Psalms · chapter 73 · verse 25
Psalm 73:25 in Kannada
ಪರ ಲೋಕದಲ್ಲಿ ನನಗೆ ನೀನಲ್ಲದೆ ಮತ್ತಾರಿದ್ದಾರೆ? ನಿನ್ನ ಹೊರತಾಗಿ ಭೂಮಿಯಲ್ಲಿ ನಾನು ಅಪೇಕ್ಷಿಸುವವರು ಯಾರೂ ಇಲ್ಲ.
Para lokadalli nanage neenallade mattaariddaare? Ninna horataagi bhoomiyalli naanu apekshisuvavaru yaaroo illa.
Psalm 73:25 in English
- King James Version (KJV)
- Whom have I in heaven [but thee]? and [there is] none upon earth [that] I desire beside thee.
- World English Bible (WEB)
- Whom do I have in heaven? There is no one on earth whom I desire besides you.
- American Standard Version (ASV)
- Whom have I in heaven [but thee]? And there is none upon earth that I desire besides thee.
- Bible in Basic English (BBE)
- Whom have I in heaven but you? and having you I have no desire for anything on earth.
- Darby Translation (DBY)
- Whom have I in the heavens? and there is none upon earth I desire beside thee.
- Webster's Bible (WBS)
- Whom have I in heaven [but thee] ? and [there is] none upon earth [that] I desire besides thee.
- Young's Literal Translation (YLT)
- Whom have I in the heavens? And with Thee none I have desired in earth.
Read in context
- 23ಆದಾಗ್ಯೂ ನಾನು ನಿನ್ನ ಸಂಗಡ ಯಾವಾಗಲೂ ಇದ್ದೇನೆ; ನೀನು ನನ್ನ ಬಲಗೈಯನ್ನು ಹಿಡಿದಿದ್ದೀ.
- 24ನಿನ್ನ ಆಲೋಚನೆಯಂತೆ ನನ್ನನ್ನು ನಡಿಸಿದ ತರು ವಾಯ ಮಹಿಮೆಗೆ ನನ್ನನ್ನು ಅಂಗೀಕರಿಸುವಿ.
- 25ಪರ ಲೋಕದಲ್ಲಿ ನನಗೆ ನೀನಲ್ಲದೆ ಮತ್ತಾರಿದ್ದಾರೆ? ನಿನ್ನ ಹೊರತಾಗಿ ಭೂಮಿಯಲ್ಲಿ ನಾನು ಅಪೇಕ್ಷಿಸುವವರು ಯಾರೂ ಇಲ್ಲ.
- 26ನನ್ನ ಮಾಂಸವೂ ಹೃದಯವೂ ಕುಂದುತ್ತದೆ; ಆದರೆ ದೇವರು ಯುಗಯುಗಕ್ಕೂ ನನ್ನ ಹೃದಯದ ಬಲವೂ ಪಾಲೂ ಆಗಿದ್ದಾನೆ.
- 27ಇಗೋ, ನಿನಗೆ ದೂರವಾಗಿರುವವರು ನಾಶವಾಗುವರು, ನಿನ್ನನ್ನು ಬಿಟ್ಟು ಜಾರತ್ವ ಮಾಡುವವರೆಲ್ಲ ರನ್ನು ಸಂಹರಿಸಿದ್ದೀ.ನನಗಾದರೋ ದೇವರ ಸವಿಾಪಕ್ಕೆ ಬರುವದೇ ಒಳ್ಳೇದಾಗಿದೆ; ನಿನ್ನ ಕ್ರಿಯೆ ಗಳನ್ನೆಲ್ಲಾ ಸಾರುವದಕ್ಕೆ ಕರ್ತನಾದ ದೇವರಲ್ಲಿ ನನ್ನ ಭರವಸವನ್ನು ಇಟ್ಟಿದ್ದೇನೆ.
Cross references
- Philippians 3:8 ಫಿಲಿಪ್ಪಿಯವರಿಗೆ 3:8ಹೌದು, ನಿಸ್ಸಂದೇಹವಾಗಿ ನನ್ನ ಕರ್ತನಾದ ಕ್ರಿಸ್ತ ಯೇಸುವಿನ ವಿಷಯವಾಗಿರುವ ಅತಿ ಶ್ರೇಷ್ಟವಾದ ಜ್ಞಾನದ ನಿಮಿತ್ತವಾಗಿ ನಾನು ಎಲ್ಲವನ್ನು ನಷ್ಟವೆಂದೆಣಿಸುತ್ತೇನೆ. ನಾನು ಕ್ರಿಸ್ತನನ್ನು ಸಂಪಾದಿಸಿ ಕೊಳ್ಳಬೇಕೆಂದು ಆತನ ನಿಮಿತ್ತ ಎಲ್ಲವನ್ನು ಕಳಕೊಂಡು ಅದನ್ನು ಕಸವೆಂದೆಣಿಸುತ್ತೇನೆ.
