Psalms · chapter 71 · verse 5
Psalm 71:5 in Kannada
ಓ ಕರ್ತನಾದ ದೇವರೇ, ನೀನು ನನ್ನ ನಿರೀಕ್ಷೆಯೂ ನನ್ನ ಯೌವನದಿಂದ ನನ್ನ ಭರವಸವೂ ಆಗಿದ್ದೀ.
O kartanaada devare, neenu nanna nireeksheyoo nanna yauvanadinda nanna bharavasavoo aagiddee.
Psalm 71:5 in English
- King James Version (KJV)
- For thou [art] my hope, O Lord GOD: [thou art] my trust from my youth.
- World English Bible (WEB)
- For you are my hope, Lord GOD, my confidence from my youth.
- American Standard Version (ASV)
- For thou art my hope, O Lord Jehovah: [Thou art] my trust from my youth.
- Bible in Basic English (BBE)
- For you are my hope, O Lord God; I have had faith in you from the time when I was young.
- Darby Translation (DBY)
- For thou art my hope, O Lord Jehovah, my confidence from my youth.
- Webster's Bible (WBS)
- For thou [art] my hope, O LORD God: [thou art] my trust from my youth.
- Young's Literal Translation (YLT)
- For Thou [art] my hope, O Lord Jehovah, My trust from my youth.
Read in context
- 3ನೀನು ಯಾವಾಗಲೂ ನಾನು ಆಶ್ರಯಿಸಿಕೊಳ್ಳುವ ಬಲಸ್ಥಾನವಾಗಿರು. ನನ್ನನ್ನು ರಕ್ಷಿಸುವದಕ್ಕೆ ಆಜ್ಞಾಪಿಸಿದ್ದೀ, ನನ್ನ ಬಂಡೆಯೂ ಕೋಟೆಯೂ ನೀನೇ.
- 4ಓ ನನ್ನ ದೇವರೇ, ದುಷ್ಟನ ಕೈಗೂ ಅನ್ಯಾಯ ಮಾಡುವ ಕ್ರೂರನ ಕೈಗೂ ನನ್ನನ್ನು ತಪ್ಪಿಸು.
- 5ಓ ಕರ್ತನಾದ ದೇವರೇ, ನೀನು ನನ್ನ ನಿರೀಕ್ಷೆಯೂ ನನ್ನ ಯೌವನದಿಂದ ನನ್ನ ಭರವಸವೂ ಆಗಿದ್ದೀ.
- 6ಗರ್ಭದಿಂದಲೇ ನಿನ್ನ ಮೇಲೆ ಆತುಕೊಂಡಿದ್ದೇನೆ; ತಾಯಿಯ ಗರ್ಭದಿಂದ ನೀನು ನನ್ನನ್ನು ಹೊರಗೆ ತಂದಿದ್ದಿ. ಯಾವಾಗಲೂ ನಿನ್ನಲ್ಲಿ ನನ್ನ ಸ್ತೋತ್ರವು ಇರುವದು.
- 7ಅನೇಕರಿಗೆ ನಾನು ಆಶ್ಚರ್ಯದಂತಿದ್ದೇನೆ. ಆದರೆ ನೀನು ನನ್ನ ಬಲವಾದ ಆಶ್ರಯವಾಗಿದ್ದೀ.
Cross references
- Jeremiah 17:7 ಯೆರೆಮೀಯ 17:7ಯಾವನು ಕರ್ತನಲ್ಲಿ ಭರವಸವಿಟ್ಟಿರುವನೋ ಯಾವನಿಗೆ ಕರ್ತನು ನಿರೀಕ್ಷೆ ಯಾಗಿದ್ದಾನೋ ಆ ಮನುಷ್ಯನು ಧನ್ಯನು.
- Psalm 39:7 ಕೀರ್ತನೆಗಳು 39:7ಹೀಗಿರಲಾಗಿ ಕರ್ತನೇ, ನಾನು ಇನ್ನು ಯಾವದಕ್ಕೆ ಕಾದುಕೊಳ್ಳಲಿ? ನನ್ನ ನಿರೀಕ್ಷೆ ನಿನ್ನಲ್ಲಿ ಅದೆ.
