Psalms · chapter 68 · verse 27
Psalm 68:27 in Kannada
ಅಲ್ಲಿ ಅವರನ್ನಾಳುವವರ ಕೂಡ ಚಿಕ್ಕ ಬೆನ್ಯಾ ವಿಾನನು ಅವರ ನಾಯಕರಾದ ಯೆಹೂದನ ಪ್ರಧಾ ನರೂ ಅವರ ಸಮೂಹವೂ ಜೆಬುಲೂನನ, ನಫ್ತಾ ಲಿಯ ಪ್ರಧಾನರೂ ಇದ್ದಾರೆ.
Alli avarannaaluvavara kooda chikka benyaa viాnanu avara naayakaraada yehoodana pradhaa naroo avara samoohavoo jebuloonana, naphtaa liya pradhaanaroo iddaare.
Psalm 68:27 in English
- King James Version (KJV)
- There [is] little Benjamin [with] their ruler, the princes of Judah [and] their council, the princes of Zebulun, [and] the princes of Naphtali.
- World English Bible (WEB)
- There is little Benjamin, their ruler, the princes of Judah, their council, the princes of Zebulun, and the princes of Naphtali.
- American Standard Version (ASV)
- There is little Benjamin their ruler, The princes of Judah [and] their council, The princes of Zebulun, the princes of Naphtali.
- Bible in Basic English (BBE)
- There is little Benjamin ruling them, the chiefs of Judah and their army, the rulers of Zebulun and the rulers of Naphtali.
- Darby Translation (DBY)
- There is little Benjamin, their ruler; the princes of Judah, their company; the princes of Zebulun, the princes of Naphtali.
- Webster's Bible (WBS)
- There [is] little Benjamin [with] their ruler, the princes of Judah [and] their counsel, the princes of Zebulun, [and] the princes of Naphtali.
- Young's Literal Translation (YLT)
- There [is] little Benjamin their ruler, Heads of Judah their defence, Heads of Zebulun — heads of Naphtali.
Read in context
- 25ಹಾಡು ವವರು ಮುಂದಾಗಿಯೂ ಬಾರಿಸುವವರು ಹಿಂದಾ ಗಿಯೂ ಹೋದರು, ಅವರಲ್ಲಿ ದಮ್ಮಡಿ ಬಾರಿಸುವ ಕನ್ಯೆಯರು ಇದ್ದರು.
- 26ಸಭೆಗಳಲ್ಲಿ ದೇವರನ್ನು ಸ್ತುತಿ ಸಿರಿ; ಇಸ್ರಾಯೇಲನ ಬುಗ್ಗೆಯಿಂದ ಕರ್ತನನ್ನು ಸ್ತುತಿ ಸಿರಿ.
- 27ಅಲ್ಲಿ ಅವರನ್ನಾಳುವವರ ಕೂಡ ಚಿಕ್ಕ ಬೆನ್ಯಾ ವಿಾನನು ಅವರ ನಾಯಕರಾದ ಯೆಹೂದನ ಪ್ರಧಾ ನರೂ ಅವರ ಸಮೂಹವೂ ಜೆಬುಲೂನನ, ನಫ್ತಾ ಲಿಯ ಪ್ರಧಾನರೂ ಇದ್ದಾರೆ.
- 28ನಿನ್ನ ದೇವರು ನಿನ್ನ ಬಲವನ್ನು ಆಜ್ಞಾಪಿಸಿದ್ದಾನೆ; ಓ ದೇವರೇ, ನಮಗೋಸ್ಕರ ನಡಿಸಿದ ಕಾರ್ಯವನ್ನು ಬಲಪಡಿಸು.
- 29ಯೆರೂಸಲೇಮಿನಲ್ಲಿರುವ ನಿನ್ನ ಮಂದಿ ರದ ನಿಮಿತ್ತ ಅರಸುಗಳು ನಿನಗೆ ಕಾಣಿಕೆಗಳನ್ನು ತರು ವರು.
