Psalms · chapter 72 · verse 14
Psalm 72:14 in Kannada
ಮೋಸದಿಂದಲೂ ಬಲಾತ್ಕಾರ ದಿಂದಲೂ ಅವರ ಪ್ರಾಣವನ್ನು ಬಿಡುಗಡೆ ಮಾಡು ವನು; ಅವರ ರಕ್ತವು ಆತನ ದೃಷ್ಟಿಯಲ್ಲಿ ಅಮೂಲ್ಯ ವಾಗಿರುವದು.
Mosadindaloo balaatkaara dindaloo avara praanavannu bidugade maadu vanu; avara raktavu aatana drushtiyalli amoolya vaagiruvadu.
Psalm 72:14 in English
- King James Version (KJV)
- He shall redeem their soul from deceit and violence: and precious shall their blood be in his sight.
- World English Bible (WEB)
- He will redeem their soul from oppression and violence. Their blood will be precious in his sight.
- American Standard Version (ASV)
- He will redeem their soul from oppression and violence; And precious will their blood be in his sight:
- Bible in Basic English (BBE)
- He will keep their souls free from evil designs and violent attacks; and their blood will be of value in his eyes.
- Darby Translation (DBY)
- He will redeem their souls from oppression and violence, and precious shall their blood be in his sight.
- Webster's Bible (WBS)
- He shall redeem their soul from deceit and violence: and precious shall be their blood in his sight.
- Young's Literal Translation (YLT)
- From fraud and from violence he redeemeth their soul, And precious is their blood in his eyes.
Read in context
- 12ಆತನಿಗೆ ಮೊರೆ ಇಡುವ ಬಡವರನ್ನೂ ಸಹಾಯ ಕನಿಲ್ಲದ ದೀನನನ್ನೂ ಬಿಡಿಸುವನು.
- 13ದರಿದ್ರನನ್ನೂ ಬಡವನನ್ನೂ ಕರುಣಿಸುವನು; ಬಡವರ ಪ್ರಾಣಗ ಳನ್ನು ರಕ್ಷಿಸುವನು.
- 14ಮೋಸದಿಂದಲೂ ಬಲಾತ್ಕಾರ ದಿಂದಲೂ ಅವರ ಪ್ರಾಣವನ್ನು ಬಿಡುಗಡೆ ಮಾಡು ವನು; ಅವರ ರಕ್ತವು ಆತನ ದೃಷ್ಟಿಯಲ್ಲಿ ಅಮೂಲ್ಯ ವಾಗಿರುವದು.
- 15ಅವನು ಬಾಳುವನು; ಅವನಿಗೆ ಶೆಬಾದ ಚಿನ್ನ ವನ್ನು ಕೊಡುವರು; ಅವನಿಗೋಸ್ಕರ ಯಾವಾಗಲೂ ಪ್ರಾರ್ಥನೆ ಮಾಡುವರು; ಪ್ರತಿದಿನ ಅವನನ್ನು ಕೊಂಡಾಡುವರು.
- 16ಧಾನ್ಯದ ಸಮೃದ್ಧಿಯು ದೇಶದಲ್ಲಿ ಬೆಟ್ಟಗಳ ತುದಿಯ ಮೇಲೆ ಇರುವದು; ಅದರ ಫಲವು ಲೆಬನೋನಿನ ಹಾಗೆ ಕದಲುವದು. ಪಟ್ಟಣದ ವರು ಭೂಮಿಯ ಸೊಪ್ಪಿನ ಹಾಗೆ ವೃದ್ಧಿಯಾಗುವರು.
Cross references
- Psalm 116:15 ಕೀರ್ತನೆಗಳು 116:15ಕರ್ತನ ದೃಷ್ಟಿಯಲ್ಲಿ ಆತನ ಪರಿಶುದ್ಧರ ಮರಣವು ಅಮೂಲ್ಯವಾಗಿದೆ.
