Psalms · chapter 69 · verse 15
Psalm 69:15 in Kannada
ನೀರಿನ ಪ್ರವಾಹವು ನನ್ನ ಮೇಲೆ ಹಾದು ಹೋಗದೇ ಇರಲಿ; ಅಗಾಧವು ನನ್ನನ್ನು ನುಂಗದೆ ಇರಲಿ; ಕುಣಿಯು ನನಗಾಗಿ ತನ್ನ ಬಾಯನ್ನು ಮುಟ್ಟ ದಿರಲಿ.
Neerina pravaahavu nanna mele haadu hogade irali; agaadhavu nannannu nungade irali; kuniyu nanagaagi tanna baayannu mutta dirali.
Psalm 69:15 in English
- King James Version (KJV)
- Let not the waterflood overflow me, neither let the deep swallow me up, and let not the pit shut her mouth upon me.
- World English Bible (WEB)
- Don’t let the flood waters overwhelm me, neither let the deep swallow me up. Don’t let the pit shut its mouth on me.
- American Standard Version (ASV)
- Let not the waterflood overwhelm me, Neither let the deep swallow me up; And let not the pit shut its mouth upon me.
- Bible in Basic English (BBE)
- Let me not be covered by the flowing waters; let not the deep waters go over my head, and let me not be shut up in the underworld.
- Darby Translation (DBY)
- Let not the flood of waters overflow me, neither let the deep swallow me up; and let not the pit shut its mouth upon me.
- Webster's Bible (WBS)
- Let not the water-flood overflow me, neither let the deep swallow me up, and let not the pit shut her mouth upon me.
- Young's Literal Translation (YLT)
- Let not a flood of waters overflow me, Nor let the deep swallow me up, Nor let the pit shut her mouth upon me.
Read in context
- 13ಓ ಕರ್ತನೇ, ನಾನಾದರೋ ಅಂಗೀಕಾರದ ಸಮ ಯದಲ್ಲಿ ನಿನಗೆ ನನ್ನ ಪ್ರಾರ್ಥನೆಯನ್ನು ಮಾಡುವೆನು. ಓ ದೇವರೇ, ನಿನ್ನ ಅತಿಶಯವಾದ ಕರುಣೆಯಿಂದಲೂ ನಿನ್ನ ರಕ್ಷಣೆಯ ಸತ್ಯದಲ್ಲಿಯೂ ನನಗೆ ಉತ್ತರಕೊಡು.
- 14ನಾನು ಮುಳುಗದಂತೆ ನನ್ನನ್ನು ಕೆಸರಿನೊಳಗಿಂದ ಬಿಡಿಸು; ಹಗೆಮಾಡುವವರಿಂದ ನನ್ನನ್ನು ತಪ್ಪಿಸು, ನೀರಿನ ಅಗಾಧಗಳೊಳಗಿಂದಲೂ ನನಗೆ ಬಿಡುಗಡೆ ಯಾಗಲಿ
- 15ನೀರಿನ ಪ್ರವಾಹವು ನನ್ನ ಮೇಲೆ ಹಾದು ಹೋಗದೇ ಇರಲಿ; ಅಗಾಧವು ನನ್ನನ್ನು ನುಂಗದೆ ಇರಲಿ; ಕುಣಿಯು ನನಗಾಗಿ ತನ್ನ ಬಾಯನ್ನು ಮುಟ್ಟ ದಿರಲಿ.
- 16ಓ ಕರ್ತನೇ, ನನಗೆ ಉತ್ತರಕೊಡು;ನಿನ್ನ ಪ್ರೀತಿ ಕರುಣೆಯು ಒಳ್ಳೇದಾಗಿದೆ; ನಿನ್ನ ಅತಿ ಶಯವಾದ ಅಂತಃಕರುಣೆಗಳ ಪ್ರಕಾರ ನನ್ನ ಕಡೆಗೆ ತಿರುಗು.
- 17ನಿನ್ನ ಮುಖವನ್ನು ನಿನ್ನ ಸೇವಕನಿಗೆ ಮರೆಮಾಡಬೇಡ; ನಾನು ಇಕ್ಕಟ್ಟಿನಲ್ಲಿದ್ದೇನೆ; ಬೇಗ ನನಗೆ ಉತ್ತರಕೊಡು.
