Psalms · chapter 68 · verse 19
Psalm 68:19 in Kannada
ಪ್ರತಿ ದಿನವೂ ನಮ್ಮನ್ನು ಮೇಲುಗಳಿಂದ ತುಂಬಿಸು,ಕರ್ತನು ಅಂದರೆ ನಮ್ಮ ರಕ್ಷಣೆಯ ದೇವರು ಸ್ತುತಿ ಹೊಂದಲಿ. ಸೆಲಾ.
Prati dinavoo nammannu melugalinda tumbisu,kartanu andare namma rakshaneya devaru stuti hondali. Selaa.
Psalm 68:19 in English
- King James Version (KJV)
- Blessed [be] the Lord, [who] daily loadeth us [with benefits, even] the God of our salvation. Selah.
- World English Bible (WEB)
- Blessed be the Lord, who daily bears our burdens, even the God who is our salvation. Selah.
- American Standard Version (ASV)
- Blessed be the Lord, who daily beareth our burden, Even the God who is our salvation. [Selah
- Bible in Basic English (BBE)
- Praise be to the Lord, who is our support day by day, even the God of our salvation. (Selah.)
- Darby Translation (DBY)
- Blessed be the Lord: day by day doth he load us [with good], the God who is our salvation. Selah.
- Webster's Bible (WBS)
- Blessed [be] the LORD, [who] daily loadeth us [with benefits] , [even] the God of our salvation. Selah.
- Young's Literal Translation (YLT)
- Blessed [is] the Lord, day by day He layeth on us. God Himself [is] our salvation. Selah.
Read in context
- 17ದೇವರ ರಥಗಳು ಇಪ್ಪತ್ತು ಸಾವಿರವು, ಸಾವಿರಾರು ದೂತರು ಗಳು; ಕರ್ತನು ಸೀನಾಯಿಯಲ್ಲಿ ಇದ್ದ ಹಾಗೆ ಅವರೊಳಗೆ ಪರಿಶುದ್ಧ ಸ್ಥಳದಲ್ಲಿ ಇದ್ದಾನೆ.
- 18ನೀನು ಉನ್ನತಕ್ಕೆ ಏರಿಹೋಗಿ ಸೆರೆಯವರನ್ನು ಸೆರೆಯಾಗಿ ನಡೆಸಿದಿ, ಕರ್ತನಾದ ದೇವರು ಅವರ ಮಧ್ಯದಲ್ಲಿ ವಾಸಿಸುವ ಹಾಗೆ ಮನುಷ್ಯರಿಗಾಗಿಯೂ ಹೌದು, ತಿರುಗಿ ಬಿದ್ದವರಿಗಾಗಿಯೂ ಸ್ವೀಕರಿಸಿದಿ.
- 19ಪ್ರತಿ ದಿನವೂ ನಮ್ಮನ್ನು ಮೇಲುಗಳಿಂದ ತುಂಬಿಸು,ಕರ್ತನು ಅಂದರೆ ನಮ್ಮ ರಕ್ಷಣೆಯ ದೇವರು ಸ್ತುತಿ ಹೊಂದಲಿ. ಸೆಲಾ.
- 20ನಮ್ಮ ದೇವರು ರಕ್ಷಣೆಯ ದೇವರಾಗಿದ್ದಾನೆ; ನಮ್ಮ ಕರ್ತನಾದ ದೇವರು ಮರಣದಿಂದ ತಪ್ಪಿಸಲು ಶಕ್ತನಾಗಿದ್ದಾನೆ.
- 21ದೇವರು ತನ್ನ ಶತ್ರುಗಳ ತಲೆ ಯನ್ನೂ ತನ್ನ ಅಪರಾಧಗಳಲ್ಲಿ ಮುಂದುವರಿಯುವ ತುಂಬು ಗೂದಲಿನ ತಲೆಯನ್ನೂ ಗಾಯಪಡಿಸುತ್ತಾನೆ.
Cross references
- Isaiah 46:4 ಯೆಶಾಯ 46:4ನಿಮ್ಮ ಮುಪ್ಪಿನ ಪ್ರಾಯದ ವರೆಗೆ ನಾನೇ (ಆಧಾರ) ನರೆಗೂದಲು ಬಂದಾಗಲೂ ನಾನು ನಿಮ್ಮನ್ನು ಹೊರುವೆನು, ನಾನೇ ಉಂಟುಮಾಡಿದೆನು, ನಾನೇ ಹೊರುವೆನು, ಅಂತೂ ನಾನು ನಿಮ್ಮನ್ನು ಹೊತ್ತು ಬಿಡುಗಡೆ ಮಾಡುವೆನು.
