Psalms · chapter 69 · verse 33
Psalm 69:33 in Kannada
ಕರ್ತನು ಬಡವರನ್ನು ಲಾಲಿಸಿ ತನ್ನ ಸೆರೆಯವರನ್ನು ತಿರಸ್ಕರಿಸುವದಿಲ್ಲ.
Kartanu badavarannu laalisi tanna sereyavarannu tiraskarisuvadilla.
Psalm 69:33 in English
- King James Version (KJV)
- For the LORD heareth the poor, and despiseth not his prisoners.
- World English Bible (WEB)
- For the LORD hears the needy, and doesn’t despise his captive people.
- American Standard Version (ASV)
- For Jehovah heareth the needy, And despiseth not his prisoners.
- Bible in Basic English (BBE)
- For the ears of the Lord are open to the poor, and he takes thought for his prisoners.
- Darby Translation (DBY)
- For Jehovah heareth the needy, and despiseth not his prisoners.
- Webster's Bible (WBS)
- For the LORD heareth the poor, and despiseth not his prisoners.
- Young's Literal Translation (YLT)
- For Jehovah hearkeneth unto the needy, And His bound ones He hath not despised.
Read in context
- 31ಅದು ಕರ್ತನಿಗೆ ಕೊಂಬುಗಳೂ ಗೊರಸೆ ಗಳೂ ಉಳ್ಳ ಎಳೇ ಹೋರಿಗಳಿಗಿಂತ ಮೆಚ್ಚಿಕೆಯಾಗಿರು ವದು.
- 32ಇದನ್ನು ದೀನರು ನೋಡಿ, ಸಂತೋಷಿಸು ವರು. ದೇವರನ್ನು ಹುಡುಕುವ ನಿಮ್ಮ ಹೃದಯವು ಜೀವಿಸುವದು.
- 33ಕರ್ತನು ಬಡವರನ್ನು ಲಾಲಿಸಿ ತನ್ನ ಸೆರೆಯವರನ್ನು ತಿರಸ್ಕರಿಸುವದಿಲ್ಲ.
- 34ಆಕಾಶವೂ ಭೂಮಿಯೂ ಸಮುದ್ರಗಳೂ ಅವುಗಳಲ್ಲಿ ಸಂಚರಿಸುವುದೆಲ್ಲವೂ ಆತನನ್ನು ಸ್ತುತಿಸಲಿ.
- 35ದೇವರು ಚೀಯೋನನ್ನು ರಕ್ಷಿಸಿ ಯೆಹೂದದ ಪಟ್ಟ ಣಗಳನ್ನು ಕಟ್ಟುವನು; ಹೀಗೆ ಅವರು ಅಲ್ಲಿ ವಾಸ ಮಾಡಿ ಅದನ್ನು ಸ್ವಾಧೀನಪಡಿಸಿಕೊಳ್ಳುವರು.ಅವನ ಸೇವಕರ ಸಂತತಿಯು ಸಹ ಅದನ್ನು ಬಾಧ್ಯವಾಗಿ ಹೊಂದುವದು; ಆತನ ಹೆಸರನ್ನು ಪ್ರೀತಿಮಾಡುವವರು ಅದರಲ್ಲಿ ವಾಸಮಾಡುವರು.
Cross references
- Psalm 68:6 ಕೀರ್ತನೆಗಳು 68:6ದೇವರು ಒಬ್ಬೊಂಟಿಗರನ್ನು ಕುಟುಂಬಸ್ತರನ್ನಾಗಿ ಮಾಡುತ್ತಾನೆ; ಸರಪಣಿಗಳಿಂದ ಬಂಧಿಸಲ್ಪಟ್ಟವರನ್ನು ಹೊರಗೆ ಬರಮಾಡುತ್ತಾನೆ; ಆದರೆ ಎದುರು ಬೀಳು ವವರು ಒಣಭೂಮಿಯಲ್ಲಿ ವಾಸಮಾಡುತ್ತಾರೆ.
