Psalms · chapter 72 · verse 11
Psalm 72:11 in Kannada
ಹೌದು, ಎಲ್ಲಾ ಅರಸರು ಆತನ ಮುಂದೆ ಅಡ್ಡ ಬೀಳುವರು; ಎಲ್ಲಾ ಜನಾಂಗಗಳು ಆತನನ್ನು ಸೇವಿಸುವವು.
Haudu, ellaa arasaru aatana munde adda beeluvaru; ellaa janaangagalu aatanannu sevisuvavu.
Psalm 72:11 in English
- King James Version (KJV)
- Yea, all kings shall fall down before him: all nations shall serve him.
- World English Bible (WEB)
- Yes, all kings shall fall down before him. All nations shall serve him.
- American Standard Version (ASV)
- Yea, all kings shall fall down before him; All nations shall serve him.
- Bible in Basic English (BBE)
- Yes, let all kings go down before him; let all nations be his servants.
- Darby Translation (DBY)
- Yea, all kings shall bow down before him; all nations shall serve him.
- Webster's Bible (WBS)
- Yes, all kings shall fall down before him: all nations shall serve him.
- Young's Literal Translation (YLT)
- And all kings do bow themselves to him, All nations do serve him,
Read in context
- 9ಆತನ ಮುಂದೆ ಅರಣ್ಯ ನಿವಾಸಿಗಳು ಎರಗುವರು; ಆತನ ಶತ್ರುಗಳು ಧೂಳನ್ನು ನೆಕ್ಕುವರು.
- 10ತಾರ್ಷೀಷಿನ ಅರಸರೂ ದ್ವೀಪಗಳ ಅರಸರೂ ಕಾಣಿಕೆಗಳನ್ನು ತರುವರು; ಶೆಬಾ ಮತ್ತು ಸೆಬಾದ ಅರಸರು ದಾನಗಳನ್ನು ಅರ್ಪಿಸುವರು.
- 11ಹೌದು, ಎಲ್ಲಾ ಅರಸರು ಆತನ ಮುಂದೆ ಅಡ್ಡ ಬೀಳುವರು; ಎಲ್ಲಾ ಜನಾಂಗಗಳು ಆತನನ್ನು ಸೇವಿಸುವವು.
- 12ಆತನಿಗೆ ಮೊರೆ ಇಡುವ ಬಡವರನ್ನೂ ಸಹಾಯ ಕನಿಲ್ಲದ ದೀನನನ್ನೂ ಬಿಡಿಸುವನು.
- 13ದರಿದ್ರನನ್ನೂ ಬಡವನನ್ನೂ ಕರುಣಿಸುವನು; ಬಡವರ ಪ್ರಾಣಗ ಳನ್ನು ರಕ್ಷಿಸುವನು.
Cross references
- Psalm 86:9 ಕೀರ್ತನೆಗಳು 86:9ಓ ಕರ್ತನೇ, ನೀನು ಉಂಟುಮಾಡಿದ ಜನಾಂಗಗಳೆಲ್ಲಾ ಬಂದು ನಿನ್ನನ್ನು ಆರಾಧಿಸಿ ನಿನ್ನ ಹೆಸರನ್ನು ಘನಪಡಿ ಸುವರು.
- Isaiah 49:22–23 ಯೆಶಾಯ 49:22–23ಕರ್ತನಾದ ದೇವರು ಇಂತೆನ್ನುತ್ತಾನೆ--ಇಗೋ, ನಾನು ಅನ್ಯಜನಗಳ ಕಡೆಗೆ ಕೈ ಎತ್ತಿ ಜನರಿಗೆ ನನ್ನ ಧ್ವಜವನ್ನು ಎತ್ತುವೆನು; ಅವರು ನಿನ್ನ ಕುಮಾರರನ್ನು ಕೈಹಿಡಿದು ತರುವರು; ನಿನ್ನ ಕುಮಾರ್ತೆಯರನ್ನು ತಮ್ಮ ಹೆಗಲಮೇಲೆ ತರುವರು. ಅರಸುಗಳು ನಿನಗೆ ಸಾಕು ತಂದೆಗಳು, ಅವರ ರಾಣಿಯರು ನಿನಗೆ ದಾದಿಗಳಾ ಗುವರು; ಅವರು ಭೂಮಿಯ ಕಡೆಗೆ ತಮ್ಮ ಮುಖ ವನ್ನು ಬಾಗಿಸಿ, ಅಡ್ಡಬಿದ್ದು ನಿನ್ನ ಪಾದದ ಧೂಳನ್ನು ನೆಕ್ಕುವರು; ಆಗ ನಾನೇ ಕರ್ತನೆಂದು ನೀನು ತಿಳು ಕೊಳ್ಳುವಿ; ನನ್ನನ್ನು ನಿರೀಕ್ಷಿಸಿಕೊಂಡಿರುವವರು ನಾಚಿ ಕೆಗೆ ಈಡಾಗರು.
