Psalms · chapter 71 · verse 2
Psalm 71:2 in Kannada
ನಿನ್ನ ನೀತಿಯಲ್ಲಿ ನನ್ನನ್ನು ಬಿಡಿಸಿ ನನ್ನನ್ನು ತಪ್ಪಿಸು; ನಿನ್ನ ಕಿವಿಯನ್ನು ನನ್ನ ಕಡೆಗೆ ತಿರುಗಿಸಿ ನನ್ನನ್ನು ರಕ್ಷಿಸು.
Ninna neetiyalli nannannu bidisi nannannu tappisu; ninna kiviyannu nanna kadege tirugisi nannannu rakshisu.
Psalm 71:2 in English
- King James Version (KJV)
- Deliver me in thy righteousness, and cause me to escape: incline thine ear unto me, and save me.
- World English Bible (WEB)
- Deliver me in your righteousness, and rescue me. Turn your ear to me, and save me.
- American Standard Version (ASV)
- Deliver me in thy righteousness, and rescue me: Bow down thine ear unto me, and save me.
- Bible in Basic English (BBE)
- Keep me safe in your righteousness, and come to my help; give ear to my voice, and be my saviour.
- Darby Translation (DBY)
- Deliver me in thy righteousness, and rescue me; incline thine ear unto me, and save me.
- Webster's Bible (WBS)
- Deliver me in thy righteousness, and cause me to escape: incline thy ear to me, and save me.
- Young's Literal Translation (YLT)
- In Thy righteousness Thou dost deliver me, And dost cause me to escape, Incline unto me Thine ear, and save me.
Read in context
- 1ಓ ಕರ್ತನೇ, ನಾನು ನಿನ್ನಲ್ಲಿ ಭರವಸವನ್ನಿಟ್ಟಿದ್ದೇನೆ; ನನಗೆ ಎಂದಿಗೂ ಆಶಾ ಭಂಗವಾಗದಿರಲಿ.
- 2ನಿನ್ನ ನೀತಿಯಲ್ಲಿ ನನ್ನನ್ನು ಬಿಡಿಸಿ ನನ್ನನ್ನು ತಪ್ಪಿಸು; ನಿನ್ನ ಕಿವಿಯನ್ನು ನನ್ನ ಕಡೆಗೆ ತಿರುಗಿಸಿ ನನ್ನನ್ನು ರಕ್ಷಿಸು.
- 3ನೀನು ಯಾವಾಗಲೂ ನಾನು ಆಶ್ರಯಿಸಿಕೊಳ್ಳುವ ಬಲಸ್ಥಾನವಾಗಿರು. ನನ್ನನ್ನು ರಕ್ಷಿಸುವದಕ್ಕೆ ಆಜ್ಞಾಪಿಸಿದ್ದೀ, ನನ್ನ ಬಂಡೆಯೂ ಕೋಟೆಯೂ ನೀನೇ.
- 4ಓ ನನ್ನ ದೇವರೇ, ದುಷ್ಟನ ಕೈಗೂ ಅನ್ಯಾಯ ಮಾಡುವ ಕ್ರೂರನ ಕೈಗೂ ನನ್ನನ್ನು ತಪ್ಪಿಸು.
Cross references
- Psalm 31:1 ಕೀರ್ತನೆಗಳು 31:1ಓ ಕರ್ತನೇ, ನಿನ್ನಲ್ಲಿ ಭರವಸವಿಟ್ಟು ಕೊಂಡಿದ್ದೇನೆ; ನಾನು ಎಂದಿಗೂ ಆಶಾ ಭಂಗಪಡದಂತೆ ಮಾಡು; ನಿನ್ನ ನೀತಿಯಲ್ಲಿ ನನ್ನನ್ನು ರಕ್ಷಿಸು.
