Psalms · chapter 68 · verse 30
Psalm 68:30 in Kannada
ಪ್ರತಿಯೊಬ್ಬನು ಬೆಳ್ಳಿಯ ತುಂಡುಗಳನ್ನು ಸಮರ್ಪಿಸುವ ವರೆಗೆ ಜನರ ಕರುಗಳ ಸಂಗಡ ಹೋರಿ ಗಳ ಗುಂಪನ್ನು ಭಲ್ಲೆಗಾರರ ಗುಂಪುನ್ನು ಗದರಿಸು. ಕಾಳಗದಲ್ಲಿ ಸಂತೋಷ ಪಡುವ ಜನರನ್ನು ನೀನು ಚದರಿಸು.
Pratiyobbanu belliya tundugalannu samarpisuva varege janara karugala sangada hori gala gumpannu bhallegaarara gumpunnu gadarisu. Kaalagadalli santosha paduva janarannu neenu chadarisu.
Psalm 68:30 in English
- King James Version (KJV)
- Rebuke the company of spearmen, the multitude of the bulls, with the calves of the people, [till every one] submit himself with pieces of silver: scatter thou the people [that] delight in war.
- World English Bible (WEB)
- Rebuke the wild animal of the reeds, the multitude of the bulls with the calves of the peoples. Trample under foot the bars of silver. Scatter the nations who delight in war.
- American Standard Version (ASV)
- Rebuke the wild beast of the reeds, The multitude of the bulls, with the calves of the peoples, Trampling under foot the pieces of silver: He hath scattered the peoples that delight in war.
- Bible in Basic English (BBE)
- Say sharp words to the beast among the water-plants, the band of strong ones, with the lords of the peoples, put an end to the people whose delight is in war.
- Darby Translation (DBY)
- Rebuke the beast of the reeds, the assembly of the strong, with the calves of the peoples: [every one] submitteth himself with pieces of silver. Scatter the peoples that delight in war.
- Webster's Bible (WBS)
- Rebuke the company of spearmen, the multitude of the bulls, with the calves of the people, [till every one shall] submit himself with pieces of silver: scatter thou the people [that] delight in war.
- Young's Literal Translation (YLT)
- Rebuke a beast of the reeds, a company of bulls, With calves of the peoples, Each humbling himself with pieces of silver, Scatter Thou peoples delighting in conflicts.
Read in context
- 28ನಿನ್ನ ದೇವರು ನಿನ್ನ ಬಲವನ್ನು ಆಜ್ಞಾಪಿಸಿದ್ದಾನೆ; ಓ ದೇವರೇ, ನಮಗೋಸ್ಕರ ನಡಿಸಿದ ಕಾರ್ಯವನ್ನು ಬಲಪಡಿಸು.
- 29ಯೆರೂಸಲೇಮಿನಲ್ಲಿರುವ ನಿನ್ನ ಮಂದಿ ರದ ನಿಮಿತ್ತ ಅರಸುಗಳು ನಿನಗೆ ಕಾಣಿಕೆಗಳನ್ನು ತರು ವರು.
- 30ಪ್ರತಿಯೊಬ್ಬನು ಬೆಳ್ಳಿಯ ತುಂಡುಗಳನ್ನು ಸಮರ್ಪಿಸುವ ವರೆಗೆ ಜನರ ಕರುಗಳ ಸಂಗಡ ಹೋರಿ ಗಳ ಗುಂಪನ್ನು ಭಲ್ಲೆಗಾರರ ಗುಂಪುನ್ನು ಗದರಿಸು. ಕಾಳಗದಲ್ಲಿ ಸಂತೋಷ ಪಡುವ ಜನರನ್ನು ನೀನು ಚದರಿಸು.
- 31ಐಗುಪ್ತದಿಂದ ಪ್ರಧಾನರು ಬರುವರು; ಕೂಷ್ ತನ್ನ ಕೈಗಳನ್ನು ದೇವರ ಕಡೆಗೆ ಬೇಗ ಚಾಚುವದು.
- 32ಭೂಮಿಯ ರಾಜ್ಯಗಳೇ, ನೀವು ದೇವರಿಗೆ ಹಾಡಿರಿ; ಕರ್ತನಿಗೆ ಸ್ತುತಿಗಳನ್ನು ಹಾಡಿರಿ. ಸೆಲಾ.
Cross references
- Psalm 22:12–13 ಕೀರ್ತನೆಗಳು 22:12–13ಬಹಳ ಹೋರಿಗಳು ನನ್ನನ್ನು ಸುತ್ತಿಕೊಂಡಿವೆ; ಬಾಷಾನಿನ ಬಲವಾದ ಹೋರಿಗಳು ನನ್ನನ್ನು ಮುತ್ತಿ ಕೊಂಡಿವೆ. ಹರಿದು ಬಿಡುವಂಥ ಗರ್ಜಿಸುವ ಸಿಂಹದ ಹಾಗೆ ನನ್ನ ಮೇಲೆ ತಮ್ಮ ಬಾಯಿ ತೆರೆದಿ ದ್ದಾರೆ.
- Psalm 89:10 ಕೀರ್ತನೆಗಳು 89:10ಕೊಲ್ಲ ಲ್ಪಟ್ಟ ಒಬ್ಬನಂತೆ ನೀನು ರಾಹಬನ್ನು ತುಂಡಾಗುವಂತೆ ಒಡೆದಿದ್ದೀ. ನಿನ್ನ ಬಲದ ತೋಳಿನಿಂದ ನಿನ್ನ ಶತ್ರು ಗಳನ್ನು ಚದರಿಸಿ ಬಿಟ್ಟಿದ್ದೀ.
- Romans 7:22 ರೋಮಾಪುರದವರಿಗೆ 7:22ಹೀಗಿದ್ದಾಗ್ಯೂ ಒಳಮನುಷ್ಯನಿಗನು ಗುಣವಾಗಿ ದೇವರ ನಿಯಮದಲ್ಲಿ ಆನಂದಪಡುವವ ನಾಗಿದ್ದೇನೆ.
- Isaiah 34:7 ಯೆಶಾಯ 34:7ಕಾಡು ಕೋಣಗಳು ಅವುಗಳ ಸಂಗಡಲೂ ಎತ್ತುಗಳು ಹೋರಿ ಗಳ ಸಂಗಡಲೂ ಬೀಳುವವು; ಅವರ ದೇಶವು ರಕ್ತ ದಿಂದ ನೆನೆಯುವದು, ಅವರ ಧೂಳು ಕೊಬ್ಬಿನಿಂದ ಪುಷ್ಟಿಯಾಗುವದು--
- Psalm 2:12 ಕೀರ್ತನೆಗಳು 2:12ಆತನ ಕೋಪವು ಉರಿ ಯುವದಕ್ಕೆ ಮುಂಚೆಯೇ ಮಗನಿಗೆ ಮುದ್ದಿಡಿರಿ; ಇಲ್ಲ ವಾದರೆ ಆತನ ಕೋಪದಿಂದ ನೀವು ದಾರಿಯಲ್ಲೇ ನಾಶವಾದೀರಿ. ಆತನಲ್ಲಿ ಭರವಸವಿಟ್ಟವರೆಲ್ಲರೂ ಧನ್ಯರು.
