Psalms · chapter 72 · verse 4
Psalm 72:4 in Kannada
ಆತನು ಜನರಲ್ಲಿ ದೀನರಿಗೆ ನ್ಯಾಯತೀರಿಸುವನು; ಬಡವನ ಮಕ್ಕಳನ್ನು ರಕ್ಷಿಸುವನು; ಬಲಾತ್ಕಾರಿಯನ್ನು ಮುರಿದು ತುಂಡು ಮಾಡುವನು.
Aatanu janaralli deenarige nyaayateerisuvanu; badavana makkalannu rakshisuvanu; balaatkaariyannu muridu tundu maaduvanu.
Psalm 72:4 in English
- King James Version (KJV)
- He shall judge the poor of the people, he shall save the children of the needy, and shall break in pieces the oppressor.
- World English Bible (WEB)
- He will judge the poor of the people. He will save the children of the needy, and will break the oppressor in pieces.
- American Standard Version (ASV)
- He will judge the poor of the people, He will save the children of the needy, And will break in pieces the oppressor.
- Bible in Basic English (BBE)
- May he be a judge of the poor among the people, may he give salvation to the children of those who are in need; by him let the violent be crushed.
- Darby Translation (DBY)
- He will do justice to the afflicted of the people; he will save the children of the needy, and will break in pieces the oppressor.
- Webster's Bible (WBS)
- He shall judge the poor of the people, he shall save the children of the needy, and shall break in pieces the oppressor.
- Young's Literal Translation (YLT)
- He judgeth the poor of the people, Giveth deliverance to the sons of the needy, And bruiseth the oppressor.
Read in context
- 2ನಿನ್ನ ಜನರಿಗೆ ನೀತಿಯಿಂದಲೂ ದೀನರಿಗೆ ನ್ಯಾಯದಿಂದಲೂ ಆತನು ತೀರ್ಪು ಮಾಡು ವನು.
- 3ಬೆಟ್ಟಗಳೂ ಚಿಕ್ಕ ಗುಡ್ಡಗಳೂ ನೀತಿಯಿಂದ ಸಮಾಧಾನವನ್ನು ಜನರಿಗೆ ತರುವವು.
- 4ಆತನು ಜನರಲ್ಲಿ ದೀನರಿಗೆ ನ್ಯಾಯತೀರಿಸುವನು; ಬಡವನ ಮಕ್ಕಳನ್ನು ರಕ್ಷಿಸುವನು; ಬಲಾತ್ಕಾರಿಯನ್ನು ಮುರಿದು ತುಂಡು ಮಾಡುವನು.
- 5ಸೂರ್ಯನೂ ಚಂದ್ರನೂ ಇರುವ ವರೆಗೆ ತಲ ತಲಾಂತರಗಳು ನಿನಗೆ ಭಯಪಡುವರು.
- 6ಕೊಯ್ದ ಹುಲ್ಲಿನ ಮೇಲೆ ಬೀಳುವ ಮಳೆಯ ಹಾಗೆಯೂ ಭೂಮಿಯನ್ನು ನೆನಸುವ ಸುರಿಯುವ ಮಳೆಗಳ ಹಾಗೆಯೂ ಆತನು ಇಳಿದು ಬರುವನು.
Cross references
- Isaiah 11:4 ಯೆಶಾಯ 11:4ಆದರೆ ಬಡವರಿಗೆ ನೀತಿಯಿಂದ ನ್ಯಾಯತೀರಿಸುವನು; ಭೂಮಿಯ ದೀನರಿಗೆ ನ್ಯಾಯ ವಾಗಿ ತೀರ್ಪುಮಾಡುವನು; ಭೂಮಿಯನ್ನು ತನ್ನ ಬಾಯಿಯ ಕೋಲಿನಿಂದ ಹೊಡೆಯುವನು, ತನ್ನ ತುಟಿಗಳ ಉಸಿರಿನಿಂದ ದುಷ್ಟರನ್ನು ಹತಮಾಡುವನು.
- Ezekiel 34:15–16 ಯೆಹೆಜ್ಕೇಲನು 34:15–16ನಾನೇ ನನ್ನ ಮಂದೆಯನ್ನು ಮೇಯಿಸಿ, ನಾನೇ ಅವುಗಳನ್ನು ಮಲಗಿಸುವೆನೆಂದು ದೇವರಾದ ಕರ್ತನು ಹೇಳುತ್ತಾನೆ. ಕಳೆದು ಹೋದದ್ದನ್ನು ನಾನೇ ಹುಡುಕುವೆನು; ಓಡಿಸಲ್ಪಟ್ಟಿದ್ದನ್ನು ನಾನೇ ಮತ್ತೆ ತರುವೆನು, ಮುರಿದದ್ದನ್ನು ನಾನೇ ಕಟ್ಟುವೆನು, ಬಲಹೀನವಾದದ್ದನ್ನು ನಾನೇ ಬಲಪಡಿಸುವೆನು. ಆದರೆ ಕೊಬ್ಬಿದ್ದನ್ನೂ ಬಲಿಷ್ಠವಾದದ್ದನ್ನೂ ನಾನೇ ಸಂಹರಿಸು ವೆನು; ನಾನೇ ಅವುಗಳಿಗೆ ನ್ಯಾಯದಂಡನೆ ಎಂಬ ಮೇವನ್ನು ಮೇಯಿಸುವೆನು.
- Psalm 109:31 ಕೀರ್ತನೆಗಳು 109:31ಬಡವನ ಬಲಪಾರ್ಶ್ವದಲ್ಲಿ ಅವನ ಪ್ರಾಣಕ್ಕೆ ನ್ಯಾಯತೀರಿಸುವ ವರೊಳಗಿಂದ ಅವನನ್ನು ರಕ್ಷಿಸುವದಕ್ಕೆ ಆತನು ನಿಂತುಕೊಳ್ಳುವನು.
- Zechariah 9:8–10 ಜೆಕರ್ಯ 9:8–10ಇದಲ್ಲದೆ ಹೋಗುತ್ತಾ ಬರುತ್ತಾ ಇರುವವನ ನಿಮಿತ್ತವೂ ಸೈನ್ಯದ ನಿಮಿತ್ತವೂ ನನ್ನ ಮನೆಯ ಹತ್ತಿರ ಪಾಳೆಯಮಾಡುತ್ತೇನೆ; ಇನ್ನು ಮೇಲೆ ಉಪದ್ರ ಕೊಡುವವನು ಅವರ ಮೇಲೆ ಹಾದು ಹೋಗುವದಿಲ್ಲ; ಯಾಕಂದರೆ ಈಗ ನನ್ನ ಕಣ್ಣುಗಳಿಂದ ನೋಡಿದ್ದೇನೆ. ಚೀಯೋನ್ ಕುಮಾರ್ತೆಯೇ, ಬಹಳವಾಗಿ ಉಲ್ಲಾಸಪಡು; ಯೆರೂಸಲೇಮಿನ ಕುಮಾರ್ತೆಯೇ, ಆರ್ಭಟಿಸು; ಇಗೋ, ನಿನ್ನ ಅರಸನು ನಿನ್ನ ಬಳಿಗೆ ಬರುತ್ತಾನೆ; ಆತನು ನೀತಿವಂತನಾಗಿಯೂ ರಕ್ಷಿಸುವಾತ ನಾಗಿಯೂ ದೀನನಾಗಿಯೂ ಕತ್ತೆಯ ಮೇಲೆ ಹೌದು, ಕತ್ತೆಯ ಮರಿಯ ಮೇಲೆ ಹತ್ತಿದವನಾಗಿಯೂ ಬರು ತ್ತಾನೆ. ಇದಲ್ಲದೆ ಎಫ್ರಾಯಾಮಿನೊಳಗಿಂದ ರಥ ಗಳನ್ನೂ ಯೆರೂಸಲೇಮಿನೊಳಗಿಂದ ಕುದುರೆಗಳನ್ನೂ ತೆಗೆದುಬಿಡುವೆನು; ಯುದ್ಧದ ಬಿಲ್ಲು ಸಹ ತೆಗೆದು ಹಾಕಲ್ಪಡುವದು; ಆತನು ಅನ್ಯ ಜನಾಂಗಗಳಿಗೆ ಸಮಾ ಧಾನವನ್ನು ಹೇಳುವನು; ಆತನ ದೊರೆತನವು ಸಮುದ್ರ ದಿಂದ ಸಮುದ್ರಕ್ಕೂ ನದಿಯಿಂದ ಭೂಮಿಯ ಅಂತ್ಯಗಳ ವರೆಗೂ ಇರುವದು.
- Zechariah 11:7 ಜೆಕರ್ಯ 11:7ಆಗ ಕೊಯ್ಗುರಿಗಳ ಮಂದೆ ಯನ್ನು ಹೌದು, ಬಡವಾದ ಮಂದೆಯನ್ನೇ ಮೇಯಿಸಿದೆನು; ನನಗಾಗಿ ಎರಡು ಕೋಲುಗಳನ್ನು ತಕ್ಕೊಂಡೆನು; ಒಂದಕ್ಕೆ ಸೌಂದರ್ಯ ಎಂದೂ ಮತ್ತೊಂದಕ್ಕೆ ಬಂಧ ಗಳೆಂದೂ ಹೆಸರಿಟ್ಟೆನು; ಹೀಗೆ ಮಂದೆಯನ್ನು ಮೇಯಿ ಸಿದೆನು.
- Revelation 18:20 ಪ್ರಕಟನೆ 18:20ಪರಲೋಕವೇ, ಪರಿಶುದ್ಧರಾದ ಅಪೊಸ್ತಲರೇ, ಪ್ರವಾದಿಗಳೇ, ಅವಳ ವಿಷಯವಾಗಿ ಆನಂದಪಡಿರಿ. ಯಾಕಂದರೆ ನಿಮ್ಮ ನಿಮಿತ್ತವಾಗಿ ದೇವರು ಇವಳಿಗೆ ಪ್ರತಿ ದಂಡನೆಯನ್ನು ಮಾಡಿದನು ಎಂದು ಹೇಳಿತು.
