Psalms · chapter 68 · verse 18
Psalm 68:18 in Kannada
ನೀನು ಉನ್ನತಕ್ಕೆ ಏರಿಹೋಗಿ ಸೆರೆಯವರನ್ನು ಸೆರೆಯಾಗಿ ನಡೆಸಿದಿ, ಕರ್ತನಾದ ದೇವರು ಅವರ ಮಧ್ಯದಲ್ಲಿ ವಾಸಿಸುವ ಹಾಗೆ ಮನುಷ್ಯರಿಗಾಗಿಯೂ ಹೌದು, ತಿರುಗಿ ಬಿದ್ದವರಿಗಾಗಿಯೂ ಸ್ವೀಕರಿಸಿದಿ.
Neenu unnatakke erihogi sereyavarannu sereyaagi nadesidi, kartanaada devaru avara madhyadalli vaasisuva haage manushyarigaagiyoo haudu, tirugi biddavarigaagiyoo sveekarisidi.
Psalm 68:18 in English
- King James Version (KJV)
- Thou hast ascended on high, thou hast led captivity captive: thou hast received gifts for men; yea, [for] the rebellious also, that the LORD God might dwell [among them].
- World English Bible (WEB)
- You have ascended on high. You have led away captives. You have received gifts among people, yes, among the rebellious also, that the LORD God might dwell there.
- American Standard Version (ASV)
- Thou hast ascended on high, thou hast led away captives; Thou hast received gifts among men, Yea, [among] the rebellious also, that Jehovah God might dwell [with them].
- Bible in Basic English (BBE)
- You have gone up on high, taking your prisoners with you; you have taken offerings from men; the Lord God has taken his place on the seat of his power.
- Darby Translation (DBY)
- Thou hast ascended on high, thou hast led captivity captive: thou hast received gifts in Man, and even [for] the rebellious, for the dwelling [there] of Jah Elohim.
- Webster's Bible (WBS)
- Thou hast ascended on high, thou hast led captivity captive: thou hast received gifts for men; yes, [for] the rebellious also, that the LORD God might dwell [among them] .
- Young's Literal Translation (YLT)
- Thou hast ascended on high, Thou hast taken captive captivity, Thou hast taken gifts for men, That even the refractory may rest, O Jah God.
Read in context
- 16ಉನ್ನತ ಬೆಟ್ಟಗಳೇ, ಯಾಕೆ ನೆಗೆಯುತ್ತೀರಿ? ದೇವರು ನಿವಾಸ ಕ್ಕಾಗಿ ಅಪೇಕ್ಷಿಸುವ ಬೆಟ್ಟವು ಇದೇ ಹೌದು, ಕರ್ತನು ಅದರಲ್ಲಿ ಸದಾಕಾಲಕ್ಕೆ ವಾಸಿಸುವನು.
- 17ದೇವರ ರಥಗಳು ಇಪ್ಪತ್ತು ಸಾವಿರವು, ಸಾವಿರಾರು ದೂತರು ಗಳು; ಕರ್ತನು ಸೀನಾಯಿಯಲ್ಲಿ ಇದ್ದ ಹಾಗೆ ಅವರೊಳಗೆ ಪರಿಶುದ್ಧ ಸ್ಥಳದಲ್ಲಿ ಇದ್ದಾನೆ.
- 18ನೀನು ಉನ್ನತಕ್ಕೆ ಏರಿಹೋಗಿ ಸೆರೆಯವರನ್ನು ಸೆರೆಯಾಗಿ ನಡೆಸಿದಿ, ಕರ್ತನಾದ ದೇವರು ಅವರ ಮಧ್ಯದಲ್ಲಿ ವಾಸಿಸುವ ಹಾಗೆ ಮನುಷ್ಯರಿಗಾಗಿಯೂ ಹೌದು, ತಿರುಗಿ ಬಿದ್ದವರಿಗಾಗಿಯೂ ಸ್ವೀಕರಿಸಿದಿ.