Cross references
- 1 Samuel 9:21 1 ಸಮುವೇಲನು 9:21ಅದಕ್ಕೆ ಸೌಲನು ಅವನಿಗೆ ಪ್ರತ್ಯುತ್ತರ ವಾಗಿ--ನಾನು ಇಸ್ರಾಯೇಲ್ಯರ ಗೋತ್ರಗಳಲ್ಲೆಲ್ಲಾ ಚಿಕ್ಕದಾದ ಬೆನ್ಯಾವಿಾನನ ಗೋತ್ರದವನಲ್ಲವೇ? ಇದ ಲ್ಲದೆ ಬೆನ್ಯಾವಿಾನನ ಗೋತ್ರವು ಸಮಸ್ತ ಗೋತ್ರಗಳಲ್ಲಿ ನನ್ನ ಗೋತ್ರವು ಚಿಕ್ಕದಾದದ್ದಲ್ಲವೇ? ನೀನು ಯಾಕೆ ಹೀಗೆ ನನ್ನ ಸಂಗಡ ಮಾತನಾಡುತ್ತೀ ಅಂದನು.
- Psalm 60:7 ಕೀರ್ತನೆಗಳು 60:7ಗಿಲ್ಯಾದ್ ಮನಸ್ಸೆ ನನ್ನದು; ಎಫ್ರಾಯಾಮ್ ನನ್ನ ತಲೆಯ ಬಲವಾಗಿದೆ; ಯೆಹೂದನು ನನಗೆ ನ್ಯಾಯ ಕೊಡುವವನು;
- Isaiah 11:13 ಯೆಶಾಯ 11:13ಎಫ್ರಾಯಾಮಿನ ಹೊಟ್ಟೇಕಿಚ್ಚು ತೊಲಗಿ ಯೆಹೂದದ ವಿರೋಧಿಗಳು ಕಡಿದುಹಾಕಲ್ಪಡುವರು; ಹೀಗೆ ಎಫ್ರಾಯಾಮು ಯೆಹೂದದ ಮೇಲೆ ಹೊಟ್ಟೇ ಕಿಚ್ಚುಪಡದು, ಯೆಹೂದವು ಎಫ್ರಾಯಾಮನ್ನು ಹಿಂಸಿ ಸದು.
- 1 Chronicles 12:16 1 ಪೂರ್ವಕಾಲವೃತ್ತಾಂತ 12:16ಬೆನ್ಯಾವಿಾನನ ಮತ್ತು ಯೆಹೂದನ ಮಕ್ಕಳಲ್ಲಿ ಕೆಲವರು ಬಲವಾದ ಸ್ಥಳದಲ್ಲಿದ್ದ ದಾವೀದನ ಬಳಿಗೆ ಬಂದರು.
- Genesis 42:32 ಆದಿಕಾಂಡ 42:32ನಾವು ಒಬ್ಬನೇ ತಂದೆಗೆ ಹುಟ್ಟಿದ ಹನ್ನೆರಡು ಮಂದಿ ಸಹೋದರರಾಗಿದ್ದೇವೆ; ಒಬ್ಬನು ಇಲ್ಲ; ಚಿಕ್ಕವನು ಇಂದು ನಮ್ಮ ತಂದೆಯ ಸಂಗಡ ಕಾನಾನ್ ದೇಶದಲ್ಲಿ ಇದ್ದಾನೆ ಅಂದೆವು.
- 1 Chronicles 27:12 1 ಪೂರ್ವಕಾಲವೃತ್ತಾಂತ 27:12ಒಂಭತ್ತನೇ ತಿಂಗಳಿನ ಒಂಭತ್ತನೆಯವನು ಬೆನ್ಯಾವಿಾನ್ಯರಲ್ಲಿ ಒಬ್ಬನಾಗಿರುವ ಅನತೋತ್ಯನಾದ ಅಬೀಯೆಜೆರನು; ಅವನ ವರ್ಗದಲ್ಲಿ ಇಪ್ಪತ್ತುನಾಲ್ಕು ಸಾವಿರ ಜನರು.