- Job 34:24 ಯೋಬನು 34:24ಲೆಕ್ಕವಿಲ್ಲದ ಪರಾಕ್ರಮಿಗಳನ್ನು ಚೂರು ಚೂರು ಮಾಡಿ, ಮತ್ತೊಬ್ಬರನ್ನು ಅವರ ಸ್ಥಳದಲ್ಲಿ ನಿಲ್ಲಿಸು ತ್ತಾನೆ.
- Daniel 2:34–35 ದಾನಿಯೇಲನು 2:34–35ನೀನು ನೋಡುತ್ತಿರಲಾಗಿ, ಒಂದು ಕಲ್ಲು ಕೈಗಳ ಸಹಾಯವಿಲ್ಲದೆ ಒಡೆಯಲ್ಪಟ್ಟು ಅರ್ಧ ಕಬ್ಬಿ ಣವೂ ಅರ್ಧ ಮಣ್ಣೂ ಆಗಿದ್ದ ಆ ವಿಗ್ರಹದ ಪಾದ ಗಳನ್ನು ಬಡಿದು ಅವುಗಳನ್ನು ಚೂರುಚೂರು ಮಾಡಿತು. ಆಮೇಲೆ ಕಬ್ಬಿಣವೂ ಮಣ್ಣೂ ಹಿತ್ತಾಳೆಯೂ ಬೆಳ್ಳಿಯೂ ಮತ್ತು ಬಂಗಾರವೂ ಕೂಡ ಒಡೆದು ಚೂರು ಚೂರಾಗಿ ಬೇಸಿಗೆ ಕಾಲದ ಧಾನ್ಯದ ಹೊಟ್ಟಿನ ಹಾಗಾ ದವು; ಅವುಗಳಿಗೆ ಎಡೆ ಸಿಗದ ಹಾಗೆ ಗಾಳಿಯು ಅವುಗಳನ್ನು ಹೊಡೆದುಕೊಂಡು ಹೋಯಿತು; ಪ್ರತಿಮೆಯನ್ನು ಬಡಿದ ಕಲ್ಲು ದೊಡ್ಡ ಬೆಟ್ಟವಾಗಿ ಸಮಸ್ತ ಭೂಮಿಯನ್ನು ತುಂಬಿಸಿತು.
- Revelation 19:2 ಪ್ರಕಟನೆ 19:2ಆತನ ನ್ಯಾಯತೀರ್ಪು ಗಳು ಸತ್ಯವೂ ನೀತಿಯುಳ್ಳವುಗಳೂ ಆಗಿವೆ; ಯಾಕಂ ದರೆ ಜಾರತ್ವದಿಂದ ಭೂಲೋಕವನ್ನು ಕೆಡಿಸುತ್ತಿದ್ದ ಆ ಮಹಾಜಾರಸ್ತ್ರೀಗೆ ಆತನು ನ್ಯಾಯತೀರಿಸಿ ಆತನ ಸೇವಕರ ರಕ್ತಕ್ಕಾಗಿ ಅವಳಿಗೆ ಪ್ರತಿ ದಂಡನೆಯನ್ನು ಮಾಡಿದ್ದಾನೆ ಎಂದು ಹೇಳಿದರು.
- Proverbs 20:26 ಜ್ಞಾನೋಕ್ತಿಗಳು 20:26ಜ್ಞಾನಿಯಾದ ಅರಸನು ದುಷ್ಟರನ್ನು ಚದರಿಸಿ ಅವರ ಮೇಲೆ ಚಕ್ರವನ್ನು ಎಳೆಯುತ್ತಾನೆ.
- Revelation 18:24 ಪ್ರಕಟನೆ 18:24ಪ್ರವಾದಿಗಳ, ಪರಿ ಶುದ್ಧರ ಮತ್ತು ಭೂಮಿಯ ಮೇಲೆ ಕೊಲ್ಲಲ್ಪಟ್ಟವರೆಲ್ಲರ ರಕ್ತವು ನಿನ್ನಲ್ಲಿ ಸಿಕ್ಕಿತು ಎಂದು ಹೇಳಿದನು.
- Psalm 72:12–14 ಕೀರ್ತನೆಗಳು 72:12–14ಆತನಿಗೆ ಮೊರೆ ಇಡುವ ಬಡವರನ್ನೂ ಸಹಾಯ ಕನಿಲ್ಲದ ದೀನನನ್ನೂ ಬಿಡಿಸುವನು. ದರಿದ್ರನನ್ನೂ ಬಡವನನ್ನೂ ಕರುಣಿಸುವನು; ಬಡವರ ಪ್ರಾಣಗ ಳನ್ನು ರಕ್ಷಿಸುವನು. ಮೋಸದಿಂದಲೂ ಬಲಾತ್ಕಾರ ದಿಂದಲೂ ಅವರ ಪ್ರಾಣವನ್ನು ಬಿಡುಗಡೆ ಮಾಡು ವನು; ಅವರ ರಕ್ತವು ಆತನ ದೃಷ್ಟಿಯಲ್ಲಿ ಅಮೂಲ್ಯ ವಾಗಿರುವದು.