Psalms · chapter 73 · verse 8
Psalm 73:8 in Kannada
ಅವರು ಕೆಟ್ಟುಹೋದವರು. ಸಂಕಟ ಪಡುವವರ ವಿಷಯ ಕೆಟ್ಟದ್ದಾಗಿಯೂ ಗರ್ವದಿಂದಲೂ ಮಾತನಾಡುತ್ತಾರೆ.
Avaru kettuhodavaru. Sankata paduvavara vishaya kettaddaagiyoo garvadindaloo maatanaaduttaare.
Psalm 73:8 in English
- King James Version (KJV)
- They are corrupt, and speak wickedly [concerning] oppression: they speak loftily.
- World English Bible (WEB)
- They scoff and speak with malice. In arrogance, they threaten oppression.
- American Standard Version (ASV)
- They scoff, and in wickedness utter oppression: They speak loftily.
- Bible in Basic English (BBE)
- Their thoughts are deep with evil designs; their talk from their seats of power is of cruel acts.
- Darby Translation (DBY)
- They mock and speak wickedly of oppression, they speak loftily:
- Webster's Bible (WBS)
- They are corrupt, and speak wickedly [concerning] oppression: they speak loftily.
- Young's Literal Translation (YLT)
- They do corruptly, And they speak in the wickedness of oppression, From on high they speak.
Read in context
- 6ಆದದರಿಂದ ಗರ್ವವು ಅವರಿಗೆ ಕಂಠಮಾಲೆಯಂತೆ ಅವರನ್ನು ಸುತ್ತಿದೆ, ಬಲಾತ್ಕಾರವು ಅವರನ್ನು ಬಟ್ಟೆಯ ಹಾಗೆ ಮುಚ್ಚುತ್ತದೆ.
- 7ಅವರ ಕಣ್ಣುಗಳು ಕೊಬ್ಬಿನಿಂದ ಉಬ್ಬಿಕೊಂಡಿರುತ್ತವೆ; ಅವರ ಹೃದಯವು ಆಶಿಸುವದಕ್ಕಿಂತಲೂ ಹೆಚ್ಚಾಗಿ ಅವರಿಗೆ ಇವೆ.
- 8ಅವರು ಕೆಟ್ಟುಹೋದವರು. ಸಂಕಟ ಪಡುವವರ ವಿಷಯ ಕೆಟ್ಟದ್ದಾಗಿಯೂ ಗರ್ವದಿಂದಲೂ ಮಾತನಾಡುತ್ತಾರೆ.
- 9ಪರಲೋಕಕ್ಕೆ ವಿರೋಧವಾಗಿ ತಮ್ಮ ಬಾಯನ್ನು ತೆರೆದಿದ್ದಾರೆ; ಭೂಲೋಕದಲ್ಲೆಲ್ಲಾ ಅವರ ಮಾತೇ ನಡೆಯುವದು.
- 10ಆದದರಿಂದ ಅವನ ಜನರು ಇಲ್ಲಿಗೆ ತಿರುಗಿ ಕೊಳ್ಳುತ್ತಾರೆ; ಅವರಿಗೆ ಪಾನವು ಯಥೇಚ್ಚವಾಗಿ ದೊರೆಯುತ್ತದೆ.
Cross references
- Jude 1:16 ಯೂದನು 1:16ಇವರು ಗುಣುಗುಟ್ಟು ವವರೂ ದೂರುವವರೂ ತಮ್ಮ ದುರಾಶೆಗಳನ್ನನುಸರಿಸಿ ನಡೆಯುವವರೂ ಆಗಿದ್ದಾರೆ. ಇವರ ಬಾಯಿಯು ದೊಡ್ಡ ದೊಡ್ಡ ಮಾತುಗಳನ್ನು ಆಡುತ್ತದೆ. ಇವರು ಸ್ವಪ್ರಯೋಜನಕ್ಕಾಗಿ ಮುಖಸ್ತುತಿ ಮಾಡುತ್ತಾರೆ.
