Psalms · chapter 69 · verse 8
Psalm 69:8 in Kannada
ನನ್ನ ಸಹೋದರರಿಗೆ ಅನ್ಯನಾಗಿದ್ದೇನೆ; ನನ್ನ ಒಡಹುಟ್ಟಿದವರಿಗೆ ಪರಕೀಯನಾಗಿದ್ದೇನೆ.
Nanna sahodararige anyanaagiddene; nanna odahuttidavarige parakeeyanaagiddene.
Psalm 69:8 in English
- King James Version (KJV)
- I am become a stranger unto my brethren, and an alien unto my mother’s children.
- World English Bible (WEB)
- I have become a stranger to my brothers, an alien to my mother’s children.
- American Standard Version (ASV)
- I am become a stranger unto my brethren, And an alien unto my mother’s children.
- Bible in Basic English (BBE)
- I have become strange to my brothers, and like a man from a far country to my mother's children.
- Darby Translation (DBY)
- I am become a stranger unto my brethren, and an alien unto my mother's sons;
- Webster's Bible (WBS)
- I am become a stranger to my brethren, and an alien to my mother's children.
- Young's Literal Translation (YLT)
- A stranger I have been to my brother, And a foreigner to sons of my mother.
Read in context
- 6ಸೈನ್ಯಗಳ ಕರ್ತನಾದ ದೇವರೇ, ನಿನ್ನನ್ನು ನಿರೀಕ್ಷಿಸು ವವರು ನನ್ನ ದೆಸೆಯಿಂದ ನಾಚಿಕೆಪಡದಿರಲಿ; ಓ ಇಸ್ರಾಯೇಲಿನ ದೇವರೇ, ನಿನ್ನನ್ನು ಹುಡುಕುವವರು ನನ್ನಿಂದ ಅವಮಾನಪಡದಿರಲಿ.
- 7ನಿನ್ನ ನಿಮಿತ್ತ ನಿಂದೆ ಯನ್ನು ತಾಳಿದ್ದೇನೆ; ಅವಮಾನವು ನನ್ನ ಮುಖವನ್ನು ಮುಚ್ಚಿಯದೆ.
- 8ನನ್ನ ಸಹೋದರರಿಗೆ ಅನ್ಯನಾಗಿದ್ದೇನೆ; ನನ್ನ ಒಡಹುಟ್ಟಿದವರಿಗೆ ಪರಕೀಯನಾಗಿದ್ದೇನೆ.
- 9ನಿನ್ನ ಆಲಯದ ಆಸಕ್ತಿಯು ನನ್ನನ್ನು ತಿಂದುಬಿಟ್ಟಿದೆ; ನಿನ್ನನ್ನು ನಿಂದಿಸುವವರ ನಿಂದೆಗಳು ನನ್ನ ಮೇಲೆ ಬಿದ್ದಿವೆ.
- 10ನನ್ನ ಪ್ರಾಣವು ಉಪವಾಸದಲ್ಲಿ ಶಿಕ್ಷಿಸಲ್ಪಟ್ಟು ಅತ್ತಾಗ ಅದು ನನಗೆ ನಿಂದೆ ಆಯಿತು.
Cross references
- Psalm 31:11 ಕೀರ್ತನೆಗಳು 31:11ನನ್ನ ವೈರಿ ಗಳೆಲ್ಲರಿಗೆ, ವಿಶೇಷವಾಗಿ ನನ್ನ ನೆರೆಯವರಿಗೆ, ನಾನು ನಿಂದೆಯೂ ಪರಿಚಿತರಿಗೆ ಹೆದರಿಕೆಯೂ ಆಗಿದ್ದೇನೆ; ಹೊರಗೆ ನನ್ನನ್ನು ನೋಡಿದವರು ನನ್ನನ್ನು ಬಿಟ್ಟು ಓಡಿಹೋದರು.
- John 7:5 ಯೋಹಾನನು 7:5ಯಾಕಂದರೆ ಆತನ ಸಹೋದರರು ಸಹ ಆತನ ಮೇಲೆ ನಂಬಿಕೆ ಇಟ್ಟಿರಲಿಲ್ಲ.