Cross references
- Revelation 12:15–16 ಪ್ರಕಟನೆ 12:15–16ಆ ಸ್ತ್ರೀಯನ್ನು ಪ್ರವಾಹವು ಬಡಕೊಂಡು ಹೋಗ ಬೇಕೆಂದು ಆಕೆಯ ಹಿಂದೆ ಸರ್ಪವು ತನ್ನ ಬಾಯೊಳಗಿಂದ ನೀರನ್ನು ಪ್ರವಾಹದಂತೆ ಬಿಟ್ಟಿತು. ಆದರೆ ಭೂಮಿಯು ಆ ಸ್ತ್ರೀಯ ಸಹಾಯಕ್ಕೆ ಬಂದು ತನ್ನ ಬಾಯಿ ತೆರೆದು ಘಟಸರ್ಪನು ತನ್ನ ಬಾಯೊಳಗಿಂದ ಬಿಟ್ಟ ಪ್ರವಾಹವನ್ನು ಕುಡಿದುಬಿಟ್ಟಿತು.ಆಗ ಘಟಸರ್ಪನು ಸ್ತ್ರೀಯ ಮೇಲೆ ಕೋಪಿಸಿಕೊಂಡು ಆಕೆಯ ಸಂತಾನದವರಲ್ಲಿ ಉಳಿದವರ ಮೇಲೆ ಅಂದರೆ ದೇವರ ಆಜ್ಞೆಗಳನ್ನು ಕೈಕೊಂಡು ನಡೆದು ಯೇಸು ಕ್ರಿಸ್ತನ ವಿಷಯವಾದ ಸಾಕ್ಷಿಯನ್ನು ಹೇಳಿರುವವರ ಮೇಲೆ ಯುದ್ಧ ಮಾಡುವದಕ್ಕೆ ಹೊರಟನು.
- Psalm 16:10 ಕೀರ್ತನೆಗಳು 16:10ಯಾಕಂದರೆ ನೀನು ನನ್ನ ಆತ್ಮವನ್ನು ನರಕದಲ್ಲಿ ಬಿಟ್ಟುಬಿಡುವದಿಲ್ಲ; ನಿನ್ನ ಪರಿಶುದ್ಧನ ಕೊಳೆಯುವಿಕೆಯನ್ನು ನೋಡ ಗೊಡಿಸುವದಿಲ್ಲ.ಜೀವದ ಮಾರ್ಗವನ್ನು ನನಗೆ ತಿಳಿಸುವಿ; ನಿನ್ನ ಸಮ್ಮುಖದಲ್ಲಿ ಪರಿಪೂರ್ಣ ಸಂತೋಷ ವೂ ನಿನ್ನ ಬಲಗಡೆಯಲ್ಲಿ ಶಾಶ್ವತ ಭಾಗ್ಯವೂ ಇರುತ್ತವೆ.
- Jonah 2:2–7 ಯೋನ 2:2–7ನಾನು ನನ್ನ ವ್ಯಥೆಯ ದೆಸೆಯಿಂದ ಕರ್ತನಿಗೆ ಮೊರೆಯಿಟ್ಟೆನು; ಆತನು ನನ್ನ ಕೂಗನ್ನು ಕೇಳಿದನು; ನರಕದ ಹೊಟ್ಟೆ ಯೊಳಗಿಂದ ನಾನು ಕೂಗಿದೆನು, ಆಗ ನನ್ನ ಶಬ್ದವನ್ನು ನೀನು ಕೇಳಿದಿ. ನನ್ನನ್ನು ನೀನು ಅಗಾಧದಲ್ಲಿಯೂ ಸಮುದ್ರಗಳ ಮಧ್ಯದಲ್ಲಿಯೂ ಹಾಕಿದಿ; ಪ್ರವಾಹಗಳು ನನ್ನನ್ನು ಸುತ್ತಿಕೊಂಡವು; ನಿನ್ನ ಎಲ್ಲಾ ಅಲೆಗಳೂ ನಿನ್ನ ತೆರೆಗಳೂ ನನ್ನ ಮೇಲೆ ದಾಟಿಹೋದವು. ಆಗ ನಾನು ಹೇಳಿದ್ದು--ನಿನ್ನ ಕಣ್ಣುಗಳ ಎದುರಿನಿಂದ ಹೊರಗೆ ಹಾಕಲ್ಪಟ್ಟಿದ್ದೇನೆ; ಆದಾಗ್ಯೂ ನಾನು ನಿನ್ನ ಪರಿಶುದ್ಧ ಮಂದಿರದ ಕಡೆಗೆ ತಿರುಗಿ ನೋಡುವೆನು. ನೀರು ಗಳು ಪ್ರಾಣದ ಮಟ್ಟಿಗೂ ನನ್ನನ್ನು ಸುತ್ತಿಕೊಂಡವು; ಅಗಾಧವು ನನ್ನನ್ನು ಸುತ್ತಲೂ ಮುಚ್ಚಿಕೊಂಡಿತು; ಆಪುಗಳು ನನ್ನ ತಲೆಯನ್ನು ಸುತ್ತಿಕೊಂಡಿದ್ದವು. ಬೆಟ್ಟಗಳ ಬುಡದ ತನಕ ಇಳಿದು ಹೋದೆನು; ಭೂಮಿಯ ಅಡ್ಡದಂಡೆಗಳು ನಿತ್ಯವಾಗಿ ನನ್ನ ಸುತ್ತಲಿ ದ್ದವು; ಆದಾಗ್ಯೂ ಓ ದೇವರಾದ ನನ್ನ ಕರ್ತನೇ, ನೀನು ನನ್ನ ಪ್ರಾಣವನ್ನು ನಾಶನದೊಳಗಿಂದ ಎಬ್ಬಿಸಿದ್ದೀ. ನನ್ನ ಪ್ರಾಣವು ನನ್ನಲ್ಲಿ ಕುಂದಿಹೋದಾಗ ಕರ್ತನನ್ನು ಜ್ಞಾಪಕ ಮಾಡಿಕೊಂಡೆನು; ನನ್ನ ಪ್ರಾರ್ಥನೆಯು ನಿನ್ನ ಬಳಿಗೆ ನಿನ್ನ ಪರಿಶುದ್ಧ ಮಂದಿರದೊಳಗೆ ಬಂತು.
- Isaiah 43:1–2 ಯೆಶಾಯ 43:1–2ಈಗಲಾದರೋ ಓ ಯಾಕೋಬೇ, ಇಸ್ರಾಯೇಲೇ ನಿನ್ನನ್ನು ಸೃಷ್ಟಿಸಿದಾತನೂ ರೂಪಿಸಿದಾತನೂ ಆದ ಕರ್ತನು ಇಂತೆನ್ನುತ್ತಾನೆ--ಹೆದರಬೇಡ, ನಾನು ನಿನ್ನನ್ನು ವಿಮೋಚಿಸಿದೆನಲ್ಲಾ ನಿನ್ನ ಹೆಸರು ಹಿಡಿದು ಕರೆದೆನಲ್ಲಾ; ನೀನು ನನ್ನವನೇ. ನೀನು ಜಲರಾಶಿಯನ್ನು ದಾಟಿ ಹೋಗುವಾಗ ನಾನು ನಿನ್ನೊಂದಿಗಿರುವೆನು; ನದಿಗಳನ್ನು ನೀನು ದಾಟುವಾಗ ಅವು ನಿನ್ನನ್ನು ಮುಳುಗಿಸುವದಿಲ್ಲ; ಬೆಂಕಿಯಲ್ಲಿ ನೀನು ನಡೆಯುವಾಗ ಸುಡಲ್ಪಡುವದಿಲ್ಲ; ಇಲ್ಲವೆ ಜ್ವಾಲೆಯು ನಿನ್ನನ್ನು ದಹಿಸದು.
- Acts 2:24 ಅಪೊಸ್ತಲರ ಕೃತ್ಯಗಳು 2:24ದೇವರು ಆತನನ್ನು ಮರಣ ವೇದನೆಗಳಿಂದ ಬಿಡಿಸಿ ಎಬ್ಬಿಸಿದನು. ಯಾಕಂದರೆ ಮರಣವು ಆತನನ್ನು ಹಿಡಿದುಕೊಂಡಿರುವದು ಅಸಾಧ್ಯ ವಾಗಿತ್ತು.
