Psalms · chapter 71 · verse 20
Psalm 71:20 in Kannada
ಕಠಿಣವಾದ ಇಕ್ಕಟ್ಟುಗಳನ್ನು ನೋಡಮಾಡಿದ ನನ್ನನ್ನು ನೀನು ತಿರಿಗಿ ಬದುಕಿಸಿದಿ; ಭೂಮಿಯ ಆಗಾಧ ಗಳೊಳಗಿಂದ ನನ್ನನ್ನು ಮೇಲಕ್ಕೆ ತರುತ್ತೀ.
Kathinavaada ikkattugalannu nodamaadida nannannu neenu tirigi badukisidi; bhoomiya aagaadha galolaginda nannannu melakke taruttee.
Psalm 71:20 in English
- King James Version (KJV)
- [Thou], which hast shewed me great and sore troubles, shalt quicken me again, and shalt bring me up again from the depths of the earth.
- World English Bible (WEB)
- You, who have shown us many and bitter troubles, you will let me live. You will bring us up again from the depths of the earth.
- American Standard Version (ASV)
- Thou, who hast showed us many and sore troubles, Wilt quicken us again, And wilt bring us up again from the depths of the earth.
- Bible in Basic English (BBE)
- You, who have sent great and bitter troubles on me, will give me life again, lifting me up from the deep waters of the underworld.
- Darby Translation (DBY)
- Thou, who hast shewn us many and sore troubles, wilt revive us again, and wilt bring us up again from the depths of the earth;
- Webster's Bible (WBS)
- [Thou] , who hast shown me great and severe troubles, wilt revive me again, and wilt bring me again from the depths of the earth.
- Young's Literal Translation (YLT)
- Because Thou hast showed me many and sad distresses, Thou turnest back — Thou revivest me, And from the depths of the earth, Thou turnest back — Thou bringest me up.
Read in context
- 18ಓ ದೇವರೇ, ನಾನು ಮುಪ್ಪಿನವನೂ ನರೆ ಕೂದಲಿನವನೂ ಆದಾಗ ಈ ಸಂತತಿಯವರಿಗೆ ನಿನ್ನ ಶಕ್ತಿಯನ್ನೂ ಮುಂದೆ ಬರುವ ಪ್ರತಿಯೊಬ್ಬನಿಗೆ ನಿನ್ನ ಅಧಿಕಾರವನ್ನೂ ತಿಳಿಸುವ ವರೆಗೂ ನನ್ನನ್ನು ಕೈಬಿಡಬೇಡ.
- 19ಓ ದೇವರೇ, ಮಹತ್ಕಾರ್ಯಗಳನ್ನು ಮಾಡಿದ ನಿನ್ನ ನೀತಿಯು ಬಹಳ ಉನ್ನತವಾಗಿದೆ. ಓ ದೇವರೇ, ನಿನ್ನ ಹಾಗೆ ಯಾರಿದ್ದಾರೆ!
- 20ಕಠಿಣವಾದ ಇಕ್ಕಟ್ಟುಗಳನ್ನು ನೋಡಮಾಡಿದ ನನ್ನನ್ನು ನೀನು ತಿರಿಗಿ ಬದುಕಿಸಿದಿ; ಭೂಮಿಯ ಆಗಾಧ ಗಳೊಳಗಿಂದ ನನ್ನನ್ನು ಮೇಲಕ್ಕೆ ತರುತ್ತೀ.
- 21ನೀನು ನನ್ನ ಗೌರವವನ್ನು ಹೆಚ್ಚಿಸಿ ಎಲ್ಲಾ ಕಡೆಯಿಂದಲೂ ನನ್ನನ್ನು ಆದರಿಸುವಿ.
