Psalms · chapter 72 · verse 2
Psalm 72:2 in Kannada
ನಿನ್ನ ಜನರಿಗೆ ನೀತಿಯಿಂದಲೂ ದೀನರಿಗೆ ನ್ಯಾಯದಿಂದಲೂ ಆತನು ತೀರ್ಪು ಮಾಡು ವನು.
Ninna janarige neetiyindaloo deenarige nyaayadindaloo aatanu teerpu maadu vanu.
Psalm 72:2 in English
- King James Version (KJV)
- He shall judge thy people with righteousness, and thy poor with judgment.
- World English Bible (WEB)
- He will judge your people with righteousness, and your poor with justice.
- American Standard Version (ASV)
- He will judge thy people with righteousness, And thy poor with justice.
- Bible in Basic English (BBE)
- May he be a judge of your people in righteousness, and make true decisions for the poor.
- Darby Translation (DBY)
- He will judge thy people with righteousness, and thine afflicted with judgment.
- Webster's Bible (WBS)
- He shall judge thy people with righteousness, and thy poor with judgment.
- Young's Literal Translation (YLT)
- He judgeth Thy people with righteousness, And Thy poor with judgment.
Read in context
- 1ಓ ದೇವರೇ, ನಿನ್ನ ನ್ಯಾಯತೀರ್ಪುಗಳನ್ನು ಅರಸನಿಗೂ ನೀತಿಯನ್ನು ಅರಸನ ಮಗನಿಗೂ ಕೊಡು.
- 2ನಿನ್ನ ಜನರಿಗೆ ನೀತಿಯಿಂದಲೂ ದೀನರಿಗೆ ನ್ಯಾಯದಿಂದಲೂ ಆತನು ತೀರ್ಪು ಮಾಡು ವನು.
- 3ಬೆಟ್ಟಗಳೂ ಚಿಕ್ಕ ಗುಡ್ಡಗಳೂ ನೀತಿಯಿಂದ ಸಮಾಧಾನವನ್ನು ಜನರಿಗೆ ತರುವವು.
- 4ಆತನು ಜನರಲ್ಲಿ ದೀನರಿಗೆ ನ್ಯಾಯತೀರಿಸುವನು; ಬಡವನ ಮಕ್ಕಳನ್ನು ರಕ್ಷಿಸುವನು; ಬಲಾತ್ಕಾರಿಯನ್ನು ಮುರಿದು ತುಂಡು ಮಾಡುವನು.
Cross references
- Isaiah 32:1 ಯೆಶಾಯ 32:1ಇಗೋ, ಒಬ್ಬ ರಾಜನು ನೀತಿಗನುಸಾರವಾಗಿ ಆಳುವನು, ಅಧಿಪತಿಗಳು ನ್ಯಾಯ ದಿಂದ ದೊರೆತನಮಾಡುವರು.
- Psalm 72:12–14 ಕೀರ್ತನೆಗಳು 72:12–14ಆತನಿಗೆ ಮೊರೆ ಇಡುವ ಬಡವರನ್ನೂ ಸಹಾಯ ಕನಿಲ್ಲದ ದೀನನನ್ನೂ ಬಿಡಿಸುವನು. ದರಿದ್ರನನ್ನೂ ಬಡವನನ್ನೂ ಕರುಣಿಸುವನು; ಬಡವರ ಪ್ರಾಣಗ ಳನ್ನು ರಕ್ಷಿಸುವನು. ಮೋಸದಿಂದಲೂ ಬಲಾತ್ಕಾರ ದಿಂದಲೂ ಅವರ ಪ್ರಾಣವನ್ನು ಬಿಡುಗಡೆ ಮಾಡು ವನು; ಅವರ ರಕ್ತವು ಆತನ ದೃಷ್ಟಿಯಲ್ಲಿ ಅಮೂಲ್ಯ ವಾಗಿರುವದು.