- Acts 2:31 ಅಪೊಸ್ತಲರ ಕೃತ್ಯಗಳು 2:31ಆತನ ಆತ್ಮವು ಪಾತಾಳದಲ್ಲಿ ಬಿಡಲ್ಪಡಲಿಲ್ಲ ವೆಂತಲೂ ಆತನ ಶರೀರವು ಕೊಳೆಯಲಿಲ್ಲವೆಂತಲೂ ಕ್ರಿಸ್ತನ ಪುನರುತ್ಥಾನದ ವಿಷಯವಾಗಿ ಅವನು ಇದನ್ನು ಮುಂದಾಗಿ ನೋಡಿ ಹೇಳಿದನು;
- Psalm 88:4–6 ಕೀರ್ತನೆಗಳು 88:4–6ಕುಣಿಗೆ ಇಳಿಯುವವರ ಸಂಗಡ ಎಣಿಸಲ್ಪಟ್ಟಿದ್ದೇನೆ; ಬಲವಿಲ್ಲದ ಮನುಷ್ಯನ ಹಾಗಿದ್ದೇನೆ. ಕೊಲ್ಲಲ್ಪಟ್ಟು ಸಮಾಧಿಯಲ್ಲಿ ಮಲಗಿರುವವರನ್ನು ನೀನು ಇನ್ನು ಜ್ಞಾಪಕಮಾಡಿಕೊಳ್ಳದ ಹಾಗೆ ಸತ್ತವ ರಲ್ಲಿ ಬಿಡಲ್ಪಟ್ಟಿದ್ದೇನೆ; ಅವರು ನಿನ್ನ ಕೈಯಿಂದ ಕಡಿ ಯಲ್ಪಟ್ಟಿದ್ದಾರೆ. ಕೆಳಗಿನ ಆಳವಾದ ಕುಣಿಯಲ್ಲಿಯೂ ಕತ್ತಲೆಯಲ್ಲಿಯೂ ಅಗಾಧಗಳಲ್ಲಿಯೂ ನನ್ನನ್ನು ಇಟ್ಟಿದ್ದಿ.
- Numbers 16:33–34 ಅರಣ್ಯಕಾಂಡ 16:33–34ಅವರು ತಮಗೆ ಸಂಬಂಧಪಟ್ಟವುಗಳೆ ಲ್ಲವುಗಳ ಸಂಗಡ ಸಜೀವಿಗಳಾಗಿ ಪಾತಾಳಕ್ಕೆ ಇಳಿದರು; ಭೂಮಿಯು ಅವರ ಮೇಲೆ ಮುಚ್ಚಿಕೊಂಡಿತು. ಹೀಗೆ ಅವರು ಸಭೆಯ ಮಧ್ಯದೊಳಗಿಂದ ನಾಶವಾದರು. ಆಗ ಅವರ ಸುತ್ತಲಿದ್ದ ಇಸ್ರಾಯೇಲ್ಯರೆಲ್ಲರು ಅವರ ಕೂಗಿಗೆ ಓಡಿಹೋದರು; ಅವರು--ಭೂಮಿಯು ನಮ್ಮನ್ನು ಸಹ ನುಂಗಿತೆಂದು ಹೇಳಿದರು.
- Psalm 124:4–5 ಕೀರ್ತನೆಗಳು 124:4–5ಆಗ ನೀರುಗಳು ನಮ್ಮನ್ನು ಮುಣುಗಿಸುತ್ತಿದ್ದವು; ತೊರೆಯು ನಮ್ಮ ಪ್ರಾಣದ ಮೇಲೆ ಹರಿಯುತ್ತಿತ್ತು. ಆಗ ನಮ್ಮ ಪ್ರಾಣದ ಮೇಲೆ ಗರ್ವದ ನೀರುಗಳು ಹರಿಯುತ್ತಿ ದ್ದವು.
- Matthew 12:40 ಮತ್ತಾಯನು 12:40ಯಾಕಂದರೆ ಯೋನನು ಮೂರು ಹಗಲು ಮತ್ತು ಮೂರು ರಾತ್ರಿ ಮಾನಿನ ಹೊಟ್ಟೆಯಲ್ಲಿ ಇದ್ದ ಹಾಗೆಯೇ ಮನುಷ್ಯಕುಮಾರನು ಮೂರು ಹಗಲು ಮತ್ತು ಮೂರು ರಾತ್ರಿ ಭೂಗರ್ಭ ದಲ್ಲಿರುವನು.