- 22ಓ ನನ್ನ ದೇವರೇ, ನಾನು ಸಹ ನಿನ್ನನ್ನೂ ನಿನ್ನ ಸತ್ಯವನ್ನೂ ವೀಣೆಯಿಂದ ಕೊಂಡಾಡುವೆನು; ಓ ಇಸ್ರಾಯೇಲಿನ ಪರಿಶುದ್ದನೇ, ಕಿನ್ನರಿಯಿಂದ ನಿನ್ನನ್ನು ಕೀರ್ತಿಸುವೆನು.
Cross references
- Psalm 138:7 ಕೀರ್ತನೆಗಳು 138:7ನಾನು ಕಷ್ಟದ ಮಧ್ಯದಲ್ಲಿ ನಡೆದಾಗ್ಯೂ ನೀನು ನನ್ನನ್ನು ಬದುಕಿಸಿ ನನ್ನ ಶತ್ರುಗಳ ಕೋಪಕ್ಕೆ ವಿರೋಧವಾಗಿ ನಿನ್ನ ಕೈಯನ್ನು ಚಾಚುತ್ತೀ; ನಿನ್ನ ಬಲಗೈ ನನ್ನನ್ನು ರಕ್ಷಿಸುತ್ತದೆ.ಕರ್ತನು ನನಗಿ ರುವದನ್ನು ಸಿದ್ದಿಗೆ ತರುತ್ತಾನೆ; ಕರ್ತನೇ, ನಿನ್ನ ಕೃಪೆಯು ಎಂದೆಂದಿಗೂ ಅದೆ; ನಿನ್ನ ಸ್ವಂತ ಕೈಕೆಲಸಗಳನ್ನು ತೊರೆದುಬಿಡಬೇಡ.
- Hosea 6:1–2 ಹೋಶೇಯ 6:1–2ಬನ್ನಿರಿ ನಾವು ಕರ್ತನ ಕಡೆಗೆ ತಿರುಗಿ ಕೊಳ್ಳೋಣ ಯಾಕಂದರೆ ಆತನು ಸೀಳಿ ಬಿಟ್ಟಿದ್ದಾನೆ, ನಮ್ಮನ್ನು ಸ್ವಸ್ಥ ಮಾಡುತ್ತಾನೆ; ಆತನು ಹೊಡೆದಿದ್ದಾನೆ; ಆತನು ನಮ್ಮನ್ನು ಕಟ್ಟುತ್ತಾನೆ. ಆತನು ಎರಡು ದಿನಗಳಾದ ಮೇಲೆ ನಮ್ಮನ್ನು ಪುನರ್ಜೀವಿಸ ಮಾಡುವನು; ಮೂರನೆಯ ದಿನದಲ್ಲಿ ಆತನೇ ನಮ್ಮನ್ನು ಎಬ್ಬಿಸುವನು; ನಾವು ಆತನ ದೃಷ್ಟಿಯಲ್ಲಿ ಜೀವಿಸುವೆವು.
- Psalm 60:3 ಕೀರ್ತನೆಗಳು 60:3ನಿನ್ನ ಜನರಿಗೆ ಕಠಿಣವಾದವುಗಳನ್ನು ನೀನು ತೋರಿಸಿದ್ದೀ; ವಿಸ್ಮಯದ ದ್ರಾಕ್ಷಾರಸವನ್ನು ನಮಗೆ ಕುಡಿಸಿದ್ದೀ.
- Psalm 86:13 ಕೀರ್ತನೆಗಳು 86:13ನಿನ್ನ ಕರುಣೆಯು ನನ್ನ ಮೇಲೆ ದೊಡ್ಡದಾಗಿದೆ; ಪಾತಾಳ ದೊಳಗಿಂದ ನನ್ನ ಪ್ರಾಣವನ್ನು ಬಿಡಿಸಿದ್ದೀ.
