Psalms · chapter 72 · verse 3
Psalm 72:3 in Kannada
ಬೆಟ್ಟಗಳೂ ಚಿಕ್ಕ ಗುಡ್ಡಗಳೂ ನೀತಿಯಿಂದ ಸಮಾಧಾನವನ್ನು ಜನರಿಗೆ ತರುವವು.
Bettagaloo chikka guddagaloo neetiyinda samaadhaanavannu janarige taruvavu.
Psalm 72:3 in English
- King James Version (KJV)
- The mountains shall bring peace to the people, and the little hills, by righteousness.
- World English Bible (WEB)
- The mountains shall bring prosperity to the people. The hills bring the fruit of righteousness.
- American Standard Version (ASV)
- The mountains shall bring peace to the people, And the hills, in righteousness.
- Bible in Basic English (BBE)
- May the mountains give peace to the people, and the hills righteousness.
- Darby Translation (DBY)
- The mountains shall bring peace to the people, and the hills, by righteousness.
- Webster's Bible (WBS)
- The mountains shall bring peace to the people, and the little hills, by righteousness.
- Young's Literal Translation (YLT)
- The mountains bear peace to the people, And the heights by righteousness.
Read in context
- 1ಓ ದೇವರೇ, ನಿನ್ನ ನ್ಯಾಯತೀರ್ಪುಗಳನ್ನು ಅರಸನಿಗೂ ನೀತಿಯನ್ನು ಅರಸನ ಮಗನಿಗೂ ಕೊಡು.
- 2ನಿನ್ನ ಜನರಿಗೆ ನೀತಿಯಿಂದಲೂ ದೀನರಿಗೆ ನ್ಯಾಯದಿಂದಲೂ ಆತನು ತೀರ್ಪು ಮಾಡು ವನು.
- 3ಬೆಟ್ಟಗಳೂ ಚಿಕ್ಕ ಗುಡ್ಡಗಳೂ ನೀತಿಯಿಂದ ಸಮಾಧಾನವನ್ನು ಜನರಿಗೆ ತರುವವು.
- 4ಆತನು ಜನರಲ್ಲಿ ದೀನರಿಗೆ ನ್ಯಾಯತೀರಿಸುವನು; ಬಡವನ ಮಕ್ಕಳನ್ನು ರಕ್ಷಿಸುವನು; ಬಲಾತ್ಕಾರಿಯನ್ನು ಮುರಿದು ತುಂಡು ಮಾಡುವನು.
- 5ಸೂರ್ಯನೂ ಚಂದ್ರನೂ ಇರುವ ವರೆಗೆ ತಲ ತಲಾಂತರಗಳು ನಿನಗೆ ಭಯಪಡುವರು.
Cross references
- Isaiah 52:7 ಯೆಶಾಯ 52:7ಒಳ್ಳೆಯ ಶುಭಸಮಾಚಾರವನ್ನು ತರುವವನ, ರಕ್ಷಣೆಯನ್ನು ಪ್ರಕಟಿಸುವವನ, ಚೀಯೋನಿಗೆ ನಿನ್ನ ದೇವರು ದೊರೆತನ ಮಾಡುತ್ತಾನೆ ಎಂದು ಹೇಳಿ, ಶುಭಸಮಾಚಾರವನ್ನು ತಂದು, ಸಮಾಧಾನವನ್ನು ಪ್ರಕಟಿಸಿ ಹೇಳುವಾತನ ಪಾದಗಳು ಪರ್ವತಗಳ ಮೇಲೆ ಎಷ್ಟೋ ಅಂದವಾಗಿವೆ!