- Luke 1:68–75 ಲೂಕನು 1:68–75ಇಸ್ರಾಯೇಲಿನ ದೇವರಾದ ಕರ್ತನು ಸ್ತುತಿ ಹೊಂದಲಿ, ಯಾಕಂದರೆ ಆತನು ತನ್ನ ಜನರನ್ನು ಸಂಧಿಸಿ ಅವರನ್ನು ವಿಮೋಚಿ ಸಿದ್ದಾನೆ. ಆತನು ತನ್ನ ಸೇವಕನಾದ ದಾವೀದನ ಮನೆತನದಲ್ಲಿ ನಮಗಾಗಿ ರಕ್ಷಣೆಯ ಕೊಂಬನ್ನು ಎತ್ತಿ ದ್ದಾನೆ. ಲೋಕಾದಿಯಿಂದ ಆತನು ತನ್ನ ಪರಿಶುದ್ಧ ಪ್ರವಾದಿಗಳ ಬಾಯಿಂದ ಮಾತನಾಡಿದ ಪ್ರಕಾರ ನಾವು ನಮ್ಮ ಶತ್ರುಗಳಿಂದಲೂ ನಮ್ಮನ್ನು ಹಗೆ ಮಾಡುವವರ ಕೈಯಿಂದಲೂ ರಕ್ಷಿಸಲ್ಪಡುವಂತೆ ನಮ್ಮ ಪಿತೃಗಳಿಗೆ ವಾಗ್ದಾನ ಮಾಡಿದ ಕರುಣೆಯನು ನೆರವೇರಿಸಲು ತನ್ನ ಪರಿಶುದ್ಧ ಒಡಂಬಡಿಕೆಯನ್ನು ನೆನಪಿಗೆ ತಂದು ನಮ್ಮ ಪಿತೃವಾದ ಅಬ್ರಹಾಮನಿಗೆ ಆಣೆಯಿಟ್ಟು ಪ್ರಮಾಣ ಮಾಡಿದಂತೆ ನಾವು ನಮ್ಮ ಶತ್ರುಗಳ ಕೈಯಿಂದ ಬಿಡಿಸಲ್ಪಟ್ಟು ಭಯವಿಲ್ಲದವರಾಗಿ ನಮ್ಮ ಜೀವಮಾನದ ಎಲ್ಲಾ ದಿನಗಳಲ್ಲಿ ಆತನ ಮುಂದೆ ಪರಿಶುದ್ಧತೆಯಿಂದಲೂ ನೀತಿಯಿಂದಲೂ ಆತನನ್ನು ಸೇವಿಸುವವರಾಗುವದಕ್ಕೆ ಆತನು ಅನುಗ್ರಹಿ ಸುವನು.
- Revelation 19:2 ಪ್ರಕಟನೆ 19:2ಆತನ ನ್ಯಾಯತೀರ್ಪು ಗಳು ಸತ್ಯವೂ ನೀತಿಯುಳ್ಳವುಗಳೂ ಆಗಿವೆ; ಯಾಕಂ ದರೆ ಜಾರತ್ವದಿಂದ ಭೂಲೋಕವನ್ನು ಕೆಡಿಸುತ್ತಿದ್ದ ಆ ಮಹಾಜಾರಸ್ತ್ರೀಗೆ ಆತನು ನ್ಯಾಯತೀರಿಸಿ ಆತನ ಸೇವಕರ ರಕ್ತಕ್ಕಾಗಿ ಅವಳಿಗೆ ಪ್ರತಿ ದಂಡನೆಯನ್ನು ಮಾಡಿದ್ದಾನೆ ಎಂದು ಹೇಳಿದರು.