- Judges 5:18 ನ್ಯಾಯಸ್ಥಾಪಕರು 5:18ಜೆಬುಲೂನನೂ ನಫ್ತಾ ಲಿಯೂ ಹೊಲದ ಎತ್ತರವಾದ ಸ್ಥಳಗಳಲ್ಲಿ ಮರಣಕ್ಕೂ ತಮ್ಮ ಪ್ರಾಣಗಳನ್ನು ಧೈರ್ಯವಾಗಿ ಇಟ್ಟ ಜನರಾ ಗಿದ್ದರು.
- Judges 21:6–25 ನ್ಯಾಯಸ್ಥಾಪಕರು 21:6–25ಆಗ ಇಸ್ರಾಯೇಲ್ ಮಕ್ಕಳು ತಮ್ಮ ಸಹೋದರ ನಾದ ಬೆನ್ಯಾವಿಾನನ ವಿಷಯವಾಗಿ ಪಶ್ಚಾತ್ತಾಪಪಟ್ಚು ಹೇಳಿದ್ದೇನಂದರೆ--ಈಹೊತ್ತು ಇಸ್ರಾಯೇಲಿನಲ್ಲಿ ಒಂದು ಗೋತ್ರವು ಛೇದಿಸಲ್ಪಟ್ಟು ಹೋಯಿತು. ನಾವು ನಮ್ಮ ಕುಮಾರ್ತೆಯರಲ್ಲಿ ಒಬ್ಬಳನ್ನಾದರೂ ಅವರಿಗೆ ಕೊಡುವದಿಲ್ಲವೆಂದು ನಾವು ಕರ್ತನ ಮೇಲೆ ಆಣೆ ಇಟ್ಟುಕೊಂಡದ್ದರಿಂದ ಉಳಿದವರಿಗೆ ಹೆಂಡತಿ ಯರು ದೊರಕುವಂತೆ ನಾವು ಅವರಿಗೋಸ್ಕರ ಏನು ಮಾಡೋಣ ಅಂದರು. ಇಸ್ರಾಯೇಲಿನ ಗೋತ್ರ ಗಳಲ್ಲಿ ಮಿಚ್ಪೆಗೆ ಕರ್ತನ ಬಳಿಗೆ ಬಾರದವರು ಯಾರಾ ದರೂ ಒಬ್ಬರಿದ್ದಾರೋ ಅಂದರು. ಆಗ ಇಗೋ, ಯಾಬೇಷ್ ಗಿಲ್ಯಾದಿನವರಲ್ಲಿ ಒಬ್ಬನಾದರೂ ಸಭೆಯ ಬಳಿಗೆ ಪಾಳೆಯಕ್ಕೆ ಬಂದದ್ದಿರಲಿಲ್ಲ. ಜನರು ಲೆಕ್ಕ ಮಾಡಲ್ಪಟ್ಟಾಗ ಇಗೋ, ಯಾಬೇಷ್ ಗಿಲ್ಯಾದಿನಲ್ಲಿ ಇರುವವರಲ್ಲಿ ಒಬ್ಬನಾದರೂ ಇದ್ದದ್ದಿಲ್ಲ. ಆಗ ಸಭೆಯು ಪರಾಕ್ರಮಶಾಲಿಗಳಲ್ಲಿ ಹನ್ನೆರಡು ಸಾವಿರ ಮನುಷ್ಯರನ್ನು ಅಲ್ಲಿಗೆ ಕಳುಹಿಸುವಾಗ ಅವರಿಗೆ--ನೀವು ಹೋಗಿ ಯಾಬೇಷ್ ಗಿಲ್ಯಾದಿನ ನಿವಾಸಿಗಳನ್ನೂ ಸ್ತ್ರೀಯರನ್ನೂ ಚಿಕ್ಕವರನ್ನೂ ಕೂಡಾ, ಕತ್ತಿಯಿಂದ ಹೊಡೆದು ಬಿಡಿರಿ. ನೀವು