Psalms · chapter 7 · verse 4
Psalm 7:4 in Kannada
ಹೌದು, ನನ್ನೊಂದಿಗೆ ಸಮಾಧಾನದಿಂದ ಇದ್ದವನಿಗೆ ನಾನು ಕೇಡು ಮಾಡಿದ್ದರೆ, ಯಾವ ಕಾರಣವಿಲ್ಲದೆ ನನಗೆ ವೈರಿಯಾಗಿರುವವನನ್ನು ನಾನು ಶತ್ರುವಿಗೆ ತಪ್ಪಿಸಿಬಿಟ್ಟೆನಲ್ಲಾ,
Haudu, nannondige samaadhaanadinda iddavanige naanu kedu maadiddare, yaava kaaranavillade nanage vairiyaagiruvavanannu naanu shatruvige tappisibittenallaa,
Psalm 7:4 in English
- King James Version (KJV)
- If I have rewarded evil unto him that was at peace with me; (yea, I have delivered him that without cause is mine enemy:)
- World English Bible (WEB)
- if I have rewarded evil to him who was at peace with me (yes, I have plundered him who without cause was my adversary),
- American Standard Version (ASV)
- If I have rewarded evil unto him that was at peace with me (Yea, I have delivered him that without cause was mine adversary);
- Bible in Basic English (BBE)
- If I have given back evil to him who did evil to me, or have taken anything from him who was against me without cause;
- Darby Translation (DBY)
- If I have rewarded evil to him that was at peace with me; (indeed I have freed him that without cause oppressed me;)
- Webster's Bible (WBS)
- If I have rewarded evil to him that was at peace with me; (yes, I have delivered him that without cause is my enemy:)
- Young's Literal Translation (YLT)
- If I have done my well-wisher evil, And draw mine adversary without cause,
Read in context
- 2ಇಲ್ಲವಾದರೆ ಅವನು ನನ್ನ ಪ್ರಾಣವನ್ನು ಸಿಂಹದಂತೆ ಹರಿದು ತುಂಡು ತುಂಡು ಮಾಡುವನು.
- 3ನನ್ನ ದೇವರಾದ ಓ ಕರ್ತನೇ, ನಾನು ಇದನ್ನು ಮಾಡಿದರೆ, ಅಂದರೆ ನನ್ನ ಕೈಗಳಲ್ಲಿ ಅಪರಾ ಧವಿದ್ದರೆ,
- 4ಹೌದು, ನನ್ನೊಂದಿಗೆ ಸಮಾಧಾನದಿಂದ ಇದ್ದವನಿಗೆ ನಾನು ಕೇಡು ಮಾಡಿದ್ದರೆ, ಯಾವ ಕಾರಣವಿಲ್ಲದೆ ನನಗೆ ವೈರಿಯಾಗಿರುವವನನ್ನು ನಾನು ಶತ್ರುವಿಗೆ ತಪ್ಪಿಸಿಬಿಟ್ಟೆನಲ್ಲಾ,
- 5ವೈರಿಯು ನನ್ನ ಪ್ರಾಣ ವನ್ನು ಹಿಡಿದು ಹಿಂಸಿಸಿ ನನ್ನ ಜೀವವನ್ನು ಭೂಮಿಗೆ ತುಳಿದು ನನ್ನ ಗೌರವವನ್ನು ಧೂಳಿನೊಳಗೆ ಹಾಕಿ ಬಿಡಲಿ--ಸೆಲಾ.
- 6ಓ ಕರ್ತನೇ, ನಿನ್ನ ಕೋಪದಿಂದ ಏಳು; ನನ್ನ ವೈರಿಗಳ ಉಗ್ರತೆಗಾಗಿ ಎದ್ದೇಳು; ನನ್ನ ನಿಮಿತ್ತ ಎಚ್ಚರಗೊಳ್ಳು; ನೀನು ನ್ಯಾಯತೀರ್ವಿಕೆಯನ್ನು ಆಜ್ಞಾ ಪಿಸಿದ್ದೀಯಲ್ಲಾ.
Cross references
- 1 Samuel 24:17–19 1 ಸಮುವೇಲನು 24:17–19ದಾವೀದನಿಗೆ--ನೀನು ನನಗಿಂತ ನೀತಿವಂತನು; ನೀನು ನನಗೆ ಒಳ್ಳೇದನ್ನು ಮಾಡಿದಿ; ಆದರೆ ನಾನು ನಿನಗೆ ಕೇಡನ್ನು ಮಾಡಿದೆನು. ಕರ್ತನು ನನ್ನನ್ನು ನಿನ್ನ ಕೈಯಲ್ಲಿ ಒಪ್ಪಿಸಿ ಕೊಟ್ಟಾಗ ನೀನು ನನ್ನನ್ನು ಕೊಂದುಹಾಕದೆ ಇದದ್ದ ರಿಂದ ನೀನು ನನಗೆ ಉಪಕಾರಮಾಡಿದ್ದನ್ನು ಈ ಹೊತ್ತು ತೋರಿಸಿದಿ. ಯಾವನಾದರೂ ತನ್ನ ಶತ್ರು ವನ್ನು ಹಿಡಿದುಕೊಂಡರೆ ಅವನನ್ನು ಸುರಕ್ಷಿತವಾಗಿ ಬಿಟ್ಟುಬಿಡುವನೋ? ಆದದರಿಂದ ಈ ಹೊತ್ತು ನೀನು ನನಗೆ ಮಾಡಿದ್ದಕ್ಕೆ ಬದಲಾಗಿ ದೇವರು ನಿನಗೆ ಒಳ್ಳೇ ದನ್ನು ಮಾಡಲಿ.
- Psalm 55:20 ಕೀರ್ತನೆಗಳು 55:20ಅವನು ತನ್ನ ಸಂಗಡ ಸಮಾಧಾನವುಳ್ಳವರಿಗೆ ವಿರೋಧವಾಗಿ ತನ್ನ ಕೈಗಳನ್ನು ಹಾಕಿದ್ದಾನೆ; ತನ್ನ ಒಡಂಬಡಿಕೆಯನ್ನು ಮುರಿದಿದ್ದಾನೆ.
- Psalm 109:5 ಕೀರ್ತನೆಗಳು 109:5ನನ್ನ ಮೇಲಿಗೆ ಬದಲಾಗಿ ಕೇಡನ್ನೂ ಪ್ರೀತಿಗೆ ಬದಲಾಗಿ ಹಗೆಯನ್ನೂ ನನಗೆ ವಿರೋಧ ವಾಗಿ ಮಾಡಿದ್ದಾರೆ.
- Jeremiah 18:20–21 ಯೆರೆಮೀಯ 18:20–21ಒಳ್ಳೇದಕ್ಕೆ ಬದಲಾಗಿ ಕೆಟ್ಟದ್ದನ್ನು ಸಲ್ಲಿಸಬಹುದೇ? ಅವರು ನನ್ನ ಪ್ರಾಣಕ್ಕೆ ಕುಣಿಯನ್ನು ಅಗೆದಿದ್ದಾರೆ; ಅವರಿಗೋಸ್ಕರ ಒಳ್ಳೆಯದನ್ನು ಮಾತಾಡುವದಕ್ಕೂ ನಿನ್ನ ಉಗ್ರವನ್ನು ಅವರಿಂದ ತಿರುಗಿಸುವದಕ್ಕೂ ನಾನು ನಿನ್ನ ಮುಂದೆ ನಿಂತದ್ದನ್ನು ಜ್ಞಾಪಕಮಾಡಿಕೋ. ಆದದರಿಂದ ಅವರ ಮಕ್ಕಳನ್ನು ಕ್ಷಾಮಕ್ಕೆ ಕೊಡು; ಕತ್ತಿಯ ಬಲದಿಂದ ಅವರ ರಕ್ತವನ್ನು ಸುರಿದುಬಿಡು; ಅವರ ಹೆಂಡತಿಯರು ಮಕ್ಕಳಿಲ್ಲದೆ ವಿಧವೆಯರಾಗಲಿ; ಅವರ ಗಂಡಸರು ಕೊಲ್ಲಲ್ಪಟ್ಟು ಸಾಯಲಿ; ಅವರ ಯೌವನಸ್ಥರು ಯುದ್ಧ ದಲ್ಲಿ ಕತ್ತಿಯಿಂದ ವಧಿಸಲ್ಪಡಲಿ.