- Acts 5:18–19 ಅಪೊಸ್ತಲರ ಕೃತ್ಯಗಳು 5:18–19ಅಪೊಸ್ತಲ ರನ್ನು ಹಿಡಿದು ಅವರನ್ನು ಸಾಮಾನ್ಯ ಸೆರೆಯಲ್ಲಿಟ್ಟರು. ಆದರೆ ರಾತ್ರಿಯಲ್ಲಿ ಕರ್ತನ ದೂತನು ಸೆರೆ ಮನೆಯ ಬಾಗಿಲುಗಳನ್ನು ತೆರೆದು ಅವರನ್ನು ಹೊರಕ್ಕೆ ತಂದು--
- Zechariah 9:11–12 ಜೆಕರ್ಯ 9:11–12ನಿನ್ನ ವಿಷಯವಾಗಿ ಸಹ ನಿನ್ನ ಒಡಂಬಡಿಕೆಯ ರಕ್ತದಿಂದ, ನಿನ್ನ ಸೆರೆಯವರನ್ನು ನೀರಿಲ್ಲದ ಕುಣಿಯೊ ಳಗಿಂದ ಕಳುಹಿಸಿಬಿಡುತ್ತೇನೆ. ನಿರೀಕ್ಷೆಯ ಸೆರೆಯವರೇ, ಬಲವಾದ ದುರ್ಗಸ್ಥಾನಕ್ಕೆ ತಿರಿಗಿರಿ, ಎರಡ ರಷ್ಟು ನಿಮಗೆ ಕೊಡುವೆನೆಂದು ಈ ಹೊತ್ತೇ ಪ್ರಕಟಿ ಸುತ್ತೇನೆ.
- Revelation 2:10 ಪ್ರಕಟನೆ 2:10ನಿನ್ನನ್ನು ಸಂಕಟಪಡಿಸುವವುಗಳಲ್ಲಿ ಯಾವ ದಕ್ಕೂ ಹೆದರಬೇಡ. ಇಗೋ, ನೀವು ಶೋಧಿಸಲ್ಪಡು ವಂತೆ ಸೈತಾನನು ನಿಮ್ಮಲ್ಲಿ ಕೆಲವರನ್ನು ಸೆರೆಮನೆಯೊಳಗೆ ಹಾಕುವನು; ಹತ್ತು ದಿವಸಗಳ ತನಕ ನಿಮಗೆ ಸಂಕಟವಿ ರುವದು. ನೀನು ಸಾಯಬೇಕಾದರೂ ನಂಬಿಗಸ್ತ ನಾಗಿರು; ನಾನು ನಿನಗೆ
- Luke 4:18 ಲೂಕನು 4:18ಕರ್ತನ ಆತ್ಮವು ನನ್ನ ಮೇಲೆ ಇದೆ; ಯಾಕಂದರೆ ಬಡವರಿಗೆ ಸುವಾರ್ತೆ ಸಾರುವದಕ್ಕೆ ಆತನು ನನ್ನನ್ನು ಅಭಿಷೇಕಿಸಿದ್ದಾನೆ; ಮುರಿದ ಹೃದಯ ವುಳ್ಳವರನ್ನು ಸ್ವಸ್ಥಮಾಡುವದಕ್ಕೂ ಸೆರೆಯಲ್ಲಿದ್ದವರಿಗೆ ಬಿಡುಗಡೆಯನ್ನು ಸಾರುವದಕ್ಕೂ ಕುರುಡರಿಗೆ ದೃಷ್ಟಿ ಕೊಡುವದಕ್ಕೂ ಜಜ್ಜಲ್ಪಟ್ಟವರನ್ನು ಬಿ
- Psalm 146:7 ಕೀರ್ತನೆಗಳು 146:7ಹಿಂಸೆಗೆ ಗುರಿಯಾದವರ ನ್ಯಾಯವನ್ನು ಸ್ಥಾಪಿಸುವವನೂ ಹಸಿ ದವರಿಗೆ ಆಹಾರ ಕೊಡುವವನೂ ಆತನೇ.
