Psalms · chapter 72 · verse 5
Psalm 72:5 in Kannada
ಸೂರ್ಯನೂ ಚಂದ್ರನೂ ಇರುವ ವರೆಗೆ ತಲ ತಲಾಂತರಗಳು ನಿನಗೆ ಭಯಪಡುವರು.
Sooryanoo chandranoo iruva varege tala talaantaragalu ninage bhayapaduvaru.
Psalm 72:5 in English
- King James Version (KJV)
- They shall fear thee as long as the sun and moon endure, throughout all generations.
- World English Bible (WEB)
- They shall fear you while the sun endures; and as long as the moon, throughout all generations.
- American Standard Version (ASV)
- They shall fear thee while the sun endureth, And so long as the moon, throughout all generations.
- Bible in Basic English (BBE)
- May his life go on as long as the sun and moon, through all generations.
- Darby Translation (DBY)
- They shall fear thee as long as sun and moon endure, from generation to generation.
- Webster's Bible (WBS)
- They shall fear thee as long as the sun and moon endure, throughout all generations.
- Young's Literal Translation (YLT)
- They fear Thee with the sun, and before the moon, Generation — generations.
Read in context
- 3ಬೆಟ್ಟಗಳೂ ಚಿಕ್ಕ ಗುಡ್ಡಗಳೂ ನೀತಿಯಿಂದ ಸಮಾಧಾನವನ್ನು ಜನರಿಗೆ ತರುವವು.
- 4ಆತನು ಜನರಲ್ಲಿ ದೀನರಿಗೆ ನ್ಯಾಯತೀರಿಸುವನು; ಬಡವನ ಮಕ್ಕಳನ್ನು ರಕ್ಷಿಸುವನು; ಬಲಾತ್ಕಾರಿಯನ್ನು ಮುರಿದು ತುಂಡು ಮಾಡುವನು.
- 5ಸೂರ್ಯನೂ ಚಂದ್ರನೂ ಇರುವ ವರೆಗೆ ತಲ ತಲಾಂತರಗಳು ನಿನಗೆ ಭಯಪಡುವರು.
- 6ಕೊಯ್ದ ಹುಲ್ಲಿನ ಮೇಲೆ ಬೀಳುವ ಮಳೆಯ ಹಾಗೆಯೂ ಭೂಮಿಯನ್ನು ನೆನಸುವ ಸುರಿಯುವ ಮಳೆಗಳ ಹಾಗೆಯೂ ಆತನು ಇಳಿದು ಬರುವನು.
- 7ಆತನ ದಿವಸಗಳಲ್ಲಿ ನೀತಿವಂತನು ವೃದ್ಧಿಯಾಗುವನು. ಸಮೃದ್ಧಿ ಯಾದ ಸಮಾಧಾನವು ಚಂದ್ರನು ಇರುವ ವರೆಗೂ ಇರುವದು.
Cross references
- Psalm 89:36–37 ಕೀರ್ತನೆಗಳು 89:36–37ಅವನ ಸಂತತಿಯು ಯುಗ ಯುಗಕ್ಕೂ ಅವನ ಸಿಂಹಾಸನವು ನನ್ನ ಮುಂದೆ ಸೂರ್ಯನ ಹಾಗೆಯೂ ಇರುವದು. ಚಂದ್ರನ ಹಾಗೆ ಅದು ಯುಗಯುಗಕ್ಕೂ, ಸ್ಥಿರವಾಗಿರುವದು; ಪರಲೋಕದಲ್ಲಿ ರುವ ಸಾಕ್ಷಿಯ ಹಾಗೆ ನಂಬಿಕೆ ಯುಳ್ಳದ್ದಾಗಿರುವದು ಸೆಲಾ.
