Psalms · chapter 69 · verse 2
Psalm 69:2 in Kannada
ನೆಲೆ ಸಿಕ್ಕದ ಆಳವಾದ ಕೆಸರಿನಲ್ಲಿ ನಾನು ಮುಳುಗುತ್ತೇನೆ; ನನ್ನ ಮೇಲೆ ಹಾದುಹೋಗುವ ನೀರಿನ ಪ್ರವಾಹಗಳ ಅಗಾಧದಲ್ಲಿ ನಾನು ಸಿಕ್ಕಿಕೊಂಡಿದ್ದೇನೆ.
Nele sikkada aalavaada kesarinalli naanu muluguttene; nanna mele haaduhoguva neerina pravaahagala agaadhadalli naanu sikkikondiddene.
Psalm 69:2 in English
- King James Version (KJV)
- I sink in deep mire, where [there is] no standing: I am come into deep waters, where the floods overflow me.
- World English Bible (WEB)
- I sink in deep mire, where there is no foothold. I have come into deep waters, where the floods overflow me.
- American Standard Version (ASV)
- I sink in deep mire, where there is no standing: I am come into deep waters, where the floods overflow me.
- Bible in Basic English (BBE)
- My feet are deep in the soft earth, where there is no support; I have come into deep waters, the waves are flowing over me.
- Darby Translation (DBY)
- I sink in deep mire, where there is no standing; I am come into the depths of waters, and the flood overfloweth me.
- Webster's Bible (WBS)
- I sink in deep mire, where [there is] no standing: I am come into deep waters, where the floods overflow me.
- Young's Literal Translation (YLT)
- I have sunk in deep mire, And there is no standing, I have come into the depths of the waters, And a flood hath overflown me.
Read in context
- 1ಓ ದೇವರೇ ನನ್ನನ್ನು ರಕ್ಷಿಸು; ನೀರು ನನ್ನ ಪ್ರಾಣದ ವರೆಗೂ ಬಂದಿದೆ.
- 2ನೆಲೆ ಸಿಕ್ಕದ ಆಳವಾದ ಕೆಸರಿನಲ್ಲಿ ನಾನು ಮುಳುಗುತ್ತೇನೆ; ನನ್ನ ಮೇಲೆ ಹಾದುಹೋಗುವ ನೀರಿನ ಪ್ರವಾಹಗಳ ಅಗಾಧದಲ್ಲಿ ನಾನು ಸಿಕ್ಕಿಕೊಂಡಿದ್ದೇನೆ.
- 3ನಾನು ಕೂಗಿ ದಣಿದಿದ್ದೇನೆ; ನನ್ನ ಗಂಟಲು ಒಣಗಿದೆ; ನಾನು ದೇವ ರನ್ನು ಎದುರು ನೋಡುವದರಿಂದ ನನ್ನ ಕಣ್ಣುಗಳು ಕ್ಷೀಣಿಸುತ್ತವೆ.
- 4ಕಾರಣವಿಲ್ಲದೆ ನನ್ನನ್ನು ಹಗೆ ಮಾಡು ವವರು ನನ್ನ ತಲೆಯ ಕೂದಲುಗಳಿಗಿಂತ ಹೆಚ್ಚಾಗಿ ದ್ದಾರೆ; ನನ್ನನ್ನು ಅನ್ಯಾಯವಾಗಿ ಸಂಹರಿಸುವ ನನ್ನ ಶತ್ರುಗಳೂ ಪ್ರಬಲವಾಗಿದ್ದಾರೆ; ನಾನು ತೆಗೆದು ಕೊಳ್ಳದ್ದನ್ನು ನನ್ನಿಂದ ದೋಚಿಕೊಂಡರು.
Cross references
- Psalm 40:2 ಕೀರ್ತನೆಗಳು 40:2ಆತನು ನನ್ನನ್ನು ನಾಶನದ ಕುಣಿಯಿಂದಲೂ ಮತ್ತು ಬುರುದೆಯ ಕೆಸರಿನಿಂದಲೂ ಎತ್ತಿ ನನ್ನ ಪಾದಗಳನ್ನು ಬಂಡೆಯ ಮೇಲೆ ನಿಲ್ಲಿಸಿ ನನ್ನ ಹೆಜ್ಜೆಗಳನ್ನು ಸ್ಥಿರಪಡಿಸಿದನು.
