Psalms · chapter 71 · verse 21
Psalm 71:21 in Kannada
ನೀನು ನನ್ನ ಗೌರವವನ್ನು ಹೆಚ್ಚಿಸಿ ಎಲ್ಲಾ ಕಡೆಯಿಂದಲೂ ನನ್ನನ್ನು ಆದರಿಸುವಿ.
Neenu nanna gauravavannu hechchisi ellaa kadeyindaloo nannannu aadarisuvi.
Psalm 71:21 in English
- King James Version (KJV)
- Thou shalt increase my greatness, and comfort me on every side.
- World English Bible (WEB)
- Increase my honor and comfort me again.
- American Standard Version (ASV)
- Increase thou my greatness, And turn again and comfort me.
- Bible in Basic English (BBE)
- You will make me greater than before, and give me comfort on every side.
- Darby Translation (DBY)
- Thou wilt increase my greatness, and comfort me on every side.
- Webster's Bible (WBS)
- Thou wilt increase my greatness, and comfort me on every side.
- Young's Literal Translation (YLT)
- Thou dost increase my greatness, And Thou surroundest — Thou comfortest me,
Read in context
- 19ಓ ದೇವರೇ, ಮಹತ್ಕಾರ್ಯಗಳನ್ನು ಮಾಡಿದ ನಿನ್ನ ನೀತಿಯು ಬಹಳ ಉನ್ನತವಾಗಿದೆ. ಓ ದೇವರೇ, ನಿನ್ನ ಹಾಗೆ ಯಾರಿದ್ದಾರೆ!
- 20ಕಠಿಣವಾದ ಇಕ್ಕಟ್ಟುಗಳನ್ನು ನೋಡಮಾಡಿದ ನನ್ನನ್ನು ನೀನು ತಿರಿಗಿ ಬದುಕಿಸಿದಿ; ಭೂಮಿಯ ಆಗಾಧ ಗಳೊಳಗಿಂದ ನನ್ನನ್ನು ಮೇಲಕ್ಕೆ ತರುತ್ತೀ.
- 21ನೀನು ನನ್ನ ಗೌರವವನ್ನು ಹೆಚ್ಚಿಸಿ ಎಲ್ಲಾ ಕಡೆಯಿಂದಲೂ ನನ್ನನ್ನು ಆದರಿಸುವಿ.
- 22ಓ ನನ್ನ ದೇವರೇ, ನಾನು ಸಹ ನಿನ್ನನ್ನೂ ನಿನ್ನ ಸತ್ಯವನ್ನೂ ವೀಣೆಯಿಂದ ಕೊಂಡಾಡುವೆನು; ಓ ಇಸ್ರಾಯೇಲಿನ ಪರಿಶುದ್ದನೇ, ಕಿನ್ನರಿಯಿಂದ ನಿನ್ನನ್ನು ಕೀರ್ತಿಸುವೆನು.
- 23ನಾನು ನಿನ್ನನ್ನು ಕೀರ್ತಿಸುವಾಗ ನನ್ನ ತುಟಿಗಳೂ ನೀನು ವಿಮೋಚಿಸಿದ ನನ್ನ ಪ್ರಾಣವೂ ಉತ್ಸಾಹ ಧ್ವನಿಗೈಯುವವು.ನನ್ನ ನಾಲಿಗೆಯು ಸಹ ದಿನವೆಲ್ಲಾ ನಿನ್ನ ನೀತಿಯನ್ನು ಮಾತನಾಡುವದು; ನನಗೆ ಕೇಡನ್ನು ಹುಡುಕುವವರು ನಾಚಿಕೊಂಡು ಲಜ್ಜೆಪಡುತ್ತಾರೆ.
Cross references
- 2 Samuel 3:1 2 ಸಮುವೇಲನು 3:1ಸೌಲನ ಮನೆಗೂ ದಾವೀದನ ಮನೆಗೂ ಬಹು ದಿವಸಗಳು ಯುದ್ಧವುನಡೆಯಿತು. ದಾವೀದನು ಬಲವಾಗುತ್ತಾ ಬಂದನು. ಸೌಲನ ಮನೆ ಯವರು ಬಲಹೀನರಾಗುತ್ತಾ ಹೋದರು.