- Psalm 12:5 ಕೀರ್ತನೆಗಳು 12:5ಬಡವರ ವ್ಯಥೆಗೋಸ್ಕರವೂ ಗತಿಯಿಲ್ಲದವರ ನರ ಳುವಿಕೆಗೋಸ್ಕರವೂ ಈಗ ನಾನು ಏಳುವೆನು ಎಂದು ಕರ್ತನು ಹೇಳುತ್ತಾನೆ; ಉಬ್ಬಿಕೊಂಡವನಿಂದ ನಾನು ಬಡವನನ್ನು ಕಾಪಾಡುವೆನು.
- Ephesians 3:1 ಎಫೆಸದವರಿಗೆ 3:1ಈ ಕಾರಣದಿಂದ ಅನ್ಯಜನರಾಗಿರುವ ನಿಮ್ಮ ನಿಮಿತ್ತ ಯೇಸು ಕ್ರಿಸ್ತನ ಸೆರೆಯವನಾದ ಪೌಲನೆಂಬ ನಾನು
- Acts 12:4–11 ಅಪೊಸ್ತಲರ ಕೃತ್ಯಗಳು 12:4–11ಹೀಗೆ ಪಸ್ಕದ ತರುವಾಯ ಜನರ ಮುಂದೆ ತರಬೇಕೆಂಬ ಉದ್ದೇಶ ದಿಂದ ಅವನನ್ನು ಬಂಧಿಸಿ ಸೆರೆಯಲ್ಲಿ ಹಾಕಿಸಿದನು.ಅವನನ್ನು ಕಾಯುವದಕ್ಕಾಗಿ ನಾಲ್ಕು ಚತುಷ್ಟದ ಸೈನಿಕರಿಗೆ ಒಪ್ಪಿಸಿದನು. ಪೇತ್ರನು ಸೆರೆಯಲ್ಲಿದ್ದಾಗ ಸಭೆಯವರು ಅವನಿಗಾಗಿ ದೇವರಿಗೆ ಎಡೆಬಿಡದೆ ಪ್ರಾರ್ಥಿಸುತ್ತಿದ್ದರು. ಹೆರೋದನು ಪೇತ್ರನನ್ನು ಹೊರಗೆ ತರಬೇಕೆಂದಿದ್ದ ಅದೇ ರಾತ್ರಿಯಲ್ಲಿ ಅವನು ಎರಡು ಸರಪಣಿಗಳಿಂದ ಕಟ್ಟಲ್ಪಟ್ಟು ಇಬ್ಬರು ಸೈನಿಕರ ಮಧ್ಯದಲ್ಲಿ ನಿದ್ರೆಮಾಡುತ್ತಿದ್ದನು; ಕಾವಲುಗಾರರು ಬಾಗಿಲ ಮುಂದೆ ನಿಂತು ಸೆರೆಮನೆಯನ್ನು ಕಾಯು ತ್ತಿದ್ದರು. ಆಗ ಇಗೋ, ಕರ್ತನ ದೂತನು ಪೇತ್ರನ ಬಳಿಗೆ ಬಂದಾಗ ಅವನಿದ್ದ ಸೆರೆಮನೆಯಲ್ಲಿ ಬೆಳಕು ಹೊಳೆಯಿತು. ಅವನು ಪೇತ್ರನನ್ನು ಪಕ್ಕೆ ತಟ್ಟಿ ಎಬ್ಬಿಸಿ--ತಟ್ಟನೆ ಏಳು ಅಂದನು. ಆಗಲೇ ಅವನ ಕೈಗಳಿಂದ ಸರಪಣಿಗಳು ಕಳಚಿಬಿದ್ದವು. ಆ ದೂತನು ಅವನಿಗೆ--ನಡುಕಟ್ಟಿಕೊಂಡು ನಿನ್ನ ಕೆರಗಳನ್ನು ಮೆಟ್ಟಿಕೋ ಎಂದು ಹೇಳಲು ಅವನು ಹಾಗೆಯೇ ಮಾಡಿದನು. ಆ ದೂತನು