- Ezekiel 37:12–13 ಯೆಹೆಜ್ಕೇಲನು 37:12–13ಆದದರಿಂದ ನೀನು ಪ್ರವಾದಿಸು ಮತ್ತು ಅವರಿಗೆ ಹೇಳು--ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಓ ನನ್ನ ಜನರೇ, ನಾನು ನಿಮ್ಮ ಸಮಾಧಿಗಳನ್ನು ತೆರೆಯುವೆನು ಮತ್ತು ಸಮಾಧಿಗಳಿಂದ ನೀವು ಹೊರಗೆ ಬರುವಂತೆ ಮಾಡುವೆನು. ಇಸ್ರಾ ಯೇಲ್ ದೇಶಕ್ಕೆ ನಿಮ್ಮನ್ನು ತರುವೆನು. ಓ ನನ್ನ ಜನರೇ, ಯಾವಾಗ ನಾನು ನಿಮ್ಮ ಸಮಾಧಿಗಳನ್ನು ತೆರೆದು ಹೊರಗೆ ಬರಮಾಡುವೆನೋ ಆಗ ನಾನೇ ಕರ್ತನೆಂದು ನೀವು ತಿಳಿದುಕೊಳ್ಳುವಿರಿ.
- Psalm 40:1–3 ಕೀರ್ತನೆಗಳು 40:1–3ನಾನು ಕರ್ತನಿಗಾಗಿ ತಾಳ್ಮೆಯಿಂದ ಕಾದಿದ್ದೆನು; ಆತನು ಕಿವಿಗೊಟ್ಟು ನನ್ನ ಮೊರೆ ಯನ್ನು ಲಕ್ಷಿಸಿದನು. ಆತನು ನನ್ನನ್ನು ನಾಶನದ ಕುಣಿಯಿಂದಲೂ ಮತ್ತು ಬುರುದೆಯ ಕೆಸರಿನಿಂದಲೂ ಎತ್ತಿ ನನ್ನ ಪಾದಗಳನ್ನು ಬಂಡೆಯ ಮೇಲೆ ನಿಲ್ಲಿಸಿ ನನ್ನ ಹೆಜ್ಜೆಗಳನ್ನು ಸ್ಥಿರಪಡಿಸಿದನು. ನನ್ನ ಬಾಯಲ್ಲಿ ನೂತನ ಹಾಡನ್ನು ಇಟ್ಟಿದ್ದಾನೆ; ಅದು ನಮ್ಮ ದೇವರ ಸ್ತೋತ್ರವೇ; ಅನೇಕರು ಇದನ್ನು ನೋಡಿ ಭಯಪಟ್ಟು ಕರ್ತನಲ್ಲಿ ಭರವಸವಿಡುವರು.
- Psalm 80:18 ಕೀರ್ತನೆಗಳು 80:18ಆಗ ನಾವು ನಿನ್ನಿಂದ ಹಿಂದಿರು ಗುವದಿಲ್ಲ; ನಮ್ಮನ್ನು ಬದುಕಿಸು, ಆಗ ನಿನ್ನ ಹೆಸರನ್ನು ಕರೆಯುವೆವು.ಸೈನ್ಯಗಳ ದೇವರಾದ ಓ ಕರ್ತನೇ, ಮತ್ತೆ ನಮ್ಮನ್ನು ತಿರುಗಿಸಿ ನಿನ್ನ ಮುಖವನ್ನು ಪ್ರಕಾಶಿಸ ಮಾಡು; ಆಗ ನಾವು ರಕ್ಷಿಸಲ್ಪಡುವೆವು.
- Psalm 119:25 ಕೀರ್ತನೆಗಳು 119:25ನನ್ನ ಪ್ರಾಣವು ಧೂಳಿಗೆ ಹತ್ತಿ ಕೊಳ್ಳುತ್ತದೆ; ನಿನ್ನ ವಾಕ್ಯದ ಪ್ರಕಾರ ನನ್ನನ್ನು ಉಜ್ಜೀ ವಿಸು.
