Psalms · chapter 72 · verse 8
Psalm 72:8 in Kannada
ಸಮುದ್ರದಿಂದ ಸಮುದ್ರದ ವರೆಗೂ ನದಿಯಿಂದ ಭೂಮಿಯ ಕೊನೆಗಳವರೆಗೂ ಆತನು ಆಳುವನು.
Samudradinda samudrada varegoo nadiyinda bhoomiya konegalavaregoo aatanu aaluvanu.
Psalm 72:8 in English
- King James Version (KJV)
- He shall have dominion also from sea to sea, and from the river unto the ends of the earth.
- World English Bible (WEB)
- He shall have dominion also from sea to sea, from the River to the ends of the earth.
- American Standard Version (ASV)
- He shall have dominion also from sea to sea, And from the River unto the ends of the earth.
- Bible in Basic English (BBE)
- Let his kingdom be from sea to sea, from the River to the ends of the earth.
- Darby Translation (DBY)
- And he shall have dominion from sea to sea, and from the river unto the ends of the earth.
- Webster's Bible (WBS)
- He shall have dominion also from sea to sea, and from the river to the ends of the earth.
- Young's Literal Translation (YLT)
- And he ruleth from sea unto sea, And from the river unto the ends of earth.
Read in context
- 6ಕೊಯ್ದ ಹುಲ್ಲಿನ ಮೇಲೆ ಬೀಳುವ ಮಳೆಯ ಹಾಗೆಯೂ ಭೂಮಿಯನ್ನು ನೆನಸುವ ಸುರಿಯುವ ಮಳೆಗಳ ಹಾಗೆಯೂ ಆತನು ಇಳಿದು ಬರುವನು.
- 7ಆತನ ದಿವಸಗಳಲ್ಲಿ ನೀತಿವಂತನು ವೃದ್ಧಿಯಾಗುವನು. ಸಮೃದ್ಧಿ ಯಾದ ಸಮಾಧಾನವು ಚಂದ್ರನು ಇರುವ ವರೆಗೂ ಇರುವದು.
- 8ಸಮುದ್ರದಿಂದ ಸಮುದ್ರದ ವರೆಗೂ ನದಿಯಿಂದ ಭೂಮಿಯ ಕೊನೆಗಳವರೆಗೂ ಆತನು ಆಳುವನು.
- 9ಆತನ ಮುಂದೆ ಅರಣ್ಯ ನಿವಾಸಿಗಳು ಎರಗುವರು; ಆತನ ಶತ್ರುಗಳು ಧೂಳನ್ನು ನೆಕ್ಕುವರು.
- 10ತಾರ್ಷೀಷಿನ ಅರಸರೂ ದ್ವೀಪಗಳ ಅರಸರೂ ಕಾಣಿಕೆಗಳನ್ನು ತರುವರು; ಶೆಬಾ ಮತ್ತು ಸೆಬಾದ ಅರಸರು ದಾನಗಳನ್ನು ಅರ್ಪಿಸುವರು.
Cross references
- Exodus 23:31 ವಿಮೋಚನಕಾಂಡ 23:31ಕೆಂಪು ಸಮುದ್ರದಿಂದ ಫಿಲಿಷ್ಟಿಯರ ಸಮುದ್ರದ ವರೆಗೂ ಅರಣ್ಯದಿಂದ ನದಿಯ ವರೆಗೂ ನಿಮ್ಮ ಮೇರೆ ಗಳನ್ನು ನೇಮಿಸುವೆನು; ದೇಶದ ನಿವಾಸಿಗಳನ್ನು ನಿಮ್ಮ ಕೈಗಳಿಗೆ ಒಪ್ಪಿಸುವೆನು. ನೀವು ಅವರನ್ನು ನಿಮ್ಮ ಎದುರಿ ನಿಂದ ಓಡಿಸಿಬಿಡುವಿರಿ.
- Zechariah 9:10 ಜೆಕರ್ಯ 9:10ಇದಲ್ಲದೆ ಎಫ್ರಾಯಾಮಿನೊಳಗಿಂದ ರಥ ಗಳನ್ನೂ ಯೆರೂಸಲೇಮಿನೊಳಗಿಂದ ಕುದುರೆಗಳನ್ನೂ ತೆಗೆದುಬಿಡುವೆನು; ಯುದ್ಧದ ಬಿಲ್ಲು ಸಹ ತೆಗೆದು ಹಾಕಲ್ಪಡುವದು; ಆತನು ಅನ್ಯ ಜನಾಂಗಗಳಿಗೆ ಸಮಾ ಧಾನವನ್ನು ಹೇಳುವನು; ಆತನ ದೊರೆತನವು ಸಮುದ್ರ ದಿಂದ ಸಮುದ್ರಕ್ಕೂ ನದಿಯಿಂದ ಭೂಮಿಯ ಅಂತ್ಯಗಳ ವರೆಗೂ ಇರುವದು.
