Psalms · chapter 74 · verse 9
Psalm 74:9 in Kannada
ನಮ್ಮ ಗುರುತುಗಳನ್ನು ನೋಡದೆ ಇದ್ದೇವೆ; ಇನ್ನು ಮೇಲೆ ಯಾವ ಪ್ರವಾದಿಯೂ ಇರುವದಿಲ್ಲ ಇಲ್ಲವೆ ಇದು ಎಷ್ಟರವರೆಗೆ ಎಂದು ತಿಳಿದವನು ನಮ್ಮಲ್ಲಿ ಯಾರೂ ಇಲ್ಲ.
Namma gurutugalannu nodade iddeve; innu mele yaava pravaadiyoo iruvadilla illave idu eshtaravarege endu tilidavanu nammalli yaaroo illa.
Psalm 74:9 in English
- King James Version (KJV)
- We see not our signs: [there is] no more any prophet: neither [is there] among us any that knoweth how long.
- World English Bible (WEB)
- We see no miraculous signs. There is no longer any prophet, neither is there among us anyone who knows how long.
- American Standard Version (ASV)
- We see not our signs: There is no more any prophet; Neither is there among us any that knoweth how long.
- Bible in Basic English (BBE)
- We do not see our signs: there is no longer any prophet, or anyone among us to say how long.
- Darby Translation (DBY)
- We see not our signs; there is no more any prophet, neither is there among us any that knoweth how long.
- Webster's Bible (WBS)
- We see not our signs: [there is] no more any prophet: neither [is there] among us any that knoweth how long.
- Young's Literal Translation (YLT)
- Our ensigns we have not seen, There is no more a prophet, Nor with us is one knowing how long.
Read in context
- 7ನಿನ್ನ ಪರಿಶುದ್ಧ ಆಲಯದಲ್ಲಿ ಬೆಂಕಿ ಹಚ್ಚುತ್ತಾರೆ; ನಿನ್ನ ಹೆಸರಿನ ನಿವಾಸವನ್ನು ಭೂಮಿಗೆ ಕೆಡವಿ ಹೊಲೆ ಮಾಡುತ್ತಾರೆ.
- 8ಅವುಗಳನ್ನು ಒಟ್ಟಾಗಿ ಕೆಡವಿ ಬಿಡೋಣ ಎಂದು ತಮ್ಮ ಹೃದಯದಲ್ಲಿ ಹೇಳಿಕೊಳ್ಳುತ್ತಾರೆ; ದೇಶದಲ್ಲಿರುವ ದೇವರ ಸಭಾಸ್ಥಾನಗಳನ್ನೆಲ್ಲಾ ಸುಟ್ಟುಬಿಡು ತ್ತಾರೆ.
- 9ನಮ್ಮ ಗುರುತುಗಳನ್ನು ನೋಡದೆ ಇದ್ದೇವೆ; ಇನ್ನು ಮೇಲೆ ಯಾವ ಪ್ರವಾದಿಯೂ ಇರುವದಿಲ್ಲ ಇಲ್ಲವೆ ಇದು ಎಷ್ಟರವರೆಗೆ ಎಂದು ತಿಳಿದವನು ನಮ್ಮಲ್ಲಿ ಯಾರೂ ಇಲ್ಲ.
- 10ಓ ದೇವರೇ, ವೈರಿಯು ನಿಂದಿಸುವದು ಎಷ್ಟರ ವರೆಗೆ? ಶತ್ರುವು ನಿನ್ನ ಹೆಸರನ್ನು ಎಂದೆಂದಿಗೂ ದೂಷಿ ಸುವನೋ?
- 11ಯಾಕೆ ನಿನ್ನ ಕೈಯನ್ನು, ನಿನ್ನ ಬಲಗೈ ಯನ್ನು ಸಹ ಹಿಂದೆಳಿಯುತ್ತೀ? ನಿನ್ನ ಎದೆಯೊಳಗಿಂದ ಅದನ್ನು ಹೊರತೆಗೆ.
