Psalms · chapter 72 · verse 6
Psalm 72:6 in Kannada
ಕೊಯ್ದ ಹುಲ್ಲಿನ ಮೇಲೆ ಬೀಳುವ ಮಳೆಯ ಹಾಗೆಯೂ ಭೂಮಿಯನ್ನು ನೆನಸುವ ಸುರಿಯುವ ಮಳೆಗಳ ಹಾಗೆಯೂ ಆತನು ಇಳಿದು ಬರುವನು.
Koyda hullina mele beeluva maleya haageyoo bhoomiyannu nenasuva suriyuva malegala haageyoo aatanu ilidu baruvanu.
Psalm 72:6 in English
- King James Version (KJV)
- He shall come down like rain upon the mown grass: as showers [that] water the earth.
- World English Bible (WEB)
- He will come down like rain on the mown grass, as showers that water the earth.
- American Standard Version (ASV)
- He will come down like rain upon the mown grass, As showers that water the earth.
- Bible in Basic English (BBE)
- May he come down like rain on the cut grass; like showers watering the earth.
- Darby Translation (DBY)
- He shall come down like rain on the mown grass, as showers that water the earth.
- Webster's Bible (WBS)
- He shall come down like rain upon the mown grass: as showers [that] water the earth.
- Young's Literal Translation (YLT)
- He cometh down as rain on mown grass, As showers — sprinkling the earth.
Read in context
- 4ಆತನು ಜನರಲ್ಲಿ ದೀನರಿಗೆ ನ್ಯಾಯತೀರಿಸುವನು; ಬಡವನ ಮಕ್ಕಳನ್ನು ರಕ್ಷಿಸುವನು; ಬಲಾತ್ಕಾರಿಯನ್ನು ಮುರಿದು ತುಂಡು ಮಾಡುವನು.
- 5ಸೂರ್ಯನೂ ಚಂದ್ರನೂ ಇರುವ ವರೆಗೆ ತಲ ತಲಾಂತರಗಳು ನಿನಗೆ ಭಯಪಡುವರು.
- 6ಕೊಯ್ದ ಹುಲ್ಲಿನ ಮೇಲೆ ಬೀಳುವ ಮಳೆಯ ಹಾಗೆಯೂ ಭೂಮಿಯನ್ನು ನೆನಸುವ ಸುರಿಯುವ ಮಳೆಗಳ ಹಾಗೆಯೂ ಆತನು ಇಳಿದು ಬರುವನು.
- 7ಆತನ ದಿವಸಗಳಲ್ಲಿ ನೀತಿವಂತನು ವೃದ್ಧಿಯಾಗುವನು. ಸಮೃದ್ಧಿ ಯಾದ ಸಮಾಧಾನವು ಚಂದ್ರನು ಇರುವ ವರೆಗೂ ಇರುವದು.
- 8ಸಮುದ್ರದಿಂದ ಸಮುದ್ರದ ವರೆಗೂ ನದಿಯಿಂದ ಭೂಮಿಯ ಕೊನೆಗಳವರೆಗೂ ಆತನು ಆಳುವನು.
Cross references
- Hosea 6:3 ಹೋಶೇಯ 6:3ನಾವು ಕರ್ತನನ್ನು ತಿಳಿದುಕೊಳ್ಳಲು ಆತನನ್ನು ಹಿಂಬಾ ಲಿಸಿದರೆ ನಾವು ತಿಳಿದುಕೊಳ್ಳುವೆವು; ಅರುಣೋದ ಯದ ಹಾಗೆ ಆತನ ಹೊರಡೋಣವು ಸಿದ್ಧವಾಗಿದೆ; ಆತನು ಮಳೆಯಂತೆಯೂ ಮುಂಗಾರಿನಂತೆಯೂ ಭೂಮಿಗೆ ತಂಪುಮಾಡುವ ಹಿಂಗಾರಿನಂತೆಯೂ ನಮ್ಮ ಬಳಿಗೆ ಬರುವನು.