- 2 Corinthians 5:19–21 2 ಕೊರಿಂಥದವರಿಗೆ 5:19–21ಅದೇನಂದರೆ, ದೇವರು ಮನುಷ್ಯರ ಅಪರಾಧಗಳನ್ನು ಅವರ ಲೆಕ್ಕಕ್ಕೆ ಹಾಕದೆ ಲೋಕವನ್ನು ಕ್ರಿಸ್ತನಲ್ಲಿ ತನಗೆ ಸಮಾಧಾನಪಡಿಸಿ ಕೊಳ್ಳುತ್ತಿದ್ದನೆಂಬದೇ; ಆ ಸಮಾಧಾನದ ವಾಕ್ಯವನ್ನು ನಮ್ಮ ವಶಕ್ಕೆ ಕೊಟ್ಟಿದ್ದಾನೆ. ದೇವರೇ ನಮ್ಮ ಮೂಲಕ ನಿಮ್ಮನ್ನು ಬೇಡಿ ಕೊಳ್ಳುತ್ತಾನೋ ಎಂಬಂತೆ ನಾವು ಈಗ ಕ್ರಿಸ್ತನ ರಾಯಭಾರಿಗಳಾಗಿದ್ದೇವೆ. ದೇವರೊಂದಿಗೆ ಸಮಾ ಧಾನವಾಗಿರೆಂದು ಕ್ರಿಸ್ತನಿಗೆ ಬದಲಾಗಿ ನಾವು ನಿಮ್ಮನ್ನು ಬೇಡಿಕೊಳ್ಳುತ್ತೇವೆ.ನಾವು ಆತನಲ್ಲಿ ದೇವರ ನೀತಿಯಾಗುವಂತೆ ದೇವರು ಪಾಪವನ್ನರಿಯ ಆತನನ್ನು ನಮಗೋಸ್ಕರ ಪಾಪವಾಗ ಮಾಡಿದನು. ನಾವು ಆತನಲ್ಲಿ ದೇವರ ನೀತಿಯಾಗುವಂತೆ ದೇವರು ಪಾಪವನ್ನರಿಯ ಆತನನ್ನು ನಮಗೋಸ್ಕರ ಪಾಪವಾಗ ಮಾಡಿದನು.
- Daniel 9:24 ದಾನಿಯೇಲನು 9:24ಅಕ್ರಮಗಳನ್ನು ಮುಗಿಸುವದಕ್ಕೂ ಪಾಪಗಳನ್ನು ಮುಚ್ಚುವದಕ್ಕೂ ಅಪರಾಧಗಳಿಗೆ ಪ್ರಾಯಶ್ಚಿತ್ತ ಮಾಡು ವದಕ್ಕೂ ನಿತ್ಯವಾದ ನೀತಿಯನ್ನು ಬರಮಾಡುವದಕ್ಕೂ ಆ ದರ್ಶನಕ್ಕೂ ಪ್ರವಾದಿಗೂ ಮುದ್ರೆಹಾಕುವದಕ್ಕೂ ಅತಿಪರಿಶುದ್ಧನನ್ನು ಅಭಿಷೇಕ ಮಾಡುವದಕ್ಕೂ ನಿನ್ನ ಜನರ ಮೇಲೆಯೂ ನಿನ್ನ ಪರಿಶುದ್ಧ ಪಟ್ಟಣದ ಮೇಲೆಯೂ ಎಪ್ಪತ್ತು ವಾರಗಳು ನೇಮಿಸಲ್ಪಟ್ಟಿವೆ.
- Psalm 72:16 ಕೀರ್ತನೆಗಳು 72:16ಧಾನ್ಯದ ಸಮೃದ್ಧಿಯು ದೇಶದಲ್ಲಿ ಬೆಟ್ಟಗಳ ತುದಿಯ ಮೇಲೆ ಇರುವದು; ಅದರ ಫಲವು ಲೆಬನೋನಿನ ಹಾಗೆ ಕದಲುವದು. ಪಟ್ಟಣದ ವರು ಭೂಮಿಯ ಸೊಪ್ಪಿನ ಹಾಗೆ ವೃದ್ಧಿಯಾಗುವರು.
