Psalms · chapter 74 · verse 15
Psalm 74:15 in Kannada
ನೀನು ಬುಗ್ಗೆಯನ್ನೂ ಪ್ರವಾಹವನ್ನೂ ವಿಭಾಗಮಾಡಿದಿ; ಮಹಾ ನದಿಗಳನ್ನು ಒಣಗಿಸಿದಿ.
Neenu buggeyannoo pravaahavannoo vibhaagamaadidi; mahaa nadigalannu onagisidi.
Psalm 74:15 in English
- King James Version (KJV)
- Thou didst cleave the fountain and the flood: thou driedst up mighty rivers.
- World English Bible (WEB)
- You opened up spring and stream. You dried up mighty rivers.
- American Standard Version (ASV)
- Thou didst cleave fountain and flood: Thou driedst up mighty rivers.
- Bible in Basic English (BBE)
- You made valleys for fountains and springs; you made the ever-flowing rivers dry.
- Darby Translation (DBY)
- Thou didst cleave fountain and torrent, thou driedst up ever-flowing rivers.
- Webster's Bible (WBS)
- Thou didst cleave the fountain and the flood: thou didst dry up mighty rivers.
- Young's Literal Translation (YLT)
- Thou hast cleaved a fountain and a stream, Thou hast dried up perennial flowings.
Read in context
- 13ನೀನು ನಿನ್ನ ಬಲದಿಂದ ಸಮುದ್ರವನ್ನು ಭೇದಿಸಿದಿ; ತಿಮಿಂಗಿಲಗಳ ತಲೆಗಳನ್ನು ನೀರುಗಳಲ್ಲಿ ಜಜ್ಜಿಬಿಟ್ಟಿ.
- 14ನೀನು ಲಿವ್ಯಾತಾನದ ತಲೆ ಗಳನ್ನು ಒಡೆದು ತುಂಡು ತುಂಡುಮಾಡಿದಿ. ಅದನ್ನು ಅರಣ್ಯದ ಜನರಿಗೆ ಆಹಾರವಾಗಿ ಕೊಟ್ಟಿ.
- 15ನೀನು ಬುಗ್ಗೆಯನ್ನೂ ಪ್ರವಾಹವನ್ನೂ ವಿಭಾಗಮಾಡಿದಿ; ಮಹಾ ನದಿಗಳನ್ನು ಒಣಗಿಸಿದಿ.
- 16ಹಗಲು ನಿನ್ನದು; ರಾತ್ರಿಯು ಸಹ ನಿನ್ನದು; ನೀನು ಬೆಳಕನ್ನೂ ಸೂರ್ಯ ನನ್ನೂ ಸಿದ್ಧಮಾಡಿದ್ದೀ.
- 17ನೀನು ಭೂಮಿಯ ಮೇರೆ ಗಳನ್ನೆಲ್ಲಾ ನಿರ್ಣಯಿಸಿದ್ದೀ; ಬೇಸಿಗೆ ಮತ್ತು ಚಳಿ ಗಾಲವನ್ನು ನಿರ್ಮಿಸಿದ್ದೀ.
Cross references
- Numbers 20:11 ಅರಣ್ಯಕಾಂಡ 20:11ಮೋಶೆಯು ತನ್ನ ಕೈಯನ್ನು ಎತ್ತಿ ತನ್ನ ಕೋಲಿನಿಂದ ಬಂಡೆಯನ್ನು ಎರಡು ಸಾರಿ ಹೊಡೆದನು; ಆಗ ಬಹಳ ನೀರು ಹೊರಗೆ ಬಂತು; ಸಭೆಯೂ ಅವರ ಪಶುಗಳೂ ಕುಡಿದವು.