- Matthew 7:25 ಮತ್ತಾಯನು 7:25ಮಳೆಯು ಸುರಿದು ಪ್ರವಾಹಗಳು ಬಂದು ಗಾಳಿಯು ಬೀಸಿ ಆ ಮನೆಗೆ ಬಡಿದವು; ಆದರೂ ಅದು ಬೀಳಲಿಲ್ಲ; ಯಾಕಂದರೆ ಅದರ ಅಸ್ತಿವಾರವು ಬಂಡೆಯ ಮೇಲೆ ಹಾಕಲ್ಪಟ್ಟಿತು.
- Psalm 88:6–7 ಕೀರ್ತನೆಗಳು 88:6–7ಕೆಳಗಿನ ಆಳವಾದ ಕುಣಿಯಲ್ಲಿಯೂ ಕತ್ತಲೆಯಲ್ಲಿಯೂ ಅಗಾಧಗಳಲ್ಲಿಯೂ ನನ್ನನ್ನು ಇಟ್ಟಿದ್ದಿ. ನಿನ್ನ ಕೋಪವು ನನ್ನ ಮೇಲೆ ನೆಲೆಯಾಗಿದೆ; ನಿನ್ನ ಅಲೆಗಳಿಂದೆಲ್ಲಾ ನನ್ನನ್ನು ಕುಂದಿ ಸಿದ್ದೀ ಸೆಲಾ.
- Psalm 32:6 ಕೀರ್ತನೆಗಳು 32:6ಇದಕ್ಕೋಸ್ಕರ ಭಕ್ತರೆಲ್ಲರು ನಿನ್ನನ್ನು ಕಂಡುಕೊಳ್ಳುವ ಕಾಲದಲ್ಲಿ ನಿನಗೆ ಪ್ರಾರ್ಥನೆ ಮಾಡುವರು; ನಿಶ್ಚಯವಾಗಿ ಬಹಳ ನೀರಿನ ಪ್ರವಾಹ ಗಳು ಅವನ ಸವಿಾಪಕ್ಕೆ ಬರುವದಿಲ್ಲ.
- Jeremiah 38:6 ಯೆರೆಮೀಯ 38:6ಆಗ ಅವರು ಯೆರೆವಿಾಯನನ್ನು ತಕ್ಕೊಂಡು ಸೆರೆಮನೆಯ ಅಂಗಳದಲ್ಲಿದ್ದ ಹಮ್ಮೇಲೆಕನ ಮಗನಾದ ಮಲ್ಕೀಯನ ಕುಣಿಯಲ್ಲಿ ಹಾಕಿದರು; ಅವರು ಯೆರೆವಿಾಯನನ್ನು ಹಗ್ಗಗಳಿಂದ ಇಳಿಸಿದರು; ಆ ಕುಣಿಯಲ್ಲಿ ನೀರು ಇರಲಿಲ್ಲ; ಕೆಸರು ಮಾತ್ರ ಇತ್ತು; ಯೆರೆವಿಾಯನು ಕೆಸರಿನಲ್ಲಿ ಮುಣುಗಿದನು.
- Jeremiah 38:22 ಯೆರೆಮೀಯ 38:22ಇಗೋ, ಯೆಹೂದದ ಅರಸನ ಮನೆ ಯಲ್ಲಿ ಉಳಿದ ಹೆಂಗಸರೆಲ್ಲರು ಬಾಬೆಲಿನ ಅರಸನ ಪ್ರಧಾನರ ಬಳಿಗೆ ಹೊರಗೆ ತರಲ್ಪಟ್ಟು ಹೇಳುವದೇ ನಂದರೆ--ನಿನ್ನ ಸ್ನೇಹಿತರು ನಿನ್ನನ್ನು ಪ್ರೇರೇಪಿಸಿ, ನಿನ್ನನ್ನು ಗೆದ್ದಿದ್ದಾರೆ; ನಿನ್ನ ಕಾಲುಗಳು ಕೆಸರಿನಲ್ಲಿ ಮುಳುಗಿವೆ; ಆದರೆ ಅವರು ಹಿಂಜರಿದಿದ್ದಾರೆ.