Cross references
- Amos 8:11 ಆಮೋಸ 8:11ಇಗೋ, ದಿನಗಳು ಬರುವವು, ಆಗ ನಾನು ದೇಶದಲ್ಲಿ ಕ್ಷಾಮವನ್ನು ಕಳುಹಿಸುವೆನು. ಅದು ರೊಟ್ಟಿಯ ಕ್ಷಾಮವಲ್ಲ, ನೀರಿನ ದಾಹದ ಬರವಲ್ಲ; ಕರ್ತನ ವಾಕ್ಯಗಳನ್ನು ಕೇಳಬೇಕೆಂಬ ಕ್ಷಾಮ ವನ್ನೇ ಎಂಬದಾಗಿ ದೇವರಾದ ಕರ್ತನು ಹೇಳುತ್ತಾನೆ.
- Ezekiel 7:26 ಯೆಹೆಜ್ಕೇಲನು 7:26ಕೇಡಿನ ಮೇಲೆ ಕೇಡು ಬರು ವದು; ಸುದ್ದಿಯ ಮೇಲೆ ಸುದ್ದಿ ಬರುವದು. ಆಗ ಅವರು ಪ್ರವಾದಿಯ ದರ್ಶನವನ್ನು ಹುಡುಕುವರು. ಆದರೆ ನ್ಯಾಯಪ್ರಮಾಣವು ಯಾಜಕರನ್ನೂ ಆಲೋ ಚನೆಯು ಪೂರ್ವಿಕರನ್ನೂ ಬಿಟ್ಟು ನಾಶವಾಗುವದು.ಅರಸನು ದುಃಖಿಸುವನು, ಪ್ರಧಾನನು ನಿರ್ಗತಿಕನಾ ಗುವನು; ದೇಶದ ಜನರ ಕೈಗಳು ತೊಂದರೆಗೊಳ್ಳು ವವು; ಅವರ ಮಾರ್ಗಗಳ ಪ್ರಕಾರ ಅವರ ಹಾಗೆಯೇ ಮಾಡುವೆನು; ಅವರ ನ್ಯಾಯಗಳ ಪ್ರಕಾರ ಅವರಿಗೆ ನ್ಯಾಯತೀರಿಸುವೆನು. ನಾನೇ ಕರ್ತನೆಂದು ಅವರಿಗೆ ತಿಳಿಯುವದು.
- 1 Samuel 3:1 1 ಸಮುವೇಲನು 3:1ಬಾಲಕನಾದ ಸಮುವೇಲನು ಏಲಿಯ ಮುಂದೆ ಕರ್ತನಿಗೆ ಸೇವೆ ಮಾಡಿಕೊಂಡಿ ದ್ದನು. ಆ ದಿನಗಳಲ್ಲಿ ಕರ್ತನ ವಾಕ್ಯವು ವಿರಳವಾಗಿತ್ತು; ಅಲ್ಲಿ ಪ್ರಕಟವಾದ ದೇವದರ್ಶನವಿರಲಿಲ್ಲ.
- Lamentations 2:9 ಪ್ರಲಾಪಗಳು 2:9ಅವಳ ಬಾಗಿಲುಗಳು ನೆಲದೊಳಗೆ ಹೂತುಕೊಂಡಿವೆ; ಆತನು ಆಕೆಯ ಅಗುಳಿಗಳನ್ನು ಮುರಿದು ಹಾಳು ಮಾಡಿದ್ದಾನೆ. ಅವಳ ಅರಸನು ಮತ್ತು ಪ್ರಭುಗಳು ಅನ್ಯಜನಾಂಗಗಳ ಮಧ್ಯೆ ಇರುವರು; ಇನ್ನು ನ್ಯಾಯ ಪ್ರಮಾಣವು ಇರುವದೇ ಇಲ್ಲ; ಆಕೆಯ ಪ್ರವಾದಿಗಳು ಸಹ ಕರ್ತನಿಂದ ದರ್ಶನವನ್ನು ಕಂಡು ಕೊಳ್ಳುವದಿಲ್ಲ.
