Psalms · chapter 68 · verse 31
Psalm 68:31 in Kannada
ಐಗುಪ್ತದಿಂದ ಪ್ರಧಾನರು ಬರುವರು; ಕೂಷ್ ತನ್ನ ಕೈಗಳನ್ನು ದೇವರ ಕಡೆಗೆ ಬೇಗ ಚಾಚುವದು.
Aiguptadinda pradhaanaru baruvaru; koosh tanna kaigalannu devara kadege bega chaachuvadu.
Psalm 68:31 in English
- King James Version (KJV)
- Princes shall come out of Egypt; Ethiopia shall soon stretch out her hands unto God.
- World English Bible (WEB)
- Princes shall come out of Egypt. Ethiopia shall hurry to stretch out her hands to God.
- American Standard Version (ASV)
- Princes shall come out of Egypt; Ethiopia shall haste to stretch out her hands unto God.
- Bible in Basic English (BBE)
- Kings will give you offerings, they will come out of Egypt; from Pathros will come offerings of silver; Ethiopia will be stretching out her hands to God.
- Darby Translation (DBY)
- Great ones shall come out of Egypt; Ethiopia shall quickly stretch out her hands unto God.
- Webster's Bible (WBS)
- Princes shall come out of Egypt; Cush shall soon stretch out her hands to God.
- Young's Literal Translation (YLT)
- Come do fat ones out of Egypt, Cush causeth her hands to run to God.
Read in context
- 29ಯೆರೂಸಲೇಮಿನಲ್ಲಿರುವ ನಿನ್ನ ಮಂದಿ ರದ ನಿಮಿತ್ತ ಅರಸುಗಳು ನಿನಗೆ ಕಾಣಿಕೆಗಳನ್ನು ತರು ವರು.
- 30ಪ್ರತಿಯೊಬ್ಬನು ಬೆಳ್ಳಿಯ ತುಂಡುಗಳನ್ನು ಸಮರ್ಪಿಸುವ ವರೆಗೆ ಜನರ ಕರುಗಳ ಸಂಗಡ ಹೋರಿ ಗಳ ಗುಂಪನ್ನು ಭಲ್ಲೆಗಾರರ ಗುಂಪುನ್ನು ಗದರಿಸು. ಕಾಳಗದಲ್ಲಿ ಸಂತೋಷ ಪಡುವ ಜನರನ್ನು ನೀನು ಚದರಿಸು.
- 31ಐಗುಪ್ತದಿಂದ ಪ್ರಧಾನರು ಬರುವರು; ಕೂಷ್ ತನ್ನ ಕೈಗಳನ್ನು ದೇವರ ಕಡೆಗೆ ಬೇಗ ಚಾಚುವದು.
- 32ಭೂಮಿಯ ರಾಜ್ಯಗಳೇ, ನೀವು ದೇವರಿಗೆ ಹಾಡಿರಿ; ಕರ್ತನಿಗೆ ಸ್ತುತಿಗಳನ್ನು ಹಾಡಿರಿ. ಸೆಲಾ.
- 33ಅನಾದಿಯಿಂದಿದ್ದ ಆಕಾಶಗಳಲ್ಲಿ ಸವಾರಿಮಾಡು ವಾತನಿಗೆ ಹಾಡಿರಿ; ಇಗೋ, ಆತನು ತನ್ನ ಮಹಾ ಧ್ವನಿಯಿಂದ ಧ್ವನಿಗೈಯುತ್ತಾನೆ.
Cross references
- Isaiah 45:14 ಯೆಶಾಯ 45:14ಕರ್ತನು ಹೇಳುವದೇನಂದರೆ--ಐಗುಪ್ತದ ಆದಾ ಯವೂ ಇಥಿಯೋಪ್ಯದ ವ್ಯಾಪಾರವೂ ಎತ್ತರದ ಮನುಷ್ಯರಾದ ಸೆಬಾಯರೂ ನಿಮ್ಮಲ್ಲಿಗೆ ಸೇರಿ ನಿಮ್ಮವ ರಾಗಿ ನಿಮ್ಮನ್ನು ಅನುಸರಿಸುವರು; ಸಂಕೋಲೆಗಳನ್ನು ಕಟ್ಟಿಕೊಂಡು ಬಂದು ನಿಮ್ಮ ಮುಂದೆ ಅಡ್ಡಬಿದ್ದು ನಿಶ್ಚಯವಾಗಿ ದೇವರು ನಿಮ್ಮಲ್ಲಿಯೇ ಇದ್ದಾನೆ, ಮತ್ತೊ ಬ್ಬನು ಇಲ್ಲ, ಬೇರೆ ದೇವರು ಇಲ್ಲವೇ ಇಲ್ಲ.