- 19ಪ್ರತಿ ದಿನವೂ ನಮ್ಮನ್ನು ಮೇಲುಗಳಿಂದ ತುಂಬಿಸು,ಕರ್ತನು ಅಂದರೆ ನಮ್ಮ ರಕ್ಷಣೆಯ ದೇವರು ಸ್ತುತಿ ಹೊಂದಲಿ. ಸೆಲಾ.
- 20ನಮ್ಮ ದೇವರು ರಕ್ಷಣೆಯ ದೇವರಾಗಿದ್ದಾನೆ; ನಮ್ಮ ಕರ್ತನಾದ ದೇವರು ಮರಣದಿಂದ ತಪ್ಪಿಸಲು ಶಕ್ತನಾಗಿದ್ದಾನೆ.
Cross references
- Ephesians 4:8–10 ಎಫೆಸದವರಿಗೆ 4:8–10ಆದದರಿಂದ--ಆತನು ಉನ್ನತ ಸ್ಥಾನಕ್ಕೆ ಏರಿಹೋದಾಗ ಸೆರೆಯನ್ನು ಸೆರೆಹಿಡಿದುಕೊಂಡು ಹೋಗಿ ಮನುಷ್ಯರಿಗೆ ದಾನಗಳನ್ನು ಕೊಟ್ಟನು ಎಂದು ಆತನು ಹೇಳುತ್ತಾನೆ. (ಏರಿ ಹೋದನೆಂದು ಹೇಳಿ ದ್ದರಲ್ಲಿ ಮೊದಲು ಭೂಮಿಯ ಅಧೋಭಾಗಕ್ಕೆ ಇಳಿ ದಿದ್ದನೆಂತಲೂ ಹೇಳಿದ ಹಾಗಾಯಿತಲ್ಲವೇ? ಇಳಿದು ಬಂದಾತನು ಮೇಲಣ ಎಲ್ಲಾ ಆಕಾಶ ಗಳಿಗಿಂತ ಉನ್ನತವಾಗಿ ಏರಿ ಹೋದಾತನೇ; ಆದದರಿಂದ ಆತನು ಸಮಸ್ತವನ್ನು ತುಂಬಿದವ ನಾದನು).
- Revelation 21:3 ಪ್ರಕಟನೆ 21:3ಇದಲ್ಲದೆ ಪರಲೋಕದೊಳಗಿಂದ ಬಂದ ಮಹಾಶಬ್ದವು ನನಗೆ ಕೇಳಿಸಿತು. ಅದು-ಇಗೋ, ದೇವರ ಗುಡಾರವು ಮನುಷ್ಯರೊಂದಿಗೆ ಅದೆ; ಆತನು ಅವರೊಡನೆ ವಾಸ ಮಾಡುವನು, ಅವರು ಆತನ ಪ್ರಜೆಗಳಾಗಿರುವರು; ದೇವರು ತಾನೇ ಅವರ ಸಂಗಡ ಇರುವನು, ಇದಲ್ಲದೆ ಆತನು ಅವರ ದೇವರಾಗಿ
- 2 Corinthians 6:16 2 ಕೊರಿಂಥದವರಿಗೆ 6:16ವಿಗ್ರಹಗಳ ಕೂಡ ದೇವರ ಮಂದಿರಕ್ಕೆ ಒಪ್ಪಿಗೆ ಏನು? ಯಾಕಂದರೆ ನೀವು ಜೀವವುಳ್ಳ ದೇವರ ಮಂದಿರವಾಗಿದ್ದೀರಲ್ಲಾ, ಇದರ ಸಂಬಂಧವಾಗಿ ದೇವರು--ನಾನು ಅವರಲ್ಲಿ ವಾಸಿಸುತ್ತಾ ತಿರುಗಾಡುವೆನು, ನಾನು ಅವರಿಗೆ ದೇವರಾಗಿರುವೆನು, ಅವರು ನನಗೆ ಪ್ರಜೆಯಾಗಿರುವರು ಎಂದು ಹೇಳಿದ್ದಾನೆ.
- 1 Peter 3:22 1 ಪೇತ್ರನು 3:22ಆತನು ಪರಲೋಕಕ್ಕೆ ಹೋಗಿ ದೇವರ ಬಲಗಡೆಯಲ್ಲಿದ್ದಾನೆ; ದೂತರೂ ಪ್ರಭುತ್ವ ಗಳೂ ಅಧಿಕಾರಗಳೂ ಆತನಿಗೆ ಅಧೀನ ಮಾಡಲ್ಪಟ್ಟಿದ್ದಾರೆ.
- Psalm 110:1 ಕೀರ್ತನೆಗಳು 110:1ಕರ್ತನು ನನ್ನ ಕರ್ತನಿಗೆ ಹೇಳಿದ್ದೇನೆಂದರೆ ನಾನು ನಿನ್ನ ಶತ್ರುಗಳನ್ನು ನಿನ್ನ ಪಾದಪೀಠವಾಗಿ ಮಾಡುವ ತನಕ ನನ್ನ ಬಲ ಪಾರ್ಶ್ವದಲ್ಲಿ ಕುಳಿತುಕೋ,
- Titus 3:3–7 ತೀತನಿಗೆ 3:3–7ನಾವು ಸಹ ಮೊದಲು ಅವಿವೇಕಿಗಳೂ ಅವಿಧೇಯರೂ ಮೋಸಹೋದ ವರೂ ನಾನಾ ವಿಧವಾದ ದುರಾಶೆಗಳಿಗೆ ಮತ್ತು ಭೋಗಗಳಿಗೆ ದಾಸರೂ ಕೆಟ್ಟತನ ಹೊಟ್ಟೇಕಿಚ್ಚುಗಳಲ್ಲಿ ಜೀವಿಸುವವರೂ ಅಸಹ್ಯರೂ ಒಬ್ಬರನ್ನೊಬ್ಬರು ಹಗೆ ಮಾಡುವವರೂ ಆಗಿದ್ದೆವು. ಆದರೆ ನಮ್ಮ ರಕ್ಷಕನಾದ ದೇವರ ದಯೆಯೂ ಪ್ರೀತಿಯೂ ಮನುಷ್ಯನ ಕಡೆಗೆ ಪ್ರತ್ಯಕ್ಷವಾದಾಗ ನಾವು ಮಾಡಿದ ನೀತಿಯ ಕ್ರಿಯೆ ಗಳಿಂದಲ್ಲ, ಆತನ ಕರುಣೆಯಿಂದಲೇ ಪುನರ್ಜನ್ಮದ ತೊಳೆಯುವಿಕೆಯಿಂದಲೂ ಪವಿತ್ರಾತ್ಮನು ನೂತನ ಸ್ವಭಾವವನ್ನುಂಟು ಮಾಡುವದರಿಂದಲೂ ಆತನು ನಮ್ಮನ್ನು ರಕ್ಷಿಸಿದನು. ಆತನು (ದೇವರು) ನಮ್ಮ ರಕ್ಷಕನಾದ ಯೇಸು ಕ್ರಿಸ್ತನ ಮೂಲಕ ಆತನನ್ನು (ಪವಿತ್ರಾತ್ಮನನ್ನು) ನಮ್ಮ ಮೇಲೆ ಧಾರಾಳವಾಗಿ ಸುರಿಸಿ ದ್ದಾನೆ. ನಾವು ಹೀಗೆ ಆತನ ಕೃಪೆಯಿಂದ ನೀತಿವಂತ ರೆಂದು ನಿರ್ಣಯಿಸಲ್ಪಟ್ಟು ನಿತ್ಯಜೀವದ ನಿರೀಕ್ಷೆಗನು ಸಾರವಾಗಿ ಬಾಧ್ಯರಾದೆವು.
- Colossians 1:18–19 ಕೊಲೊಸ್ಸೆಯವರಿಗೆ 1:18–19ಸಭೆಯೆಂಬ ದೇಹಕ್ಕೆ ಆತನು ಶಿರಸ್ಸಾಗಿದ್ದಾನೆ. ಆತನೇ ಆದಿಯಾಗಿದ್ದು ಎಲ್ಲಾದರಲ್ಲಿ ಪ್ರಮುಖನಾಗಿರುವಂತೆ ಆತನು ಸತ್ತವರೊಳಗಿಂದ ಬಂದ ಜ್ಯೇಷ್ಠನೂ ಆಗಿದ್ದಾನೆ. ಆತನಲ್ಲಿ ಸರ್ವ ಸಂಪೂರ್ಣತೆಯು ವಾಸವಾಗಿರುವದು ತಂದೆಗೆ ಇಷ್ಟ ವಾಗಿತ್ತು.
- Acts 2:4 ಅಪೊಸ್ತಲರ ಕೃತ್ಯಗಳು 2:4ಆಗ ಅವರೆಲ್ಲರೂ ಪವಿತ್ರಾತ್ಮಭರಿತರಾಗಿ ಆತ್ಮನು ತಮಗೆ ನುಡಿಯುವ ಶಕ್ತಿಯನ್ನು ಕೊಟ್ಟ ಪ್ರಕಾರ ಅವರು ಬೇರೆಬೇರೆ ಭಾಷೆಗಳಲ್ಲಿ ಮಾತನಾಡುವದಕ್ಕೆ ಪ್ರಾರಂಭಿಸಿದರು.
- John 16:7 ಯೋಹಾನನು 16:7ಆದರೂ ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ; ನಾನು ಹೋಗುವದು ನಿಮಗೆ ಹಿತಕರವಾಗಿದೆ; ಯಾಕಂದರೆ ನಾನು ಹೋಗದಿದ್ದರೆ ಆದರಿಕನು ನಿಮ್ಮ ಬಳಿಗೆ ಬರುವದಿಲ್ಲ; ನಾನು ಹೋದರೆ ಆತನನ್ನು ನಿಮ್ಮ ಬಳಿಗೆ ಕಳುಹಿಸುವೆನು.
- Judges 5:12 ನ್ಯಾಯಸ್ಥಾಪಕರು 5:12ಎಚ್ಚರವಾಗು, ಎಚ್ಚರ ವಾಗು, ದೆಬೋರಳೇ, ಎಚ್ಚರವಾಗು, ಎಚ್ಚರವಾಗು, ಹಾಡನ್ನು ಹಾಡು; ಬಾರಾಕನೇ; ಏಳು; ಅಬೀನೋವ ಮನ ಮಗನೇ, ನಿನ್ನನ್ನು ಸೆರೆಹಿಡಿದವರನ್ನು ಸೆರೆಯಾಗಿ ನಡಿಸು.
- Psalm 24:3 ಕೀರ್ತನೆಗಳು 24:3ಕರ್ತನ ಪರ್ವತವನ್ನು ಹತ್ತುವವನು ಯಾರು? ಇಲ್ಲವೆ ಆತನ ಪರಿಶುದ್ಧ ಸ್ಥಳದಲ್ಲಿ ನಿಲ್ಲುವವನು ಯಾರು?