- Psalm 16:2 ಕೀರ್ತನೆಗಳು 16:2ನೀನೇ ನನ್ನ ಕರ್ತನು; ನನ್ನ ಒಳ್ಳೇತನ ನಿನಗೆ ಮಾತ್ರವಲ್ಲದೆ
- Psalm 63:3 ಕೀರ್ತನೆಗಳು 63:3ನಿನ್ನ ಪ್ರೀತಿ ಕರುಣೆಯು ಜೀವಕ್ಕಿಂತ ಶ್ರೇಷ್ಠ ವಾದದ್ದು; ನನ್ನ ತುಟಿಗಳು ನಿನ್ನನ್ನು ಹೊಗಳುವವು.
- Psalm 16:5 ಕೀರ್ತನೆಗಳು 16:5ಕರ್ತನು ನನ್ನ ಪಾಲಿನ ಮತ್ತು ನನ್ನ ಪಾತ್ರೆಯ ಭಾಗವಾಗಿದ್ದಾನೆ; ನೀನು ನನ್ನ ಸ್ವಾಸ್ತ್ಯವನ್ನು ಸ್ಥಿರವಾಗಿ ಕಾಪಾಡುತ್ತೀ.
- Isaiah 26:8–9 ಯೆಶಾಯ 26:8–9ಹೌದು, ಓ ಕರ್ತನೇ, ನಿನ್ನ ನ್ಯಾಯತೀರ್ಪಿನ ಮಾರ್ಗದಲ್ಲಿ ನಾವು ನಿನಗೋಸ್ಕರ ಕಾದುಕೊಂಡಿದ್ದೇವೆ; ನಿನ್ನ ಹೆಸರಿನ ನೆನಪಿನ ಕಡೆಗೆ ನಮ್ಮ ಆತ್ಮದ ಇಷ್ಟವಾಗಿದೆ. ರಾತ್ರಿಯಲ್ಲಿ ನಿನ್ನನ್ನು ಮನಃಪೂರ್ವಕವಾಗಿ ಬಯಸಿದ್ದೇನೆ, ಹೌದು, ನನ್ನಲ್ಲಿ ರುವ ನನ್ನ ಆತ್ಮದೊಂದಿಗೆ ನಿನ್ನನ್ನು ಮುಂಜಾನೆಯಲ್ಲಿ ಹುಡುಕುತ್ತಿದ್ದೇನೆ; ಭೂಮಿಗೆ ನಿನ್ನ ನ್ಯಾಯತೀರ್ವಿಕೆ ಗಳು ನಡೆಯುವಾಗಲೇ ಭೂಲೋಕದ ನಿವಾಸಿಗಳು ನೀತಿಯನ್ನು ಕಲಿಯುತ್ತಾರೆ.
- Matthew 10:37 ಮತ್ತಾಯನು 10:37ನನಗಿಂತ ಹೆಚ್ಚಾಗಿ ತಂದೆಯನ್ನಾಗಲೀ ತಾಯಿಯನ್ನಾಗಲೀ ಪ್ರೀತಿ ಮಾಡುವವನು ನನಗೆ ಯೋಗ್ಯನಲ್ಲ; ಮತ್ತು ಮಗನ ನ್ನಾಗಲೀ ಮಗಳನ್ನಾಗಲೀ ನನಗಿಂತ ಹೆಚ್ಚಾಗಿ ಪ್ರೀತಿ ಮಾಡುವವನು ನನಗೆ ಯೋಗ್ಯನಲ್ಲ.
- Psalm 37:4 ಕೀರ್ತನೆಗಳು 37:4ಕರ್ತನಲ್ಲಿ ಆನಂದವಾಗಿರು; ಆಗ ಆತನು ನಿನ್ನ ಹೃದಯದ ಅಪೇಕ್ಷೆಗಳನ್ನು ನಿನಗೆ ಕೊಡುವನು.
- Psalm 104:34 ಕೀರ್ತನೆಗಳು 104:34ಆತನ ವಿಷಯವಾದ ನನ್ನ ಧ್ಯಾನವು ಸಿಹಿಯಾಗಿ ರುವದು; ನಾನು ಕರ್ತನಲ್ಲಿ ಸಂತೋಷಪಡುವೆನು.ಪಾಪಾತ್ಮರು ಭೂಮಿಯೊಳಗಿಂದ ನಾಶವಾಗಲಿ; ದುಷ್ಟರು ಇಲ್ಲದೆ ಹೋಗಲಿ; ಓ ನನ್ನ ಮನವೇ, ಕರ್ತನನ್ನು ಸ್ತುತಿಸು; ಕರ್ತನನ್ನು ಕೊಂಡಾಡಿರಿ.
