಲೆ ಪ್ರಕಾಶಿಸಮಾಡಲಿ. ಸೆಲಾ.
- 2ಆಗ ನಿನ್ನ ಮಾರ್ಗವೂ ನಿನ್ನ ರಕ್ಷಣೆಯ ಸ್ವಸ್ಥತೆಯೂ, ಭೂಮಿಯಲ್ಲಿ, ಎಲ್ಲಾ ಜನಾಂಗಗಳಿಗೆ ತಿಳಿಯಲ್ಪಡು ವದು.
- 3ಓ ದೇವರೇ, ಜನರು ನಿನ್ನನ್ನು ಕೊಂಡಾಡಲಿ. ಜನರೆಲ್ಲಾ ನಿನ್ನನ್ನು ಕೊಂಡಾಡಲಿ.
- 4ಜನಾಂಗಗಳು ಸಂತೋಷಪಟ್ಟು ಉತ್ಸಾಹಕ್ಕಾಗಿ ಹಾಡಲಿ; ನೀನು ಜನರನ್ನು ನೀತಿಯಿಂದ ನ್ಯಾಯತೀರಿಸಿ ಜನಾಂಗಗಳನ್ನು ಭೂಮಿಯಲ್ಲಿ ಪರಿಪಾಲಿಸುತ್ತೀ. ಸೆಲಾ.
Cross references
- Titus 2:11 ತೀತನಿಗೆ 2:11ಯಾಕಂದರೆ ಎಲ್ಲಾ ಮನುಷ್ಯರಿಗೆ ರಕ್ಷಣೆಯನ್ನುಂಟು ಮಾಡುವ ದೇವರ ಕೃಪೆಯು ಪ್ರತ್ಯಕ್ಷವಾಯಿತು.
- Psalm 98:2–3 ಕೀರ್ತನೆಗಳು 98:2–3ರ್ತನು ತನ್ನ ರಕ್ಷಣೆಯನ್ನು ತಿಳಿಯ ಮಾಡಿದ್ದಾನೆ; ತನ್ನ ನೀತಿಯನ್ನು ಜನಾಂಗಗಳ ದೃಷ್ಟಿಗೆ ಬಹಿರಂಗವಾಗಿ ಪ್ರಕಟಮಾಡಿದ್ದಾನೆ. ತನ್ನ ಕರುಣೆ ಯನ್ನೂ ಸತ್ಯತೆಯನ್ನೂ ಇಸ್ರಾಯೇಲಿನ ಮನೆಗೋಸ್ಕರ ಜ್ಞಾಪಕ ಮಾಡಿಕೊಂಡಿದ್ದಾನೆ; ಭೂಮಿಯ ಕೊನೆಗಳೆಲ್ಲಾ ನಮ್ಮ ದೇವರ ರಕ್ಷಣೆಯನ್ನು ನೋಡಿವೆ.
- Acts 18:25 ಅಪೊಸ್ತಲರ ಕೃತ್ಯಗಳು 18:25ಇವನು ಕರ್ತನ ಮಾರ್ಗದ ವಿಷಯದಲ್ಲಿ ಉಪದೇಶ ಹೊಂದಿದ ವನಾಗಿದ್ದನು; ಆತ್ಮದಲ್ಲಿ ಆಸಕ್ತನಾಗಿದ್ದ ಇವನು ಯೋಹಾನನು ಮಾಡಿಸಿದ ಬಾಪ್ತಿಸ್ಮವನ್ನು ಮಾತ್ರ ಬಲ್ಲವನಾಗಿದ್ದನು. ಆದಾಗ್ಯೂ ಕರ್ತನ ವಿಷಯಗಳನ್ನು ಸೂಕ್ಷ್ಮವಾಗಿ ಹೇಳಿ ಉಪದೇಶಿಸುತ್ತಿದ್ದನು.
- Isaiah 52:10 ಯೆಶಾಯ 52:10ಕರ್ತನು ತನ್ನ ಪರಿ ಶುದ್ಧವಾದ ಬಾಹುವನ್ನು ಸಕಲ ಜನಾಂಗಗಳ ಕಣ್ಣು ಗಳಿಗೆ ತೋರಮಾಡಿದ್ದಾನೆ. ಭೂಮಿಯ ಅಂತ್ಯದವ ರೆಲ್ಲಾ ನಮ್ಮ ದೇವರ ರಕ್ಷಣೆಯನ್ನು ನೋಡುವರು.
- Luke 2:30–31 ಲೂಕನು 2:30–31ಯಾಕಂದರೆ ನನ್ನ ಕಣ್ಣುಗಳು ನಿನ್ನ ರಕ್ಷಣೆಯನ್ನು ನೋಡಿದವು. ಅದನ್ನು (ಆ ರಕ್ಷಣೆಯನ್ನು) ನೀನು ಎಲ್ಲಾ ಜನರ ಮುಂದೆ ಸಿದ್ಧ ಪಡಿಸಿದ್ದೀ.