- Joel 3:18 ಯೋವೇಲ 3:18ಆ ದಿನದಲ್ಲಿ ಆಗುವದೇನಂ ದರೆ, ಬೆಟ್ಟಗಳು ಹೊಸ ದ್ರಾಕ್ಷಾರಸವನ್ನು ಸುರಿಯುವವು; ಗುಡ್ಡಗಳು ಹಾಲಿನಿಂದ ಹರಿಯುವವು; ಯೆಹೂದದ ಹಳ್ಳಗಳೆಲ್ಲಾ ನೀರಿನಿಂದ ಹರಿಯುವವು; ಕರ್ತನ ಆಲಯದೊಳಗಿಂದ ಬುಗ್ಗೆ ಹೊರಟು, ಶಿಟ್ಟೀಮಿನ ತಗ್ಗಿಗೆ ಜಲ ಕೊಡುವದು.
- Psalm 65:12 ಕೀರ್ತನೆಗಳು 65:12ಅರ ಣ್ಯದ ಹುಲ್ಲುಗಾವಲುಗಳ ಮೇಲೂ ಸುರಿಯ ಮಾಡುತ್ತೀ; ಚಿಕ್ಕಗುಡ್ಡಗಳು ಎಲ್ಲಾ ಕಡೆಗಳಲ್ಲೂ ಉಲ್ಲಾ ಸಿಸುತ್ತವೆ.ಹುಲ್ಲುಗಾವಲುಗಳು ಮಂದೆಗಳನ್ನು ಹೊದ್ದುಕೊಳ್ಳುತ್ತವೆ; ಕಣಿವೆಗಳೂ ಧಾನ್ಯದಿಂದ ಮುಚ್ಚಿ ರುತ್ತವೆ, ಉತ್ಸಾಹಪಡುತ್ತವೆ ಮತ್ತು ಹಾಡುತ್ತವೆ.
- Psalm 85:10–11 ಕೀರ್ತನೆಗಳು 85:10–11ಕೃಪೆಯೂ ಸತ್ಯವೂ ಸಂಧಿಸಿ ಕೊಳ್ಳುತ್ತವೆ; ನೀತಿಯೂ ಸಮಾಧಾನವೂ ಮುದ್ದಿಟ್ಟು ಕೊಳ್ಳುತ್ತವೆ. ಸತ್ಯವು ಭೂಮಿಯಿಂದ ಮೊಳೆಯು ವದು; ನೀತಿಯು ಆಕಾಶದಿಂದ ಕೆಳಗೆ ದೃಷ್ಟಿಸುವುದು.
- Psalm 96:11–13 ಕೀರ್ತನೆಗಳು 96:11–13ಆಕಾಶಗಳು ಸಂತೋಷಿಸಲಿ; ಭೂಮಿಯು ಉಲ್ಲಾಸಪಡಲಿ; ಸಮುದ್ರವೂ ಅದರ ಪರಿಪೂರ್ಣ ತೆಯೂ ಘೋಷಿಸಲಿ. ಹೊಲವೂ ಅದರಲ್ಲಿರುವ ಸಮಸ್ತವೂ ಉತ್ಸಾಹಪಡಲಿ; ಅಡವಿಯ ಮರಗಳೆಲ್ಲಾ ಕರ್ತನ ಮುಂದೆಯೇ ಉತ್ಸಾಹಧ್ವನಿ ಮಾಡಲಿ.ಆತನು ಬರುತ್ತಾನೆ, ಭೂಮಿಗೆ ನ್ಯಾಯತೀರಿಸಲು ಬರುತ್ತಾನೆ; ಲೋಕಕ್ಕೆ ನೀತಿಯಿಂದಲೂ ಜನಗಳಿಗೆ ತನ್ನ ಸತ್ಯದಿಂದಲೂ ನ್ಯಾಯತೀರಿಸುವನು. ಆತನು ಬರುತ್ತಾನೆ, ಭೂಮಿಗೆ ನ್ಯಾಯತೀರಿಸಲು ಬರುತ್ತಾನೆ; ಲೋಕಕ್ಕೆ ನೀತಿಯಿಂದಲೂ ಜನಗಳಿಗೆ ತನ್ನ ಸತ್ಯದಿಂದಲೂ ನ್ಯಾಯತೀರಿಸುವನು.