- Psalm 86:17 ಕೀರ್ತನೆಗಳು 86:17ಒಳ್ಳೇದಕ್ಕಾಗಿ ನನಗೆ ಒಂದು ಗುರುತು ಕೊಡು; ಆಗ ನನ್ನ ಹಗೆಮಾಡುವವರು ನೋಡಿ, ನಾಚಿಕೆಪಡುವರು; ಕರ್ತನೇ, ನೀನು ನನಗೆ ಸಹಾಯ ಮಾಡಿ ನನ್ನನ್ನು ಆದರಿಸಿದ್ದೀ.
- 2 Corinthians 1:4–5 2 ಕೊರಿಂಥದವರಿಗೆ 1:4–5ನಮಗೆ ಸಂಭವಿಸುವ ಎಲ್ಲಾ ಸಂಕಟಗಳಲಿನಮಗೆ ಸಂಭವಿಸುವ ಎಲ್ಲಾ ಸಂಕಟಗಳಲಿ ಆತನು ನಮ್ಮನ್ನು ಸಂತೈಸುತ್ತಾನೆ; ಹೀಗೆ ದೇವರಿಂದ ನಮಗಾಗುವ ಆದರಣೆಯ ಮೂಲಕ ನಾವು ನಾನಾ ವಿಧವಾದ ಸಂಕಟಗಳಲ್ಲಿ ಇರುವವರನ್ನು ಸಂತೈಸು ವದಕ್ಕೆ ಶಕ್ತರಾಗುತ್ತೇವೆ. ಕ್ರಿಸ್ತನ ನಿಮಿತ್ತ ನಮಗೆ ಬಾಧೆಗಳು ಹೇಗೆ ಹೇರಳವಾಗಿ ಉಂಟಾಗುತ್ತವೆಯೋ ಹಾಗೆಯೇ ಆದರಣೆಯೂ ಕೂಡ ಕ್ರಿಸ್ತನ ಮೂಲಕ ಹೇರಳವಾಗಿ ಉಂಟಾಗುತ್ತದೆ.
- Psalm 18:35 ಕೀರ್ತನೆಗಳು 18:35ನಿನ್ನ ರಕ್ಷಣೆಯ ಗುರಾಣಿಯನ್ನು ಸಹ ನನಗೆ ನೀನು ಕೊಟ್ಟಿದ್ದೀ; ನಿನ್ನ ಬಲಗೈ ನನ್ನನ್ನು ಹಿಡಿದಿದೆ. ನಿನ್ನ ಸಾತ್ವಿಕತ್ವವು ನನ್ನನ್ನು ಹೆಚ್ಚಿಸಿಯದೆ.
- Isaiah 12:1 ಯೆಶಾಯ 12:1ಆ ದಿನದಲ್ಲಿ ನೀನು ಹೇಳುವದೇನಂದರೆ --ಓ ಕರ್ತನೇ, ನಿನ್ನನ್ನು ಸ್ತುತಿಸು ವೆನು; ನನ್ನ ಮೇಲೆ ನೀನು ಕೋಪಿಸಿದ್ದಾಗ್ಯೂ ನಿನ್ನ ಕೋಪದಿಂದ ತಿರುಗಿಕೊಂಡು ನನ್ನನ್ನು ಆದರಿಸಿದ್ದೀ.
- Psalm 32:10 ಕೀರ್ತನೆಗಳು 32:10ದುಷ್ಟರಿಗೆ ವ್ಯಥೆಗಳು ಬಹಳ; ಆದರೆ ಕರ್ತನಲ್ಲಿ ಭರವಸವಿಡುವವನನ್ನು ಕರುಣೆಯು ಸುತ್ತಿಕೊಳ್ಳು ವದು.ನೀತಿವಂತರೇ, ಕರ್ತನಲ್ಲಿ ಸಂತೋಷಿಸಿರಿ, ಉಲ್ಲಾಸಪಡಿರಿ; ಯಥಾರ್ಥ ಹೃದಯಉಳ್ಳವರೇ, ಉತ್ಸಾಹ ಧ್ವನಿಮಾಡಿರಿ.
- Isaiah 49:13 ಯೆಶಾಯ 49:13ಆಕಾಶವೇ, ಹರ್ಷಿಸು; ಭೂಮಿಯೇ, ಉಲ್ಲಾಸಪಡು! ಪರ್ವತ ಗಳೇ ಹರ್ಷಧ್ವನಿಗೈಯಿರಿ. ಯಾಕಂದರೆ ಕರ್ತನು ತನ್ನ ಜನರನ್ನು ಆದರಿಸಿ, ಶ್ರಮೆಪಟ್ಟ ತನ್ನವರನ್ನು ಕರುಣಿಸುವನು.