- Lamentations 3:23 ಪ್ರಲಾಪಗಳು 3:23ಅವು ಪ್ರತಿ ಮುಂಜಾನೆಯೂ ಹೊಸದಾಗಿರುವವು; ನಿನ್ನ ನಂಬಿಗಸ್ತಿಕೆಯು ಮಹತ್ತಾದದ್ದು.
- Ephesians 1:3 ಎಫೆಸದವರಿಗೆ 1:3ನಮ್ಮ ಕರ್ತನಾದ ಯೇಸು ಕ್ರಿಸ್ತನ ದೇವರೂ ತಂದೆಯೂ ಆಗಿರುವಾತನಿಗೆ ಸ್ತೋತ್ರ. ಆತನು ಪರಲೋಕದಲ್ಲಿನ ಸಕಲ ಆತ್ಮೀಯ ಆಶೀರ್ವಾದ ಗಳನ್ನು ನಮಗೆ ಕ್ರಿಸ್ತನಲ್ಲಿ ಅನುಗ್ರಹಿಸಿದ್ದಾನೆ.
- Psalm 55:22 ಕೀರ್ತನೆಗಳು 55:22ನಿನ್ನ ಭಾರವನ್ನು ಕರ್ತನ ಮೇಲೆ ಹಾಕು; ಆತನು ನಿನಗೆ ಆಧಾರವಾಗಿರುವನು. ಆತನು ಎಂದೆಂದಿಗೂ ನೀತಿವಂತನನ್ನು ಕದಲಗೊಡಿಸನು.ಓ ದೇವರೇ, ನೀನು ಅವರನ್ನು ನಾಶನದ ಕುಣಿಯಲ್ಲಿ ಇಳಿಯ ಮಾಡುವಿ. ಕೊಲೆಪಾತಕರೂ ಮೋಸಗಾರರೂ ತಮ್ಮ ಆಯುಷ್ಯದ ದಿವಸಗಳಲ್ಲಿ ಅರ್ದದಷ್ಟಾದರೂ ಜೀವಿ ಸುವದಿಲ್ಲ; ನಾನು ನಿನ್ನಲ್ಲಿ ಭರವಸವಿಡುತ್ತೇನೆ.
- Psalm 103:1–22 ಕೀರ್ತನೆಗಳು 103:1–22ಓ ನನ್ನ ಮನವೇ, ಕರ್ತನನ್ನೂ ನನ್ನ ಎಲ್ಲಾ ಅಂತರಂಗವೇ, ಆತನ ಪರಿಶುದ್ಧವಾದ ಹೆಸರನ್ನೂ ಸ್ತುತಿಸು. ಓ ನನ್ನ ಮನವೇ, ಕರ್ತನನ್ನು ಸ್ತುತಿಸು. ಆತನ ಉಪಕಾರಗಳಲ್ಲಿ ಒಂದನ್ನೂ ಮರೆತುಬಿಡಬೇಡ. ಆತನು ನಿನ್ನ ಅಪ ರಾಧಗಳನ್ನೆಲ್ಲಾ ಮನ್ನಿಸಿ ನಿನ್ನ ರೋಗಗಳನ್ನೆಲ್ಲಾ ಸ್ವಸ್ಥ ಮಾಡಿ ನಿನ್ನ ಜೀವವನ್ನು ನಾಶದೊಳಗಿಂದ ವಿಮೋ ಚಿಸಿ ಪ್ರೀತಿ ಕೃಪೆಯನ್ನೂ ಅಂತಃಕರಣಗಳನ್ನೂ ನಿನಗೆ ಕಿರೀಟವಾಗಿ ಇಟ್ಟು ನಿನ್ನ ಯೌವನವು ಹದ್ದಿನಂತೆ ಹೊಸದಾಗುವ ಹಾಗೆ ನಿನ್ನ ಬಾಯಿಯನ್ನು ಒಳ್ಳೇದ ರಿಂದ ತೃಪ್ತಿಪಡಿಸುತ್ತಾನೆ. ಕುಗ್ಗಿಸಲ್ಪಡುವವರೆಲ್ಲರಿಗೆ ಕರ್ತನು ನೀತಿಯನ್ನೂ ನ್ಯಾಯವನ್ನೂ ನಡಿಸುತ್ತಾನೆ. ಆತನು ತನ್ನ ಮಾರ್ಗಗಳನ್ನು ಮೋಶೆಗೂ ತನ್ನ ಕ್ರಿಯೆಗಳನ್ನು ಇಸ್ರಾಯೇಲಿನ ಮಕ್ಕಳಿಗೂ ತಿಳಿಯಮಾಡಿದನು. ಕರ್ತನು ಅಂತಃಕರಣವೂ ದಯೆಯೂ ದೀರ್ಘಶಾಂತಿಯೂ ಬಹಳ ಕೃಪೆಯೂ ಉಳ್ಳವನಾಗಿದ್ದಾನೆ. ಆತನು ಸದಾಕಾಲಕ್ಕೂ ಗದರಿಸುವದಿಲ್ಲ; ನಿತ್ಯವೂ ಕೋಪಿ ಸುವಾತನಲ್ಲ; ನಮ್ಮ ಪಾಪಗಳಿಗೆ ತಕ್ಕಂತೆ ನಮಗೆ ಶಿಕ್ಷಿಸಲಿಲ್ಲ; ನಮ್ಮ ಅಪರಾಧಗಳ ಪ್ರಕಾರ ನಮ್ಮನ್ನು ದಂಡಿಸಲಿಲ್ಲ. ಭೂಮಿಯ ಮೇಲೆ ಆಕಾಶವು ಎಷ್ಟು ಉನ್ನತವೋ ಆತನ ಕೃಪೆಯು ಆತನಿಗೆ ಭಯಪಡುವವರ ಮೇಲೆ ಅಷ್ಟು ಅಪಾರವಾಗಿದೆ. ಪೂರ್ವಕ್ಕೂ ಪಶ್ಚಿಮಕ್ಕೂ ಎಷ್ಟು ದೂರವೋ ನಮ್ಮ ದ್ರೋಹಗಳನ್ನು ನಮ್ಮಿಂದ ಅಷ್ಟು ದೂರ ಮಾಡಿದ್ದಾನೆ. ತಂದೆಯು ಮಕ್ಕಳ ಮೇಲೆ ಅಂತಃಕರಣ ಪಡುವ ಪ್ರಕಾರ ಕರ್ತನು ತನಗೆ ಭಯಪಡುವವರ ಮೇಲೆ ಅಂತಃಕರಣಪಡುವವನಾಗಿದ್ದಾನೆ. ಆತನು ನಮ್ಮ ಪ್ರಕೃತಿಯನ್ನು ತಿಳುಕೊಂಡು ನಾವು ಧೂಳಿ ಯಾಗಿದ್ದೇವೆಂದು ಜ್ಞಾಪಕಮಾಡಿಕೊಳ್ಳುತ್ತಾನೆ; ಮನುಷ್ಯನ ದಿವಸಗಳೋ ಹುಲ್ಲಿನ ಹಾಗೆ ಅವೆ; ಅವನು ಹೊಲದ ಹೂವಿನ ಹಾಗೆಯೇ ಶೋಭಿಸುತ್ತಾನೆ. ಆದಾಗ್ಯೂ ಗಾಳಿಯು ಅದರ ಮೇಲೆ ಬೀಸುತ್ತಲೇ ಅದು ಇಲ್ಲದೆ ಹೋಗುತ್ತದೆ; ಅದರ ಸ್ಥಳವು ಅದನ್ನು ಇನ್ನು ಅರಿಯದು. ಆದರೆ ಕರ್ತನ ಕೃಪೆಯು ಆತನಿಗೆ ಭಯಪಡುವವರ ಮೇಲೆಯೂ ಆತನ ನೀತಿಯು ಮಕ್ಕಳ ಮಕ್ಕಳಿಗೂ ಆತನ ಒಡಂಬಡಿಕೆಯನ್ನು ಕೈಕೊಂಡು ಆತನ ಕಟ್ಟಳೆಗಳನ್ನು ನೆನಸಿ ಅದರಂತೆ ಮಾಡುವವರಿಗೂ ನಿತ್ಯತ್ವದಿಂದ ನಿತ್ಯತ್ವಕ್ಕೂ ಇರುವದು. ಕರ್ತನು ಆಕಾಶಗಳಲ್ಲಿ ತನ್ನ ಸಿಂಹಾಸನವನ್ನು ಸ್ಥಾಪಿಸಿದ್ದಾನೆ; ಆತನ ರಾಜ್ಯವು ಎಲ್ಲರ ಮೇಲೆ ಆಳುತ್ತದೆ. ಆತನ ದೂತರೇ, ಆತನ ಮಾತಿನ ಸ್ವರವನ್ನು ಕೇಳಿ, ಆತನ ಆಜ್ಞೆಗಳನ್ನು ನಡಿಸುವ ಶ್ರೇಷ್ಠರಾದ ಶೂರರೇ, ಕರ್ತನನ್ನು ಸ್ತುತಿಸಿರಿ. ಆತನ ಎಲ್ಲಾ ಸೈನ್ಯಗಳೇ, ಆತನ ಇಷ್ಟವನ್ನು ನಡಿಸುವ ಆತನ ಸೇವಕರೇ, ಕರ್ತನನ್ನು ಸ್ತುತಿಸಿರಿ.ಆತನ ಆಳಿಕೆಯ ಎಲ್ಲಾ ಸ್ಥಳಗಳಲ್ಲಿ ಇರುವ ಆತನ ಎಲ್ಲಾ ಕೆಲಸಗಳೇ. ಕರ್ತನನ್ನು ಸ್ತುತಿಸಿರಿ. ನನ್ನ ಮನವೇ, ಕರ್ತನನ್ನು ಸ್ತುತಿಸು. ಆತನ ಆಳಿಕೆಯ ಎಲ್ಲಾ ಸ್ಥಳಗಳಲ್ಲಿ ಇರುವ ಆತನ ಎಲ್ಲಾ ಕೆಲಸಗಳೇ. ಕರ್ತನನ್ನು ಸ್ತುತಿಸಿರಿ. ನನ್ನ ಮನವೇ, ಕರ್ತನನ್ನು ಸ್ತುತಿಸು.