- John 1:11 ಯೋಹಾನನು 1:11ಆತನು ತನ್ನ ಸ್ವಂತದವರ ಬಳಿಗೆ ಬಂದನು. ಆತನ ಸ್ವಂತದವರು ಆತನನ್ನು ಅಂಗೀಕರಿಸಲಿಲ್ಲ.
- Micah 7:5–6 ಮೀಕ 7:5–6ಸ್ನೇಹಿತನಲ್ಲಿ ನಂಬಿಕೆ ಇಡಬೇಡಿರಿ; ಆಪ್ತಸ್ನೇಹಿತನಲ್ಲಿ ಭರವಸವಿಡಬೇಡಿರಿ; ನಿನ್ನ ಎದೆಯ ಮೇಲೆ ಮಲಗುವವಳಿಗೆ ನಿನ್ನ ಬಾಯಿಯ ಬಾಗಲುಗಳನ್ನು ಕಾಯಿ. ಮಗನು ತನ್ನ ತಂದೆಯನ್ನು ಅವಮಾನ ಮಾಡುತ್ತಾನೆ; ಮಗಳು ತನ್ನ ತಾಯಿಗೂ ಸೊಸೆಯು ತನ್ನ ಅತ್ತೆಗೂ ವಿರೋಧವಾಗಿ ಏಳುತ್ತಾರೆ; ಒಬ್ಬ ಮನುಷ್ಯನಿಗೆ ಸ್ವಂತ ಮನೆಯವರೇ ಶತ್ರುಗಳು.
- Psalm 38:11 ಕೀರ್ತನೆಗಳು 38:11ನನ್ನ ಪ್ರಿಯರೂ ಸ್ನೇಹಿತರೂ ನನ್ನ ಹುಣ್ಣನ್ನು ನೋಡಿ ಓರೆಯಾಗಿ ನಿಲ್ಲುತ್ತಾರೆ; ನನ್ನ ನೆರೆಯವರು ದೂರದಲ್ಲಿ ನಿಂತಿದ್ದಾರೆ.
- Matthew 10:35–36 ಮತ್ತಾಯನು 10:35–36ಹೇಗಂದರೆ ಮಗನಿಗೂ ಅವನ ತಂದೆಗೂ ಮಗಳಿಗೂ ಆಕೆಯ ತಾಯಿಗೂ ಸೊಸೆಗೂ ಆಕೆಯ ಅತ್ತೆಗೂ ವಿರೋಧವನ್ನು ಹುಟ್ಟಿಸುವದಕ್ಕೆ ನಾನು ಬಂದಿದ್ದೇನೆ. ಒಬ್ಬ ಮನುಷ್ಯನಿಗೆ ಅವನ ಮನೆ ಯವರೇ ವಿರೋಧಿಗಳಾಗಿರುವರು.
- Matthew 26:70–74 ಮತ್ತಾಯನು 26:70–74ಆದರೆ ಅವನು ಎಲ್ಲರ ಮುಂದೆ-- ನೀನು ಏನು ಹೇಳುತ್ತಿಯೋ ನಾನು ಅರಿಯೆನು ಎಂದು ಅಲ್ಲಗಳೆದನು. ಅವನು ದ್ವಾರಾಂಗಳ ದೊಳಗೆ ಹೋದಾಗ ಮತ್ತೊಬ್ಬ ಹುಡುಗಿಯು ಅವನನ್ನು ನೋಡಿ ಅಲ್ಲಿದ್ದವರಿಗೆ--ಇವನು ಸಹ ನಜರೇತಿನ ಯೇಸುವಿನೊಂದಿಗೆ ಇದ್ದವನು ಅಂದಳು. ಆಗ ಅವನು ಪ್ರಮಾಣಮಾಡಿ--ನಾನು ಆ ಮನುಷ್ಯನನ್ನು ಅರಿಯೆನು ಎಂದು ತಿರಿಗಿ ಅಲ್ಲಗಳೆ ದನು. ಮತ್ತೆ ಸ್ವಲ್ಪ ಸಮಯವಾದ ಮೇಲೆ ಅಲ್ಲಿ ನಿಂತಿದ್ದವರು ಪೇತ್ರನಿಗೆ--ನಿಶ್ಚಯವಾಗಿ ನೀನು ಸಹ ಅವರಲ್ಲಿ ಒಬ್ಬನು; ಯಾಕಂದರೆ ನಿನ್ನ ಭಾಷೆಯು ನಿನ್ನನ್ನು ತೋರಿಸಿಕೊಡುತ್ತದೆ ಅಂದರು. ಅದಕ್ಕೆ ಅವನು--ಆ ಮನುಷ್ಯನನ್ನು ನಾನು ಅರಿಯೆನು ಎಂದು ಶಪಿಸಿಕೊಳ್ಳುವದಕ್ಕೂ ಆಣೆಯಿಟ್ಟುಕೊಳ್ಳುವದಕ್ಕೂ ಪ್ರಾರಂಭಿಸಿದನು. ಕೂಡಲೆ ಹುಂಜವು ಕೂಗಿತು.