Psalms · chapter 7 · verse 3
Psalm 7:3 in Kannada
ನನ್ನ ದೇವರಾದ ಓ ಕರ್ತನೇ, ನಾನು ಇದನ್ನು ಮಾಡಿದರೆ, ಅಂದರೆ ನನ್ನ ಕೈಗಳಲ್ಲಿ ಅಪರಾ ಧವಿದ್ದರೆ,
Nanna devaraada o kartane, naanu idannu maadidare, andare nanna kaigalalli aparaa dhaviddare,
Psalm 7:3 in English
- King James Version (KJV)
- O LORD my God, if I have done this; if there be iniquity in my hands;
- World English Bible (WEB)
- LORD, my God, if I have done this, if there is iniquity in my hands,
- American Standard Version (ASV)
- O Jehovah my God, if I have done this; If there be iniquity in my hands;
- Bible in Basic English (BBE)
- O Lord my God, if I have done this; if my hands have done any wrong;
- Darby Translation (DBY)
- Jehovah my God, if I have done this, if there be iniquity in my hands;
- Webster's Bible (WBS)
- O LORD my God, if I have done this; if there is iniquity in my hands;
- Young's Literal Translation (YLT)
- O Jehovah, my God, if I have done this, If there is iniquity in my hands,
Read in context
- 1ನನ್ನ ದೇವರಾದ ಓ ಕರ್ತನೇ, ನಿನ್ನಲ್ಲಿ ಭರವಸವಿಟ್ಟಿದ್ದೇನೆ. ನನ್ನನ್ನು ಹಿಂಸಿಸುವ ವರಿಂದ ತಪ್ಪಿಸಿ ಕಾಪಾಡು;
- 2ಇಲ್ಲವಾದರೆ ಅವನು ನನ್ನ ಪ್ರಾಣವನ್ನು ಸಿಂಹದಂತೆ ಹರಿದು ತುಂಡು ತುಂಡು ಮಾಡುವನು.
- 3ನನ್ನ ದೇವರಾದ ಓ ಕರ್ತನೇ, ನಾನು ಇದನ್ನು ಮಾಡಿದರೆ, ಅಂದರೆ ನನ್ನ ಕೈಗಳಲ್ಲಿ ಅಪರಾ ಧವಿದ್ದರೆ,
- 4ಹೌದು, ನನ್ನೊಂದಿಗೆ ಸಮಾಧಾನದಿಂದ ಇದ್ದವನಿಗೆ ನಾನು ಕೇಡು ಮಾಡಿದ್ದರೆ, ಯಾವ ಕಾರಣವಿಲ್ಲದೆ ನನಗೆ ವೈರಿಯಾಗಿರುವವನನ್ನು ನಾನು ಶತ್ರುವಿಗೆ ತಪ್ಪಿಸಿಬಿಟ್ಟೆನಲ್ಲಾ,
- 5ವೈರಿಯು ನನ್ನ ಪ್ರಾಣ ವನ್ನು ಹಿಡಿದು ಹಿಂಸಿಸಿ ನನ್ನ ಜೀವವನ್ನು ಭೂಮಿಗೆ ತುಳಿದು ನನ್ನ ಗೌರವವನ್ನು ಧೂಳಿನೊಳಗೆ ಹಾಕಿ ಬಿಡಲಿ--ಸೆಲಾ.
Cross references
- 1 Samuel 24:11 1 ಸಮುವೇಲನು 24:11ಇದಲ್ಲದೆ ನನ್ನ ತಂದೆಯೇ, ನೋಡು; ಹೌದು, ನನ್ನ ಕೈಯಲ್ಲಿರುವ ನಿನ್ನ ನಿಲುವಂಗಿಯ ಅಂಚನ್ನು ನೋಡು. ನಾನು ನಿನ್ನನ್ನು ಕೊಂದುಹಾಕದೆ ನಿನ್ನ ನಿಲುವಂಗಿಯ ಅಂಚನ್ನು ಕತ್ತರಿಸಿಕೊಂಡದ್ದರಿಂದ ನನ್ನಲ್ಲಿ ಕೆಟ್ಟತನವು ದ್ರೋಹವು ಇಲ್ಲವೆಂದು ನಾನು ನಿನಗೆ ವಿರೋಧವಾಗಿ ಪಾಪಮಾಡ ಲಿಲ್ಲವೆಂದೂ ತಿಳಿದುಕೊಂಡು ನೋಡು. ಹೀಗಿದ್ದರೂ ನೀನು ನನ್ನ ಪ್ರಾಣವನ್ನು ತೆಗೆಯಲು ಬೇಟೆಯಾಡುತ್ತೀ.