- Psalm 32:7 ಕೀರ್ತನೆಗಳು 32:7ನೀನು ನನ್ನ ಮರೆಯು; ಇಕ್ಕಟ್ಟಿನಿಂದ ನನ್ನನ್ನು ಕಾಯುತ್ತೀ; ಬಿಡುಗಡೆಯ ಹಾಡುಗಳಿಂದ ನನ್ನನ್ನು ಆವರಿಸಿ ಕೊಳ್ಳುತ್ತೀ ಸೆಲಾ.
- Psalm 65:5 ಕೀರ್ತನೆಗಳು 65:5ನಮ್ಮ ರಕ್ಷಣೆಯ ಓ ದೇವರೇ, ಭಯಂಕರವಾದ ವುಗಳಿಂದ ನೀತಿಯಲ್ಲಿ ನೀನು ನಮಗೆ ಉತ್ತರ ಕೊಡುವಿ; ಭೂಮಿಯ ಎಲ್ಲಾ ಅಂತ್ಯಗಳಿಗೂ ಸಮುದ್ರ ದಲ್ಲಿ ದೂರವಾದವರಿಗೂ ನೀನು ಭರವಸವಾಗಿದ್ದೀ.
- Psalm 139:17 ಕೀರ್ತನೆಗಳು 139:17ಓ ದೇವರೇ, ನಿನ್ನ ಆಲೋಚನೆಗಳು ನನಗೆ ಎಷ್ಟೋ ಪ್ರಿಯವಾಗಿವೆ! ಅವುಗಳ ಸಂಖ್ಯೆ ಎಷ್ಟೋ ದೊಡ್ಡ ದಾಗಿದೆ.
- Psalm 72:17–19 ಕೀರ್ತನೆಗಳು 72:17–19ಆತನ ನಾಮವು ಎಂದೆಂದಿಗೂ ಇರುವದು; ಸೂರ್ಯನು ಇರುವವರೆಗೂ ಆತನ ಹೆಸರು ಇರು ವದು. ಮನುಷ್ಯರು ಆತನಲ್ಲಿ ಆಶೀರ್ವಾದ ಹೊಂದು ವರು. ಎಲ್ಲಾ ಜನಾಂಗಗಳು ಆತನನ್ನು ಭಾಗ್ಯವಂತ ನೆಂದು ಕರೆಯುವರು. ಒಬ್ಬನೇ ಅದ್ಭುತಗಳನ್ನು ಮಾಡುವ ಇಸ್ರಾಯೇಲಿನ ದೇವರಾಗಿರುವ ಕರ್ತನಾದ ದೇವರಿಗೆ ಸ್ತೋತ್ರವಾಗಲಿ. ಆತನ ಮಹಿಮೆಯುಳ್ಳ ಹೆಸರಿಗೆ ಎಂದೆಂದಿಗೂ ಸ್ತೋತ್ರವಾಗಲಿ; ಆತನ ಮಹಿ ಮೆಯು ಭೂಮಿಯನ್ನೆಲ್ಲಾ ತುಂಬಲಿ. ಆಮೆನ್. ಆಮೆನ್.ಇಷಯನ ಮಗನಾದ ದಾವೀದನ ಪ್ರಾರ್ಥನೆಗಳು ಮುಗಿದವೆ.