- Zephaniah 3:10 ಚೆಫನ್ಯ 3:10ಕೂಷಿನ ನದಿಗಳ ಆಚೆಯಿಂದ ನನ್ನ ಭಕ್ತರೂ ಚದರಿ ಹೋದವರ ನನ್ನ ಮಗಳೂ ನನ್ನ ಕಾಣಿಕೆಯನ್ನು ತರುವರು.
- Acts 8:27–40 ಅಪೊಸ್ತಲರ ಕೃತ್ಯಗಳು 8:27–40ಅವನು ಎದ್ದು ಹೊರಟು ಹೋಗುತ್ತಿರುವಾಗ ಇಗೋ, ಐಥಿಯೋಪ್ಯದವರ ರಾಣಿಯಾಗಿದ್ದ ಕಂದಾಕೆಯ ಕೈಕೆಳಗೆ ದೊಡ್ಡ ಅಧಿಕಾ ರಿಯೂ ಆಕೆಯ ಎಲ್ಲಾ ಖಜಾನೆಯ ಮೇಲ್ವಿಚಾರಕನೂ ಆಗಿದ್ದ ಐಥಿಯೋಪ್ಯದವನಾದ ಒಬ್ಬ ಕಂಚುಕಿಯು ಆರಾಧನೆಗೋಸ್ಕರ ಯೆರೂಸಲೇಮಿಗೆ ಬಂದು ಹಿಂತಿರುಗಿ ಹೋಗುವಾಗ ತನ್ನ ರಥದಲ್ಲಿ ಕೂತು ಕೊಂಡು ಯೆಶಾಯ ಪ್ರವಾದಿಯ ಗ್ರಂಥವನ್ನು ಓದು ತ್ತಿದ್ದನು; ಆಗ ಆತ್ಮನು ಫಿಲಿಪ್ಪನಿಗೆ--ನೀನು ಆ ರಥದ ಹತ್ತಿರ ಹೋಗಿ ಅದನ್ನು ಸಂಧಿಸು ಎಂದು ಹೇಳಿದನು. ಫಿಲಿಪ್ಪನು ಓಡಿಹೋಗಿ ಆ ಮನುಷ್ಯನು ಯೆಶಾಯ ಪ್ರವಾದಿಯ ಗ್ರಂಥವನ್ನು ಓದುತ್ತಿರುವದನ್ನು ಕೇಳಿ--ನೀನು ಓದುವದು ನಿನಗೆ ತಿಳಿಯುತ್ತದೋ ಅನ್ನಲು ಅವನು-ಯಾರಾದರೂ ನನಗೆ ತಿಳಿಸದ ಹೊರತು ಅದು ನನಗೆ ಹೇಗೆ ತಿಳಿದೀತು ಎಂದು ಹೇಳಿ ಫಿಲಿಪ್ಪನು ಮೇಲಕ್ಕೆ ಬಂದು ತನ್ನ ಬಳಿಯಲ್ಲಿ ಕೂತುಕೊಳ್ಳಬೇಕೆಂದು ಅವನು ಅಪೇಕ್ಷೆಪಟ್ಟನು. ಅವನು ಓದುತ್ತಿದ್ದ ಬರಹದ ಭಾಗವು ಯಾವ ದಂದರೆ--ವಧ್ಯಸ್ಥಾನಕ್ಕೆ ಒಯ್ಯಲ್ಪಡುವ ಕುರಿಯಂತೆ ಆತನು ಒಯ್ಯಲ್ಪಟ್ಟನು; ಕುರಿಮರಿಯು ಉಣ್ಣೆ ಕತ್ತರಿಸು ವವನ ಮುಂದೆ ಮೌನವಾಗಿರುವಂತೆ ಆತನು ತನ್ನ ಬಾಯಿತೆರೆಯಲೇ ಇಲ್ಲ. ಆತನಿಗುಂಟಾದ ದೀನಾ ವಸ್ಥೆಯಲ್ಲಿ ಆತನಿಗೆ ನ್ಯಾಯವು ಇಲ್ಲದೆ ಹೋಯಿತು. ಆತನ ವಂಶಾವಳಿಯನ್ನು ಯಾರು ಪ್ರಕಟಿಸುವರು? ಆತನ ಜೀವವನ್ನು ಭೂಮಿಯ ಮೇಲಿನಿಂದ ತೆಗೆದು ಬಿಟ್ಟರಲ್ಲಾ ಎಂಬದೇ. ಕಂಚುಕಿಯು--ಇದನ್ನು ಪ್ರವಾದಿಯು ಯಾರ ವಿಷಯದಲ್ಲಿ ಹೇಳಿದ್ದಾನೆ? ತನ್ನ ವಿಷಯದಲ್ಲಿಯೋ? ಮತ್ತೊಬ್ಬನ ವಿಷಯದಲ್ಲಿಯೋ? ನನಗೆ ಹೇಳಬೇಕು ಎಂದು ಫಿಲಿಪ್ಪನನ್ನು ಕೇಳಿಕೊಂಡನು. ಅದಕ್ಕೆ ಫಿಲಿಪ್ಪನು ತನ್ನ ಬಾಯನ್ನು ತೆರೆದು ಅದೇ ಬರಹದಿಂದ ಆರಂಭಿಸಿ ಅವನಿಗೆ ಯೇಸುವಿನ ವಿಷಯವನ್ನು ಸಾರಿದನು. ಅವರು ದಾರಿಯಲ್ಲಿ ಹೋಗುತ್ತಿರುವಾಗ ನೀರಿನ ಬಳಿಗೆ ಬಂದರು. ಕಂಚುಕಿಯು--ಅಗೋ, ನೀರು; ಬಾಪ್ತಿಸ್ಮ ಮಾಡಿಸಿಕೊಳ್ಳುವದಕ್ಕೆ ನನಗೆ ಅಡ್ಡಿ ಏನು ಅಂದನು. ಅದಕ್ಕೆ ಫಿಲಿಪ್ಪನು--ನೀನು ನಿನ್ನ ಹೃದಯಪೂರ್ವಕವಾಗಿ ನಂಬುವದಾದರೆ ಆಗ ಬಹುದು ಎಂದು ಹೇಳಿದನು. ಅದಕ್ಕೆ ಅವನು ಪ್ರತ್ಯು ತ್ತರವಾಗಿ--ಯೇಸು ಕ್ರಿಸ್ತನನ್ನು ದೇವಕುಮಾರನೆಂದು ನಾನು ನಂಬುತ್ತೇನೆ ಎಂದು ಹೇಳಿ ರಥವನ್ನು ನಿಲ್ಲಿ ಸುವದಕ್ಕೆ ಅಪ್ಪಣೆಕೊಟ್ಟನು; ಆಗ ಅವರಿಬ್ಬರೂ ಅಂದರೆ ಫಿಲಿಪ್ಪನೂ ಕಂಚುಕಿಯೂ ನೀರಿನೊಳಗೆ ಇಳಿದರು; ಫಿಲಿಪ್ಪನು ಕಂಚುಕಿಗೆ ಬಾಪ್ತಿಸ್ಮ ಮಾಡಿಸಿದನು. ಅವರು ನೀರನ್ನು ಬಿಟ್ಟು ಮೇಲಕ್ಕೆ ಬಂದಾಗ ಕರ್ತನ ಆತ್ಮನು ಫಿಲಿಪ್ಪನನ್ನು ಎತ್ತಿಕೊಂಡು ಹೋಗಲಾಗಿ ಕಂಚುಕಿಯು ಅವನನ್ನು ಕಾಣಲೇಇಲ್ಲ. ಅವನು ತನ್ನ ದಾರಿ ಹಿಡಿದು ಸಂತೋಷವುಳ್ಳವನಾಗಿ ಹೋದನು.ತರುವಾಯ ಫಿಲಿಪ್ಪನು ಅಜೋತಿನಲ್ಲಿ ಕಾಣಿಸಿ ಕೊಂಡು ಅಲ್ಲಿಂದ ಕೈಸರೈಯಕ್ಕೆ ಬರುವ ತನಕ ಎಲ್ಲಾ ಪಟ್ಟಣಗಳಲ್ಲಿ ಸುವಾರ್ತೆಯನ್ನು ಸಾರುತ್ತಾ ಹೋದನು. ತರುವಾಯ ಫಿಲಿಪ್ಪನು ಅಜೋತಿನಲ್ಲಿ ಕಾಣಿಸಿ ಕೊಂಡು ಅಲ್ಲಿಂದ ಕೈಸರೈಯಕ್ಕೆ ಬರುವ ತನಕ ಎಲ್ಲಾ ಪಟ್ಟಣಗಳಲ್ಲಿ ಸುವಾರ್ತೆಯನ್ನು ಸಾರುತ್ತಾ ಹೋದನು.
