Psalms · chapter 73 · verse 19
Psalm 73:19 in Kannada
ಕ್ಷಣಮಾತ್ರದಲ್ಲಿ ಹೀಗೆ ನಾಶನಕ್ಕೆ ಅವರನ್ನು ಬರಮಾಡಿದಿ. ಅವರು ದಿಗಿಲುಗಳಿಂದ ಸಂಪೂರ್ಣವಾಗಿ ನಾಶವಾಗಿದ್ದಾರೆ.
Kshanamaatradalli heege naashanakke avarannu baramaadidi. Avaru digilugalinda sampoornavaagi naashavaagiddaare.
Psalm 73:19 in English
- King James Version (KJV)
- How are they [brought] into desolation, as in a moment! they are utterly consumed with terrors.
- World English Bible (WEB)
- How they are suddenly destroyed! They are completely swept away with terrors.
- American Standard Version (ASV)
- How are they become a desolation in a moment! They are utterly consumed with terrors.
- Bible in Basic English (BBE)
- How suddenly are they wasted! fears are the cause of their destruction.
- Darby Translation (DBY)
- How are they suddenly made desolate! they pass away, consumed with terrors.
- Webster's Bible (WBS)
- How are they [brought] into desolation, as in a moment! they are utterly consumed with terrors.
- Young's Literal Translation (YLT)
- How have they become a desolation as in a moment, They have been ended — consumed from terrors.
Read in context
- 17ಅದು ನನ್ನ ದೃಷ್ಟಿಗೆ ಕಷ್ಟವಾಗಿತ್ತು. ಅವರ ಅಂತ್ಯವನ್ನು ಗ್ರಹಿಸಿ ಕೊಂಡೆನು.
- 18ನಿಶ್ಚಯವಾಗಿ ನೀನು ಅವರನ್ನು ಜಾರುವ ಸ್ಥಳಗಳಲ್ಲಿ ಇಟ್ಟಿದ್ದೀ; ಅವರನ್ನು ನಾಶನಕ್ಕೆ ಕೆಳಗೆ ದೊಬ್ಬಿದ್ದೀ.
- 19ಕ್ಷಣಮಾತ್ರದಲ್ಲಿ ಹೀಗೆ ನಾಶನಕ್ಕೆ ಅವರನ್ನು ಬರಮಾಡಿದಿ. ಅವರು ದಿಗಿಲುಗಳಿಂದ ಸಂಪೂರ್ಣವಾಗಿ ನಾಶವಾಗಿದ್ದಾರೆ.
- 20ಎಚ್ಚತ್ತ ಮೇಲೆ ಕನಸು ಹೇಗೋ ಹಾಗೆಯೇ ಓ ಕರ್ತನೇ, ನೀನು ಎಚ್ಚರವಾದಾಗ ಅವರ ರೂಪವನ್ನು ತಿರಸ್ಕರಿಸುವಿ.
- 21ಹೀಗೆ ನನ್ನ ಹೃದಯವು ವ್ಯಥೆಗೊಂಡಾಗ ನನ್ನ ಅಂತರಿಂದ್ರಿಯಗಳಿಗೆ ತಿವಿಯಲ್ಪಟ್ಟವು.
Cross references
- Isaiah 47:11 ಯೆಶಾಯ 47:11ಆದದರಿಂದ ನೀನು ಮಂತ್ರಿಸಿ ನಿವಾರಿಸ ಲಾರದ ಕೇಡು ನಿನ್ನ ಮೇಲೆ ಬರುವದು. ನೀನು ಪರಿಹರಿಸಲಾಗದ ವಿಪತ್ತು ನಿನ್ನ ಮೇಲೆ ಬೀಳುವದು; ನಿನಗೆ ತಿಳಿಯದ ನಾಶನವು ಪಕ್ಕನೆ ನಿನ್ನ ಮೇಲೆ ಬರುವದು.