- Isaiah 32:17 ಯೆಶಾಯ 32:17ನೀತಿಯ ಕೆಲಸವು ಸಮಾಧಾನವೂ ನೀತಿಯ ಫಲವು ನಿತ್ಯವಾದ ಶಾಂತಿಯೂ ಭರವಸವೂ ಆಗಿರುವದು.
- 1 Kings 3:5–10 1 ಅರಸುಗಳು 3:5–10ಅವನು ಗಿಬ್ಯೋನಿನಲ್ಲಿರುವಾಗ ರಾತ್ರಿ ಯಲ್ಲಿ ಸ್ವಪ್ನದೊಳಗೆ ಕರ್ತನು ಸೊಲೊಮೋನನಿಗೆ ಕಾಣಿಸಿಕೊಂಡನು. ದೇವರು ಅವನಿಗೆ--ನಾನು ನಿನಗೆ ಏನು ಕೊಡಬೇಕು ಕೇಳಿಕೋ ಅಂದನು. ಅದಕ್ಕೆ ಸೊಲೊಮೋನನು--ನನ್ನ ತಂದೆಯಾಗಿರುವ ನಿನ್ನ ಸೇವಕನಾದ ದಾವೀದನು ನಿನ್ನ ಮುಂದೆ ಸತ್ಯದಿಂದಲೂ ನೀತಿಯಿಂದಲೂ ಯಥಾರ್ಥವಾದ ಹೃದಯವುಳ್ಳವ ನಾಗಿಯೂ ನಡೆದದ್ದರಿಂದ ನೀನು ಅವನಿಗೆ ಬಹು ದಯೆತೋರಿಸಿ ಈ ಮಹಾಕರುಣೆಯನ್ನು ಅವನಿ ಗೋಸ್ಕರ ಕಾದಿಟ್ಟಿದ್ದೀ. ಈ ಹೊತ್ತಿರುವ ಹಾಗೆಯೇ ತನ್ನ ಸಿಂಹಾಸನದ ಮೇಲೆ ಕುಳಿತುಕೊಳ್ಳಲು ಒಬ್ಬ ಮಗನನ್ನು ಕೊಟ್ಟಿದ್ದೀ. ನನ್ನ ದೇವರಾದ ಕರ್ತನೇ, ನೀನು ನನ್ನ ತಂದೆಯಾದ ದಾವೀದನಿಗೆ ಬದಲಾಗಿ ನಿನ್ನ ಸೇವಕನನ್ನು ಅರಸನಾಗಮಾಡಿದ್ದೀ. ಆದರೆ ನಾನು ಚಿಕ್ಕ ಬಾಲಕನಾಗಿದ್ದು ಹೊರಗೆ ಹೋಗುವದಕ್ಕೂ ಒಳಗೆ ಬರುವದಕ್ಕೂ ಅರಿಯದೆ ಇದ್ದೇನೆ. ಇದಲ್ಲದೆ ನಿನ್ನ ಸೇವಕನು ನೀನು ಆದುಕೊಂಡ ನಿನ್ನ ಮಹಾಜನರ ಮಧ್ಯದಲ್ಲಿ ಇದ್ದಾನೆ. ಆ ಜನರು ಬಹಳವಾಗಿರುವ ದರಿಂದ ಅವರನ್ನು ಎಣಿಸಲೂ ಲೆಕ್ಕ ಬರೆಯಲೂ ಆಗದು. ಆದದರಿಂದ ನಿನ್ನ ಜನರಿಗೆ ನ್ಯಾಯ ವಿಚಾ ರಿಸಲು ಒಳ್ಳೇದನ್ನೂ ಕೆಟ್ಟದ್ದನ್ನೂ ತಿಳಿಯುವ ಹಾಗೆ ನಿನ್ನ ಸೇವಕನಿಗೆ ಜ್ಞಾನವುಳ್ಳ ಹೃದಯವನ್ನು ಕೊಡ ಬೇಕು. ಈ ನಿನ್ನ ಬಹು ಗುಂಪಾದ ಜನರ ನ್ಯಾಯ ವಿಚಾರಿಸಲು ಸಾಮರ್ಥ್ಯವುಳ್ಳವನು ಯಾವನು ಅಂದನು. ಸೊಲೊಮೋನನು ಕೇಳಿದ ಈ ಮಾತು ಕರ್ತನ ದೃಷ್ಟಿಗೆ ಒಳ್ಳೇದಾಗಿತ್ತು.