- Psalm 44:20 ಕೀರ್ತನೆಗಳು 44:20ನಾವು ನಮ್ಮ ದೇವರ ಹೆಸರನ್ನು ಮರೆತು ಅನ್ಯ ದೇವರಿಗೆ ನಮ್ಮ ಕೈಗಳನ್ನು ಚಾಚಿದರೆ
- Isaiah 19:18–25 ಯೆಶಾಯ 19:18–25ಆ ದಿವಸದಲ್ಲಿ ಕಾನಾನಿನ ಭಾಷೆಯನ್ನಾಡುವ ಐಗುಪ್ತದ ಐದು ಪಟ್ಟಣಗಳು ಸೈನ್ಯಗಳ ಕರ್ತನಿಗೆ ಆಣೆ ಇಟ್ಟುಕೊಳ್ಳುವವು. ಅವುಗಳಲ್ಲಿ ಒಂದರ ಹೆಸರು ನಾಶಪುರ. ಆ ದಿನದಲ್ಲಿ ಐಗುಪ್ತದೇಶದ ಮಧ್ಯೆ ಕರ್ತನಿಗೆ ಬಲಿಪೀಠವೂ ದೇಶದ ಎಲ್ಲೆಯಲ್ಲಿ ಕರ್ತನಿಗೆ ಒಂದು ಸ್ತಂಭವೂ ಇರುವವು. ಅದು ಸೈನ್ಯಗಳ ಕರ್ತನಿಗೆ ಐಗುಪ್ತ ದೇಶದಲ್ಲಿ ಗುರುತಾಗಿಯೂ ಸಾಕ್ಷಿ ಯಾಗಿಯೂ ಇರುವವು. ಹಿಂಸಕರ ದೆಸೆಯಿಂದ ಕರ್ತನನ್ನು ಕೂಗಿ ಕೊಳ್ಳಲು ಆತನು ಅವರಿಗೆ ಒಬ್ಬ ಶೂರನಾದ ರಕ್ಷಕ ನನ್ನು ಕಳುಹಿಸಿ ಅವರನ್ನು ಬಿಡುಗಡೆ ಮಾಡುವನು. ಕರ್ತನು ತನ್ನನ್ನು ಐಗುಪ್ತ್ಯರಿಗೆ ತಿಳಿಯಪಡಿಸಲು ಅವರು ಆ ದಿನದಲ್ಲಿ ಕರ್ತನನ್ನು ತಿಳಿದುಕೊಳ್ಳುವರು, ಬಲಿ ಕಾಣಿಕೆಗಳಿಂದ ಸೇವೆಮಾಡುವರು. ಹೌದು, ಅವರು ಕರ್ತನಿಗೆ ಪ್ರಮಾಣ ಮಾಡಿಕೊಂಡು ನೆರ ವೇರಿಸುವರು. ಇದಲ್ಲದೆ ಕರ್ತನು ಐಗುಪ್ತ್ಯರನ್ನು ಹೊಡೆಯುವನು, ಹೊಡೆದು ಸ್ವಸ್ಥಮಾಡುವನು. ಅವರು ಕರ್ತನ ಕಡೆಗೆ ತಿರುಗಿಕೊಳ್ಳುವರು, ಆತನು ಅವರನ್ನು ಆಲೈಸಿ ಸ್ವಸ್ಥಮಾಡುವನು. ಆ ದಿವಸದಲ್ಲಿ ಐಗುಪ್ತದಿಂದ ಅಶ್ಶೂರಕ್ಕೆ ಹೋಗುವ ಒಂದು ರಾಜಮಾರ್ಗವಿರುವದು. ಅಶ್ಶೂ ರ್ಯರು ಐಗುಪ್ತಕ್ಕೂ ಐಗುಪ್ತ್ಯರು ಅಶ್ಶೂರ್ಯಕ್ಕೂ ಹೋಗಿ ಬರುವರು ಮತ್ತು ಐಗುಪ್ತ್ಯರು ಅಶ್ಶೂರ್ಯರೊಂದಿಗೆ (ಕರ್ತನನ್ನು) ಸೇವಿಸುವರು. ಆ ದಿನದಲ್ಲಿ ಇಸ್ರಾಯೇಲು ಐಗುಪ್ತ್ಯರ ಸಂಗ ಡಲೂ ಅಶ್ಶೂರ್ಯರ ಸಂಗಡಲೂ ಮೂರನೆಯ ದಾಗಿ ದೇಶದ ಮಧ್ಯದಲ್ಲಿ ಆಶೀರ್ವಾದವಾಗಿರುವದು.ನನ್ನ ಪ್ರಜೆಯಾದ ಐಗುಪ್ತಕ್ಕೂ ನನ್ನ ಕೈಗಳ ಕೆಲಸ ವಾದ ಅಶ್ಶೂರ್ಯಕ್ಕೂ ನನ್ನ ಸ್ವಾಸ್ತ್ಯವಾದ ಇಸ್ರಾಯೇ ಲಿಗೂ ನಿಮಗೆ ಆಶೀರ್ವಾದ ಎಂದು ಹೇಳಿ ಅವರಿಗೆ ಆಶೀರ್ವಾದ ಕೊಡುವನು. ನನ್ನ ಪ್ರಜೆಯಾದ ಐಗುಪ್ತಕ್ಕೂ ನನ್ನ ಕೈಗಳ ಕೆಲಸ ವಾದ ಅಶ್ಶೂರ್ಯಕ್ಕೂ ನನ್ನ ಸ್ವಾಸ್ತ್ಯವಾದ ಇಸ್ರಾಯೇ ಲಿಗೂ ನಿಮಗೆ ಆಶೀರ್ವಾದ ಎಂದು ಹೇಳಿ ಅವರಿಗೆ ಆಶೀರ್ವಾದ ಕೊಡುವನು.
- Psalm 72:8–11 ಕೀರ್ತನೆಗಳು 72:8–11ಸಮುದ್ರದಿಂದ ಸಮುದ್ರದ ವರೆಗೂ ನದಿಯಿಂದ ಭೂಮಿಯ ಕೊನೆಗಳವರೆಗೂ ಆತನು ಆಳುವನು. ಆತನ ಮುಂದೆ ಅರಣ್ಯ ನಿವಾಸಿಗಳು ಎರಗುವರು; ಆತನ ಶತ್ರುಗಳು ಧೂಳನ್ನು ನೆಕ್ಕುವರು. ತಾರ್ಷೀಷಿನ ಅರಸರೂ ದ್ವೀಪಗಳ ಅರಸರೂ ಕಾಣಿಕೆಗಳನ್ನು ತರುವರು; ಶೆಬಾ ಮತ್ತು ಸೆಬಾದ ಅರಸರು ದಾನಗಳನ್ನು ಅರ್ಪಿಸುವರು. ಹೌದು, ಎಲ್ಲಾ ಅರಸರು ಆತನ ಮುಂದೆ ಅಡ್ಡ ಬೀಳುವರು; ಎಲ್ಲಾ ಜನಾಂಗಗಳು ಆತನನ್ನು ಸೇವಿಸುವವು.