- 1 Samuel 24:7 1 ಸಮುವೇಲನು 24:7ಹೀಗೆಯೇ ದಾವೀದನು ತನ್ನ ಮನುಷ್ಯರನ್ನು ಸೌಲನ ಮೇಲೆ ಬೀಳಗೊಡದೆ ಈ ಮಾತುಗಳಿಂದ ಅವರನ್ನು ತಡೆದನು. ಆದರೆ ಸೌಲನು ಎದ್ದು ಗವಿಯನ್ನು ಬಿಟ್ಟು ತನ್ನ ಮಾರ್ಗವಾಗಿ ಹೊರಟು ಹೋದನು.
- Proverbs 17:3 ಜ್ಞಾನೋಕ್ತಿಗಳು 17:3ಬೆಳ್ಳಿ ಬಂಗಾರ ಗಳನ್ನು ಪುಟ ಕುಲುಮೆಗಳು ಶೋಧಿಸುವವು, ಕರ್ತನು ಹೃದಯಗಳನ್ನು ಶೋಧಿಸುತ್ತಾನೆ.
- 1 Samuel 25:28–29 1 ಸಮುವೇಲನು 25:28–29ನೀನು ದಯಮಾಡಿ ನಿನ್ನ ದಾಸಿಯದ್ರೋಹವನ್ನು ಮನ್ನಿಸಬೇಕು; ನನ್ನ ಒಡೆಯನು ಕರ್ತನ ಯುದ್ಧಗಳನ್ನು ನಡೆಸುತ್ತಾನೆ; ನಿನ್ನ ದಿನಗಳಲ್ಲಿ ನಿನ್ನ ಬಳಿಯಲ್ಲಿ ಕೆಟ್ಟತನವು ಕಂಡುಹಿಡಿ ಯಲ್ಪಟ್ಟದ್ದಿಲ್ಲ; ಆದದರಿಂದ ಕರ್ತನು ನನ್ನ ಒಡೆಯನಿಗೆ ಸ್ಥಿರವಾದ ಮನೆಯನ್ನು ಖಂಡಿತವಾಗಿ ಮಾಡುವನು. ಈಗ ನಿನ್ನನ್ನು ಹಿಂದಟ್ಟಿ ನಿನ್ನ ಪ್ರಾಣವನ್ನು ಹುಡು ಕುವದಕ್ಕೆ ಒಬ್ಬನು ಎದ್ದಿದ್ದಾನೆ; ಆದರೂ ನನ್ನ ಒಡೆ ಯನ ಪ್ರಾಣವು ದೇವರಾದ ಕರ್ತನ ಬಳಿಯ ಜೀವದ ಕಟ್ಟಿನಲ್ಲಿ ಕಟ್ಟಲ್ಪಟ್ಟಿರುವದು; ನಿನ್ನ ಶತ್ರುಗಳ ಪ್ರಾಣವನ್ನು ಕವಣೆಯ ಮಧ್ಯದಲ್ಲಿಟ್ಟು ಎಸೆದ ಹಾಗೆಯೇ ಆತನು ಎಸೆದು ಬಿಡುವನು.