- Psalm 59:3 ಕೀರ್ತನೆಗಳು 59:3ಓ ಕರ್ತನೇ, ನನ್ನ ಅಪರಾಧಕ್ಕಾಗಿ ಇಲ್ಲವೆ ನನ್ನ ಪಾಪಕ್ಕಾಗಿ ಅಲ್ಲ; ಆದರೂ ಇಗೋ, ಅವರು ನನ್ನ ಪ್ರಾಣಕ್ಕೆ ಹೊಂಚುಹಾಕುತ್ತಾರೆ; ಪರಾಕ್ರಮಶಾಲಿಗಳು ನನಗೆ ವಿರೋಧವಾಗಿ ಕೂಡಿ ಕೊಳ್ಳುತ್ತಾರೆ.
- 1 Samuel 26:18–19 1 ಸಮುವೇಲನು 26:18–19ನನ್ನ ಒಡೆಯನು ತನ್ನ ಸೇವಕ ನನ್ನು ಹೀಗೆ ಹಿಂದಟ್ಟುವದೇನು? ನಾನೇನು ಮಾಡಿ ದೆನು? ನನ್ನ ಕೈಯಲ್ಲಿ ಏನು ಕೆಟ್ಟತನ ಅದೆ? ಈಗ ಅರಸನಾದ ನನ್ನ ಒಡೆಯನು ದಯಮಾಡಿ ತನ್ನ ಸೇವಕನ ಮಾತುಗಳನ್ನು ಕೇಳಲಿ. ಕರ್ತನು ನಿನ್ನನ್ನು ನನಗೆ ವಿರೋಧವಾಗಿ ಪ್ರೇರೇಪಿಸಿದರೆ ಕಾಣಿಕೆಯನ್ನು ಅಂಗೀಕರಿಸಲಿ; ಆದರೆ ಮನುಷ್ಯರ ಮಕ್ಕಳು ಇದನ್ನು ಮಾಡಿದರೆ ಅವರು ಕರ್ತನ ಮುಂದೆ ಶಪಿಸಲ್ಪಡಲಿ. ಯಾಕಂದರೆ ನೀನು ಹೋಗಿ ಅನ್ಯದೇವರುಗಳನ್ನು ಸೇವಿಸು ಎಂದು ಹೇಳಿ ಅವರು ಈ ಹೊತ್ತು ನನ್ನನ್ನು ಕರ್ತನ ಬಾಧ್ಯತೆಯಲ್ಲಿ ಇರದ ಹಾಗೆ ಓಡಿಸಿಬಿಟ್ಟರು.
- Job 11:14 ಯೋಬನು 11:14ನಿನ್ನ ಕೈಯಲ್ಲಿರುವ ಅಪರಾಧವನ್ನು ದೂರಮಾಡಿ ದುಷ್ಟತನವನ್ನು ನಿನ್ನ ಗುಡಾರಗಳಲ್ಲಿ ವಾಸಮಾಡಗೊಡಿಸದಿದ್ದರೆ
- 2 Samuel 16:7–8 2 ಸಮುವೇಲನು 16:7–8ಶಿಮ್ಮಿ ಅವನನ್ನು ದೂಷಿಸುತ್ತಾ--ರಕ್ತದ ಮನುಷ್ಯನೇ, ಬೆಲಿಯಾಳನ ಮನುಷ್ಯನೇ, ಹೊರಟು ಬಾ, ಹೊರಟು ಬಾ. ಕರ್ತನು ಸೌಲನ ಮನೆಯವರ ರಕ್ತವನ್ನು ಸೌಲನಿಗೆ ಪ್ರತಿಯಾಗಿ ಅರಸನಾದ ನಿನ್ನ ಮೇಲೆ ತಿರಿಗಿ ಬರಮಾಡಿ ರಾಜ್ಯವನ್ನು ನಿನ್ನ ಮಗನಾದ ಅಬ್ಷಾಲೋಮನ ಕೈಯಲ್ಲಿ ಒಪ್ಪಿಸಿಕೊಟ್ಟನು; ನೀನು ರಕ್ತದ ಮನುಷ್ಯನಾದದರಿಂದ ಇಗೋ, ನಿನ್ನ ಕೇಡಿನಲ್ಲಿ ಸಿಕ್ಕಿಕೊಂಡಿ ಅಂದನು.
- Joshua 22:22 ಯೆಹೋಶುವ 22:22ದೇವಾದಿ ದೇವರಾದ ಕರ್ತನೇ, ದೇವಾದಿ ದೇವರಾದ ಕರ್ತನೇ ತಿಳಿದಿದ್ದಾನೆ. ಇಸ್ರಾಯೇಲ್ಯರಿಗೂ ತಿಳಿಯುವದು. ಇದು ತಿರುಗಿ ಬೀಳುವದರಿಂದಲಾದರೂ ಕರ್ತನಿಗೆ ವಿರೋಧವಾಗಿ ಅಪರಾಧಮಾಡುವದರಿಂದಲಾದರೂ ಆಗಿದ್ದರೆ ನಮ್ಮನ್ನು ಈಹೊತ್ತು ರಕ್ಷಿಸಬಾರದು.