- 1 Thessalonians 2:15–16 1 ಥೆಸಲೊನೀಕದವರಿಗೆ 2:15–16ಆ ಯೆಹೂದ್ಯರು ಕರ್ತನಾದ ಯೇಸುವನ್ನು ಮತ್ತು ತಮ್ಮ ಸ್ವಂತ ಪ್ರವಾದಿಗಳನ್ನು ಕೊಂದರು; ನಮ್ಮನ್ನು ಹಿಂಸಿಸಿದರು; ಅವರು ದೇವರನ್ನು ಮೆಚ್ಚಿಸುವವರಲ್ಲ, ಎಲ್ಲಾ ಮನುಷ್ಯರಿಗೂ ವಿರೋಧಿಗಳಾಗಿದ್ದಾರೆ. ಅನ್ಯ ಜನರಿಗೆ ರಕ್ಷಣೆಯಾಗುವಂತೆ ಸುವಾರ್ತೆಯನ್ನು ಹೇಳುವ ನಮಗೆ ಅವರು ಅಡ್ಡಿ ಮಾಡುತ್ತಾರೆ; ಹೀಗೆ ತಮ್ಮ ಪಾಪಗಳನ್ನು ಯಾವಾಗಲೂ ಪರಿಪೂರ್ಣ ಮಾಡುವದಕ್ಕೆ ಹೋಗುತ್ತಾರೆ; ಆದರೆ ದೇವರ ಕೋಪವು ಅವರ ಮೇಲೆ ಸಂಪೂರ್ಣವಾಗುತ್ತಾ ಬಂತು.
- Psalm 69:18 ಕೀರ್ತನೆಗಳು 69:18ಸವಿಾಪವಾಗಿದ್ದು ನನ್ನ ಪ್ರಾಣವನ್ನು ರಕ್ಷಿಸು ನನ್ನನ್ನು ನನ್ನ ಶತ್ರುಗಳ ನಿಮಿತ್ತ ವಾಗಿ ವಿಮೋಚಿಸು.
- 2 Samuel 4:9 2 ಸಮುವೇಲನು 4:9ಆಗ ದಾವೀದನು ಬೇರೋತಿನ ಮಗನಾ ಗಿರುವ ರಿಮ್ಮೋನನ ಮಕ್ಕಳಾದ ರೇಕಾಬಿಗೂ ಅವನ ಸಹೋದರನಾದ ಬಾಣನಿಗೂ ಪ್ರತ್ಯುತ್ತರವಾಗಿ--ಎಲ್ಲಾ ಇಕ್ಕಟ್ಟಿನಿಂದ ನನ್ನ ಪ್ರಾಣವನ್ನು ವಿಮೋಚಿಸಿದ ಕರ್ತನ ಜೀವದಾಣೆ, ತನ್ನ ಕಣ್ಣಿಗೆ ಸುವರ್ತಮಾನವನ್ನು ತಂದವನು ಎಂದು ಕಾಣಿಸಿಕೊಂಡವನಾಗಿ ನಾನು ತನ್ನ ವರ್ತಮಾನಕ್ಕೋಸ್ಕರ ಬಹುಮಾನವನ್ನು ಕೊಡು ವೆನೆಂದು ನೆನಸಿ
- Psalm 130:8 ಕೀರ್ತನೆಗಳು 130:8ಆತನು ಇಸ್ರಾಯೇಲನ್ನು ಅದರ ಎಲ್ಲಾ ಅಕ್ರಮಗಳಿಂದ ವಿಮೋಚಿಸುವನು.
- Revelation 17:6 ಪ್ರಕಟನೆ 17:6ಆ ಸ್ತ್ರೀಯು ಪರಿಶುದ್ದರ ರಕ್ತವನ್ನೂ ಯೇಸುವಿಗೋಸ್ಕರ ಸಾಕ್ಷಿಕೊಟ್ಟು ಹತರಾದವರ ರಕಆ ಸ್ತ್ರೀಯು ಪರಿಶುದ್ದರ ರಕ್ತವನ್ನೂ ಯೇಸುವಿಗೋಸ್ಕರ ಸಾಕ್ಷಿಕೊಟ್ಟು ಹತರಾದವರ ರಕ
- Psalm 25:22 ಕೀರ್ತನೆಗಳು 25:22ಓ ದೇವರೇ, ಇಸ್ರಾಯೇಲ್ಯರನ್ನು ಅವರ ಎಲ್ಲಾ ಭಾದೆ ಗಳೊಳಗಿಂದ ವಿಮೋಚಿಸು.