- Joshua 3:13–17 ಯೆಹೋಶುವ 3:13–17ಆಗ ಆಗುವದೇನಂದರೆ, ಸಮಸ್ತ ಭೂಮಿಗೂ ಕರ್ತನಾಗಿರುವ ಕರ್ತನ ಆ ಮಂಜೂಷ ವನ್ನು ಹೊರುವ ಯಾಜಕರ ಅಂಗಾಲುಗಳು ಯೊರ್ದ ನಿನ ನೀರಲ್ಲಿ ಇಟ್ಟಾಗಲೇ ನದಿಯ ನೀರು ಭೇದಿಸಲ್ಪಟ್ಟು ಮೇಲಿನಿಂದ ಹರಿದು ಬರುವ ನೀರು ಹರಿಯದೆ ರಾಶಿಯಾಗಿ ನಿಲ್ಲುವದು ಎಂದು ಹೇಳಿದನು. ಜನರು ಯೊರ್ದನನ್ನು ದಾಟಲು ತಮ್ಮ ಗುಡಾರ ಗಳಿಂದ ಹೊರಟರು. ಯಾಜಕರು ಒಡಂಬಡಿಕೆಯ ಮಂಜೂಷವನ್ನು ಹೊತ್ತುಕೊಂಡು ಜನರಿಗೆ ಮುಂದಾಗಿ ಯೊರ್ದನಿನ ಬಳಿಗೆ ಬಂದರು. ಮಂಜೂಷವನ್ನು ಹೊತ್ತ ಯಾಜಕರು ಯೊರ್ದನಿಗೆ ಬಂದು ನೀರಿನಲ್ಲಿ ತಮ್ಮ ಕಾಲುಗಳನ್ನು ಇಡುತ್ತಲೇ ಸುಗ್ಗೀ ಕಾಲದಲ್ಲೆಲ್ಲಾ ದಡವಿಾರಿ ಹರಿಯುವ ಯೊರ್ದನ್ ಹೊಳೆಯ ನೀರು ನಿಂತು ಹೋಯಿತು. ಮೇಲಿನಿಂದ ಇಳಿದು ಬರುವ ನೀರು ನಿಂತು ಬಹು ದೂರದಲ್ಲಿ ಚಾರೆತಾನಿಗೆ ಹೊಂದಿದ ಆದಾಮ್ ಪಟ್ಟಣದ ಹತ್ತಿರ ಬಂದು ರಾಶಿಯಾಗಿ ನಿಂತಿತು. ಕೆಳಗಣ ನೀರು ಉಪ್ಪು ಸಮುದ್ರವೆಂಬ ಸಮುದ್ರಕ್ಕೆ ಹರಿದು ಹೋಯಿತು.ಆಗ ಜನರೆಲ್ಲರು ಯೊರ್ದನನ್ನು ದಾಟುವ ವರೆಗೆ ಕರ್ತನ ಒಡಂಬಡಿಕೆಯ ಮಂಜೂಷವನ್ನು ಹೊರುವ ಯಾಜಕರು ಯೊರ್ದನಿನ ಒಣಗಿದ ಭೂಮಿಯ ಮಧ್ಯದಲ್ಲಿ ಧೃಡವಾಗಿ ನಿಂತಿದ್ದರು. ಆಗ ಜನರೆಲ್ಲರು ಯೊರ್ದನನ್ನು ದಾಟುವ ವರೆಗೆ ಕರ್ತನ ಒಡಂಬಡಿಕೆಯ ಮಂಜೂಷವನ್ನು ಹೊರುವ ಯಾಜಕರು ಯೊರ್ದನಿನ ಒಣಗಿದ ಭೂಮಿಯ ಮಧ್ಯದಲ್ಲಿ ಧೃಡವಾಗಿ ನಿಂತಿದ್ದರು.
- Isaiah 48:21 ಯೆಶಾಯ 48:21ಆತನು ಅವರನ್ನು ಮರುಭೂಮಿಯಲ್ಲಿ ನಡೆಸಿದಾಗ ಅವರು ದಾಹಗೊಳ್ಳಲಿಲ್ಲ; ಅವರಿಗಾಗಿ ನೀರನ್ನು ಬಂಡೆಯೊಳಗಿಂದ ಹರಿಸಿದನು; ಆತನು ಬಂಡೆಯನ್ನು ಸೀಳಲು ನೀರು ರಭಸದಿಂದ ಹೊರಗೆ ಬಂತು;ದುಷ್ಟರಿಗೆ ಸಮಾಧಾನವೇ ಇಲ್ಲ ಎಂದು ಕರ್ತನು ನುಡಿಯುತ್ತಾನೆ.