- Jonah 2:6 ಯೋನ 2:6ಬೆಟ್ಟಗಳ ಬುಡದ ತನಕ ಇಳಿದು ಹೋದೆನು; ಭೂಮಿಯ ಅಡ್ಡದಂಡೆಗಳು ನಿತ್ಯವಾಗಿ ನನ್ನ ಸುತ್ತಲಿ ದ್ದವು; ಆದಾಗ್ಯೂ ಓ ದೇವರಾದ ನನ್ನ ಕರ್ತನೇ, ನೀನು ನನ್ನ ಪ್ರಾಣವನ್ನು ನಾಶನದೊಳಗಿಂದ ಎಬ್ಬಿಸಿದ್ದೀ.
- Psalm 88:6–18 ಕೀರ್ತನೆಗಳು 88:6–18ಕೆಳಗಿನ ಆಳವಾದ ಕುಣಿಯಲ್ಲಿಯೂ ಕತ್ತಲೆಯಲ್ಲಿಯೂ ಅಗಾಧಗಳಲ್ಲಿಯೂ ನನ್ನನ್ನು ಇಟ್ಟಿದ್ದಿ. ನಿನ್ನ ಕೋಪವು ನನ್ನ ಮೇಲೆ ನೆಲೆಯಾಗಿದೆ; ನಿನ್ನ ಅಲೆಗಳಿಂದೆಲ್ಲಾ ನನ್ನನ್ನು ಕುಂದಿ ಸಿದ್ದೀ ಸೆಲಾ. ನನ್ನ ಪರಿಚಿತರನ್ನು ನನಗೆ ದೂರಮಾಡಿದ್ದೀ; ನನ್ನನ್ನು ಅವ ರಿಗೆ ಅಸಹ್ಯ ಮಾಡಿದ್ದೀ; ಮುಚ್ಚಲ್ಪಟ್ಟಿದ್ದೇನೆ, ಹೊರಗೆ ಬರಲಾರೆನು. ಬಾಧೆಯ ದೆಸೆಯಿಂದ ನನ್ನ ಕಣ್ಣು ದುಃಖಿಸುತ್ತದೆ. ಕರ್ತನೇ, ದಿನವೆಲ್ಲಾ ನಿನ್ನನ್ನು ಕರೆಯು ತ್ತೇನೆ; ನಾನು ನಿನ್ನ ಕಡೆಗೆ ನನ್ನ ಕೈಗಳನ್ನು ಚಾಚುತ್ತೇನೆ. ಸತ್ತವರಿಗೆ ಅದ್ಭುತಗಳನ್ನು ತೋರಿಸುವಿಯೋ? ಸತ್ತವರು ಎದ್ದು ನಿನ್ನನ್ನು ಕೊಂಡಾಡುವರೋ? ಸೆಲಾ. ಸಮಾಧಿಯಲ್ಲಿ ನಿನ್ನ ಪ್ರೀತಿ ಕರುಣೆಯು ಇಲ್ಲವೆ ನಾಶನ ಸ್ಥಳದಲ್ಲಿ ನಿನ್ನ ನಂಬಿಗಸ್ತಿಕೆಯು ಸಾರಲ್ಪಡುವವೋ? ಕತ್ತಲೆಯಲ್ಲಿ ನಿನ್ನ ಅದ್ಭುತಗಳೂ ಮರೆ ಯುವ ದೇಶದಲ್ಲಿ ನಿನ್ನ ನೀತಿಯೂ ತಿಳಿಯಲ್ಪಡು ವದೋ? ಆದರೆ ನಾನು ಓ ಕರ್ತನೇ, ನಿನ್ನ ಕಡೆಗೆ ಮೊರೆಯಿಡುತ್ತೇನೆ. ಹೊತ್ತಾರೆ ನನ್ನ ಪ್ರಾರ್ಥ ನೆಯು ನಿನ್ನನ್ನು ಎದುರುಗೊಳ್ಳುವದು. ಕರ್ತನೇ,ಯಾಕೆ ನನ್ನ ಪ್ರಾಣವನ್ನು ತೊರೆದು ಬಿಡುತ್ತೀ?