- 2 Chronicles 14:1–15 2 ಪೂರ್ವಕಾಲವೃತ್ತಾಂತ 14:1–15ಅಬೀಯನು ತನ್ನ ಪಿತೃಗಳ ಸಂಗಡ ನಿದ್ರಿಸಿದನು; ಅವನು ದಾವೀದನ ಪಟ್ಟಣದಲ್ಲಿ ಹೂಣಲ್ಪಟ್ಟನು; ಅವನ ಮಗನಾದ ಆಸನು ಅವನಿಗೆ ಬದಲಾಗಿ ಆಳಿದನು. ಅವನ ದಿವಸಗಳಲ್ಲಿ ಹತ್ತು ವರುಷ ದೇಶವು ಶಾಂತವಾಗಿತ್ತು, ಆಸನು ತನ್ನ ದೇವರಾದ ಕರ್ತನ ದೃಷ್ಟಿಯಲ್ಲಿ ಒಳ್ಳೇದನ್ನೂ ಸರಿಯಾದದ್ದನ್ನೂ ಮಾಡಿದನು. ಅವನು ಅನ್ಯದೇವರು ಗಳ ಬಲಿಪೀಠಗಳನ್ನೂ ಉನ್ನತ ಸ್ಥಳಗಳನ್ನೂ ತೆಗೆದು ಹಾಕಿ ವಿಗ್ರಹಗಳನ್ನು ಒಡೆದುಬಿಟ್ಟು ಅವುಗಳ ತೋಪು ಗಳನ್ನು ಕಡಿದುಹಾಕಿ, ತಮ್ಮ ಪಿತೃಗಳ ದೇವರಾದ ಕರ್ತನನ್ನು ಹುಡುಕಲೂ ನ್ಯಾಯಪ್ರಮಾಣವನ್ನು ಆಜ್ಞೆಯನ್ನು ಕೈಕೊಳ್ಳಲೂ ಯೆಹೂದ್ಯರಿಗೆ ಆಜ್ಞಾಪಿ ಸಿದನು. ಇದಲ್ಲದೆ ಅವನು ಉನ್ನತ ಸ್ಥಳಗಳನ್ನೂ ವಿಗ್ರಹಗಳನ್ನೂ ಯೆಹೂದದ ಸಮಸ್ತ ಪಟ್ಟಣಗಳಿಂದ ತೆಗೆದುಹಾಕಿದನು. ರಾಜ್ಯವು ಅವನ ಮುಂದೆ ಶಾಂತ ವಾಗಿತ್ತು. ಇದಲ್ಲದೆ ಅವನು ಯೆಹೂದದಲ್ಲಿ ಕೋಟೆ ಗಳುಳ್ಳ ಪಟ್ಟಣಗಳನ್ನು ಕಟ್ಟಿಸಿದನು. ದೇಶವು ಶಾಂತವಾ ಗಿತ್ತು. ಕರ್ತನು ಅವನಿಗೆ ವಿಶ್ರಾಂತಿ ಕೊಟ್ಟದ್ದರಿಂದ ಆ ವರುಷಗಳಲ್ಲಿ ಅವನಿಗೆ ಯುದ್ಧವಿರಲಿಲ್ಲ. ಅವನು ಯೆಹೂದದವರಿಗೆ--ದೇಶವು ನಮ್ಮ ಮುಂದೆ ಇರು ವಾಗ ಈ ಪಟ್ಟಣಗಳನ್ನು ಕಟ್ಟಿಸಿ ಅವುಗಳ ಸುತ್ತಲೂ ಗೋಡೆಗಳನ್ನೂ ಗೋಪುರಗಳನ್ನೂ ಬಾಗಲುಗಳನ್ನೂ ಅಗುಳಿಗಳನ್ನೂ ಮಾಡೋಣ; ಯಾಕಂದರೆ ನಾವು ನಮ್ಮ ದೇವರಾದ ಕರ್ತನನ್ನು ಹುಡುಕಿದೆವು; ನಾವು ಆತನನ್ನು ಹುಡುಕಿದ್ದರಿಂದ ಆತನು ಎಲ್ಲಾ ಕಡೆಯಲ್ಲಿ ನಮಗೆ ವಿಶ್ರಾಂತಿಯನ್ನು ಕೊಟ್ಟಿದ್ದಾನೆ ಅಂದನು. ಹಾಗೆಯೇ ಅವರು ಕಟ್ಟಿಸಿ ವೃದ್ಧಿಹೊಂದಿದರು. ಇದ ಲ್ಲದೆ ಆಸನಿಗೆ ಖೇಡ್ಯಗಳನ್ನೂ ಈಟಿಗಳನ್ನೂ ಹಿಡಿ ಯುವ ರಾಣುವೆ ಇತ್ತು. ಯೆಹೂದದವರು ಮೂರು ಲಕ್ಷಮಂದಿಯೂ ಬೆನ್ಯಾವಿಾನಿನವರು ಗುರಾಣಿಗಳನ್ನು ಹಿಡಿಯುವವರೂ, ಬಿಲ್ಲುಗಳನ್ನು ಎಸೆಯುವವರೂ ಎರಡು ಲಕ್ಷದ ಎಂಭತ್ತು ಸಾವಿರ ಮಂದಿಯೂ ಇದ್ದರು. ಇವರೆಲ್ಲರು ಪರಾಕ್ರಮಶಾಲಿಗಳಾಗಿದ್ದರು. ಆದರೆ ಕೂಷಿಯನಾದ ಜೆರಹನು ಅವರಿಗೆ ವಿರೋ ಧವಾಗಿ ಹೊರಟು ಮಾರೇಷದ ಮಟ್ಟಿಗೂ ಬಂದನು. ಅವನ ಸಂಗಡ ಹತ್ತು ಲಕ್ಷ ಜನ ರಾಣುವೆಯೂ ಮುನ್ನೂರು ರಥಗಳೂ ಇದ್ದವು. ಆಸನು ಅವನಿ ಗೆದುರಾಗಿ ಹೊರಟುಹೋದನು. ಮಾರೇಷದ ಬಳಿ ಯಲ್ಲಿ ಚೆಫಾತಾ ತಗ್ಗಿನಲ್ಲಿ ವ್ಯೂಹ ಕಟ್ಟಿದರು. ಆಗ ಆಸನು ತನ್ನ ದೇವರಾದ ಕರ್ತನನ್ನು ಕರೆದು--ಕರ್ತನೇ, ಅನೇಕರ ಮಧ್ಯದಲ್ಲಿ ಬಲಹೀನರಿಗೆ ಸಹಾಯಕೊಡು ವವನು ನಮ್ಮ ದೇವರಾದ ಕರ್ತನೇ, ನಮಗೆ ಸಹಾಯ ಕೊಡು; ಯಾಕಂದರೆ ನಾವು ನಿನ್ನ ಮೇಲೆ ಆತುಕೊಂಡಿ ದ್ದೇವೆ; ನಿನ್ನ ಹೆಸರಿನಲ್ಲಿ ನಾವು ಈ ಗುಂಪಿನ ಮೇಲೆ ಹೋಗುತ್ತೇವೆ; ಓ ಕರ್ತನೇ, ನಿನ್ನ ಹೊರತು ಬೇರೆ ಯಾರೂ ಇಲ್ಲ, ನೀನೇ ನಮ್ಮ ದೇವರು; ಮನುಷ್ಯನು ನಿನ್ನೆದುರಿನಲ್ಲಿ ಬಲಗೊಳ್ಳದಿರಲಿ ಅಂದನು. ಆಗ ಕರ್ತನು ಕೂಷಿಯರನ್ನು ಆಸನ ಮುಂದೆಯೂ ಯೆಹೂ ದದವರ ಮುಂದೆಯೂ ಹೊಡೆದನು. ಆದದರಿಂದ ಕೂಷಿಯರು ಓಡಿಹೋದರು. ಆಗ ಆಸನೂ ಅವನ ಸಂಗಡ ಇದ್ದ ಜನರೂ ಅವರನ್ನು ಗೆರಾರಿನ ವರೆಗೂ ಹಿಂದಟ್ಟಿದರು. ಕೂಷಿಯರು ತಮಗೆ ತ್ರಾಣವಿಲ್ಲದ ಹಾಗೆ ಸೋತುಹೋದರು. ಅವರು ಕರ್ತನ ಮುಂದೆಯೂ ಆತನ ಸೈನ್ಯದ ಮುಂದೆಯೂ ನಾಶ ವಾದರು. ಯೆಹೂದದವರು ಬಹು ಕೊಳ್ಳೆಯನ್ನು ಒಯ್ದರು. ಅವರು ಗೆರಾರಿನ ಸುತ್ತಲಿರುವ ಸಮಸ್ತ ಪಟ್ಟಣಗಳನ್ನು ಹೊಡೆದರು. ಕರ್ತನ ಭಯವು ಅವರ ಮೇಲೆ ಬಂತು. ಆ ಪಟ್ಟಣಗಳಲ್ಲಿ ಬಹು ಕೊಳ್ಳೆ ಇದ್ದದ್ದರಿಂದ ಇವುಗಳನ್ನೆಲ್ಲಾ ಕೊಳ್ಳೆಮಾಡಿದರು.ಪಶುಗಳಿದ್ದ ಡೇರೆಗಳನ್ನು ಹೊಡೆದು ಕುರಿಗಳನ್ನೂ ಒಂಟೆಗಳನ್ನೂ ಬಹಳವಾಗಿ ತೆಗೆದುಕೊಂಡು ಯೆರೂ ಸಲೇಮಿಗೆ ತಿರುಗಿದರು. ಪಶುಗಳಿದ್ದ ಡೇರೆಗಳನ್ನು ಹೊಡೆದು ಕುರಿಗಳನ್ನೂ ಒಂಟೆಗಳನ್ನೂ ಬಹಳವಾಗಿ ತೆಗೆದುಕೊಂಡು ಯೆರೂ ಸಲೇಮಿಗೆ ತಿರುಗಿದರು.
- Psalm 18:44 ಕೀರ್ತನೆಗಳು 18:44ನನ್ನ ಮಾತನ್ನು ಕೇಳಿದೊಡನೆ ಅವರು ನನಗೆ ವಿಧೇಯ ರಾಗುವರು.
- 2 Samuel 10:1–19 2 ಸಮುವೇಲನು 10:1–19ಇದರ ತರುವಾಯ ಏನಾಯಿತಂದರೆ, ಅಮ್ಮೋನನ ಮಕ್ಕಳ ಅರಸನು ಸತ್ತನು; ಅವನ ಮಗನಾದ ಹಾನೂನನು ಅವನಿಗೆ ಬದಲಾಗಿ ಅರಸನಾದನು. ದಾವೀದನು--ಹಾನೂನನ ತಂದೆಯಾದ ನಾಹಾಷನು ನನಗೆ ದಯೆತೋರಿಸಿದ ಹಾಗೆಯೇ ನಾನೂ ಅವನ ಮಗನಾದ ಹಾನೂನನಿಗೆ ದಯೆತೋರಿಸುವೆನು ಅಂದನು. ದಾವೀದನು ಅವನ ತಂದೆಗೋಸ್ಕರ ಅವನಿಗೆ ಆದರಣೆ ಹೇಳುವದಕ್ಕೆ ತನ್ನ ಸೇವಕರನ್ನು ಕಳುಹಿಸಿದನು. ದಾವೀದನ ಸೇವಕರು ಅಮ್ಮೋನನ ಮಕ್ಕಳ ದೇಶಕ್ಕೆ ಬಂದಾಗ ಅಮ್ಮೋನನ ಮಕ್ಕಳ ಪ್ರಧಾನರು ತಮ್ಮ ಯಜಮಾನನಾದ ಹಾನೂನ ನಿಗೆ--ದಾವೀದನು ಆದರಣೆ ಹೇಳುವವರನ್ನು ನಿನ್ನ ಬಳಿಗೆ ಕಳುಹಿಸಿದ್ದರಿಂದ ನಿನ್ನ ತಂದೆಯನ್ನು ಘನ ಪಡಿಸುತ್ತಾನೆಂದು ಯೋಚಿಸುತ್ತೀಯೋ? ಈ ಪಟ್ಟಣ ವನ್ನು ಶೋಧಿಸುವದಕ್ಕೂ ಪಾಳತಿನೋಡುವದಕ್ಕೂ ಅದನ್ನು ಕೆಡವಿಹಾಕುವದಕ್ಕೂ ದಾವೀದನು ತನ್ನ ಸೇವಕರನ್ನು ನಿನ್ನ ಬಳಿಗೆ ಕಳುಹಿಸಿದ್ದಲ್ಲವೋ ಅಂದರು. ಆದದರಿಂದ ಹಾನೂನನು ದಾವೀದನ ಸೇವಕರನ್ನು ಹಿಡಿದು ಅವರ ಅರ್ಧ ಗಡ್ಡವನ್ನು ಬೋಳಿಸಿ ಅವರ ವಸ್ತ್ರಗಳನ್ನು ಮಧ್ಯದಲ್ಲಿ ಕುಂಡಿಯ ವರೆಗೆ ಕತ್ತರಿಸಿ ಅವರನ್ನು ಕಳುಹಿಸಿದನು. ಅವರು ಅದನ್ನು ದಾವೀದ ನಿಗೆ ತಿಳಿಸಿದಾಗ ಆ ಜನರು ಬಹಳ ನಾಚಿಕೆಪಟ್ಟದ್ದ ರಿಂದ ದಾವೀದನು ಕೆಲವರನ್ನು ಅವರಿಗೆದುರಾಗಿ ಕಳು ಹಿಸಿ--ನಿಮ್ಮ ಗಡ್ಡಗಳು ಬೆಳೆಯುವವರೆಗೆ ನೀವು ಯೆರಿಕೋವಿನಲ್ಲಿ ಕಾದಿದ್ದು ತರುವಾಯ ಬನ್ನಿರಿ ಎಂದು