Psalms · chapter 68 · verse 13
Psalm 68:13 in Kannada
ನೀವು ಮಡಿಕೆ ಗಳ ಮಧ್ಯದಲ್ಲಿ ಮಲಗಿದಾಗ್ಯೂ ಬೆಳ್ಳಿಯಿಂದಲೂ ಅದರ ರೆಕ್ಕೆಗಳು ಹಳದಿ ಚಿನ್ನದಿಂದಲೂ ಮುಚ್ಚಿದ ಪಾರಿವಾಳದ ರೆಕ್ಕೆಗಳ ಹಾಗಿದ್ದೀರಿ.
Neevu madike gala madhyadalli malagidaagyoo belliyindaloo adara rekkegalu haladi chinnadindaloo muchchida paarivaalada rekkegala haagiddeeri.
Psalm 68:13 in English
- King James Version (KJV)
- Though ye have lien among the pots, [yet shall ye be as] the wings of a dove covered with silver, and her feathers with yellow gold.
- World English Bible (WEB)
- while you sleep among the camp fires, the wings of a dove sheathed with silver, her feathers with shining gold.
- American Standard Version (ASV)
- When ye lie among the sheepfolds, [It is as] the wings of a dove covered with silver, And her pinions with yellow gold.
- Bible in Basic English (BBE)
- Will you take your rest among the flocks? like the wings of a dove covered with silver, and its feathers with yellow gold.
- Darby Translation (DBY)
- Though ye have lain among the sheepfolds, [ye shall be as] wings of a dove covered with silver, and her feathers with green gold.
- Webster's Bible (WBS)
- Though ye have lain among the pots, [yet shall ye be as] the wings of a dove covered with silver, and her feathers with yellow gold.
- Young's Literal Translation (YLT)
- Though ye do lie between two boundaries, Wings of a dove covered with silver, And her pinions with yellow gold.
Read in context
- 11ಕರ್ತನು ವಾಕ್ಯ ವನ್ನು ಕೊಟ್ಟನು; ಅದನ್ನು ಪ್ರಕಟಿಸಿದವರ ಗುಂಪು ದೊಡ್ಡದಾಗಿತ್ತು.
- 12ಸೈನ್ಯಗಳ ಅರಸರು ತ್ವರೆಯಾಗಿ ಓಡಿಹೋದರು; ಮನೆಯಲ್ಲಿ ವಾಸಿಸುವವಳು ಕೊಳ್ಳೆ ಯನ್ನು ಪಾಲು ಮಾಡಿಕೊಂಡಳು.
- 13ನೀವು ಮಡಿಕೆ ಗಳ ಮಧ್ಯದಲ್ಲಿ ಮಲಗಿದಾಗ್ಯೂ ಬೆಳ್ಳಿಯಿಂದಲೂ ಅದರ ರೆಕ್ಕೆಗಳು ಹಳದಿ ಚಿನ್ನದಿಂದಲೂ ಮುಚ್ಚಿದ ಪಾರಿವಾಳದ ರೆಕ್ಕೆಗಳ ಹಾಗಿದ್ದೀರಿ.
- 14ಸರ್ವಶಕ್ತನು ಅರಸುಗಳನ್ನು ಸಲ್ಮೋನಿನಲ್ಲಿ ಚದರಿಸಿದಾಗ ಅದರಲ್ಲಿ ಬಿಳೀ ಹಿಮದ ಹಾಗಿತ್ತು.
- 15ಬಾಷಾನ್ ಬೆಟ್ಟವು ದೇವರ ಬೆಟ್ಟದಂತೆ ಇದೆ; ಬಾಷಾನ್ ಬೆಟ್ಟವು ಉನ್ನತ ಬೆಟ್ಟವಾಗಿದೆ.
Cross references
- Genesis 49:14 ಆದಿಕಾಂಡ 49:14ಇಸ್ಸಾಕಾರನು ಎರಡು ಭಾರಗಳ ನಡುವೆ ಮಲಗಿ ಕೊಳ್ಳುವ ಬಲವುಳ್ಳ ಕತ್ತೆಯಾಗಿದ್ದಾನೆ.
- Psalm 105:37 ಕೀರ್ತನೆಗಳು 105:37ಆತನು ಬೆಳ್ಳಿ ಬಂಗಾರಗಳ ಸಂಗಡ ಅವರನ್ನು ಹೊರಗೆ ಬರಮಾಡಿ ದನು; ಅವರ ಗೋತ್ರಗಳಲ್ಲಿ ಬಲಹೀನನು ಒಬ್ಬನೂ ಇರಲಿಲ್ಲ.