ಆಗ ಪೇತ್ರನು--ಹುಂಜವು ಕೂಗುವದಕ್ಕಿಂತ ಮುಂಚಿತವಾಗಿ ನೀನು ಮೂರು ಸಾರಿ ನನ್ನನ್ನು ಅಲ್ಲಗಳೆ ಯುವಿ ಎಂದು ಯೇಸು ತನಗೆ ಹೇಳಿದ ಮಾತನ್ನು ಜ್ಞಾಪಕಮಾಡಿಕೊಂಡು ಹೊರಗೆ ಹೋಗಿ ಬಹು ವ್ಯಥೆಪಟ್ಟು ಅತ್ತನು.
- Matthew 10:21–22 ಮತ್ತಾಯನು 10:21–22ಸಹೋದರನು ತನ್ನ ಸಹೋದರನನ್ನೂ ತಂದೆಯು ಮಗನನ್ನೂ ಮರಣಕ್ಕೆ ಒಪ್ಪಿಸುವರು; ಮತ್ತು ಮಕ್ಕಳು ತಂದೆತಾಯಿಗಳಿಗೆ ವಿರೋಧವಾಗಿ ಎದ್ದು ಅವರನ್ನು ಕೊಲ್ಲಿಸುವರು. ನನ್ನ ಹೆಸರಿನ ನಿಮಿತ್ತವಾಗಿ ಎಲ್ಲರೂ ನಿಮ್ಮನ್ನು ಹಗೆ ಮಾಡುವರು; ಆದರೆ ಕಡೆಯ ವರೆಗೆ ತಾಳುವವನು ರಕ್ಷಣೆ ಹೊಂದುವನು.
- Job 19:13–19 ಯೋಬನು 19:13–19ನನ್ನ ಸಹೋದರರನ್ನು ನನಗೆ ದೂರ ಮಾಡು ತ್ತಾನೆ; ನನ್ನ ಪರಿಚಯದ ಸ್ನೇಹಿತರು ನನಗೆ ಅನ್ಯರೇ ಆದರು. ನನ್ನ ನೆರೆಯವರು ತಡೆಯುತ್ತಾರೆ; ನನ್ನ ಪರಿಚಯದ ಸ್ನೇಹಿತರು ನನ್ನನ್ನು ಮರೆತ್ತಿದ್ದಾರೆ. ನನ್ನ ಮನೆಯಲ್ಲಿ ತಂಗುವವರೂ ನನ್ನ ದಾಸಿಗಳೂ ನನ್ನನ್ನೂ ಪರನೆಂದು ಎಣಿಸುತ್ತಾರೆ; ಅವರ ದೃಷ್ಟಿಯಲ್ಲಿ ನಾನು ಪರದೇಶದವನ ಹಾಗೆ ಇದ್ದೇನೆ. ನನ್ನ ಸೇವಕನನ್ನು ಕರೆದರೆ, ಅವನು ನನಗೆ ಉತ್ತರ ಕೊಡುವದಿಲ್ಲ; ನನ್ನ ಬಾಯಿಯಿಂದ ಅವನನ್ನು ಬೇಡಿಕೊಳ್ಳಬೇಕಾ ಯಿತು. ನನ್ನ ಶ್ವಾಸವು ನನ್ನ ಹೆಂಡತಿಗೆ ತಿಳಿಯದ್ದಾಗಿದೆ; ನನ್ನ ಹೊಟ್ಟೆಯ ಮಕ್ಕಳನ್ನು ಬೇಡುತ್ತೇನೆ. ಬಾಲಕರು ಸಹ ನನ್ನನ್ನು ತಿರಸ್ಕರಿಸುತ್ತಾರೆ; ನಾನು ಎದ್ದರೆ ನನಗೆ ಎದುರು ಮಾತಾಡುತ್ತಾರೆ. ನನ್ನ ಆಪ್ತ ಸ್ನೇಹಿತರೆಲ್ಲಾ ನನ್ನನ್ನು ಅಸಹ್ಯಿಸುತ್ತಾರೆ; ನಾನು ಪ್ರೀತಿಮಾಡಿದವರೇ ನನಗೆ ವಿರೋಧವಾಗಿ ತಿರುಗಿ ದ್ದಾರೆ.