ಹೇಳಿದನು. ಅಮ್ಮೋನನ ಮಕ್ಕಳು ತಾವು ದಾವೀದನಿಗೆ ಅಸಹ್ಯ ವಾದೆವೆಂದು ತಿಳುಕೊಂಡಾಗ ಅವರು (ದೂತರನ್ನು) ಕಳುಹಿಸಿ ಬೇತ್ರೆಹೋಬ್ನಲ್ಲಿಯೂ ಚೋಬಾದ ಲ್ಲಿಯೂ ಇರುವ ಇಪ್ತತ್ತು ಸಾವಿರ ಕಾಲಾಳುಗಳಾದ ಅರಾಮ್ಯರನ್ನೂ ಅರಸನಾದ ಮಾಕನ ಬಳಿಯಿಂದ ಸಾವಿರ ಜನರನ್ನೂ ಇಷ್ಟೋಬ್ನಿಂದ ಹನ್ನೆರಡು ಸಾವಿರ ಜನರನ್ನೂ ಕೂಲಿಗೆ ತೆಗೆದುಕೊಂಡರು. ದಾವೀದನು ಅದನ್ನು ಕೇಳಿದಾಗ ಅವನು ಯೋವಾಬನನ್ನೂ ಪರಾ ಕ್ರಮಶಾಲಿಗಳಾದ ಸಕಲ ಶೂರಸೈನಿಕರನ್ನು ಕಳುಹಿ ಸಿದನು. ಆಗ ಅಮ್ಮೋನನ ಮಕ್ಕಳು ಹೊರಟು ಪಟ್ಟಣದ ಬಾಗಲ ಮುಂದೆ ವ್ಯೂಹಕಟ್ಟಿದರು. ಆದರೆ ಚೋಬಾದಿಂದಲೂ ರೆಹೋಬ್ನಿಂದಲೂ ಇಷ್ಟೋಬ್ ನಿಂದಲೂ ಮಾಕನಿಂದಲೂ ಬಂದ ಅರಾಮ್ಯರು ಹೊರಗೆ ಬೈಲಿನಲ್ಲಿ ಬೇರೆ ಇಳಿದಿದ್ದರು. ಯೋವಾಬನು ಯುದ್ಧದ ಮುಖವು ಹಿಂದೆ ಮುಂದೆ ತನಗೆ ಎದುರಾ ಗಿರುವದನ್ನು ನೋಡಿದಾಗ ಅವನು ಇಸ್ರಾಯೇಲಿನ ಆಯಲ್ಪಟ್ಟ ಎಲ್ಲಾ ಜನರನ್ನು ಆದುಕೊಂಡು ಅರಾಮ್ಯ ರಿಗೆ ಎದುರಾಗಿ ವ್ಯೂಹಕಟ್ಟಿದನು. ಆದರೆ ಮಿಕ್ಕಾದ ವರು ಅಮ್ಮೋನನ ಮಕ್ಕಳಿಗೆದುರಾಗಿ ವ್ಯೂಹಕಟ್ಟುವ ಹಾಗೆ ಅವರನ್ನು ತನ್ನ ಸಹೋದರನಾದ ಅಬೀಷೈಯ ಕೈಯಲ್ಲಿ ಒಪ್ಪಿಸಿಕೊಟ್ಟು-- ಅರಾಮ್ಯರು ನನಗಿಂತ ಬಲವುಳ್ಳವರಾದರೆ ನೀನು ನನಗೆ ಸಹಾಯ ಕೊಡ ಬೇಕು; ಅಮ್ಮೋನನ ಮಕ್ಕಳು ನಿನಗಿಂತ ಬಲವುಳ್ಳವ ರಾದರೆ ನಾನು ಬಂದು ನಿನಗೆ ಸಹಾಯ ಮಾಡುವೆನು. ಬಲವಾಗಿರು; ನಾವು ನಮ್ಮ ಜನರಿಗೋಸ್ಕರವೂ ನಮ್ಮ ದೇವರ ಪಟ್ಟಣಗಳಿಗೋಸ್ಕರವೂ ಬಲಗೊ ಳ್ಳೋಣ. ಕರ್ತನು ತನ್ನ ದೃಷ್ಟಿಗೆ ಉತ್ತಮವಾದದ್ದನ್ನು ಮಾಡಲಿ ಅಂದನು. ಆಗ ಯೋವಾಬನೂ ಅವನ ಸಂಗಡ ಇದ್ದ ಜನರೂ ಅರಾಮ್ಯರ ಮೇಲೆ ಯುದ್ಧ ಮಾಡುವದಕ್ಕೆ ಸವಿಾಪಕ್ಕೆ ಬಂದರು. ಅವರು ಅವನ ಎದುರಿನಿಂದ ಓಡಿಹೋದರು. ಅರಾಮ್ಯರು ಓಡಿ ಹೋದದ್ದನ್ನು ಅಮ್ಮೋನನ ಮಕ್ಕಳು ನೋಡಿದಾಗ ಅವರು ಅಬೀಷೈಯ ಎದುರಿನಿಂದ ಓಡಿ ಪಟ್ಟಣ ದೊಳಗೆ ಹೊಕ್ಕರು. ಆಗ ಯೋವಾಬನು ಅಮ್ಮೊನನ ಮಕ್ಕಳನ್ನು ಬಿಟ್ಟು ತಿರುಗಿ ಯೆರೂಸಲೇಮಿಗೆ ಬಂದನು. ಅರಾಮ್ಯರು ತಾವು ಇಸ್ರಾಯೇಲ್ಯರ ಮುಂದೆ ಹೊಡೆಯಲ್ಪಟ್ಟದ್ದನ್ನು ಕಂಡಾಗ ಅವರು ಒಟ್ಟಾಗಿ ಕೂಡಿದರು. ಇದಲ್ಲದೆ ಹದದೆಜೆರನು ನದಿಗೆ ಆಚೆ ಇದ್ದ ಅರಾಮ್ಯರನ್ನು ಕರೇಕಳುಹಿಸಿದ್ದರಿಂದ ಅವರು ಹೇಲಾಮಿಗೆ ಬಂದರು; ಹದದೆಜೆರನ ಸೈನ್ಯಕ್ಕೆ ಅಧಿ ಪತಿಯಾದ ಶೋಬಕನು ಅವರ ಮುಂದೆ ನಡೆದನು. ಅದು ದಾವೀದನಿಗೆ ತಿಳಿಸಲ್ಪಟ್ಟಾಗ ಅವನು ಇಸ್ರಾ ಯೇಲ್ಯರೆಲ್ಲರನ್ನು ಕೂಡಿಸಿಕೊಂಡು ಯೊರ್ದನನ್ನು ದಾಟಿ ಹೇಲಾಮಿಗೆ ಬಂದನು. ಅರಾಮ್ಯರು ದಾವೀದ ನಿಗೆದುರಾಗಿ ವ್ಯೂಹಕಟ್ಟಿ ಯುದ್ಧಮಾಡಿದರು. ಆಗ ಅರಾಮ್ಯರು ಇಸ್ರಾಯೇಲ್ಯರ ಎದುರಿನಿಂದ ಓಡಿದರು. ದಾವೀದನು ಅರಾಮ್ಯರಲ್ಲಿ ಏಳು ನೂರು ಮಂದಿ ಸಾರಥಿಗಳನ್ನೂ ನಾಲ್ವತ್ತು ಸಾವಿರ ಕುದುರೆ ರಾಹುತ ರನ್ನೂ ಕೊಂದು ಅವರ ಸೈನ್ಯದ ಯಜಮಾನನಾದ ಶೋಬಕನನ್ನು ಹೊಡೆದನು; ಅವನು ಅಲ್ಲಿಯೇ ಸತ್ತನು.