- Exodus 13:9–10 ವಿಮೋಚನಕಾಂಡ 13:9–10ಕರ್ತನ ನ್ಯಾಯಪ್ರಮಾಣವು ನಿನ್ನ ಬಾಯಲ್ಲಿ ಇರುವಂತೆ ಅದು (ಆಚರಣೆಯು) ನಿನ್ನ ಕೈ ಮೇಲೆ ಗುರುತಾಗಿಯೂ ನಿನ್ನ ಕಣ್ಣುಗಳ ಮಧ್ಯೆ ಜ್ಞಾಪಕಾರ್ಥವಾಗಿಯೂ ಇರ ಬೇಕು. ಕರ್ತನು ನಿನ್ನನ್ನು ತನ್ನ ಬಲವಾದ ಕೈಯಿಂದ ಐಗುಪ್ತದಿಂದ ಹೊರಗೆ ಬರಮಾಡಿದ್ದಾನೆ. ಹೀಗಿರು ವದರಿಂದ ನೀನು ವರುಷ ವರುಷಕ್ಕೆ ನೇಮಿತವಾದ ಕಾಲದಲ್ಲಿ ಈ ಶಾಸನವನ್ನು ಕೈಕೊಳ್ಳಬೇಕು.
- Micah 3:6 ಮೀಕ 3:6ದರ್ಶನವಿಲ್ಲದ ನಿಮಗೆ ರಾತ್ರಿ ಯಾಗುವದು; ಶಕುನವಿಲ್ಲದೆ ನಿಮಗೆ ಕತ್ತಲಾಗುವದು; ಹೌದು, ಪ್ರವಾದಿಗಳ ಮೇಲೆ ಸೂರ್ಯ ಮುಣುಗು ವದು, ಅವರ ಮೇಲೆ ಹಗಲು ಕತ್ತಲಾಗುವದು.
- Ezekiel 20:12 ಯೆಹೆಜ್ಕೇಲನು 20:12ಇದಲ್ಲದೆ ಅವರನ್ನು ಪರಿಶುದ್ಧ ಮಾಡುವ ಕರ್ತನು ನಾನೇ ಎಂದು ಅವರು ತಿಳಿಯುವ ಹಾಗೆ ನನಗೂ ಅವರಿಗೂ ಗುರುತಾಗಿರುವದಕ್ಕೆ ನನ್ನ ಸಬ್ಬತ್ ದಿನಗಳನ್ನು ನಾನು ಅವರಿಗೆ ಕೊಟ್ಟೆನು.
- Exodus 12:13 ವಿಮೋಚನಕಾಂಡ 12:13ಆದರೆ ನೀವು ಇರುವ ಎಲ್ಲಾ ಮನೆಗಳ ಮೇಲೆ ರಕ್ತವು ನಿಮಗೆ ಗುರುತಾಗಿರುವದು. ಆ ರಕ್ತವನ್ನು ನಾನು ನೋಡುವಾಗ ನಿಮ್ಮನ್ನು ದಾಟಿಹೋಗುವೆನು. ಐಗುಪ್ತದೇಶವನ್ನು ನಾನು ಹೊಡೆಯುವ ಸಮಯದಲ್ಲಿ ನಿಮ್ಮನ್ನು ನಾಶಮಾಡುವ ಯಾವ ಬಾಧೆಯೂ ನಿಮ್ಮ ಮೇಲೆ ಬರುವದಿಲ್ಲ.
- Hebrews 2:4 ಇಬ್ರಿಯರಿಗೆ 2:4ದೇವರು ಸಹ ಅವರ ಕೈಯಿಂದ ಸೂಚಕಕಾರ್ಯಗಳನ್ನೂ ಅದ್ಭುತಕಾರ್ಯ ಗಳನ್ನೂ ನಾನಾವಿಧವಾದ ಮಹತ್ಕಾರ್ಯಗಳನ್ನೂ ನಡಿಸಿ ತನ್ನ ಸ್ವಂತ ಚಿತ್ತಾನುಸಾರವಾಗಿ ಪವಿತ್ರಾತ್ಮ ದಾನಗಳಿಂದ ಅವರಿಗೆ ಸಾಕ್ಷಿ ಕೊಡುತ್ತಿದ್ದನು.
- Judges 6:17 ನ್ಯಾಯಸ್ಥಾಪಕರು 6:17ಅದಕ್ಕವನುಈಗ ನಿನ್ನ ಸಮ್ಮುಖದಲ್ಲಿ ನನಗೆ ದಯೆ ದೊರಕಿದ್ದರೆ ನನ್ನ ಸಂಗಡ ಮಾತಾಡುವಾತನು ನೀನೇ ಎಂಬದಕ್ಕೆ ನನಗೆ ಒಂದು ಗುರುತನ್ನು ತೋರಿಸಬೇಕು.