- Revelation 11:15 ಪ್ರಕಟನೆ 11:15ಏಳನೆಯ ದೂತನು ತುತೂರಿಯನ್ನೂದಿದನು. ಆಗ ಪರಲೋಕದಲ್ಲಿ ಮಹಾಶಬ್ದಗಳುಂಟಾಗಿ-- ಈ ಲೋಕದ ರಾಜ್ಯಗಳು ನಮ್ಮ ಕರ್ತನ ಮತ್ತು ಆತನ ಕ್ರಿಸ್ತನ ರಾಜ್ಯಗಳಾದವು; ಆತನು ಯುಗ ಯುಗಾಂತರಗಳಲ್ಲಿಯೂ ಆಳುವನು ಎಂದು ಹೇಳಿ ದವು.
- Revelation 17:14 ಪ್ರಕಟನೆ 17:14ಇವರು ಕುರಿಮರಿಯಾದಾತನ ಮೇಲೆ ಯುದ್ಧ ಮಾಡುವರು, ಆದರೆ ಕುರಿಮರಿ ಯಾದಾತನು ಅವರನ್ನು ಜಯಿಸುವನು; ಯಾಕಂದರೆ ಆತನು ಕರ್ತರ ಕರ್ತನೂ ರಾಜಾಧಿರಾಜನು ಆಗಿದ್ದಾನೆ. ಇದಲ್ಲದೆ ಆತನೊಂದಿಗೆ ಇರುವವರು ಕರೆಯಲ್ಪಟ್ಟ ವರೂ ಆಯಲ್ಪಟ್ಟವರೂ ನಂಬಿಗಸ್ತರು ಆಗಿದ್ದಾರೆ.
- Revelation 21:26 ಪ್ರಕಟನೆ 21:26ಅವರು ಜನಾಂಗಗಳ ವೈಭವ ವನ್ನೂ ಘನವನ್ನೂ ಅಲ್ಲಿಗೆ ತರುವರು.ಅದರಲ್ಲಿ ಹೊಲೆ ಮಾಡುವಂಥದ್ದು ಯಾವದೂ ಸೇರುವದಿಲ್ಲ. ಅಸಹ್ಯವಾದದ್ದನ್ನೂ ಸುಳ್ಳಾದದ್ದನ್ನೂ ನಡಿಸುವವನು ಅಲ್ಲಿ ಸೇರುವದಿಲ್ಲ. ಆದರೆ ಕುರಿಮರಿಯಾದಾತನ ಜೀವಗ್ರಂಥದಲ್ಲಿ ಬರೆಯಲ್ಪಟ್ಟವರು ಮಾತ್ರ ಸೇರುವರು.
- Revelation 21:24 ಪ್ರಕಟನೆ 21:24ರಕ್ಷಿಸಲ್ಪಟ್ಟ ಜನಾಂಗದವರು ಅದರ ಬೆಳಕಿನಲಿ ನಡೆಯುವರು; ಭೂರಾಜರು ತಮ್ಮ ವೈಭವವನ್ನೂ ಘನವನ್ನೂ ಅಲ್ಲಿಗೆ ತರುವರು.