ಹದದೆಜೆರನ ಸೇವಕರಾದ ಅರಸುಗಳೆ ಲ್ಲರೂ ತಾವು ಇಸ್ರಾಯೇಲ್ಯರ ಮುಂದೆ ಹೊಡೆಯ ಲ್ಪಟ್ಟದ್ದನ್ನು ಕಂಡಾಗ ಅವರು ಇಸ್ರಾಯೇಲ್ಯರ ಸಂಗಡ ಸಮಾಧಾನಮಾಡಿಕೊಂಡು ಅವರನ್ನು ಸೇವಿಸಿದರು.ಹೀಗೆ ಅರಾಮ್ಯರು ಅಮ್ಮೋನನ ಮಕ್ಕಳಿಗೆ ಇನ್ನು ಸಹಾಯಮಾಡುವದಕ್ಕೆ ಭಯಪಟ್ಟರು. ಹದದೆಜೆರನ ಸೇವಕರಾದ ಅರಸುಗಳೆ ಲ್ಲರೂ ತಾವು ಇಸ್ರಾಯೇಲ್ಯರ ಮುಂದೆ ಹೊಡೆಯ ಲ್ಪಟ್ಟದ್ದನ್ನು ಕಂಡಾಗ ಅವರು ಇಸ್ರಾಯೇಲ್ಯರ ಸಂಗಡ ಸಮಾಧಾನಮಾಡಿಕೊಂಡು ಅವರನ್ನು ಸೇವಿಸಿದರು.ಹೀಗೆ ಅರಾಮ್ಯರು ಅಮ್ಮೋನನ ಮಕ್ಕಳಿಗೆ ಇನ್ನು ಸಹಾಯಮಾಡುವದಕ್ಕೆ ಭಯಪಟ್ಟರು.
- Isaiah 37:1–38 ಯೆಶಾಯ 37:1–38ಇದಾದ ಮೇಲೆ ಅರಸನಾದ ಹಿಜ್ಕೀಯನು ಅದನ್ನು ಕೇಳಿದಾಗ ಅವನು ತನ್ನ ಬಟ್ಟೆಗ ಳನ್ನು ಹರಿದುಕೊಂಡು ಗೋಣೀತಟ್ಟಿನಿಂದ ಮುಚ್ಚಿ ಕೊಂಡು ಕರ್ತನ ಆಲಯಕ್ಕೆ ಹೋದನು. ಇದಲ್ಲದೇ ಅವನು ಮನೆಯ ಮೇಲ್ವಿಚಾರಕನಾಗಿದ್ದ ಎಲ್ಯಾಕೀಮ್, ಲೇಖಕನಾದ ಶೆಬ್ನ, ಹಿರಿಯರಾದ ಯಾಜಕರು ಇವ ರನ್ನು ಕರೆಸಿ--ನೀವು ಗೋಣೀತಟ್ಟನ್ನು ಮುಚ್ಚಿಕೊಂಡು, ಆಮೋಚನ ಮಗನೂ ಪ್ರವಾದಿಯೂ ಆಗಿರುವ ಯೆಶಾಯನ ಬಳಿಗೆ ಹೋಗಿರಿ ಎಂದು ಹೇಳಿಕಳುಹಿ ಸಿದನು. ಆಗ ಅವರು ಅವನಿಗೆ--ಈ ದಿವಸವು ಕಷ್ಟಕರವಾಗಿಯೂ ಗದರಿಕೆಯಾಗಿಯೂ ದೂಷಣೆಯಾಗಿಯೂ ಇದೆ. ಪ್ರಸವವೇದನೆಯ ಕಾಲವು ಬಂದದೆ, ಆದರೆ ಹೆರುವದಕ್ಕೆ ಬಲ ಸಾಲದು. ನಿನ್ನ ದೇವರಾಗಿರುವ ಕರ್ತನು ಅಶ್ಶೂರದ ಅರಸನಿಂದ ಕಳುಹಿಸಲ್ಪಟ್ಟ ರಬ್ಷಾಕೆಯ ಮಾತುಗಳನ್ನು ಕೇಳಿರುವನು; ಅವನು ತನ್ನ ಯಜಮಾನನ ಹೆಸರಿನಲ್ಲಿ ಜೀವಸ್ವರೂ ಪನಾದ ದೇವರನ್ನು ದೂಷಿಸಿದ್ದರಿಂದ ಆತನು ಅವನಿಗೆ ಮುಯ್ಯಿ ತೀರಿಸಾನು; ಆದದರಿಂದ ಉಳಿದಿರುವ ಸ್ವಲ್ಪ ಜನರಿಗೋಸ್ಕರ ಆತನನ್ನು ಪ್ರಾರ್ಥಿಸು ಎಂಬದಾಗಿ ಹಿಜ್ಕೀಯನು ಅನ್ನುತ್ತಾನೆ ಎಂದು ಹೇಳಿದರು. ಅರಸ ನಾದ ಹಿಜ್ಕೀಯನ ಕಡೆಯಿಂದ ತನ್ನ ಬಳಿಗೆ ಬಂದ ಸೇವಕರಿಗೆ ಯೆಶಾಯನು-- ಅಶ್ಶೂರದ ಅರಸನ ಸೇವಕರು ನನ್ನನ್ನು ದೂಷಿಸಿದ ಮಾತುಗಳನ್ನು ನೀನು ಕೇಳಿದ್ದೀ; ಆದರೆ ನೀನು ಅವುಗಳಿಗೆ ಹೆದರಬೇಡ. ಇಗೋ, ನಾನು ಅವನ ಮೇಲೆ ಒಂದು ವಿಪತ್ತನ್ನು ಕಳುಹಿಸುವೆನು. ಅವನು ಒಂದು ಸುದ್ದಿಯನ್ನು ಕೇಳಿ ತಿರುಗಿಕೊಂಡು ಸ್ವದೇಶಕ್ಕೆ ಹೋಗಿ ಅಲ್ಲಿ ಕತ್ತಿಯಿಂದ ಬೀಳುವಂತೆ ಮಾಡುವೆನು ಎಂಬ ಈ ಮಾತುಗಳನ್ನು ನಿಮ್ಮ ಯಜಮಾನರಿಗೆ ತಿಳಿಸಿರಿ ಎಂದು ಹೇಳಿದನು. ಹೀಗೆ ರಬ್ಷಾಕನು ಹಿಂತಿರುಗಿ ಹೋಗುವಾಗ ದಾರಿ ಯಲ್ಲಿ ಅಶ್ಶೂರದ ಅರಸನು ಲಾಕೀಷನ್ನು ಬಿಟ್ಟು ಹೋದನೆಂಬ ವರ್ತಮಾನ ಕೇಳಿ ಲಿಬ್ನಕ್ಕೆ ಹೋಗಿ ಅಲ್ಲಿ ಅವನನ್ನು