- Psalm 17:10 ಕೀರ್ತನೆಗಳು 17:10ಅವರು ತಮ್ಮ ಕೊಬ್ಬಿನಿಂದ ಸೊಕ್ಕೇರಿದ್ದಾರೆ; ತಮ್ಮ ಗರ್ವದ ಬಾಯಿ ಯಿಂದ ಮಾತನಾಡುತ್ತಾರೆ.
- Psalm 10:2 ಕೀರ್ತನೆಗಳು 10:2ದುಷ್ಟರು ಗರ್ವ ದಿಂದ ದೀನನನ್ನು ಹಿಂಸಿಸುತ್ತಾರೆ; ಅವರು ಕಲ್ಪಿಸಿದ ಯುಕ್ತಿಗಳಲ್ಲಿ ತಾವೇ ಹಿಡಿಯಲ್ಪಡಲಿ.
- Psalm 53:1–4 ಕೀರ್ತನೆಗಳು 53:1–4ದೇವರಿಲ್ಲವೆಂದು ಮೂರ್ಖನು ತನ್ನ ಹೃದಯದಲ್ಲಿ ಅಂದುಕೊಂಡಿದ್ದಾನೆ. ಅವರು ಕೆಟ್ಟುಹೋಗಿ ಅಸಹ್ಯವಾದ ಅಪರಾಧವನ್ನು ಮಾಡಿದ್ದಾರೆ; ಒಳ್ಳೇದನ್ನು ಮಾಡುವವನು ಯಾವನೂ ಇಲ್ಲ. ದೇವರನ್ನು ಹುಡುಕುವ ಬುದ್ಧಿವಂತನು ಇದ್ದಾನೋ ಎಂದು ನೋಡುವದಕ್ಕೆ ದೇವರು ಆಕಾ ಶದಿಂದ ಮನುಷ್ಯರೆಲ್ಲರನ್ನು ದೃಷ್ಟಿಸಿ ನೋಡಿದಾಗ ಎಲ್ಲರು ಹಿಂದಿರುಗಿದ್ದಾರೆ; ಒಟ್ಟಾಗಿ ಹೊಲೆಯಾಗಿ ದ್ದಾರೆ. ಒಳ್ಳೇದನ್ನು ಮಾಡುವವನು ಇಲ್ಲ, ಒಬ್ಬನಾ ದರೂ ಇಲ್ಲ. ರೊಟ್ಟಿತಿನ್ನುವ ಪ್ರಕಾರ ನನ್ನ ಜನರನ್ನು ತಿಂದು ದೇವರನ್ನು ಸ್ಮರಿಸದೆ ಅಪರಾಧಮಾಡುವವರು ಅರಿ ಯರೋ?
- Proverbs 30:13–14 ಜ್ಞಾನೋಕ್ತಿಗಳು 30:13–14ಒಂದು ವಂಶಾ ವಳಿಯು ಇದೆ: ಅದರ ಕಣ್ಣುಗಳು ಎಷ್ಟೋ ಉನ್ನತ ವಾಗಿವೆ! ಅದರ ಕಣ್ಣು ರೆಪ್ಪೆಗಳು ಎತ್ತಲ್ಪಟ್ಟಿವೆ. ಭೂಮಿಯೊಳಗಿಂದ ಬಡವರನ್ನೂ ಮನುಷ್ಯ ರೊಳಗಿಂದ ದಿಕ್ಕಿಲ್ಲದವರನ್ನೂ ನುಂಗುವಂತೆ ತಮ್ಮ ಹಲ್ಲುಗಳು ಖಡ್ಗಗಳಂತೆಯೂ ತಮ್ಮ ದವಡೆಯ ಹಲ್ಲು ಗಳು ಕತ್ತಿಗಳಂತೆಯೂ ಇರುವ ಒಂದು ವಂಶಾವಳಿಯು ಇದೆ.
- 2 Peter 2:10 2 ಪೇತ್ರನು 2:10ಆದರೆ ಮುಖ್ಯವಾಗಿ ಬಂಡು ತನದ ದುರಾಶೆಯಲ್ಲಿ ಶರೀರಾನುಸಾರ ನಡೆದು ಪ್ರಭುತ್ವವನ್ನು ತಿರಸ್ಕಾರ ಮಾಡುವವರನ್ನು ಹೀಗೆ ಶಿಕ್ಷಿಸುವನು. ಇವರು ಯಾರಿಗೂ ಹೆದರದೆ ಸ್ವೇಚ್ಛಾಪರರಾಗಿದ್ದಾರೆ; ದುರಹಂಕಾರದಿಂದ ಗೌರವವುಳ್ಳವರನ್ನು ದೂಷಿಸುತ್ತಾರೆ.
- 2 Peter 2:18 2 ಪೇತ್ರನು 2:18ತಪ್ಪಾದ ಮಾರ್ಗದಲ್ಲಿ ಜೀವಿಸುವವರಿಂದ ಸಂಪೂರ್ಣವಾಗಿ ತಪ್ಪಿಸಿಕೊಂಡವರ ಸಂಗಡ ಇವರು ಹುರುಳಿಲ್ಲದ ದೊಡ್ಡ ದೊಡ್ಡ ಮಾತುಗಳನ್ನಾಡಿ ಶರೀರದ ದುರಾಶೆಗಳನ್ನು ಹುಟ್ಟಿಸಿ ಹೆಚ್ಚಾದ ಬಂಡುತನದಿಂದ ಅವರನ್ನು ಮರುಳುಗೊಳಿಸುತ್ತಾರೆ.
- Jeremiah 7:9–11 ಯೆರೆಮೀಯ 7:9–11ಕಳ್ಳತನ ಹತ್ಯಹಾದರ ಇವುಗಳನ್ನು ನೀವು ನಡಿಸುವಿರೋ? ಸುಳ್ಳುಪ್ರಮಾಣವನ್ನು ಮಾಡಿ ಬಾಳನಿಗೆ ಧೂಪವನ್ನು ಸುಡುವಿರೋ? ನಿಮಗೆ ತಿಳಿಯದ ಬೇರೆ ದೇವರು ಗಳನ್ನು ಹಿಂಬಾಲಿಸಿ ಆಮೇಲೆ ಬಂದು ನನ್ನ ಹೆಸರಿನಲ್ಲಿ ಕರೆಯಲ್ಪಟ್ಟ ಈ ಆಲಯದಲ್ಲಿ ನನ್ನ ಮುಂದೆ ನಿಂತು ಕೊಂಡು--ನಾವು ಈ ಅಸಹ್ಯವಾದವುಗಳನ್ನೆಲ್ಲಾ ಮಾಡುವ ಹಾಗೆ ಒಪ್ಪಿಸಲ್ಪಟ್ಟಿದ್ದೇವೆಂದು ಹೇಳು ವಿರೋ? ನನ್ನ ಹೆಸರಿನಲ್ಲಿ ಕರೆಯಲ್ಪಟ್ಟ ಈ ಆಲಯವು ನಿಮ್ಮ ಕಣ್ಣುಗಳಲ್ಲಿ ಕಳ್ಳರ ಗವಿಯಾಯಿತೋ? ಇಗೋ, ನಾನೇ ಅದನ್ನು ನೋಡಿದ್ದೇನೆಂದು ಕರ್ತನು ಅನ್ನುತ್ತಾನೆ.
- Psalm 12:4–5 ಕೀರ್ತನೆಗಳು 12:4–5ಅವರು--ನಮ್ಮ ನಾಲಿಗೆಯಿಂದ ನಾವು ಬಲಗೊಳ್ಳುವೆವು; ನಮ್ಮ ತುಟಿಗಳು ನಮ್ಮವೇ; ನಮಗೆ ಪ್ರಭುವು ಯಾರು ಅನ್ನುತ್ತಾರೆ. ಬಡವರ ವ್ಯಥೆಗೋಸ್ಕರವೂ ಗತಿಯಿಲ್ಲದವರ ನರ ಳುವಿಕೆಗೋಸ್ಕರವೂ ಈಗ ನಾನು ಏಳುವೆನು ಎಂದು ಕರ್ತನು ಹೇಳುತ್ತಾನೆ; ಉಬ್ಬಿಕೊಂಡವನಿಂದ ನಾನು ಬಡವನನ್ನು ಕಾಪಾಡುವೆನು.
- Psalm 10:10–11 ಕೀರ್ತನೆಗಳು 10:10–11ಅವನು ಕುಗ್ಗಿ ಬೊಗ್ಗುತ್ತಾನೆ; ಆದದರಿಂದ ಗತಿಯಿಲ್ಲದವರು ಅವನ ಬಲದಿಂದ ಬೀಳುತ್ತಾರೆ. ದೇವರು ಮರೆತು ಬಿಟ್ಟಿ ದ್ದಾನೆ; ತನ್ನ ಮುಖವನ್ನು ಮರೆಮಾಡುತ್ತಾನೆ; ಆತನು ಎಂದೂ ನೋಡನು ಎಂದು ತನ್ನ ಹೃದಯದಲ್ಲಿ ಹೇಳಿಕೊಂಡಿದ್ದಾನೆ.
- 1 Kings 21:7–29 1 ಅರಸುಗಳು 21:7–29ಆಗ ಅವನ ಹೆಂಡತಿಯಾದ ಈಜೆಬೆಲಳು ಅವನಿಗೆ--ನೀನು ಈಗ ಇಸ್ರಾಯೇಲಿನ ರಾಜ್ಯವನ್ನು ಆಳುತ್ತಾ ಇದ್ದೀಯೊ? ಎದ್ದು ರೊಟ್ಟಿತಿನ್ನು; ನಿನ್ನ ಹೃದಯ ಸಂತೋಷವಾಗಿರಲಿ. ನಾನೇ ಇಜ್ರೇಲ್ಯನಾದ ನಾಬೋತನ ದ್ರಾಕ್ಷೇ ತೋಟವನ್ನು ನಿನಗೆ ಕೊಡುವೆನು ಅಂದಳು. ಹೀಗೆ ಅವಳು ಅಹಾ ಬನ ಹೆಸರಿನಲ್ಲಿ ಪತ್ರಗಳನ್ನು ಬರೆದು ಅವುಗಳಿಗೆ ಅವನ ಮುದ್ರೆ ಹಾಕಿ ಆ ಪತ್ರಗಳನ್ನು ನಾಬೋತನ ಸಂಗಡ ಅವನ ಪಟ್ಟಣದಲ್ಲಿ ವಾಸವಾಗಿರುವ ಹಿರಿಯ ರಿಗೂ ಗೌರವಸ್ಥರಿಗೂ ಕಳುಹಿಸಿದಳು. ಅವಳು ಪತ್ರಗಳಲ್ಲಿ--ನೀವು ಉಪವಾಸವನ್ನು ಪ್ರಕಟಮಾಡಿ ನಾಬೋತನನ್ನು ಜನರೊಳಗೆ ಎತ್ತರದ ಸ್ಥಳದಲ್ಲಿ ನಿಲ್ಲಿಸಿ-- ನೀನು ದೇವರನ್ನೂ ಅರಸನನ್ನೂ ದೂಷಿ ಸಿದಿ ಎಂದು ಅವನಿಗೆ ವಿರೋಧವಾಗಿ ಸಾಕ್ಷಿ ಹೇಳಲು ಅವನ ಮುಂದೆ ಬೆಲಿಯಾಳನ ಮಕ್ಕಳಾದ ಇಬ್ಬರು ಮನುಷ್ಯರನ್ನು ನಿಲ್ಲಿಸಿರಿ; ತರುವಾಯ ಅವನನ್ನು ಹೊರಗೆ ತಕ್ಕೊಂಡು ಹೋಗಿ ಅವನು ಸಾಯುವ ಹಾಗೆ ಕಲ್ಲೆಸೆಯಿರಿ ಎಂದು ಬರೆದಿತ್ತು. ಆಗ ಅವನ ಪಟ್ಟಣದಲ್ಲಿರುವ ಹಿರಿಯರೂ ಗೌರವಸ್ಥರೂ ತಮಗೆ ಈಜೆಬೆಲಳು ಕಳುಹಿಸಿದ ಪತ್ರದ ಪ್ರಕಾರವೇ ಮಾಡಿ ದರು. ಅವರು ಉಪವಾಸವನ್ನು ಪ್ರಕಟಮಾಡಿ ನಾಬೋತನನ್ನು ಜನರೊಳಗೆ ಎತ್ತರ ಸ್ಥಳದಲ್ಲಿ ನಿಲ್ಲಿಸಿ ದರು. ಆಗ ಬೆಲಿಯಾಳನ ಮಕ್ಕಳಾದ ಇಬ್ಬರು ಮನುಷ್ಯರು ಬಂದು ಅವನಿಗೆದುರಾಗಿ ಕುಳಿತು ಕೊಂಡರು; ಈ ಬೆಲಿಯಾಳನ ಮನುಷ್ಯರು ಜನರ ಸಮ್ಮುಖದಲ್ಲಿ ನಾಬೋತನಿಗೆ ವಿರೋಧವಾಗಿ--ಈ ನಾಬೋತನು ದೇವರನ್ನೂ ಅರಸನನ್ನೂ ದೂಷಿಸಿದ ನೆಂದು ಸಾಕ್ಷಿ ಹೇಳಿದರು. ಆಗ ಅವನನ್ನು ಪಟ್ಟಣದ ಹೊರಗೆ ತಕ್ಕೊಂಡು ಹೋಗಿ ಅವನು ಸಾಯುವ ಹಾಗೆ ಅವರು ಅವನಿಗೆ ಕಲ್ಲೆಸೆದರು. ಅವನು ಸತ್ತನು. ಅವರು ಈಜೆಬೆಲಳಿಗೆ--ನಾಬೋತನು ಕಲ್ಲೆಸೆಯ ಲ್ಪಟ್ಟು ಸತ್ತನೆಂದು ಹೇಳಿ ಕಳುಹಿಸಿದರು. ನಾಬೋ ತನು ಕಲ್ಲೆಸೆಯಲ್ಪಟ್ಟು ಸತ್ತಿದ್ದಾನೆಂದು ಈಜೆಬೆಲಳು ಕೇಳಿದಾಗ ಅವಳು ಅಹಾಬನಿಗೆ--ನೀನೆದ್ದು ಇಜ್ರೇಲ್ಯ ನಾದ ನಾಬೋತನು ಬೆಲೆಗೆ ಕೊಡಲು ಸಮ್ಮತಿಸ ದಿದ್ದ ದ್ರಾಕ್ಷೇ ತೋಟವನ್ನು ಸ್ವಾಧೀನ ಮಾಡಿಕೋ; ಯಾಕಂದರೆ ನಾಬೋತನು ಜೀವದಿಂದ ಇಲ್ಲ, ಸತ್ತಿ ದ್ದಾನೆ ಅಂದಳು. ನಾಬೋತನು ಸತ್ತನೆಂದು ಅಹಾ ಬನು ಕೇಳಿದಾಗ ಅವನೆದ್ದು ಇಜ್ರೇಲ್ಯನಾದ ನಾಬೋ ತನ ದ್ರಾಕ್ಷೇ ತೋಟವನ್ನು ಸ್ವಾಧೀನಮಾಡಿಕೊಳ್ಳಲು ಹೋದನು. ಆಗ ಕರ್ತನ ವಾಕ್ಯವು ತಿಷ್ಬೀಯನಾದ ಎಲೀಯ ನಿಗೆ ಉಂಟಾಯಿತು-- ನೀನೆದ್ದು ಸಮಾರ್ಯದ ಲ್ಲಿರುವ ಇಸ್ರಾಯೇಲಿನ ಅರಸನಾದ ಅಹಾಬನಿಗೆದು ರಾಗಿ ಹೋಗು; ಇಗೋ, ಅವನು ನಾಬೋತನ ದ್ರಾಕ್ಷೇ ತೋಟದಲ್ಲಿದ್ದಾನೆ; ಅದನ್ನು ಸ್ವಾಧೀನ ಮಾಡಿ ಕೊಳ್ಳಲು ಅಲ್ಲಿಗೆ ಹೋಗಿದ್ದಾನೆ. ನೀನು