- Psalm 66:18 ಕೀರ್ತನೆಗಳು 66:18ನನ್ನ ಹೃದಯದಲ್ಲಿ ಅಪರಾಧವನ್ನು ನಾನು ಆಶಿಸಿದ್ದರೆ ಕರ್ತನು ನನ್ನ ಪ್ರಾರ್ಥನೆಯನ್ನು ಕೇಳುವದಿಲ್ಲ.
- 1 Samuel 22:13 1 ಸಮುವೇಲನು 22:13ಸೌಲನು ಅವನಿಗೆ--ನೀನೂ ಇಷಯನ ಮಗನೂ ನನಗೆ ವಿರೋಧವಾಗಿ ಒಳಸಂಚು ಮಾಡಿದ್ದೇನು? ಅವನು ಅಡಗಿಕೊಂಡು ನನಗೆ ವಿರೋ ಧವಾಗಿ ಏಳುವ ಹಾಗೆ ನೀನು ಅವನಿಗೆ ರೊಟ್ಟಿಯನ್ನೂ ಕತ್ತಿಯನ್ನೂ ಕೊಟ್ಟು ದೇವರನ್ನು ಅವನಿಗೋಸ್ಕರ ವಿಚಾರಿಸಿದ್ದೇನು ಅಂದನು.
- Job 16:17–19 ಯೋಬನು 16:17–19ಆದರೂ ನನ್ನ ಕೈಗಳಲ್ಲಿ ಬಲಾತ್ಕಾರವಿಲ್ಲ; ನನ್ನ ಪ್ರಾರ್ಥನೆಯು ನಿರ್ಮಲವಾಗಿದೆ. ಭೂಮಿಯೇ, ನನ್ನ ರಕ್ತವನ್ನು ಮುಚ್ಚಬೇಡ; ನನ್ನ ಕೂಗಿಗೆ ಸ್ಥಳ ಇಲ್ಲದೆ ಇರಲಿ. ಈಗ ಇಗೋ, ಆಕಾಶದಲ್ಲಿ ನನ್ನ ಸಾಕ್ಷಿ ಉಂಟು; ನನ್ನ ಸಾಕ್ಷಿಯು ಉನ್ನತದಲ್ಲಿ ಅದೆ.
- 1 Samuel 20:8 1 ಸಮುವೇಲನು 20:8ಆದದರಿಂದ ನೀನು ನಿನ್ನ ಸೇವಕನ ಮೇಲೆ ದಯೆ ತೋರಿಸಬೇಕು; ಯಾಕಂದರೆ ಕರ್ತನ ಒಡಂಬಡಿಕೆ ಯನ್ನು ನಿನ್ನ ಸೇವಕನೊಂದಿಗೆ ಮಾಡಿಕೊಂಡಿದ್ದೀ ಯಲ್ಲಾ. ಆದಾಗ್ಯೂ ನನ್ನಲ್ಲಿ ಅಕ್ರಮವಿದ್ದರೆ ನೀನೇ ನನ್ನನ್ನು ಕೊಂದುಹಾಕು; ನನ್ನನ್ನು ನಿನ್ನ ತಂದೆಯ ಬಳಿಗೆ ಕರೆದುಕೊಂಡು ಹೋಗುವದು ಯಾಕೆ ಅಂದನು.
- 1 Samuel 24:9 1 ಸಮುವೇಲನು 24:9ದಾವೀದನು ಸೌಲನಿಗೆ--ಇಗೋ, ದಾವೀದನು ನಿನಗೆ ಕೇಡುಮಾಡ ಹುಡುಕು ತ್ತಾನೆಂದು ಹೇಳುವ ಮನುಷ್ಯರ ಮಾತುಗಳನ್ನು ಯಾಕೆ ಕೇಳುತ್ತಿದ್ದೀ?
- 1 Samuel 22:8 1 ಸಮುವೇಲನು 22:8ಇದಲ್ಲದೆ ನನ್ನ ಮಗನು ಇಷಯನ ಮಗನ ಸಂಗಡ ಒಡಂಬಡಿಕೆ ಮಾಡಿಕೊಂಡದ್ದನ್ನು ನಿಮ್ಮಲ್ಲಿ ಯಾವನೂ ನನಗೆ ತಿಳಿಸಲಿಲ್ಲ. ನಿಮ್ಮಲ್ಲಿ ಯಾವನಾದರೂ ನನ ಗೋಸ್ಕರ ಚಿಂತಿಸಿ ನನ್ನ ಮಗನು ಈ ಹೊತ್ತು ನನಗೋಸ್ಕರ ಅಡಗಿಕೊಂಡಿರುವ ಹಾಗೆ ನನ್ನ ಸೇವಕ ನನ್ನು ನನಗೆ ವಿರೋಧವಾಗಿ ಎಬ್ಬಿಸಿದ್ದನ್ನು ಯಾವನೂ ನನಗೆ ತಿಳಿಸಲಿಲ್ಲ ಅಂದನು.