ಕಂಡನು. ಆಗ ಅವನು ಆ ಪಟ್ಟಣಕ್ಕೆ ವಿರೋಧವಾಗಿ ಯುದ್ಧಮಾಡುತ್ತಾ ಇದ್ದನು. ಅಷ್ಟ ರಲ್ಲಿ ಇಥಿಯೋಪ್ಯದ ಅರಸನಾದ ತಿರ್ಹಾಕನು ತನಗೆ ವಿರೋಧವಾಗಿ ಯುದ್ಧಮಾಡುವದಕ್ಕೆ ಹೊರಟಿದ್ದಾ ನೆಂಬ ಸುದ್ದಿಯನ್ನು ಅಶ್ಶೂರದ ಅರಸನು ಕೇಳಿ-- ನೀನು ನಂಬುವ ದೇವರು, ಯೆರೂಸಲೇಮು ಅಶ್ಶೂರದ ಅರಸನಿಗೆ ವಶವಾಗುವದಿಲ್ಲವೆಂದು ಹೇಳಿ ನಿನ್ನನ್ನು ಮೋಸಗೊಳಿಸಾನು; ಇಗೋ, ಅಶ್ಶೂರದ ಅರಸರು ಎಲ್ಲಾ ದೇಶಗಳನ್ನು ಪೂರ್ಣವಾಗಿ ನಾಶ ಮಾಡಿದರೆಂದು ನೀನು ಕೇಳಿದಿಯಲ್ಲಾ; ಹೀಗಿದ್ದ ಮೇಲೆ ನೀನು ಬಿಡುಗಡೆಯಾಗುವಿಯೋ? ನನ್ನ ಪಿತೃಗಳು ಗೋಜಾನ್, ಖಾರಾನ್, ರೆಚೆಫ್ ಎಂಬ ಪಟ್ಟಣ ಗಳನ್ನು ತೆಲಸ್ಸಾರ್ ಪ್ರಾಂತ್ಯದಲ್ಲಿರುವ ಏದೆನಿನ ಜನ ರನ್ನು ನಾಶಮಾಡುವದಕ್ಕೆ ಹೋದಾಗ ಜನಾಂಗಗಳ ದೇವರುಗಳು ಅವರನ್ನು ಬಿಡುಗಡೆ ಮಾಡಿದವೋ? ಹಮಾತ್, ಅರ್ಪಾದ್, ಸೆಫರ್ವಯಿಮ್, ಹೇನ, ಇವ್ವಾ ಎಂಬ ಪಟ್ಟಣಗಳ ಅರಸರು ಏನಾದರೂ ಎಂಬ ನನ್ನ ಮಾತನ್ನು ಯೆಹೂದದ ಅರಸನಾದ ಹಿಜ್ಕೀಯನಿಗೆ ಹೇಳಿರಿ ಎಂಬದಾಗಿ ಸೇವಕರನ್ನು ಹಿಜ್ಕೀಯನ ಬಳಿಗೆ ಕಳುಹಿಸಿದನು. ಹಿಜ್ಕೀಯನು ಆ ಸೇವಕರ ಕೈಯಿಂದ ಪತ್ರವನ್ನು ತೆಗೆದುಕೊಂಡು ಅದನ್ನು ಓದಿದನು; ಹಿಜ್ಕೀಯನು ಕರ್ತನ ಆಲಯಕ್ಕೆ ಹೋಗಿ ಅದನ್ನು ಕರ್ತನ ಮುಂದೆ ತೆರೆದಿಟ್ಟು, ಸೈನ್ಯಗಳ ಕರ್ತನೇ, ಕೆರೂಬಿಗಳ ಮಧ್ಯದಲ್ಲಿ ವಾಸವಾಗಿರುವ ಇಸ್ರಾ ಯೇಲ್ ದೇವರೇ, ನೀನೇ, ನೀನೊಬ್ಬನೇ, ಎಲ್ಲಾ ಭೂರಾಜ್ಯಗಳ ದೇವರು. ನೀನೇ ಭೂಮ್ಯಾಕಾಶಗಳನ್ನು ಉಂಟು ಮಾಡಿದವನು. ಓ ಕರ್ತನೇ, ಕಿವಿಗೊಟ್ಟು ಕೇಳು; ಓ ಕರ್ತನೇ, ನಿನ್ನ ಕಣ್ಣುಗಳನ್ನು ತೆರೆದು ನೋಡು; ಸನ್ಹೇರೀಬನು ಜೀವವುಳ್ಳ ದೇವರನ್ನು ದೂಷಿಸಿ ಕಳುಹಿಸಿದ ಮಾತುಗಳನ್ನೆಲ್ಲಾ ಕೇಳು. ಕರ್ತನೇ, ಅಶ್ಶೂರದ ಅರಸರು ಸಕಲ ಜನಾಂಗ ಗಳನ್ನೂ ದೇಶಗಳನ್ನೂ ಹಾಳುಮಾಡಿ, ಅವರ ದೇವತೆ ಗಳನ್ನು ಸಹ ಬೆಂಕಿಯಲ್ಲಿ ಹಾಕಿದ್ದು ನಿಜ. ಅವು ದೇವರುಗಳಲ್ಲ, ಮರ, ಕಲ್ಲು, ಮನುಷ್ಯರ ಕೈ ಕೆಲಸ ಗಳೇ ಆದದರಿಂದಲೇ ಅವರು ಅವುಗಳನ್ನು ಹಾಳು ಮಾಡಿದರು. ಹೀಗಿರುವದರಿಂದ ಓ ಕರ್ತನಾದ ನಮ್ಮ ದೇವರೇ, ನೀನೇ, ನೀನೊಬ್ಬನೇ ಕರ್ತನೆಂದು ಭೂಮಿಯ ಎಲ್ಲಾ ರಾಜ್ಯಗಳು ತಿಳಿದುಕೊಳ್ಳುವಂತೆ ಅವನ ಕೈಯಿಂದ ನಮ್ಮನ್ನು ರಕ್ಷಿಸು ಎಂದು ಹಿಜ್ಕೀಯನು ಕರ್ತನಿಗೆ ಪ್ರಾರ್ಥಿಸಿದನು. ಆಗ ಆಮೋಚನ ಮಗನಾದ ಯೆಶಾಯನು ಹಿಜ್ಕೀಯನಿಗೆ ಹೇಳಿ ಕಳುಹಿಸಿದ್ದೇನಂದರೆ--ನೀನು ಅಶ್ಶೂರದ ಅರಸನಾದ ಸನ್ಹೇರೀಬನ ವಿಷಯವಾಗಿ ಮಾಡಿದ ಬಿನ್ನಹವನ್ನು ಕೇಳಿ ಅವನನ್ನು ಕುರಿತು ಇಸ್ರಾಯೇಲ್ ದೇವರಾದ ಕರ್ತನು ಹೇಳುವದೇ ನಂದರೆ--ಕನ್ನಿಕೆಯಾದ ಚೀಯೋನ್ ಕುಮಾರ್ತೆಯು ನಿನ್ನನ್ನು ತಿರಸ್ಕರಿಸಿ, ಪರಿಹಾಸ್ಯ ಮಾಡುತ್ತಾಳೆ; ಯೆರೂಸ ಲೇಮಿನ ಕುಮಾರ್ತೆಯು ನಿನ್ನ ಹಿಂದೆ ತಲೆಯನ್ನು ಅಲ್ಲಾಡಿಸುತ್ತಾಳೆ. ನೀನು ಯಾರನ್ನು ನಿಂದಿಸಿ ದೂಷಿಸಿದ್ದೀ? ಯಾರಿಗೆ ವಿರೋಧವಾಗಿ ನಿನ್ನ ಸ್ವರವೆತ್ತಿ ನೀನು ಸೊಕ್ಕಿನಿಂದ ನೋಡಿದ್ದು ಯಾರನ್ನು? ಇಸ್ರಾ ಯೇಲಿನ ಪರಿಶುದ್ಧನಿಗಲ್ಲವೋ? ನೀನು ನಿನ್ನ ಸೇವಕರ ಮುಖಾಂತರವಾಗಿ ಕರ್ತನನ್ನು ನಿಂದಿಸಿ--ನನ್ನ ರಥಸಮೂಹದೊಡನೆ ಪರ್ವತ ಶಿಖರಗಳನ್ನು ಹತ್ತಿದ್ದೇನೆ; ಲೆಬನೋನಿನ ಭಾಗಗಳಿಗೆ ಹೋಗಿದ್ದೇನೆ; ಅದರ ಎತ್ತರವಾದ ದೇವದಾರು, ಶ್ರೇಷ್ಠವಾದ ತುರಾಯಿ ಮರಗಳನ್ನು ಕಡಿದುಬಿಟ್ಟಿದ್ದೇನೆ; ಅಂಚಿನ ಉನ್ನತವಾದ ಸ್ಥಳವನ್ನೂ ಮತ್ತು ಅದರ ಕರ್ಮೇಲಿನ ಅಡವಿಯನ್ನೂ ಪ್ರವೇಶಿಸಿದ್ದೇನೆ; ನಾನೇ ಅಗೆದು ನೀರನ್ನು ಕುಡಿದಿದ್ದೇನೆ; ನನ್ನ ಅಂಗಾಲಿನಿಂದ ಐಗು ಪ್ತದ ಎಲ್ಲಾ ಹೊಳೆಗಳನ್ನು ಬತ್ತಿಸಿದ್ದೇನೆ ಎಂಬದಾಗಿ ನೀನು ಹೇಳಿದ್ದೀ. ಹೀಗಾಗಬೇಕೆಂದು ಬಹುಕಾಲದ ಹಿಂದೆಯೇ ಗೊತ್ತುಮಾಡಿದ್ದನ್ನು ನೀನು ಕೇಳಿಲ್ಲವೋ? ಈಗ ಪೂರ್ವಕಾಲದಲ್ಲಿ ನಿರ್ಣಯಿಸಿದ್ದನ್ನು ನೆರವೇರಿ ಸಿದ್ದೇನೆ. ಆದದರಿಂದಲೇ ಕೋಟೆಗಳುಳ್ಳ ಪಟ್ಟಣ ಗಳನ್ನು ಹಾಳು ದಿಬ್ಬಗಳನ್ನಾಗಿ ಮಾಡುವದು ನಿನಗೆ ಸಾಧ್ಯವಾಯಿತು; ಆದದರಿಂದ ಅವುಗಳ ನಿವಾಸಿ ಗಳು ಬಲವಿಲ್ಲದವರಾಗಿ ಆಶಾಭಂಗ ಪಟ್ಟು ಕಳವಳ ಗೊಂಡರು; ಅವರು ಹೊಲದ ಹುಲ್ಲಿನಂತೆಯೂ ಹಸಿರು ಎಲೆಯಂತೆಯೂ ಮಾಳಿಗೆಯ ಮೇಲಿನ ಹುಲ್ಲಿನಂತೆಯೂ ಹೊಡೆಯುವದಕ್ಕಿಂತ ಮೊದಲೇ ಬಾಡಿಹೋಗುವ ಪೈರಿನಂತೆಯೂ ಇದ್ದರು. ನೀನು ವಾಸಿಸುವದು ಹೊರಗೆ ಹೋಗುವದು, ಒಳಗೆ ಬರುವದು; ನೀನು ನನ್ನ ಮೇಲೆ ರೌದ್ರಾವೇಶನಾಗಿ ರುವದನ್ನೂ ನಾನು ಬಲ್ಲೆನು. ನೀನು ನನಗೆ ವಿರೋಧವಾಗಿ ರೌದ್ರನಾಗಿರುವದೂ ಗೊಂದಲ ದಿಂದಿರುವದೂ ನನ್ನ ಕಿವಿಗೆ ಕೇಳಿಬಂತು. ಆದದರಿಂದ ನಾನು ನಿನ್ನ ಕೊಂಡಿಯನ್ನು ನಿನ್ನ ಮೂಗಿನಲ್ಲಿಯೂ ನನ್ನ ಕಡಿವಾಣವನ್ನು ನಿನ್ನ ತುಟಿಗಳಲ್ಲಿಯೂ ಹಾಕಿ, ನೀನು ಬಂದು ದಾರಿಯಿಂದಲೇ ನಿನ್ನನ್ನು ಹಿಂದಕ್ಕೆ ಎಳೆದುಕೊಂಡು ಹೋಗುವೆನು ಎಂಬದಾಗಿ ಹೇಳಿ ದ್ದಾನೆ. ಈ ವರ್ಷದಲ್ಲಿ ತನ್ನಷ್ಟಕ್ಕೆ ತಾನೇ ಬೆಳೆದದ್ದನ್ನು ಎರಡನೇ ವರ್ಷದಲ್ಲಿ ಆದರಿಂದ ಮೊಳೆತದ್ದನ್ನು ತಿನ್ನುವಿರಿ. ಮೂರನೇ ವರ್ಷದಲ್ಲಿ ನೀವು ಬೀಜವನ್ನು ಬಿತ್ತಿ ಕೊಯ್ಯುವಿರಿ; ದ್ರಾಕ್ಷೇ ತೋಟವನ್ನು ನೆಟ್ಟು ಅವುಗಳ ಫಲವನ್ನು ತಿನ್ನುವದೇ ನಿಮಗೆ ಗುರುತಾಗಿ ರುವದು. ಯೆಹೂದನ ಮನೆತನದಿಂದ ತಪ್ಪಿಸಿ ಕೊಂಡು ಉಳಿದವರು ತಿರುಗಿ ಕೆಳಗೆ ಬೇರೂರಿ ಮೇಲಕ್ಕೆ ಫಲಫಲಿಸುವರು. ಯೆರೂಸಲೇಮಿನಿಂದ ಉಳಿದ ವರು ಮತ್ತು ಚೀಯೋನ್ ಪರ್ವತದಿಂದ ತಪ್ಪಿಸಿ ಕೊಂಡವರು; ಹೊರಡುವರು ಇದನ್ನು ಸೈನ್ಯಗಳ ಕರ್ತನ ಆಸಕ್ತಿಯು ಮಾಡುವದು. ಆದದರಿಂದ ಕರ್ತನು ಅಶ್ಶೂರದ ಅರಸನ ವಿಷಯವಾಗಿ ಹೇಳುವ ದೇನಂದರೆ ಅವನು ಈ ಪಟ್ಟಣಕ್ಕೆ ಬರಲಾರನು ಬಾಣವನ್ನು ಎಸೆಯನು, ಇಲ್ಲವೇ ಅದರ ಮುಂದೆ ಗುರಾಣಿಯೊಂದಿಗೆ ಬರಲಾರನು ಇಲ್ಲವೆ ಅದಕ್ಕೆ ವಿರೋಧವಾಗಿ ಮಣ್ಣಿನ ದಿಬ್ಬವನ್ನು ಹಾಕುವದಿಲ್ಲ. ಅವನು ಬಂದ ದಾರಿಯಿಂದಲೇ ಹಿಂತಿರುಗಿ ಹೋಗುವನು ಈ ಪಟ್ಟಣಕ್ಕೆ ಬರುವದೇ ಇಲ್ಲ. ಈ ಪಟ್ಟಣವನ್ನು ನನಗಾಗಿಯೂ ನನ್ನ ಸೇವಕನಾದ ದಾವೀದನಿಗೋಸ್ಕರವಾಗಿಯೂ ಇದನ್ನು ಕಾಪಾಡು ವೆನು ಎಂದು ಕರ್ತನು ಹೇಳುತ್ತಾನೆ. ಆಗ ಕರ್ತನ ದೂತನು ಹೊರಟು ಬಂದು ಅಶ್ಶೂರ್ಯರ ಪಾಳೆಯದಲ್ಲಿ ಲಕ್ಷದ ಎಂಭತ್ತೈದು ಸಾವಿರ ಮಂದಿಯನ್ನು ಹೊಡೆದನು. ಇನ್ನೂ ಮೊಬ್ಬಿರು ವಾಗಲೇ ಎದ್ದಾಗ ಇಗೋ, ಅವರು ಸತ್ತ ಹೆಣಗಳಾ ಗಿದ್ದರು. ಆಗ ಅಶ್ಶೂರದ ಅರಸನಾದ ಸನ್ಹೇರೀಬನು ಹಿಂತಿರುಗಿ ನಿನವೆ ಪಟ್ಟಣಕ್ಕೆ ಹೋಗಿ ಅಲ್ಲಿ ವಾಸಿಸಿ ದನು.ತರುವಾಯ ಅವನು ತನ್ನ ದೇವರಾದ ನಿಸ್ರೋಕನ ಮನೆಯಲ್ಲಿ ಪೂಜಿಸುತ್ತಿದ್ದಾಗ ಅದ್ರಮ್ಮೆ ಲೆಕ್, ಸರೆಚೆರ್ ಎಂಬ ಅವನ ಮಕ್ಕಳು ಅವ ನನ್ನು ಕತ್ತಿಯಿಂದ ಹೊಡೆದು ಅರರಾಟ್ ದೇಶಕ್ಕೆ ತಪ್ಪಿಸಿ ಕೊಂಡು ಹೋದರು; ಅವನಿಗೆ ಬದಲಾಗಿ ಅವನ ಮಗನಾದ ಏಸರ್ಹದ್ದೋನನು ಆಳಿದನು. ತರುವಾಯ ಅವನು ತನ್ನ ದೇವರಾದ ನಿಸ್ರೋಕನ ಮನೆಯಲ್ಲಿ ಪೂಜಿಸುತ್ತಿದ್ದಾಗ ಅದ್ರಮ್ಮೆ ಲೆಕ್, ಸರೆಚೆರ್ ಎಂಬ ಅವನ ಮಕ್ಕಳು ಅವ ನನ್ನು ಕತ್ತಿಯಿಂದ ಹೊಡೆದು ಅರರಾಟ್ ದೇಶಕ್ಕೆ ತಪ್ಪಿಸಿ ಕೊಂಡು ಹೋದರು; ಅವನಿಗೆ ಬದಲಾಗಿ ಅವನ ಮಗನಾದ ಏಸರ್ಹದ್ದೋನನು ಆಳಿದನು.
- Psalm 120:7 ಕೀರ್ತನೆಗಳು 120:7ನಾನು ಸಮಾಧಾನವಾಗಿದ್ದೇನೆ; ಆದರೆ ನಾನು ಮಾತಾಡಲು ಅವರು ಯುದ್ಧಮಾಡು ವದಕ್ಕಿದ್ದಾರೆ.
- Job 40:21 ಯೋಬನು 40:21ನೆರಳಾದ ಗಿಡಗಳ ಕೆಳಗೆ ಆಪಿನ ಮರೆಯಲ್ಲಿಯೂ ಕೆಸರಿನಲ್ಲಿಯೂ ಮಲಗುತ್ತದೆ.
- Jeremiah 50:11 ಯೆರೆಮೀಯ 50:11ನನ್ನ ಸ್ವಾಸ್ತ್ಯವನ್ನು ನಾಶಮಾಡಿದವರೇ, ನೀವು ಸಂತೋಷಿಸಿದ್ದರಿಂದಲೂ ಉಲ್ಲಾಸಿಸಿದ್ದರಿಂದಲೂ ಕೊಬ್ಬಿದ ಕಡಸಿನ ಹಾಗೆ ಗರ್ವಪಟ್ಟದ್ದರಿಂದಲೂ ಹೋರಿಗಳ ಹಾಗೆ ಹೂಂಕರಿಸಿದ್ದರಿಂದಲೂ
Original words (Hebrew)
- Rebuke · H1605גָּעַר gâʻar
- company · H2416חַי chay
- spearmen · H7070קָנֶה qâneh
- multitude · H5712עֵדָה ʻêdâh
- bulls · H47אַבִּיר ʼabbîyr
- calves · H5695עֵגֶל ʻêgel
- people · H5971עַם ʻam
- submit · H7511רָפַס râphaç
- pieces · H7518רַץ rats
- silver · H3701כֶּסֶף keçeph
- scatter · H967בָּזַר bâzar
- people · H5971עַם ʻam
- delight · H2654חָפֵץ châphêts
- war · H7128קְרָב qᵉrâb