- Isaiah 49:6 ಯೆಶಾಯ 49:6ಆತನೇ ಈಗ ಹೀಗನ್ನುತ್ತಾನೆ--ನೀನು ನನ್ನ ಸೇವಕನಾಗಿ ಮಾಡಬೇಕಾದವುಗಳಲ್ಲಿ ಯಾಕೋಬನ ಕುಲಗಳನ್ನು ಉನ್ನತಪಡಿ ಸುವದೂ ಇಸ್ರಾಯೇಲಿನಲ್ಲಿ ರಕ್ಷಿತರಾದವರನ್ನು ತಿರಿಗಿ ಬರಮಾಡುವದೂ ಅಲ್ಪ ಕಾರ್ಯವೇ; ನನ್ನ ರಕ್ಷಣೆಯು ಲೋಕದ ಕಟ್ಟಕಡೆಯ ವರೆಗೆ ವ್ಯಾಪಿಸುವಂತೆ ನಿನ್ನನ್ನು ಅನ್ಯಜನಾಂಗಗಳಿಗೆ ಬೆಳಕನ್ನಾಗಿ ದಯಪಾಲಿಸುವೆನು.
- Psalm 23:4 ಕೀರ್ತನೆಗಳು 23:4ಹೌದು, ನಾನು ಮರಣದ ನೆರಳಿನ ಕಣಿವೆಯಲ್ಲಿ ನಡೆದರೂ ಕೇಡಿಗೆ ಭಯಪಡೆನು; ಯಾಕಂದರೆ ನೀನು ನನ್ನ ಸಂಗಡ ಇದ್ದೀ; ನಿನ್ನ ಕೋಲೂ ದೊಣ್ಣೆಯೂ ನನ್ನನ್ನು ಆದರಿಸುತ್ತವೆ.
- Isaiah 9:7 ಯೆಶಾಯ 9:7ಅದನ್ನು ನೇಮಿಸುವದಕ್ಕೂ ಇಂದಿನಿಂದ ಎಂದೆಂದಿಗೂ ನೀತಿ ನ್ಯಾಯಗಳೊಂದಿಗೆ ಅದನ್ನು ಸ್ಥಾಪಿಸುವದಕ್ಕೂ ದಾವೀದನ ಸಿಂಹಾಸನ ಕ್ಕಾಗಲಿ ಅವನ ರಾಜ್ಯಕ್ಕಾಗಲಿ ಅವನ ಪರಿಪಾಲ ನೆಯ ಮತ್ತು ಶಾಂತಿಯ ಅಭಿವೃದ್ಧಿಗಾಗಲಿ ಅಂತ್ಯವೇ ಇಲ್ಲ; ಸೈನ್ಯಗಳ ಕರ್ತನ ಆಸಕ್ತಿಯು ಇದನ್ನು ನೆರವೇರಿ ಸುವದು.
- Psalm 72:11 ಕೀರ್ತನೆಗಳು 72:11ಹೌದು, ಎಲ್ಲಾ ಅರಸರು ಆತನ ಮುಂದೆ ಅಡ್ಡ ಬೀಳುವರು; ಎಲ್ಲಾ ಜನಾಂಗಗಳು ಆತನನ್ನು ಸೇವಿಸುವವು.
- 2 Corinthians 2:14 2 ಕೊರಿಂಥದವರಿಗೆ 2:14ಕ್ರಿಸ್ತನಲ್ಲಿ ನಮ್ಮನ್ನು ಯಾವಾಗಲೂ ಜಯೋತ್ಸವ ದೊಡನೆ ಮೆರಸುತ್ತಾ ಆತನ ವಿಷಯವಾದ ಜ್ಞಾನ ವೆಂಬ ಸುವಾಸನೆಯನ್ನು ನಮ್ಮ ಮೂಲಕ ಎಲ್ಲಾ ಸ್ಥಳಗಳಲ್ಲಿ ವ್ಯಾಪನಗೊಳಿಸುತ್ತಾ ಬರುವ ದೇವರಿಗೆ ಸ್ತೋತ್ರ;