- Revelation 6:9–11 ಪ್ರಕಟನೆ 6:9–11ಆತನು ಐದನೆಯ ಮುದ್ರೆಯನ್ನು ತೆರೆದಾಗ ದೇವರವಾಕ್ಯದ ನಿಮಿತ್ತವಾಗಿಯೂ ತಾವು ಹೊಂದಿದ್ದ ಸಾಕ್ಷಿಯ ನಿಮಿತ್ತವಾಗಿಯೂ ಹತವಾದವರ ಆತ್ಮಗಳು ಯಜ್ಞವೇದಿಯ ಕೆಳಗಿರುವದನ್ನು ನಾನು ಕಂಡೆನು. ಅವರು--ಓ ಕರ್ತನೇ, ಪರಿಶುದ್ಧನೂ ಸತ್ಯವಂತನೂ ಆಗಿರುವಾತನೇ, ಭೂಮಿಯ ಮೇಲೆ ವಾಸಿಸುವವರು ನಮ್ಮ ರಕ್ತವನ್ನು ಸುರಿಸಿದ್ದಕ್ಕಾಗಿ ನೀನು ಎಷ್ಟು ಕಾಲದವರೆಗೆ ನ್ಯಾಯವಿಚಾರಿಸದೆಯೂ ಪ್ರತಿದಂಡನೆ ಮಾಡದೆಯೂ ಇರುವಿ ಎಂದು ಮಹಾಶಬ್ದದಿಂದ ಕೂಗುತ್ತಾ ಹೇಳಿದರು. ಅವರಲ್ಲಿ ಒಬ್ಬೊಬ್ಬನಿಗೆ ಬಿಳೀ ನಿಲುವಂಗಿಗಳು ಕೊಡಲ್ಪಟ್ಟಿದ್ದವು. ಇದಲ್ಲದೆ ಅವರ ಹಾಗೆ ಅವರ ಜೊತೆ ಸೇವಕರ ಮತ್ತು ಅವರ ಸಹೋದರರ ಕೊಲೆಯು ಪೂರೈಸುವ ತನಕ ಇನೂ ಸ್ವಲ್ಪ ಕಾಲ ವಿಶ್ರಮಿಸಿಕೊಂಡಿರಬೇಕೆಂದು ಅವರಿಗೆ ಹೇಳಲ್ಪಟ್ಟಿತು.
- 1 Samuel 26:21 1 ಸಮುವೇಲನು 26:21ಆಗ ಸೌಲನುನಾನು ಪಾಪಮಾಡಿದೆನು; ನನ್ನ ಮಗನಾದ ದಾವೀ ದನೇ, ತಿರಿಗಿ ಬಾ; ಯಾಕಂದರೆ ನನ್ನ ಜೀವವು ಈ ಹೊತ್ತು ನಿನ್ನ ದೃಷ್ಟಿಗೆ ಅಮೂಲ್ಯವಾಗಿದ್ದರಿಂದ ನಾನು ಇನ್ನು ಮೇಲೆ ನಿನಗೆ ಕೇಡುಮಾಡೆನು; ಇಗೋ, ನಾನು ಹುಚ್ಚು ಕೆಲಸಮಾಡಿದ್ದೇನೆ. ಮಹಾ ಹೆಚ್ಚಾದ ತಪ್ಪು ಮಾಡಿದೆನು ಅಂದನು.
- Genesis 48:16 ಆದಿಕಾಂಡ 48:16ಎಲ್ಲಾ ಕೇಡಿನಿಂದ ನನ್ನನ್ನು ತಪ್ಪಿಸಿದ ದೂತನು ಈ ಹುಡುಗರನ್ನು ಆಶೀರ್ವದಿಸಲಿ. ನನ್ನ ಹೆಸರಿನಿಂದ ನನ್ನ ತಂದೆಗಳಾದ ಅಬ್ರಹಾಮ್ ಇಸಾಕ್ ಅವರ ಹೆಸರಿನಿಂದ ಅವರು ಕರೆಯಲ್ಪಡಲಿ. ಅವರು ಭೂಮಧ್ಯದಲ್ಲಿ ಸಮೂಹವಾಗಿ ಹೆಚ್ಚಲಿ ಅಂದನು.