ಅವನಿಗೆ ನಿನ್ನ ಮೇಲಂಗಿ ಯನ್ನು ಹಾಕಿಕೊಂಡು ನನ್ನ ಹಿಂದೆ ಬಾ ಅಂದನು. ಅವನು ಹೊರಗೆ ಬಂದು ಆ ದೂತನ ಹಿಂದೆಯೇ ಹೋಗುತ್ತಾ ಅವನ ಮೂಲಕವಾಗಿ ನಡೆದ ಸಂಗತಿ ನಿಜವಾದದ್ದೆಂದು ತಿಳಿಯದೆ ತಾನು ನೋಡಿದ್ದು ದರ್ಶನವೆಂದು ನೆನಸಿದನು. ಅವನು ಮೊದಲನೆಯ ಎರಡನೆಯ ಕಾವಲುಗಳನ್ನು ದಾಟಿ ಪಟ್ಟಣಕ್ಕೆ ಹೋಗುವ ಕಬ್ಬಿಣದ ಬಾಗಿಲಿಗೆ ಬಂದಾಗ ಅದು ತನ್ನಷ್ಟಕ್ಕೆ ತಾನೇ ಅವರಿಗೆ ತೆರೆಯಿತು. ಅವರು ಹೊರಗೆ ಬಂದು ಒಂದು ಬೀದಿಯನ್ನು ದಾಟಿದರು; ಕೂಡಲೆ ಆ ದೂತನು ಅವನನ್ನು ಬಿಟ್ಟು ಹೊರಟುಹೋದನು. ಆಗ ಪೇತ್ರನು ಎಚ್ಚರವಾಗಿ-- ಕರ್ತನು ತನ್ನ ದೂತನನ್ನು ಕಳುಹಿಸಿ ಹೆರೋದನ ಕೈಯಿಂದಲೂ ಯೆಹೂದ್ಯ ಜನರು ನನಗೆ ಮಾಡಬೇಕೆಂದಿದ್ದ ಎಲ್ಲವುಗಳಿಂದಲೂ ನನ್ನನ್ನು ಬಿಡಿಸಿದನೆಂದು ನನಗೀಗ ನಿಶ್ಚಯವಾಗಿ ತಿಳಿದುಬಂದಿದೆ ಅಂದುಕೊಂಡನು.
- Psalm 10:17 ಕೀರ್ತನೆಗಳು 10:17ಕರ್ತನೇ, ದೀನರ ಆಶೆ ಯನ್ನು ಕೇಳಿದ್ದೀ; ನೀನು ಅವರ ಹೃದಯವನ್ನು ಸಿದ್ಧ ಪಡಿಸಿ ಅವರ ಮೊರೆಗೆ ಕಿವಿಗೊಡುತ್ತೀ.ಭೂಮಿಯ ಮನುಷ್ಯನು ಇನ್ನು ಭಯಪಡಿಸದ ಹಾಗೆ ದಿಕ್ಕಿಲ್ಲದ ವರಿಗೂ ಕುಗ್ಗಿದವರಿಗೂ ನ್ಯಾಯತೀರಿಸುವದಕ್ಕೆ ಕಿವಿಗೊಟ್ಟಿದ್ದೀ.
- Psalm 102:17 ಕೀರ್ತನೆಗಳು 102:17ದಿಕ್ಕಿಲ್ಲದವನ ಪ್ರಾರ್ಥನೆಗೆ ಕಿವಿಗೊಡುತ್ತಾನೆ; ಅವರ ಪ್ರಾರ್ಥನೆಯನ್ನು ತಿರಸ್ಕರಿ ಸುವದಿಲ್ಲ.
- Psalm 102:20 ಕೀರ್ತನೆಗಳು 102:20ಚೀಯೋನಿನಲ್ಲಿ ಕರ್ತನ ಹೆಸರೂ ಯೆರೂಸಲೇಮಿ ನಲ್ಲಿ ಆತನ ಸ್ತೋತ್ರವೂ ಸಾರಲ್ಪಡುವ ಹಾಗೆ.