- Psalm 119:81 ಕೀರ್ತನೆಗಳು 119:81ನನ್ನ ಪ್ರಾಣವು ನಿನ್ನ ರಕ್ಷಣೆಗಾಗಿ ಕುಗ್ಗಿ ಹೋಗುತ್ತದೆ; ನಿನ್ನ ವಾಕ್ಯದಲ್ಲಿ ನಿರೀಕ್ಷೆ ಇಟ್ಟಿದ್ದೇನೆ.
- Psalm 71:17 ಕೀರ್ತನೆಗಳು 71:17ಓ ದೇವರೇ, ನನ್ನ ಯೌವನದಿಂದ ನನಗೆ ನೀನು ಕಲಿಸಿದ್ದೀ; ಈ ವರೆಗೂ ನಿನ್ನ ಅದ್ಭುತ ಕಾರ್ಯಗಳನ್ನು ತಿಳಿಸುವೆನು.
- Psalm 119:166 ಕೀರ್ತನೆಗಳು 119:166ಕರ್ತನೇ, ನಿನ್ನ ರಕ್ಷಣೆಗೆ ಕಾದುಕೊಂಡಿದ್ದೇನೆ; ನಿನ್ನ ಆಜ್ಞೆಗಳನ್ನು ನಡಿಸಿದ್ದೇನೆ.
- 1 Samuel 17:45–47 1 ಸಮುವೇಲನು 17:45–47ಆಗ ದಾವೀದನು ಫಿಲಿಷ್ಟಿಯನಿಗೆ--ನೀನು ಕತ್ತಿ ಈಟಿಯ ಗುರಾಣಿಯ ಸಂಗಡ ನನ್ನ ಬಳಿಗೆ ಬರುತ್ತೀ; ಆದರೆ ನೀನು ನಿಂದಿಸಿದ ಇಸ್ರಾಯೇ ಲಿನ ಸೈನ್ಯಗಳ ದೇವರಾದಂಥ ಸೈನ್ಯಗಳ ಕರ್ತನ ಹೆಸರಿ ನಲ್ಲಿ ನಾನು ನಿನ್ನ ಬಳಿಗೆ ಬರುತ್ತೇನೆ. ಕರ್ತನು ನಿನ್ನನ್ನು ನನ್ನ ಕೈಯಲ್ಲಿ ಒಪ್ಪಿಸಿಕೊಡುವನು; ನಾನು ನಿನ್ನನ್ನು ಹೊಡೆದುಬಿಟ್ಟು ನಿನ್ನ ತಲೆಯನ್ನು ತೆಗೆದು ಫಿಲಿಷ್ಟಿಯರ ದಂಡಿನ ಹೆಣಗಳನ್ನು ಈ ದಿನ ಆಕಾಶದ ಪಕ್ಷಿಗಳಿಗೂ ಅಡವಿಯ ಮೃಗಗಳಿಗೂ ಆಹಾರವಾಗಿ ಕೊಡುವೆನು. ಈ ದಿನ ಇಸ್ರಾಯೇಲ್ಯರೊಳಗೆ ದೇವರು ಇದ್ದಾನೆಂದು ಭೂಲೋಕದವರೆಲ್ಲರೂ ತಿಳಿ ಯುವರು. ಕರ್ತನು ಕತ್ತಿಯಿಂದಲೂ ಈಟಿಯಿಂದಲೂ ರಕ್ಷಿಸುವದಿಲ್ಲ ಎಂದು ಈ ಸಭೆಯೆಲ್ಲಾ ತಿಳಿದುಕೊಳ್ಳು ವದು; ಯಾಕಂದರೆ ಯುದ್ಧವು ಕರ್ತನದು; ಆತನು ನಿಮ್ಮನ್ನು ನಮ್ಮ ಕೈಯಲ್ಲಿ ಒಪ್ಪಿಸಿಕೊಡುವನು ಅಂದನು.