ಅವನಿಗೆನೀನು ಕೊಂದುಹಾಕಿ ಸ್ವಾಧೀನಮಾಡಿಕೊಂಡಿಯಲ್ಲಾ. ಆದದರಿಂದ ನಾಯಿಗಳು ನಾಬೋತನ ರಕ್ತವನ್ನು ನೆಕ್ಕಿದ ಸ್ಥಳದಲ್ಲೇ ನಿನ್ನ ರಕ್ತವನ್ನು ನಿಶ್ಚಯವಾಗಿ ನೆಕ್ಕು ವವು ಎಂದು ಕರ್ತನು ಹೇಳುತ್ತಾನೆಂದು ಅಂದನು. ಆಗ ಅಹಾಬನು ಎಲೀಯನಿಗೆ--ನನ್ನ ಶತ್ರುವೇ, ನೀನು ನನ್ನನ್ನು ಕಂಡುಕೊಂಡಿಯಾ ಅಂದನು. ಅದಕ್ಕ ವನು--ಕಂಡುಕೊಂಡೆನು; ನೀನು ಕರ್ತನ ದೃಷ್ಟಿ ಯಲ್ಲಿ ಕೆಟ್ಟದ್ದನ್ನು ಮಾಡುವಂತೆ ನಿನ್ನನ್ನು ಮಾರಿಕೊಂಡ ದ್ದರಿಂದ ಇಗೋ, ನಾನು ನಿನ್ನ ಮೇಲೆ ಕೇಡನ್ನು ಬರಮಾಡಿ ನಿನ್ನ ಸಂತತಿಯನ್ನು ತೆಗೆದುಹಾಕಿ ಅಹಾಬ ನಿಗೆ ಒಬ್ಬ ಗಂಡಸಾದರೂ ಇಸ್ರಾಯೇಲಿನಲ್ಲಿ ಬಚ್ಚಿಡ ಲ್ಪಟ್ಟವನಾದರೂ ಉಳಿದವನಾದರೂ ಇರದ ಹಾಗೆ ತೆಗೆದುಬಿಡುವೆನು. ನೀನು ನನಗೆ ಎಬ್ಬಿಸಿದ ಕೋಪದ ನಿಮಿತ್ತವೂ ಇಸ್ರಾಯೇಲನ್ನು ಪಾಪ ಮಾಡುವಂತೆ ಮಾಡಿದ್ದರ ನಿಮಿತ್ತವೂ ನಾನು ನಿನ್ನ ಮನೆಯನ್ನು ನೆಬಾಟನ ಮಗನಾದ ಯಾರೊಬ್ಬಾಮನ ಮನೆಯ ಹಾಗೆಯೂ ಅಹೀಯನ ಮಗನಾದ ಬಾಷನ ಮನೆಯ ಹಾಗೆಯೂ ಮಾಡುವೆನು ಅಂದನು. ಈಜೆಬೆಲ ಳನ್ನು ಕುರಿತು ಕರ್ತನು--ನಾಯಿಗಳು ಈಜೆಬೆಲಳನ್ನು ಇಜ್ರೇಲಿನ ಗೋಡೆಯ ಬಳಿಯಲ್ಲಿ ತಿನ್ನುವವು. ಅಹಾಬನವರಲ್ಲಿ ಪಟ್ಟಣದೊಳಗೆ ಯಾವನು ಸಾಯುವನೋ ಅವನನ್ನು ನಾಯಿಗಳು ತಿನ್ನುವವು; ಹೊಲದಲ್ಲಿ ಸಾಯುವವನನ್ನು ಆಕಾಶದ ಪಕ್ಷಿಗಳು ತಿನ್ನುವವು ಎಂದು ಹೇಳುತ್ತಾನೆ ಅಂದನು. ಆದರೆ ತನ್ನ ಹೆಂಡತಿಯಾದ ಈಜೆಬೆಲಳಿಂದ ಪ್ರೇರೇಪಿಸಲ್ಪಟ್ಟು ಕರ್ತನ ಸಮ್ಮುಖದಲ್ಲಿ ಕೆಟ್ಟತನವನ್ನು ಮಾಡಲು