Psalms · chapter 74 · verse 20
Psalm 74:20 in Kannada
ಒಡಂಬಡಿಕೆಗೆ ಗೌರ ವವನ್ನು ಕೊಡು; ಭೂಮಿಯ ಕತ್ತಲಿನ ಸ್ಥಳಗಳು ಕ್ರೂರತನದ ನಿವಾಸಗಳಿಂದ ತುಂಬಿಯವೆ.
Odambadikege gaura vavannu kodu; bhoomiya kattalina sthalagalu krooratanada nivaasagalinda tumbiyave.
Psalm 74:20 in English
- King James Version (KJV)
- Have respect unto the covenant: for the dark places of the earth are full of the habitations of cruelty.
- World English Bible (WEB)
- Honor your covenant, for haunts of violence fill the dark places of the earth.
- American Standard Version (ASV)
- Have respect unto the covenant; For the dark places of the earth are full of the habitations of violence.
- Bible in Basic English (BBE)
- Keep in mind your undertaking; for the dark places of the earth are full of pride and cruel acts.
- Darby Translation (DBY)
- Have respect unto the covenant; for the dark places of the earth are full of the dwellings of violence.
- Webster's Bible (WBS)
- Have respect to the covenant: for the dark places of the earth are full of the habitations of cruelty.
- Young's Literal Translation (YLT)
- Look attentively to the covenant, For the dark places of earth, Have been full of habitations of violence.
Read in context
- 18ಓ ಕರ್ತನೇ, ವೈರಿಯು ನಿಂದಿಸಿ ಮೂರ್ಖರು ನಿನ್ನ ನಾಮವನ್ನು ದೂಷಿಸಿದ್ದನ್ನು ಜ್ಞಾಪಿಸಿಕೋ.
- 19ನಿನ್ನ ಬೆಳವಕ್ಕಿಯ ಪ್ರಾಣವನ್ನು ದುಷ್ಟರ ಸಮೂ ಹಕ್ಕೆ ಒಪ್ಪಿಸ ಬೇಡ; ನಿನ್ನ ದೀನರ ಸಭೆಯನ್ನು ಸದಾ ಕಾಲಕ್ಕೆ ಮರೆತುಬಿಡಬೇಡ.
- 20ಒಡಂಬಡಿಕೆಗೆ ಗೌರ ವವನ್ನು ಕೊಡು; ಭೂಮಿಯ ಕತ್ತಲಿನ ಸ್ಥಳಗಳು ಕ್ರೂರತನದ ನಿವಾಸಗಳಿಂದ ತುಂಬಿಯವೆ.
- 21ಕುಗ್ಗಿ ದವನು ಅವಮಾನಕ್ಕೆ ತಿರಿಗಿಕೊಳ್ಳದೆ ಇರಲಿ; ದೀನನೂ ಬಡವನೂ ನಿನ್ನ ಹೆಸರನ್ನು ಸ್ತುತಿಸಲಿ.
- 22ಓ ದೇವರೇ, ಏಳು; ನಿನ್ನ ಸ್ವಂತ ವ್ಯಾಜ್ಯವನ್ನು ವಿವಾದಿಸು; ದಿನವೆಲ್ಲಾ ಮೂರ್ಖನು ನಿನ್ನನ್ನು ಹೇಗೆ ನಿಂದಿಸುತ್ತಾನೆಂದು ಜ್ಞಾಪ ಕಮಾಡಿಕೋ.ನಿನ್ನ ವೈರಿಗಳ ಸ್ವರವನ್ನು ಮರೆತು ಬಿಡಬೇಡ; ನಿನ್ನ ವಿರೋಧಿಗಳ ಘೋಷವು ಯಾವಾ ಗಲೂ ಏಳುತ್ತದೆ.