- Revelation 20:1–6 ಪ್ರಕಟನೆ 20:1–6ಆಗ ಒಬ್ಬ ದೂತನು ತಳವಿಲ್ಲದ ತಗ್ಗಿನ ಬೀಗದ ಕೈಯನ್ನೂ ದೊಡ್ಡ ಸರಪಣಿ ಯನ್ನೂ ತನ್ನ ಕೈಯಲ್ಲಿ ಹಿಡಿದುಕೊಂಡು ಪರಲೋಕ ದಿಂದ ಇಳಿದು ಬರುವದನ್ನು ನಾನು ಕಂಡೆನು. ಅವನು ಪಿಶಾಚನೂ ಸೈತಾನನೂ ಆಗಿರುವ ಪುರಾತನ ಸರ್ಪ ನೆಂಬ ಘಟಸರ್ಪನನ್ನು ಹಿಡಿದು ಸಾವಿರ ವರುಷ ಬಂಧಿಸಿದನು. ಆ ಸಾವಿರ ವರುಷ ತೀರುವ ತನಕ ಅವನು ಇನ್ನು ಎಂದಿಗೂ ಜನಾಂಗಗಳನ್ನು ಮರುಳು ಗೊಳಿಸದ ಹಾಗೆ ದೂತನು ಅವನನ್ನು ತಳವಿಲ್ಲದ ತಗ್ಗಿನಲ್ಲಿ ದೊಬ್ಬಿ ಅವನನ್ನು ಮುಚ್ಚಿ ಅದರ ಮೇಲೆ ಮುದ್ರೆ ಹಾಕಿದನು. ಆ ಸಾವಿರ ವರುಷಗಳಾದ ಮೇಲೆ ಅವನಿಗೆ ಸ್ವಲ್ಪ ಕಾಲ ಬಿಡುಗಡೆಯಾಗತಕ್ಕದ್ದು. ತರುವಾಯ ಸಿಂಹಾಸನಗಳನ್ನು ಕಂಡೆನು. ಅವುಗಳ ಮೇಲೆ ಕೂತಿದ್ದವರಿಗೆ ನ್ಯಾಯತೀರಿಸುವ ಅಧಿಕಾರವು ಕೊಡಲ್ಪಟ್ಟಿತು. ಇದಲ್ಲದೆ ಯೇಸುವಿನ ವಿಷಯವಾದ ಸಾಕ್ಷಿಯ ನಿಮಿತ್ತವಾಗಿಯೂ ದೇವರ ವಾಕ್ಯದ ನಿಮಿತ್ತವಾಗಿಯೂ ತಲೆಹೊಯಿಸಿಕೊಂಡವರ ಆತ್ಮಗಳನ್ನೂ ಮೃಗಕ್ಕೂ ಅದರ ವಿಗ್ರಹಕ್ಕೂ ಮಿಕ್ಕ ಸತ್ತವರು ಆ ಸಾವಿರ ವರುಷ ತೀರುವತನಕ ತಿರಿಗಿ ಬದುಕಲಿಲ್ಲ; ಇದೇ ಪ್ರಥಮ ಪುನರುತ್ಥಾನವು. ಪ್ರಥಮ ಪುನರುತ್ಥಾ ನದಲ್ಲಿ ಸೇರಿರುವವನು ಧನ್ಯನೂ ಪರಿಶುದ್ಧನೂ ಆಗಿ ದ್ದಾನೆ. ಇಂಥವರ ಮೇಲೆ ಎರಡನೆಯ ಮರಣಕ್ಕೆ ಅಧಿಕಾರವಿಲ್ಲ; ಆದರೆ ಅವರು ದೇವರಿಗೂ ಕ್ರಿಸ್ತನಿಗೂ ಯಾಜಕರಾಗಿ ಕ್ರಿಸ್ತನೊಂದಿಗೆ ಸಾವಿರ ವರುಷ ಆಳುವರು.
- Isaiah 54:5 ಯೆಶಾಯ 54:5ನಿನ್ನನ್ನು ಉಂಟುಮಾಡಿದವನೇ ನಿನ್ನ ಪತಿ; ಸೈನ್ಯಗಳ ಕರ್ತನು ಎಂಬದು ಆತನ ಹೆಸರು; ನಿನ್ನ ವಿಮೋಚಕನು ಇಸ್ರಾ ಯೇಲಿನ ಪರಿಶುದ್ಧನೇ; ಸಮಸ್ತ ಭೂಮಿಯ ದೇವರು ಎಂದು ಆತನು ಕರೆಯಲ್ಪಡುವನು.