ಮಾಡಬೇಕಾದದ್ದೇನಂದರೆ--ಎಲ್ಲಾ ಗಂಡಸ ರನ್ನೂ ಪುರುಷನನ್ನು ಅರಿತ ಸ್ತ್ರೀಯರನ್ನೂ ನಿರ್ಮೂಲ ಮಾಡಿರೆಂದು ಆಜ್ಞಾಪಿಸಿದರು. ಹಾಗೆಯೆ ಯಾಬೇಷ್ ಗಿಲ್ಯಾದಿನ ನಿವಾಸಿಗಳಲ್ಲಿ ಅವರ ಸಂಗಡ ಮಲಗುವದರಿಂದ ಪುರುಷರನ್ನು ಅರಿಯದೆ ಇರುವ ನಾನೂರು ಮಂದಿ ಪ್ರಾಯದ ಕನ್ನಿಕೆಯರನ್ನು ಕಂಡು ಕೊಂಡು ಅವರನ್ನು ಕಾನಾನ್ದೇಶದಲ್ಲಿರುವ ಶೀಲೋ ವಿನಲ್ಲಿದ್ದ ಪಾಳೆಯಕ್ಕೆ ತಂದರು. ಆಗ ಸಭೆಯವ ರೆಲ್ಲರೂ ರಿಮ್ಮೋನ್ ಗುಡ್ಡದಲ್ಲಿರುವ ಬೆನ್ಯಾವಿಾನನ ಮಕ್ಕಳ ಸಂಗಡ ಮಾತನಾಡಿ ಅವರಿಗೆ ಸಮಾಧಾನ ವನ್ನು ಸಾರಲು ಕೆಲವರನ್ನು ಕಳುಹಿಸಿದರು. ಆ ಕಾಲದಲ್ಲಿ ಬೆನ್ಯಾವಿಾನ್ಯರು ತಿರಿಗಿ ಅವರ ಬಳಿಗೆ ಬಂದರು. ಅವರು ಯಾಬೇಷ್ ಗಿಲ್ಯಾದಿನ ಸ್ತ್ರೀಯ ರಲ್ಲಿ ಜೀವದಿಂದ ಉಳಿಸಿದ ಸ್ತ್ರೀಯರನ್ನು ಅವರಿಗೆ ಹೆಂಡತಿಯರಾಗಿ ಕೊಟ್ಟರು. ಅದಾಗ್ಯೂ ಅವರಿಗೆ ತಕ್ಕಷ್ಟು ಹೆಂಡತಿಯರು ಸಿಕ್ಕಲಿಲ್ಲ. ಕರ್ತನು ಇಸ್ರಾಯೇಲ್ ಗೋತ್ರಗಳಲ್ಲಿ ಒಂದು ಲೋಪವನ್ನು ಮಾಡಿದ್ದರಿಂದ ಜನರು ಬೆನ್ಯಾವಿಾನ ನಿಗಾಗಿ ಪಶ್ಚಾತ್ತಾಪಪಟ್ಟರು. ಸಭೆಯ ಹಿರಿಯರುಬೆನ್ಯಾವಿಾನನ ಗೋತ್ರದ ಸ್ತ್ರೀಯರು ನಾಶವಾದದ್ದ ರಿಂದ ಉಳಿದ ಜನರಿಗೆ ಹೆಂಡತಿಯರು ದೊರಕುವದ ಕ್ಕಾಗಿ ಏನು ಮಾಡೋಣ ಅಂದರು. ಇಸ್ರಾಯೇಲಿ ನಲ್ಲಿ ಒಂದು ಗೋತ್ರವು ಅಳಿದು ಹೋಗದ ಹಾಗೆ ತಪ್ಪಿಸಿಕೊಂಡ ಬೆನ್ಯಾವಿಾನ್ಯರಿಗೆ ಬಾಧ್ಯತೆ ಇರಬೇಕು. ನಾವಾದರೋ ನಮ್ಮ ಕುಮಾರ್ತೆಯರಲ್ಲಿ ಅವರಿಗೆ ಹೆಣ್ಣು ಕೊಡಕೂಡದು. ಯಾಕಂದರೆ, ಬೆನ್ಯಾವಿಾನ್ಯರಿಗೆ ಹೆಣ್ಣು ಕೊಡುವವನು ಶಪಿಸಲ್ಪಡಲೆಂದು ಇಸ್ರಾಯೇ ಲಿನ ಮಕ್ಕಳು ಆಣೆ ಇಟ್ಟುಕೊಂಡಿದ್ದಾರೆ ಅಂದರು. ಅವರು--ಇಗೋ, ಬೇತೇಲಿಗೆ ಉತ್ತರದಲ್ಲಿಯೂ ಬೇತೇಲಿನಿಂದ ಶೆಕೆಮಿಗೆ ಹೋಗುವ ಹೆದ್ದಾರಿಯ ಮೂಡಲಲ್ಲಿಯೂ ಲೆಬೋನಕ್ಕೆ ದಕ್ಷಿಣದಲ್ಲಿರುವ ಶೀಲೋವಿನಲ್ಲಿ ಪ್ರತಿ ವರುಷ ಕರ್ತನ ಹಬ್ಬ ಉಂಟೆಂದು ಹೇಳಿದರು. ಅವರು ಬೆನ್ಯಾವಿಾನನ ಮಕ್ಕಳಿಗೆನೀವು ಹೋಗಿ ದ್ರಾಕ್ಷೇ ತೋಟಗಳಲ್ಲಿ ಹೊಂಚಿ ಕೊಂಡಿರ್ರಿ. ಇಗೋ, ಶೀಲೋವಿನ ಕುಮಾರ್ತೆ ಯರು ನಾಟ್ಯಮಾಡುತ್ತಾ ಹೊರಟು ಬರುವರು. ನೀವು ಅವರನ್ನು ನೋಡಿದಾಗ ದ್ರಾಕ್ಷೇ ತೋಟಗಳಿಂದ ಹೊರಟು ಶೀಲೋವಿನ ಕುಮಾರ್ತೆಯರಲ್ಲಿ ನಿಮ್ಮಲ್ಲಿ ಅವನವನು ತನಗೆ ಹೆಂಡತಿಯಾಗಿ ಒಬ್ಬೊಬ್ಬಳನ್ನು ಹಿಡುಕೊಂಡು ಬೆನ್ಯಾವಿಾನನ ದೇಶಕ್ಕೆ ಹೋಗಿರಿ ಎಂದು ಆಜ್ಞಾಪಿಸಿದರು. ಅವರ ತಂದೆಗಳಾದರೂ ಅವರ ಸಹೋದರರಾದರೂ ನಮ್ಮ ಸಂಗಡ ವ್ಯಾಜ್ಯ ವಾಡುವದಕ್ಕೆ ಬಂದರೆ ನಾವು ಅವರಿಗೆ--ಯುದ್ದದಲ್ಲಿ ನಾವು ಅವನಿಗೆ ಹೆಂಡತಿಯನ್ನು ತಕ್ಕೊಳ್ಳದ ಕಾರಣ ನಮಗೋಸ್ಕರ ಅವರ ಮೇಲೆ ದಯೆ ತೋರಿಸಿರಿ. ಯಾಕಂದರೆ ನೀವು ಈ ಸಮಯದಲ್ಲಿ ಅವರಿಗೆ ಕೊಟ್ಟು ಅಪರಾಧಸ್ಥರಾಗಲಿಲ್ಲ ಎಂಬದಾಗಿ ಹೇಳುತ್ತೇವೆ ಅಂದರು. ಆಗ ಬೆನ್ಯಾವಿಾನನ ಮಕ್ಕಳು ಅದೇ ಪ್ರಕಾರಮಾಡಿ ನಾಟ್ಯವಾಡುವ ಹೆಣ್ಣುಗಳಲ್ಲಿ ತಮ್ಮ ಲೆಕ್ಕಕ್ಕೆ ಸರಿಯಾಗಿ ಹಿಡುಕೊಂಡವರನ್ನು ಅವನವನು ತನಗೆ ಹೆಂಡತಿಯಾಗಿ ತೆಗೆದುಕೊಂಡು ತಮ್ಮ ಬಾಧ್ಯತೆಗೆ ತಿರುಗಿಕೊಂಡು ಹೋಗಿ ಪಟ್ಟಣಗಳನ್ನು ಕಟ್ಟಿ ಅವು ಗಳಲ್ಲಿ ವಾಸಿಸಿದರು. ಇಸ್ರಾಯೇಲ್ ಮಕ್ಕಳು ಆ ಕಾಲದಲ್ಲಿ ಆ ಸ್ಥಳ ವನ್ನು ಬಿಟ್ಟು ತಮ್ಮ ತಮ್ಮ ಗೋತ್ರಕ್ಕೂ ಕುಟುಂಬಕ್ಕೂ ಹೋದರು. ಅಲ್ಲಿಂದ ಒಬ್ಬೊಬ್ಬನು ತನ್ನ ಬಾಧ್ಯತೆಗೆ ಹೊರಟು ಹೋದನು.ಆ ದಿವಸದಲ್ಲಿ ಇಸ್ರಾ ಯೇಲಿನಲ್ಲಿ ಅರಸನು ಇರಲಿಲ್ಲ; ಒಬ್ಬೊಬ್ಬನು ತನ್ನ ದೃಷ್ಟಿಗೆ ಸರಿಯಾಗಿ ತೋಚಿದ್ದನ್ನು ಮಾಡಿದನು. ಆ ದಿವಸದಲ್ಲಿ ಇಸ್ರಾ ಯೇಲಿನಲ್ಲಿ ಅರಸನು ಇರಲಿಲ್ಲ; ಒಬ್ಬೊಬ್ಬನು ತನ್ನ ದೃಷ್ಟಿಗೆ ಸರಿಯಾಗಿ ತೋಚಿದ್ದನ್ನು ಮಾಡಿದನು.
- Judges 20:35 ನ್ಯಾಯಸ್ಥಾಪಕರು 20:35ಆದರೆ ಅವರು ತಮಗೆ ಕೇಡು ಸವಿಾಪವಾಗಿತ್ತೆಂದು ಅರಿಯದೆ ಇದ್ದರು. ಆಗ ಕರ್ತನು ಇಸ್ರಾಯೇಲಿನ ಮುಂದೆ ಬೆನ್ಯಾವಿಾನನನ್ನು ಹೊಡೆದನು. ಆ ದಿನದಲ್ಲಿ ಇಸ್ರಾಯೇಲ್ ಮಕ್ಕಳು ಬೆನ್ಯಾವಿಾನ್ಯರಲ್ಲಿ ಕತ್ತಿ ಹಿಡಿ ಯುವವರಾದ ಇಪ್ಪತ್ತೈದು ಸಾವಿರದ ನೂರು ಮನುಷ್ಯ ರನ್ನು ನಾಶಮಾಡಿದರು.
- 1 Chronicles 15:3 1 ಪೂರ್ವಕಾಲವೃತ್ತಾಂತ 15:3ದಾವೀ ದನು ಕರ್ತನ ಮಂಜೂಷವನ್ನು ತಾನು ಅದಕ್ಕೋಸ್ಕರ ಸಿದ್ಧಮಾಡಿದ ಅದರ ಸ್ಥಳಕ್ಕೆ ತಕ್ಕೊಂಡು ಬರುವ ನಿಮಿತ್ತ ಯೆರೂಸಲೇಮಿಗೆ ಸಮಸ್ತ ಇಸ್ರಾಯೇಲನ್ನು ಕೂಡಿಸಿ ಬರಮಾಡಿದನು.
