Psalms · chapter 71 · verse 9
Psalm 71:9 in Kannada
ನನ್ನ ಮುಪ್ಪಿನ ಕಾಲದಲ್ಲಿ ನನ್ನನ್ನು ತಳ್ಳಿಬಿಡಬೇಡ. ನನ್ನ ಶಕ್ತಿಯು ಕುಂದಿಹೋಗುವಾಗ ನನ್ನನ್ನು ಕೈಬಿಡ ಬೇಡ.
Nanna muppina kaaladalli nannannu tallibidabeda. Nanna shaktiyu kundihoguvaaga nannannu kaibida beda.
Psalm 71:9 in English
- King James Version (KJV)
- Cast me not off in the time of old age; forsake me not when my strength faileth.
- World English Bible (WEB)
- Don’t reject me in my old age. Don’t forsake me when my strength fails.
- American Standard Version (ASV)
- Cast me not off in the time of old age; Forsake me not when my strength faileth.
- Bible in Basic English (BBE)
- Do not give me up when I am old; be my help even when my strength is gone.
- Darby Translation (DBY)
- Cast me not off in the time of old age; forsake me not when my strength faileth.
- Webster's Bible (WBS)
- Cast me not off in the time of old age; forsake me not when my strength faileth.
- Young's Literal Translation (YLT)
- Cast me not off at the time of old age, According to the consumption of my power forsake me not.
Read in context
- 7ಅನೇಕರಿಗೆ ನಾನು ಆಶ್ಚರ್ಯದಂತಿದ್ದೇನೆ. ಆದರೆ ನೀನು ನನ್ನ ಬಲವಾದ ಆಶ್ರಯವಾಗಿದ್ದೀ.
- 8ನನ್ನ ಬಾಯಿ ನಿನ್ನ ಸ್ತೋತ್ರದಿಂದಲೂ ದಿನವೆಲ್ಲಾ ನಿನ್ನ ಗೌರವದಿಂದಲೂ ತುಂಬಿರಲಿ.
- 9ನನ್ನ ಮುಪ್ಪಿನ ಕಾಲದಲ್ಲಿ ನನ್ನನ್ನು ತಳ್ಳಿಬಿಡಬೇಡ. ನನ್ನ ಶಕ್ತಿಯು ಕುಂದಿಹೋಗುವಾಗ ನನ್ನನ್ನು ಕೈಬಿಡ ಬೇಡ.
- 10ನನ್ನ ಶತ್ರುಗಳು ನನಗೆ ವಿರೋಧವಾಗಿ ಮಾತನಾಡುತ್ತಾರೆ; ನನ್ನ ಪ್ರಾಣಕ್ಕೆ ಹೊಂಚು ಹಾಕುವ ವರು ಕೂಡಿಕೊಂಡು ಆಲೋಚನೆ ಮಾಡುತ್ತಾ--
- 11ದೇವರು ಅವನನ್ನು ಕೈ ಬಿಟ್ಟಿದ್ದಾನೆ; ಅವನನ್ನು ಹಿಂಸಿಸಿ, ಹಿಡಿದುಕೊಳ್ಳಿರಿ; ಅವನನ್ನು ಬಿಡಿಸುವವನು ಯಾರೂ ಇಲ್ಲ ಎಂದು ಅವರು ಅನ್ನುತ್ತಾರೆ.
Cross references
- Isaiah 46:4 ಯೆಶಾಯ 46:4ನಿಮ್ಮ ಮುಪ್ಪಿನ ಪ್ರಾಯದ ವರೆಗೆ ನಾನೇ (ಆಧಾರ) ನರೆಗೂದಲು ಬಂದಾಗಲೂ ನಾನು ನಿಮ್ಮನ್ನು ಹೊರುವೆನು, ನಾನೇ ಉಂಟುಮಾಡಿದೆನು, ನಾನೇ ಹೊರುವೆನು, ಅಂತೂ ನಾನು ನಿಮ್ಮನ್ನು ಹೊತ್ತು ಬಿಡುಗಡೆ ಮಾಡುವೆನು.
