Psalms · chapter 71 · verse 4
Psalm 71:4 in Kannada
ಓ ನನ್ನ ದೇವರೇ, ದುಷ್ಟನ ಕೈಗೂ ಅನ್ಯಾಯ ಮಾಡುವ ಕ್ರೂರನ ಕೈಗೂ ನನ್ನನ್ನು ತಪ್ಪಿಸು.
O nanna devare, dushtana kaigoo anyaaya maaduva kroorana kaigoo nannannu tappisu.
Psalm 71:4 in English
- King James Version (KJV)
- Deliver me, O my God, out of the hand of the wicked, out of the hand of the unrighteous and cruel man.
- World English Bible (WEB)
- Rescue me, my God, from the hand of the wicked, from the hand of the unrighteous and cruel man.
- American Standard Version (ASV)
- Rescue me, O my God, out of the hand of the wicked, Out of the hand of the unrighteous and cruel man.
- Bible in Basic English (BBE)
- O my God, take me out of the hand of the sinner, out of the hand of the evil and cruel man.
- Darby Translation (DBY)
- My God, rescue me out of the hand of the wicked, out of the hand of the unrighteous and cruel man.
- Webster's Bible (WBS)
- Deliver me, O my God, from the hand of the wicked, from the hand of the unrighteous and cruel man.
- Young's Literal Translation (YLT)
- O my God, cause me to escape From the hand of the wicked, From the hand of the perverse and violent.
Read in context
- 2ನಿನ್ನ ನೀತಿಯಲ್ಲಿ ನನ್ನನ್ನು ಬಿಡಿಸಿ ನನ್ನನ್ನು ತಪ್ಪಿಸು; ನಿನ್ನ ಕಿವಿಯನ್ನು ನನ್ನ ಕಡೆಗೆ ತಿರುಗಿಸಿ ನನ್ನನ್ನು ರಕ್ಷಿಸು.
- 3ನೀನು ಯಾವಾಗಲೂ ನಾನು ಆಶ್ರಯಿಸಿಕೊಳ್ಳುವ ಬಲಸ್ಥಾನವಾಗಿರು. ನನ್ನನ್ನು ರಕ್ಷಿಸುವದಕ್ಕೆ ಆಜ್ಞಾಪಿಸಿದ್ದೀ, ನನ್ನ ಬಂಡೆಯೂ ಕೋಟೆಯೂ ನೀನೇ.
- 4ಓ ನನ್ನ ದೇವರೇ, ದುಷ್ಟನ ಕೈಗೂ ಅನ್ಯಾಯ ಮಾಡುವ ಕ್ರೂರನ ಕೈಗೂ ನನ್ನನ್ನು ತಪ್ಪಿಸು.
- 5ಓ ಕರ್ತನಾದ ದೇವರೇ, ನೀನು ನನ್ನ ನಿರೀಕ್ಷೆಯೂ ನನ್ನ ಯೌವನದಿಂದ ನನ್ನ ಭರವಸವೂ ಆಗಿದ್ದೀ.
- 6ಗರ್ಭದಿಂದಲೇ ನಿನ್ನ ಮೇಲೆ ಆತುಕೊಂಡಿದ್ದೇನೆ; ತಾಯಿಯ ಗರ್ಭದಿಂದ ನೀನು ನನ್ನನ್ನು ಹೊರಗೆ ತಂದಿದ್ದಿ. ಯಾವಾಗಲೂ ನಿನ್ನಲ್ಲಿ ನನ್ನ ಸ್ತೋತ್ರವು ಇರುವದು.
Cross references
- Psalm 59:1–2 ಕೀರ್ತನೆಗಳು 59:1–2ಓ ನನ್ನ ದೇವರೇ, ನನ್ನ ಶತ್ರುಗಳಿಂದ ನನ್ನನ್ನು ಬಿಡಿಸು; ನನಗೆ ವಿರೋಧವಾಗಿ ಎದ್ದವರಿಂದ ನನ್ನನ್ನು ರಕ್ಷಿಸು. ಅಪರಾಧ ಮಾಡುವವರಿಂದ ನನ್ನನ್ನು ಬಿಡಿಸು; ಕೊಲೆಪಾತಕರಿಂದ ನನ್ನನ್ನು ರಕ್ಷಿಸು.