- Psalm 45:6–7 ಕೀರ್ತನೆಗಳು 45:6–7ಓ ದೇವರೇ, ನಿನ್ನ ಸಿಂಹಾಸ ನವು ಎಂದೆಂದಿಗೂ ಇರುವದು; ನಿನ್ನ ರಾಜ್ಯದಂಡವು ನ್ಯಾಯದಂಡವಾಗಿದೆ. ನೀನು ನೀತಿಯನ್ನು ಪ್ರೀತಿ ಮಾಡುತ್ತೀ; ದುಷ್ಟತ್ವವನ್ನು ಹಗೆಮಾಡುತ್ತೀ; ಆದದ ರಿಂದ ದೇವರು, ನಿನ್ನ ದೇವರು, ನಿನ್ನ ಸಂಗಡಿಗರಿಗಿಂತ ಹೆಚ್ಚಾಗಿ ನಿನ್ನನ್ನು ಆನಂದ ತೈಲದಿಂದ ಅಭಿಷೇಕಿಸಿ ದ್ದಾನೆ.
- Revelation 19:11 ಪ್ರಕಟನೆ 19:11ಪರಲೋಕವು ತೆರೆದಿರುವದನ್ನು ನಾನು ಕಂಡೆನು. ಆಗ ಬಿಳೀ ಕುದುರೆಯು ಕಾಣಿಸಿತು; ಅದರ ಮೇಲೆ ಕೂತಿದ್ದಾತನು ನಂಬಿಗಸ್ತನೂ ಸತ್ಯವಂತನೂ ಎಂದು ಕರೆಯಲ್ಪಟ್ಟನು. ಆತನು ನೀತಿಯಿಂದ ನ್ಯಾಯವಿಚಾರಣೆ ಮಾಡಿ ಯುದ್ಧ ಮಾಡುತ್ತಾನೆ;
- Isaiah 9:7 ಯೆಶಾಯ 9:7ಅದನ್ನು ನೇಮಿಸುವದಕ್ಕೂ ಇಂದಿನಿಂದ ಎಂದೆಂದಿಗೂ ನೀತಿ ನ್ಯಾಯಗಳೊಂದಿಗೆ ಅದನ್ನು ಸ್ಥಾಪಿಸುವದಕ್ಕೂ ದಾವೀದನ ಸಿಂಹಾಸನ ಕ್ಕಾಗಲಿ ಅವನ ರಾಜ್ಯಕ್ಕಾಗಲಿ ಅವನ ಪರಿಪಾಲ ನೆಯ ಮತ್ತು ಶಾಂತಿಯ ಅಭಿವೃದ್ಧಿಗಾಗಲಿ ಅಂತ್ಯವೇ ಇಲ್ಲ; ಸೈನ್ಯಗಳ ಕರ್ತನ ಆಸಕ್ತಿಯು ಇದನ್ನು ನೆರವೇರಿ ಸುವದು.
- Psalm 82:3–4 ಕೀರ್ತನೆಗಳು 82:3–4ದರಿದ್ರ ನನ್ನೂ ದಿಕ್ಕಿಲ್ಲದವನನ್ನೂ ಕಾಪಾಡಿ ದೀನನಿಗೂ ಬಡವ ನಿಗೂ ನೀತಿಯನ್ನು ಮಾಡಿರಿ. ದರಿದ್ರನನ್ನೂ ಬಡವ ನನ್ನೂ ದುಷ್ಟರ ಕೈಯಿಂದ ಬಿಡಿಸಿರಿ.