- 2 Timothy 1:12 2 ತಿಮೊಥೆಯನಿಗೆ 1:12ಇದರ ನಿಮಿತ್ತದಿಂದಲೇ ಈ ಶ್ರಮೆಗಳನ್ನು ಅನುಭವಿಸುತ್ತಾ ಇದ್ದೇನೆ; ಆದರೂ ನಾನು ನಾಚಿಕೆಪಡುವದಿಲ್ಲ; ಯಾಕಂ ದರೆ ನಾನು ನಂಬಿರುವಾತನನ್ನು ಬಲ್ಲೆನು, ನಾನು ಆತನಿಗೆ ಒಪ್ಪಿಸಿದ್ದನ್ನು ಆತನು ಆ ದಿನಕ್ಕಾಗಿ ಕಾಪಾಡು ವದಕ್ಕೆ ಶಕ್ತನಾಗಿದ್ದಾನೆಂದೂ ದೃಢವಾಗಿ ನಂಬಿದ್ದೇನೆ.
- Psalm 71:18 ಕೀರ್ತನೆಗಳು 71:18ಓ ದೇವರೇ, ನಾನು ಮುಪ್ಪಿನವನೂ ನರೆ ಕೂದಲಿನವನೂ ಆದಾಗ ಈ ಸಂತತಿಯವರಿಗೆ ನಿನ್ನ ಶಕ್ತಿಯನ್ನೂ ಮುಂದೆ ಬರುವ ಪ್ರತಿಯೊಬ್ಬನಿಗೆ ನಿನ್ನ ಅಧಿಕಾರವನ್ನೂ ತಿಳಿಸುವ ವರೆಗೂ ನನ್ನನ್ನು ಕೈಬಿಡಬೇಡ.
- Psalm 90:10 ಕೀರ್ತನೆಗಳು 90:10ನಮ್ಮ ಆಯುಷ್ಕಾಲವು ಎಪ್ಪತ್ತು ವರುಷ, ಬಲದಿಂದಿದ್ದರೆ ಎಂಭತ್ತು ವರುಷ; ಆದಾಗ್ಯೂ ಅವು ಗಳ ಬಲವು ಪ್ರಯಾಸವೂ ದುಃಖವೂ ಆಗಿವೆ; ಅದು ಬೇಗ ಕೊಯಿದು ಹಾಕಲ್ಪಡುತ್ತದೆ; ನಾವು ಹಾರಿ ಹೋಗುತ್ತೇವೆ.
- Psalm 73:26 ಕೀರ್ತನೆಗಳು 73:26ನನ್ನ ಮಾಂಸವೂ ಹೃದಯವೂ ಕುಂದುತ್ತದೆ; ಆದರೆ ದೇವರು ಯುಗಯುಗಕ್ಕೂ ನನ್ನ ಹೃದಯದ ಬಲವೂ ಪಾಲೂ ಆಗಿದ್ದಾನೆ.
- Psalm 92:13–15 ಕೀರ್ತನೆಗಳು 92:13–15ಅವರು ಕರ್ತನ ಆಲಯದಲ್ಲಿ ನೆಡಲ್ಪಟ್ಟು ನಮ್ಮ ದೇವರ ಅಂಗಳಗಳಲ್ಲಿ ವೃದ್ಧಿಯಾಗುವರು. ಮುದಿ ಪ್ರಾಯದಲ್ಲಿಯೂ ಫಲ ಫಲಿಸುವರು. ಅವರು ಪುಷ್ಟಿಯಾಗಿ ವೃದ್ಧಿಯಾಗುವರು.ಕರ್ತನು ಯಥಾರ್ಥನೂ ನನ್ನ ಬಂಡೆಯೂ ಆಗಿದ್ದಾನೆ; ಆತನಲ್ಲಿ ಅನೀತಿ ಇರುವದಿಲ್ಲ. ಕರ್ತನು ಯಥಾರ್ಥನೂ ನನ್ನ ಬಂಡೆಯೂ ಆಗಿದ್ದಾನೆ; ಆತನಲ್ಲಿ ಅನೀತಿ ಇರುವದಿಲ್ಲ.
- 2 Timothy 4:18 2 ತಿಮೊಥೆಯನಿಗೆ 4:18ನನ್ನನ್ನು ಪ್ರತಿಯೊಂದು ದುಷ್ಕೃತ್ಯದಿಂದ ಕರ್ತನು ತಪ್ಪಿಸಿ ತನ್ನ ಪರಲೋಕರಾಜ್ಯಕ್ಕೆ ನನ್ನನ್ನು ಕಾಪಾಡು ವನು. ಯುಗಯುಗಾಂತರಗಳಲ್ಲಿಯೂ ಆತನಿಗೆ ಮಹಿಮೆ. ಆಮೆನ್.
- 2 Samuel 19:35 2 ಸಮುವೇಲನು 19:35ನಾನು ಈಹೊತ್ತು ಎಂಭತ್ತು ವರುಷದವನು; ಇನ್ನು ಒಳ್ಳೇದು ಕೆಟ್ಟದ್ದು ಎಂಬ ಭೇದ ತಿಳಿಯುವೆನೋ? ತಿನ್ನುವದೂ ಕುಡಿಯುವದೂ ನಿನ್ನ ಸೇವಕನಿಗೆ ರುಚಿಕರ ವಾಗಿರುವದೋ? ಸಂಗೀತಗಾರರ ಸಂಗೀತಗಾರ್ತಿ ಯರ ಶಬ್ದವನ್ನು ಇನ್ನು ಕೇಳುವೆನೋ? ಹಾಗಾದರೆ ನಿನ್ನ ಸೇವಕನು ಅರಸನಾದ ನನ್ನ ಒಡೆಯನಿಗೆ ಯಾಕೆ ಇನ್ನು ಭಾರವಾಗಿರಬೇಕು?
- Ecclesiastes 12:1–7 ಪ್ರಸಂಗಿ 12:1–7ಕಷ್ಟದ ದಿನಗಳು ಬರುವದಕ್ಕೆ ಮೊದಲು, ಇವುಗಳಲ್ಲಿ ನನಗೆ ಸಂತೋಷವಿಲ್ಲವೆಂದು ನೀನು ಹೇಳುವ ವರ್ಷಗಳು ಸವಿಾಪಿಸುವದಕ್ಕೆ ಮೊದಲು ಈಗ ನಿನ್ನ ಯೌವನದ ದಿನಗಳಲ್ಲಿ ಸೃಷ್ಟಿಕರ್ತ ನನ್ನು ಸ್ಮರಿಸಿಕೋ. ಸೂರ್ಯನೂ ಬೆಳಕೂ ಚಂದ್ರನೂ ನಕ್ಷತ್ರಗಳೂ ಕತ್ತಲಾಗದಿರುವಾಗಲೇ ಮಳೆಯ ಮೋಡ ಗಳು ತಿರಿಗಿ ಬರುವದಕ್ಕಿಂತ ಮುಂಚೆಯೇ ಆತನನ್ನು ಸ್ಮರಿಸು. ಆ ದಿನದಲ್ಲಿ ಮನೆ ಕಾಯುವವರು ನಡುಗು ವರು; ಬಲವಾದ ಮನುಷ್ಯರು ತಾವಾಗಿಯೇ ಬೊಗ್ಗು ವರು; ಅರೆಯುವವರು ಸ್ವಲ್ಪ ಇರುವದರಿಂದ ಸುಮ್ಮನಿ ರುವರು; ಕಿಟಕಿಗಳಿಂದ ಹೊರಗೆ ನೋಡುವವರು ಮಂಕಾಗುವರು. ಅರೆಯುವ ಶಬ್ದವು ಕಡಿಮೆಯಾ ದಾಗ ಬೀದಿಯಲ್ಲಿ ಬಾಗಲುಗಳು ಮುಚ್ಚಿರುವವು. ಅವನು ಪಕ್ಷಿಯ ಶಬ್ದವಾದಾಗ ಎದ್ದೇಳುವನು. ಗಾನದ ಕುಮಾರ್ತೆಯರೆಲ್ಲಾ ಕುಗ್ಗುವರು. ಅಲ್ಲದೆ ಅವರು ದಿನ್ನೆಗೆ ಹೆದರುವರು; ದಾರಿಯಲ್ಲಿ ಹೆದರಿಕೆಗಳಿರುವವು. ಬಾದಾಮಿಯ ಮರ ಹೂವು ಬಿಡುವದು; ಮಿಡತೆಯು ಭಾರವಾಗಿರುವದು. ಆಶೆ ಬಿದ್ದುಹೋಗುವದು. ಮನು ಷ್ಯನು ತನ್ನ ನಿತ್ಯ ಗೃಹಕ್ಕೆ ಹೋಗುವನು. ಗೋಳಾಡು ವವರು ಬೀದಿಯಲ್ಲಿ ತಿರುಗಾಡುವರು. ಬೆಳ್ಳಿಯ ಸರಿಗೆ ಬಿಚ್ಚಲ್ಪಡುವದು; ಇಲ್ಲವೆ ಬಂಗಾರದ ಬಟ್ಟಲು ಒಡೆದು ಹೋಗುವದು. ಮಣ್ಣಿನ ಮಡಿಕೆಯು ಬುಗ್ಗೆಯ ಬಳಿಯಲ್ಲಿ ಒಡೆದು ಹೋಗುವದು. ಇಲ್ಲವೆ ಕೊಳದ ಹತ್ತಿರ ರಾಟೆ ಮುರಿಯುವದು. ಆಮೇಲೆ ಧೂಳು ಅದು ಇದ್ದ ಹಾಗೆಯೇ ಭೂಮಿಗೆ ಹಿಂತಿರುಗುವದು; ಆತ್ಮವು ಅದನ್ನು ಕೊಟ್ಟ ದೇವರ ಬಳಿಗೆ ಹಿಂತಿರುಗು ವದು.
- 2 Samuel 21:15–17 2 ಸಮುವೇಲನು 21:15–17ಫಿಲಿಷ್ಟಿಯರು ತಿರಿಗಿ ಇಸ್ರಾಯೇಲ್ಯರ ಮೇಲೆ ಯುದ್ಧಮಾಡಿದರು. ಆಗ ದಾವೀದನೂ ಅವನ ಸಂಗಡ ಇದ್ದ ಅವನ ಸೇವಕರೂ ಹೋಗಿ ಫಿಲಿಷ್ಟಿಯರ ಸಂಗಡ ಯುದ್ಧಮಾಡಿದರು; ಆದರೆ ದಾವೀದನು ದಣಿದು ಹೋದನು. ಆಗ ಮುನ್ನೂರು ಶೇಕೆಲ ತೂಕವಾದ ಹಿತ್ತಾಳೆಯ ಈಟಿಯುಳ್ಳವನಾಗಿ ಹೊಸ ಕತ್ತಿಯನ್ನು ನಡುವಿನಲ್ಲಿ ಕಟ್ಟಿಕೊಂಡಿರುವ ಮಹಾ ಶರೀರದವನ ಮಕ್ಕಳಲ್ಲಿ ಇಷ್ಬೀಬೆನೋಬ್ನು ದಾವೀದ ನನ್ನು ಕೊಲ್ಲಬೇಕೆಂದಿದ್ದನು. ಆದರೆ ಚೆರೂಯಳ ಮಗನಾದ ಅಬೀಷೈಯು ಅವನಿಗೆ ಸಹಾಯವಾಗಿ ಬಂದು ಫಿಲಿಷ್ಟಿಯನನ್ನು ಹೊಡೆದು ಕೊಂದುಹಾಕಿ ದನು. ಆಗ ದಾವೀದನ ಜನರು ಅವನಿಗೆ--ನೀನು ಇಸ್ರಾಯೇಲಿನ ಬೆಳಕನ್ನು ಆರಿಸಿಬಿಡದ ಹಾಗೆ ಇನ್ನು ಮೇಲೆ ನಮ್ಮ ಸಂಗಡ ಯುದ್ಧಕ್ಕೆ ಹೊರಡಬೇಡ ಎಂದು ಅವನಿಗೆ ಆಣೆಯಿಟ್ಟರು.