- Exodus 17:5–6 ವಿಮೋಚನಕಾಂಡ 17:5–6ಆಗ ಕರ್ತನು ಮೋಶೆಗೆ--ಜನರ ಮುಂದೆ ಹಾದು ಹೋಗಿ ಇಸ್ರಾಯೇಲಿನ ಹಿರಿಯರಲ್ಲಿ ಕೆಲವರನ್ನು ಕರಕೊಂಡು ನೀನು ನದಿಯನ್ನು ಹೊಡೆದ ಕೋಲನ್ನು ಕೈಯಲ್ಲಿ ತೆಗೆದುಕೊಂಡು ಹೋಗು. ಅಲ್ಲಿ ಇಗೋ, ನಾನು ಹೋರೇಬಿನಲ್ಲಿ ಬಂಡೆಯ ಮೇಲೆ ನಿನ್ನ ಮುಂದೆ ನಿಂತುಕೊಳ್ಳುವೆನು ನೀನು ಬಂಡೆಯನ್ನು ಹೊಡೆಯ ಬೇಕು. ಆಗ ಜನರು ಕುಡಿಯುವಂತೆ ನೀರು ಹೊರಗೆ ಬರುವದು ಅಂದನು. ಮೋಶೆಯು ಇಸ್ರಾಯೇಲ್ಯರ ಹಿರಿಯರ ಎದುರಿನಲ್ಲಿ ಹಾಗೆಯೇ ಮಾಡಿದನು.
- Psalm 105:41 ಕೀರ್ತನೆಗಳು 105:41ಆತನು ಬಂಡೆಯನ್ನು ತೆರೆಯಲು ನೀರು ಹೊರಟಿತು; ಅದು ಒಣಗಿದ ಸ್ಥಳಗಳಲ್ಲಿ ನದಿಯಾಗಿ ಹರಿಯಿತು.
- Joshua 2:10 ಯೆಹೋಶುವ 2:10ನೀವು ಐಗುಪ್ತದಿಂದ ಹೊರಡುವಾಗ ಕರ್ತನು ನಿಮಗೋಸ್ಕರ ಕೆಂಪು ಸಮುದ್ರದ ನೀರನ್ನು ಬತ್ತಿಹೋಗ ಮಾಡಿದ್ದನ್ನೂ ಯೊರ್ದನಿಗೆ ಆಚೆಯಲ್ಲಿದ್ದ ಅಮೋರಿ ಯರ ಇಬ್ಬರು ಅರಸುಗಳಾದ ಸೀಹೋನನನ್ನು ಓಗನನ್ನು ನೀವು ಸಂಪೂರ್ಣ ನಿರ್ಮೂಲ ಮಾಡಿದ್ದನ್ನೂ ನಾವು ಕೇಳಿದ್ದೇವೆ.
- Isaiah 44:27 ಯೆಶಾಯ 44:27ಅಗಾಧಕ್ಕೆ-- ಒಣಗಿಹೋಗು; ನಿನ್ನ ನದಿಗಳನ್ನು ಒಣಗಿಸಿಬಿಡುವೆನು ಎಂದು ಅನ್ನುವವನೂಕೋರೆಷನ ವಿಷಯ ವಾಗಿ--ಅವನು ನನ್ನ ಕುರುಬನು; ನನ್ನ ಇಚ್ಛೆಯನ್ನೆಲ್ಲಾ ಪೂರೈಸುವವನೂ ಯೆರೂಸಲೇಮಿಗೆ--ನೀನು ಕಟ್ಟಲ್ಪ ಡುವಿ; ದೇವಾಲಯಕ್ಕೆ--ನಿನ್ನ ಅಸ್ತಿವಾರವು ಹಾಕಲ್ಪಡು ವದೆಂದು ಅನ್ನುವವನು ನಾನೇ.