- Psalm 143:6–8 ಕೀರ್ತನೆಗಳು 143:6–8ನನ್ನ ಕೈಗಳನ್ನು ನಿನ್ನ ಕಡೆಗೆ ಚಾಚುತ್ತೇನೆ; ನನ್ನ ಪ್ರಾಣವು ದಾಹಗೊಂಡ ಭೂಮಿಯ ಹಾಗೆ ನಿನಗಾಗಿ ದಾಹಗೊಂಡಿದೆ. ಓ ಕರ್ತನೇ, ನನಗೆ ಬೇಗನೆ ಉತ್ತರಕೊಡು; ನನ್ನ ಪ್ರಾಣವು ಕುಂದಿಹೋಗಿದೆ; ನಾನು ಕುಣಿಯಲ್ಲಿ ಇಳಿಯುವವರಿಗೆ ಸಮಾನವಾಗದ ಹಾಗೆ ನಿನ್ನ ಮುಖ ವನ್ನು ನನಗೆ ಮರೆಮಾಡಬೇಡ. ಹೊತ್ತಾರೆಯಲ್ಲಿ ನಿನ್ನ ಪ್ರೀತಿಕರುಣೆಯನ್ನು ನಾನು ಕೇಳುವಂತೆ ಮಾಡು; ನಿನ್ನಲ್ಲಿ ಭರವಸವಿಟ್ಟಿದ್ದೇನೆ; ನಾನು ಹೋಗಬೇಕಾದ ಮಾರ್ಗವನ್ನು ನನಗೆ ತಿಳಿಯಪಡಿಸು; ನಿನ್ನ ಕಡೆಗೆ ನನ್ನ ಪ್ರಾಣವನ್ನು ಎತ್ತುತ್ತೇನೆ.
- Psalm 43:4 ಕೀರ್ತನೆಗಳು 43:4ಆಗ ದೇವರ ಬಲಿಪೀಠದ ಬಳಿಗೂ ನನ್ನ ಅಧಿಕ ಸಂತೋಷವಾದ ದೇವರ ಬಳಿಗೂ ಬಂದು ಹೌದು, ಕಿನ್ನರಿಯಿಂದ, ನನ್ನ ದೇವರಾದ ಓ ದೇವರೇ, ನಿನ್ನನ್ನು ಕೊಂಡಾಡುವೆನು.ಓ ನನ್ನ ಪ್ರಾಣವೇ, ಕುಗ್ಗಿಹೋಗಿರುವದೇನು? ಯಾಕೆ ನನ್ನಲ್ಲಿ ವ್ಯಾಕುಲಪಡುತ್ತೀ? ದೇವರನ್ನು ನಿರೀಕ್ಷಿಸು. ನನ್ನ ಮುಖದ ಲಕ್ಷಣವೂ ನನ್ನ ದೇವರೂ ಆಗಿರುವಾತನನ್ನು ಇನ್ನೂ ಕೊಂಡಾಡುವೆನು.
- Psalm 16:11 ಕೀರ್ತನೆಗಳು 16:11ಜೀವದ ಮಾರ್ಗವನ್ನು ನನಗೆ ತಿಳಿಸುವಿ; ನಿನ್ನ ಸಮ್ಮುಖದಲ್ಲಿ ಪರಿಪೂರ್ಣ ಸಂತೋಷ ವೂ ನಿನ್ನ ಬಲಗಡೆಯಲ್ಲಿ ಶಾಶ್ವತ ಭಾಗ್ಯವೂ ಇರುತ್ತವೆ.
- Psalm 42:1–2 ಕೀರ್ತನೆಗಳು 42:1–2ಓ ದೇವರೇ, ಜಿಂಕೆಯು ನೀರಿನ ತೊರೆಗಳನ್ನು ಹೇಗೆ ಬಯಸುವದೋ ಹಾಗೆಯೇ ನನ್ನ ಪ್ರಾಣವು ನಿನ್ನನ್ನು ಬಯಸುತ್ತದೆ. ದೇವರಿ ಗೋಸ್ಕರ ಹೌದು, ಜೀವವುಳ್ಳ ದೇವರಿಗೋಸ್ಕರ ನನ್ನ ಪ್ರಾಣವು ದಾಹಗೊಳ್ಳುತ್ತದೆ; ಯಾವಾಗ ಬಂದು ದೇವರ ಮುಂದೆ ಕಾಣಿಸಿಕೊಳ್ಳಲಿ?