Cross references
- Psalm 106:45 ಕೀರ್ತನೆಗಳು 106:45ಅವರಿಗಾಗಿ ತನ್ನ ಒಡಂಬಡಿಕೆಯನ್ನು ಜ್ಞಾಪಕಮಾಡಿಕೊಂಡು ತನ್ನ ಅತಿಶಯವಾದ ಕರು ಣೆಯ ಪ್ರಕಾರ ಪಶ್ಚಾತ್ತಾಪಪಟ್ಟನು.
- Genesis 17:7–8 ಆದಿಕಾಂಡ 17:7–8ಇದಲ್ಲದೆ ನಿನಗೂ ನಿನ್ನ ತರುವಾಯ ನಿನ್ನ ಸಂತಾನಕ್ಕೂ ದೇವರಾಗಿರುವದಕ್ಕೆ ನನಗೂ ನಿನಗೂ ನಿನ್ನ ತರುವಾಯ ಬರುವ ತಲ ತಲಾಂತರಗಳಲ್ಲಿ ನಿನ್ನ ಸಂತಾನಕ್ಕೂ ಮಧ್ಯದಲ್ಲಿ ನನ್ನ ಒಡಂಬಡಿಕೆಯನ್ನು ನಿತ್ಯವಾದ ಒಡಂಬಡಿಕೆಯಾಗಿ ಸ್ಥಾಪಿಸುತ್ತೇನೆ. ನಿನಗೂ ನಿನ್ನ ತರುವಾಯ ನಿನ್ನ ಸಂತಾನಕ್ಕೂ ನೀನು ಪ್ರವಾಸಿಯಾಗಿರುವ ಕಾನಾನ್ ದೇಶವನ್ನೆಲ್ಲಾ ಶಾಶ್ವತವಾದ ಸ್ವಾಸ್ಥ್ಯವಾಗಿ ಕೊಡುತ್ತೇನೆ. ನಾನು ಅವರ ದೇವರಾಗಿರುವೆನು ಅಂದನು.
- Hebrews 8:10 ಇಬ್ರಿಯರಿಗೆ 8:10ಆ ದಿನಗಳ ತರುವಾಯ ನಾನು ಇಸ್ರಾಯೇಲ್ ಮನೆತನದ ವರೊಂದಿಗೆ ಮಾಡಿಕೊಳ್ಳುವ ಒಡಂಬಡಿಕೆಯು ಹೀಗಿರುವದು, ಅದೇನಂದರೆ--ನನ್ನ ಆಜ್ಞೆಗಳನ್ನು ಅವರ ಮನಸ್ಸಿನಲ್ಲಿ ಇಡುವೆನು; ಅವರ ಹೃದಯಗಳಲ್ಲಿ ಅವುಗಳನ್ನು ಬರೆಯುವೆನು; ನಾನು ಅವರಿಗೆ ದೇವರಾಗಿರುವೆನು. ಅವರು ನನ್ನ ಜನರಾಗಿರ
- Psalm 89:28 ಕೀರ್ತನೆಗಳು 89:28ಎಂದೆಂದಿಗೂ ಅವನಿಗೋ ಸ್ಕರ ನನ್ನ ಕರುಣೆಯನ್ನು ಕಾದಿಡುವೆನು. ನನ್ನ ಒಡಂಬಡಿಕೆಯು ಅವನೊಂದಿಗೆ ದೃಢವಾಗಿರುವದು.
- Psalm 89:34–36 ಕೀರ್ತನೆಗಳು 89:34–36ನನ್ನ ಒಡಂಬಡಿಕೆಯನ್ನು ನಾನು ಮುರಿ ಯೆನು; ಇಲ್ಲವೆ ನನ್ನ ತುಟಿಗಳಿಂದ ಹೊರಟದ್ದನ್ನು ಬದಲಾಯಿಸೆನು. ಒಂದು ಸಾರಿ ನನ್ನ ಪರಿಶುದ್ಧತ್ವ ದಿಂದ ಆಣೆಯಿಟ್ಟು ಹೇಳಿದ್ದೇನೆ; ದಾವೀದನಿಗೆ ಸುಳ್ಳಾ ಡೆನು. ಅವನ ಸಂತತಿಯು ಯುಗ ಯುಗಕ್ಕೂ ಅವನ ಸಿಂಹಾಸನವು ನನ್ನ ಮುಂದೆ ಸೂರ್ಯನ ಹಾಗೆಯೂ ಇರುವದು.