- Daniel 5:6 ದಾನಿಯೇಲನು 5:6ಆಗ ಅರಸನ ಮುಖವು ಕಳೆಗುಂದಿತು, ಅವನ ಆಲೋಚನೆಗಳು ಅವನನ್ನು ಕಳವಳಪಡಿಸಿದವು. ಅವನ ನಡುವಿನ ಕೀಲುಗಳು ಸಡಿಲವಾದವು. ಅವನ ಮೊಣಕಾಲುಗಳು ಒಂದಕ್ಕೊಂದು ಬಡಿದುಕೊಂಡವು.
- Proverbs 28:1 ಜ್ಞಾನೋಕ್ತಿಗಳು 28:1ಹಿಂದಟ್ಟುವವನು ಇಲ್ಲದಿದ್ದರೂ ದುಷ್ಟರು ಓಡಿಹೋಗುತ್ತಾರೆ; ಸಿಂಹದ ಹಾಗೆ ನೀತಿವಂತರು ಧೈರ್ಯದಿಂದ ಇರುತ್ತಾರೆ.
- Isaiah 30:13 ಯೆಶಾಯ 30:13ನೀವು ಈ ಮಾತನ್ನು ತಿರಸ್ಕಾರ ಮಾಡಿ ಬಲತ್ಕಾರ, ಕುಯುಕ್ತಿಗಳನ್ನು ನಂಬಿ ಅವುಗಳನ್ನೇ ಆಧಾರಮಾಡಿಕೊಂಡದ್ದರಿಂದ ಎತ್ತರ ವಾದ ಗೋಡೆಯ ಒಂದು ಭಾಗವು ಉಬ್ಬಿಕೊಂಡು ತಟ್ಟನೆ ಕ್ಷಣಮಾತ್ರದಲ್ಲಿ ಕಳಚಿಬೀಳುವ ಹಾಗೆ ನಿಮ್ಮ ಅಪರಾಧವು ನಿಮಗೆ ಅಪಾಯಕರವಾಗಿರುವದು.
- Revelation 18:10 ಪ್ರಕಟನೆ 18:10ಅವರು ದೂರದಲ್ಲಿ ನಿಂತು ಅವಳಿಗುಂಟಾದ ಯಾತ ನೆಯ ಭಯದಿಂದ--ಅಯ್ಯೋ, ಅಯ್ಯೋ, ಆ ಮಹಾಪಟ್ಟಣವಾದ ಬಾಬೆಲೇ, ಬಲಿಷ್ಠವಾದ ನಗ ರಿಯೇ, ಒಂದೇ ಗಳಿಗೆಯಲ್ಲಿ ನಿನಗೆ ತೀರ್ಪಾಯಿತಲ್ಲಾ ಎಂದು ಹೇಳುವರು.
- 1 Thessalonians 5:3 1 ಥೆಸಲೊನೀಕದವರಿಗೆ 5:3ಆದರೆ--ಸಮಾಧಾನವಾಗಿಯೂ ಸುರಕ್ಷಿತವಾಗಿಯೂ ಇರುತ್ತೇ ವೆಂದು ಜನರು ಹೇಳುತ್ತಿರುವಾಗಲೇ ಅವರ ಮೇಲೆ ನಾಶನವು ಗರ್ಭಿಣಿಗೆ ಪ್ರಸವವೇದನೆ ಬರುವ ಪ್ರಕಾರ ಬರುವದು; ಅವರು ಹೇಗೂ ತಪ್ಪಿಸಿಕೊಳ್ಳಲಾರರು.
- Job 15:21 ಯೋಬನು 15:21ಭಯಂಕರವಾದ ಶಬ್ದ ಅವನ ಕಿವಿಗಳಲ್ಲಿ ಅದೆ; ವೃದ್ಧಿಯಲ್ಲಿರುವಾಗ ಹಾಳುಮಾಡುವವನು ಅವನ ಮೇಲೆ ಬರುತ್ತಾನೆ.
- Job 20:5 ಯೋಬನು 20:5ಏನಂದರೆ, ದುಷ್ಟರ ಜಯವು ಸ್ವಲ್ಪ ಕಾಲದ್ದೂ ಕಪಟಿಗಳ ಸಂತೋಷವು ಕ್ಷಣ ಮಾತ್ರದ್ದೂ.