- Jeremiah 17:17 ಯೆರೆಮೀಯ 17:17ನೀನು ನನಗೆ ಭಯಾಸ್ಪದವಾಗಬೇಡ; ಕೆಟ್ಟ ದಿನದಲ್ಲಿ ನೀನೇ ನನ್ನ ನಿರೀಕ್ಷೆಯು.
- Psalm 22:9–10 ಕೀರ್ತನೆಗಳು 22:9–10ಆದರೆ ನೀನು ಗರ್ಭದಿಂದ ನನ್ನನ್ನು ತೆಗೆದಿ; ನನ್ನ ತಾಯಿಯ ಎದೆಯಲ್ಲಿದ್ದಾಗ ನಾನು ನಿರೀಕ್ಷಿಸುವಂತೆ ಮಾಡಿದಿ. ಹುಟ್ಟಿದಂದಿನಿಂದ ನೀನೇ ನನಗೆ ಆಧಾರ; ನನ್ನ ತಾಯಿಯ ಹೊಟ್ಟೆಯಿಂದ ನನ್ನನ್ನು ಬರಮಾಡಿದ ನನ್ನ ದೇವರು ನೀನೇ ಆಗಿದ್ದೀ.
- Romans 15:13 ರೋಮಾಪುರದವರಿಗೆ 15:13ನಿರೀಕ್ಷೆಗೆ ಆಧಾರನಾದ ದೇವರು ಪವಿತ್ರಾತ್ಮನ ಬಲದಿಂದ ನೀವು ನಿರೀಕ್ಷೆಯಲ್ಲಿ ಅಭಿವೃದ್ಧಿ ಹೊಂದು ವಂತೆ ನಂಬಿಕೆಯಿಂದುಂಟಾದ ಸಂತೋಷ ಸಮಾಧಾನಗಳಿಂದ ನಿಮ್ಮನ್ನು ತುಂಬಿಸಲಿ.
- Jeremiah 14:8 ಯೆರೆಮೀಯ 14:8ಓ ಇಸ್ರಾಯೇಲಿನ ನಿರೀಕ್ಷಣೆಯೇ, ಇಕ್ಕಟ್ಟಿನ ಕಾಲದಲ್ಲಿ ಅವನನ್ನು ರಕ್ಷಿಸುವಾತನೇ, ನೀನು ಯಾಕೆ ದೇಶದಲಿ ಅನ್ಯನ ಹಾಗೆಯೂ ರಾತ್ರಿ ಕಳೆಯುವದಕ್ಕೆ ಇಳು ಕೊಳ್ಳುವ ಪ್ರಯಾಣಸ್ಥನ ಹಾಗೆಯೂ ಇರಬೇಕು?
- Jeremiah 17:13 ಯೆರೆಮೀಯ 17:13ಇಸ್ರಾಯೇಲಿನ ನಿರೀಕ್ಷೆಯಾದ ಓ ಕರ್ತನೇ, ನಿನ್ನನ್ನು ತೊರೆದು ಬಿಟ್ಟವರೆಲ್ಲರು ನಾಚಿಕೆಗೆ ಒಳಗಾಗುವರು, ಜೀವವುಳ್ಳ ನೀರಿನ ಬುಗ್ಗೆಯಾದ ಕರ್ತನಿಂದ ತೊಲಗಿ ಹೋದವರು ದೂಳಿನಲ್ಲಿ ಬರೆಯಲ್ಪಡುವರು.
- 2 Timothy 3:15 2 ತಿಮೊಥೆಯನಿಗೆ 3:15ಚಿಕ್ಕಂದಿನಿಂದಲೂ ನೀನು ಪರಿಶುದ ಬರಹಗಳನ್ನು ತಿಳಿದವನಾಗಿದ್ದೀಯಲ್ಲಾ; ಆ ಬರಹಗಳು ಕ್ರಿಸ್ತ ಯೇಸುವಿನಲ್ಲಿರುವ ನಂಬಿಕೆಯ ಮೂಲಕ ರಕ್ಷಣೆ ಹೊಂದಿಸುವ ಜ್ಞಾನವನ್ನು ಕೊಡುವದಕ್ಕೆ ಶಕ್ತವಾಗಿವೆ.