- Psalm 105:8 ಕೀರ್ತನೆಗಳು 105:8ತನ್ನ ಒಡಂಬಡಿಕೆಯನ್ನೂ ಸಾವಿರ ತಲಾಂತರಗ ಳಿಗೆ ಆಜ್ಞಾಪಿಸಿದ ತನ್ನ ಮಾತನ್ನೂ
- Jeremiah 33:20–26 ಯೆರೆಮೀಯ 33:20–26ಹಗಲು ರಾತ್ರಿ ತಮ್ಮ ಕಾಲದಲ್ಲಿ ಆಗದ ಹಾಗೆ ಹಗಲಿನ ಸಂಗಡ ನನ್ನ ಒಡಂಬಡಿಕೆಯನ್ನೂ ರಾತ್ರಿಯ ಸಂಗಡ ನನ್ನ ಒಡಂಬಡಿಕೆಯನ್ನೂ ವಿಾರುವದಕ್ಕೆ ನಿಮ್ಮಿಂದಾದರೆ ಆಗ ನಾನು ನನ್ನ ಸೇವಕನಾದ ದಾವೀದನ ಸಂಗಡ ಮಾಡಿದ ಒಡಂಬಡಿಕೆಯನ್ನೂ ಅವನ ಸಿಂಹಾಸನದಲ್ಲಿ ಆಳುವ ಮಗನು ಅವನಿಗಿಲ್ಲದ ಹಾಗೆ ಮತ್ತು ನನ್ನ ಸೇವಕರಾಗಿರುವ ಯಾಜಕರಾದ ಲೇವಿಯರ ಸಂಗಡ ಮಾಡಿದ ಒಡಂಬಡಿಕೆಯನ್ನೂ ವಿಾರುವದಕ್ಕೆ ಆದೀತು. ಆಕಾಶದ ಸೈನ್ಯವನ್ನು ಹೇಗೆ ಎಣಿಸಲಿಕ್ಕಾಗದೋ ಸಮುದ್ರದ ಮರಳನ್ನು ಹೇಗೆ ಅಳಿಯಲಿಕ್ಕಾಗದೋ ಹಾಗೆಯೇ ನಾನು ನನ್ನ ಸೇವಕನಾದ ದಾವೀದನ ಸಂತಾನವನೂ ನನಗೆ ಸೇವೆ ಮಾಡುವ ಲೇವಿಯ ರನ್ನೂ ಹೆಚ್ಚಿಸುವೆನು. ಇದಲ್ಲದೆ ಕರ್ತನ ವಾಕ್ಯವು ಯೆರೆವಿಾಯನಿಗೆ ಉಂಟಾಗಿ ಹೇಳಿದ್ದೇನಂದರೆ-- ಈ ಜನರು ಮಾತನಾಡುವದನ್ನು ನೀನು ನೋಡಲಿಲ್ಲವೊ? ಕರ್ತನು ಆದುಕೊಂಡ ಎರಡು ಗೋತ್ರಗಳನ್ನು ಬೇಡವೆಂದಿದ್ದಾನೆಂದು ಹೇಳಿ ನನ್ನ ಜನರನ್ನು ಇನ್ನು ಅವರ ಮುಂದೆ ಜನಾಂಗವಲ್ಲದ ಹಾಗೆ ಅಸಡ್ಡೆ ಮಾಡಿದ್ದಾರೆ. ಕರ್ತನು ಹೀಗೆ ಹೇಳುತ್ತಾನೆ--ನನ್ನ ನಿಯಮವು ಹಗಲು ರಾತ್ರಿಯ ಸಂಗಡ ಇಲ್ಲದಿದ್ದರೆ ಭೂಮ್ಯಾಕಾಶಗಳ ಕಟ್ಟಳೆಗಳನ್ನು ನಾನು ಸ್ಥಾಪಿಸದಿ ದ್ದರೆ--ಆಗ ಯಾಕೋಬನ ಸಂತಾನವನ್ನೂ ನನ್ನ ಸೇವಕನಾದ ದಾವೀದನನ್ನೂ ಬೇಡವೆಂದು ಬಿಟ್ಟು ಅವನ ಸಂತಾನದಿಂದ ಅಬ್ರಹಾಮ, ಇಸಾಕ, ಯಾಕೋಬ ಇವರ ಸಂತಾನದ ಮೇಲೆ ಆಳುವವರನ್ನು ತಕ್ಕೊಳ್ಳದೆ ಇದ್ದೆನು; ಆದರೆ ನಾನು ಅವರ ಸೆರೆಯಿಂದ ಬಿಡಿಸಿ ಅವರನ್ನು ಕರುಣಿಸುವೆನು. ಆಗ ಯಾಕೋಬನ ಸಂತಾನವನ್ನೂ ನನ್ನ ಸೇವಕನಾದ ದಾವೀದನನ್ನೂ ಬೇಡವೆಂದು ಬಿಟ್ಟು ಅವನ ಸಂತಾನದಿಂದ ಅಬ್ರಹಾಮ, ಇಸಾಕ, ಯಾಕೋಬ ಇವರ ಸಂತಾನದ ಮೇಲೆ ಆಳುವವರನ್ನು ತಕ್ಕೊಳ್ಳದೆ ಇದ್ದೆನು; ಆದರೆ ನಾನು ಅವರ ಸೆರೆಯಿಂದ ಬಿಡಿಸಿ ಅವರನ್ನು ಕರುಣಿಸುವೆನು.
- Ephesians 4:17–18 ಎಫೆಸದವರಿಗೆ 4:17–18ಆದದರಿಂದ ಅನ್ಯಜನರು ನಡೆದುಕೊಳ್ಳುವ ಪ್ರಕಾರ ನೀವು ಇನ್ನು ಮೇಲೆ ನಡೆದುಕೊಳ್ಳಬಾರ ದೆಂದು ಕರ್ತನಲ್ಲಿರುವವನಾಗಿ ನಾನು ನಿಮಗೆ ಖಂಡಿತವಾಗಿ ಹೇಳುತ್ತೇನೆ. ಅವರು ನಿಷ್ಪ್ರಯೋಜನ ವಾದ ಬುದ್ಧಿಯುಳ್ಳವರಾಗಿ ನಡೆದುಕೊಳ್ಳುತ್ತಾರೆ; ಅವರ ಮನಸ್ಸು ಮೊಬ್ಬಾಗಿ ಹೋಗಿದೆ. ಅವರು ತಮ್ಮ ಹೃದಯದ ಕುರುಡುತನದ ನಿಮಿತ್ತದಿಂದಲೂ ತಮ್ಮಲ್ಲಿರುವ ಆಜ್ಞಾನದ ನಿಮಿತ್ತದಿಂದಲೂ ದೇವರಿಂದಾಗುವ ಜೀವಕ್ಕೆ ಅನ್ಯರಾಗಿದ್ದಾರೆ.