- Psalm 47:9 ಕೀರ್ತನೆಗಳು 47:9ಜನರ ಅಧಿಪತಿಗಳು ಅಬ್ರಹಾಮನ ದೇವರ ಪ್ರಜೆಯ ಸಂಗಡ ಕೂಡಿ ಕೊಂಡಿದ್ದಾರೆ; ಭೂಮಿಯ ಗುರಾಣಿಗಳು ದೇವರ ವಶದಲ್ಲಿವೆ; ಆತನು ಬಹಳವಾಗಿ ಹೆಚ್ಚಿಸಲ್ಪಟ್ಟಿದ್ದಾನೆ.
- Ezekiel 37:19–27 ಯೆಹೆಜ್ಕೇಲನು 37:19–27ಇಗೋ, ದೇವ ರಾದ ಕರ್ತನು ಹೀಗೆ ಹೇಳುತ್ತಾನೆಂದು ಅವರಿಗೆ ಹೇಳು--ನಾನು ಎಫ್ರಾಯಾಮಿನ ಕೈಯಲ್ಲಿರುವ ಯೋಸೇಫನ ಕೋಲನ್ನೂ ಅವನ ಜೊತೆಗಾರರಾದ ಇಸ್ರಾಯೇಲ್ಯರ ಗೋತ್ರಗಳನ್ನೂ ತೆಗೆದುಕೊಂಡು ಅವನ ಸಂಗಡ ಅಂದರೆ ಯೆಹೂದನ ಕೋಲಿನ ಸಂಗಡ ಸೇರಿಸಿ ಅವುಗಳನ್ನು ಒಂದೇ ಕೋಲನ್ನಾಗಿ ಮಾಡುವೆನು. ಅವರು ನನ್ನ ಕೈಯಲ್ಲಿ ಒಂದಾಗುವರು ಎಂಬದು; ನೀನು ಬರೆದ ಆ ಕೋಲುಗಳನ್ನು ಅವರ ಕಣ್ಣುಗಳ ಮುಂದೆ ನಿನ್ನ ಕೈಯಲ್ಲಿರುವವು. ದೇವರಾದ ಕರ್ತನು ಹೀಗೆ ಹೇಳುತ್ತಾನೆಂದು ಅವರಿಗೆ ಹೇಳು--ನಾನು ಇಸ್ರಾಯೇಲನ ಮಕ್ಕಳನ್ನು ಅವರು ಹೋಗಿರುವ ಕಡೆಯಿಂದಲೂ ಅವರನ್ನು ಒಂದುಗೂಡಿಸಿ ಅವರನ್ನು ಅವರ ಸ್ವಂತ ದೇಶಕ್ಕೆ ತರುವೆನು. ನಾನು ಅವರನ್ನು ಇಸ್ರಾಯೇಲ್ ಪರ್ವತಗಳಿರುವ ದೇಶದಲ್ಲಿ ಒಂದೇ ಜನಾಂಗವನ್ನಾಗಿ ಮಾಡುತ್ತೇನೆ ಒಬ್ಬ ಅರಸನೇ ಅವರೆಲ್ಲ ರಿಗೂ ಅರಸನಾಗಿರುವನು; ಇನ್ನು ಮೇಲೆ ಅವರು ಎರಡು ಜನಾಂಗಗಳಾಗಲಿ ಅಥವಾ ರಾಜ್ಯಗಳಂತಾ ಗಲಿ ವಿಭಾಗಿಸಲ್ಪಡುವದಿಲ್ಲ. ಇಲ್ಲವೆ ಅವರು ಇನ್ನು ತಮ್ಮ ವಿಗ್ರಹಗಳಿಂದಲೂ ಅಸಹ್ಯಗಳಿಂದಲೂ ಎಲ್ಲಾ ಅಕ್ರಮಗಳಿಂದಲೂ ಅಶುದ್ಧವಾಗುವದಿಲ್ಲ; ಆದರೆ ನಾನು ಅವರನ್ನು ಪಾಪಮಾಡಿದವರ ಎಲ್ಲಾ ನಿವಾಸಿ ಗಳಿಂದ ರಕ್ಷಿಸಿ, ಅವರನ್ನು ಶುದ್ಧಮಾಡುವೆನು; ಹೀಗೆ ಅವರು ನನ್ನ ಜನರಾಗಿರುವರು ನಾನು ಅವರಿಗೆ ದೇವರಾಗಿರುವೆನು. ನನ್ನ ಸೇವಕನಾದ ದಾವೀದನು ಅವರ ಮೇಲೆ ಅರಸನಾಗಿರುವನು; ಅವರೆಲ್ಲರಿಗೂ ಒಬ್ಬನೇ ಕುರುಬನಿರುವನು ನನ್ನ ನ್ಯಾಯನಿಯಮ ಗಳನ್ನೇ ಅನುಸರಿಸುವಂತೆ ಮಾಡುವೆನು. ನನ್ನ ಸೇವಕನಾದ ಯಾಕೋಬನಿಗೆ ನಾನು ಕೊಟ್ಟ ದೇಶದಲ್ಲಿ ನಿಮ್ಮ ತಂದೆಗಳು(ಪಿತೃಗಳು) ವಾಸಮಾಡಿದ ಆ ದೇಶದಲ್ಲಿಯೂ ಅವರೂ ಅವರ ಮಕ್ಕಳೂ ಮತ್ತು ಅವರ ಮಕ್ಕಳ ಮಕ್ಕಳೂ ಎಂದೆಂದಿಗೂ ಅಲ್ಲಿಯೇ ವಾಸಮಾಡುವರು; ನನ್ನ ಸೇವಕನಾದ ದಾವೀದನು ಎಂದೆಂದಿಗೂ ಅವರಿಗೆ ಪ್ರಧಾನನಾಗಿರುವನು. ಇದಾದ ಮೇಲೆ ನಾನು ಅವರೊಂದಿಗೆ ಸಮಾ ಧಾನದ ಒಡಂಬಡಿಕೆಯನ್ನು ಮಾಡಿಕೊಳ್ಳುವೆನು; ಇದು ಅವರೊಂದಿಗೆ ನಿತ್ಯವಾದ ಒಡಂಬಡಿಕೆಯಾಗಿ ರುವದು; ನಾನು ಅವರನ್ನು ಆ ಸ್ಥಳದಲ್ಲಿರಿಸುವೆನು ಅವರನ್ನು ವೃದ್ಧಿಗೊಳಿಸುವೆನು; ನನ್ನ ಪರಿಶುದ್ಧ ಸ್ಥಳವನ್ನು ಎಂದೆಂದಿಗೂ ಅವರ ಮಧ್ಯದಲ್ಲಿಡುವೆನು. ನನ್ನ ಗುಡಾರವು ಸಹ ಅವರೊಂದಿಗಿರುವದು; ಹೌದು, ನಾನು ಅವರ ದೇವರಾಗಿರುವೆನು ಮತ್ತು ಅವರು ನನ್ನ ಜನರಾಗಿರುವರು.ನನ್ನ ಪರಿಶುದ್ಧ ಸ್ಥಳವು ಎಂದೆಂದಿಗೂ ಅವರ ಮಧ್ಯದೊಳಗಿರುವಾಗ, ಕರ್ತ ನಾದ ನಾನೇ ಇಸ್ರಾಯೇಲ್ಯರನ್ನು ಪರಿಶುದ್ಧ ಗೊಳಿಸಿದೆನೆಂದು ಅನ್ಯಜನರು ತಿಳಿದುಕೊಳ್ಳುವರು.