- Psalm 138:4–5 ಕೀರ್ತನೆಗಳು 138:4–5ಓ ಕರ್ತನೇ, ನಿನ್ನ ಬಾಯಿಯ ಮಾತುಗಳನ್ನು ಕೇಳುವಾಗ ಭೂಮಿಯ ಅರಸರೆಲ್ಲರೂ ನಿನ್ನನ್ನು ಕೊಂಡಾಡುವರು. ಹೌದು, ಅವರು ಕರ್ತನ ಮಾರ್ಗಗಳಲ್ಲಿ ಕರ್ತನ ಘನವು ದೊಡ್ಡದೆಂದು ಹಾಡುವರು.
- Isaiah 11:9 ಯೆಶಾಯ 11:9ನನ್ನ ಪರಿಶುದ್ಧ ಪರ್ವತದ ಲ್ಲೆಲ್ಲಾ ಕೇಡನ್ನಾಗಲಿ ನಾಶವನ್ನಾಗಲಿ ಯಾರೂ ಮಾಡು ವದಿಲ್ಲ; ಸಮುದ್ರವು ನೀರಿನಿಂದ ಮುಚ್ಚಿಕೊಂಡಿರು ವಂತೆ ಕರ್ತನ ತಿಳುವಳಿಕೆಯು ಭೂಮಿಯಲ್ಲಿ ತುಂಬಿ ಕೊಂಡಿರುವದು.
- Romans 11:25 ರೋಮಾಪುರದವರಿಗೆ 11:25ಸಹೋದರರೇ, ನಿಮ್ಮನ್ನು ನೀವೇ ಬುದ್ಧಿವಂತ ರೆಂಬದಾಗಿ ಎಣಿಸಿಕೊಳ್ಳದಂತೆ ಗುಪ್ತವಾಗಿದ್ದ ಒಂದು ಸಂಗತಿ ನಿಮಗೆ ತಿಳಿದಿರಬೇಕೆಂದು ಅಪೇಕ್ಷಿಸುತ್ತೇನೆ. ಅದೇನಂದರೆ, ಇಸ್ರಾಯೇಲ್ಯರಲ್ಲಿ ಒಂದು ಪಾಲು ಜನರಿಗೆ ಉಂಟಾದ ಕುರುಡುತನವು ಅನ್ಯಜನಗಳು ಸಂಪೂರ್ಣವಾಗಿ ದೇವರ ರಾಜ್ಯದಲ್ಲಿ ಸೇರುವ ತನಕ
- Psalm 2:10–12 ಕೀರ್ತನೆಗಳು 2:10–12ಆದದರಿಂದ ಓ ಅರಸುಗಳೇ, ಈಗ ಜ್ಞಾನವಂತ ರಾಗಿರಿ; ಭೂ ನ್ಯಾಯಾಧಿಪತಿಗಳೇ, ಶಿಕ್ಷಣ ಪಡೆಯಿರಿ. ಭಯದಿಂದ ಕರ್ತನನ್ನು ಸೇವಿಸಿರಿ, ನಡು ಗುತ್ತಾ ಉಲ್ಲಾಸಪಡಿರಿ.ಆತನ ಕೋಪವು ಉರಿ ಯುವದಕ್ಕೆ ಮುಂಚೆಯೇ ಮಗನಿಗೆ ಮುದ್ದಿಡಿರಿ; ಇಲ್ಲ ವಾದರೆ ಆತನ ಕೋಪದಿಂದ ನೀವು ದಾರಿಯಲ್ಲೇ ನಾಶವಾದೀರಿ. ಆತನಲ್ಲಿ ಭರವಸವಿಟ್ಟವರೆಲ್ಲರೂ ಧನ್ಯರು. ಆತನ ಕೋಪವು ಉರಿ ಯುವದಕ್ಕೆ ಮುಂಚೆಯೇ ಮಗನಿಗೆ ಮುದ್ದಿಡಿರಿ; ಇಲ್ಲ ವಾದರೆ ಆತನ ಕೋಪದಿಂದ ನೀವು ದಾರಿಯಲ್ಲೇ ನಾಶವಾದೀರಿ. ಆತನಲ್ಲಿ ಭರವಸವಿಟ್ಟವರೆಲ್ಲರೂ ಧನ್ಯರು.