- Deuteronomy 12:31 ಧರ್ಮೋಪದೇಶಕಾಂಡ 12:31ನಿನ್ನ ದೇವರಾದ ಕರ್ತ ನಿಗೆ ಹಾಗೆ ಮಾಡಬೇಡ. ಯಾಕಂದರೆ ಕರ್ತನು ಅಸಹ್ಯಿಸಿ ಹಗೆಮಾಡುವದನ್ನೆಲ್ಲಾ ಅವರು ತಮ್ಮ ದೇವರುಗಳಿಗೆ ಮಾಡಿದ್ದಾರೆ; ತಮ್ಮ ಕುಮಾರ ಕುಮಾರ್ತೆ ಯರನ್ನು ಸಹ ತಮ್ಮ ದೇವರುಗಳಿಗೆ ಬೆಂಕಿಯಲ್ಲಿ ಸುಟ್ಟುಬಿಟ್ಟಿದ್ದಾರೆ.ನಾನು ನಿನಗೆ ಆಜ್ಞಾಪಿಸುವ ಮಾತುಗಳನ್ನೆಲ್ಲಾ ಲಕ್ಷಿಸಿ ಕೈಕೊಳ್ಳಬೇಕು; ಅದಕ್ಕೆ ಕೂಡಿಸಬೇಡ; ಇಲ್ಲವೆ ಅದರಿಂದ ಕಡಿಮೆಮಾಡಬೇಡ.
- Psalm 89:39 ಕೀರ್ತನೆಗಳು 89:39ನಿನ್ನ ಸೇವಕನ ಒಡಂಬಡಿಕೆಯನ್ನು ಅಸಡ್ಡೆಮಾಡಿ, ಅವನ ಕಿರೀಟವನ್ನು ನೆಲಕ್ಕೆ ಹಾಕಿ ಹೊಲೆ ಮಾಡಿದ್ದೀ.
- Luke 1:72–75 ಲೂಕನು 1:72–75ನಮ್ಮ ಪಿತೃಗಳಿಗೆ ವಾಗ್ದಾನ ಮಾಡಿದ ಕರುಣೆಯನು ನೆರವೇರಿಸಲು ತನ್ನ ಪರಿಶುದ್ಧ ಒಡಂಬಡಿಕೆಯನ್ನು ನೆನಪಿಗೆ ತಂದು ನಮ್ಮ ಪಿತೃವಾದ ಅಬ್ರಹಾಮನಿಗೆ ಆಣೆಯಿಟ್ಟು ಪ್ರಮಾಣ ಮಾಡಿದಂತೆ ನಾವು ನಮ್ಮ ಶತ್ರುಗಳ ಕೈಯಿಂದ ಬಿಡಿಸಲ್ಪಟ್ಟು ಭಯವಿಲ್ಲದವರಾಗಿ ನಮ್ಮ ಜೀವಮಾನದ ಎಲ್ಲಾ ದಿನಗಳಲ್ಲಿ ಆತನ ಮುಂದೆ ಪರಿಶುದ್ಧತೆಯಿಂದಲೂ ನೀತಿಯಿಂದಲೂ ಆತನನ್ನು ಸೇವಿಸುವವರಾಗುವದಕ್ಕೆ ಆತನು ಅನುಗ್ರಹಿ ಸುವನು.
- 2 Samuel 23:5 2 ಸಮುವೇಲನು 23:5ನನ್ನ ಮನೆ ದೇವರ ಸಮ್ಮುಖದಲ್ಲಿ ಹಾಗೆಯೇ ಅಲ್ಲದಿದ್ದರೂ ನನ್ನ ಸಂಗಡ ನಿತ್ಯವಾದ ಒಡಂಬಡಿಕೆ ಯನ್ನು ಮಾಡಿದ್ದಾನೆ; ಎಲ್ಲಾದರ ವಿಷಯ ಸಿದ್ಧವಾದ ದ್ದಾಗಿಯೂ ಸ್ಥಿರವಾದದ್ದಾಗಿಯೂ ಅದೆ. ಆತನು ಅದನ್ನು ಬೆಳೆಯದೆ ಇದ್ದರೂ ನನ್ನ ಎಲ್ಲಾ ರಕ್ಷಣೆಯೂ ನನ್ನ ಎಲ್ಲಾ ಅಭಿಲಾಷೆಯೂ ಅದೇ.