- Numbers 16:21 ಅರಣ್ಯಕಾಂಡ 16:21ಈ ಸಭೆಯ ಮಧ್ಯದೊಳಗಿಂದ ನಿಮ್ಮನ್ನು ಪ್ರತ್ಯೇಕಿಸಿಕೊಳ್ಳಿರಿ. ನಾನು ಅವರನ್ನು ಕ್ಷಣಮಾತ್ರ ದಲ್ಲಿ ದಹಿಸಿಬಿಡುತ್ತೇನೆ ಅಂದನು.
- Isaiah 21:3–4 ಯೆಶಾಯ 21:3–4ಆದ ದರಿಂದ ನನ್ನ ಸೊಂಟಗಳು ನೋವಿನಿಂದ ತುಂಬಿವೆ. ಹೆರುವವಳ ವೇದನೆಗಳಂತಿರುವ ವೇದನೆಗಳು ನನ್ನನ್ನು ಹಿಡಿದಿವೆ; ಕೇಳಕೂಡದ ಹಾಗೆ ಸಂಕಟಪಡುತ್ತೇನೆ, ನೋಡಕೂಡದ ಹಾಗೆ ಭ್ರಾಂತನಾಗಿದ್ದೇನೆ. ನನ್ನ ಹೃದಯವು (ಎದುರಿಸುತ್ತದೆ) ಗಾಬರಿಗೊಂಡಿದೆ, ನಡು ಗುವಿಕೆಯು ನನ್ನನ್ನು ಕಳವಳಗೊಳಿಸಿದೆ, ನನ್ನ ಆನಂ ದದ ರಾತ್ರಿಯನ್ನು ನನಗೆ ಭಯಭ್ರಾಂತಿಯಾಗಿ ಮಾಡಿದ್ದಾನೆ.
- Numbers 17:12–13 ಅರಣ್ಯಕಾಂಡ 17:12–13ಆಗ ಇಸ್ರಾಯೇಲ್ ಮಕ್ಕಳು ಮೋಶೆಯ ಸಂಗಡ ಮಾತನಾಡಿ--ಇಗೋ, ಸಾಯುತ್ತೇವೆ. ನಾಶವಾಗು ತ್ತೇವೆ: ನಾವೆಲ್ಲರೂ ನಾಶವಾಗುತ್ತೇವೆ.ಕರ್ತನ ಗುಡಾರದ ಸವಿಾಪಕ್ಕೆ ಬರುವವರೆಲ್ಲರೂ ಸಾಯುವರು. ಸಾಯುವದರಿಂದ ನಾವು ನಾಶವಾಗಬೇಕೋ ಎಂದು ಹೇಳಿದರು. ಕರ್ತನ ಗುಡಾರದ ಸವಿಾಪಕ್ಕೆ ಬರುವವರೆಲ್ಲರೂ ಸಾಯುವರು. ಸಾಯುವದರಿಂದ ನಾವು ನಾಶವಾಗಬೇಕೋ ಎಂದು ಹೇಳಿದರು.
- Job 20:23–25 ಯೋಬನು 20:23–25ಏನಾಗುವದಂದರೆ ಅವನ ಹೊಟ್ಟೆಯನ್ನು ತುಂಬು ವದಕ್ಕಿರುವಾಗ ದೇವರು ತನ್ನ ಕೋಪದ ಉರಿಯನ್ನು ಅವನ ಮೇಲೆ ಕಳುಹಿಸುವನು; ಅವನ ಆಹಾರಕ್ಕಾಗಿ ಅವನ ಮೇಲೆ ಸುರಿಸುವನು. ಅವನು ಕಬ್ಬಿಣದ ಆಯುಧಕ್ಕೆ ಓಡಿಹೋದರೆ ಹಿತ್ತಾಳೆಯ ಬಿಲ್ಲು ಅವ ನನ್ನು ತಿವಿಯುವದು. ಅವನು ಎಳೆದರೆ ಅದು ಬೆನ್ನಿನಿಂದ ಹೊರಡುವದು; ಅವನ ಪಿತ್ತದೊಳಗಿಂದ ಮಿಂಚುವ ಖಡ್ಗ ಬರುವದು; ಅವನ ಮೇಲೆ ಹೆದರಿಕೆ ಗಳು ಅವೆ.