- Deuteronomy 32:2 ಧರ್ಮೋಪದೇಶಕಾಂಡ 32:2ನನ್ನ ಬೋಧನೆಯು ಮಳೆಯಂತೆ ಸುರಿಯುವದು; ನನ್ನ ಮಾತು ಮಂಜಿನಂತೆಯೂ ಹುಲ್ಲಿನ ಮೇಲೆ ಬೀಳುವ ತುಂತುರಿನ ಹಾಗೆಯೂ ಪಲ್ಯದ ಮೇಲೆ ಬೀಳುವ ವೃಷ್ಟಿಗಳ ಹಾಗೆಯೂ ಬೀಳುವದು.
- 2 Samuel 23:4 2 ಸಮುವೇಲನು 23:4ಸೂರ್ಯನು ಮೂಡಿರುವಂಥ, ಪ್ರಕಾಶದಿಂದ ಮೋಡಗಳಿಲ್ಲದೆ ಇರುವಂಥ, ಉದಯ ಕಾಲದ ಬೆಳಕಿನ ಹಾಗೆಯೂ ಮಳೆ ಬಂದ ಮೇಲೆ ಭೂಮಿಯಿಂದಾಗುವ ಹುಲ್ಲಿನ ಹಾಗೆಯೂ ಇರು ವನು.
- Hosea 14:5–7 ಹೋಶೇಯ 14:5–7ಇಸ್ರಾಯೇಲಿಗೆ ನಾನು ಮಂಜಿನ ಹಾಗೆ ಇರುವೆನು. ಅವನು ತಾವರೆಯ ಹಾಗೆ ಬೆಳೆಯುವನು; ತನ್ನ ಬೇರುಗಳನ್ನು ಲೆಬನೋನಿನ ಹಾಗೆ ಹರಡುವನು. ಅವನ ಕೊಂಬೆಗಳು ಹರಡಿಕೊಂಡು ಅವನ ಸೌಂದರ್ಯವು ಎಣ್ಣೆಯ ಮರಗಳ ಹಾಗೆಯೂ ಅವನ ಪರಿಮಳವು ಲೆಬನೋನಿನ ಹಾಗೆಯೂ ಇರುವದು. ಆತನ ನೆರಳಿನಲ್ಲಿ ವಾಸಿಸುವವರು ಹಿಂತಿರುಗುವರು; ಧಾನ್ಯದ ಹಾಗೆ ಉಜ್ಜೀವಿಸುವರು; ದ್ರಾಕ್ಷೆಯ ಬಳ್ಳಿಯ ಹಾಗೆ ಬೆಳೆಯು ವರು. ಅವನ ಸುವಾಸನೆಯು ಲೆಬನೋನಿನ ದ್ರಾಕ್ಷಾ ರಸದ ಹಾಗೆ ಇರುವದು.
- Isaiah 14:3–5 ಯೆಶಾಯ 14:3–5ಕರ್ತನು ನಿಮ್ಮ ಸಂಕಟದಿಂದಲೂ ಕಳವಳದಿಂದ ಲೂ ಕಠಿಣವಾದ ಬಿಟ್ಟಿಯ ಸೇವೆಯಿಂದಲೂ ನಿಮ್ಮನ್ನು ವಿಶ್ರಾಂತಿಗೊಳಿಸುವ ದಿನದಲ್ಲಿ ಬಾಬೆಲಿನ ರಾಜನಿಗೆ ವಿರುದ್ಧವಾದ ಈ ಸಾಮತಿಯನ್ನು (ಪದ್ಯವನ್ನು) ನೀವು ಹೀಗೆ ಎತ್ತಿ ಹೇಳಬೇಕು. ಹೀಗೆ ಹಿಂಸಕನು ಕೊನೆ ಗೊಂಡನು, ಬಂಗಾರದ ಪಟ್ಟಣವು ಸುಮ್ಮನೆ ಇದೆ. ಜನರನ್ನು ಉಗ್ರಕೋಪದಿಂದ ಎಡೆಬಿಡದೆ ಹೊಡೆ ದು ಜನಾಂಗಗಳನ್ನು ಸಿಟ್ಟಿನಿಂದ ತಡೆಯಿಲ್ಲದೆ ಹಿಂಸಿಸಿ
- Psalm 65:10 ಕೀರ್ತನೆಗಳು 65:10ಉಳುವೆಯ ಸಾಲುಗಳನ್ನು ಸಮೃದ್ಧಿ ಯಾಗಿ ತ್ಯಾವಿಸುತ್ತೀ; ನೇಗಿಲ ಸಾಲುಗಳನ್ನು ಸಮಮಾಡುತ್ತೀ; ಸುರಿಯುವ ಮಳೆಯಿಂದ ಅದನ್ನು ಮೃದು ಮಾಡುತ್ತೀ; ಅದರ ಮೊಳಿಕೆಯನ್ನು ಆಶೀರ್ವದಿಸುತ್ತೀ.