- Daniel 7:14 ದಾನಿಯೇಲನು 7:14ಆತನನ್ನು ಸಕಲ ಪ್ರಜೆ, ಜನಾಂಗ, ಭಾಷೆಗಳವರು ಸೇವಿಸುವ ಹಾಗೆ ಆತನಿಗೆ ಅಧಿಕಾರವು ಮಹತ್ವವು ರಾಜ್ಯವು ಕೊಡಲ್ಪಟ್ಟವು. ಈತನ ಅಧಿಕಾರವು ಎಂದಿಗೂ ಮುಗಿಯದ ನಿತ್ಯ ಅಧಿಕಾರವುಳ್ಳದ್ದು. ಈತನ ರಾಜ್ಯವು ನಾಶವಾಗದಂತ ರಾಜ್ಯವಾಗಿದೆ.
- Revelation 11:15 ಪ್ರಕಟನೆ 11:15ಏಳನೆಯ ದೂತನು ತುತೂರಿಯನ್ನೂದಿದನು. ಆಗ ಪರಲೋಕದಲ್ಲಿ ಮಹಾಶಬ್ದಗಳುಂಟಾಗಿ-- ಈ ಲೋಕದ ರಾಜ್ಯಗಳು ನಮ್ಮ ಕರ್ತನ ಮತ್ತು ಆತನ ಕ್ರಿಸ್ತನ ರಾಜ್ಯಗಳಾದವು; ಆತನು ಯುಗ ಯುಗಾಂತರಗಳಲ್ಲಿಯೂ ಆಳುವನು ಎಂದು ಹೇಳಿ ದವು.
- Psalm 72:17 ಕೀರ್ತನೆಗಳು 72:17ಆತನ ನಾಮವು ಎಂದೆಂದಿಗೂ ಇರುವದು; ಸೂರ್ಯನು ಇರುವವರೆಗೂ ಆತನ ಹೆಸರು ಇರು ವದು. ಮನುಷ್ಯರು ಆತನಲ್ಲಿ ಆಶೀರ್ವಾದ ಹೊಂದು ವರು. ಎಲ್ಲಾ ಜನಾಂಗಗಳು ಆತನನ್ನು ಭಾಗ್ಯವಂತ ನೆಂದು ಕರೆಯುವರು.
- Ephesians 3:21 ಎಫೆಸದವರಿಗೆ 3:21ಸಭೆಯಲ್ಲಿ ಕ್ರಿಸ್ತ ಯೇಸುವಿನ ಮೂಲಕ ತಲತಲಾಂತ ರಕ್ಕೂ ಯುಗಯುಗಾಂತರಕ್ಕೂ ಮಹಿಮೆಯುಂಟಾಗಲಿ. ಆಮೆನ್.
- Psalm 72:7 ಕೀರ್ತನೆಗಳು 72:7ಆತನ ದಿವಸಗಳಲ್ಲಿ ನೀತಿವಂತನು ವೃದ್ಧಿಯಾಗುವನು. ಸಮೃದ್ಧಿ ಯಾದ ಸಮಾಧಾನವು ಚಂದ್ರನು ಇರುವ ವರೆಗೂ ಇರುವದು.
- Daniel 7:27 ದಾನಿಯೇಲನು 7:27ರಾಜ್ಯವೂ ದೊರೆತನವೂ ಆಕಾಶದ ಕೆಳಗಿರುವ ಪೂರ್ತಿ ರಾಜ್ಯಗಳ ಮಹತ್ತು ಮಹೋನ್ನತನ ಪರಿಶುದ್ಧವಾದ ಜನರಿಗೆ ಕೊಡಲ್ಪಡುವದು; ಆತನ ರಾಜ್ಯವು ನಿತ್ಯವಾದ ರಾಜ್ಯ ಮತ್ತು ಎಲ್ಲಾ ದೊರೆತನಗಳೂ ಆತನನ್ನು ಸೇವಿಸುವವು ಮತ್ತು ವಿಧೇಯವಾಗಿರುವವು.ಇಷ್ಟರಲ್ಲಿ ಇದರ ಪ್ರಸ್ತಾಪವು ಮುಗಿಯಿತು, ದಾನಿಯೇಲನೆಂಬ ನನಗೆ ನನ್ನ ಆಲೋಚನೆಗಳು ಬಹಳವಾಗಿ ಕಳವಳಪಡಿಸಿ ದವು; ನನ್ನ ಮುಖವು ಕಳೆಗುಂದಿತು, ಆದರೂ ಈ ಸಂಗತಿಯನ್ನು ನನ್ನ ಹೃದಯದಲ್ಲಿ ಇಟ್ಟುಕೊಂಡೆನು.