- Genesis 7:17–23 ಆದಿಕಾಂಡ 7:17–23ನಾಲ್ವತ್ತು ದಿನ ಭೂಮಿಯ ಮೇಲೆ ಪ್ರಳಯವು ಇತ್ತು; ಆಗ ನೀರುಗಳು ಹೆಚ್ಚಿ ನಾವೆಯನ್ನು ಎತ್ತಲು ಅದು ಭೂಮಿಯಿಂದ ಎತ್ತಲ್ಪಟ್ಟಿತು. ನೀರು ಪ್ರಬಲವಾಗಿ ಭೂಮಿಯ ಮೇಲೆ ಬಹಳವಾಗಿ ಹೆಚ್ಚಿದಾಗ ಆ ನಾವೆಯು ನೀರಿನ ಮೇಲೆ ಹೋಯಿತು. ಇದಲ್ಲದೆ ನೀರು ಭೂಮಿಯ ಮೇಲೆ ಅತ್ಯಧಿಕವಾಗಿ ಪ್ರಬಲವಾದದ್ದರಿಂದ ಆಕಾಶದ ಕೆಳಗಿರುವ ಎತ್ತರ ವಾದ ಎಲ್ಲಾ ಬೆಟ್ಟಗಳು ಮುಚ್ಚಲ್ಪಟ್ಟವು. ನೀರುಗಳು ಬೆಟ್ಟಗಳನ್ನು ಮುಚ್ಚಿ ಅವುಗಳ ಮೇಲೆ ಹದಿನೈದು ಮೊಳದ ವರೆಗೆ ಏರಿತು. ಆಗ ಪಶು ಪಕ್ಷಿ ಮೃಗ ಭೂಮಿಯಲ್ಲಿ ಹರಿದಾಡುವ ಕ್ರಿಮಿ ಎಲ್ಲಾ ಮನುಷ್ಯರು ಸಹಿತವಾಗಿ ಅಂತೂ ಭೂಮಿಯ ಮೇಲೆ ಚಲಿಸುವ ಎಲ್ಲಾ ಶರೀರಗಳು ಸತ್ತುಹೋದವು. ಒಣ ನೆಲದ ಮೇಲಿದ್ದಂಥ ಮೂಗಿನಲ್ಲಿ ಶ್ವಾಸವಿರುವ ವುಗಳೆಲ್ಲಾ ಸತ್ತುಹೋದವು. ಮನುಷ್ಯರೂ ಪಶು ಗಳೂ ಕ್ರಿಮಿಗಳೂ ಆಕಾಶದ ಪಕ್ಷಿಗಳೂ ಭೂಮಿಯ ಮೇಲಿರುವ ಎಲ್ಲಾ ಜೀವರಾಶಿಗಳೂ ನಾಶವಾದವು. ಅವು ಭೂಮಿಯ ಮೇಲಿಂದ ಅಳಿಸಲ್ಪಟ್ಟವು. ನೋಹನೂ ಅವನ ಸಂಗಡ ನಾವೆಯಲ್ಲಿದ್ದವರೂ ಮಾತ್ರ ಜೀವದಿಂದ ಉಳಿಸಲ್ಪಟ್ಟರು.ಜಲವು ಭೂಮಿಯ ಮೇಲೆ ನೂರೈವತ್ತು ದಿನ ಪ್ರಬಲ ವಾಯಿತು.
- Matthew 26:37–38 ಮತ್ತಾಯನು 26:37–38ಆತನು ತನ್ನ ಜೊತೆಯಲ್ಲಿ ಪೇತ್ರನನ್ನೂ ಜೆಬೆದಾಯನ ಇಬ್ಬರು ಕುಮಾರರನ್ನೂ ಕರೆದುಕೊಂಡು ಹೋಗಿ ದುಃಖಿಸುವದಕ್ಕೂ ಬಹು ವ್ಯಥೆಪಡುವದಕ್ಕೂ ಆರಂಭಿಸಿದನು. ಆತನು ಅವರಿಗೆ--ನನ್ನ ಪ್ರಾಣವು ಮರಣಹೊಂದುವಷ್ಟು ಅತಿ ದುಃಖಕ್ಕೆ ಒಳಗಾಗಿದೆ; ನೀವು ಇಲ್ಲೇ ಇದ್ದು ನನ್ನೊಡನೆ ಎಚ್ಚರವಾಗಿರ್ರಿ ಅಂದನು.