- Proverbs 16:15 ಜ್ಞಾನೋಕ್ತಿಗಳು 16:15ಅರಸನ ಮುಖದ ಬೆಳಕಿನಲ್ಲಿ ಜೀವ; ಅವನ ದಯೆಯು ಹಿಂಗಾರು ಮಳೆಯ ಮೇಘದಂತಿದೆ.
- Isaiah 5:6 ಯೆಶಾಯ 5:6ಅದನ್ನು ನಾನು ಹಾಳಾಗಲು ಬಿಡುವೆನು: ಅದನ್ನು ಯಾರೂ ಕುಡಿ ಕತ್ತರಿಸುವದಿಲ್ಲ; ಅಗೆಯುವದೂ ಇಲ್ಲ. ಆದರೆ ಅಲ್ಲಿ ಮುಳ್ಳುಪೊದೆಗಳು ಬೆಳೆಯುವವು; ಅಲ್ಲದೆ ಅದರ ಮೇಲೆ ಮಳೆ ಸುರಿಸಬಾರದೆಂದು ಮೋಡಗಳಿಗೆ ಆಜ್ಞಾ ಪಿಸುವೆನು.
- Proverbs 19:12 ಜ್ಞಾನೋಕ್ತಿಗಳು 19:12ಅರಸನ ಕೋಪವು ಸಿಂಹದ ಘರ್ಜನೆಯಂತಿದೆ; ಅವನ ದಯೆಯು ಹುಲ್ಲಿನ ಮೇಲಿರುವ ಇಬ್ಬನಿಯಂತಿದೆ.
- Ezekiel 34:23–26 ಯೆಹೆಜ್ಕೇಲನು 34:23–26ನಾನು ಅವುಗಳ ಮೇಲೆ ಒಬ್ಬ ಕುರುಬನನ್ನು ನೇಮಿಸುವೆನು; ಅವನು ಅವುಗಳನ್ನು ಮೇಯಿಸುತ್ತಾನೆ. ನನ್ನ ಸೇವಕನಾದ ದಾವೀದನೇ ಅವುಗಳನ್ನು ಮೇಯಿಸಿ ಅವುಗಳಿಗೆ ಕುರುಬನಾಗುತ್ತಾನೆ. ಕರ್ತನಾದ ನಾನೇ ಅವುಗಳಿಗೆ ದೇವರಾಗಿರುವೆನು; ಮತ್ತು ನನ್ನ ಸೇವಕನಾದ ದಾವೀದನು ಅವುಗಳ ಮಧ್ಯೆ ಪ್ರಧಾನನಾಗಿರುವನೆಂದು ಕರ್ತನಾದ ನಾನೇ ಅದನ್ನು ಮಾತಾಡಿದ್ದೇನೆ; ಅವರ ಸಂಗಡ ಸಮಾ ಧಾನದ ಒಡಂಬಡಿಕೆಯನ್ನು ಮಾಡಿಕೊಳ್ಳುವೆನು; ಕೆಟ್ಟ ಮೃಗಗಳನ್ನು ದೇಶದೊಳಗೆ ಇಲ್ಲದಂತೆ ಮಾಡುವೆನು; ಅವರು ನಿರ್ಭಯವಾಗಿ ಅರಣ್ಯಗಳಲ್ಲಿ ವಾಸಿಸಿ ಅಡವಿಗಳಲ್ಲಿ ಮಲಗುವರು. ಅವರನ್ನೂ ನನ್ನ ಪರ್ವತಗಳ ಸುತ್ತಣ ಪ್ರದೇಶಗಳನ್ನೂ ಆಶೀರ್ವದಿ ಸುವೆನು, ಕಾಲಕ್ಕೆ ಸರಿಯಾಗಿ ಮಳೆಯನ್ನು ಸುರಿಸುವೆನು; ದಿವ್ಯಾಶೀರ್ವಾದದ ಮಳೆಯಾಗುವದು;