- Ephesians 2:1–3 ಎಫೆಸದವರಿಗೆ 2:1–3ಇದಲ್ಲದೆ ಅಪರಾಧಗಳ ಮತ್ತು ಪಾಪಗಳ ದೆಸೆಯಿಂದ ಸತ್ತವರಾಗಿದ್ದ ನಿಮ್ಮನ್ನು ಆತನು ಬದುಕಿಸಿದನು. ನೀವು ಪೂರ್ವದಲ್ಲಿ ಅಪರಾಧ ಗಳನ್ನೂ ಪಾಪಗಳನ್ನೂ ಮಾಡುವವರಾಗಿದ್ದು ಇಹ ಲೋಕಾಚಾರಕ್ಕೆ ಅನುಸಾರವಾಗಿ ನಡೆದುಕೊಂಡಿರಿ; ವಾಯುಮಂಡಲದಲ್ಲಿ ಅಧಿಕಾರ ನಡಿಸುವ ಅಧಿಪತಿಗೆ ಅಂದರೆ ಅವಿಧೇಯತೆಯ ಮಕ್ಕಳಲ್ಲಿ ಈಗ ಕೆಲಸ ನಡಿಸುವ ಆತ್ಮನಿಗನುಸಾರವಾಗಿ ನಡೆದುಕೊಂಡಿರಿ; ನಾವೆಲ್ಲರೂ ಪೂರ್ವದಲ್ಲಿ ಶರೀರಭಾವದ ಆಶೆಗಳಿಗೆ ಅಧೀನರಾಗಿ ಶರೀರಕ್ಕೂ ಮನಸ್ಸಿಗೂ ಸಂಬಂಧಪಟ್ಟ ಇಚ್ಛೆಗಳನ್ನು ನೆರವೇರಿಸುತ್ತಾ ನಡೆದು ಮಿಕ್ಕಾದವರಂತೆ ಸ್ವಭಾವ ಸಿದ್ಧವಾಗಿ ದೇವರ ಕೋಪದ ಮಕ್ಕಳಾಗಿದ್ದೆವು.
- 1 Corinthians 6:9–11 1 ಕೊರಿಂಥದವರಿಗೆ 6:9–11ಅನೀತಿವಂತರು ದೇವರ ರಾಜ್ಯಕ್ಕೆ ಬಾಧ್ಯರಾಗುವದಿಲ್ಲವೆಂಬದು ನಿಮಗೆ ತಿಳಿಯದೋ? ಮೋಸಹೋಗಬೇಡಿರಿ; ಜಾರರು ವಿಗ್ರಹಾರಾಧಕರು ವ್ಯಭಿಚಾರಿಗಳು ವಿಟರು ಪುರುಷಗಾಮಿಗಳು ಕಳ್ಳರು ಲೋಭಿಗಳು ಕುಡುಕರು ಬೈಯುವವರು ಸುಲು ಕೊಳ್ಳುವವರು ದೇವರ ರಾಜ್ಯಕ್ಕೆ ಬಾಧ್ಯರಾಗುವದಿಲ್ಲ. ನಿಮ್ಮಲ್ಲಿ ಕೆಲವರು ಅಂಥವರಾಗಿದ್ದಿರಿ; ಆದರೂ ಕರ್ತನಾದ ಯೇಸುವಿನ ಹೆಸರಿನಲ್ಲಿಯೂ ನಮ್ಮ ದೇವರ ಆತ್ಮನಲ್ಲಿಯೂ ತೊಳೆಯಲ್ಪಟ್ಟಿರಿ; ಶುದ್ಧೀಕರಿಸಲ್ಪಟ್ಟಿರಿ ಮತ್ತು ನೀತಿವಂತರೆಂಬ ನಿರ್ಣಯವನ್ನು ಹೊಂದಿದಿರಿ.
- Judges 5:16 ನ್ಯಾಯಸ್ಥಾಪಕರು 5:16ಮಂದೆಗಳ ಕೂಗನ್ನು ಕೇಳಿ ನೀನು ದೊಡ್ಡಿಗಳ ಬಳಿಯಲ್ಲಿ ಇದ್ದದ್ದೇನು? ರೂಬೇನನ ಭಾಗಗಳಲ್ಲಿ ಹೃದಯದ ದೊಡ್ಡ ಪರಿಶೋ ಧನೆಗಳು ಇದ್ದವು.
- Revelation 1:5–6 ಪ್ರಕಟನೆ 1:5–6ಆತನು ನಮ್ಮನ್ನು ಪ್ರೀತಿಸಿ ತನ್ನ ಸ್ವಂತ ರಕ್ತದಿಂದ ನಮ್ಮನ್ನು ನಮ್ಮ ಪಾಪಗಳಿಂದ ತೊಳೆದು ತನ್ನ ತಂದೆ ಯಾದ ದೇವರಿಗೆ ನಮ್ಮನ್ನು ರಾಜರನ್ನಾಗಿಯೂ ಯಾಜಕ ರನ್ನಾಗಿಯೂ ಮಾಡಿದನು. ಆತನಿಗೆ ಯುಗ ಯುಗಾಂತರಗಳಲ್ಲಿ ಮಹಿಮೆಯೂ ಅಧಿಪತ್ಯವೂ ಇರಲಿ. ಆಮೆನ್.