- Acts 1:2–9 ಅಪೊಸ್ತಲರ ಕೃತ್ಯಗಳು 1:2–9ಆತನು ಮೇಲಕ್ಕೆ ಎತ್ತಲ್ಪಟ್ಟ ದಿವಸದ ವರೆಗೆ ತಾನು ಮಾಡುವದಕ್ಕೂ ಬೋಧಿಸುವದಕ್ಕೂ ಪ್ರಾರಂಭಿಸಿದ್ದೆಲ್ಲವನ್ನು ನಾನು ನನ್ನ ಮೊದಲನೆಯ ಪುಸ್ತಕದಲ್ಲಿ ಬರೆದೆನು. ಆತನು ಶ್ರಮೆಯನ್ನನುಭವಿಸಿದ ಮೇಲೆ ದೃಢವಾದ ಅನೇಕ ಪ್ರಮಾಣಗಳಿಂದ ತಾನು ಜೀವಂತನಾಗಿ ದ್ದನೆಂದು ಅಪೊಸ್ತಲರಿಗೆ ತನ್ನನ್ನು ತೋರಿಸಿಕೊಂಡು ನಾಲ್ವತ್ತು ದಿವಸಗಳ ತನಕ ಅವರಿಗೆ ಕಾಣಿಸಿಕೊಳ್ಳುತ್ತಾ ದೇವರ ರಾಜ್ಯಕ್ಕೆ ಸಂಬಂಧಪಟ್ಟ ವಿಷಯಗಳನ್ನು ಮಾತನಾಡುತ್ತಿದ್ದನು. ಆತನು ಅವರೊಂದಿಗೆ ಕೂಡಿಕೊಂಡಿದ್ದಾಗ--ನೀವು ಯೆರೂಸಲೇಮಿನಿಂದ ಹೊರಟುಹೋಗದೆ ನನ್ನಿಂದ ಕೇಳಿದ ತಂದೆಯ ವಾಗ್ದಾನಕೋಸ್ಕರ ಕಾಯ ಬೇಕೆಂದು ಅವರಿಗೆ ಅಪ್ಪಣೆಕೊಟ್ಟನು. ಯಾಕಂದರೆ ಯೋಹಾನನು ನಿಜವಾಗಿಯೂ ನೀರಿನಿಂದ ಬಾಪ್ತಿಸ್ಮ ಮಾಡಿಸಿದನು; ಆದರೆ ನೀವು ಇನ್ನು ಸ್ವಲ್ಪ ದಿವಸ ಗಳಲ್ಲಿಯೇ ಪವಿತ್ರಾತ್ಮನಿಂದ ಬಾಪ್ತಿಸ್ಮ ಹೊಂದುವಿರಿ ಎಂದು ಹೇಳಿದನು. ಅವರು ಕೂಡಿಬಂದಾಗ ಆತ ನಿಗೆ--ಕರ್ತನೇ, ಈ ಸಮಯದಲ್ಲಿಯೇ ನೀನು ಇಸ್ರಾ ಯೇಲ್ಯರಿಗೆ ರಾಜ್ಯವನ್ನು ಪುನಃ ಸ್ಥಾಪಿಸುವಿಯೋ ಎಂದು ಕೇಳಿದರು. ಆತನು ಅವರಿಗೆ--ತಂದೆಯು ತನ್ನ ಸ್ವಂತ ಅಧಿಕಾರದಲ್ಲಿ ಇಟ್ಟುಕೊಂಡಿರುವ ಸಮಯ ಗಳನ್ನೂ ಕಾಲಗಳನ್ನೂ ತಿಳಿದುಕೊಳ್ಳುವದು ನಿಮಗೆ ಸಂಬಂಧಪಟ್ಟದ್ದಲ್ಲ. ಆದರೆ ಪವಿತ್ರಾತ್ಮನು ನಿಮ್ಮ ಮೇಲೆ ಬಂದಾಗ ನೀವು ಬಲವನ್ನು ಹೊಂದುವಿರಿ; ಯೆರೂಸಲೇಮಿನಲ್ಲಿಯೂ ಎಲ್ಲಾ ಯೂದಾಯದ ಲ್ಲಿಯೂ ಸಮಾರ್ಯದಲ್ಲಿಯೂ ಭೂಮಿಯ ಕಟ್ಟ ಕಡೆಯವರೆಗೂ ನೀವು ನನಗೆ ಸಾಕ್ಷಿಗಳಾಗಿರುವಿರಿ ಎಂದು ಹೇಳಿದನು. ಇವುಗಳನ್ನು ಹೇಳಿದ ಮೇಲೆ ಅವರು ನೋಡುತ್ತಿರುವಾಗ ಆತನು ಮೇಲಕ್ಕೆ ಎತ್ತಲ್ಪಟ್ಟನು; ಮೋಡವು ಅವರ ದೃಷ್ಟಿಗೆ ಮರೆಮಾಡಿ ಆತನನ್ನು ಸ್ವೀಕರಿಸಿತು.