- Isaiah 60:6–7 ಯೆಶಾಯ 60:6–7ಒಂಟೆಗಳ ಸಮೂಹವು ನಿನ್ನನ್ನು ಮುಚ್ಚುವದು; ಮಿದ್ಯಾನಿನ, ಏಫದ ವೇಗವುಳ್ಳ ಒಂಟೆಗಳು ಅವೆಲ್ಲಾ ಶೇಬದಿಂದಲೂ ಬರುವವು; ಅವು ಬಂಗಾರವನ್ನೂ ಧೂಪವನ್ನೂ ತರುವವು; ಅವು ಕರ್ತನ ಸ್ತೋತ್ರ ಗಳನ್ನು ಸಾರುವವು. ಕೇದಾರಿನ ಮಂದೆಗಳೆಲ್ಲಾ ನಿನ್ನ ಬಳಿಗೆ ಕೂಡಿಸಲ್ಪಡುವವು; ನೆಬಾಯೋತಿನ ಟಗರು ಗಳು ನಿನ್ನನ್ನು ಸೇವಿಸುವವು; ಅವು ನನ್ನ ಬಲಿಪೀಠದ ಮೇಲೆ ಅಂಗೀಕಾರವಾಗುವವು, ನಾನು ನನ್ನ ಮಹಿ ಮೆಯ ಆಲಯವನ್ನು ಘನಪಡಿಸುವೆನು.
- Psalm 143:6 ಕೀರ್ತನೆಗಳು 143:6ನನ್ನ ಕೈಗಳನ್ನು ನಿನ್ನ ಕಡೆಗೆ ಚಾಚುತ್ತೇನೆ; ನನ್ನ ಪ್ರಾಣವು ದಾಹಗೊಂಡ ಭೂಮಿಯ ಹಾಗೆ ನಿನಗಾಗಿ ದಾಹಗೊಂಡಿದೆ.
- Psalm 88:9 ಕೀರ್ತನೆಗಳು 88:9ಬಾಧೆಯ ದೆಸೆಯಿಂದ ನನ್ನ ಕಣ್ಣು ದುಃಖಿಸುತ್ತದೆ. ಕರ್ತನೇ, ದಿನವೆಲ್ಲಾ ನಿನ್ನನ್ನು ಕರೆಯು ತ್ತೇನೆ; ನಾನು ನಿನ್ನ ಕಡೆಗೆ ನನ್ನ ಕೈಗಳನ್ನು ಚಾಚುತ್ತೇನೆ.
- Isaiah 66:19 ಯೆಶಾಯ 66:19ಅವರ ಮಧ್ಯದಲ್ಲಿ ಒಂದು ಗುರುತನ್ನಿಟ್ಟು ಅವರಲ್ಲಿ ತಪ್ಪಿಸಿಕೊಂಡವರನ್ನು ಜನಾಂಗಗಳಿಗೂ ತಾರ್ಷೀಷಿಗೂ ಫೂಲಿಗೂ ಲೂದಿಗೂ ಬಿಲ್ಲು ಬೊಗ್ಗಿಸುವವರಿಗೂ ತೂಬಲಿಗೂ ಯಾವಾನಿಗೂ ನನ್ನ ಸಮಾಚಾರವನ್ನು ಕೇಳದೆ ನನ್ನ ಮಹಿಮೆಯನ್ನು ನೋಡದೆ ಇರುವ ದೂರದ ದ್ವೀಪ ಗಳಿಗೂ ಕಳುಹಿಸುವೆನು; ಅವರು ಅನ್ಯಜನಾಂಗಗಳಲ್ಲಿ ನನ್ನ ಮಹಿಮೆಯನ್ನು ತಿಳಿಸುವರು.
- 1 Kings 8:22 1 ಅರಸುಗಳು 8:22ಆಗ ಸೊಲೊಮೋನನು ಇಸ್ರಾಯೇಲಿನ ಸಭೆ ಯವರ ಸಮ್ಮುಖದಲ್ಲಿ ದೇವರ ಬಲಿಪೀಠದ ಮುಂದೆ ನಿಂತು ಆಕಾಶದ ಕಡೆಗೆ ತನ್ನ ಕೈಗಳನ್ನು ಎತ್ತಿ ಹೇಳಿದ್ದೇ ನಂದರೆ--