- Titus 3:3 ತೀತನಿಗೆ 3:3ನಾವು ಸಹ ಮೊದಲು ಅವಿವೇಕಿಗಳೂ ಅವಿಧೇಯರೂ ಮೋಸಹೋದ ವರೂ ನಾನಾ ವಿಧವಾದ ದುರಾಶೆಗಳಿಗೆ ಮತ್ತು ಭೋಗಗಳಿಗೆ ದಾಸರೂ ಕೆಟ್ಟತನ ಹೊಟ್ಟೇಕಿಚ್ಚುಗಳಲ್ಲಿ ಜೀವಿಸುವವರೂ ಅಸಹ್ಯರೂ ಒಬ್ಬರನ್ನೊಬ್ಬರು ಹಗೆ ಮಾಡುವವರೂ ಆಗಿದ್ದೆವು.
- 1 Kings 4:20–21 1 ಅರಸುಗಳು 4:20–21ಯೆಹೂದ ಮತ್ತು ಇಸ್ರಾಯೇಲ್ಯರು ತಿನ್ನುತ್ತಾ ಕುಡಿಯುತ್ತಾ ಸಂತೋಷಪಡುತ್ತಾ ಸಮುದ್ರದ ಬಳಿಯಲ್ಲಿರುವ ಮರಳಿನ ಹಾಗೆ ಹೆಚ್ಚಾಗಿದ್ದರು. ಇದಲ್ಲದೆ ಸೊಲೊಮೋನನು ನದಿ ಮೊದಲು ಗೊಂಡು ಫಿಲಿಷ್ಟಿಯರ ದೇಶವನ್ನು ಹಾದು ಐಗುಪ್ತದ ಮೇರೆಯ ವರೆಗೂ ಇರುವ ಸಮಸ್ತ ರಾಜ್ಯಗಳ ಮೇಲೆ ಆಳುತ್ತಿದ್ದನು. ಆ ರಾಜ್ಯಗಳವರು ಸೊಲೊಮೋನನು ಜೀವಿಸಿರುವ ದಿವಸಗಳಲ್ಲೆಲ್ಲಾ ಕಾಣಿಕೆಗಳನ್ನು ತಂದು ಅವನನ್ನು ಸೇವಿಸುತ್ತಾ ಇದ್ದರು.
- Luke 15:16 ಲೂಕನು 15:16ಅವನು ಹಂದಿಗಳು ತಿನ್ನುತ್ತಿದ್ದ ಹೊಟ್ಟಿನಿಂದ ಲಾದರೂ ತನ್ನ ಹೊಟ್ಟೆಯನ್ನು ತುಂಬಿಸಿಕೊಳ್ಳುವದಕ್ಕೆ ಇಷ್ಟಪಟ್ಟನು. ಆದರೆ ಯಾವನೂ ಅವನಿಗೆ ಕೊಡಲಿಲ್ಲ.
- Exodus 1:14 ವಿಮೋಚನಕಾಂಡ 1:14ಮಣ್ಣಿನ ಕೆಲಸದಲ್ಲಿಯೂ ಇಟ್ಟಿಗೆಯನ್ನು ಮಾಡುವ ಕೆಲಸದ ಲ್ಲಿಯೂ ವ್ಯವಸಾಯದ ಎಲ್ಲಾ ವಿಧವಾದ ಕೆಲಸಗಳ ಲ್ಲಿಯೂ ಕಠಿಣವಾಗಿ ದುಡಿಸಿಕೊಂಡು ಅವರ ಜೀವನ ವನ್ನು ಬೇಸರಪಡಿಸಿದರು. ಅವರು ಅವರಿಂದ ಮಾಡಿ ಸಿದ ಎಲ್ಲಾ ಸೇವೆಯೂ ಕಠಿಣವಾಗಿತ್ತು.
- Luke 15:22 ಲೂಕನು 15:22ಆದರೆ ತಂದೆಯು ತನ್ನ ಸೇವಕರಿಗೆ--ಶ್ರೇಷ್ಠವಾದ ನಿಲುವಂಗಿಯನ್ನು ತಂದು ಇವನಿಗೆ ತೊಡಿಸಿರಿ; ಇವನ ಕೈಗೆ ಉಂಗುರವನ್ನೂ ಪಾದಗಳಿಗೆ ಕೆರಗಳನ್ನೂ ಹಾಕಿರಿ;
- Psalm 149:4 ಕೀರ್ತನೆಗಳು 149:4ಕರ್ತನು ತನ್ನ ಜನರಲ್ಲಿ ಇಷ್ಟಪಡುತ್ತಾನೆ; ದೀನರನ್ನು ರಕ್ಷಣೆಯಿಂದ ಅಲಂಕರಿಸುತ್ತಾನೆ.