- 1 Kings 4:21–24 1 ಅರಸುಗಳು 4:21–24ಇದಲ್ಲದೆ ಸೊಲೊಮೋನನು ನದಿ ಮೊದಲು ಗೊಂಡು ಫಿಲಿಷ್ಟಿಯರ ದೇಶವನ್ನು ಹಾದು ಐಗುಪ್ತದ ಮೇರೆಯ ವರೆಗೂ ಇರುವ ಸಮಸ್ತ ರಾಜ್ಯಗಳ ಮೇಲೆ ಆಳುತ್ತಿದ್ದನು. ಆ ರಾಜ್ಯಗಳವರು ಸೊಲೊಮೋನನು ಜೀವಿಸಿರುವ ದಿವಸಗಳಲ್ಲೆಲ್ಲಾ ಕಾಣಿಕೆಗಳನ್ನು ತಂದು ಅವನನ್ನು ಸೇವಿಸುತ್ತಾ ಇದ್ದರು. ಸೊಲೊಮೋನನ ಒಂದು ದಿನದ ಭೋಜನ ವೇನಂದರೆ--ನಯವಾದ ಹಿಟ್ಟು ಮೂವತ್ತು ಅಳತೆ, ಹಿಟ್ಟು ಅರವತ್ತು ಅಳತೆ, ಹತ್ತು ಕೊಬ್ಬಿದ ಎತ್ತುಗಳು, ಇಪ್ಪತ್ತು ಮೇಯುವ ಎತ್ತುಗಳು, ನೂರು ಕುರಿಗಳು; ಇವುಗಳ ಹೊರತಾಗಿ ದುಪ್ಪಿಗಳೂ ಜಿಂಕೆಗಳೂ ಕೆಂದ ಜಿಂಕೆಗಳೂ ಕೊಬ್ಬಿದ ಕೋಳಿಗಳೂ ನದಿಯ ಈಚೆ ಯಲ್ಲಿ ತಿಫ್ಸಹು ಮೊದಲುಗೊಂಡು ಗಾಜದ ವರೆಗೂ ನದಿಯ ಈಚೆಯಲ್ಲಿರುವ ಸಮಸ್ತ ಅರಸುಗಳ ಮೇಲೆ ಅವನು ಅಧಿಕಾರಿಯಾಗಿದ್ದನು. ಇದಲ್ಲದೆ ಸುತ್ತಲಿ ರುವ ಸಮಸ್ತ ದಿಕ್ಕಿನಲ್ಲಿ ಅವನಿಗೆ ಸಮಾಧಾನವಾಗಿತ್ತು.
- Psalm 80:11 ಕೀರ್ತನೆಗಳು 80:11ಅದು ತನ್ನ ರೆಂಬೆಗಳನ್ನು ಸಮುದ್ರದ ವರೆಗೂ ತನ್ನ ಬಳ್ಳಿಗಳನ್ನು ನದಿಗೂ ಹರಡಿಸಿತು.
- Psalm 2:8 ಕೀರ್ತನೆಗಳು 2:8ನನ್ನನ್ನು ಕೇಳು; ಆಗ ಅನ್ಯಜನರನ್ನು ನಿನ್ನ ಬಾಧ್ಯತೆಯಾಗಿಯೂ ಭೂಮಿಯ ಕಟ್ಟಕಡೆಯ ವರೆಗೆ ನಿನ್ನ ಸ್ವಾಸ್ಥ್ಯವಾಗಿಯೂ ಕೊಡುವೆನು.
- Psalm 89:25 ಕೀರ್ತನೆಗಳು 89:25ಸಮುದ್ರದಲ್ಲಿ ಅವನ ಕೈ ಯನ್ನೂ ನದಿಗಳಲ್ಲಿ ಅವನ ಬಲಗೈಯನ್ನೂ ಇರಿಸು ವೆನು.
- Psalm 89:36 ಕೀರ್ತನೆಗಳು 89:36ಅವನ ಸಂತತಿಯು ಯುಗ ಯುಗಕ್ಕೂ ಅವನ ಸಿಂಹಾಸನವು ನನ್ನ ಮುಂದೆ ಸೂರ್ಯನ ಹಾಗೆಯೂ ಇರುವದು.
- Revelation 11:15 ಪ್ರಕಟನೆ 11:15ಏಳನೆಯ ದೂತನು ತುತೂರಿಯನ್ನೂದಿದನು. ಆಗ ಪರಲೋಕದಲ್ಲಿ ಮಹಾಶಬ್ದಗಳುಂಟಾಗಿ-- ಈ ಲೋಕದ ರಾಜ್ಯಗಳು ನಮ್ಮ ಕರ್ತನ ಮತ್ತು ಆತನ ಕ್ರಿಸ್ತನ ರಾಜ್ಯಗಳಾದವು; ಆತನು ಯುಗ ಯುಗಾಂತರಗಳಲ್ಲಿಯೂ ಆಳುವನು ಎಂದು ಹೇಳಿ ದವು.
- Psalm 22:27–28 ಕೀರ್ತನೆಗಳು 22:27–28ಲೋಕದಂತ್ಯದಲ್ಲಿರುವ ಎಲ್ಲಾ ಜನರು ಜ್ಞಾಪಕ ಮಾಡಿ ಕರ್ತನ ಕಡೆಗೆ ತಿರಿಗಿಕೊಳ್ಳುವರು; ಜನಾಂಗ ಗಳ ಗೋತ್ರಗಳೆಲ್ಲರೂ ನಿನ್ನ ಮುಂದೆ ಆರಾಧಿಸುವರು. ರಾಜ್ಯವು ಕರ್ತನದೇ; ಜನಾಂಗಗಳಲ್ಲಿ ಆಳುವಾತನು ಆತನೇ.