ಯಾಕೆ ನಿನ್ನ ಮುಖವನ್ನು ನನಗೆ ಮರೆಮಾಡುತ್ತೀ? ನಾನು ಕುಂದಿದವನೂ ಯೌವನದಾರಭ್ಯ ಸಾಯು ವದಕ್ಕೆ ಸಿದ್ಧನೂ ಆಗಿದ್ದೇನೆ. ನಿನ್ನ ಬೆದರಿಕೆಗಳನ್ನು ನಾನು ತಾಳುತ್ತಾ ಭ್ರಮೆಗೊಳ್ಳುತ್ತೇನೆ. ನನ್ನ ಮೇಲೆ ನಿನ್ನ ಕೋಪಾಗ್ನಿಯು ದಾಟುವದು. ನಿನ್ನ ಹೆದರಿಕೆಗಳು ನನ್ನನ್ನು ಸಂಹರಿಸುತ್ತವೆ. ನೀರಿನ ಹಾಗೆ ಅವು ಬಂದು ನನ್ನನ್ನು ದಿನವೆಲ್ಲಾ ಸುತ್ತಿಕೊಂಡಿವೆ; ಏಕವಾಗಿ ನನ್ನನ್ನು ಮುತ್ತಿಕೊಂಡಿವೆ.ಪ್ರಿಯನನ್ನೂ ಸ್ನೇಹಿತನನೂ ನನಗೆ ದೂರ ಮಾಡಿದ್ದೀ; ನನ್ನ ಕತ್ತಲೆಯ ಸ್ಥಳವೇ ನನ್ನ ಪರಿಚಿತರು. ಪ್ರಿಯನನ್ನೂ ಸ್ನೇಹಿತನನೂ ನನಗೆ ದೂರ ಮಾಡಿದ್ದೀ; ನನ್ನ ಕತ್ತಲೆಯ ಸ್ಥಳವೇ ನನ್ನ ಪರಿಚಿತರು.
- Psalm 16:10 ಕೀರ್ತನೆಗಳು 16:10ಯಾಕಂದರೆ ನೀನು ನನ್ನ ಆತ್ಮವನ್ನು ನರಕದಲ್ಲಿ ಬಿಟ್ಟುಬಿಡುವದಿಲ್ಲ; ನಿನ್ನ ಪರಿಶುದ್ಧನ ಕೊಳೆಯುವಿಕೆಯನ್ನು ನೋಡ ಗೊಡಿಸುವದಿಲ್ಲ.ಜೀವದ ಮಾರ್ಗವನ್ನು ನನಗೆ ತಿಳಿಸುವಿ; ನಿನ್ನ ಸಮ್ಮುಖದಲ್ಲಿ ಪರಿಪೂರ್ಣ ಸಂತೋಷ ವೂ ನಿನ್ನ ಬಲಗಡೆಯಲ್ಲಿ ಶಾಶ್ವತ ಭಾಗ್ಯವೂ ಇರುತ್ತವೆ.
- Isaiah 26:19 ಯೆಶಾಯ 26:19ಮೃತರಾದ ನಿನ್ನ ಜನರು ಬದುಕುವರು, ನನ್ನವರ ಹೆಣಗಳು ಏಳುವವು; ದೂಳಿನ ನಿವಾಸಿಗಳೇ; ಎಚ್ಚತ್ತು ಹರ್ಷ ಸ್ವರಗೈಯಿರಿ! ನೀನು ಸುರಿಯುವ ಇಬ್ಬನಿಯು ಇಬ್ಬನಿಯ ಸಸ್ಯಗಳಂತಿವೆ. ಭೂಮಿಯು ಸತ್ತವರನ್ನು ಹೊರಪಡಿಸುವದು.