- Exodus 14:21–22 ವಿಮೋಚನಕಾಂಡ 14:21–22ಆಗ ಮೋಶೆಯು ಸಮುದ್ರದ ಮೇಲೆ ತನ್ನ ಕೈಚಾಚಲಾಗಿ ಕರ್ತನು ರಾತ್ರಿಯೆಲ್ಲಾ ಬಲವಾದ ಮೂಡಣ ಗಾಳಿಯಿಂದ ಸಮುದ್ರವು ಹಿಂದಕ್ಕೆ ಹೋಗುವಂತೆ ಮಾಡಿ ಸಮುದ್ರವನ್ನು ಒಣನೆಲವನ್ನಾಗಿ ಮಾಡಿದನು; ಆಗ ನೀರುಗಳು ವಿಭಾಗವಾದವು. ಹೀಗೆ ಇಸ್ರಾಯೇಲ್ ಮಕ್ಕಳು ಸಮುದ್ರದ ಮಧ್ಯ ದಲ್ಲಿ ಒಣ ನೆಲದಲ್ಲೇ ಹೊರಟು ಹೋದರು. ನೀರು ಅವರಿಗೆ ಎಡಬಲದಲ್ಲಿ ಗೋಡೆಯಾಗಿತ್ತು.
- Habakkuk 3:9 ಹಬಕ್ಕೂಕ 3:9ನೀನು ಗೋತ್ರಗಳಿಗೆ ಆಣೆ ಯಿಟ್ಟ ವಾಕ್ಯದ ಪ್ರಕಾರ ನಿನ್ನ ಬಿಲ್ಲು ಪೂರ್ಣ ಬರಿದಾ ಯಿತು. ಸೆಲಾ. ಭೂಮಿಯನ್ನು ನದಿಗಳಿಂದ ಸೀಳಿದಿ.
- Isaiah 11:16 ಯೆಶಾಯ 11:16ಇದಲ್ಲದೆ ಇಸ್ರಾಯೇಲ್ಯರು ಐಗುಪ್ತದೇಶ ದಿಂದ ಹೊರಟುಬಂದ ಕಾಲದಲ್ಲಿ ಅವರಿಗೆ ಹೇಗೆ ಮಾರ್ಗವು ಇತ್ತೋ ಹಾಗೆಯೇ ಅಶ್ಶೂರದಿಂದ ತಪ್ಪಿಸಿ ಕೊಂಡು ಬರುವ ತನ್ನ ಉಳಿದ ಜನರಿಗೆ ವಿಶಾಲ ವಾದ ಮಾರ್ಗವು ಇರುವದು.
- 2 Kings 2:14 2 ಅರಸುಗಳು 2:14ಎಲೀಯನಿಂದ ಬಿದ್ದ ಹೊದಿಕೆಯನ್ನು ತಕ್ಕೊಂಡು ನೀರನ್ನು ಹೊಡೆದು--ಎಲೀಯನ ದೇವರಾದ ಕರ್ತನು ಎಲ್ಲಿದ್ದಾನೆ ಅಂದನು. ಅವನು ಹಾಗೆ ನೀರನ್ನು ಹೊಡೆದ ತರುವಾಯ ಅದು ಎರಡು ಭಾಗವಾದದ್ದರಿಂದ ಎಲೀ ಷನು ದಾಟಿಹೋದನು.
- Psalm 78:15 ಕೀರ್ತನೆಗಳು 78:15ಅರಣ್ಯ ದಲ್ಲಿ ಆತನು ಬಂಡೆಗಳನ್ನು ಸೀಳಿ ಅವರಿಗೆ ಮಹಾ ಜಲಾಗಾಧಗಳ ಹಾಗೆ ನೀರು ಕುಡಿಯಲು ಕೊಟ್ಟನು.