- Psalm 89:29 ಕೀರ್ತನೆಗಳು 89:29ಅವನ ಸಂತತಿ ಯನ್ನು ಸಹ ಎಂದೆಂದಿಗೂ ಅವನ ಸಿಂಹಾಸನವನ್ನು ಆಕಾಶದ ದಿವಸಗಳ ಹಾಗೆಯೂ ಮಾಡುವೆನು.
- Luke 1:32–33 ಲೂಕನು 1:32–33ಆತನು ದೊಡ್ಡವನಾಗಿದ್ದು ಮಹೋನ್ನತನ ಕುಮಾರನೆಂದು ಕರೆಯಲ್ಪಡುವನು; ದೇವರಾದ ಕರ್ತನು ಆತನ ತಂದೆ ಯಾದ ದಾವೀದನ ಸಿಂಹಾಸನವನ್ನು ಆತನಿಗೆ ಕೊಡು ವನು. ಆತನು ಯಾಕೋಬನ ಮನೆತನವನ್ನು ಸದಾ ಕಾಲವೂ ಆಳುವನು; ಆತನ ರಾಜ್ಯಕ್ಕೆ ಅಂತ್ಯವೇ ಇಲ್ಲ ಎಂದು ಹೇಳಿದನು.
- Daniel 2:44 ದಾನಿಯೇಲನು 2:44ಅರ ಸರ ದಿವಸಗಳಲ್ಲಿ ಪರಲೋಕದ ದೇವರು ಎಂದಿಗೂ ನಾಶವಾಗದ ರಾಜ್ಯವನ್ನು ಸ್ಥಾಪಿಸುವನು. ಅದರ ರಾಜ್ಯ ವನ್ನು ಬೇರೆ ಜನರಿಗೆ ಕೊಡದೆ ಆ ರಾಜ್ಯಗಳನ್ನೆಲ್ಲಾ ಧ್ವಂಸ ಮಾಡಿ ಮುಗಿಸಿ ಎಂದೆಂದಿಗೂ ನಿಲ್ಲುವದು.
- Isaiah 9:7 ಯೆಶಾಯ 9:7ಅದನ್ನು ನೇಮಿಸುವದಕ್ಕೂ ಇಂದಿನಿಂದ ಎಂದೆಂದಿಗೂ ನೀತಿ ನ್ಯಾಯಗಳೊಂದಿಗೆ ಅದನ್ನು ಸ್ಥಾಪಿಸುವದಕ್ಕೂ ದಾವೀದನ ಸಿಂಹಾಸನ ಕ್ಕಾಗಲಿ ಅವನ ರಾಜ್ಯಕ್ಕಾಗಲಿ ಅವನ ಪರಿಪಾಲ ನೆಯ ಮತ್ತು ಶಾಂತಿಯ ಅಭಿವೃದ್ಧಿಗಾಗಲಿ ಅಂತ್ಯವೇ ಇಲ್ಲ; ಸೈನ್ಯಗಳ ಕರ್ತನ ಆಸಕ್ತಿಯು ಇದನ್ನು ನೆರವೇರಿ ಸುವದು.
- 1 Samuel 12:18 1 ಸಮುವೇಲನು 12:18ಸಮುವೇಲನು ಕರ್ತನಿಗೆ ಮೊರೆ ಇಟ್ಟದ್ದರಿಂದ ಆ ದಿವಸದಲ್ಲೇ ಕರ್ತನು ಗುಡುಗನ್ನೂ ಮಳೆಯನ್ನೂ ಕಳುಹಿಸಿದನು. ಆಗ ಜನರೆಲ್ಲರು ಕರ್ತನಿಗೂ ಸಮು ವೇಲನಿಗೂ ಬಹಳವಾಗಿ ಭಯಪಟ್ಟರು.