- Isaiah 53:3 ಯೆಶಾಯ 53:3ಆತನು ಮನುಷ್ಯರಿಂದ ತಳ್ಳಲ್ಪಟ್ಟವನೂ ತಿರಸ್ಕರಿಸ ಲ್ಪಟ್ಟವನೂ ದುಃಖಿತ ಮನುಷ್ಯನೂ ಕಷ್ಟವನ್ನು ಅರಿತ ವನೂ; ನಾವು ನಮ್ಮ ಮುಖಗಳನ್ನು ಆತನಿಂದ ಮರೆ ಮಾಡಿಕೊಳ್ಳುವ ಹಾಗೆ ಧಿಕ್ಕರಿಸಲ್ಪಟ್ಟವನೂ ಆಗಿದ್ದನು. ನಾವು ಆತನನ್ನು ಲಕ್ಷಕ್ಕೆ ತರಲಿಲ್ಲ.
- 1 Samuel 17:28 1 ಸಮುವೇಲನು 17:28ಆದರೆ ಅವನು ಆ ಮನುಷ್ಯರ ಸಂಗಡ ಮಾತನಾಡುತ್ತಿರು ವದನ್ನು ಅವನ ಹಿರಿಯ ಸಹೋದರನಾದ ಎಲೀಯಾ ಬನು ಕೇಳಿ ಅವನ ಮೇಲೆ ಕೋಪಗೊಂಡು--ನೀನು ಇಲ್ಲಿಗೆ ಬಂದದ್ದೇನು? ಅಡವಿಯಲ್ಲಿರುವ ಆ ಸ್ವಲ್ಪ ಕುರಿಗಳನ್ನು ಯಾರ ವಶಕ್ಕೆ ಒಪ್ಪಿಸಿ ಬಂದೆ? ನಿನ್ನ ಗರ್ವವನ್ನೂ ನಿನ್ನ ಹೃದಯದ ಅಹಂಕಾರವನ್ನೂ ನಾನು ಬಲ್ಲೆನು; ನೀನು ಯುದ್ಧವನ್ನು ನೋಡಲು ಇಳಿದು ಬಂದಿದ್ದೀ ಅಂದನು.
- Matthew 26:48–50 ಮತ್ತಾಯನು 26:48–50ಆತನನ್ನು ಹಿಡು ಕೊಡುವದಕ್ಕಿದ್ದವನು ಅವರಿಗೆ--ನಾನು ಯಾವಾತನಿಗೆ ಮುದ್ದಿಡುತ್ತೇನೋ ಅವನೇ ಆತನು. ಆತನನ್ನು ಗಟ್ಟಿ ಯಾಗಿ ಹಿಡಿಯಿರಿ ಎಂದು ಗುರುತನ್ನು ಹೇಳಿದ್ದನು. ಕೂಡಲೆ ಅವನು ಯೇಸುವಿನ ಬಳಿಗೆ ಬಂದು ಬೋಧಕನೇ, ವಂದನೆ ಎಂದು ಹೇಳಿ ಆತನಿಗೆ ಮುದ್ದಿಟ್ಟನು. ಅದಕ್ಕೆ ಯೇಸು ಅವನಿಗೆ--ಸ್ನೇಹಿತನೇ, ನೀನು ಯಾಕೆ ಬಂದಿರುತ್ತೀ ಎಂದು ಕೇಳಿದನು; ಆಗ ಅವರು ಬಂದು ಯೇಸುವಿನ ಮೇಲೆ ಕೈಹಾಕಿ ಆತನನ್ನು ಹಿಡಿದರು.