- 1 Samuel 24:10–15 1 ಸಮುವೇಲನು 24:10–15ಇಗೋ, ಕರ್ತನು ಈ ಹೊತ್ತು ಗವಿಯಲ್ಲಿ ನಿನ್ನನ್ನು ನನ್ನ ಕೈಯಲ್ಲಿ ಒಪ್ಪಿಸಿಕೊಟ್ಟನೆಂಬದನ್ನು ಈ ದಿನ ನಿನ್ನ ಕಣ್ಣುಗಳು ನೋಡಿದವು. ಕೆಲವರು ನಿನ್ನನ್ನು ಕೊಂದುಹಾಕಲು ಹೇಳಿದರು; ಆದರೆ ನನ್ನ ಕಣ್ಣು ನಿನ್ನನ್ನು ಕರುಣಿಸಿತು; ನಾನು--ಅವನು ಕರ್ತನ ಅಭಿಷಿಕ್ತನಾದದರಿಂದ ನನ್ನ ಕೈ ನನ್ನ ಒಡೆಯನಿಗೆ ವಿರೋಧವಾಗಿ ಚಾಚೆನು ಅಂದೆನು. ಇದಲ್ಲದೆ ನನ್ನ ತಂದೆಯೇ, ನೋಡು; ಹೌದು, ನನ್ನ ಕೈಯಲ್ಲಿರುವ ನಿನ್ನ ನಿಲುವಂಗಿಯ ಅಂಚನ್ನು ನೋಡು. ನಾನು ನಿನ್ನನ್ನು ಕೊಂದುಹಾಕದೆ ನಿನ್ನ ನಿಲುವಂಗಿಯ ಅಂಚನ್ನು ಕತ್ತರಿಸಿಕೊಂಡದ್ದರಿಂದ ನನ್ನಲ್ಲಿ ಕೆಟ್ಟತನವು ದ್ರೋಹವು ಇಲ್ಲವೆಂದು ನಾನು ನಿನಗೆ ವಿರೋಧವಾಗಿ ಪಾಪಮಾಡ ಲಿಲ್ಲವೆಂದೂ ತಿಳಿದುಕೊಂಡು ನೋಡು. ಹೀಗಿದ್ದರೂ ನೀನು ನನ್ನ ಪ್ರಾಣವನ್ನು ತೆಗೆಯಲು ಬೇಟೆಯಾಡುತ್ತೀ. ಕರ್ತನು ನನ್ನ ನಿನ್ನ ಮಧ್ಯದಲ್ಲಿ ನ್ಯಾಯತೀರಿಸಲಿ, ಕರ್ತನು ತಾನೇ ನನಗೋಸ್ಕರ ನಿನ್ನ ವಿಷಯ ಮುಯ್ಯಿಗೆ ಮುಯ್ಯಿ ಮಾಡಲಿ; ಆದರೆ ನನ್ನ ಕೈ ನಿನ್ನ ಮೇಲೆ ಇರುವದಿಲ್ಲ. ಪೂರ್ವಿಕರು ಹೇಳಿದ ಸಾಮತಿಯ ಪ್ರಕಾರ ದುಷ್ಟರಿಂದ ದುಷ್ಟತ್ವವು ಹುಟ್ಟುವದು. ಆದರೂ ನನ್ನ ಕೈ ನಿನ್ನ ಮೇಲೆ ಇರುವದಿಲ್ಲ. ಇಸ್ರಾಯೇಲಿನ ಅರಸನು ಯಾರನ್ನು ಬೆನ್ನಟ್ಟಿ ಹೊರಟನು? ಯಾರನ್ನು ನೀನು ಹಿಂದಟ್ಟುತ್ತೀ? ಸತ್ತನಾಯಿಯನ್ನೇ? ಒಂದು ಕೀಟವನ್ನೇ? ಕರ್ತನು ನ್ಯಾಯಾಧಿಪತಿಯಾಗಿದ್ದು ನನಗೂ ನಿನಗೂ ನ್ಯಾಯತೀರಿಸಿ ನನ್ನ ವ್ಯಾಜ್ಯವನ್ನು ನೋಡಿ ವ್ಯಾಜ್ಯವಾಡಿ ನನ್ನನ್ನು ನಿನ್ನ ಕೈಗೆ ತಪ್ಪಿಸಿಬಿಡಲಿ ಅಂದನು.
- 1 Samuel 19:4–5 1 ಸಮುವೇಲನು 19:4–5ಹಾಗೆಯೇ ಯೋನಾತಾನನು ತನ್ನ ತಂದೆಯಾದ ಸೌಲನ ಸಂಗಡ ದಾವೀದನನ್ನು ಕುರಿತು ಒಳ್ಳೇದನ್ನು ಮಾತನಾಡಿ ಅವನಿಗೆ--ಅರಸನು ತನ್ನ ಸೇವಕನಾದ ದಾವೀದನಿಗೆ ವಿರೋಧವಾಗಿ ಪಾಪಮಾಡದೆ ಇರಲಿ, ಅವನು ನಿನಗೆ ವಿರೋಧವಾಗಿ ಪಾಪಮಾಡಲಿಲ್ಲ; ಅವನ ಕ್ರಿಯೆಗಳು ನಿನಗೆ ಬಹಳ ಉತ್ತಮವಾಗಿವೆ; ಅವನು ತನ್ನ ಪ್ರಾಣವನ್ನು ತನ್ನ ಕೈಯಲ್ಲಿ ಹಿಡುಕೊಂಡು ಫಿಲಿಷ್ಟಿಯನನ್ನು ಕೊಂದನು. ಕರ್ತನು ಎಲ್ಲಾ ಇಸ್ರಾಯೇಲಿಗೋಸ್ಕರ ದೊಡ್ಡ ರಕ್ಷಣೆ ಯನ್ನುಂಟು ಮಾಡಿದನು. ನೀನೂ ನೋಡಿ ಸಂತೋಷ ಪಟ್ಟೆ; ಈಗ ಕಾರಣವಿಲ್ಲದೆ ದಾವೀದನನ್ನು ಕೊಂದು ನಿರಪರಾಧಿಯ ರಕ್ತಕ್ಕೆ ವಿರೋಧವಾಗಿ ಪಾಪವನ್ನು ಮಾಡುವದು ಯಾಕೆ ಅಂದನು.
- Genesis 44:4 ಆದಿಕಾಂಡ 44:4ಅವರು ಪಟ್ಟಣವನ್ನು ಬಿಟ್ಟು ದೂರ ಹೋಗುವದಕ್ಕಿಂತ ಮುಂಚೆ ಯೋಸೇಫನು ಮನೆಯ ಉಗ್ರಾಣಿಕನಿಗೆ--ಎದ್ದು ಆ ಮನುಷ್ಯರ ಹಿಂದೆ ಹೋಗಿ, ಅವರು ಸಿಕ್ಕಿದಾಗ--ನೀವು ಒಳ್ಳೆಯದಕ್ಕೆ ಪ್ರತಿಯಾಗಿ ಕೆಟ್ಟದ್ದನ್ನು ಯಾಕೆ ಮಾಡಿದಿರಿ?
- 1 Samuel 22:14 1 ಸಮುವೇಲನು 22:14ಅಹೀಮೆಲೆಕನು ಅರಸನಿಗೆ ಪ್ರತ್ಯುತ್ತರವಾಗಿ--ನಿನ್ನ ಎಲ್ಲಾ ಸೇವಕರಲ್ಲಿ ದಾವೀದನ ಹಾಗೆ ನಂಬಿಗಸ್ತನಾದವನು ಯಾವನಿ ದ್ದಾನೆ? ಅವನು ಅರಸನಿಗೆ ಅಳಿಯನೂ ನಿನ್ನ ಆಜ್ಞೆಗಳ ಹಾಗೆ ಮಾಡಿಕೊಂಡು ಬರುವವನೂ ನಿನ್ನ ಮನೆಯಲ್ಲಿ ಘನವುಳ್ಳವನೂ ಆಗಿದ್ದಾನೆ.
- 1 Samuel 20:1 1 ಸಮುವೇಲನು 20:1ದಾವೀದನು ರಾಮದ ನಯೋತಿನಿಂದ ಓಡಿಹೋಗಿ ಯೋನಾತಾನನ ಬಳಿಗೆ ಬಂದು ಅವನ ಮುಂದೆ--ನಾನು ಏನು ಮಾಡಿದೆನು? ನನ್ನ ಅಕ್ರಮವೇನು? ನಿನ್ನ ತಂದೆಯು ನನ್ನ ಪ್ರಾಣ ವನ್ನು ತೆಗೆಯುವ ಹಾಗೆ ನಾನು ಅವನಿಗೆ ಮಾಡಿದ ಪಾಪವೇನು ಅಂದನು.