- Psalm 98:8–9 ಕೀರ್ತನೆಗಳು 98:8–9ಪ್ರವಾಹ ಗಳು ಕೈತಟ್ಟಲಿ; ಕರ್ತನ ಮುಂದೆ ಬೆಟ್ಟಗಳು ಕೂಡ ಉತ್ಸಾಹ ಧ್ವನಿಮಾಡಲಿ.ಆತನು ಭೂಮಿಗೆ ನ್ಯಾಯ ತೀರಿಸಲು ಬರುತ್ತಾನೆ. ಲೋಕಕ್ಕೆ ನೀತಿಯಿಂದಲೂ ಜನಗಳಿಗೆ ನ್ಯಾಯದಲ್ಲಿಯೂ ತೀರ್ಪು ಕೊಡುವನು. ಆತನು ಭೂಮಿಗೆ ನ್ಯಾಯ ತೀರಿಸಲು ಬರುತ್ತಾನೆ. ಲೋಕಕ್ಕೆ ನೀತಿಯಿಂದಲೂ ಜನಗಳಿಗೆ ನ್ಯಾಯದಲ್ಲಿಯೂ ತೀರ್ಪು ಕೊಡುವನು.
- Ezekiel 34:13–14 ಯೆಹೆಜ್ಕೇಲನು 34:13–14ಜನಗಳೊಳಗಿಂದ ಅವುಗಳನ್ನು ಹೊರಗೆ ತೆಗೆದು, ದೇಶಗಳಿಂದ ಅವುಗಳನ್ನು ಕೂಡಿಸಿ, ಅವುಗಳ ಸ್ವಂತ ದೇಶಕ್ಕೆ ತರುವೆನು. ಇಸ್ರಾಯೇಲಿನ ಪರ್ವತಗಳ ಮೇಲೆ ನದಿಗಳಲ್ಲಿ ನಿವಾಸಿಸುವ ಎಲ್ಲಾ ದೇಶಗಳಲ್ಲಿ ಮೇಯಿಸುವೆನು. ನಾನು ಒಳ್ಳೇ ಮೇವಿನಲ್ಲಿ ಅವು ಗಳನ್ನು ಮೇಯಿಸುವೆನು; ಇಸ್ರಾಯೇಲಿನ ಎತ್ತರವಾದ ಪರ್ವತಗಳಲ್ಲಿ ಅವುಗಳ ಮಂದೆಯು ಇರುವದು. ಅವುಗಳು ಆ ಒಳ್ಳೆಯ ಮಂದೆಯಲ್ಲಿ ಮಲಗಿ ಇಸ್ರಾ ಯೇಲಿನ ಪರ್ವತಗಳ ಮೇಲೆ ಪುಷ್ಟಿಯುಳ್ಳ ಮೇವನ್ನು ಮೇಯುವವು.
- Isaiah 32:16–17 ಯೆಶಾಯ 32:16–17ನ್ಯಾಯವು ಅರಣ್ಯದಲ್ಲಿಯೂ ನೆಲೆಗೊ ಳ್ಳುವದು. ಪೈರಿನ ಹೊಲದಲ್ಲಿ ನೀತಿಯು ನೆಲೆಯಾಗಿರುವದು. ನೀತಿಯ ಕೆಲಸವು ಸಮಾಧಾನವೂ ನೀತಿಯ ಫಲವು ನಿತ್ಯವಾದ ಶಾಂತಿಯೂ ಭರವಸವೂ ಆಗಿರುವದು.