- Psalm 140:1–4 ಕೀರ್ತನೆಗಳು 140:1–4ಓ ಕರ್ತನೇ, ಕೆಡುಕರಿಂದ ನನ್ನನ್ನು ಬಿಡಿಸು; ಬಲಾತ್ಕಾರಿಗಳಿಂದ ತಪ್ಪಿಸಿ ನನ್ನನ್ನು ಕಾಪಾಡು. ಅವರು ಹೃದಯದಲ್ಲಿ ಕೇಡು ಗಳನ್ನು ಕಲ್ಪಿಸುತ್ತಾರೆ; ಅವರು ತಪ್ಪದೆ ಯುದ್ಧಕ್ಕೆ ಕೂಡಿಕೊಳ್ಳುತ್ತಾರೆ. ತಮ್ಮ ನಾಲಿಗೆಗಳನ್ನು ಹಾವಿನ ಹಾಗೆ ಅವರು ಹದಮಾಡುತ್ತಾರೆ; ಸರ್ಪಗಳ ವಿಷವು ಅವರ ತುಟಿಗಳ ಕೆಳಗಿದೆ ಸೆಲಾ. ಓ ಕರ್ತನೇ, ದುಷ್ಟನ ಕೈಗಳಿಗೆ ನನ್ನನ್ನು ತಪ್ಪಿಸಿ ಕಾಪಾಡು; ಬಲಾತ್ಕಾರಿಯಿಂದ ನನ್ನನ್ನು ತಪ್ಪಿಸಿ ಕಾಯಿ; ನಾನು ಎಡವಿ ಬೀಳಬೇಕೆಂದು ಯೋಚಿಸುತ್ತಾರೆ.
- 2 Samuel 17:1–2 2 ಸಮುವೇಲನು 17:1–2ಇದಲ್ಲದೆ ಅಹೀತೋಫೆಲನು ಅಬ್ಷಾ ಲೋಮನಿಗೆ--ಅಪ್ಪಣೆಯಾದರೆ ನಾನು ಹನ್ನೆರಡು ಸಾವಿರ ಜನರನ್ನು ಆದುಕೊಳ್ಳುವೆನು. ಅವನು ದಣಿದವನೂ ಧೈರ್ಯಗುಂದಿದವನೂ ಆಗಿ ರುವಾಗಲೇ ಫಕ್ಕನೆ ಅವನ ಮೇಲೆ ಬಿದ್ದು ಅವನನ್ನು ಬೆದರಿಸುವೆನು, ಅವನ ಜನರೆಲ್ಲರೂ ಓಡಿಹೋಗು ವರು.
- Psalm 17:13 ಕೀರ್ತನೆಗಳು 17:13ಓ ಕರ್ತನೇ, ಎದ್ದು ಅವನನ್ನು ನಿರಾಶೆಗೊಳಿಸಿ ಕೆಡವಿಬಿಡು. ದುಷ್ಟರ ಕೈಯೊಳಗಿಂದ ನಿನ್ನ ಕತ್ತಿಯ ಮೂಲಕ ನನ್ನನ್ನು ರಕ್ಷಿಸು.
- Psalm 17:8–9 ಕೀರ್ತನೆಗಳು 17:8–9ಕಣ್ಣುಗುಡ್ಡಿನ ಹಾಗೆ ನನ್ನನ್ನು ಕಾಪಾಡು. ನಿನ್ನ ರೆಕ್ಕೆ ಗಳ ನೆರಳಿನಲ್ಲಿ ನನ್ನನ್ನು ಮರೆಮಾಡು, ನನ್ನನ್ನು ಬಾಧಿ ಸುವ ದುಷ್ಟರಿಗೂ ನನ್ನನ್ನು ಸುತ್ತಿಕೊಳ್ಳುವ ಪ್ರಾಣ ಶತ್ರುಗಳಿಗೂ ಸಿಕ್ಕದಂತೆ ತಪ್ಪಿಸುವಿ.
- 2 Samuel 17:21 2 ಸಮುವೇಲನು 17:21ಆದರೆ ಇವರು ಹೋದ ತರುವಾಯ ಅವರು ಬಾವಿಯೊಳಗಿಂದ ಏರಿ ಹೋಗಿ ಅರಸನಾದ ದಾವೀದನಿಗೆ--ನೀನು ಶೀಘ್ರ ವಾಗಿ ಎದ್ದು ಹೊಳೆ ದಾಟಿಹೋಗು; ಯಾಕಂದರೆ ಈ ಪ್ರಕಾರ ಅಹೀತೋಫೆಲನು ನಿನಗೆ ವಿರೋಧ ವಾಗಿ ಆಲೋಚನೆ ಹೇಳಿದನು ಅಂದರು.
