Psalms · chapter 69 · verse 35
Psalm 69:35 in Kannada
ದೇವರು ಚೀಯೋನನ್ನು ರಕ್ಷಿಸಿ ಯೆಹೂದದ ಪಟ್ಟ ಣಗಳನ್ನು ಕಟ್ಟುವನು; ಹೀಗೆ ಅವರು ಅಲ್ಲಿ ವಾಸ ಮಾಡಿ ಅದನ್ನು ಸ್ವಾಧೀನಪಡಿಸಿಕೊಳ್ಳುವರು.ಅವನ ಸೇವಕರ ಸಂತತಿಯು ಸಹ ಅದನ್ನು ಬಾಧ್ಯವಾಗಿ ಹೊಂದುವದು; ಆತನ ಹೆಸರನ್ನು ಪ್ರೀತಿಮಾಡುವವರು ಅದರಲ್ಲಿ ವಾಸಮಾಡುವರು.
Devaru cheeyonannu rakshisi yehoodada patta nagalannu kattuvanu; heege avaru alli vaasa maadi adannu svaadheenapadisikolluvaru.avana sevakara santatiyu saha adannu baadhyavaagi honduvadu; aatana hesarannu preetimaaduvavaru adaralli vaasamaaduvaru.
Psalm 69:35 in English
- King James Version (KJV)
- For God will save Zion, and will build the cities of Judah: that they may dwell there, and have it in possession.
- World English Bible (WEB)
- For God will save Zion, and build the cities of Judah. They shall settle there, and own it.
- American Standard Version (ASV)
- For God will save Zion, and build the cities of Judah; And they shall abide there, and have it in possession.
- Bible in Basic English (BBE)
- For God will be the saviour of Zion, and the builder of the towns of Judah; so that it may be their resting-place and heritage.
- Darby Translation (DBY)
- For God will save Zion, and will build the cities of Judah; and they shall dwell there, and possess it:
- Webster's Bible (WBS)
- For God will save Zion, and will build the cities of Judah: that they may dwell there, and have it in possession.
- Young's Literal Translation (YLT)
- For God doth save Zion, And doth build the cities of Judah, And they have dwelt there, and possess it.
Read in context
- 33ಕರ್ತನು ಬಡವರನ್ನು ಲಾಲಿಸಿ ತನ್ನ ಸೆರೆಯವರನ್ನು ತಿರಸ್ಕರಿಸುವದಿಲ್ಲ.
- 34ಆಕಾಶವೂ ಭೂಮಿಯೂ ಸಮುದ್ರಗಳೂ ಅವುಗಳಲ್ಲಿ ಸಂಚರಿಸುವುದೆಲ್ಲವೂ ಆತನನ್ನು ಸ್ತುತಿಸಲಿ.
- 35ದೇವರು ಚೀಯೋನನ್ನು ರಕ್ಷಿಸಿ ಯೆಹೂದದ ಪಟ್ಟ ಣಗಳನ್ನು ಕಟ್ಟುವನು; ಹೀಗೆ ಅವರು ಅಲ್ಲಿ ವಾಸ ಮಾಡಿ ಅದನ್ನು ಸ್ವಾಧೀನಪಡಿಸಿಕೊಳ್ಳುವರು.ಅವನ ಸೇವಕರ ಸಂತತಿಯು ಸಹ ಅದನ್ನು ಬಾಧ್ಯವಾಗಿ ಹೊಂದುವದು; ಆತನ ಹೆಸರನ್ನು ಪ್ರೀತಿಮಾಡುವವರು ಅದರಲ್ಲಿ ವಾಸಮಾಡುವರು.
- 36ಅವನ ಸೇವಕರ ಸಂತತಿಯು ಸಹ ಅದನ್ನು ಬಾಧ್ಯವಾಗಿ ಹೊಂದುವದು; ಆತನ ಹೆಸರನ್ನು ಪ್ರೀತಿಮಾಡುವವರು ಅದರಲ್ಲಿ ವಾಸಮಾಡುವರು.
Cross references
- Isaiah 44:26 ಯೆಶಾಯ 44:26ತನ್ನ ಸೇವಕನ ಮಾತು ಗಳನ್ನು ಸ್ಥಾಪಿಸುವವನೂ ತನ್ನ ದೂತರ ಆಲೋ ಚನೆಯನ್ನು ಪೂರೈಸುವವನೂ ಯೆರೂಸಲೇಮಿಗೆ--ನೀನು ನಿವಾಸವಾಗುವಿ; ಯೆಹೂದಪಟ್ಟಣಗಳಿಗೆ--ಕಟ್ಟಲ್ಪಡುವಿ; ಅದರ ಹಾಳು ಸ್ಥಳಗಳನ್ನು ನೆಟ್ಟಗೆ ಮಾಡುವೆನು ಎಂದು ಅನ್ನುವವನೂ
- Psalm 51:18 ಕೀರ್ತನೆಗಳು 51:18ನಿನ್ನ ದಿವ್ಯ ಚಿತ್ತದ ಪ್ರಕಾರ ಚೀಯೋನಿಗೆ ಒಳ್ಳೇದು ಮಾಡು; ಯೆರೂಸಲೇಮಿನ ಗೋಡೆಗಳನ್ನು ಕಟ್ಟು.ಆಗ ನೀತಿಯ ಯಜ್ಞಗಳಲ್ಲಿಯೂ ದಹನ ಬಲಿಯಲ್ಲಿಯೂ ಪೂರ್ಣವಾದ ದಹನಬಲಿಯ ಲ್ಲಿಯೂ ನೀನು ಸಂತೋಷಪಡುವಿ; ಆಗ ನಿನ್ನ ಬಲಿ ಪೀಠದ ಮೇಲೆ ಅವರು ಹೋರಿಗಳನ್ನು ಅರ್ಪಿಸುವರು.