- Psalm 17:6 ಕೀರ್ತನೆಗಳು 17:6ಓ ದೇವರೇ, ನನಗೆ ಉತ್ತರ ಕೊಡುವದರಿಂದ ನಾನು ನಿನ್ನನ್ನು ಬೇಡಿಕೊಂಡಿದ್ದೇನೆ; ಯಾಕಂದರೆ ನಿನ್ನ ಕಿವಿಯನ್ನು ನನ್ನ ಕಡೆ ಆಲಿಸಿ ನನ್ನ ಮಾತನ್ನು ಕೇಳು.
- Psalm 116:1–2 ಕೀರ್ತನೆಗಳು 116:1–2ನಾನು ಕರ್ತನನ್ನು ಪ್ರೀತಿ ಮಾಡುತ್ತೇನೆ.ಆತನು ನನ್ನ ಸ್ವರವನ್ನೂ ವಿಜ್ಞಾಪನೆಯನ್ನೂ ಕೇಳಿದ್ದಾನೆ. ಆತನು ನನ್ನ ಮೊರೆಯನ್ನು ಆಲಿಸಿದ್ದರಿಂದ ನಾನು ಜೀವದಿಂದಿರುವ ವರೆಗೂ ಆತನನ್ನೇ ಬೇಡುವೆನು.
- Psalm 143:11 ಕೀರ್ತನೆಗಳು 143:11ಓ ಕರ್ತನೇ, ನಿನ್ನ ಹೆಸ ರಿನ ನಿಮಿತ್ತ ನನ್ನನ್ನು ಬದುಕಿಸಿ ನಿನ್ನ ನೀತಿಗನುಸಾರ ವಾಗಿ ನನ್ನ ಪ್ರಾಣವನ್ನು ಇಕ್ಕಟ್ಟಿನೊಳಗಿಂದ ಹೊರಗೆ ಬರಮಾಡು.ನಿನ್ನ ಕರುಣೆಯಿಂದ ನನ್ನ ಶತ್ರು ಗಳನ್ನು ಸಂಹರಿಸಿ ನನ್ನ ಪ್ರಾಣವನ್ನು ಸಂಕಟ ಪಡಿಸುವವರನ್ನೆಲ್ಲಾ ನಾಶಮಾಡು; ನಾನು ನಿನ್ನ ಸೇವಕನಾಗಿದ್ದೇನೆ.
- Psalm 10:17–18 ಕೀರ್ತನೆಗಳು 10:17–18ಕರ್ತನೇ, ದೀನರ ಆಶೆ ಯನ್ನು ಕೇಳಿದ್ದೀ; ನೀನು ಅವರ ಹೃದಯವನ್ನು ಸಿದ್ಧ ಪಡಿಸಿ ಅವರ ಮೊರೆಗೆ ಕಿವಿಗೊಡುತ್ತೀ.ಭೂಮಿಯ ಮನುಷ್ಯನು ಇನ್ನು ಭಯಪಡಿಸದ ಹಾಗೆ ದಿಕ್ಕಿಲ್ಲದ ವರಿಗೂ ಕುಗ್ಗಿದವರಿಗೂ ನ್ಯಾಯತೀರಿಸುವದಕ್ಕೆ ಕಿವಿಗೊಟ್ಟಿದ್ದೀ. ಭೂಮಿಯ ಮನುಷ್ಯನು ಇನ್ನು ಭಯಪಡಿಸದ ಹಾಗೆ ದಿಕ್ಕಿಲ್ಲದ ವರಿಗೂ ಕುಗ್ಗಿದವರಿಗೂ ನ್ಯಾಯತೀರಿಸುವದಕ್ಕೆ ಕಿವಿಗೊಟ್ಟಿದ್ದೀ.