ತನ್ನನ್ನು ಮಾರಿಬಿಟ್ಟ ಅಹಾಬನ ಹಾಗೆ ಯಾವನೂ ಇರಲಿಲ್ಲ. ಇದಲ್ಲದೆ ಕರ್ತನು ಇಸ್ರಾಯೇಲಿನ ಮಕ್ಕಳ ಮುಂದೆ ಹೊರಡಿಸಿಬಿಟ್ಟ ಅಮೋರಿಯರ ಎಲ್ಲಾ ಕೃತ್ಯಗಳ ಪ್ರಕಾರ ಅವನು ವಿಗ್ರಹಗಳನ್ನು ಹಿಂಬಾ ಲಿಸಿ ಬಹಳ ಅಸಹ್ಯವಾಗಿ ನಡೆದನು. ಆದರೆ ಅಹಾಬನು ಆ ಮಾತುಗಳನ್ನು ಕೇಳಿದಾಗ ಏನಾಯಿತಂದರೆ, ಅವನು ತನ್ನ ವಸ್ತ್ರಗಳನ್ನು ಹರಿದು ತನ್ನ ಶರೀರದ ಮೇಲೆ ಗೋಣಿಯನ್ನು ಹಾಕಿಕೊಂಡು ಉಪವಾಸಮಾಡಿ ಗೋಣಿಯಲ್ಲಿ ಮಲಗಿಕೊಂಡು ಮೆಲ್ಲಗೆ ನಡೆದನು. ಆಗ ಕರ್ತನ ವಾಕ್ಯವು ತಿಷ್ಬೀಯ ನಾದ ಎಲೀಯನಿಗೆ ಉಂಟಾಗಿ--ಅಹಾಬನು ನನ್ನ ಮುಂದೆ ತನ್ನನ್ನು ತಗ್ಗಿಸಿದ್ದನ್ನು ಕಂಡಿಯಾ? ಅವನು ನನ್ನ ಮುಂದೆ ತನ್ನನ್ನು ತಗ್ಗಿಸಿಕೊಂಡದ್ದರಿಂದ ನಾನು ಅವನ ದಿವಸಗಳಲ್ಲಿ ಆ ಕೇಡನ್ನು ಬರಮಾಡದೆ ಅವನ ಮಗನ ದಿವಸಗಳಲ್ಲಿ ಅವನ ಮನೆಯ ಮೇಲೆ ಬರ ಮಾಡುವೆನು ಅಂದನು. ಅಹಾಬನು ನನ್ನ ಮುಂದೆ ತನ್ನನ್ನು ತಗ್ಗಿಸಿದ್ದನ್ನು ಕಂಡಿಯಾ? ಅವನು ನನ್ನ ಮುಂದೆ ತನ್ನನ್ನು ತಗ್ಗಿಸಿಕೊಂಡದ್ದರಿಂದ ನಾನು ಅವನ ದಿವಸಗಳಲ್ಲಿ ಆ ಕೇಡನ್ನು ಬರಮಾಡದೆ ಅವನ ಮಗನ ದಿವಸಗಳಲ್ಲಿ ಅವನ ಮನೆಯ ಮೇಲೆ ಬರ ಮಾಡುವೆನು ಅಂದನು.
- Hosea 7:16 ಹೋಶೇಯ 7:16ಅವರು ಹಿಂತಿರುಗುತ್ತಾರೆ, ಆದರೆ ಮಹೋನ್ನತನಾ ದಾತನ ಕಡೆಗೆ ಅಲ್ಲ. ಅವರು ಮೋಸ ಮಾಡುವ ಬಿಲ್ಲಿನ ಹಾಗೆ ಇದ್ದಾರೆ; ಅವರ ಪ್ರಧಾನರ ನಾಲಿಗೆಯ ಹುಚ್ಚು ಕೂಗಾಟದ ನಿಮಿತ್ತ ಕತ್ತಿಯಿಂದ ಬೀಳುವರು; ಇದೇ ಐಗುಪ್ತದೇಶದಲ್ಲಿ ಅವರಿಗಿರುವ ನಿಂದೆಯಾಗಿದೆ.