- Isaiah 46:13 ಯೆಶಾಯ 46:13ನನ್ನ ನೀತಿಯನ್ನು ಹತ್ತಿರಕ್ಕೆ ಬರಮಾಡುವೆನು, ಅದು ಇನ್ನು ದೂರವಾಗಿರದು. ನನ್ನ ರಕ್ಷಣೆಯು ಇನ್ನು ತಡವಾ ಗದು; ನನ್ನ ಮಹಿಮೆಯಾಗಿರುವ ಇಸ್ರಾಯೇಲಿ ಗೋಸ್ಕರ ಚೀಯೋನಿನಲ್ಲಿ ರಕ್ಷಣೆಯನ್ನು ಉಂಟು ಮಾಡುವೆನು.
- Psalm 102:16 ಕೀರ್ತನೆಗಳು 102:16ಕರ್ತನು ಚೀಯೋನನ್ನು ಕಟ್ಟುವನು; ಆತನು ತನ್ನ ಮಹಿಮೆಯಲ್ಲಿ ಕಾಣಿಸಿಕೊಳ್ಳುವನು.
- Obadiah 1:17 ಓಬದ್ಯ 1:17ಆದರೆ ಚೀಯೋನ್ ಪರ್ವತದಲ್ಲಿ ಬಿಡುಗಡೆ ಇರುವದು, ಅದು ಪರಿಶುದ್ಧ ವಾಗಿರುವದು; ಯಾಕೋಬಿನ ಮನೆತನದವರು ತಮ್ಮ ಸ್ವಾಸ್ತ್ಯಗಳನ್ನು ಸ್ವತಂತ್ರಿಸಿಕೊಳ್ಳುವರು.
- Psalm 48:11–13 ಕೀರ್ತನೆಗಳು 48:11–13ನಿನ್ನ ನ್ಯಾಯತೀರ್ವಿಕೆಗಳ ನಿಮಿತ್ತ ಚೀಯೋನ್ ಪರ್ವತವು ಸಂತೋಷಪಡಲಿ; ಯೆಹೂದದ ಕುಮಾರ್ತೆಯರು ಉಲ್ಲಾಸಪಡಲಿ. ಚೀಯೋನನ್ನು ಸುತ್ತಿ ಅವಳ ಸುತ್ತಲು ತಿರುಗಿ ಅದರ ಬುರುಜುಗಳನ್ನು ಲೆಕ್ಕಿಸಿರಿ. ಮುಂದಿನ ತಲಾಂತರಕ್ಕೆ ತಿಳಿಸುವದಕ್ಕೋಸ್ಕರ ಅದರ ಬುರುಜುಗಳ ಮೇಲೆ ಮನಸ್ಸಿಟ್ಟು ಆಕೆಯ ಅರಮನೆಗಳನ್ನು ಲಕ್ಷಿಸಿರಿ.ಈ ದೇವರು ಯುಗಯುಗಾಂತರಗಳಿಗೂ ನಮ್ಮ ದೇವ ರಾಗಿದ್ದಾನೆ. ಆತನು ಮರಣದ ವರೆಗೂ ನಮ್ಮನ್ನು ನಡಿಸುವನು.
- Revelation 14:1 ಪ್ರಕಟನೆ 14:1ಆಗ ಇಗೋ, ಕುರಿಮರಿಯಾದಾತನು ಚೀಯೋನ್ ಪರ್ವತದ ಮೇಲೆ ನಿಂತಿರು ವದನ್ನು ನಾನು ಕಂಡೆನು. ಆತನ ಜೊತೆಯಲ್ಲಿ ಒಂದು ಲಕ್ಷ ನಾಲ್ವತ್ತುನಾಲ್ಕು ಸಾವಿರ ಮಂದಿ ಇದ್ದರು; ಅವರ ಹಣೆಗಳ ಮೇಲೆ ಆತನ ತಂದೆಯ ಹೆಸರು ಬರೆಯ ಲ್ಪಟ್ಟಿತು.