- Luke 3:6 ಲೂಕನು 3:6ಮಾನವರೆಲ್ಲರು ದೇವರ ರಕ್ಷಣೆಯನ್ನು ಕಾಣುವರು ಎಂದೂ ಬರೆದಿರುವಂತೆ ಹೀಗಾಯಿತು.
- Psalm 43:5 ಕೀರ್ತನೆಗಳು 43:5ಓ ನನ್ನ ಪ್ರಾಣವೇ, ಕುಗ್ಗಿಹೋಗಿರುವದೇನು? ಯಾಕೆ ನನ್ನಲ್ಲಿ ವ್ಯಾಕುಲಪಡುತ್ತೀ? ದೇವರನ್ನು ನಿರೀಕ್ಷಿಸು. ನನ್ನ ಮುಖದ ಲಕ್ಷಣವೂ ನನ್ನ ದೇವರೂ ಆಗಿರುವಾತನನ್ನು ಇನ್ನೂ ಕೊಂಡಾಡುವೆನು.
- Zechariah 8:20–23 ಜೆಕರ್ಯ 8:20–23ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ಜನಗಳೂ ಅನೇಕ ಪಟ್ಟಣಗಳ ನಿವಾಸಿಗಳೂ ಇನ್ನು ಬರುವರು; ಒಂದರ ನಿವಾಸಿಗಳು ಮತ್ತೊಂದಕ್ಕೆ ಹೋಗಿ--ನಾವು ಕರ್ತನ ಮುಂದೆ ಬೇಡಿಕೊಳ್ಳುವದಕ್ಕೂ ಸೈನ್ಯಗಳ ಕರ್ತನನ್ನು ಹುಡುಕುವದಕ್ಕೂ ಬೇಗ ಹೋಗೋಣ; ನಾನು ಕೂಡ ಹೋಗುತ್ತೇನೆ ಎಂದು ಹೇಳುವರು. ಹೌದು, ಅನೇಕ ಜನಗಳೂ ಬಲವಾದ ಜನಾಂಗಗಳೂ ಸೈನ್ಯಗಳ ಕರ್ತನನ್ನು ಯೆರೂಸಲೇಮಿನಲ್ಲಿ ಹುಡುಕುವದಕ್ಕೂ ಕರ್ತನ ಮುಂದೆ ಬೇಡಿಕೊಳ್ಳುವದಕ್ಕೂ ಬರುವವು.ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ಆ ದಿವಸ ಗಳಲ್ಲಿ ಜನಾಂಗಗಳ ಸಮಸ್ತ ಭಾಷೆಯವರೊಳಗಿಂದ ಹತ್ತು ಮನುಷ್ಯರು ಯೆಹೂದ್ಯನಾಗಿರುವವನ ಸೆರಗನ್ನು ಹಿಡಿದು--ನಾವು ನಿಮ್ಮ ಸಂಗಡ ಹೋಗುತ್ತೇವೆ; ಯಾಕಂದರೆ ನಿಮ್ಮ ಸಂಗಡ ದೇವರು ಇದ್ದಾನೆಂದು ಕೇಳಿದ್ದೇವೆ ಎಂದು ಹೇಳುವರು. ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ಆ ದಿವಸ ಗಳಲ್ಲಿ ಜನಾಂಗಗಳ ಸಮಸ್ತ ಭಾಷೆಯವರೊಳಗಿಂದ ಹತ್ತು ಮನುಷ್ಯರು ಯೆಹೂದ್ಯನಾಗಿರುವವನ ಸೆರಗನ್ನು ಹಿಡಿದು--ನಾವು ನಿಮ್ಮ ಸಂಗಡ ಹೋಗುತ್ತೇವೆ; ಯಾಕಂದರೆ ನಿಮ್ಮ ಸಂಗಡ ದೇವರು ಇದ್ದಾನೆಂದು ಕೇಳಿದ್ದೇವೆ ಎಂದು ಹೇಳುವರು.
- Psalm 66:1–4 ಕೀರ್ತನೆಗಳು 66:1–4ಸಮಸ್ತ ದೇಶಗಳೇ, ದೇವರಿಗೆ ಉತ್ಸಾಹ ಧ್ವನಿಗೈಯಿರಿ; ಆತನ ಹೆಸರಿನ ಘನವನ್ನು ಕೀರ್ತಿಸಿರಿ; ಆತನ ಸ್ತೋತ್ರವನ್ನು ಘನವುಳ್ಳದ್ದಾಗಿ ಮಾಡಿರಿ. ದೇವರಿಗೆ--ನಿನ್ನ ಕೆಲಸಗಳಿಂದ ನೀನು ಎಷ್ಟು ಭಯಂಕರನಾಗಿದ್ದೀ ಎಂದು ಹೇಳಿರಿ. ನಿನ್ನ ಮಹಾಬಲದ ನಿಮಿತ್ತ ನಿನ್ನ ಶತ್ರುಗಳು ತಾವೇ ನಿನಗೆ ಅಧೀನರಾಗುವರು; ಭೂನಿವಾಸಿಗಳೆಲ್ಲ ನಿನ್ನನ್ನು ಹಾಡಿ ಆರಾಧಿಸಿ ನಿನ್ನ ನಾಮವನ್ನು ಕೀರ್ತಿಸುವರು. ಸೆಲಾ.