- Psalm 12:5 ಕೀರ್ತನೆಗಳು 12:5ಬಡವರ ವ್ಯಥೆಗೋಸ್ಕರವೂ ಗತಿಯಿಲ್ಲದವರ ನರ ಳುವಿಕೆಗೋಸ್ಕರವೂ ಈಗ ನಾನು ಏಳುವೆನು ಎಂದು ಕರ್ತನು ಹೇಳುತ್ತಾನೆ; ಉಬ್ಬಿಕೊಂಡವನಿಂದ ನಾನು ಬಡವನನ್ನು ಕಾಪಾಡುವೆನು.
- Job 34:19 ಯೋಬನು 34:19ಆತನು ಪ್ರಧಾನರ ಮುಖದಾಕ್ಷಿಣ್ಯ ನೋಡು ವನೋ? ಧನಿಕನನ್ನು ಬಡವನಿಗಿಂತ ಹೆಚ್ಚೆಂದು ಲಕ್ಷಿ ಸುವನೋ? ಯಾಕಂದರೆ ಇಬ್ಬರೂ ಆತನ ಕೈ ಕೆಲಸ ವಾಗಿದ್ದಾರೆ.
- Isaiah 11:2–5 ಯೆಶಾಯ 11:2–5ಅವನ ಮೇಲೆ ಜ್ಞಾನ ವಿವೇಕ ದಾಯಕ ಆತ್ಮ, ಆಲೋಚನಾ ಪರಾಕ್ರಮದ ಆತ್ಮ,ತಿಳುವಳಿಕೆಯ ಆತ್ಮ ಕರ್ತನ ಭಯದ ಆತ್ಮ, ಅಂತೂ ಕರ್ತನ ಆತ್ಮನು ನೆಲೆಯಾಗುವನು; ಕರ್ತನ ಭಯ ದಲ್ಲಿ ಅವನಿಗೆ ಸೂಕ್ಷ್ಮ ತಿಳುವಳಿಕೆಯು ಉಂಟಾ ಗುವದು; ಅವನು ಕಣ್ಣಿಗೆ ಕಂಡಂತೆ ತೀರ್ಪುಮಾಡು ವದಿಲ್ಲ, ಇಲ್ಲವೆ ತನ್ನ ಕಿವಿಗಳ ಕೇಳ್ವಿಕೆಯ ಪ್ರಕಾರ ತೀರ್ಪುಮಾಡನು; ಆದರೆ ಬಡವರಿಗೆ ನೀತಿಯಿಂದ ನ್ಯಾಯತೀರಿಸುವನು; ಭೂಮಿಯ ದೀನರಿಗೆ ನ್ಯಾಯ ವಾಗಿ ತೀರ್ಪುಮಾಡುವನು; ಭೂಮಿಯನ್ನು ತನ್ನ ಬಾಯಿಯ ಕೋಲಿನಿಂದ ಹೊಡೆಯುವನು, ತನ್ನ ತುಟಿಗಳ ಉಸಿರಿನಿಂದ ದುಷ್ಟರನ್ನು ಹತಮಾಡುವನು. ನೀತಿಯೇ ಅವನಿಗೆ ನಡುಕಟ್ಟು, ನಂಬಿಗಸ್ತಿಕೆಯು ಅವನ ಸೊಂಟದ ಪಟ್ಟಿ.
- Jeremiah 33:15 ಯೆರೆಮೀಯ 33:15ಆ ದಿನಗಳಲ್ಲಿಯೂ ಆ ಕಾಲದಲ್ಲಿಯೂ ನಾನು ದಾವೀದನಿಗೆ ನೀತಿಯುಳ್ಳ ಕೊಂಬೆಯನ್ನು ಚಿಗುರ ಮಾಡುವೆನು; ಆತನು ದೇಶದಲ್ಲಿ ನ್ಯಾಯವನ್ನೂ ನೀತಿಯನ್ನೂ ನಡಿಸುವನು.