- Ezekiel 36:35–36 ಯೆಹೆಜ್ಕೇಲನು 36:35–36ಹಾಳಾಗಿದ್ದ ಈ ದೇಶವು ಏದೆನಿನ ಉದ್ಯಾನವನದ ಹಾಗಾಯಿತೆಂದು ಮತ್ತು ಹಾಳಾಗಿ ಬಿದ್ದುಹೋಗಿ ಬೀಡಾಗಿ ನಶಿಸಿ ಹೋಗಿರುವ ಪಟ್ಟಣಗಳು ನಾಡಾಗಿ ಕೋಟೆಗಳಿಂದಲೂ ನಿವಾಸಿಗಳಿಂದಲೂ ತುಂಬಿವೆ ಎಂದು ಹೇಳುವರು. ಆಮೇಲೆ ನಿಮ್ಮ ಸುತ್ತಲೂ ಉಳಿದಿರುವ ಅನ್ಯಜನಾಂಗಗಳು ನಶಿಸಿ ಹೋಗಿರುವ ಸ್ಥಳಗಳನ್ನು ಮತ್ತು ಹಾಳಾಗಿರುವ ಸ್ಥಳದಲ್ಲಿ ಗಿಡ ನೆಟ್ಟ ವನು ಕರ್ತನಾದ ನಾನೇ ಎಂದು ತಿಳಿಯುವರು; ಕರ್ತನಾದ ನಾನೇ ಇದನ್ನು ಹೇಳಿದ್ದೇನೆ, ನಾನೇ ಇದನ್ನು ಮಾಡುತ್ತೇನೆ.
- Psalm 147:12–13 ಕೀರ್ತನೆಗಳು 147:12–13ಓ ಯೆರೂ ಸಲೇಮೇ, ಕರ್ತನನ್ನು ಸ್ತುತಿಸು; ಓ ಚೀಯೋನೇ, ನಿನ್ನ ದೇವರನ್ನು ಸ್ತುತಿಸು. ನಿನ್ನ ಬಾಗಲುಗಳ ಅಗುಳಿ ಗಳನ್ನು ಬಲಮಾಡಿ ಆತನು ನಿನ್ನ ಮಕ್ಕಳನ್ನು ನಿನ್ನ ಮಧ್ಯದಲ್ಲಿ ಆಶೀರ್ವದಿಸುತ್ತಾನೆ.
- Isaiah 14:32 ಯೆಶಾಯ 14:32ಆಗ ಜನಾಂಗಗಳ ದೂತರಿಗೆ ಯಾವ ಉತ್ತರವನ್ನು ಕೊಡ ಬೇಕೆಂದರೆ? ಕರ್ತನು ಚೀಯೋನನ್ನು ಸ್ಥಾಪಿಸಿದ್ದಾನೆ, ಆತನ ಜನರಲ್ಲಿನ ಬಡವರು ಅದನ್ನು ಆಶ್ರಯಿಸಿ ಕೊಳ್ಳುವರು ಎಂಬದೇ.
- Psalm 102:13 ಕೀರ್ತನೆಗಳು 102:13ನೀನು ಎದ್ದು, ಚೀಯೋನನ್ನು ಕನಿ ಕರಿಸುವಿ; ಯಾಕಂದರೆ ಅದನ್ನು ಕರುಣಿಸುವದಕ್ಕೆ ಕಾಲವಾಯಿತು; ಹೌದು ನಿರ್ಣಯಿಸಿದ ಸಮಯವು ಬಂದಿದೆ.
- Jeremiah 33:10–11 ಯೆರೆಮೀಯ 33:10–11ಕರ್ತನು ಹೇಳುವದೇನಂದರೆ-- ಮನುಷ್ಯರೂ ಪಶುಗಳೂ ಇಲ್ಲದೆ ಹಾಳಾಯಿತೆಂದು ನೀವು ಹೇಳುವ ಈ ಸ್ಥಳದಲ್ಲಿಯೂ ಮನುಷ್ಯರೂ ನಿವಾಸಿಗಳೂ ಪಶುಗಳೂ ಇಲ್ಲದೆ ನಾಶವಾದ ಯೆಹೂ ದದ ಪಟ್ಟಣಗಳಲ್ಲಿಯೂ ಯೆರೂಸಲೇಮಿನ ಬೀದಿ ಗಳಲ್ಲಿಯೂ ಇನ್ನು ಮೇಲೆ ಆನಂದದ ಸ್ವರವೂ ಸಂತೋಷದ ಸ್ವರವೂ ಮದಲಿಂಗನ ಸ್ವರವೂ ಮದಲ ಗಿತ್ತಿಯ ಸ್ವರವೂ--ಸೈನ್ಯಗಳ ಕರ್ತನನ್ನು ಕೊಂಡಾಡಿರಿ; ಕರ್ತನು ಒಳ್ಳೆಯವನೇ, ಆತನ ಕೃಪೆ ನಿರಂತರವೇ ಎಂದು ಹೇಳಿ, ಸ್ತೋತ್ರದ ಬಲಿಯನ್ನು ಕರ್ತನ ಆಲ ಯಕ್ಕೆ ತರುವವರ ಸ್ವರವೂ ಕೇಳಲ್ಪಡುವದು; ನಾನು ಮುಂಚಿನ ಹಾಗೆ ದೇಶದ ಸೆರೆಯನ್ನು ತಿರುಗಿಸುತ್ತೇ ನೆಂದು ಕರ್ತನು ಹೇಳುತ್ತಾನೆ.