- Isaiah 49:6 ಯೆಶಾಯ 49:6ಆತನೇ ಈಗ ಹೀಗನ್ನುತ್ತಾನೆ--ನೀನು ನನ್ನ ಸೇವಕನಾಗಿ ಮಾಡಬೇಕಾದವುಗಳಲ್ಲಿ ಯಾಕೋಬನ ಕುಲಗಳನ್ನು ಉನ್ನತಪಡಿ ಸುವದೂ ಇಸ್ರಾಯೇಲಿನಲ್ಲಿ ರಕ್ಷಿತರಾದವರನ್ನು ತಿರಿಗಿ ಬರಮಾಡುವದೂ ಅಲ್ಪ ಕಾರ್ಯವೇ; ನನ್ನ ರಕ್ಷಣೆಯು ಲೋಕದ ಕಟ್ಟಕಡೆಯ ವರೆಗೆ ವ್ಯಾಪಿಸುವಂತೆ ನಿನ್ನನ್ನು ಅನ್ಯಜನಾಂಗಗಳಿಗೆ ಬೆಳಕನ್ನಾಗಿ ದಯಪಾಲಿಸುವೆನು.
- Esther 8:15–17 ಎಸ್ತೇರಳು 8:15–17ಮೊರ್ದೆಕೈ ನೀಲ ಶುಭ್ರವಾದ ರಾಜವಸ್ತ್ರವನ್ನು ಧರಿಸಿಕೊಂಡು ಬಂಗಾರದ ದೊಡ್ಡ ಕಿರೀಟವನ್ನು ಇಟ್ಟು ಕೊಂಡು ರಕ್ತವರ್ಣವುಳ್ಳ ನಯವಾದ ವಸ್ತ್ರ ಧರಿಸಿ ಕೊಂಡು ಅರಸನ ಸಮ್ಮುಖದಿಂದ ಹೊರಟು ಹೋದನು. ಆಗ ಶೂಷನ್ ಪಟ್ಟಣವು ಸಂಭ್ರಮವೂ ಸಂತೋಷವೂ ಉಳ್ಳದ್ದಾಗಿತ್ತು. ಯೆಹೂದ್ಯರಿಗೆ ಬೆಳಕೂ ಸಂತೋಷವೂ ಆನಂದವೂ ಘನವೂ ಉಂಟಾ ಗಿದ್ದವು.ಪ್ರತಿ ಪ್ರಾಂತ್ಯದಲ್ಲಿಯೂ ಪ್ರತಿ ಪಟ್ಟಣ ದಲ್ಲಿಯೂ ಅರಸನ ಮಾತೂ ಅವನ ಆಜ್ಞೆಯೂ ಎಲ್ಲಿಗೆ ಬಂತೋ ಅಲ್ಲಿ ಯೆಹೂದ್ಯರಿಗೆ ಸಂತೋಷವೂ ಆನಂದವೂ ಹಬ್ಬವೂ ಸುದಿನವೂ ಉಂಟಾಗಿದ್ದವು. ಇದಲ್ಲದೆ ಆ ದೇಶದ ಅನೇಕ ಜನರು ಯೆಹೂದ್ಯ ರಾದರು. ಯಾಕಂದರೆ ಯೆಹೂದ್ಯರ ಭಯವು ಅವರ ಮೇಲೆ ಇತ್ತು. ಪ್ರತಿ ಪ್ರಾಂತ್ಯದಲ್ಲಿಯೂ ಪ್ರತಿ ಪಟ್ಟಣ ದಲ್ಲಿಯೂ ಅರಸನ ಮಾತೂ ಅವನ ಆಜ್ಞೆಯೂ ಎಲ್ಲಿಗೆ ಬಂತೋ ಅಲ್ಲಿ ಯೆಹೂದ್ಯರಿಗೆ ಸಂತೋಷವೂ ಆನಂದವೂ ಹಬ್ಬವೂ ಸುದಿನವೂ ಉಂಟಾಗಿದ್ದವು. ಇದಲ್ಲದೆ ಆ ದೇಶದ ಅನೇಕ ಜನರು ಯೆಹೂದ್ಯ ರಾದರು. ಯಾಕಂದರೆ ಯೆಹೂದ್ಯರ ಭಯವು ಅವರ ಮೇಲೆ ಇತ್ತು.
- Psalm 117:2 ಕೀರ್ತನೆಗಳು 117:2ಆತನ ಕರುಣಾಕಟಾಕ್ಷವು ನಮ್ಮ ಕಡೆ ದೊಡ್ಡದು; ಕರ್ತನ ಸತ್ಯವು ಯುಗಯುಗಕ್ಕೂ ಅದೆ. ಕರ್ತನನ್ನು ಸ್ತುತಿಸಿರಿ.