- 2 Samuel 16:21–22 2 ಸಮುವೇಲನು 16:21–22ಅಹೀತೋಫೆಲನು ಅಬ್ಷಾಲೋಮನಿಗೆ--ನಿನ್ನ ತಂದೆಯು ಮನೆಗೆ ಕಾವಲಿಟ್ಟ ಉಪಪತ್ನಿಗಳೊಡನೆ ಸಂಗಮಿಸು; ಆಗ ನಿನ್ನ ತಂದೆ ಯಿಂದ ನೀನು ಹಗೆಮಾಡಲ್ಪಟ್ಟವನೆಂದು ಎಲ್ಲಾ ಇಸ್ರಾ ಯೇಲ್ಯರು ಕೇಳಿ ನಿನ್ನ ಸಂಗಡ ಇರುವ ಎಲ್ಲಾ ಜನರ ಕೈಗಳೂ ಬಲವಾಗಿರುವವು ಅಂದನು. ಹಾಗೆಯೇ ಅವರು ಅಬ್ಷಾಲೋಮನಿಗೋಸ್ಕರ ಮನೆಯ ಮೇಲೆ ಡೇರೆ ಹಾಕಿದರು; ಅಲ್ಲಿ ಅಬ್ಷಾಲೋಮನು ಎಲ್ಲಾ ಇಸ್ರಾಯೇಲ್ಯರ ಕಣ್ಣುಗಳ ಮುಂದೆ ತನ್ನ ತಂದೆಯ ಉಪಪತ್ನಿಗಳನ್ನು ಕೂಡಿದನು.ಆ ದಿವಸಗಳಲ್ಲಿ ಅಹೀತೋಫೆಲನು ಆಲೋಚಿಸಿದ ಆಲೋಚನೆಯು ಒಬ್ಬನು ದೈವೋಕ್ತಿಗಳನ್ನು ವಿಚಾರಿಸುವ ಹಾಗೆ ಇತ್ತು. ಅಹೀತೋಫೆಲನ ಆಲೋಚನೆಯೆಲ್ಲಾ ದಾವೀದನಿಗೂ ಅಬ್ಷಾಲೋಮನಿಗೂ ಹಾಗೆಯೇ ಇತ್ತು.
- 2 Samuel 17:12–14 2 ಸಮುವೇಲನು 17:12–14ಆಗ ನಾವು ಅವನನ್ನು ಕಂಡು ಕೊಳ್ಳುವ ಸ್ಥಳದಲ್ಲಿ ಅವನ ಮೇಲೆ ಬಂದು ಭೂಮಿಯ ಮೇಲೆ ಮಂಜು ಬೀಳುವ ಹಾಗೆ ಅವನ ಮೇಲೆ ಬೀಳುವೆವು. ಅವನೂ ಅವನ ಸಂಗಡವಿರುವ ಎಲ್ಲಾ ಜನರಲ್ಲಿ ಒಬ್ಬನಾದರೂ ಉಳಿಯುವದಿಲ್ಲ. ಅವನು ಒಂದು ವೇಳೆ ಒಂದು ಪಟ್ಟಣದಲ್ಲಿ ಹೊಕ್ಕರೆ ಇಸ್ರಾಯೇಲ್ಯರೆಲ್ಲರು ಆ ಪಟ್ಟಣಕ್ಕೆ ಹಗ್ಗಗಳನ್ನು ತಂದು ಹಾಕಿದ ತರುವಾಯ ನಾವು ಒಂದು ಹರಳಾದರೂ ಅಲ್ಲಿ ಕಾಣದ ಹಾಗೆ ಅದನ್ನು ನದಿಗೆ ಎಳೆದು ಹಾಕುವೆವು ಅಂದನು. ಆಗ ಅಬ್ಷಾ ಲೋಮನೂ ಇಸ್ರಾಯೇಲಿನ ಎಲ್ಲಾ ಜನರೂಅಹೀತೋಫೆಲನ ಆಲೋಚನೆಗಿಂತ ಅರ್ಕೀಯನಾದ ಹೂಷೈಯ ಆಲೋಚನೆ ಒಳ್ಳೇದು ಅಂದರು. ತಾನು ಅಬ್ಷಾಲೋಮನ ಮೇಲೆ ಕೇಡನ್ನು ಬರಮಾಡುವ ಹಾಗೆ ಅಹೀತೋಫೆಲನ ಒಳ್ಳೇ ಆಲೋಚನೆಯನ್ನು ವ್ಯರ್ಥಮಾಡುವದಕ್ಕೆ ಕರ್ತನು ನೇಮಿಸಿದ್ದನು.