- 1 Corinthians 10:13 1 ಕೊರಿಂಥದವರಿಗೆ 10:13ಮನುಷ್ಯನಿಗೆ ಸಾಮಾನ್ಯ ವಾಗಿ ಬರುವ ಶೋಧನೆಯೇ ಹೊರತು ಬೇರೆ ಯಾವದೂ ನಿಮಗೆ ಸಂಭವಿಸಲಿಲ್ಲ; ಆದರೆ ದೇವರು ನಂಬಿಗಸ್ತನು; ನೀವು ಸಹಿಸುವದಕ್ಕಿಂತ ಹೆಚ್ಚಿನ ಶೋಧನೆಯನ್ನು ಆತನು ನಿಮಗೆ ಬರಮಾಡುವದಿಲ್ಲ; ಆದರೆ ನೀವು ಅದನ್ನು ಸಹಿಸುವದಕ್ಕೆ ಶಕ್ತರಾಗುವಂತೆ ಶೋಧ
- Psalm 17:2 ಕೀರ್ತನೆಗಳು 17:2ನಿನ್ನ ಸನ್ನಿಧಿಯೊಳಗಿಂದ ನನಗೆ ನ್ಯಾಯತೀರ್ಪು ಹೊರಬರಲಿ; ನಿನ್ನ ಕಣ್ಣುಗಳು ನ್ಯಾಯವಾದವುಗಳನ್ನು ದೃಷ್ಟಿಸಲಿ.
- Psalm 43:1 ಕೀರ್ತನೆಗಳು 43:1ಓ ದೇವರೇ, ನನಗೆ ನ್ಯಾಯತೀರಿಸು. ಭಕ್ತಿ ಇಲ್ಲದ ಜನಾಂಗದ ಸಂಗಡ ನನ್ನ ನ್ಯಾಯವನ್ನು ವಾದಿಸು; ಮೋಸವೂ ಅನ್ಯಾಯವೂ ಉಳ್ಳ ಮನುಷ್ಯನಿಂದ ನನ್ನನ್ನು ತಪ್ಪಿಸು.
- Psalm 143:1 ಕೀರ್ತನೆಗಳು 143:1ಓ ಕರ್ತನೇ, ನನ್ನ ಪ್ರಾರ್ಥನೆಯನ್ನು ಕೇಳು; ನನ್ನ ವಿಜ್ಞಾಪನೆಗಳಿಗೆ ಕಿವಿ ಗೊಡು; ನಿನ್ನ ನಂಬಿಗಸ್ತಿಕೆಯಲ್ಲಿಯೂ ನೀತಿಯಲ್ಲಿಯೂ ನನಗೆ ಉತ್ತರಕೊಡು.
- Psalm 34:15 ಕೀರ್ತನೆಗಳು 34:15ಕರ್ತನ ಕಣ್ಣುಗಳು ನೀತಿವಂತರ ಮೇಲೆಯೂ ಆತನ ಕಿವಿಗಳು ಅವರ ಮೊರೆಯ ಕಡೆಗೂ ಅವೆ.
- Daniel 9:16 ದಾನಿಯೇಲನು 9:16ಓ ಕರ್ತನೇ, ನಿನ್ನ ಎಲ್ಲಾ ನೀತಿಗಳ ಪ್ರಕಾರ ನಾನು ನಿನ್ನನ್ನು ಬೇಡುತ್ತೇನೆ. ನಿನ್ನ ಕೋಪವು ನಿನ್ನ ಉಗ್ರತೆಯೂ ನಿನ್ನ ಪಟ್ಟಣವಾದ ಯೆರೂಸಲೇಮಿನಿಂದಲೂ ನಿನ್ನ ಪರಿಶುದ್ಧ ಪರ್ವತ ದಿಂದಲೂ ತಿರುಗಿಸಲ್ಪಡಲಿ. ಯಾಕಂದರೆ ನಮ್ಮ ಪಾಪ ಗಳ ನಿಮಿತ್ತದಿಂದಲೂ ನಮ್ಮ ಪಿತೃಗಳ ಅಕ್ರಮಗಳ ನಿಮಿತ್ತದಿಂದಲೂ ಯೆರೂಸಲೇಮೂ ಮತ್ತು ನಿನ್ನ ಜನರೂ ನೆರೆಹೊರೆಯವರೆಲ್ಲರ ನಿಂದೆಗೆ ಗುರಿಯಾಗಿರು ವೆವಲ್ಲಾ.